ಸೂಪರ್‌ಸ್ಟಾರ್ ರಜನಿಕಾಂತ್ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಚೆನ್ನೈ: ದಕ್ಷಿಣ ಭಾರತದ ಸೂಪರ್ ಸ್ಟಾರ್ ನಟ ರಜಿನಿಕಾಂತ್ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೋಮವಾರ ಅವರನ್ಬು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಹೊಟ್ಟೆ ನೋವು ಕಾಣಿಸಿಕೊಂಡು ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

‘ಸರ್ಕಾರ ಪತನಗೊಳಿಸಿ ಸಿಎಂವಾಗಲು ಕೋಟಿ ರೂ’; ಬಿಜೆಪಿ ನಾಯಕನ ವಿರುದ್ದ ಕಾಂಗ್ರೆಸ್ ದೂರು

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸಲು ಯತ್ನ ನಡೆದಿದೆ ಎಂದೂ, ಕೆಲವರು ಮುಖ್ಯಮಂತ್ರಿಯಾಗಲು ಸಾವಿರ ಕೋಟಿ ಹಣ ಇಟ್ಟುಕೊಂಡು ಕಾಯುತ್ತಿದ್ದಾರೆಂದು ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಾಂಗ್ರೆಸ್ ದೂರು ನೀಡಿದೆ. ಬೆಂಗಳೂರಿನ ಹೈಗ್ರೌಂಡ್ ಪೊಲೀಸರಿಗೆ ಕಾಂಗ್ರೆಸ್ ಹಿರಿಯವನಾಯಕ ಉತ್ತಪ್ಪ ನೇತೃತ್ವದ ನಿಯೋಗ ಸೋಮವಾರ ದೂರು ನೀಡಿದೆ. ಸೆಪ್ಟೆಂಬರ್ 29ರಂದು ದಾವಣಗೆರೆಯಲ್ಲಿ ಯತ್ನಾಳ್‌ ಅವರು ಈ ಹೇಳಿಕೆ ನೀಡಿದ್ದರು. ಅವರ ವಿರುದ್ದ ಎಫ್‌ಐಆರ್ ದಾಖಲಿಸಬೇಕು ಹಾಗೂ 1,000 ಕೋಟಿ ಹಣದ ಮೂಲ ಯಾವುದು ಎಂಬ ಬಗ್ಗೆ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ.

ಗಾಂಧೀಜಿ ನೇತೃತ್ವಕ್ಕೆ ನೂರು ವರ್ಷ; ಕಾಂಗ್ರೆಸ್ ಪಕ್ಷದಿಂದ ʼಗಾಂಧಿ ನಡಿಗೆʼ ಕಾರ್ಯಕ್ರಮ

ಬೆಂಗಳೂರು: “ಮಹಾತ್ಮ ಗಾಂಧಿ ಅವರು ಬೆಳಗಾವಿಯಲ್ಲಿ ಕಾಂಗ್ರೆಸ್ ಮಹಾಧಿವೇಶನದ ಅಧ್ಯಕ್ಷತೆ ಜತೆಗೆ ದೇಶದ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿಕೊಂಡು 100 ವರ್ಷಗಳಾಗಿವೆ. ಈ ನೆನಪಿಗೆ ರಾಜ್ಯಾದ್ಯಂತ ʼಗಾಂಧಿ ನಡಿಗೆʼ, ʼಸ್ವಚ್ಚತಾ ಪ್ರತಿಜ್ಞಾವಿಧಿʼ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜತೆಗೆ ಇಡೀ ವರ್ಷ ನಾನಾ ಕಾರ್ಯಕ್ರಮಗಳನ್ನು ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಟಿಯಲ್ಲಿ ಸೋಮವಾರ ಮಾತನಾಡಿದ ಅವರು, “ಕಾಂಗ್ರೆಸ್ ಪಕ್ಷದಿಂದ ರಾಜ್ಯದ ಉದ್ದಗಲಕ್ಕೂ ಅಕ್ಟೋಬರ್ 2 ರ ಬೆಳಿಗ್ಗೆ 11 ಗಂಟೆಗೆ ಎಂ.ಜಿ ರಸ್ತೆಯ ಗಾಂಧಿ ಪ್ರತಿಮೆಯಿಂದ, ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದ ತನಕ ʼಗಾಂಧಿ ಜ್ಯೋತಿ ಪಾದಯಾತ್ರೆʼ ನಡೆಸಲಾಗುವುದು” ಎಂದರು. “ಪಾದಯಾತ್ರೆ ಕಾರ್ಯಕ್ರಮದಲ್ಲಿ ಬೆಂಗಳೂರಿನ ಶಾಸಕರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ವಿವಿಧ ಸಂಸ್ಥೆಗಳ ಸದಸ್ಯರು ಭಾಗವಹಿಸಲಿದ್ದಾರೆ. ಅಲ್ಲದೇ ರಾಜ್ಯದ ಎಲ್ಲಾ ಜಿಲ್ಲಾ, ತಾಲ್ಲೂಕು ಮತ್ತು ಬ್ಲಾಕ್ ಮಟ್ಟದಲ್ಲಿ ”ಗಾಂಧಿ ನಡಿಗೆ” ಕಾರ್ಯಕ್ರಮ…

ಮಂಗಳೂರು: ದ್ವೀಪವನ್ನೇ ನುಂಗುತ್ತಿರುವ ಮರಳು ಮಾಫಿಯಾ! ಅಕ್ರಮ ದಂಧೆ ಬಗ್ಗೆ ಅಧಿಕಾರಿಗಳ ಮೌನವೇಕೆ? CSಗೆ ಪರಿಸರ ಹೋರಾಟಗಾರ ಆಲ್ವಿನ್ ದೂರು

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ತಾಂಡವವಾಡುತ್ತಿರುವ ಮರಳು ಮಾಫಿಯಾ ವಿರುದ್ಧ ರಣಕಹಳೆ ಮೊಳಗಿದೆ. ಮಂಗಳೂರು ಹೊರವಲಯದ ‘ಉಳಿಯ’ ದ್ವೀಪದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ನಿಲ್ಲಿಸಲು ಸ್ಥಳೀಯರು ನಡೆಸುತ್ತಿರುವ ಹೋರಾಟಕ್ಕೆ ವಿವಿಧ ಸಂಘಟನೆಗಳು ಬೆಂಬಲ ನೀಡುತ್ತಿರುವಂತೆಯೇ, ಮರಳು ಮಾಫಿಯಾ ಜೊತೆ ಜಿಲ್ಲೆಯ ಅಧಿಕಾರಿಗಳು ಶಾಮೀಲಾಗಿರುವ ಬಗ್ಗೆ ರಾಜ್ಯ ಸರ್ಕಾರಕ್ಕೆ ದೂರು ಸಲ್ಲಿಕೆಯಾಗಿದೆ. ಹಿರಿಯ ಪತ್ರಕರ್ತರೂ ಆದ ಪರಿಸರ ಹೋರಾಟಗಾರ ಆಲ್ವಿನ್ ಮೆಂಡೋನ್ಸಾ ಅವರು ಈ ದೂರನ್ನು ಸಲ್ಲಿಸಿದ್ದು, ಅಧಿಕಾರಿಗಳ ವಿರುದ್ಧವೇ ಆದ್ಯ ಕ್ರಮವಾಗಬೇಕಿದೆ ಎಂದು ಗಮನಸೆಳೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯು ನದಿಯನ್ನು ಆವರಿಸಿಕೊಂಡಿರುವ ಪ್ರದೇಶವಾಗಿದೆ. ಕುಮಾರಧಾರ, ನೇತ್ರಾವತಿ, ಫಲ್ಗುಣಿ, ನಂದಿನಿ ಸಹಿತ ಹಲವಾರು ನದಿಗಳು ಕರಾವಳಿ ಜನರ ಜೀವನಾಡಿಯಾಗಿದ್ದು, ಇದೀಗ ಸರ್ಕಾರ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಜಲಮೂಲಕ್ಕೆ ಸಂಚಕಾರ ಎದುರಾಗಿದೆ. ಕರ್ನಾಟಕ ಕರಾವಳಿಯ ದೊಡ್ಡ ನದಿಗಳಲ್ಲಿ ಒಂದಾಗಿರುವ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದ್ದು, ಈ ಬಗ್ಗೆ ವ್ಯಾಪಕ…

ಭೂಸ್ವಾಧೀನ ಅಕ್ರಮ ಆರೋಪದ ಪ್ರತಿಧ್ವನಿ; ದೂರು ಪರಿಶೀಲನೆಯಲ್ಲಿರುವಾಗಲೇ ಅಧಿಕಾರಿಯ ಪರ ನಿಂತ ಸಚಿವ; ಭೂಸ್ವಾಧೀನಾಧಿಕಾರಿ ವರ್ಗಾವಣೆ ಬೇಡ ಎಂದು ಸಿಎಂ ಮೇಲೆ ಒತ್ತಡ!

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕುಂದಾಣ ಹೋಬಳಿಯಲ್ಲಿ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಭೂಸ್ವಾದೀನ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿರುವಾಗಲೇ ಬಿಎಂಐಸಿಪಿ ಭೂಸ್ವಾಧೀನಾಧಿಕಾರಿ ವರ್ಗಾವಣೆ ಮಾಡದಂತೆ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಸರ್ಕಾರಕ್ಕೆ ಮಾಡಿರುವ ಶಿಫಾರಸು ಭಾರೀ ಚರ್ಚೆಗೆ ಕಾರಣವಾಗಿದೆ. ಕೆ.ಎ.ಎಸ್.(ಕಿರಿಯ ಶ್ರೇಣಿ) ಅಧಿಕಾರಿಯಾಗಿರುವ ಬಿಎಂಐಸಿಪಿ ಭೂಸ್ವಾಧೀನಾಧಿಕಾರಿ-2, ಬಾಳಪ್ಪ ಹಂದಿಗುಂದ ಅವರನ್ನು ವರ್ಗಾವಣೆ ಮಾಡಬಾರದೆಂದು ಸಚಿವ ಎಂ.ಬಿ.ಪಾಟೀಲ್ ಅವರು ಮುಖ್ಯಮಂತ್ರಿಗೆ ಹಾಗೂ ಡಿಪಿಎಆರ್ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.. ಬಾಳಪ್ಪ ಹಂದಿಗುಂದ ಅವರು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ, ಬೆಂಗಳೂರು ಇಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಇಲಾಖೆಯಲ್ಲಿ ತ್ವರಿತವಾಗಿ ಭೂಸ್ವಾಧೀನ ಪ್ರಕ್ರಿಯೆಗಳು ಪೂರ್ಣಗೊಳಿಸಿ, Foxconn Company ಹಾಗೂ Knowledge Health Innovation and Research (KHIR) ಭೂಮಿಯನ್ನು ಹಸ್ತಾಂತರಿಸಬೇಕಾಗಿರುವುದರಿಂದ, ಸದರಿಯವರ ಸೇವೆಯು ಮಂಡಳಿಗೆ ಅತ್ಯವಶ್ಯವಿರುತ್ತದೆ ಎಂದು ಎಂಬಿ ಪಾಟೀಲ್ ಅವರು ಈ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.‌…

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಮೆರುಗು

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಮೆರುಗು ಸಿಗಲಿದೆ. ಈ ಸಂಬಂಧದ ಕಾಮಗಾರಿ ತ್ವರಿತವಾಗಿ ಸಾಗಿದೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಅವರು, ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್‌ನ ಹೊಸ ಕಟ್ಟಡದ ಕಾಮಗಾರಿ ವೀಕ್ಷಣೆ ನಡೆಸಿ ವಿಮಾನ ನಿಲ್ದಾಣದ ಅಧಿಕಾರಿಗಳೊಂದಿಗೆ ಹೊಸ ಕಟ್ಟಡದ ಕಾಮಗಾರಿಯ ಪರಿಶೀಲನಾ ಸಭ ನಡೆಸಿದರು. ಈ ಸಂದರ್ಭದಲ್ಲಿ ಹುಬ್ಬಳ್ಳಿ ಏರ್ಪೋರ್ಟ್ ನ ಅಪ್ರಾನ್ ಏರಿಯಾ ( ವಿಮಾನ ನಿಲ್ಲಿಸುವ ಪ್ರದೇಶ) ವಿಸ್ತರಣೆ ಕುರಿತು ಚರ್ಚಿಸಲಾಯಿತು. ಈಗಾಗಲೇ ತಾತ್ವಿಕವಾಗಿ ಈ ಕಾಮಗಾರಿಕೆಗೆ ಒಪ್ಪಿಗೆ ನೀಡಿದ್ದು ಆದಷ್ಟು ಬೇಗನೆ ಇದಕ್ಕೆ ಟೆಂಡರ್ ಕರೆಯಲಾಗುವುದು ಎಂದು ಪ್ರಲ್ಹಾದ್ ಜೋಷಿ ತಿಳಿಸಿದರು. ಸದ್ಯಕ್ಕೆ ನಾಲ್ಕು ವಿಮಾನ ನಿಲ್ಲುವ ಸ್ಥಳವನ್ನು ಸುಮಾರು ಹತ್ತು ಏರ್ ಬಸ್, ಬೋಯಿಂಗ್ ನಿಲ್ಲಿಸುವಷ್ಟು ಪ್ರದೇಶವನ್ನು ವಿಸ್ತರಿಸಲಾಗುವುದು ಎಂದು ಅವರು ತಿಳಿಸಿದರು. ಮಾರ್ಚ್ 10 ರಂದು ಪ್ರಧಾನಿ ನರೇಂದ್ರ ಮೋದಿ ಅವರು 273…

ಹರಿಯಾಣ: ಬಿಜೆಪಿಯ ಹ್ಯಾಟ್ರಿಕ್ ಗೆಲುವಿನ ಕನಸಿಗೆ ಬಂಡಾಯವೇ ಸವಾಲು

ಚಂಡೀಗಢ: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಹ್ಯಾಟ್ರಿಕ್ ಗೆಲುವಿನ ಕನಸಿನಲ್ಲಿರುವ ಬಿಜೆಪಿಗೆ ಇದೀಗ ಬಂಡಾಯ ಸವಾಲಾಗಿದೆ. ಬಂಡಾಯ ಮುಖಂಡರ ವಿರುದ್ದ ನಿಷ್ಠೂರ ಕ್ರಮಕ್ಕೆ ನಿರ್ಧರಿಸಿರುವ ಬಿಜೆಪಿ ಹರಿಯಾಣದ ಮಾಜಿ ಸಚಿವ ರಂಜಿತ್ ಸಿಂಗ್ ಚೌಟಾಲಾ ಮತ್ತು ಇತರ ಏಳು ನಾಯಕರನ್ನು ಪಕ್ಷದಿಂದ ಉಚ್ಛಾಟಿಸಿದೆ. 90 ಸದಸ್ಯ ಬಲದ ಹರಿಯಾಣ ವಿಧಾನಸಭೆಗೆ ಅಕ್ಟೋಬರ್ 5ರಂದು ಮತದಾನ ನಡೆಯಲಿದೆ. ಅಕ್ಟೋಬರ್ 8ರಂದು ಮತ ಎಣಿಕೆ ನಡೆಯಲಿದೆ. ಈ ಬಾರಿಯೂ ಗೆಲುವು ಸಾಧಿಸಲೇಬೇಕೆಂದು ಕಾರ್ಯತಂತ್ರ ರೂಪಿಸಿರುವ ಬಿಜೆಪಿಗೆ ಟಿಕೆಟ್ ವಂಚಿತರ ಸವಾಲು ಎದುರಾಗಿದೆ. ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಲು ನಿರ್ಧರಿಸಿದ ನಂತರ ಹರಿಯಾಣದ ಮಾಜಿ ಸಚಿವ ರಂಜಿತ್ ಸಿಂಗ್ ಚೌಟಾಲಾ ಸಹಿತ ಹಲವು ಮುಖಂಡರು ಸಂಧಾನಕ್ಕೆ ಮಣಿಯಲಿಲ್ಲ. ಈ ಹಿನ್ನೆಲೆಯಲ್ಲಿ ಏಳು ನಾಯಕರನ್ನು ಆರು ವರ್ಷಗಳ ಕಾಲ ಬಿಜೆಪಿಯಿಂದ ಉಚ್ಛಾಟಿಸಲಾಗಿದೆ. ಹರಿಯಾಣ ಬಿಜೆಪಿಯ ಮುಖ್ಯಸ್ಥ ಮೋಹನ್ ಲಾಲ್ ಅವರ ಆದೇಶದಂತೆ ಈ ಕ್ರಮ ಕೈಗೊಳ್ಳಲಾಗಿದೆ…

NWKRTC: ಸಾವಳಗಿ, ರಬಕವಿ-ಬನಹಟ್ಟಿ ಬಸ್ ನಿಲ್ದಾಣಗಳು ಲೋಕಾರ್ಪಣೆ

ಬಾಗಲಕೋಟೆ: ವಾಯುವ್ಯ ರಸ್ತೆ ಸಾರಿಗೆ ನಿಗಮ (NWKRTC) ವ್ಯಾಪ್ತಿಯ ಬಾಗಲಕೋಟೆ ಜಿಲ್ಲೆ ಸಾವಳಗಿ, ರಬಕವಿ-ಬನಹಟ್ಟಿಯ ಸುಸಜ್ಜಿತ ಬಸ್ ನಿಲ್ದಾಣಗಳು ಲೋಕಾರ್ಪಣೆಯಾಗಿದೆ. ಸಾವಳಗಿ, ರಬಕವಿ-ಬನಹಟ್ಟಿ ಬಸ್ ನಿಲ್ದಾಣಗಳನ್ನು  ಸಾರಿಗೆ ಹಾಗೂ ‌ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ಅವರು ಭಾನುವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ರಾಮಲಿಂಗ ರೆಡ್ಡಿ, ವಾಕರಸಾ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳ ಕೊರತೆ ಇದ್ದು, 2000 ಚಾಲನಾ ಸಿಬ್ಬಂದಿಗಳ ನೇಮಕಕ್ಕೆ ಅನುಮೋದನೆಯನ್ನು ‌ನೀಡಿದ್ದು, ಈಗಾಗಲೇ 1000 ಜನರ ನೇಮಕಾತಿ ‌ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿಸಿದರು. ನಾನು ಈ ಹಿಂದೆ ಸಾರಿಗೆ ಮಂತ್ರಿಯಾಗಿದ್ದ ಸಮಯದಲ್ಲಿ ನವನಗರ, ಜಮಖಂಡಿ, ತೇರದಾಳ, ಬಾದಾಮಿ, ಹುನಗುಂದ, ಬಾಡಗಂಡಿ, ಹಾಗು ಯಡಹಳ್ಳಿ ನೂತನ ಬಸ್ ನಿಲ್ದಾಣಗಳ ನಿರ್ಮಾಣ ಮಾಡಲಾಗಿತ್ತು. ಬಾಗಲಕೋಟೆ ಜಿಲ್ಲೆಯಲ್ಲಿ ಅತೀ ಹೆಚ್ಚಿನ ‌ಬಸ್ ನಿಲ್ದಾಣಗಳನ್ನು ನಿರ್ಮಿಸಿದ್ದೇವೆ ಎಂದ ಅವರು, ಕಳೆದ 5 ವರ್ಷಗಳಿಂದ ‌ಹೊಸ ಬಸ್ಸುಗಳ ಖರೀದಿ ಇರಲಿಲ್ಲ. ಈಗ‌…

ಸಿಎಂ ವಿರುದ್ಧದ ಮುಡಾ, ಬಿಜೆಪಿ ಅವಧಿಯ ಎಲ್ಲಾ ಹಗರಣಗಳ ತನಿಖೆಗಳನ್ನು CBIಗೆ ಒಪ್ಪಿಸಲು ನಿರ್ದೇಶನ ನೀಡಿ; ರಾಜ್ಯಪಾಲರಿಗೆ CRF ದೂರು

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ದದ ಮುಡಾ ಹಗರಣ ಕುರಿತಂತೆ ರಾಜ್ಯಪಾಲರಿಗೆ ಮತ್ತೊಂದು ದೂರು ಸಲ್ಲಿಕೆಯಾಗಿದೆ. ಸಿದ್ದರಾಮಯ್ಯ ಕುಟುಂಬ ವಿರುದ್ದದ ಆರೋಪಗಳು ಗಂಭೀರವಾಗಿದ್ದು ನ್ಯಾಯಾಲಯವೇ ಶಾಕ್ ಆಗಿದೆ ಎಂದು ತೀರ್ಪಿನಲ್ಲಿ ಹೇಳಿದೆ. ಹೀಗಿರುವಾಗ ಲೋಕಾಯುಕ್ತದಿಂದ ಸಮರ್ಪಕ ತನಿಖೆಯನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಹಾಗಾಗಿ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಗೆ ಆದೇಶಿಸಲು ನಿರ್ದೇಶನ ನೀಡಬೇಕೆಂದು ‘ಸಿಟಿಜನ್ ರೈಟ್ಸ್ ಫೌಂಡೇಷನ್ (CRF)’ ರಾಜ್ಯಪಾಲರಿಗೆ ದೂರು ನೀಡಿದೆ. ಮುಡಾ ಅಕ್ರಮ ಮಾತ್ರವಲ್ಲ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಭ್ರಷ್ಟಾಚಾರ ಪ್ರಕರಣಗಳ ಬಗ್ಗೆಯೂ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಗೆ ‘ಸಿಟಿಜನ್ ರೈಟ್ಸ್ ಫೌಂಡೇಷನ್’ ಒತ್ತಾಯಿಸಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ದಲ್ಲಿ ನಿವೇಶನ ಹಂಚಿಕೆ ಅಕ್ರಮ ಮೂಲಕ ಸಾವಿರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು ಈ ಪ್ರಕರಣದ ಬಗ್ಗೆ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಸಲು ಕೋರಿ…

ನಿರ್ಮಲಾ ಸೀತಾರಾಮನ್‌ ಪ್ರಕರಣವೇ ಬೇರೆ ರೀತಿ, ಸಿದ್ದರಾಮಯ್ಯ ಹಗರಣವೂ ಬೇರೊಂದು ರೀತಿ..!

ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಇತರರ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿರುವುದಕ್ಕೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಡಾ ಹಗರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿರುವುದಕ್ಕೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಡಾ ಹಗರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಜನ ಪಕ್ಷಪಾತ ಮಾಡಿದ್ದಾರೆ. ಕೋಟ್ಯಂತರ ರೂಪಾಯಿ ಬೆಲೆಬಾಳುವ ಜಮೀನನ್ನು ಸಿಎಂ ಕಬಳಿಸಿದ್ದಾರೆ. ನಿರ್ಮಲಾ ಸೀತಾರಾಮನ್‌ ಅವರು ತಮ್ಮ ಸ್ವಂತಕ್ಕಾಗಿ ಏನೂ ಮಾಡಿಲ್ಲ. ಆ ಹಣ ಪಕ್ಷಕ್ಕೆ ಬಂದಿದೆ. ಕಾಂಗ್ರೆಸ್‌ ಪಕ್ಷಕ್ಕೂ 1,200 ಕೋಟಿ ರೂ.ಗೂ ಅಧಿಕ ಹಣ ಬಂದಿದೆ. ಆ ಹಣವನ್ನು ಮೊದಲು ವಾಪಸ್‌ ನೀಡಲಿ, ಆ ನಂತರ ಸಚಿವರ…