ದಿನೇಶ್ ಗುಂಡೂರಾವ್ ವಿರುದ್ದ ಮಾನನಷ್ಟ ಕೇಸ್; ಸಾವರ್ಕರ್ ಮೊಮ್ಮಗ

ಬೆಂಗಳೂರು: ವೀರ ಸಾವರ್ಕರ್ ಗೋಮಾಂಸ ತಿನ್ನುತ್ತಿದ್ದರು ಎಂಬ ಹೇಳಿಕೆಯಿಂದಾಗಿ ಸಚಿವ ದಿನೇಶ್ ಗುಂಡೂರಾವ್ ಇದೀಗ ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ. ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ್ದ ಸಚಿವ ದಿನೇಶ್ ಗುಂಡೂರಾವ್, ವೀರ್ ಸಾವರ್ಕರ್ ಅವರ ಸಿದ್ಧಾಂತದ ಕುರಿತು ಹೇಳಿಕೆ ನೀಡಿದ್ದರು. ಸಾವರ್ಕರ್ ಬ್ರಾಹ್ಮಣರಾಗಿದ್ದರೂ ಗೋಮಾಂಸ ಸೇವಿಸುತ್ತಿದ್ದರು ಎಂದು ಸಚಿವರು ಹೇಳಿಕೆ ನೀಡಿದ್ದರು. ಸಚಿವ ದಿನೇಶ್ ಗುಂಡೂರಾವ್ ಅವರ ಹೇಳಿಕೆಯನ್ನು ಖಂಡಿಸಿರುವ ಸಾವರ್ಕರ್ ಮೊಮ್ಮಗ ರಂಜಿತ್ ಸಾವರ್ಕರ್, ವೀರ್ ಸಾವರ್ಕರ್ ಅವರು ಗೋಮಾಂಸ ಸೇವಿಸುತ್ತಿದ್ದರು” ಎಂಬುದು ಸುಳ್ಳು ಹೇಳಿಕೆ ಎಂದರು. ಗುಂಡೂರಾವ್ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ಹೂಡುವುದಾಗಿ ಅವರು ತಿಳಿಸಿದ್ದಾರೆ.

ಹಣಕ್ಕಾಗಿ ಉದ್ಯಮಿಗೆ ಬೆದರಿಕೆ ಆರೋಪ; ಕೇಂದ್ರ ಸಚಿವ ಹೆಚ್ಡಿಕೆ ವಿರುದ್ದ ಎಫ್‌ಐ.ಆರ್

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ದ ಎಫ್​ಐಆರ್ ದಾಖಲಾಗಿದೆ. 50 ಕೋಟಿ ರೂಪಾಯಿ ನೀಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಉದ್ಯಮಿ ವಿಜಯ್ ಟಾಟಾ ದೂರು ನೀಡಿದ್ದರು.‌ ಈ ದೂರಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಅಮೃತಹಳ್ಳಿ ಠಾಣೆ ಪೊಲೀಸರು ಎಫ್‌ಐ‌ಆರ್ ದಾಖಲಿಸಿದ್ದಾರೆ. ಹೆಚ್.ಡಿ. ಕುಮಾರಸ್ವಾಮಿ ಹಾಗೂ ಜೆಡಿಎಸ್ ಶಾಸಕ ರಮೇಶ್ ಗೌಡ ವಿರುದ್ಧ ಪ್ರಕರಣ ದಾಖಲಾಗಿದೆ.‌

‘ನಾನು ತಪ್ಪಿತಸ್ಥನಲ್ಲ’: ನ್ಯಾಯಾಲಯಕ್ಕಿಂತ ಕಾಂಗ್ರೆಸ್‌ ಪಕ್ಷ ದೊಡ್ಡದೇ? ಎಂದು ಅಶೋಕ್ ಪ್ರಶ್ನೆ

ಬೆಂಗಳೂರು: ‘ನನ್ನನ್ನು ಭೂ ಕಬಳಿಕೆದಾರ ಎಂದು ಕರೆದಿರುವ ಕಾಂಗ್ರೆಸ್‌ನ ನಾಲ್ಕು ಸಚಿವರು ನೈತಿಕತೆಯ ಪ್ರಶ್ನೆ ಎತ್ತಿದ್ದಾರೆ. ಆದರೆ ಇದೇ ಕಾಂಗ್ರೆಸ್‌ನ ಕೇಂದ್ರ ಸರ್ಕಾರ ಅಂದು ನೇಮಿಸಿದ್ದ ರಾಜ್ಯಪಾಲರು ಮತ್ತು ಘನ ನ್ಯಾಯಾಲಯ ನಾನು ತಪ್ಪಿತಸ್ಥ ಅಲ್ಲ ಎಂದು ಅಭಿಪ್ರಾಯಪಟ್ಟಿದೆ. ಆದರೂ ಕಾಂಗ್ರೆಸ್‌ ಪಕ್ಷ ನ್ಯಾಯಾಲಯಕ್ಕಿಂತ ದೊಡ್ಡದಾಗಲು ಯತ್ನಿಸಿ ತೀರ್ಪು ನೀಡಲು ಮುಂದಾಗಿದೆ’ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ತಮ್ಮ ಮೇಲಿನ ಆರೋಪ ಕುರಿತು ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ ಅಶೋಕ್, ಕಾಂಗ್ರೆಸ್‌ ಸರ್ಕಾರದ ನಾಲ್ವರು ಸಚಿವರು ನನ್ನ ಬಗ್ಗೆ ಕಳಂಕ ಸೃಷ್ಟಿಸಲು ಹಳೆಯ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ಇದರಲ್ಲಿ ನೈತಿಕತೆಯ ಪ್ರಶ್ನೆ ಎತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಡಾ ಹಗರಣದಲ್ಲಿ ಅರಿಶಿನ-ಕುಂಕುಮದ ಮೂಲಕ ಭೂಮಿ ಬಂದಿದೆ. ಆದರೆ ನಾನು ಹಣ ಕೊಟ್ಟು ಭೂಮಿ ಖರೀದಿ ಮಾಡಿದ್ದೇನೆ. ಈ ಪ್ರಕರಣದ ಬಗ್ಗೆ ಆರೋಪ ಬಂದಾಗ ರಾಜ್ಯದಲ್ಲಿ ಕಾಂಗ್ರೆಸ್‌ನ ಕೇಂದ್ರ ಸರ್ಕಾರವೇ…

ವೀರ ಸಾವರ್ಕರ್ ಬಗ್ಗೆ ದಿನೇಶ್ ಗುಂಡೂರಾವ್ ವಿವಾದಾತ್ಮಕ ಹೇಳಿಕೆ; ಬಿಜೆಪಿ ಆಕ್ರೋಶ

ಬೆಂಗಳೂರು: ವೀರ ಸಾವರ್ಕರ್ ಗೋಮಾಂಸ ತಿನ್ನುತ್ತಿದ್ದರು ಎಂಬ ಹೇಳಿಕೆಯಿಂದಾಗಿ ಸಚಿವ ದಿನೇಶ್ ಗುಂಡೂರಾವ್ ಇದೀಗ ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ. ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ್ದ ಸಚಿವ ದಿನೇಶ್ ಗುಂಡೂರಾವ್, ವೀರ್ ಸಾವರ್ಕರ್ ಅವರ ಸಿದ್ಧಾಂತದ ಕುರಿತು ಹೇಳಿಕೆ ನೀಡಿದ್ದರು. ಸಾವರ್ಕರ್ ಬ್ರಾಹ್ಮಣರಾಗಿದ್ದರೂ ಗೋಮಾಂಸ ಸೇವಿಸುತ್ತಿದ್ದರು ಎಂದು ಸಚಿವರು ಹೇಳಿಕೆ ನೀಡಿದ್ದರು. ಸಚಿವ ದಿನೇಶ್ ಗುಂಡೂರಾವ್ ಅವರ ಹೇಳಿಕೆಯನ್ನು ಬಿಜೆಪಿ ಖಂಡಿಸಿದೆ. ‘Savarkar was a beef eater’?! 😡 Shocking to see Congress leaders like @dineshgrao spreading lies about Veer Savarkar ! His sacrifices for India’s freedom cannot be tarnished by cheap political narratives. Congress’s hatred for Marathas and Maharashtra is clearly visible!… pic.twitter.com/8Q2yNYY5Pb — BJP Karnataka (@BJP4Karnataka) October…

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಾಹಿತಿ ಹಂಪಾ ನಾಗರಾಜಯ್ಯ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ನಾಡಹಬ್ಬ ದಸರಾಕ್ಕೆ ಇಂದು ಅದ್ದೂರಿ ಚಾಲನೆ ಸಿಕ್ಕಿದೆ. ಗುರುವಾರ ಬೆಳಗ್ಗೆ 9.15 ರಿಂದ 9.40ರ ಶುಭ ವೃಶ್ಚಿಕ ಲಗ್ನದಲ್ಲಿ ನಾಡದೇವಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮೂಲಕ ಹಿರಿಯ ಸಾಹಿತಿ ಹಂಪಾ ನಾಗರಾಜಯ್ಯ ಅವರು ವಿಶ್ವ ವಿಖ್ಯಾತ ಮೈಸೂರು ದಸರಾವನ್ನು ಉದ್ಘಾಟಿಸಿದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಉಪಸ್ಥಿತಿಯಲ್ಲಿ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಸಾಹಿತಿ ಹಂಪ ನಾಗರಾಜಯ್ಯ ಅವರು ದಸರಾ ವೈಭವಕ್ಕೆ ಚಾಲನೆ ನೀಡಿದರು. ಸ್ಥಳೀಯ ಶಾಸಕ ಜಿ.ಟಿ.ದೇವೇಗೌಡ ಅಧ್ಯಕ್ಷತೆಯಲ್ಲಿ ಸಮಾರಂಭ ನೆರವೇರಿತು.

ನಟಿ ರಾಧಿಕಾ ಕುಮಾರಸ್ವಾಮಿಯಾ ‘ಭೈರಾದೇವಿ’ ಅವತಾರಕ್ಕೆ ವೀಕ್ಷಕರು ಫಿದಾ

ನಟಿ ರಾಧಿಕಾ ಕುಮಾರಸ್ವಾಮಿ ಅಭಿನಯದ ‘ಭೈರಾದೇವಿ’ ಚಿತ್ರ ಕನ್ನಡ ಚಿತ್ರರಂಗದಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿದೆ. ಈ ಸಿನಿಮಾ ಬಿಡುಗಡೆಯಾಗಿದ್ದು ಸಿನಿಲೋಕದಲ್ಲಿ ವಿಶೇಷ ಪ್ರಯೋಗ ಎಂದೇ ವೀಕ್ಷಕರು ಪ್ರತಿಪಾದಿಸಿದ್ದಾರೆ. ‘ಭೈರಾದೇವಿ’ ಟ್ರೈಲರ್ ಕೂಡಾ ನೆಟ್ಟಿಗರ ಕುತೂಹಲದ ಕೇಂದ್ರಬಿಂದುವಾಗಿದೆ. ಶ್ರೀಜೈ ನಿರ್ದೇಶಿಸಿರುವ ಈ ಸಿನಿಮಾದಲ್ಲಿ ನಟಿ ರಾಧಿಕಾ ಕುಮಾರಸ್ವಾಮಿ ಜೊತೆ ರಮೇಶ್ ಅರವಿಂದ್ ಕೂಡಾ ಅಭಿನಯಿಸಿದ್ದಾರೆ.

ಅರ್ಷದ್ ವಾರ್ಸಿ, ಮೆಹರ್ ವಿಜ್ ನಟನೆಯ ‘ಬಂದಾ ಸಿಂಗ್ ಚೌಧರಿ’ ಬಗ್ಗೆ ವೀಕ್ಷಕರ ಲೈಕ್ಸ್ ಹೀಗಿದೆ

ನಟ ಅರ್ಷದ್ ವಾರ್ಸಿ ಮತ್ತು ಮೆಹರ್ ವಿಜ್ ನಟನೆಯ ಬಂದಾ ಸಿಂಗ್ ‘ಚೌಧರಿ’ ಚಿತ್ರ ಭಾರೀ ನಿರೀಕ್ಷೆ ಹುಟ್ಟಿಸಿತ್ತು. ವೀಕ್ಷಕರು ಕೂಡಾ ಸಿನಿಮಾ ಬಗ್ಗೆ ಫಿದಾ ಆಗಿದ್ದಾರಂತೆ. ಈ ಸಿನಿಮಾದ ಟ್ರೈಲರ್ ಕೂಡಾ ಭಾರೀ ಪ್ರತಿಕ್ರಿಯೆ ಗಿಟ್ಟಿಸಿಕೊಂಡಿದೆ. ಲೈಕ್ಸ್ ಕೂಡಾ ಹೆಚ್ಚಿನ ಪ್ರಮಾಣದಲ್ಲಿ ಸಿಕ್ಕಿದೆ. ಅದರಂತೆ ಸಿನಿಮಾ ಬಗ್ಗೆಯೂ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಈ ಚಿತ್ರವನ್ನು ಅಭಿಷೇಕ್ ಸಕ್ಸೆನಾ ನಿರ್ದೇಶಿಸಿದ್ದಾರೆ.

ವಿವಾದದ ಹೇಳಿಕೆ ಮೂಲಕ ಮೋದಿ ಸರ್ಕಾರ, ಸಚಿವ ಸ್ಥಾನಕ್ಕೆ HDK ಮಸಿ; ರಮೇಶ್ ಬಾಬು ಟೀಕಾಸ್ತ್ರ 

ಬೆಂಗಳೂರು: ಮುಡಾ ವಿವಾದದಲ್ಲಿ ಹತಾಶ ಮನೋಭಾವದಿಂದ ಕೇಂದ್ರ ಸಚಿವ ಕುಮಾರಸ್ವಾಮಿರವರು ತಮ್ಮ ಸಚಿವ ಸ್ಥಾನಕ್ಕೆ ಮತ್ತು ಕೇಂದ್ರದ ಬಿಜೆಪಿ ಸರ್ಕಾರಕ್ಕೆ ತಾವೇ ಮಸಿ ಬಳಿಯುತ್ತಿದ್ದಾರೆ ಎಂದು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಟೀಕಿಸಿದ್ದಾರೆ. ಮಾಧ್ಯಮ ಹೇಳಿಕೆ ಮೂಲಕ ಪ್ರತಿಕ್ರಿಯಿಸಿರುವ ರಮೇಶ್ ಬಾಬು, ಕುಮಾರಸ್ವಾಮಿರವರು ಮೂಡ ಪ್ರಕರಣದಲ್ಲಿ ಮುಖ್ಯಮಂತ್ರಿಯ ಪತ್ನಿ ನಿವೇಶನಗಳನ್ನು ವಾಪಸ್ಸು ನೀಡಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳನ್ನು ಮತ್ತು ಮೂಡ ಆಯುಕ್ತರನ್ನು ರಾಜಕೀಯವಾಗಿ ಟೀಕಿಸಿರುವುದು ಅವರ ಹತಾಶವದದ ಸಂಕೇತವಾಗಿರುತ್ತದೆ ಎಂದಿದ್ದಾರೆ. ತನಿಖಾ ಸಂಸ್ಥೆಗಳು ಮತ್ತು ಸರ್ಕಾರಿ ಅಧಿಕಾರಿಗಳನ್ನು ತಮ್ಮ ಮೂಗಿನ ನೇರಕ್ಕೆ ವರ್ತಿಸುವ ರೀತಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ರವರು ಬೇದರಿಸುತ್ತಿರುವುದು, ತನಿಖೆಯ ಹಾದಿಯನ್ನು ತಪ್ಪಿಸುವ ಉದ್ದೇಶವಾಗಿರುತ್ತದೆ. ಕರ್ನಾಟಕ ಹೈ ಕೋರ್ಟಿನ ತೀರ್ಪಿನಲ್ಲಿ ಮುಖ್ಯಮಂತ್ರಿ ಪತ್ನಿಯು ಪಕ್ಷಗಾರರು ಆಗಿರುವುದಿಲ್ಲ. ಮೂಡ ಹಗರಣದಲ್ಲಿ ನಿವೇಶನಗಳನ್ನು ವಾಪಸ್ಸು ನೀಡುವ ನಿರ್ಧಾರ ಅವರ ವೈಯಕ್ತಿಕ…

ದ.ಕ.-ಉಡುಪಿ ಪರಿಷತ್ ಅಖಾಡ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ

ಉಡುಪಿ: ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನಪರಿಷತ್‌ಗೆ ನಡೆಯುವ ಉಪಚುನಾವಣೆಗೆ ಕಾಂಗ್ರೆಸ್‌ ಹುರಿಯಾಳಾಗಿ ಸಹಕಾರಿ ಧುರೀಣ ರಾಜು ಪೂಜಾರಿ ಅವರನ್ನು ಎಐಸಿಸಿ ಘೋಷಿಸಿದೆ. ಬಿಲ್ಲವ ಸಮುದಾಯದ ಪ್ರಾಬಲ್ಯವಿರುವ ಕರಾವಳಿ ಜಿಲ್ಲೆಯಲ್ಲಿ ಬಿಲ್ಲವ ಸಮುದಾಯದವರಿಗೆ ಟಿಕೆಟ್ ಪ್ರಕಟಿಸುವ ಮೂಲಕ ಅಖಾದಲ್ಲಿ ಕಾಂಗ್ರೆಸ್ ಪಕ್ಷ ಸಂಚಲನ ಸೃಷ್ಟಿಸಿದೆ ‌ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜು ಪೂಜಾರಿ ಅವರಿಗೆ ಟಿಕೆಟ್ ಘೋಷಿಸಿದ್ದಾರೆ. ಈ ಕುರಿತಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಕೋಟಾ ಶ್ರೀನಿವಾಸ ಪೂಜಾರಿ ಅವರು ಸಂಸದರಾಗಿ ಚುನಾಯಿತರಾದ ಸಂದರ್ಭದಲ್ಲಿ ರಾಜೀನಾಮೆ ನೀಡಿದ್ದರಿಂದ ತೆರವಾಗಿರುವ ಈ ಕ್ಷೇತ್ರಕ್ಕೆ ಇದೀಗ ಉಪಚುನಾವಣೆ ಘೋಷಣೆಯಾಗಿದೆ.‌ ನಾಮಪತ್ರ ಸಲ್ಲಿಕೆಗೆ ಗುರುವಾರ (ಸೆ.3) ಕೊನೆ ದಿನವಾಗಿದ್ದು ಮುನ್ನಾ ದಿನದಂದು ಕಾಂಗ್ರೆಸ್ ಪಕ್ಷ ಅಭ್ಯರ್ಥಿ ಹೆಸರನ್ನು ಘೋಷಿಸಿದೆ.

ವಿವಾದ ಸುಳಿಯಲ್ಲಿ ವಿಪಕ್ಷ ನಾಯಕ; ಅಶೋಕ್ ಅಕ್ರಮಗಳ ಬಗ್ಗೆ ಸಚಿವರಿಂದಲೇ ದಾಖಲೆಗಳ ಬಿಡುಗಡೆ

ಬೆಂಗಳೂರು: ಮುಡಾ ಹಗರಣ ವಿಚಾರದಲ್ಲಿ ಸೈಟ್ ಹಿಂದಿರುಗಿಸಿದರೂ ರಾಜೀನಾಮೆ ನೀಡಲೇಬೇಕು ಎಂದು ಆಗ್ರಹಿಸುತ್ತಿರುವ ಬಿಜೆಪಿಗೆ ಸಿದ್ದು ಸಂಪುಟದ ಸಚಿವರು ಎದಿರೇಟು ನೀಡಿದ್ದಾರೆ. ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ವಿರುದ್ದದ ಡಿನೊಟಿಫಿಕೇಶನ್ ಹಗರಣ ಆರೋಪ ಮುಂದಿಟ್ಟು ಕಾಂಗ್ರೆಸ್ ನಾಯಕರು ಬಿಜೆಪಿಯನ್ನೂ ಮುಜುಗರಕ್ಕೆ ಸಿಲುಕಿಸುವ ಪ್ರಯತ್ನ ನಡೆಸಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಸಚಿವರಾದ ಜಿ.ಪರಮೇಶ್ವರ್, ಹೆಚ್.ಕೆ.ಪಾಟೀಲ್, ಕೃಷ್ಣ ಬೈರೇಗೌಡ, ಸತೀಶ್ ಜಾರಕಿಹೊಳಿ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್ ಬಾಬು ನಡೆಸಿದ ಜಂಟಿ ಸುದ್ದಿಗೋಷ್ಠಿ ವಿದ್ಯಮಾನಗಳ ಕೇಂದ್ರಬಿಂದುವಾಯಿತು. ಗೃಹ ಸಚಿವ ಪರಮೇಶ್ವರ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ಪರಿಹಾರವಾಗಿ ಬಂದಿದ್ದ 14 ನಿವೇಶನಗಳನ್ನು ವಾಪಸ್ ನೀಡಲಾಗಿದೆ. ಈ ಬಗ್ಗೆ ವಿರೋಧ ಪಕ್ಷದ ನಾಯಕರು ಬೇರೆ ಅರ್ಥ ಕಲ್ಪಿಸಿ, ತಪ್ಪು ಮಾಡಿರುವ ಕಾರಣ ವಾಪಸ್ ನೀಡಿದ್ದೀರಿ ಎಂದು ಆರೋಪ ಮಾಡಿದ್ದಾರೆ ಎಂದರು. ಲೊಟ್ಟೆಗೊಲ್ಲಹಳ್ಳಿಯಲ್ಲಿ ನೂರಾರು ಕೋಟಿ ಭೂ…