ಜಾತಿ ಗಣತಿ ವರದಿ ಬಹಿರಂಗ: ಅ.18 ರಂದು ಮುಹೂರ್ತ ಫಿಕ್ಸ್

ಬೆಂಗಳೂರು: ಜಾತಿ ಗಣತಿ ವರದಿ ಬಹಿರಂಗ ಸಂಬಂಧ ಅ.18 ರಂದು ಸ್ಪಷ್ಟ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಪಕ್ಷಗಳ ನಾಯಕರೂ ಸೇರಿದಂತೆ ಸುಮಾರು ಹಿಂದುಳಿದ ವರ್ಗಗಳ 30 ಜನ ಶಾಸಕರು ಭೇಟಿ ಮಾಡಿ, ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ಅಂಗೀಕಾರ ಮಾಡಿ, ಜಾರಿಗೆ ತರಬೇಕೆಂದು ಒತ್ತಾಯಿಸಿ ಮನವಿಯನ್ನು ಸಲ್ಲಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣ ‘X’ನಲ್ಲಿ ಪೋಸ್ಟ್ ಹಾಕಿರುವ ಸಿಎಂ ಸಿದ್ದರಾಮಯ್ಯ, ಈ ಸಮೀಕ್ಷೆ ಕೇವಲ ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆ ಅಲ್ಲ, ರಾಜ್ಯದ ಏಳು ಕೋಟಿ ಕನ್ನಡಿಗರ ಸಮೀಕ್ಷೆ. ಇಡೀ ದೇಶದಲ್ಲಿ ಇಂತಹ ಸಮೀಕ್ಷೆ ನಡೆಸಿದ ಪ್ರಥಮ ರಾಜ್ಯ ಕರ್ನಾಟಕ. ಅಕ್ಟೋಬರ್ 18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. 2013 – 18ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಚ್.ಕಾಂತರಾಜು ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ…

ಬೆಸ್ಕಾಂ ಅವಾಂತರ; ವಿದ್ಯುತ್ ತಂತಿ ತುಂಡಾಗಿ ಬಿದ್ದು ಮಹಿಳೆ ಸಾವು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವಿದ್ಯುತ್ ಇಲಾಖೆಯ ನಿರ್ಲಕ್ಷ್ಯಕ್ಕೆ ಮತ್ತೊಬ್ಬರು ಬಲಿಯಾಗಿದ್ದಾರೆ. ರಾಜಧಾನಿ ಹೊರವಲಯದ ಚಿಕ್ಕನಹಳ್ಳಿ ಗ್ರಾಮದಲ್ಲಿ ಬೆಳಗ್ಗೆ ಮಹಿಳೆಯರು ನಿಂತಿದ್ದ ಸ್ಥಳದಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದು ಅವಘಡ ಸಂಭವಿಸಿದೆ. ಮೃತ ಮಹಿಳೆಯನ್ನು ಮಂಜಮ್ಮ ಎಂದು ಗುರುತಿಸಲಾಗಿದೆ. ಮೃತರ ಸಂಬಂಧಿಯ ದೂರು ಆಧರಿಸಿ ತಾವರೆಕೆರೆ ಠಾಣೆ ಪೊಲೀಸರು ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ ವಿರುದ್ಧ FIR ದಾಖಲಿಸಿಕೊಂಡಿದ್ದಾರೆ.

ವೈಮಾನಿಕ ಪ್ರದರ್ಶನದ ವೇಳೆ ಬಿಸಿಲಿನ ತಾಪಕ್ಕೆ ಐವರು ಬಲಿ

ಚೆನ್ನೈ: ತಮಿಳುನಾಡು ರಾಜಧಾನಿ ಚೆನ್ನೈನ ಮರೀನಾ ಬೀಚ್‌ನಲ್ಲಿ ಭಾರತೀಯ ವಾಯುಸೇನೆಯ ವೈಮಾನಿಕ ಪ್ರದರ್ಶನದ ವೇಳೆ ಬಿಸಿಲಿನ ತಾಪಕ್ಕೆ ಐವರು ಬಲಿಯಾಗಿದ್ದಾರೆ. ಈ ಬಗ್ಗೆ ಸೋಮವಾರ ಮಾಹಿತಿ ಹಂಚಿಕೊಂಡಿರುವ ತಮಿಳುನಾಡು ಆರೋಗ್ಯ ಸಚಿವ ಮಾ ಸುಬ್ರಮಣಿಯನ್ ಬಿಸಿಲಿನ ತಾಪಮಾನಕ್ಕೆ ಐವರು ಸಾವನ್ನಾಪಿದ್ದಾರೆ ಎಂದು ತಿಳಿಸಿದ್ದಾರೆ. ಏರ್ ಶೋ ವೇಳೆ ಬಿಸಿಲಿನ ಝಳದಿಂದ ನೂರಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದು 90ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಪೈಕಿ ಐವರು ಸಾವನ್ನಪ್ಪಿದ್ದಾರೆ ಎಂದು ಸುಬ್ರಮಣಿಯನ್ ತಿಳಿಸಿದ್ದಾರೆ.

‘ಸಿಂಗಂ ಅಗೈನ್’; ಬಹು ತಾರಾಂಗಣವೇ ಬಂಡವಾಳ

ಸಿಂಗಂ ಚಿತ್ರದ ಮುಂದಿನ ಆವೃತ್ತಿ ನಿರ್ಮಾಣವಾಗಿದ್ದು ‘ಸಿಂಗಂ ಅಗೈನ್’ ಹೆಸರಿನಲ್ಲಿ ಈ ಸಿನಿಮಾ ಕುತೂಹಲ ಕೆರಳಿಸಿದೆ. ಅಜೇಯ್ ದೇವಗನ್, ದೀಪಿಕಾ ಪಡುಕೋಣೆ, ರಣವೀರ್ ಸಿಂಗ್, ಅಕ್ಷಯ್ ಕುಮಾರ್ ಸಹಿತ ಹಲವರು ‘ಸಿಂಗಂ ಅಗೈನ್’ ಚಿತ್ರದಲ್ಲಿ ನಟಿಸಿದ್ದಾರೆ. ರೋಹಿತ್ ಶೆಟ್ಟಿ ನಿರ್ದೇಶನದ ಈ ಚಿತ್ರದಲ್ಲಿ ಅಜೇಯ್ ದೇವಗನ್ ಖಡಕ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದು ಈ ಸಿನಿಮಾದ ಟ್ರೈಲರ್ ಬಗ್ಗೆ ನೆಟ್ಟಿಗರು ಸಕತ್ ಲೈಕ್ಸ್ ನೀಡಿದ್ದಾರೆ.

ನಾಪತ್ತೆಯಾಗಿದ್ದ ಉದ್ಯಮಿ ಬಿ.ಎಂ.‌ಮಮ್ತಾಜ್ ಅಲಿ ಮೃತದೇಹ ಪತ್ತೆ

ಕಾವೂರು: ಪೊಲೀಸ್ ಠಾಣಾ ವ್ಯಾಪ್ತಿಯ ಕೂಳೂರು ಸೇತುವೆ ಮೇಲೆ ಕಾರು ಬಿಟ್ಟು ನಾಪತ್ತೆಯಾಗಿದ್ದ ಉದ್ಯಮಿ ಬಿ.ಎಂ.‌ಮಮ್ತಾಝ್ ಅಲಿ ಅವರ ಮೃತದೇಹ ಪತ್ತೆಯಾಗಿದೆ. ಮಂಗಳೂರು ನಗರದ ಕೂಳೂರು ಸೇತುವೆಯ ಬಳಿ ಸೋಮವಾರ ಮುಮ್ತಾಜ್ ಅಲಿ ಅವರ ಮೃತದೇಹ ಪತ್ತೆಯಾಗಿದೆ. ಭಾನುವಾರದಿಂದ ಶೋಧ ಕಾರ್ಯ ನಡೆಸಿದ್ದ ತಜ್ಞರು ಸೋಮವಾರ ಬೆಳಗ್ಗೆ 6 ಗಂಟೆಯಿಂದ ಮತ್ತೆ ಹುಡುಕಾಟ ಆರಂಭಿಸಿದರು. ಬೆಳಿಗ್ಗೆ 10:40 ರ ಸುಮಾರಿಗೆ ಸ್ಥಳೀಯ ಮೀನುಗಾರರು ಮೃತದೇಹವನ್ನು ಪತ್ತೆ ಮಾಡಿದ್ದಾರೆ. ಈ ನಡುವೆ ಮುಮ್ತಾಜ್ ಅಲಿ ಸಾವಿನ ಕುರಿತಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಹಿಳೆ ಸೇರಿದಂತೆ 6 ಮಂದಿ ಆರೋಪಿಗಳ ವಿರುದ್ಧ ಪ್ರಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದ್ದು, ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ಸಿದ್ದರಾಮಯ್ಯ ಸರ್ಕಾರ ಯಾವುದೇ ಕ್ಷಣದಲ್ಲೂ ಬೀಳಬಹುದು; ವಿಜಯೇಂದ್ರ

ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸ ಇದೀಗ ರಾಜಕೀಯ ವಿದ್ಯಮಾನಗಳ ಕೇಂದ್ರಬಿಂದುವಾಗಿದೆ. ಖರ್ಗೆಯವರನ್ನು ಕಾಂಗ್ರೆಸ್ ನಾಯಕರು ಭೇಟಿಯಾಗಿ ಮಾತಿಕತೆ ನಡೆಸಿದ್ದಾರೆಂಬ ಬೆಳವಣಿಗೆಯ ಬೆನ್ನಲ್ಲೇ ಡಿ.ಕೆ. ಸುರೇಶ್ ಸೇರಿದಂತೆ ಹಲವು ರಾಜಕೀಯ ನಾಯಕರು ಸೋಮವಾರ ಚಿವ ಸತೀಶ್ ಜಾರಕಿಹೊಳಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿನ ಈ ಬೆಳವಣಿಗೆಯ ನಡುವೆಯೇ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕೂಡಾ ಸತೀಶ್ ಅವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದಾರೆ. ಸತೀಶ್ ಜಾರಕಿಹೊಳಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಕಾಂಗ್ರೆಸ್ ಪಕ್ಷದೊಳಗಿನ ಬೆಳವಣಿಗೆಯನ್ನು ಗಮನಿಸಿದರೆ ಸಿದ್ದರಾಮಯ್ಯ ಸರ್ಕಾರವು ಯಾವುದೇ ಕ್ಷಣದಲ್ಲೂ ಬೀಳಬಹುದು ಎಂದು ವಿಶ್ಲೇಷಿಸಿದರು. ನಮ್ಮ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಮುಖಂಡರೊಂದಿಗೆ ಲೋಕೋಪಯೋಗಿ ಸಚಿವರಾದ ಶ್ರೀ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ಶಿಕಾರಿಪುರದಲ್ಲಿ ಹಾದು ಹೋಗುವ ರಾಜ್ಯ ಹೆದ್ದಾರಿ ನಂ-57 ಶಿವಮೊಗ್ಗ- ಶಿಕಾರಿಪುರ -ಹಾನಗಲ್ -ತಡಸ ರಸ್ತೆಯಲ್ಲಿ ಹೊಸದಾಗಿ ನಿರ್ಮಿಸಿರುವ…

‘ಸರ್ಕಾರ ಬೀಳುತ್ತೆ ಎಂಬ ಭಯ ಬೇಡ, ಜಾತಿ ಗಣತಿ ಬಿಡುಗಡೆ ಮಾಡಿ’; ಸಿಎಂಗೆ ಬಿ.ಕೆ.ಹರಿಪ್ರಸಾದ್ ಸಲಹೆ

ಬೆಂಗಳೂರು: ಸರ್ಕಾರದ ಅಳಿವು-ಉಳಿವಿನ ಪ್ರಶ್ನೆ ಬೇಡ, ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಜಾತಿ ಗಣತಿ ಬಿಡುಗಡೆ ಮಾಡುವಂತೆ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಸರ್ಕಾರಕ್ಕೆ ಸಕಲೆ ಮಡಿದ್ದಾರೆ. ಬೆಂಗಳೂರಿನಲ್ಲಿ “ಮೀಸಲಾತಿಯ ಒಳಮುಖ ” ಪುಸ್ತಕ ಬಿಡುಗಡೆಗೊಳಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೀಸಲಾತಿ ಹಾಗೂ ಸಂವಿಧಾನವನ್ನು ಉಳಿಸುವುದು ನಮ್ಮ ಪಕ್ಷಕ್ಕೆ ಮೊದಲ ಆದ್ಯತೆಯಾಗಿರುವುದು ಸ್ಪಷ್ಟ. ಜಾತಿ ಗಣತಿ ಹಾಗೂ ಜನ ಗಣತಿಯನ್ನು ಅನುಷ್ಠಾನಗೊಳಿಸುವುದರ ಪರವಾಗಿ ನಮ್ಮ ನಾಯಕರಾದ ಶ್ರೀ ರಾಹುಲ್ ಗಾಂಧಿ ಅವರು ಹೋರಾಟ ನಡೆಸುತ್ತಿದ್ದಾರೆ. ಅಧಿಕಾರಕ್ಕಾಗಿ ಮೀಸಲಾತಿಯ ವಿಷಯದಲ್ಲಿ ರಾಜಿಯಾಗಲು ಸಾಧ್ಯವೇ ಇಲ್ಲ ಎಂದರು. ಮಹಾತ್ಮ ಗಾಂಧಿ ಹಾಗೂ ನೆಹರೂ ಅವರ ಸಾಮಾಜಿಕ ನ್ಯಾಯ ಮತ್ತು ಸರ್ವಧರ್ಮ ಸಹ ಬಾಳ್ವೆಯಲ್ಲಿ ನಂಬಿಕೆ ಇಟ್ಟಿದ್ದೇನೆ. ಎಲ್ಲಾ ವರ್ಗದವರಿಗೂ ಅನುಕೂಲ ಆಗಬೇಕು ಅನ್ನುವ ಕಾರಣಕ್ಕಾಗಿ ಹೇಳುತ್ತಿದ್ದೇನೆ. ಜಾತಿ ಗಣತಿ ವಿಷಯದಲ್ಲಿ ಸಣ್ಣಪುಟ್ಟ ತಪ್ಪುಗಳಿದ್ದರೆ ಚರ್ಚೆ ಮಾಡಿ ಸರಿ ಮಾಡಬೇಕು.…

‘ಸಮೃದ್ಧ ಬೈಂದೂರು’: ಶಾಸಕ ಗುರುರಾಜ್ ಗಂಟಿಹೊಳೆ ಪರಿಕಲ್ಪನೆ.. ಹಳ್ಳಿ-ಹಳ್ಳಿಗಳಲ್ಲಿ ವೈದ್ಯಕೀಯ ಶಿಬಿರ

ಬೈಂದೂರು : ಬೈಂದೂರು ವಿಧಾನಸಭಾ ಕ್ಷೇತ್ರದ ಹಳ್ಳಿ ಪ್ರದೇಶವಾದ ಗಂಗಾನಾಡು, ಕ್ಯಾರ್ತುರು ಭಾಗದಲ್ಲಿ ವೈದ್ಯಕೀಯ ಶಿಬಿರ ನೆಡೆಸಿ ಫಲಾನುಭವಿಗಳಿಗೆ ಉಚಿತ ತಪಾಸಣೆ, ಚಿಕಿತ್ಸೆಯ ಜತೆಗೆ ಔಷಧ ವಿತರಿಸಲಾಯಿತು. ಶಾಸಕ ಗುರುರಾಜ್‌ ಗಂಟಿಹೊಳೆ ಅವರು ಭಾಗವಹಿಸಿ ತಮ್ಮ ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಂಡರು. ಜತೆಗೆ ಆರೋಗ್ಯದ ಬಗ್ಗೆ ಪ್ರತಿಯೊಬ್ಬರು ಕಾಳಜಿ ವಹಿಸಬೇಕು. ಇಂತಹ ಶಿಬಿರಗಳ ಪೂರ್ಣ ಉಪಯೋಗ ಪಡೆಯಬೇಕು. ಸಮೃದ್ಧ ಬೈಂದೂರು ಪರಿಕಲ್ಪನೆಯಡಿ ಶಿಕ್ಷಣ, ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ ಹಲವು ಕಾಯಕ್ರಮ ನಡೆಸುತ್ತಿದ್ದೇವೆ ಎಂದರು. ಮುಂದೆಯೂ ಸತತವಾಗಿ ಪ್ರತೀ ತಿಂಗಳು ಸಮೃದ್ಧ ಬೈಂದೂರು ಹಳ್ಳಿ ಪ್ರದೇಶಗಳಲ್ಲಿ ಉಚಿತ ವೈದ್ಯಕೀಯ ಶಿಭಿರ ನೆಡೆಸಾಲಿದೆ ಹಳ್ಳಿಪ್ರದೇಶದ ಪ್ರತೀ ಗ್ರಾಮಸ್ಥರು ಪ್ರಯೋಜನ ಪಡೆದುಕೊಳ್ಳಬೇಕು ಎಂದು ವೈದ್ಯಧಿಕಾರಿಗಳು ಮತ್ತು ಶಾಸಕರು ಸಾರ್ವಜನಿಕರೆ ಕರೆ ನೀಡಿದರು. ಸಮೃದ್ಧ ಬೈಂದೂರು ಟ್ರಸ್ಟ್‌ ಅಧ್ಯಕ್ಷರಾದ ಎಸ್.ಸುರೇಶ್ ಶೆಟ್ಟಿ, ಗಂಗನಾಡು ಶಾಲಾ ಮುಖ್ಯಶಿಕ್ಷಕರಾದ ಪ್ರಭಾಕರ್ ಬಿಲ್ಲವ, SDMC ಅಧ್ಯಕ್ಷರಾದ ರಾಜು…

ಮುಂಬೈ: ಕಟ್ಟಡದಲ್ಲಿ ಅಗ್ನಿ ದುರಂತ; ಬಾಲಕಿ ಸೇರಿ 7 ಮಂದಿ ಸಾವು

ಮುಂಬೈ: ಮಹಾರಾಷ್ಟ್ರ ರಾಜಧಾನಿ ಮುಂಬೈನ ಚೆಂಬೂರ್‌ನಲ್ಲಿ ಎರಡು ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅನಾಹುತ ಸಂಭವಿಸಿದೆ. ಈ ಅಗ್ನಿ ಆಕಸ್ಮಿಕದಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಮುಂಬೈನ ಚೆಂಬೂರ್ ಪ್ರದೇಶದ ಸಿದ್ಧಾರ್ಥ್ ಕಾಲೋನಿಯಲ್ಲಿ ಭಾನುವಾರ ಮುಂಜಾನೆ 5.20ರ ಸುಮಾರಿಗೆ ಅಂಗಡಿ ಮತ್ತು ವಸತಿ ಕಟ್ಟಡದಲ್ಲಿ ಭಾನುವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ. ಬಾಲಕಿ ಸೇರಿದಂತೆ ಕನಿಷ್ಠ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಅಗ್ನಿಶಾಮಕ ದಳ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ನೆಲ ಮಹಡಿಯಲ್ಲಿ ಕಾಣಿಸಿಕೊಂಡ ಬೆಂಕಿ, ಮೇಲಿನ ಮಹಡಿಗೆ ವ್ಯಾಪಿಸಿ ಘೋರ ದುರಂತ ಸಂಭವಿಸಿದೆ. ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮಂಗಳೂರು: ಶಾಸಕರ ಸಹೋದರ ನಿಗೂಢ ನಾಪತ್ತೆ; ಅವರ ಕಾರು ಅಪಘಾತ ಸ್ಥಿತಿಯಲ್ಲಿ ಪತ್ತೆ

ಮಂಗಳೂರು: ಶಾಸಕ ಬಿ.ಎಂ ಫಾರೂಖ್‌ ಸಹೋದರ ಮುಮ್ತಾಜ್‌ ಅಲಿ ಅವರು ನಿಗೂಢವಾಗಿ ನಾಪತ್ತೆಯಾಗಿದ್ದಾರೆ ಎಂಬ ಸುದ್ದಿ ಮಂಗಳೂರಿನಲ್ಲಿ ಆತಂಕ ಸೃಷ್ಟಿಸಿದೆ. ಮಂಗಳೂರಿನ ಕೂಳೂರು ಸೇತುವೆ ಬಳಿ ಅಲಿ ಅವರ ಕಾರು ಅಪಘಾತವಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಾಜಿ ಶಾಸಕ ಮೊಯ್ದೀನ್‌ ಬಾವಾ ಸಹೋದರರೂ ಆದ ಮುಮ್ತಾಜ್‌ ಅಲಿ ಅವರು ಮಂಗಳೂರು ಲೈನ್‌ ಆಂಡ್‌ ಮರೈನ್‌ ಇಂಡಸ್ಟ್ರೀಸ್‌ ಎಂಬ ಸಂಸ್ಥೆಯನ್ನು ನಡೆಸುತ್ತಿದ್ದಾರೆ. ಭಾನುವಾರ ನಸುಕಿನ ಜಾವ ವಾಟ್ಸಾಪ್‌ ಗ್ರೂಪ್‌‌ನಲ್ಲಿ ವಾಯ್ಸ್‌ ಮೆಸೇಜ್‌ ಹಾಕಿದ್ದರು ಎನ್ನಲಾಗಿದೆ. ಬೆಳಿಗ್ಗೆ ಈ ಸಂದೇಶ ಆಧರಿಸಿ ಹೊರಟ ಮುಮ್ತಾಜ್‌ ಅಲಿ ಪುತ್ರಿ ಮತ್ತು ಸಂಬಂಧಿಕರು ಕೂಳೂರು ಸೇತುವೆ ಬಳಿ ಕಾರನ್ನು ಪತ್ತೆಮಾಡಿದ್ದಾರೆ. ಕಾರು ಅಪಘಾತಗೊಂಡ ಸ್ಥಿತಿಯಲ್ಲಿದ್ದು, ಮುಮ್ತಾಜ್‌ ಅಲಿ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಈ ಬಗ್ಗೆ ಆತಂಕಗೊಂಡಿರುವ ಮುಮ್ತಾಜ್‌ ಅಲಿ ಕುಟುಂಬದವರು ಮಂಗಳೂರಿನ ಕಾವೂರು ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.