ನಾಪತ್ತೆಯಾಗಿದ್ದ ಉದ್ಯಮಿ ಬಿ.ಎಂ.‌ಮಮ್ತಾಜ್ ಅಲಿ ಮೃತದೇಹ ಪತ್ತೆ

ಕಾವೂರು: ಪೊಲೀಸ್ ಠಾಣಾ ವ್ಯಾಪ್ತಿಯ ಕೂಳೂರು ಸೇತುವೆ ಮೇಲೆ ಕಾರು ಬಿಟ್ಟು ನಾಪತ್ತೆಯಾಗಿದ್ದ ಉದ್ಯಮಿ ಬಿ.ಎಂ.‌ಮಮ್ತಾಝ್ ಅಲಿ ಅವರ ಮೃತದೇಹ ಪತ್ತೆಯಾಗಿದೆ. ಮಂಗಳೂರು ನಗರದ ಕೂಳೂರು ಸೇತುವೆಯ ಬಳಿ ಸೋಮವಾರ ಮುಮ್ತಾಜ್ ಅಲಿ ಅವರ ಮೃತದೇಹ ಪತ್ತೆಯಾಗಿದೆ. ಭಾನುವಾರದಿಂದ ಶೋಧ ಕಾರ್ಯ ನಡೆಸಿದ್ದ ತಜ್ಞರು ಸೋಮವಾರ ಬೆಳಗ್ಗೆ 6 ಗಂಟೆಯಿಂದ ಮತ್ತೆ ಹುಡುಕಾಟ ಆರಂಭಿಸಿದರು. ಬೆಳಿಗ್ಗೆ 10:40 ರ ಸುಮಾರಿಗೆ ಸ್ಥಳೀಯ ಮೀನುಗಾರರು ಮೃತದೇಹವನ್ನು ಪತ್ತೆ ಮಾಡಿದ್ದಾರೆ. ಈ ನಡುವೆ ಮುಮ್ತಾಜ್ ಅಲಿ ಸಾವಿನ ಕುರಿತಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಹಿಳೆ ಸೇರಿದಂತೆ 6 ಮಂದಿ ಆರೋಪಿಗಳ ವಿರುದ್ಧ ಪ್ರಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದ್ದು, ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ಸಿದ್ದರಾಮಯ್ಯ ಸರ್ಕಾರ ಯಾವುದೇ ಕ್ಷಣದಲ್ಲೂ ಬೀಳಬಹುದು; ವಿಜಯೇಂದ್ರ

ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸ ಇದೀಗ ರಾಜಕೀಯ ವಿದ್ಯಮಾನಗಳ ಕೇಂದ್ರಬಿಂದುವಾಗಿದೆ. ಖರ್ಗೆಯವರನ್ನು ಕಾಂಗ್ರೆಸ್ ನಾಯಕರು ಭೇಟಿಯಾಗಿ ಮಾತಿಕತೆ ನಡೆಸಿದ್ದಾರೆಂಬ ಬೆಳವಣಿಗೆಯ ಬೆನ್ನಲ್ಲೇ ಡಿ.ಕೆ. ಸುರೇಶ್ ಸೇರಿದಂತೆ ಹಲವು ರಾಜಕೀಯ ನಾಯಕರು ಸೋಮವಾರ ಚಿವ ಸತೀಶ್ ಜಾರಕಿಹೊಳಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿನ ಈ ಬೆಳವಣಿಗೆಯ ನಡುವೆಯೇ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕೂಡಾ ಸತೀಶ್ ಅವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದಾರೆ. ಸತೀಶ್ ಜಾರಕಿಹೊಳಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಕಾಂಗ್ರೆಸ್ ಪಕ್ಷದೊಳಗಿನ ಬೆಳವಣಿಗೆಯನ್ನು ಗಮನಿಸಿದರೆ ಸಿದ್ದರಾಮಯ್ಯ ಸರ್ಕಾರವು ಯಾವುದೇ ಕ್ಷಣದಲ್ಲೂ ಬೀಳಬಹುದು ಎಂದು ವಿಶ್ಲೇಷಿಸಿದರು. ನಮ್ಮ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಮುಖಂಡರೊಂದಿಗೆ ಲೋಕೋಪಯೋಗಿ ಸಚಿವರಾದ ಶ್ರೀ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ಶಿಕಾರಿಪುರದಲ್ಲಿ ಹಾದು ಹೋಗುವ ರಾಜ್ಯ ಹೆದ್ದಾರಿ ನಂ-57 ಶಿವಮೊಗ್ಗ- ಶಿಕಾರಿಪುರ -ಹಾನಗಲ್ -ತಡಸ ರಸ್ತೆಯಲ್ಲಿ ಹೊಸದಾಗಿ ನಿರ್ಮಿಸಿರುವ…

‘ಸರ್ಕಾರ ಬೀಳುತ್ತೆ ಎಂಬ ಭಯ ಬೇಡ, ಜಾತಿ ಗಣತಿ ಬಿಡುಗಡೆ ಮಾಡಿ’; ಸಿಎಂಗೆ ಬಿ.ಕೆ.ಹರಿಪ್ರಸಾದ್ ಸಲಹೆ

ಬೆಂಗಳೂರು: ಸರ್ಕಾರದ ಅಳಿವು-ಉಳಿವಿನ ಪ್ರಶ್ನೆ ಬೇಡ, ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಜಾತಿ ಗಣತಿ ಬಿಡುಗಡೆ ಮಾಡುವಂತೆ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಸರ್ಕಾರಕ್ಕೆ ಸಕಲೆ ಮಡಿದ್ದಾರೆ. ಬೆಂಗಳೂರಿನಲ್ಲಿ “ಮೀಸಲಾತಿಯ ಒಳಮುಖ ” ಪುಸ್ತಕ ಬಿಡುಗಡೆಗೊಳಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೀಸಲಾತಿ ಹಾಗೂ ಸಂವಿಧಾನವನ್ನು ಉಳಿಸುವುದು ನಮ್ಮ ಪಕ್ಷಕ್ಕೆ ಮೊದಲ ಆದ್ಯತೆಯಾಗಿರುವುದು ಸ್ಪಷ್ಟ. ಜಾತಿ ಗಣತಿ ಹಾಗೂ ಜನ ಗಣತಿಯನ್ನು ಅನುಷ್ಠಾನಗೊಳಿಸುವುದರ ಪರವಾಗಿ ನಮ್ಮ ನಾಯಕರಾದ ಶ್ರೀ ರಾಹುಲ್ ಗಾಂಧಿ ಅವರು ಹೋರಾಟ ನಡೆಸುತ್ತಿದ್ದಾರೆ. ಅಧಿಕಾರಕ್ಕಾಗಿ ಮೀಸಲಾತಿಯ ವಿಷಯದಲ್ಲಿ ರಾಜಿಯಾಗಲು ಸಾಧ್ಯವೇ ಇಲ್ಲ ಎಂದರು. ಮಹಾತ್ಮ ಗಾಂಧಿ ಹಾಗೂ ನೆಹರೂ ಅವರ ಸಾಮಾಜಿಕ ನ್ಯಾಯ ಮತ್ತು ಸರ್ವಧರ್ಮ ಸಹ ಬಾಳ್ವೆಯಲ್ಲಿ ನಂಬಿಕೆ ಇಟ್ಟಿದ್ದೇನೆ. ಎಲ್ಲಾ ವರ್ಗದವರಿಗೂ ಅನುಕೂಲ ಆಗಬೇಕು ಅನ್ನುವ ಕಾರಣಕ್ಕಾಗಿ ಹೇಳುತ್ತಿದ್ದೇನೆ. ಜಾತಿ ಗಣತಿ ವಿಷಯದಲ್ಲಿ ಸಣ್ಣಪುಟ್ಟ ತಪ್ಪುಗಳಿದ್ದರೆ ಚರ್ಚೆ ಮಾಡಿ ಸರಿ ಮಾಡಬೇಕು.…

‘ಸಮೃದ್ಧ ಬೈಂದೂರು’: ಶಾಸಕ ಗುರುರಾಜ್ ಗಂಟಿಹೊಳೆ ಪರಿಕಲ್ಪನೆ.. ಹಳ್ಳಿ-ಹಳ್ಳಿಗಳಲ್ಲಿ ವೈದ್ಯಕೀಯ ಶಿಬಿರ

ಬೈಂದೂರು : ಬೈಂದೂರು ವಿಧಾನಸಭಾ ಕ್ಷೇತ್ರದ ಹಳ್ಳಿ ಪ್ರದೇಶವಾದ ಗಂಗಾನಾಡು, ಕ್ಯಾರ್ತುರು ಭಾಗದಲ್ಲಿ ವೈದ್ಯಕೀಯ ಶಿಬಿರ ನೆಡೆಸಿ ಫಲಾನುಭವಿಗಳಿಗೆ ಉಚಿತ ತಪಾಸಣೆ, ಚಿಕಿತ್ಸೆಯ ಜತೆಗೆ ಔಷಧ ವಿತರಿಸಲಾಯಿತು. ಶಾಸಕ ಗುರುರಾಜ್‌ ಗಂಟಿಹೊಳೆ ಅವರು ಭಾಗವಹಿಸಿ ತಮ್ಮ ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಂಡರು. ಜತೆಗೆ ಆರೋಗ್ಯದ ಬಗ್ಗೆ ಪ್ರತಿಯೊಬ್ಬರು ಕಾಳಜಿ ವಹಿಸಬೇಕು. ಇಂತಹ ಶಿಬಿರಗಳ ಪೂರ್ಣ ಉಪಯೋಗ ಪಡೆಯಬೇಕು. ಸಮೃದ್ಧ ಬೈಂದೂರು ಪರಿಕಲ್ಪನೆಯಡಿ ಶಿಕ್ಷಣ, ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ ಹಲವು ಕಾಯಕ್ರಮ ನಡೆಸುತ್ತಿದ್ದೇವೆ ಎಂದರು. ಮುಂದೆಯೂ ಸತತವಾಗಿ ಪ್ರತೀ ತಿಂಗಳು ಸಮೃದ್ಧ ಬೈಂದೂರು ಹಳ್ಳಿ ಪ್ರದೇಶಗಳಲ್ಲಿ ಉಚಿತ ವೈದ್ಯಕೀಯ ಶಿಭಿರ ನೆಡೆಸಾಲಿದೆ ಹಳ್ಳಿಪ್ರದೇಶದ ಪ್ರತೀ ಗ್ರಾಮಸ್ಥರು ಪ್ರಯೋಜನ ಪಡೆದುಕೊಳ್ಳಬೇಕು ಎಂದು ವೈದ್ಯಧಿಕಾರಿಗಳು ಮತ್ತು ಶಾಸಕರು ಸಾರ್ವಜನಿಕರೆ ಕರೆ ನೀಡಿದರು. ಸಮೃದ್ಧ ಬೈಂದೂರು ಟ್ರಸ್ಟ್‌ ಅಧ್ಯಕ್ಷರಾದ ಎಸ್.ಸುರೇಶ್ ಶೆಟ್ಟಿ, ಗಂಗನಾಡು ಶಾಲಾ ಮುಖ್ಯಶಿಕ್ಷಕರಾದ ಪ್ರಭಾಕರ್ ಬಿಲ್ಲವ, SDMC ಅಧ್ಯಕ್ಷರಾದ ರಾಜು…

ಮುಂಬೈ: ಕಟ್ಟಡದಲ್ಲಿ ಅಗ್ನಿ ದುರಂತ; ಬಾಲಕಿ ಸೇರಿ 7 ಮಂದಿ ಸಾವು

ಮುಂಬೈ: ಮಹಾರಾಷ್ಟ್ರ ರಾಜಧಾನಿ ಮುಂಬೈನ ಚೆಂಬೂರ್‌ನಲ್ಲಿ ಎರಡು ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅನಾಹುತ ಸಂಭವಿಸಿದೆ. ಈ ಅಗ್ನಿ ಆಕಸ್ಮಿಕದಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಮುಂಬೈನ ಚೆಂಬೂರ್ ಪ್ರದೇಶದ ಸಿದ್ಧಾರ್ಥ್ ಕಾಲೋನಿಯಲ್ಲಿ ಭಾನುವಾರ ಮುಂಜಾನೆ 5.20ರ ಸುಮಾರಿಗೆ ಅಂಗಡಿ ಮತ್ತು ವಸತಿ ಕಟ್ಟಡದಲ್ಲಿ ಭಾನುವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ. ಬಾಲಕಿ ಸೇರಿದಂತೆ ಕನಿಷ್ಠ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಅಗ್ನಿಶಾಮಕ ದಳ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ನೆಲ ಮಹಡಿಯಲ್ಲಿ ಕಾಣಿಸಿಕೊಂಡ ಬೆಂಕಿ, ಮೇಲಿನ ಮಹಡಿಗೆ ವ್ಯಾಪಿಸಿ ಘೋರ ದುರಂತ ಸಂಭವಿಸಿದೆ. ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮಂಗಳೂರು: ಶಾಸಕರ ಸಹೋದರ ನಿಗೂಢ ನಾಪತ್ತೆ; ಅವರ ಕಾರು ಅಪಘಾತ ಸ್ಥಿತಿಯಲ್ಲಿ ಪತ್ತೆ

ಮಂಗಳೂರು: ಶಾಸಕ ಬಿ.ಎಂ ಫಾರೂಖ್‌ ಸಹೋದರ ಮುಮ್ತಾಜ್‌ ಅಲಿ ಅವರು ನಿಗೂಢವಾಗಿ ನಾಪತ್ತೆಯಾಗಿದ್ದಾರೆ ಎಂಬ ಸುದ್ದಿ ಮಂಗಳೂರಿನಲ್ಲಿ ಆತಂಕ ಸೃಷ್ಟಿಸಿದೆ. ಮಂಗಳೂರಿನ ಕೂಳೂರು ಸೇತುವೆ ಬಳಿ ಅಲಿ ಅವರ ಕಾರು ಅಪಘಾತವಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಾಜಿ ಶಾಸಕ ಮೊಯ್ದೀನ್‌ ಬಾವಾ ಸಹೋದರರೂ ಆದ ಮುಮ್ತಾಜ್‌ ಅಲಿ ಅವರು ಮಂಗಳೂರು ಲೈನ್‌ ಆಂಡ್‌ ಮರೈನ್‌ ಇಂಡಸ್ಟ್ರೀಸ್‌ ಎಂಬ ಸಂಸ್ಥೆಯನ್ನು ನಡೆಸುತ್ತಿದ್ದಾರೆ. ಭಾನುವಾರ ನಸುಕಿನ ಜಾವ ವಾಟ್ಸಾಪ್‌ ಗ್ರೂಪ್‌‌ನಲ್ಲಿ ವಾಯ್ಸ್‌ ಮೆಸೇಜ್‌ ಹಾಕಿದ್ದರು ಎನ್ನಲಾಗಿದೆ. ಬೆಳಿಗ್ಗೆ ಈ ಸಂದೇಶ ಆಧರಿಸಿ ಹೊರಟ ಮುಮ್ತಾಜ್‌ ಅಲಿ ಪುತ್ರಿ ಮತ್ತು ಸಂಬಂಧಿಕರು ಕೂಳೂರು ಸೇತುವೆ ಬಳಿ ಕಾರನ್ನು ಪತ್ತೆಮಾಡಿದ್ದಾರೆ. ಕಾರು ಅಪಘಾತಗೊಂಡ ಸ್ಥಿತಿಯಲ್ಲಿದ್ದು, ಮುಮ್ತಾಜ್‌ ಅಲಿ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಈ ಬಗ್ಗೆ ಆತಂಕಗೊಂಡಿರುವ ಮುಮ್ತಾಜ್‌ ಅಲಿ ಕುಟುಂಬದವರು ಮಂಗಳೂರಿನ ಕಾವೂರು ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಲಂಡನ್‌ನ ಲ್ಯಾಂಬೆತ್ ಬಸವೇಶ್ವರ ಪ್ರತಿಮೆಗೆ ನಟಿ ಪೂಜಾಗಾಂಧಿ ದಂಪತಿ ಗೌರವ; ಮುಂಗಾರು ಮಳೆ ಬೆಡಗಿಗೆ ಸಾಗರೋತ್ತರ ಕನ್ನಡಿಗರ ಸನ್ಮಾನ

ಲಂಡನ್: ಸ್ಯಾಂಡಲ್‌ವುಡ್ ನಟಿ ಪೂಜಾ ಗಾಂಧಿ ಮತ್ತು ವಿಜಯ ಘೋರ್ಪಡೆ ದಂಪತಿ ಲಂಡನ್‌ನಲ್ಲಿ ಶ್ರೀ ಬಸವೇಶ್ವರ ವಿಗ್ರಹ ಸ್ಥಳಕ್ಕೆ ಭೇಟಿ ಕನ್ನಡಿಗರ ಜೊತೆ ಸಮಾಲೋಚನೆ ನಡೆಸಿ ಗಮನಸೆಳೆದರು. ಬ್ರಿಟಿಷ್ ಇಂಡಿಯನ್ ಮತ್ತು ಕನ್ನಡ ಸಮುದಾಯದ ಸದಸ್ಯರು ಕೂಡ ಈ ಸಂದರ್ಭದಲ್ಲಿ ಭಾಗವಹಿಸಿದ್ದರು. ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ಮತ್ತು ಯುಕೆ ಮೂಲದ ಬಸವ ಸಮಿತಿ ಸಂಯುಕ್ತವಾಗಿ ಆಯೋಜಿಸಿ ಕಾರ್ಯಕ್ರಮದಲ್ಲಿ ನಟಿ ಪೂಜಾ ಗಾಂಧಿ ದಂಪತಿ ಭಾಗವಹಿಸಿದರು. UK ಕನ್ನಡ ಬಳಗ ಮತ್ತು ಕನ್ನಡಿಗರು UK ಸಂಸ್ಥೆಗಳೂ ಈ ಕಾರ್ಯಕ್ರಮದಲ್ಲಿ ಮಹತ್ವದ ಸಹಭಾಗಿಗಳಾಗಿದ್ದವು. ಲ್ಯಾಂಬೆತ್‌ನ ಮಾಜಿ ಮೇಯರ್ ಡಾ. ನೀರಜ್ ಪಾಟೀಲ್ ಅವರು ಪೂಜಾ ಗಾಂಧಿ ದಂಪತಿಯನ್ನು ಅಭಿನಂದಿಸಿದರು. ‘ಕನ್ನಡಿಗರು UK’ ಅಧ್ಯಕ್ಷ ಗಣಪತಿ ಭಟ್, ಯುಕೆ ಮೂಲದ ಬಸವ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರು ಅಭಿಜಿತ್ ಸಲೀಮತ್, ಮಿರ್ಗಿ ರಂಗನಾಥ್ ಮತ್ತು ಶರಣ್ ಭೇಮಳ್ಳಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.…

ಹರಿಯಾಣದಲ್ಲಿ ಕಾಂಗ್ರೆಸ್ ದಿಗ್ವಿಜಯ ಸಾಧ್ಯತೆ: ಎಕ್ಸಿಟ್ ಪೋಲ್ ರಿಸಲ್ಟ್

ನವದೆಹಲಿ: ಹರಿಯಾಣ ವಿಧಾನಸಭೆಗೆ ನಡೆದ ಶನಿವಾರ ಮತದಾನ ನಡೆದಿದ್ದು ಇದೀಗ ಸೋಲು ಗೆಲುವಿನ ಲೆಕ್ಕಾಚಾರ ನಡೆಯುತ್ತಿದೆ. ಮತದಾನ ಮುಕ್ತಾಯವಾಗುತ್ತಿದ್ದಂತೆಯೇ ಮತಗಟ್ಟೆ ಸಮೀಕ್ಷೆಗಳ ಫಲಿತಾಂಶ ಹೊರಬಿದ್ದಿವೆ. ಬಹುತೇಕ ಸಂಸ್ಥೆಗಳ ಸಮೀಕ್ಷೆಗಳು ಹರಿಯಾಣದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಲಿದೆ ಎಂಬ ಸುಳಿವನ್ನು ನೀಡಿವೆ. ಹರಿಯಾಣದಲ್ಲಿ ಈವರೆಗೂ ಅಧಿಕಾರ ನಡೆಸಿರುವ ಬಿಜೆಪಿ ಅಧಿಕಾರ ಕಳೆದುಕೊಳ್ಳಲಿದೆ ಎಂದು ಬಹುತೇಕ ಸಮೀಕ್ಷೆಗಳು ಹೇಳಿವೆ. ಸಮೀಕ್ಷಾ ಫಲಿತಾಂಶ ಹೀಗಿದೆ: ರಿಪಬ್ಲಿಕ್-ಮ್ಯಾಟ್ರಿಜ್: ಕಾಂಗ್ರೆಸ್ 55-62 ಸ್ಥಾನಗಳು, ಬಿಜೆಪಿ 18-24 ಸ್ಥಾನಗಳು, ಜೆಜೆಪಿ 0-3 ಸ್ಥಾನಗಳು, ಐಎನ್‌ಎಲ್‌ಡಿ 3-6 ಸ್ಥಾನಗಳು, ಇತರೆ 2-5 ಸ್ಥಾನಗಳು. ದೈನಿಕ್ ಭಾಸ್ಕರ್: ಕಾಂಗ್ರೆಸ್ 44-54 ಸ್ಥಾನಗಳು, ಬಿಜೆಪಿ 19-29 ಸ್ಥಾನಗಳು, ಜೆಜೆಪಿ 0-1 ಸ್ಥಾನಗಳು, ಐಎನ್‌ಎಲ್‌ಡಿ 1-5 ಸ್ಥಾನಗಳು, ಇತರರು 4-9 ಸ್ಥಾನಗಳು ಧ್ರುವ್ ಸಮೀಕ್ಷೆ: ಕಾಂಗ್ರೆಸ್ 57-64 ಸ್ಥಾನಗಳು, ಬಿಜೆಪಿ 27-32 ಸ್ಥಾನಗಳು, ಇತರರು 5-8 ಸ್ಥಾನಗಳು.

ಎಕ್ಸಿಟ್ ಫೋಲ್ :ಜಮ್ಮು-ಕಾಶ್ಮೀರದಲ್ಲಿ JKNC 33-35 ನೇತೃತ್ವದ ಸರ್ಕಾರ ಅಧಿಕಾರಕ್ಕೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ JKNC 33-35 ಸ್ಥಾನಗಳನ್ನು ಗೆದ್ದು ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ. ಪೀಪಲ್ಸ್ ಪಲ್ಸ್ ಭವಿಷ್ಯ ಪ್ರಕಾರ JKNC 33-35 ಸ್ಥಾನಗಳನ್ನು ಗೆಲ್ಲಲಿವೆ ಎಂಬ ಸುಳಿವು ವ್ಯಕ್ತವಾಗಿದೆ. ಕಾಂಗ್ರೆಸ್ 13-15 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಗಳಿದ್ದು, ಬಿಜೆಪಿ 23-27 ಸ್ಥನಗಳನ್ನು ಜಯಿಸಲಿದೆ. ಪಿಡಿಪಿ 7-11 ಸ್ಥಾನಗಳನ್ನು ಹಾಗೂ ಇತರರು 4-5 ಸ್ಥಾನಗಳನ್ನು ಗೆಲ್ಲಲಿವೆ ಎಂದು ಪೀಪಲ್ಸ್ ಪಲ್ಸ್ ವಿಶ್ಲೇಷಿಸಿದೆ.

ಕುರಿ ಕಾಯುವವರ ಮಗ ಎರಡನೇ ಬಾರಿ ಸಿಎಂ ಆಗಿದ್ದೇ ತಪ್ಪಾ? : ಶಕ್ತಿಪ್ರದರ್ಶನದ ನಡುವೆ ಸಿಎಂ ಪ್ರಶ್ನೆ

ರಾಯಚೂರು : ಯಾವತ್ತೂ ಮನೆಯಿಂದ ಆಚೆಗೆ ಬಂದು ರಾಜಕಾರಣದ ಕಡೆ ಮುಖ ಮಾಡದ, ಯಾವ ವಿಷಯಕ್ಕೂ ತಲೆ ಹಾಕದ ನನ್ನ ಪತ್ನಿಯನ್ನೂ ಅವರ ರಾಜಕಾರಣಕ್ಕೆ ಎಳೆದು ತಂದ್ರಲ್ಲಾ ಇದನ್ನು ನೀವು ಕ್ಷಮಿಸ್ತೀರಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಾನ್ವಿಯಲ್ಲಿ 45842.17 ಲಕ್ಷ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ಶೋಷಿತ-ದಮನಿತ-ಶೂದ್ರ ಜನ ಸಮುದಾಯಗಳ ಸ್ವಾಭಿಮಾನಿ ಸಮಾವೇಷವನ್ನು ಉದ್ಘಾಟಿಸಿ ಮಾತನಾಡಿದರು. ನಾನು ಏನು ತಪ್ಪು ಮಾಡಿದ್ದೀನಿ? ಕುರಿ ಕಾಯುವವರ ಮಗ ಎರಡನೇ ಬಾರಿ ಸಿಎಂ ಆಗಿದ್ದೇ ತಪ್ಪಾ? ಐದೈದು ಗ್ಯಾರಂಟಿಗಳನ್ನು, ಹತ್ತಾರು ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇ ತಪ್ಪಾ? ನನ್ನ ಮೇಲಿನ ಹೊಟ್ಟೆಕಿಚ್ಚಿಗೆ ನನ್ನ ಪತ್ನಿಯನ್ನು ಎಳೆಯಬೇಕಿತ್ತಾ? ಅವರು ಏನು ತಾನೆ ತಪ್ಪು ಮಾಡಿದ್ದರು ಎಂದು ಭಾವನಾತ್ಮಕವಾಗಿ ಜನ ಸಾಗರವನ್ನು ಪ್ರಶ್ನಿಸಿದರು. BJP-JDS ನ ಸುಳ್ಳು ಮತ್ತು ಕಪಟ ಷಡ್ಯಂತ್ರಕ್ಕೆ ತಕ್ಕ ಪಾಠ ಕಲಿಸಲು ಸಿದ್ದರಾಗಿ ಎಂದು ಸಿ.ಎಂ.ಸಿದ್ದರಾಮಯ್ಯ ಅವರು…