ತಲಕಾವೇರಿಯಲ್ಲಿ ‘ತೀರ್ಥೋದ್ಭವ’; ‘ತೀರ್ಥಸ್ವರೂಪಿಣಿ’ ದರ್ಶನದ ಅನನ್ಯ ಕ್ಷಣ ಕಣ್ತುಂಬಿಕೊಂಡ ಭಕ್ತ ಸಮೂಹ

ಮಡಿಕೇರಿ: ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಇಂದು ತೀರ್ಥೋದ್ಭವವಾಗಿದೆ. ಕೊಡಗು ಜಿಲ್ಲೆಯ ಭಾಗಮಂಡಲ ಸಮೀಪ ತಲಕಾವೇರಿ ಕ್ಷೇತ್ರ ಈ ಕ್ಷಣಕ್ಕೆ ಸಾಕ್ಷಿಯಾಯಿತು. ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ತುಲಾ ಲಗ್ನದಲ್ಲಿ ತುಲಾ ಸಂಕ್ರಮಣದ ಪವಿತ್ರ ಕಾಲದಲ್ಲಿ ‘ಬ್ರಹ್ಮಕುಂಡಿಕೆ’ಯು ಕಾವೇರಿ ಮಾತೆಯು ತೀರ್ಥಸ್ವರೂಪಿಣಿಯಾಗಿ ದರ್ಶನ ನೀಡಿದ ಅನನ್ಯ ಸನ್ನಿವೇಶವನ್ನು ಅಪಾರ ಸಂಖ್ಯೆಯ ಭಕ್ತರು ಕಣ್ತುಂಬಿಕೊಂಡರು. ತೀರ್ಥೋದ್ಭವ ಸಂದರ್ಭದಲ್ಲಿ ಬ್ರಹ್ಮಕುಂಡಿಕೆಯಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಕೊಡಗಿನ ಮಹಿಳೆಯರು ಸಾಂಪ್ರದಾಯಿಕ ಉಡುಗೆಯಲ್ಲಿ ಆರತಿ ಬೆಳಗಿ ಕಾವೇರಿ ಮಾತೆಯನ್ನು ಸ್ವಾಗತಿಸಿದ ಕ್ಷಣವೂ ಗಮನಸೆಳೆಯಿತು. ಕೊಡಗು ಜಿಲ್ಲೆಯ ಬ್ರಹ್ಮಗಿರಿ ತಪ್ಪಲಿನ ತಲಕಾವೇರಿ ಕ್ಷೇತ್ರದಲ್ಲಿ ಕಾವೇರಿ ತೀರ್ಥೋದ್ಭವ ಸಾವಿರಾರು ಭಕ್ತರ ಭಾವೋದ್ವೇಗದ ನಡುವೆ ನಡುರಾತ್ರಿ 12 ಗಂಟೆ 57 ನಿಮಿಷಕ್ಕೆ ನಿಗಧಿತ ಮುಹೂರ್ತಕ್ಕಿಂತ ಎರಡು ನಿಮಿಷ ಮುನ್ನವೇ ನೆರವೇರಿತು. VC: @mysuruonline pic.twitter.com/RM3UUFEKb3 — Prathap Simha (@mepratap) October 18,…

“ಒಂದು‌ ಸಮಾರಂಭ, ಹತ್ತಾರು ಯೋಜನೆಗಳ ಆರಂಭ..! ” KSRTC ಸಂಸ್ಥಾಪನಾ ದಿನಾಚರಣೆ ವೈಶಿಷ್ಟ್ಯ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಂಸ್ಥಾಪನಾ ದಿನಾಚರಣೆ ಹಲವು ವೈಶಿಷ್ಟ್ಯಗಳಿಂದ ಗಮನಸೆಳೆಯಿತು.ಬೆಂಗಳೂರು ಕೇಂದ್ರೀಯ ವಿಭಾಗದ ಘಟಕ–2ರ ಆವರಣದಲ್ಲಿ ನಡೆದ ನಿಗಮದ 63ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಯೋಜನೆಗಳಿಗೆ ಸಾರಿಗೆ‌ ಸಚಿವರು ಚಾಲನೆ ನೀಡಿದರು. ನಿಗಮದಲ್ಲಿ ಪ್ರಪ್ರಥಮವಾಗಿ ಪುನಶ್ಚೇತನಗೊಳಿಸಿದ ಐರಾವತ ಕ್ಲಬ್ ಕ್ಲಾಸ್ ವಾಹನಗಳಿಗೆ ಸಚಿವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ರಾಮಲಿಂಗ ರೆಡ್ಡಿ, ನಿಗಮವು ಕಾರ್ಮಿಕರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದು ಇದರಿಂದ ಕಾರ್ಮಿಕರು ಸಂತೃಪ್ತಿಯಿಂದ ಕಾರ್ಯನಿರ್ವಹಿಸಲು ಸಹಕಾರಿಯಾಗಿರುವುದಾಗಿ ತಿಳಿಸಿದರು. ನಾಲ್ಕು ವರ್ಷಗಳಿಂದ ಯಾವುದೇ ಅನುಕಂಪದ ಆಧಾರದಲ್ಲಿ ನೇಮಕಾತಿ ನಡೆದಿಲ್ಲ. ತಮ್ಮ ಸರ್ಕಾರ ಜಾರಿಗೆ ಬಂದ 18 ತಿಂಗಳು ಅವಧಿಯಲ್ಲಿ 1000 ಮೃತರ ಅವಲಂಬಿತರಿಗೆ ಅನುಕಂಪದ ಆಧಾರದ ಮೇಲೆ ನೌಕರಿಯನ್ನು ನೀಡಲಾಗಿದೆ. ಸರ್ಕಾರವು 5800 ನೂತನ ವಾಹನಗಳನ್ನು ಸೇರ್ಪಡೆ ಮಾಡಲು ಅನುಮತಿಸಿದ್ದು, ಈವರೆಗೆ 3417 ವಾಹನಗಳನ್ನು ಸೇರಿಸಲಾಗಿದೆ. ನಿಗಮವು ನೂತನವಾಗಿ…

ರಾಜ್ಯದ ಅತಿ ಎತ್ತರದ 63 ಅಡಿ ಶ್ರೀರಾಮಾಂಜನೇಯ ಮೂರ್ತಿ ಅ‌ 23ರಂದು ಲೋಕರ್ಪಣೆ

ಬೆಂಗಳೂರು; ರಾಜಾಜಿನಗರದ ಶ್ರೀರಾಮಮಂದಿರದಲ್ಲಿ ಶ್ರೀರಾಮ ಸೇವಾ ಮಂಡಳಿಯಿಂದ ಕರ್ನಾಟಕದ ಅತಿ ಎತ್ತರದ 63 ಅಡಿ ಉದ್ದದ ಶ್ರೀರಾಮಾಂಜನೇಯ ಪ್ರತಿಮೆಯ ಚರ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮ ಅ. 21 ರಿಂದ ಮೂರು ದಿನಗಳ ಕಾಲ ಅದ್ದೂರಿಯಾಗಿ ನೆರವೇರಲಿದೆ. 23 ರಂದು ವಿಧ್ಯುಕ್ತವಾಗಿ ಮೂರ್ತಿ ಪ್ರತಿಷ್ಠಾಪಿಸಲಾಗುತ್ತಿದೆ. ಮಾಧ್ಯಮಗೋಷ್ಟಿಯಲ್ಲಿ, ಮಾಗಡಿ ಕೆಂಪೇಗೌಡ ಅಭಿವೃದ್ದಿ ಸಮಿತಿ ಅಧ್ಯಕ್ಷರಾದ ಡಾ||ಹೆಚ್.ಎಂ.ಕೃಷ್ಣಮೂರ್ತಿ, ಶ್ರೀರಾಮ ಸೇವಾ ಮಂಡಳಿ ಅಧ್ಯಕ್ಷ ಕೆ.ಎಸ್.ಶ್ರೀಧರ್ , ಮಾಜಿ ಬಿಬಿಎಂಪಿ ಸದಸ್ಯ ಮೋಹನ್ ಕುಮಾರ್ ಈ ಕುರಿತು ಮಾಹಿತಿ ನೀಡಿದರು. ರಾಜ್ಯದ ಪ್ರಮುಖ ಧಾರ್ಮಿಕ ಮುಖಂಡರು, ಧರ್ಮಗುರುಗಳು, ರಾಜಕೀಯ ನೇತರಾರರ ಸಮ್ಮುಖದಲ್ಲಿ, ಭಕ್ತರ ಅಮಿತೋತ್ಸಾಹದ ನಡುವೆ ಮೂರ್ತಿ ಪ್ರತಿಷ್ಠಾಪನೆ ನೆರವೇರಲಿದೆ ಎಂದರು. 21 ರಂದು ಸಂಜೆ ಗಣಪತಿಪೂಜೆ , ವಿದ್ವಜ್ಜನ ಪ್ರಾರ್ಥನೆ, ದೇವತಾ ಪ್ರಾರ್ಥನೆ, ಕಳಸ ಪ್ರತಿಷ್ಟಾಪನೆ ಕಾರ್ಯ ಶುಭಾರಂಭವಾಗಲಿದೆ. 22 ರಂದು ಬೆಳಗ್ಗೆ 63ಅಡಿಯ ಶ್ರೀರಾಮಾಂಜನೇಯ ಚರಪ್ರತಿಷ್ಟಾನದ ಪೂಜೆ, ಹೋಮ ಸಂಕಲ್ಪವನ್ನು…

IMA ವಂಚನೆ ಪ್ರಕರಣದ ಪ್ರತಿಧ್ವನಿ; ಸಿದ್ದು ಸಂಪುಟದ ಸಚಿವರ ಬಂಧನಕ್ಕೆ ಯತ್ನಾಳ್ ಆಗ್ರಹ

ಬೆಂಗಳೂರು: IMA ವಂಚನೆ ಪ್ರಕರಣದಲ್ಲಿ ಸಿದ್ದರಾಮಯ್ಯ ಸಂಪುಟದ ಸಚಿವರನ್ನು ಬಂಧಿಸಬೇಕೆಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಆಗ್ರಹಿಸಿದ್ದಾರೆ. ಬಹುಕೋಟಿ ವಂಚನೆ ಪ್ರಕರಣ ಬಗ್ಗೆ ಸಿಬಿಐ ತನಿಖೆ ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಆಕ್ಷೇಪಿಸಿ ಸಿಟಿಜನ್ ರೈಟ್ಸ್ ಫೌಂಡೇಷನ್ ದೂರು ನೀಡಿದ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿರುವ ಯತ್ನಾಳ್, ಪ್ರಭಾವಿಗಳನ್ನು ಸರ್ಕಾರ ರಕ್ಷಿಸದೇ IMA ಹಗರಣದಲ್ಲಿ ಭಾಗಿಯಾಗಿರುವ ಸಚಿವರನ್ನು ಕೂಡಲೇ ಬಂಧಿಸಿ ತನಿಖೆಗೆ ಒಳಪಡಿಸಬೇಕು ಎಂದಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣ ‘X’ನಲ್ಲಿ ಪೋಸ್ಟ್ ಹಾಕಿರುವ ಬಸನಗೌಡ ಪಾಟೀಲ್ ಯತ್ನಾಳ್, IMA ಸಂಸ್ಥೆಯಿಂದ ಸಚಿವ ಜಮೀರ್ ಅಹಮ್ಮದ್ ಅವರು ನಗದು (ಕ್ಯಾಶ್) ಮೂಲಕ ಸುಮಾರು 29.38 ಕೋಟಿ ಸ್ವೀಕರಿಸಿದ್ದರು ಹಾಗೂ 25 ಕೋಟಿ ರೂ ಅನ್ನು ಸಾಲವಾಗಿ ಪಡೆದಿದ್ದರು. ಈ ಸಾಲವನ್ನು ಜಮೀರ್ ಹಿಂದುರಿಗಿಸಿರಲಿಲ್ಲ. 25 ಕೋಟಿ ಸಾಲ ಮರುಪಾವತಿ ಮಾಡದೆ ಇದ್ದದ್ದಕ್ಕೆ IMA ಇಂದ ಯಾವುದೇ ಕಾನೂನು ಕ್ರಮ ಕೂಡ…

ವಿಮಾನಗಳಿಗೆ ಬಾಂಬ್ ಗುಮ್ಮಾ; 8 FIR ದಾಖಲು

ನವದೆಹಲಿ: ವಿಮಾನಗಳಲ್ಲಿ ಬಾಂಬ್ ಬೆದರಿಕೆಯ ಪ್ರಕರಣಗಳ ಬಗ್ಗೆ ದೆಹಲಿ ಪೊಲೀಸರು ತನಿಖೆಯನ್ನು ಬಿರುಸುಗೊಳಿಸಿದ್ದಾರೆ. ದೇಶೀಯ ಮತ್ತು ಅಂತರಾಷ್ಟ್ರೀಯ ವಿಮಾನಗಳಿಗೆ ಬಾಂಬ್ ಬೆದರಿಕೆ ಕುರಿತು 8 ಎಫ್‌ಐಆರ್‌ಗಳನ್ನು ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾಮಾಜಿಕ ಮಾಧ್ಯಮ ಖಾತೆಗಳ ಮೂಲಕ ವಿವಿಧ ವಿಮಾನಗಳಿಗೆ ಬಾಂಬ್ ಬೆದರಿಕೆ ಬಂದ ನಂತರ ಹೆಚ್ಚಿನ ನಿಗಾ ವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೇವಾಲಯಗಳಿಂದ ಅಕ್ರಮವಾಗಿ ಹಣ ವಸೂಲಿ ಆರೋಪ; ಅಧಿಕಾರಿಗಳ ಅಮಾನತು

ಬೆಂಗಳೂರು: ಸಾಮಾಜಿಕ ಜಾಲತಾಗಳಲ್ಲಿ ಹಂಚಿಗೊಂಡ ವೀಡಿಯೋದಲ್ಲಿ, ಕೆಲ ಇಲಾಖಾ ಅಧಿಕಾರಿಗಳು ದೇವಾಲಯಗಳಿಂದ ಅಕ್ರಮವಾಗಿ ಹಣ ವಸೂಲಿ ಮಾಡಿರುವ ಸಂಬಂದ ಬಂದ ದೂರಿನ ಹಿನ್ನೆಲೆಯಲ್ಲಿ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಕಠಿಣ ಕ್ರಮಕ್ಕೆ ಆದೇಶಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಆಡಿಯೋ ಸಂಭಾಷಣೆಯಲ್ಲಿ, ಬೆಂಗಳೂರು ಜಯನಗರದ ವಿನಾಯಕ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಯ ಹೆಸರು ಪ್ರಸ್ತಾಪವಾಗಿದೆ. ಅವರು ಸೋಮಶೇಖರ್ ಅವರ ಸೂಚನೆ ಮೇರೆಗೆ, ದೇವಾಲಯದಿಂದ 25,000 ರೂ.ಗಳನ್ನು ದೇವಾಲಯದ ಸ್ವಚ್ಛತೆ ಕಾರ್ಯ, ಬೀಗದ ಕೀಲಿ ರಿಪೇರಿ ಮತ್ತು ಹಬ್ಬದ ಖರೀದಿಗಳ ಹೆಸರಲ್ಲಿ ದುರುಪಯೋಗಪಡಿಸಿಕೊಂಡಿದ್ದಾರೆಂದು ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ, ಟಿ.ಎನ್. ಮಂಜುಳ ಮತ್ತು ಗಿರೀಶ್ ರವರನ್ನು ಮುಜರಾಯಿ ಇಲಾಖೆ ಆಯುಕ್ತ ಡಾ.ವೆಂಕಟೇಶ್ ಅವರು ಮುಜರಾಯಿ ಸಚಿವರ ನಿರ್ದೇಶನದಂತೆ ಅಮಾನತುಗೊಳಿಸಿ ಆದೇಶಿಸಿದ್ದಾರೆ. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ, 1997 ಮತ್ತು 2002ರ…

ಸಾರ್ವಜನಿಕ ಹಿತಕ್ಕೆ ಧಕ್ಕೆ ತರುವ ಪ್ರಕರಣಗಳನ್ನು ಹಿಂದಕ್ಕೆ ಪಡೆದಿರುವುದು ಹಿಂದಿನ ಬಿಜೆಪಿ ಸರ್ಕಾರ; ರಮೇಶ್ ಬಾಬು

ಬೆಂಗಳೂರು: ಸಾರ್ವಜನಿಕ ಹಿತಕ್ಕೆ ಧಕ್ಕೆ ತರುವ ಪ್ರಕರಣಗಳನ್ನು ಹಿಂದಕ್ಕೆ ಪಡೆದಿರುವುದು ಹಿಂದಿನ ಬಿಜೆಪಿ ಸರ್ಕಾರವೇ ಹೊರತು ಈಗಿನ ಸಿದ್ದರಾಮಯ್ಯ ಸರ್ಕಾರವಲ್ಲ ಎಂದು ಕೆಪಿಸಿಸಿಮಾಜಿ ಶಾಸಕ, ಕಾಂಗ್ರೆಸ್ ನಾಯಕ ರಮೇಶ್ ಬಾಬು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡತ್ತಾ, ಬಿಜೆಪಿ ನಾಯಕರ ಟೀಕೆಗಳಿಗೆ ತಮ್ಮದೇ ಶೈಲಿಯಲ್ಲಿ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ಕಾಂಗ್ರೆಸ್ ಸರ್ಕಾರ ಹಿಂಪಡೆದ ಪ್ರಕರಣಗಳಲ್ಲಿ ಆರನೇ ಪ್ರಕರಣವಾದ ಹಳೇ ಹುಬ್ಬಳಿ ಗಲಭೆ ಪ್ರಕರಣ ಹಿಂಪಡೆಯಬೇಕು ಎಂದು ದಲಿತ ಸಂಘಟನೆಗಳ ಒಕ್ಕೂಟದ ಡಿ.ಬಿ.ಛಲವಾದಿ ಅವರು ರಾಜ್ಯ ಸರ್ಕಾರಕ್ಕೆ ಮನವಿ ಕೊಟ್ಟ ಆಧಾರದ ಮೇಲೆ ಅದನ್ನು ಗೃಹ ಇಲಾಖೆಗೆ ಕಳುಹಿಸಲಾಗಿತ್ತು. ಅವರು ಉಪ ಸಮಿತಿಗೆ ಕಳುಹಿಸಿದ್ದರು, ಈ ಸಮಿತಿಯ ವರದಿ ಅಧಾರದ ಮೇಲೆ ಕೇಸ್ ನಂಬರ್ 63/ 2022 ಹಳೇ ಹುಬ್ಬಳ್ಳಿ ಪ್ರಕರಣ ಹಿಂಪಡೆಯಲಾಗಿದೆ ಎಂದರು. ಸಿಆರ್‌ಪಿಸಿ ಕಲಂ 321 ರಲ್ಲಿ…

182 ಕೋಮು ದ್ವೇಷದ ಕೇಸ್ ವಾಪಸ್ ಪಡೆದಿದ್ದ ಬಿಜೆಪಿ; PFI ಮೇಲಿನ ಕೇಸ್ ವಾಪಸ್ ಪಡೆದಿದ್ದೂ BJP; ರಾಮಲಿಂಗಾ ರೆಡ್ಡಿ

ಬೆಂಗಳೂರು: ಗಲಭೆ  ಹಾಗೂ ರೈತ ರ ಮೇಲಿನ ಪ್ರಕರಣಗಳನ್ನು ರದ್ದುಗೊಳಿಸುವ ನಿರ್ಧಾರವನ್ನು ಟೀಕಿಸುವತ್ತಿರುವ ಬಿಜೆಪಿ ನಾಯಕರಿಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಉತ್ತರ ನೀಡಿದ್ದಾರೆ. 182 ಕೋಮು ದ್ವೇಷದ ಪ್ರಕರಣಗಳನ್ನು ವಾಪಸ್ ಪಡೆದಿದ್ದ ಬಿಜೆಪಿ PFI ಮೇಲಿನ ಕೇಸ್ ವಾಪಸ್ ಪಡೆದಿತ್ತು ರಾಮಲಿಂಗಾ ರೆಡ್ಡಿ  ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ  ರಾಮಲಿಂಗಾ ರೆಡ್ಡಿ, ಇತ್ತೀಚೆಗೆ ನಡೆದ ಸಚಿವ ಸಂಪುಟಸಭೆಯಲ್ಲಿ 43 ಕೇಸ್ ಗಳನ್ನು ಹಿಂಪಡೆಯಲಾಗಿದೆ. ಶಾಶ್ವತ ನೀರಾವರಿಗಾಗಿ ಹೋರಾಟ ಮಾಡಿದವರ ಮೇಲಿನ ಪ್ರಕರಣಗಳನ್ನು ಡಾ.ಎಂ.ಸಿ.ಸುಧಾಕರ್ ಅವರ ಮನವಿ ಮೇರೆಗೆ ಹಿಂಪಡೆಯಲಾಗಿದೆ. ಸಂವಿಧಾನಕ್ಕೆ ಅಪಮಾನ ಮಾಡಿದವರ ವಿರುದ್ಧ ಹೋರಾಟ ಮಾಡಿದ ಎನ್.ಭಾಸ್ಕರ್, ಕರವೇಯ ನಾರಾಯಣ ಗೌಡ, ಗಣರಾಜ್ಯ ಸಂದರ್ಭದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರ ಇಡದೇ ಇರುವ ಕಾರಣಕ್ಕೆ ನಡೆದ ಪ್ರತಿಭಟನೆ, ಪೇಸಿಎಂ ಅಭಿಯಾನದಲ್ಲಿ ಪೋಸ್ಟರ್ ಅಂಟಿಸಿದವರ ವಿರುದ್ದ ಹೀಗೆ ಒಂದಷ್ಟು ಜನಪರ ಹೋರಾಟಗಳನ್ನು ನಡೆಸುವಾಗ ದಾಖಲಾದ…

ರೈತರನ್ನು ಅಪಮಾನಿಸಿದರೇ ಸಚಿವ ಕೃಷ್ಣ ಭೈರೇಗೌಡ? ‘ಇವರು ಐದು ವರ್ಷ ಕೃಷಿ ಸಚಿವರಾಗಿದ್ದು ಈ ರಾಜ್ಯದ ದೌರ್ಭಾಗ್ಯ’ ಎಂದ ಅಶೋಕ್

ಬೆಂಗಳೂರು: ರೈತರ ಬಗ್ಗೆ ಕೀಳರಿಮೆ ಇರುವ ಕೃಷ್ಣ ಭೈರೇಗೌಡರು ಐದು ವರ್ಷಗಳ ಕಾಲ ಕೃಷಿ ಸಚಿವರಾಗಿದ್ದು ಈ ರಾಜ್ಯದ ದೌರ್ಭಾಗ್ಯ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕಿಸಿದ್ದಾರೆ. ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ತಮ್ಮ ಬಗ್ಗೆ ಆಡಿದ ಮಾತಿನ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ. ‘ನನ್ನನ್ನು ನಿಂದಿಸುವ ಭರದಲ್ಲಿ ಕಡಲೆಕಾಯಿ ಬೆಳೆಯುವ ಸಾಮಾನ್ಯ ರೈತನಿಗೆ ಇರುವಷ್ಟು ‘ಕನಿಷ್ಠ ಜ್ಞಾನ’ ಎಂದು ರೈತರನ್ನು ಕೃಷ್ಣ ಭೈರೇಗೌಡರು ಹೀಯಾಳಿಸಿದ್ದಾರೆ. ಎಲ್ಲರಿಗೂ ಅವರಂತೆ ವಿದೇಶಕ್ಕೆ ಹೋಗಿ ವಿದ್ಯಾಭ್ಯಾಸ ಮಾಡಿಕೊಂಡು ಬರುವಷ್ಟು ಅನುಕೂಲ ಇರುವುದಿಲ್ಲ. ರಾಜಕಾರಣದಲ್ಲಿ ಕುಟುಂಬದ ಹಿನ್ನೆಲೆ ಇಲ್ಲದಂತಹ ನಮ್ಮಂತಹ ಸಾಮಾನ್ಯರೂ ಇದ್ದೀವಿ. ರೈತರ ಬಗ್ಗೆ ಇಂತಹ ಕೀಳರಿಮೆ ಇರುವ ತಮ್ಮಂತಹವರು ಐದು ವರ್ಷಗಳ ಕಾಲ ರಾಜ್ಯದ ಕೃಷಿ ಸಚಿವರಾಗಿದ್ದೀರಲ್ಲ, ಅದೇ ನಮ್ಮ ರಾಜ್ಯದ ದೌರ್ಭಾಗ್ಯ ಎಂದು ಹೇಳಿದ್ದಾರೆ. ಜಿಎಸ್‌ಟಿ ಸಭೆಯಲ್ಲಿ ತೆರಿಗೆ ಹಂಚಿಕೆ ಬಗ್ಗೆ ಅಧಿಕೃತವಾಗಿ ಚರ್ಚೆ ನಡೆಯುವುದಿಲ್ಲ ಎಂಬ…

‘ಮುಡಾ’ ಅರ್ಕಾವತಿ ಕಂಟಕ; ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರಿಗೆ ದೂರು

ಬೆಂಗಳೂರು: ಮುಡಾ ಹಗರಣ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರಿಗೆ ನಿತ್ಯ ಒಂದಿಲ್ಲೊಂದು ಸಂಕಟ ಎದುರಾಗುತ್ತಲೇ ಇದೆ. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರಿಗೆ ಮತ್ತೊಂದು ದೂರು ಸಲ್ಲಿಕೆಯಾಗಿದೆ. ಅರ್ಕಾವತಿ ಬಡಾವಣೆ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ನಿವೇಶನದಾರರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ನಿವೇಶನದ ಮಾಲೀಕರಾದ ಎಂ.ಎಸ್.ಶಿವಲಿಂಗಪ್ಪ, ಎಂ.ಚಂದ್ರಶೇಖರನ್, ಕೆ.ರಾಮಚಂದ್ರಯ್ಯ ಮತ್ತು ಡಾ.ವೆಂಕಟಕೃಷ್ಣಪ್ಪ ಅವರು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಿಡಿಎ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ.