ʼಜೈಲರ್ʼ ಬಳಿಕ ರಜಿನಿಕಾಂತ್ ಖಾಕಿ ತೊಟ್ಟು ವಿಶೇಷ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ವಿಶೇಷ ಪಾತ್ರದ ʼವೆಟ್ಟೈಯನ್ʼ ಚಿತ್ರ ಸಿನಿ ಲೋಕದಲ್ಲಿ ಕುತೂಹಲ ಕೆರಳಿಸಿದೆ. ಭಾರೀ ನಿರೀಕ್ಷೆ ಹುಟ್ಟಿಸಿರುವ ʼವೆಟ್ಟೈಯನ್ʼ ಟ್ರೇಲರ್ ಸಿನಿ ರಸಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಅಮಿತಾಭ್ ಬಚ್ಚನ್ ಕೂಡಾ ವಿಶೇಷ ಪಾತ್ರದಲ್ಲಿ ಗಮನಸೆಳೆದಿದ್ದಾರೆ.
Year: 2024
ಕೊಲೆ ಪ್ರಕರಣ: ನಟ ದರ್ಶನ್ ಗ್ಯಾಂಗ್‌ನ ಮೂವರು ಜೈಲಿನಿಂದ ಬಿಡುಗಡೆ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ನಟ ದರ್ಶನ್ ಗ್ಯಾಂಗ್ ಪೈಕಿ, ಕಾರ್ತಿಕ್, ಕೇಶವ ಮೂರ್ತಿ, ನಿಖಿಲ್ ನಾಯಕ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಆರೋಪಿ ನಂ.15 ಕಾರ್ತಿಕ್, ಮೂರ್ತಿ, ಆರೋಪಿ ನಂ.17 ನಿಖಿಲ್ ನಾಯಕ್‌ಗೆ ಕಾರ್ತಿಕ್ ಮತ್ತು ನಿಖಿಲ್ ನಾಯಕ್ ಗೆ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಆರೋಪಿ ನಂ.16 ಕೇಶವಮೂರ್ತಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ರು. ಈ ಆರೋಪಿಗಳು ತುಮಕೂರು ಜಿಲ್ಲಾ ಕಾರಾಗೃಹದಿಂದ ಬಿಡುಗಡೆ ಬುಧವಾರ ಬಿಡುಗಡೆಯಾಗಿದ್ದಾರೆ.
ಬೆಂಗಳೂರಿನ ನೃಪತುಂಗಾ ರಸ್ತೆಯಲ್ಲಿ ‘ಸ್ಮಾರ್ಟ್ ಬಸ್ ನಿಲ್ದಾಣ’ ಬಿಬಿಎಂಪಿಗೆ ಹಸ್ತಾಂತರಿಸಿದ ಶಿಲ್ಪಾ ಫೌಂಡೇಶನ್
ಬೆಂಗಳೂರು : ರಾಜಧಾನಿಯ ಕೆ.ಆರ್ ವೃತ್ತದ ನೃಪತುಂಗಾ ರಸ್ತೆಯಲ್ಲಿ ಶಿಲ್ಪಾ ಫೌಂಡೇಶನ್ ಸಂಸ್ಥೆಯು ಬಹುರಾಷ್ಟ್ರೀಯ ಕಂಪೆನಿಯಾದ ಸೇಪಿಯನ್ಸ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಇದರ ಸಿ.ಎಸ್.ಆರ್ ಅಡಿಯಲ್ಲಿ ನಿರ್ಮಿಸಿರುವ ಅತ್ಯಾಧುನಿಕ ಹಾಗೂ ಸುಸಜ್ಜಿತವಾದ ಸ್ಮಾರ್ಟ್ ಬಸ್ ನಿಲ್ದಾಣವನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಉದ್ಘಾಟಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಹಸ್ತಾಂತರಿಸಿದರು. ಈ ಸ್ಮಾರ್ಟ್ ನಿಲ್ದಾಣವು ಹಲವು ವೈಶಿಷ್ಟತೆಗಳಿಂದ ಕೂಡಿದ್ದು ಇದು ಸಾರ್ವಜನಿಕರಿಗೆ ಬಹಳ ಅನುಕೂಲವಾಗಲಿದೆ. ಇದರಲ್ಲಿರುವ ಸೌಲಭ್ಯಗಳನ್ನು ಸಾರ್ವಜನಿಕರು ಉತ್ತಮ ರೀತಿಯಲ್ಲಿ ಬಳಕೆ ಮಾಡಿದಲ್ಲಿ ಯೋಜನೆಯು ಯಶಸ್ವಿಯಾಗಲಿದೆ. ಸ್ಮಾರ್ಟ್ ನಿಲ್ದಾಣವು ಇತರ ಬಸ್ ನಿಲ್ದಾಣಗಳಿಗಿಂತ ವಿಭಿನ್ನವಾಗಿದ್ದು ಸಾರ್ವಜನಿಕರ ಪ್ರತ್ಯೇಕವಾಗಿ ಮಹಿಳೆಯ ಸುರಕ್ಷತೆಗೆ ಹೆಚ್ಚು ಒತ್ತು ನೀಡಲಿದೆ. ಇಲ್ಲಿರುವ ಪ್ಯಾನಿಕ್ ಬಟನ್ ಹಾಗೂ ಸಿಸಿ ಕ್ಯಾಮರಾಗಳು ಅಪರಾಧ ಚಟುವಟಿಕೆಗಳನ್ನು ತಡೆಗಟ್ಟಲು ಸಹಕಾರಿಯಾಗಲಿದೆ. ಇಂತಹ ಯೋಜನೆಗಳು ಇನ್ನೂ ವಿಸ್ತರಣೆಯಾಗಲಿ ಎಂದು ಸಚಿವ ರಾಮಲಿಂಗ ರೆಡ್ಡಿ ಅಭಿಪ್ರಾಯಪಟ್ಟರು. ಶಿಲ್ಪಾ ಫೌಂಡೇಶನ್…
ದೆಹಲಿ ಪೊಲೀಸರ ಭರ್ಜರಿ ಬೇಟೆ; 2,000 ಕೋಟಿ ರೂ ಮೌಲ್ಯದ ಕೊಕೇನ್ ವಶ
ನವದೆಹಲಿ: ರಾಜಧಾನಿ ದೆಹಲಿ ಪೊಲೀಸರು ಡ್ರಗ್ಸ್ ಮಾಫಿಯಾ ಭರ್ಜರಿ ಬೇಟೆಯಾಡಿದ್ದಾರೆ. ಅತಿ ದೊಡ್ಡ ಮಾದಕ ದ್ರವ್ಯ ದಂಧೆ ಭೇದಿಸಿರುವ ಪೊಲೀಸರು, ಸುಮಾರು 2,000 ಕೋಟಿ ರೂಪಾಯಿ ಮೌಲ್ಯದ 560 ಕೆಜಿ ಕೊಕೇನ್ ವಶಪಡಿಸಿಕೊಂಡಿದ್ದಾರೆ. ದೆಹಲಿ ಪೊಲೀಸ್ ವಿಶೇಷ ಘಟಕದ ತಂಡ ದಕ್ಷಿಣ ದೆಹಲಿಯ ಮೆಹ್ರೌಲಿಯಲ್ಲಿ ಈ ಕಾರ್ಯಾಚರಣೆ ನಡೆಸಿದ್ದು ನಾಲ್ವರನ್ನು ಬಂಧಿಸಿದ್ದು, 565 ಕಿಲೋಗ್ರಾಂ ಕೊಕೋನ್ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಮಾಫಿಯಾ ಜಾಲವು ದೆಹಲಿ ಸಹಿತ ವಿವಿಧ ರಾಜ್ಯಗಳಲ್ಲಿ ಕೊಕೇನ್ ಮಾರಾಟ ಮಾಡಲು ಯೋಜಿಸಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಾವು ಭಾವನೆ ಮೇಲೆ ರಾಜಕಾಕರಣ ಮಾಡುತ್ತಿಲ್ಲ. ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತಿದ್ದೇವೆ; ಡಿಕೆಶಿ
ಬೆಂಗಳೂರು: ಗಾಂಧಿ ಜಯಂತಿ ದಿನದಂದು ಕಾಂಗ್ರೆಸ್ ಆಯೋಜಿಸಿದ ಕಾರ್ಯಕ್ರಮ ಗಮನಸೆಳೆಯಿತು. ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಹಾಗೂ ಕಾಂಗ್ರೆಸ್ ನಾಯಕರು, ಸಚಿವರು ಈ ಕಾರ್ಯಕ್ರಮದಲ್ಲಿ ಭಾಗವಹಸಿದ್ದರು. ಭಾರತ ಜೋಡೋ ಭವನದಲ್ಲಿ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, “ನಾವಿಂದು ಬಹಳ ಪುಣ್ಯದ ವರ್ಷದಲ್ಲಿದ್ದೇವೆ. ಮಹಾತ್ಮ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದ ಬೆಳಗಾವಿ ಅಧಿವೇಶನಕ್ಕೆ ಈಗ ಶತಮಾನ ತುಂಬಿದೆ. ಈ ಸಂದರ್ಭವನ್ನು ನಾವು ಬಳಸಿಕೊಂಡು ಗಾಂಧಿಜಿ ಅವರು ಹಾಕಿಕೊಟ್ಟ ದಾರಿ ಹಾಗೂ ಕಾಂಗ್ರೆಸ್ ಪಕ್ಷದ ಕೊಡುಗೆಯನ್ನು ಮುಂದಿನ ಪೀಳಿಗೆಗೆ ತಿಳಿಸಬೇಕು ಎಂದು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಅವಕಾಶ ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಇದೆ. ಈ ದೇಶಕ್ಕೆ ಕಾಂಗ್ರೆಸ್ ಹಾಕಿಕೊಟ್ಟಿರುವ ಬುನಾದಿ, ಗಾಂಧಿ ಅವರ ತತ್ವ, ಆದರ್ಶವೇ ನಮ್ಮ ಆಸ್ತಿ. ಈ ಸಂದರ್ಭದಲ್ಲಿ ಕರ್ನಾಟಕದವೇ…
ಕೆಪಿಸಿಸಿಯಿಂದ ಜ್ಯೋತಿ ಸಹಿತ ಗಾಂಧಿ ನಡಿಗೆ ಕಾರ್ಯಕ್ರಮ
ಬೆಂಗಳೂರು: ಗಾಂಧಿ ಜಯಂತಿ ದಿನದಂದು ಕೆಪಿಸಿಸಿ ವತಿಯಿಂದ ಬೆಂಗಳೂರಿನ ಮಹಾತ್ಮ ಗಾಂಧಿ ರಸ್ತೆಯ ಗಾಂಧಿ ಪ್ರತಿಮೆಯಿಂದ ಕ್ವೀನ್ಸ್ ರಸ್ತೆ ಕೆಪಿಸಿಸಿ ಕಚೇರಿವರೆಗೂ ಗಾಂಧಿ ಜ್ಯೋತಿ ಸಮೇತ ಗಾಂಧಿ ನಡಿಗೆ ಕಾರ್ಯಕ್ರಮ ಗಮನಸೆಳೆಯಿತು. ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಭಾಗವಹಿಸಿದ್ದರು. ಶಾಸಕ ಹ್ಯಾರಿಸ್, ಎಂಎಲ್ಸಿ ಬಸವನಗೌಡ ಬಾದರ್ಲಿ, ಯುವ ಕಾಂಗ್ರೆಸ್ ರಾಷ್ಟ್ರೀಯ ಮುಖಂಡ ಬಿ ವಿ ಶ್ರೀನಿವಾಸ್ ಮತ್ತಿತರರು ಭಾಗವಹಿಸಿದ್ದರು.
ದ.ಕ-ಉಡುಪಿ ವಿಧಾನಪರಿಷತ್ ಅಖಾಡ; ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಬೊಟ್ಯಾಡಿ
ಮಂಗಳೂರು: ಕೋಟ ಶ್ರೀನಿವಾಸ ಪೂಜಾರಿ ಪ್ರತಿನಿಧಿಸುತ್ತಿದ್ದ ಕರಾವಳಿಯ ವಿಧಾನ ಪರಿಷತ್ ಸ್ಥಾನಕ್ಜೆ ಬಿಜೆಪಿ ಅಭ್ಯರ್ಥಿಯಗಿ ಕಿಶೋರ್ ಕುಮಾರ್ ಬೊಟ್ಯಾಡಿ ಅವರನ್ನು ಪಕ್ಷ ಆಯ್ಕೆ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿಯವರು ಸಂಸದರಾಗಿ ಆಯ್ಕೆಯಾದ ಕಾರಣ ತೆರವಾಗಿದ್ದ ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಗೆ ಭಾರತೀಯ ಜನತಾ ಪಕ್ಷವು ಮಂಗಳವಾರ ತನ್ನ ಅಭ್ಯರ್ಥಿಯನ್ನು ಅಂತಿಮಗೊಳಿಸಿದೆ. ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ದಕ್ಷಿಣ ಕನ್ನಡ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಸಹಿತ ಅನೇಕ ಮುಖಂಡರು ಲಾಭಿ ನಡೆಸುತ್ತಿದ್ದರು. ಇದೀಗ ಬಿಜೆಪಿ ನಾಯಕ ಕಿಶೋರ್ ಕುಮಾರ್ ಬೊಟ್ಯಾಡಿ ಅವರಿಗೆ ಹೈಕಮಾಂಡ್ ಟಿಕೆಟ್ ಘೋಷಣೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿರುವ ಕಿಶೋರ್ ಕುಮಾರ್ ಬೊಟ್ಯಾಡಿ ಅವರನ್ನು ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಯ ಅಭ್ಯರ್ಥಿಯಾಗಿ ಬಿಜೆಪಿ…
ಆಸ್ಮಾಕಂ ಸಂಸ್ಕೃತಂ; ಹನೂರಿನಲ್ಲಿ ಹೀಗೊಂದು ವಿಶೇಷ ಕಾರ್ಯಕ್ರಮ
ಚಾಮರಾಜನಗರ: ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಹಾಗೂ ಶ್ರೀ ಮಹದೇಶ್ವರ ಸಂಸ್ಕೃತ ಪಾಠಶಾಲೆ ಹೊಸಪಾಳ್ಯ ಇವರ ಸಂಯುಕ್ತ ಆಶ್ರಯದಲ್ಲಿ ಆಸ್ಮಕಂ ಸಂಸ್ಕೃತಂ ಕಾರ್ಯಕ್ರಮವನ್ನು ಬೈಲೂರಿನ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಯಿತು. ಬೈಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಮಹದೇವಸ್ವಾಮಿ ಮಾತನಾಡಿ ಸಂಸ್ಕೃತ ಭಾಷೆಯನ್ನು ಅಧ್ಯಯನ ಮಾಡುವುದರಿಂದ ಜ್ಞಾನ ಶಕ್ತಿ ಹೆಚ್ಚಿಸುತ್ತದೆ ಕಲಿಕೆಯ ದೃಷ್ಠಿಯಿಂದ ಅನುಕೂಲವಾಗುವುದು , ಸಂಸ್ಕಾರ ಸಂಸ್ಕೃತಿಗಳ ಬಗ್ಗೆ ಹೆಚ್ಚು ಅರಿವು ಮೂಡುತ್ತದೆ ಎಂದರು. ಸಂಸ್ಕೃತ ಪಾಠಶಾಲೆಯ ಮುಖ್ಯ ಶಿಕ್ಷಕರಾದ ರವಿಕುಮಾರ್ ಮಾತನಾಡಿ ಯಾವುದೇ ಭಾಷೆಯಾದರೂ ಸಂವಹನದ ಮೂಲಕ ಬಳಕೆ ಮಾಡಿದಾಗ ಮಾತ್ರ ಆ ಭಾಷೆ ಬೆಳೆಯುತ್ತದೆ , ಸುಮಾರು 3000 ವರ್ಷಗಳ ಇತಿಹಾಸ ವನ್ನು ಸಂಸ್ಕೃತ ಭಾಷೆ ಹೊಂದಿದೆ ಸಂಸ್ಕೃತ ಭಾಷೆಯಲ್ಲಿ ವೇದ ಉಪನಿಷತ್ತುಗಳು, ಇತಿಹಾಸ ಪುರಾಣಗಳು ,ಅನೇಕ ಶಾಸ್ತ್ರಗಳು ರಚನೆಯಾಗಿದೆ. ಇಂದಿನ ವಿದ್ಯಾರ್ಥಿಗಳು ಸಂಸ್ಕೃತವನ್ನು ವೈಜ್ಞಾನಿಕ ದೃಷ್ಟಿಕೋನವಿಟ್ಟು ಅಧ್ಯಯನ…
HDK ಬೆಂಬಲಕ್ಕೆ ನಿಂತ BJP; ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಕ್ರಮಕ್ಕೆ ಆಗ್ರಹ
ಬೆಂಗಳೂರು: ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಹಾಗೂ ಸಿಬಿಐ ತನಿಖೆಗೆ ವಹಿಸುವವರೆಗೂ ಬಿಜೆಪಿಯಿಂದ ಹೋರಾಟ ನಡೆಯಲಿದೆ. ಈ ಹೋರಾಟ ನಿಲ್ಲುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಹೋರಾಟದ ಫಲವಾಗಿ ಮುಡಾ ಹಗರಣ ಈ ಹಂತಕ್ಕೆ ಬಂದಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಹಾಗೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂಬುದು ನಮ್ಮ ಆಗ್ರಹ. ಈ ಗುರಿ ಈಡೇರುವವರೆಗೂ ಹೋರಾಟ ಮಾಡುತ್ತೇವೆ. ಈ ಹೋರಾಟ ನಿಲ್ಲಲ್ಲ. ಸಚಿವ ಬಿ.ನಾಗೇಂದ್ರ ರಾಜೀನಾಮೆ ಕೊಡಲ್ಲ ಎಂದಿದ್ದರು. ಬಳಿಕ ಕಾನೂನಿನ ಕುಣಿಕೆಯಲ್ಲಿ ಸಿಲುಕಿಕೊಂಡು ರಾಜೀನಾಮೆ ನೀಡಿದರು. ಇದೇ ರೀತಿ ಸಿದ್ದರಾಮಯ್ಯ ಕೂಡ ರಾಜೀನಾಮೆ ನೀಡಬೇಕಾಗುತ್ತದೆ ಎಂದರು. ಚುನಾವಣಾ ಬಾಂಡ್ ಬಗ್ಗೆ ಕಾಂಗ್ರೆಸ್ ದೊಡ್ಡದಾಗಿ ಮಾತಾಡುತ್ತಿದೆ. ಕಾಂಗ್ರೆಸ್ ಪಕ್ಷಕ್ಕೆ *1,500 ಕೋಟಿ ರೂ.ಗೂ ಅಧಿಕ* ಹಣ ದೇಣಿಗೆ ಬಂದಿದೆ. ತೃಣಮೂಲ ಕಾಂಗ್ರೆಸ್‌ಗೆ…
ಸಿಎಂ ಪತ್ನಿಯ ಮುಡಾ ಸೈಟ್ ವಾಪಸ್; ಹೋರಾಟಕ್ಕೆ ಸಂದ ಜಯ ಎಂದ ಬಿಜೆಪಿ
ಬೆಂಗಳೂರು: ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಪತ್ನಿ ಹೆಸರಿನಲ್ಲಿ ಪಡೆದಿದ್ದ 14 ಸೈಟುಗಳನ್ನ ಹಿಂತಿರುಗಿಸುವ ನಿರ್ಧಾರ ಮಾಡಿದ್ದಾರೆ. ನಾನು ತಪ್ಪೇ ಮಾಡಿಲ್ಲ ಎನ್ನುತ್ತಿದ್ದವರು ಈಗ ತಮ್ಮ ತಪ್ಪನ್ನ ಒಪ್ಪಿಕೊಂಡು ಸತ್ಯಕ್ಕೆ ಶರಣಾಗಿರುವುದು ನಮ್ಮ ಹೋರಾಟದ ಹಾದಿಯಲ್ಲಿ ಸಿಕ್ಕಿರುವ ಮತ್ತೊಂದು ಜಯ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯಿಸಿದ್ದಾರೆ. ಕದ್ದ ಮಾಲನ್ನು ಹಿಂತಿರುಗಿಸಿದ ಕೂಡಲೇ ಕಳ್ಳ ನಿರಪರಾಧಿ ಆಗಿಬಿಡುತ್ತಾನೆಯೇ? ಕದ್ದ ಮಾಲನ್ನು ವಾಪಸ್ಸು ಕೊಟ್ಟ ತಕ್ಷಣ ಕಳ್ಳತನ ಮಾಫಿ ಆಗಿಬಿಡುತ್ತದೆಯೇ? ಎಂದವರು ಪ್ರಶ್ನಿಸಿದ್ದಾರೆ. ‘ಕೆಟ್ಟ ಮೇಲೆ ಬುದ್ಧಿ ಬಂತು’ ಎಂಬಂತೆ ಈಗಲಾದರೂ ಸಿದ್ದರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ ಎನ್ನುವುದು ಸಮಾಧಾನಕರ ವಿಷಯ. ಆದರೆ ‘ಅಡಿಕೆಗೆ ಹೋದ ಮಾನ, ಆನೆ ಕೊಟ್ಟರೂ ಬರುವುದಿಲ್ಲ’ ಸಿಎಂ ಸಿದ್ದರಾಮಯ್ಯನವರೇ. ತಾವು ತನಿಖೆ ಎದುರಿಸಲೇ ಬೇಕು. ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಗಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಲೇ…
