ಮಂಗಳೂರಿನಲ್ಲಿ ಪೊಲೀಸ್ ಬೇಟೆ; ಬಾಂಗ್ಲಾ ಪ್ರಜೆಗಳ ಬಂಧನ

ಮಂಗಳೂರು: ನಕಲಿ ಪಾಸ್‌ಪೋರ್ಟ್‌ ಹೊಂದಿದ್ದ ಬಾಂಗ್ಲಾದೇಶ ಪ್ರಜೆಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ದುಬಾೖಗೆ ಪ್ರಯಾಣಿಸಲು ಯತ್ನಿಸಿದ ಸಂದರ್ಭದಲ್ಲಿ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಆತ ನೀಡಿದ ಸುಳಿವನ್ನಾಧರಿಸಿ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಜೆಯನ್ನು ವಶಕ್ಕೆ ಪಡೆಯಲಾಗಿದ್ದು, ಆತ ನೀಡಿದ ಸುಳಿವನ್ನಾಧರಿಸಿ ಉಡುಪಿಯಲ್ಲಿ ಹಲವು ಮಂದಿ ಬಾಂಗ್ಲಾದೇಶ ಪ್ರಜೆಗಳನ್ನು ವಶಕ್ಕೆ ಪಡೆಯಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಮಹಾ ಡಿಸಿಎಂ ಆಪ್ತ ಬಾಬಾ ಸಿದ್ದಿಕಿ ಹತ್ಯೆ; ಬೆಚ್ಚಿ ಬಿದ್ದ ಮುಂಬೈ

ಮುಂಬೈ: ಮಹಾರಾಷ್ಟ್ರದಲ್ಲಿ ಭೀಕರ ಕಗ್ಗೊಲೆ ಜನರನ್ನು ಬೆಚ್ಚಿಬೀಳಿಸಿದೆ. ಮುಂಬಯಿ ನಗರದ ಬಾಂದ್ರಾ ಪ್ರದೇಶದಲ್ಲಿ ಎನ್‌ಸಿಪಿ ಅಜಿತ್ ಪವಾರ್ ಬಣದ ನಾಯಕ ಬಾಬಾ ಸಿದ್ದಿಕಿ ಮೇಲೆ ಗುಂಡಿನ ದಾಳಿ ನಡೆದಿದೆ. ಹಂತಕರ ಗುಂಡಿಗೆ ಸಿದ್ದಿಕಿ ಬಲಿಯಾಗಿದ್ದಾರೆ. ಶನಿವಾರ ರಾತ್ರಿ ಬಾಬಾ ಸಿದ್ದಿಕಿ ಅವರ ಕಚೇರಿ ಬಳಿಯೇ ಘಟನೆ ನಡೆದಿದ್ದು, ಗುಂಡಿನ ದಾಳಿಯ ನಂತರ ಬಾಬಾ ಸಿದ್ದಿಕಿ ಅವರನ್ನು ಮುಂಬಯಿನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ವೈದ್ಯರು ಸಿದ್ದಿಕಿ ಬದುಕುಳಿಯಲಿಲ್ಲ ಎಂದು ಆಪ್ತರು ಹೇಳಿದ್ದಾರೆ.‌ ಈ ನಡುವೆ ಹತ್ಯೆ ಬೆನ್ನಲ್ಲೇ ಕ್ಷಿಪ್ರ ಕಾರ್ಯಾಚರಣೆ ಕೈಗೊಂಡ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಮತ್ತೊಂದು ‘ಭೂ ಚಕ್ರ’ದ ಸುಳಿಯಲ್ಲಿ ಕಾಂಗ್ರೆಸ್ ಸರ್ಕಾರ; KIADB ಹಗರಣ ಬಗ್ಗೆ ಲೋಕಾಯುಕ್ತಕ್ಕೆ ಸಿಟಿಜನ್ ರೈಟ್ಸ್ ಫೌಂಡೇಷನ್ ದೂರು

ಬೆಂಗಳೂರು: ವಾಲ್ಮಿಕಿ ನಿಗಮ ಕರ್ಮಕಾಂಡ, ಮುಡಾ ಸೈಟ್ ಅಕ್ರಮ ಹಗರಣದಲ್ಲಿ ಸಂಕಷ್ಟ ಎದುರಿಸುತ್ತಿರುವ ಸಿದ್ದರಾಮಯ್ಯ ಸರ್ಕಾರಕ್ಕೆ ಇದೀಗ ಕೆಐಎಡಿಬಿ ಭೂ ಅವ್ಯವಹಾರದ ಉರುಳು ಕೂಡಾ ಸುತ್ತಿಕೊಂಡಿದೆ. ಸರ್ಕಾರಿ ಜಮೀನನ್ನೇ ಬೇರೆಯವರ ಹೆಸರಲ್ಲಿ ಪರಿಗಣಿಸಿ ಪರಿಹಾರ ವಿತರಿಸಿರುವ ಭಾರೀ ಅಕ್ರಮ ಆರೋಪ ಕುರಿತಂತೆ ಲೋಕಾಯುಕ್ತರಿಗೆ ದೂರು ಸಲ್ಲಿಕೆಯಾಗಿದೆ. “ಸಿಟಿಜನ್ ರೈಟ್ಸ್ ಫೌಂಡೇಷನ್” ಪರವಾಗಿ ಅಧ್ಯಕ್ಷ ಕೆ.ಎ.ಪಾಲ್ ನೀಡಿರುವ ಈ ದೂರು, ಸಿಎಂ ಸಿದ್ದರಾಮಯ್ಯ, ಸಚಿವ ಎಂ.ಬಿ.ಪಾಟೀಲ್ ಸಹಿತ ಹಲವರಿಗೆ ಉರುಳಾಗುವ ಸಾಧ್ಯತೆಗಳನ್ನೂ ತಳ್ಳಿಹಾಕುವಂತಿಲ್ಲ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕುಂದಾಣ ಹೋಬಳಿಯ ಚಪ್ಪರದಹಳ್ಳಿ ಗ್ರಾಮದಲ್ಲೂ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB) ಯಿಂದ ಭೂಸ್ವಾಧೀನ ಆದೇಶವಾಗಿದೆ. ಈ ಭೂಸ್ವಾಧೀನ ಪ್ರಕ್ರಿಯೆಯ ದಾಖಲೆಗಳನ್ನು ಗಮನಿಸಿದಾಗ ಅರ್ಹರಲ್ಲದವರ ಹೆಸರಿಗೆ ಹಣ ಸಂದಾಯ ನಡೆದಿದೆ ಎಂದು ದೂರುದಾರರು ಆರೋಪಿಸಿದ್ದಾರೆ. ದೇವನಹಳ್ಳಿ ತಾಲೂಕಿನ ಸುತ್ತಮುತ್ತ ನೂರಾರು ಎಕರೆ ಜಮೀನನ್ನು ಕೆಐಎಡಿಬಿ ವತಿಯಿಂದ ಸ್ವಾಧೀನಪಡಿಸಲು…

ದೇವನಹಳ್ಳಿ ಕೆಐಎಡಿಬಿ ಭೂಹಗರಣ ಆರೋಪ; ಸಮಗ್ರ ತನಿಖೆಗೆ ಬಿಜೆಪಿ ಶಾಸಕ ಸಿ.ಟಿ.ರವಿ ಆಗ್ರಹ

ಚಿತ್ರದುರ್ಗ: ದೇವನಹಳ್ಳಿ ಕೆಐಎಡಿಬಿ ಕರ್ಮಕಾಂಡ ಬಗ್ಗೆ ಸಮಗ್ರ ತನಿಖೆಯಾಗಬೇಕೆಂದು ಬಿಜೆಪಿ ಆಗ್ರಹಿಸಿದೆ. ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಧಾನಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ರಾಜ್ಯ ಸರ್ಕಾರದ ಭೂ ಕರ್ಮಕಾಂಡಗಳ ಬಗ್ಗೆ ಆಕ್ರೋಶ ಹೊರಹಾಕಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿ KIADB ಭೂ ಸ್ವಾದೀನ ಪ್ರಕ್ರಿಯೆಯಲ್ಲಿ ಹಗರಣ ನಡೆದಿದ್ದು, ಈ ಬಗ್ಗೆ ಸಿಟಿಜನ್ ರೈಟ್ಸ್ ಫೌಂಡೇಷನ್’ ಅಧ್ಯಕ್ಷ ಕೆ.ಎ.ಪಾಲ್ ಎಂಬವರು ಲೋಕಾಯುಕ್ತರಿಗೆ ದೂರು ನೀಡಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಎಂದರು. 1984 ರಲ್ಲಿ ಇದೇ ಭೂಮಿಯನ್ನು ಉಳುಮೆ ಮಾಡಲು ಸರ್ಕಾರ ಅವಕಾಶ ಕೊಟ್ಟಿಲ್ಲ. ಆದರೆ ಕೆಐಎಡಿಬಿ ಭೂಸ್ವಾದೀನ ಪ್ರಕ್ರಿಯೆ ವೇಳೆ ಜಮೀನಿಗೆ ಮಾಲೀಕರನ್ನು ಹುಟ್ಟುಹಾಕಲಾಗಿದೆ. ಬೇನಾಮಿ ರೀತಿ ಜಮೀನು ಪರಿಹಾರದ ರೂಪದಲ್ಲಿ ಹಣ ನೀಡಲಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಬೇಕು ಎಂದು ಸಿ.ಟಿ.ರವಿ ಆಗ್ರಹಿಸಿದರು. ಸಿದ್ದರಾಮಯ್ಯ ಸರ್ಕಾರವು ಈ ಭೂಮಿಯನ್ನು ಕೊಟ್ಟಿದ್ದೇ…

“ಪವಿತ್ರ ತೀರ್ಥೋದ್ಭವ” ಹಿನ್ನೆಲೆ; ತಲಕಾವೇರಿ ಜಾತ್ರೆಗೆ ಸರ್ಕಾರದಿಂದ 75 ಲಕ್ಷ ರೂ ಬಿಡುಗಡೆ

ಬೆಂಗಳೂರು: ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ”, ತಲಕಾವೇರಿ ಜಾತ್ರೆಗೆ ರೂ.75 ಲಕ್ಷ ರೂಪಾಯಿ ಹಣವನ್ನು ಧಾರ್ಮಿಕ ದತ್ತಿ ಇಲಾಖೆ ಬಿಡುಗಡೆ ಮಾಡಿದೆ. ಮುಜರಾಯಿ ಸಚಿವ  ರಾಮಲಿಂಗಾ ರೆಡ್ಡಿ ಅವರ ಆದೇಶದಂತೆ ಈ ಹಣ ಬಿಡುಗಡೆ ಮಾಡಲಾಗಿದೆ. ಕೊಡಗು ಜಿಲ್ಲೆ, ‌ಮಡಿಕೇರಿ ತಾಲ್ಲೂಕು, ಭಾಗಮಂಡಲದಲ್ಲಿರುವ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಸ್ಥಾನದಲ್ಲಿ ಪ್ರತಿ ವರ್ಷದ ರೂಢಿ ಸಂಪ್ರದಾಯದಂತೆ ಈ ವರ್ಷ:17.10.2024 ರಂದು “ಶ್ರೀ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ” ಜಾತ್ರೆಯು ನಡೆಯಲಿದೆ. ಕಳೆದ ವರ್ಷದಿಂದ ಜಾತ್ರೆಗೆ ಬರುವ ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಅನುದಾನ ನೀಡಲಾಗುತ್ತಿದೆ. ಸದರಿ ಜಾತ್ರಾ ಮಹೋತ್ಸವಕ್ಕೆ ಈ ಹಿಂದೆ ಎಂದೂ ಕೂಡ ಮುಜರಾಯಿ ಇಲಾಖೆಯಿಂದ ಅನುದಾನ ಬಿಡುಗಡೆಯಾಗಿರುವುದಿಲ್ಲ. ಕೊಡಗು ಜಿಲ್ಲೆಯ ಶಾಸಕರಾದ ಡಾ. ಮಂಥರ್ ಗೌಡ ಹಾಗೂ ಎ.ಎಸ್.ಪೊನ್ನಣ್ಣ ಅವರು ತಲಕಾವೇರಿ ಜಾತ್ರೆಗೆ ಹಣ ಬಿಡುಗಡೆ ಮಾಡಿ ವ್ಯವಸ್ಥಿತ ಜಾತ್ರೆ ನಡೆಸಲು ಹಾಗೂ ಆಗಮಿಸುವ ಭಕ್ತಾಧಿಗಳಿಗೆ ಸಮಗ್ರ…

ತನ್ನೆಲ್ಲಾ ಆಸ್ತಿಯನ್ನು ಸಮಾಜಕ್ಕೆ ಸಮರ್ಪಿಸಿದ್ದ ಟಾಟಾ ಅವರೇ ದೇಶದ ಆಸ್ತಿಯಾಗಿದ್ದರು..!

ಮುಂಬಯಿ: ಖ್ಯಾತ ಉದ್ಯಮಿ, ಟಾಟಾ ಸನ್ಸ್ ಮುಖ್ಯಸ್ಥ ರತನ್ ನಾವಲ್ ಟಾಟಾ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 86 ವರ್ಷ ಹರೆಯದ ರತನ್ ನಾವಲ್ ಟಾಟಾ ಅವರು ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ. ಅವಿವಾಹಿತರಾಗಿದ್ದ ರತನ್ ಟಾಟಾ ಅವರು ಅಪರೂಪದ ಉದ್ಯಮಿಯಾಗಿ ಗಮನಸೆಳೆದವರು. ದೇಶದ ಕೈಗಾರಿಕಾ ಕ್ಷೇತ್ರದಲ್ಲಿ ಕ್ರಾಂತಿ ಎಬ್ಬಿಸಿದ ಖ್ಯಾತಿ ಅವರದ್ದು. ಔದ್ಯೋಗಿಕ ಕ್ಷೇತ್ರದಲ್ಲಿ ಅವರು ದಂತಕತೆಯಾಗಿದ್ದರು. ರತನ್ ಟಾಟಾ ಅವರು ತಮ್ಮ ಗಳಿಕೆಯನ್ನೆಲ್ಲಾ ದಾನಧರ್ಮಗಳಲ್ಲಿ ವಿನಿಯೋಗಿಸಿ ದೇಶದ ಆಸ್ತಿಯಾಗಿದ್ದರು. 1937ರಲ್ಲಿ ಜನಿಸಿದ್ದ ರತನ್ ಟಾಟಾ ಅವರಿಗೆ ಭಾರತ ಸರ್ಕಾರವು 2008 ರಲ್ಲಿ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಪದ್ಮವಿಭೂಷಣ’ವನ್ನು ನೀಡಿ ಗೌರವಿಸಿತ್ತು. ರತನ್ ಟಾಟಾ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಶೋಕ ವ್ಯಕ್ತಪಡಿಸಿದ್ದಾರೆ.

ಜನಾನುರಾಗಿ, ಉದ್ಯಮಿ ರತನ್ ಟಾಟಾ ವಿಧಿವಶ

ಮುಂಬಯಿ: ಖ್ಯಾತ ಉದ್ಯಮಿ, ಟಾಟಾ ಸನ್ಸ್ ಮುಖ್ಯಸ್ಥ ರತನ್ ನಾವಲ್ ಟಾಟಾ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 86 ವರ್ಷ ಹರೆಯದ ರತನ್ ನಾವಲ್ ಟಾಟಾ ಅವರು ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ. ಅವಿವಾಹಿತರಾಗಿದ್ದ ರತನ್ ಟಾಟಾ ಅವರು ಅಪರೂಪದ ಉದ್ಯಮಿಯಾಗಿ ಗಮನಸೆಳೆದವರು. ದೇಶದ ಕೈಗಾರಿಕಾ ಕ್ಷೇತ್ರದಲ್ಲಿ ಕ್ರಾಂತಿ ಎಬ್ಬಿಸಿದ ಖ್ಯಾತಿ ಅವರದ್ದು. ಔದ್ಯೋಗಿಕ ಕ್ಷೇತ್ರದಲ್ಲಿ ಅವರು ದಂತಕತೆಯಾಗಿದ್ದರು. ರತನ್ ಟಾಟಾ ಅವರು ತಮ್ಮ ಗಳಿಕೆಯನ್ನೆಲ್ಲಾ ದಾನಧರ್ಮಗಳಲ್ಲಿ ವಿನಿಯೋಗಿಸಿ ದೇಶದ ಆಸ್ತಿಯಾಗಿದ್ದರು. 1937ರಲ್ಲಿ ಜನಿಸಿದ್ದ ರತನ್ ಟಾಟಾ ಅವರಿಗೆ ಭಾರತ ಸರ್ಕಾರವು 2008 ರಲ್ಲಿ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಪದ್ಮವಿಭೂಷಣ’ವನ್ನು ನೀಡಿ ಗೌರವಿಸಿತ್ತು. ರತನ್ ಟಾಟಾ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಶೋಕ ವ್ಯಕ್ತಪಡಿಸಿದ್ದಾರೆ.

KSRTC ನಿಗಮಗಳಿಗೆ ಈ ಬಾರಿಯದ್ದು ವಿಶೇಷ ನವರಾತ್ರಿ.. ಆಯುಧ ಪೂಜೆಯ ಕೊಡುಗೆ 250 ರೂಪಾಯಿಗಳಿಗೆ ಹೆಚ್ಚಳ..!

ಬೆಂಗಳೂರು: ರಾಜ್ಯ ಸಾರಿಗೆ ನಿಗಮಗಳಿಗೆ ಈ ಬಾರಿಯ ನವರಾತ್ರಿಯು ಹಿಂದೆಂದಿಗಿಂತ ವಿಶೇಷ..! ಕುತೂಹಲಕಾರಿ ನಿರ್ಧಾರದಲ್ಲಿ ಕೆಎಸ್ಸಾರ್ಟಿಸಿ ಬಸ್ಸುಗಳಿಗೆ ಆಯುಧಪೂಜೆಗೆ ನೀಡಲಾಗಿತ್ತಿದ್ದ ಹಣವನ್ನು 100 ರೂಪಾಯಿಯಿಂದ 250 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ. ಈ ಕುರಿತಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಒಂದು ಘಟಕದಲ್ಲಿ ಸರಿ ಸುಮಾರು 100 ರಿಂದ 500 ಬಸ್ಸುಗಳಿರುತ್ತವೆ. ಒಂದು ಬಸ್ಸಿಗೆ ರೂ. 100 ಎಂದು ಒಂದು ಘಟಕಕ್ಕೆ / ಕಾರ್ಯಾಗಾರಕ್ಕೆ ನೀಡಲಾಗುತ್ತದೆ. ಆಯುಧಪೂಜೆಗೆ 2008 ರವರೆಗೂ ರೂ.10 ಪ್ರತಿ‌ ಬಸ್ಸಿಗೆ , 2009 ರಲ್ಲಿ ಪ್ರತಿ ಬಸ್ಸಿಗೆ ರೂ 30 ಕ್ಕೆ ಏರಿಕೆ ಮಾಡಲಾಗಿತ್ತು. .2016 ರಲ್ಲಿ ಪ್ರತಿ ಬಸ್ಸಿಗೆ ರೂ.50 ಕ್ಕೆ ಏರಿಕೆ, 2017 ರಲ್ಲಿ ಪ್ರತಿ‌ ಬಸ್ಸಿಗೆ ರೂ.100 ಕ್ಕೆ ಏರಿಕೆ ‌ಮಾಡಲಾಗಿತ್ತು ರೂ.100 ಪ್ರತಿ‌ ಬಸ್ಸಿಗೆ ನೀಡುವ ಮೊತ್ತವು 2023 ರವರೆಗೂ ರೂ.100 ಆಗಿತ್ತು. 2024 ಅಂದರೆ…

ಕರ್ನಾಟಕದ ಕೌಶಲ್ಯ ಅಭಿವೃದ್ಧಿ ಮಾದರಿ ಅಳವಡಿಸಿಕೊಳ್ಳಲು ಹಿಮಾಚಲ ಪ್ರದೇಶ ಚಿಂತನೆ

ಬೆಂಗಳೂರು: ಕರ್ನಾಟಕದ ಹಲವು ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ಇತರೆ ಉಪ್ರಕಮಗಳ ಅನುಷ್ಠಾನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಹಿಮಾಚಲ ಪ್ರದೇಶ ಸರ್ಕಾರ ಕರ್ನಾಟಕದ ಮಾದರಿಯನ್ನು ಅಳವಡಿಸಿಕೊಳ್ಳಲು ಚಿಂತನೆ ನಡೆಸಿದೆ. ಬುಧವಾರ ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರೊಂದಿಗೆ ಹಿಮಾಚಲ ಪ್ರದೇಶದ ಪಟ್ಟಣ ಯೋಜನೆ, ವಸತಿ ಮತ್ತು ತಾಂತ್ರಿಕ ಶಿಕ್ಷಣ ಸಚಿವ ರಾಜೇಶ್ ಕುಮಾರ್ ಧರ್ಮಾನಿ ಸಮಾಲೋಚನೆ ನಡೆಸಿದರು. ಉದ್ಯೋಗ ಕೌಶಲ್ಯಗಳನ್ನು ಹೆಚ್ಚಿಸುವಲ್ಲಿ ಕರ್ನಾಟಕದ ಪ್ರಯತ್ನ ಶ್ಲಾಘನೀಯ ಎಂದು ಹಿಮಾಚಲ ಪ್ರದೇಶ ಸಚಿವರು ತಿಳಿಸಿದರು. ತಮ್ಮ ತವರು ರಾಜ್ಯದಲ್ಲಿ ಇದೇ ರೀತಿಯ ಕಾರ್ಯತಂತ್ರಗಳನ್ನು ಜಾರಿಗೆ ತರಲು ತೀವ್ರ ಆಸಕ್ತಿ ಇದೆ ಎಂದು ರಾಜೇಶ್‌ ಕುಮಾರ್‌ ಧರ್ಮಾನಿ ಇಂಗಿತ ವ್ಯಕ್ತಪಡಿಸಿದರು. ಕರ್ನಾಟಕದಲ್ಲಿ ಜಾರಿಗೆ ತಂದಿರುವ ಯೋಜನೆಗಳು ಹಾಗೂ ಕೌಶಲ್ಯ ಅಭಿವೃದ್ಧಿ ಉಪಕ್ರಮಗಳನ್ನು ಅಧ್ಯಯನ ಮಾಡಲು ಆಗಮಿಸಿರುವ ಧರ್ಮಾನಿ, ಅಂತಾರಾಷ್ಟ್ರೀಯ ವಲಸೆ ಕೇಂದ್ರ…

ಶಾಲೆ ಮುಂದೆ ಜೆಲಿಟಿನ್ ಕಡ್ಡಿ ಸ್ಫೋಟ; ಬಾಲಕನಿಗೆ ಗಾಯ

ತುಮಕೂರು: ಗುಬ್ಬಿ ಸಮೀಪ ಸರ್ಕಾರಿ ಶಾಲಾ ಕಾಂಪೌಂಡ್ ನಿರ್ಮಾಣಕ್ಕೆ ಸಂಗ್ರಹಿಸಲಾಗಿದ್ದ ಜಲ್ಲಿ ಕಲ್ಲುಗಳ ನಡುವೆ ಉಳಿದಿದ್ದ ಜೆಲಟಿನ್ ಕಡ್ಡಿ ಬಗ್ಗೆ ಅರಿಯದ ವಿದ್ಯಾರ್ಥಿಯೊಬ್ಬ ಕುತೂಹಲದಲ್ಲಿ ಜೆಲಟಿನ್ ಕಡ್ಡಿ ಮುಟ್ಟಿ ಸ್ಫೋಟ ಉಂಟಾಗಿ ವಿದ್ಯಾರ್ಥಿ ಕೈ ಬೆರಳುಗಳು ತುಂಡಾಗಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರ ಹೋಬಳಿ ಇಡಗೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಇಡಗೂರು ಸರ್ಕಾರಿ ಪ್ರೌಢಶಾಲೆಯಲ್ಲಿ ದಸರಾ ರಜೆ ಹಿನ್ನಲೆ ಹತ್ತನೇ ತರಗತಿಯ ವಿದ್ಯಾರ್ಥಿಗಳು ಸ್ಪೆಷಲ್ ಕ್ಲಾಸ್ ಗಾಗಿ ಆಗಮಿಸಿದ್ದ. ಆ ವೇಳೆ ವಿದ್ಯಾರ್ಥಿಯು ಕಲ್ಲು ಬಂಡೆ ಚೂರುಗಳ ಮಧ್ಯೆ ಕಂಡ ವೈರ್ ಸಹಿತ ಇದ್ದ ಜೆಲಟಿನ್ ಕಡ್ಡಿ ಕಂಡು ಕುತೂಹಲದಿಂದ ತೆಗೆದುಕೊಂಡು ಶಾಲಾ ಆವರಣದಲ್ಲಿ ತೆರಳಿದ ಎನ್ನಲಾಗಿದೆ. ನಂತರ ಬಿಸಿಯಾದ ಅನುಭವಕ್ಕೆ ಭಯಗೊಂಡು ಜೆಲಟಿನ್ ಕಡ್ಡಿ ಎಸೆಯಲು ಮುಂದಾದಾಗ ಸ್ಫೋಟಗೊಂಡು ಬಲಗೈ ಬೆರಳುಗಳು ತುಂಡಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು…