ಬೆಂಗಳೂರು: ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ”, ತಲಕಾವೇರಿ ಜಾತ್ರೆಗೆ ರೂ.75 ಲಕ್ಷ ರೂಪಾಯಿ ಹಣವನ್ನು ಧಾರ್ಮಿಕ ದತ್ತಿ ಇಲಾಖೆ ಬಿಡುಗಡೆ ಮಾಡಿದೆ. ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರ ಆದೇಶದಂತೆ ಈ ಹಣ ಬಿಡುಗಡೆ ಮಾಡಲಾಗಿದೆ. ಕೊಡಗು ಜಿಲ್ಲೆ, ಮಡಿಕೇರಿ ತಾಲ್ಲೂಕು, ಭಾಗಮಂಡಲದಲ್ಲಿರುವ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಸ್ಥಾನದಲ್ಲಿ ಪ್ರತಿ ವರ್ಷದ ರೂಢಿ ಸಂಪ್ರದಾಯದಂತೆ ಈ ವರ್ಷ:17.10.2024 ರಂದು “ಶ್ರೀ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ” ಜಾತ್ರೆಯು ನಡೆಯಲಿದೆ. ಕಳೆದ ವರ್ಷದಿಂದ ಜಾತ್ರೆಗೆ ಬರುವ ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಅನುದಾನ ನೀಡಲಾಗುತ್ತಿದೆ. ಸದರಿ ಜಾತ್ರಾ ಮಹೋತ್ಸವಕ್ಕೆ ಈ ಹಿಂದೆ ಎಂದೂ ಕೂಡ ಮುಜರಾಯಿ ಇಲಾಖೆಯಿಂದ ಅನುದಾನ ಬಿಡುಗಡೆಯಾಗಿರುವುದಿಲ್ಲ. ಕೊಡಗು ಜಿಲ್ಲೆಯ ಶಾಸಕರಾದ ಡಾ. ಮಂಥರ್ ಗೌಡ ಹಾಗೂ ಎ.ಎಸ್.ಪೊನ್ನಣ್ಣ ಅವರು ತಲಕಾವೇರಿ ಜಾತ್ರೆಗೆ ಹಣ ಬಿಡುಗಡೆ ಮಾಡಿ ವ್ಯವಸ್ಥಿತ ಜಾತ್ರೆ ನಡೆಸಲು ಹಾಗೂ ಆಗಮಿಸುವ ಭಕ್ತಾಧಿಗಳಿಗೆ ಸಮಗ್ರ…
Year: 2024
ತನ್ನೆಲ್ಲಾ ಆಸ್ತಿಯನ್ನು ಸಮಾಜಕ್ಕೆ ಸಮರ್ಪಿಸಿದ್ದ ಟಾಟಾ ಅವರೇ ದೇಶದ ಆಸ್ತಿಯಾಗಿದ್ದರು..!
ಮುಂಬಯಿ: ಖ್ಯಾತ ಉದ್ಯಮಿ, ಟಾಟಾ ಸನ್ಸ್ ಮುಖ್ಯಸ್ಥ ರತನ್ ನಾವಲ್ ಟಾಟಾ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 86 ವರ್ಷ ಹರೆಯದ ರತನ್ ನಾವಲ್ ಟಾಟಾ ಅವರು ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ. ಅವಿವಾಹಿತರಾಗಿದ್ದ ರತನ್ ಟಾಟಾ ಅವರು ಅಪರೂಪದ ಉದ್ಯಮಿಯಾಗಿ ಗಮನಸೆಳೆದವರು. ದೇಶದ ಕೈಗಾರಿಕಾ ಕ್ಷೇತ್ರದಲ್ಲಿ ಕ್ರಾಂತಿ ಎಬ್ಬಿಸಿದ ಖ್ಯಾತಿ ಅವರದ್ದು. ಔದ್ಯೋಗಿಕ ಕ್ಷೇತ್ರದಲ್ಲಿ ಅವರು ದಂತಕತೆಯಾಗಿದ್ದರು. ರತನ್ ಟಾಟಾ ಅವರು ತಮ್ಮ ಗಳಿಕೆಯನ್ನೆಲ್ಲಾ ದಾನಧರ್ಮಗಳಲ್ಲಿ ವಿನಿಯೋಗಿಸಿ ದೇಶದ ಆಸ್ತಿಯಾಗಿದ್ದರು. 1937ರಲ್ಲಿ ಜನಿಸಿದ್ದ ರತನ್ ಟಾಟಾ ಅವರಿಗೆ ಭಾರತ ಸರ್ಕಾರವು 2008 ರಲ್ಲಿ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಪದ್ಮವಿಭೂಷಣ’ವನ್ನು ನೀಡಿ ಗೌರವಿಸಿತ್ತು. ರತನ್ ಟಾಟಾ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಶೋಕ ವ್ಯಕ್ತಪಡಿಸಿದ್ದಾರೆ.
ಜನಾನುರಾಗಿ, ಉದ್ಯಮಿ ರತನ್ ಟಾಟಾ ವಿಧಿವಶ
ಮುಂಬಯಿ: ಖ್ಯಾತ ಉದ್ಯಮಿ, ಟಾಟಾ ಸನ್ಸ್ ಮುಖ್ಯಸ್ಥ ರತನ್ ನಾವಲ್ ಟಾಟಾ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 86 ವರ್ಷ ಹರೆಯದ ರತನ್ ನಾವಲ್ ಟಾಟಾ ಅವರು ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ. ಅವಿವಾಹಿತರಾಗಿದ್ದ ರತನ್ ಟಾಟಾ ಅವರು ಅಪರೂಪದ ಉದ್ಯಮಿಯಾಗಿ ಗಮನಸೆಳೆದವರು. ದೇಶದ ಕೈಗಾರಿಕಾ ಕ್ಷೇತ್ರದಲ್ಲಿ ಕ್ರಾಂತಿ ಎಬ್ಬಿಸಿದ ಖ್ಯಾತಿ ಅವರದ್ದು. ಔದ್ಯೋಗಿಕ ಕ್ಷೇತ್ರದಲ್ಲಿ ಅವರು ದಂತಕತೆಯಾಗಿದ್ದರು. ರತನ್ ಟಾಟಾ ಅವರು ತಮ್ಮ ಗಳಿಕೆಯನ್ನೆಲ್ಲಾ ದಾನಧರ್ಮಗಳಲ್ಲಿ ವಿನಿಯೋಗಿಸಿ ದೇಶದ ಆಸ್ತಿಯಾಗಿದ್ದರು. 1937ರಲ್ಲಿ ಜನಿಸಿದ್ದ ರತನ್ ಟಾಟಾ ಅವರಿಗೆ ಭಾರತ ಸರ್ಕಾರವು 2008 ರಲ್ಲಿ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಪದ್ಮವಿಭೂಷಣ’ವನ್ನು ನೀಡಿ ಗೌರವಿಸಿತ್ತು. ರತನ್ ಟಾಟಾ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಶೋಕ ವ್ಯಕ್ತಪಡಿಸಿದ್ದಾರೆ.
KSRTC ನಿಗಮಗಳಿಗೆ ಈ ಬಾರಿಯದ್ದು ವಿಶೇಷ ನವರಾತ್ರಿ.. ಆಯುಧ ಪೂಜೆಯ ಕೊಡುಗೆ 250 ರೂಪಾಯಿಗಳಿಗೆ ಹೆಚ್ಚಳ..!
ಬೆಂಗಳೂರು: ರಾಜ್ಯ ಸಾರಿಗೆ ನಿಗಮಗಳಿಗೆ ಈ ಬಾರಿಯ ನವರಾತ್ರಿಯು ಹಿಂದೆಂದಿಗಿಂತ ವಿಶೇಷ..! ಕುತೂಹಲಕಾರಿ ನಿರ್ಧಾರದಲ್ಲಿ ಕೆಎಸ್ಸಾರ್ಟಿಸಿ ಬಸ್ಸುಗಳಿಗೆ ಆಯುಧಪೂಜೆಗೆ ನೀಡಲಾಗಿತ್ತಿದ್ದ ಹಣವನ್ನು 100 ರೂಪಾಯಿಯಿಂದ 250 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ. ಈ ಕುರಿತಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಒಂದು ಘಟಕದಲ್ಲಿ ಸರಿ ಸುಮಾರು 100 ರಿಂದ 500 ಬಸ್ಸುಗಳಿರುತ್ತವೆ. ಒಂದು ಬಸ್ಸಿಗೆ ರೂ. 100 ಎಂದು ಒಂದು ಘಟಕಕ್ಕೆ / ಕಾರ್ಯಾಗಾರಕ್ಕೆ ನೀಡಲಾಗುತ್ತದೆ. ಆಯುಧಪೂಜೆಗೆ 2008 ರವರೆಗೂ ರೂ.10 ಪ್ರತಿ ಬಸ್ಸಿಗೆ , 2009 ರಲ್ಲಿ ಪ್ರತಿ ಬಸ್ಸಿಗೆ ರೂ 30 ಕ್ಕೆ ಏರಿಕೆ ಮಾಡಲಾಗಿತ್ತು. .2016 ರಲ್ಲಿ ಪ್ರತಿ ಬಸ್ಸಿಗೆ ರೂ.50 ಕ್ಕೆ ಏರಿಕೆ, 2017 ರಲ್ಲಿ ಪ್ರತಿ ಬಸ್ಸಿಗೆ ರೂ.100 ಕ್ಕೆ ಏರಿಕೆ ಮಾಡಲಾಗಿತ್ತು ರೂ.100 ಪ್ರತಿ ಬಸ್ಸಿಗೆ ನೀಡುವ ಮೊತ್ತವು 2023 ರವರೆಗೂ ರೂ.100 ಆಗಿತ್ತು. 2024 ಅಂದರೆ…
ಕರ್ನಾಟಕದ ಕೌಶಲ್ಯ ಅಭಿವೃದ್ಧಿ ಮಾದರಿ ಅಳವಡಿಸಿಕೊಳ್ಳಲು ಹಿಮಾಚಲ ಪ್ರದೇಶ ಚಿಂತನೆ
ಬೆಂಗಳೂರು: ಕರ್ನಾಟಕದ ಹಲವು ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ಇತರೆ ಉಪ್ರಕಮಗಳ ಅನುಷ್ಠಾನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಹಿಮಾಚಲ ಪ್ರದೇಶ ಸರ್ಕಾರ ಕರ್ನಾಟಕದ ಮಾದರಿಯನ್ನು ಅಳವಡಿಸಿಕೊಳ್ಳಲು ಚಿಂತನೆ ನಡೆಸಿದೆ. ಬುಧವಾರ ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರೊಂದಿಗೆ ಹಿಮಾಚಲ ಪ್ರದೇಶದ ಪಟ್ಟಣ ಯೋಜನೆ, ವಸತಿ ಮತ್ತು ತಾಂತ್ರಿಕ ಶಿಕ್ಷಣ ಸಚಿವ ರಾಜೇಶ್ ಕುಮಾರ್ ಧರ್ಮಾನಿ ಸಮಾಲೋಚನೆ ನಡೆಸಿದರು. ಉದ್ಯೋಗ ಕೌಶಲ್ಯಗಳನ್ನು ಹೆಚ್ಚಿಸುವಲ್ಲಿ ಕರ್ನಾಟಕದ ಪ್ರಯತ್ನ ಶ್ಲಾಘನೀಯ ಎಂದು ಹಿಮಾಚಲ ಪ್ರದೇಶ ಸಚಿವರು ತಿಳಿಸಿದರು. ತಮ್ಮ ತವರು ರಾಜ್ಯದಲ್ಲಿ ಇದೇ ರೀತಿಯ ಕಾರ್ಯತಂತ್ರಗಳನ್ನು ಜಾರಿಗೆ ತರಲು ತೀವ್ರ ಆಸಕ್ತಿ ಇದೆ ಎಂದು ರಾಜೇಶ್ ಕುಮಾರ್ ಧರ್ಮಾನಿ ಇಂಗಿತ ವ್ಯಕ್ತಪಡಿಸಿದರು. ಕರ್ನಾಟಕದಲ್ಲಿ ಜಾರಿಗೆ ತಂದಿರುವ ಯೋಜನೆಗಳು ಹಾಗೂ ಕೌಶಲ್ಯ ಅಭಿವೃದ್ಧಿ ಉಪಕ್ರಮಗಳನ್ನು ಅಧ್ಯಯನ ಮಾಡಲು ಆಗಮಿಸಿರುವ ಧರ್ಮಾನಿ, ಅಂತಾರಾಷ್ಟ್ರೀಯ ವಲಸೆ ಕೇಂದ್ರ…
ಶಾಲೆ ಮುಂದೆ ಜೆಲಿಟಿನ್ ಕಡ್ಡಿ ಸ್ಫೋಟ; ಬಾಲಕನಿಗೆ ಗಾಯ
ತುಮಕೂರು: ಗುಬ್ಬಿ ಸಮೀಪ ಸರ್ಕಾರಿ ಶಾಲಾ ಕಾಂಪೌಂಡ್ ನಿರ್ಮಾಣಕ್ಕೆ ಸಂಗ್ರಹಿಸಲಾಗಿದ್ದ ಜಲ್ಲಿ ಕಲ್ಲುಗಳ ನಡುವೆ ಉಳಿದಿದ್ದ ಜೆಲಟಿನ್ ಕಡ್ಡಿ ಬಗ್ಗೆ ಅರಿಯದ ವಿದ್ಯಾರ್ಥಿಯೊಬ್ಬ ಕುತೂಹಲದಲ್ಲಿ ಜೆಲಟಿನ್ ಕಡ್ಡಿ ಮುಟ್ಟಿ ಸ್ಫೋಟ ಉಂಟಾಗಿ ವಿದ್ಯಾರ್ಥಿ ಕೈ ಬೆರಳುಗಳು ತುಂಡಾಗಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರ ಹೋಬಳಿ ಇಡಗೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಇಡಗೂರು ಸರ್ಕಾರಿ ಪ್ರೌಢಶಾಲೆಯಲ್ಲಿ ದಸರಾ ರಜೆ ಹಿನ್ನಲೆ ಹತ್ತನೇ ತರಗತಿಯ ವಿದ್ಯಾರ್ಥಿಗಳು ಸ್ಪೆಷಲ್ ಕ್ಲಾಸ್ ಗಾಗಿ ಆಗಮಿಸಿದ್ದ. ಆ ವೇಳೆ ವಿದ್ಯಾರ್ಥಿಯು ಕಲ್ಲು ಬಂಡೆ ಚೂರುಗಳ ಮಧ್ಯೆ ಕಂಡ ವೈರ್ ಸಹಿತ ಇದ್ದ ಜೆಲಟಿನ್ ಕಡ್ಡಿ ಕಂಡು ಕುತೂಹಲದಿಂದ ತೆಗೆದುಕೊಂಡು ಶಾಲಾ ಆವರಣದಲ್ಲಿ ತೆರಳಿದ ಎನ್ನಲಾಗಿದೆ. ನಂತರ ಬಿಸಿಯಾದ ಅನುಭವಕ್ಕೆ ಭಯಗೊಂಡು ಜೆಲಟಿನ್ ಕಡ್ಡಿ ಎಸೆಯಲು ಮುಂದಾದಾಗ ಸ್ಫೋಟಗೊಂಡು ಬಲಗೈ ಬೆರಳುಗಳು ತುಂಡಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು…
ಮಂಗಳೂರು ಶಾರದಾ ವೈಭವ; ಅದ್ಧೂರಿ ಮಹೋತ್ಸವ ಹೀಗಿದೆ
ಮಂಗಳೂರು: ಮಂಗಳೂರು ರಥಬೀದಿಯಲ್ಲಿ ಮತ್ತೊಮ್ಮೆ ಗತವೈಭವ ಮರುಕಳಿಸಿದಂತಿದೆ. ಅದ್ಧೂರಿ ಶಾರದಾ ಮಹೋತ್ಸವ ಆರಂಭವಾಗಿದ್ದು, ಸಾಂಪ್ರದಾಯಿಕ ಕೈಂಕರ್ಯ ಮೂಲಕ ಚಾಲನೆ ದೊರೆತಿದೆ. ಮಂಗಳೂರು ಶ್ರೀ ವೆಂಕಟರಮಣ ದೇವಾಲಯ ಆಚಾರ್ಯ ಮಠ ವಠಾರದ 102ನೇ ಶ್ರೀ ಶಾರದಾ ಮಹೋತ್ಸವ ಕಾರ್ಯಕ್ರಮ ಆಕ್ಟೋಬರ್ 8ರಿಂದ ಆರಂಭಗೊಂಡು 14ವರೆಗೆ ಅತ್ಯಂತ ವೈಭವಯುತವಾಗಿ ನಡೆಯಲಿದೆ. 2 ವರ್ಷದ ಹಿಂದೆಯಷ್ಟೇ ನೂರನೇ ವರ್ಷದ ಶಾರದಾ ಮಹೋತ್ಸವವನ್ನು ಶ್ರೀ ಶಾರದಾ ಮಹೋತ್ಸವ ಸಮಿತಿ ಅತ್ಯಂತ ವೈಭವಪೂರ್ಣವಾಗಿ ನಡೆಸಿತ್ತು. ಅದೇ ರೀತಿ ಸಂಭ್ರಮದಿಂದ ಈ ಮಹೋತ್ಸವನ್ನು ಶ್ರಧ್ಧ ಭಕ್ತಿಯಿಂದ ನಡೆಸಿಕೊಂಡು ಬರಲಾಗುತ್ತಿದೆ. ಆಕ್ಟೋಬರ್ 8ರಂದು ರಾತ್ರಿ ಶ್ರೀ ಶಾರದಾ ಮಾತೆಯ ವಿಗ್ರಹವನ್ನು ರಾಜಾಂಗಣದಿಂದ ಶ್ರೀ ಉಮಾಮಹೇಶ್ವರಿ ದೇವಳ ರಸ್ತೆ , ರಾಮಮಂದಿರ , ನಂದಾ ದೀಪ ರಸ್ತೆ, ಹೂಮಾರುಕಟ್ಟೆ ರಸ್ತೆ , ರಥಬೀದಿಯಾಗಿ ಉತ್ಸವಸ್ಥಾನಕ್ಕೆ ತರಲಾಯಿತು . ಅಕ್ಟೋಬರ್ 9ರಂದು ಬೆಳಗ್ಗೆ 7 ಗಂಟೆಗೆ ಪ್ರತಿಷ್ಠಾಪನೆಯು ವೈದಿಕ ವಿಧಿ…
ಬೆಂಗಳೂರು ವಿವಿ: ಎಂ.ಎನ್. ಚಂದ್ರಕೀರ್ತಿ ಅವರಿಗೆ ಪಿಎಚ್.ಡಿ ಪ್ರದಾನ
ಬೆಂಗಳೂರು: ಎಂ.ಎನ್. ಚಂದ್ರಕೀರ್ತಿ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯ ಪಿಹೆಚ್‌ಡಿ ಪದವಿ ನೀಡಿದೆ. ಕೋಲಾರ ನಗರದ ಸುಬ್ಬಮ್ಮ ಮತ್ತು ಎಂ.ಎಲ್. ನರಸಿಂಹನ್ ನಿವೃತ್ತ ರೆವಿನ್ಯೂ ಇನ್ಸ್‌ಪೆಕ್ಟರ್ ರವರ ಪುತ್ರ ಬೆಂಗಳೂರು ವಿಶ್ವವಿದ್ಯಾಲಯದ “ಯುನಿವರ್ಸಿಟಿ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್”ನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಸಂಶೋಧನಾ ವಿದ್ಯಾರ್ಥಿ ಎಂ.ಎನ್. ಚಂದ್ರಕೀರ್ತಿ ಅವರು ಯುವಿಸಿಇ, ಸಿವಿಲ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕರಾದ ಡಾ. ಪಿ.ಎಸ್. ನಾಗರಾಜ ರವರ ಮಾರ್ಗದರ್ಶನದಲ್ಲಿ ಮಂಡಿಸಿದ “ಎಕ್ಸ್ ಪೆರಿಮೆಂಟಲ್ ಇನ್ವೆಸ್ಟಿಗೇಷನ್ ಆನ್ ಹೈ ವಾಲ್ಯೂಮ್ ಫ್ಲೈ ಆಶ್ ಕಾಂಕ್ರೀಟ್ ಕಂಟೈನಿಂಗ್ ಕ್ಯಾಲ್ಸಿಯಂ ಕಾರ್ಬೋನೇಟ್ ಮೈಕ್ರೋ ಪಾರ್ಟಿಕಲ್ಸ್” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.
ವಿಜಯೇಂದ್ರ ವಿರುದ್ದವೇ ಇಡಿ ಕೇಸ್ ಇದೆ; ಭ್ರಷ್ಟಾಚಾರ ಪ್ರಕರಣಗಳಿವೆ, ರಾಜೀನಾಮೆ ಕೊಡ್ತಾರ ಎಂದ ಕೈ ನಾಯಕರು
ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ದ ಕಾಂಗ್ರೆಸ್ ನಾಯಕರು, ಭ್ರಷ್ಟಾಚಾರ ಆರೋಪ ಪ್ರಸ್ತಾಪಿಸಿ ತರಾಟೆಗೆ ತೆಗೆದುಕೊಂಡಿದೆ. ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ, ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಉಪಸ್ಥಿತಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ, ಚುನಾವಣಾ ಆಯೋಗಕ್ಕೆ ವಿಜಯೇಂದ್ರ ಅವರು ಸಲ್ಲಿಸಿರುವ ಅಫಿಡವಿಟ್ ಅಲ್ಲಿ ಅವರ ಮೇಲಿರುವ ಪ್ರಕರಣಗಳ ಬಗ್ಗೆ ಮಾಹಿತಿ ಕೊಟ್ಟಿದ್ದಾರೆ. 16.09. 2022 ರಂದು ಲೋಕಾಯುಕ್ತದಿಂದ ಇವರ ಮೇಲೆ ಭ್ರಷ್ಟಾಚಾರ ವಿರೋಧಿ ಕಾಯ್ದೆಯಡಿ ಸೆಕ್ಷನ್ 7 A, 9, 10, 13 ಹಾಗೂ 383, 384, 415, 418, 420 ಕಾಯ್ದೆಗಳಡಿ ದೂರು ದಾಖಲಿಸಲಾಗಿದೆ. ಅಕ್ರಮ ಹಣ ವರ್ಗವಣೆ ಪ್ರಕರಣದಲ್ಲಿ ಇವರಿಗೆ ಸಮನ್ಸ್ ಜಾರಿಯಾಗಿದೆ ಎಂದು ನೆನಪಿಸಿದರು. ಸಿಎಂ ಸಿದ್ದರಾಮಯ್ಯರ…
ಸಿದ್ದರಾಮಯ್ಯ ಕುರ್ಚಿ ಭದ್ರಪಡಿಸಿಕೊಳ್ಳಲು ಜಾತಿ ಗಣತಿ ವರದಿ ಮುನ್ನೆಲೆಗೆ: ಆರ್.ಅಶೋಕ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಮುಡಾ ಹಗರಣವನ್ನು ಮರೆ ಮಾಚಲು ಜಾತಿ ಗಣತಿ ವರದಿ ಬಿಡುಗಡೆಯ ಪ್ರಸ್ತಾಪ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ದೂರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಬಿಜೆಪಿಯ ಮೇಲೆ ಆರೋಪ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ವರದಿಯಲ್ಲಿ ಏನಿರಬೇಕೆಂದು ಹೇಳಿ ಬರೆಸಿದ್ದಾರೆ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ. ಯಾರೂ ಮನೆಗೆ ಬಂದೇ ಇಲ್ಲ ಎಂದು ಲಿಂಗಾಯತ, ಒಕ್ಕಲಿಗ ಮೊದಲಾದ ಸಮುದಾಯದವರು ಹೇಳಿದ್ದಾರೆ. ಕೆಲವೇ ಜಾತಿಗಳ ವೈಭವೀಕರಣ, ಇನ್ನೂ ಕೆಲವು ಜಾತಿಗಳ ಮೇಲೆ ದ್ವೇಷ ಹಾಗೂ ಅವೈಜ್ಞಾನಿಕತೆ ಇದರಲ್ಲಿ ಕಂಡುಬಂದಿದೆ ಎಂದರು. ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯನವರು ಈ ವರದಿ ಬಗ್ಗೆ ಬಾಯಿ ಬಿಡಲಿಲ್ಲ. ಒಂದು ಕಡೆ ಮುಡಾ, ಮತ್ತೊಂದು ಕಡೆ ಜಾರಿ ನಿರ್ದೇಶನಾಲಯದ ತನಿಖೆ, ಮತ್ತೊಂದು ಕಡೆ ಲೋಕಾಯುಕ್ತ ತನಿಖೆ ನಡೆಯುತ್ತಿದೆ. ಇವೆಲ್ಲವನ್ನೂ ಮುಚ್ಚಿಹಾಕಲು ಈಗ ವರದಿಯನ್ನು ಹೊರತೆಗೆಯಲಾಗಿದೆ…
