‘ಶಕ್ತಿಯಿಂದ KSRTC ಆದಾಯ ಹೆಚ್ಚಿದೆ, ಆದ್ರೆ ಆದಾಯವೇ ಬೇರೆ ಲಾಭವೇ ಬೇರೆ’; ಟಿಕೆಟ್ ದರ ಏರಿಕೆ ಕುರಿತ ಟೀಕೆಗೆ ರಾಮಲಿಂಗ ರೆಡ್ಡಿ ಎದಿರೇಟು

ಬೆಂಗಳೂರು: ಸುಳ್ಳು ಹೇಳುವುದು, ಜನರ ದಾರಿ ತಪ್ಪಿಸುವುದು ತಮಗೆ ಮತ್ತು ತಮ್ಮ ಬಿ.ಜೆ‌.ಪಿ ಪಕ್ಷಕ್ಕೆ ಸಿದ್ದಿಸಿರುವ ಕಲೆ. ನಮಗೆ ಅದರ ಅವಶ್ಯಕತೆಯಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಹೇಳಿದ್ದಾರೆ. ಇಂದೇ ಸ್ಥಳ ಮತ್ತು ಸಮಯವನ್ನು ನಿಗದಿ ಮಾಡಿ ನಾನು ಬಹಿರಂಗ ಚರ್ಚೆಗೆ ಸಿದ್ಧನಿದ್ದೇನೆ‌ ಎಂದವರು ಬಿಜೆಪಿ ನಾಯಕರಿಗೆ ಸವಾಲು ಹಾಕಿದ್ದಾರೆ. ಶಕ್ತಿ ಯೋಜನೆಯಿಂದ ಸಾರಿಗೆ ನಿಗಮಗಳಿಗೆ 3,930 ಕೋಟಿ ರೂಪಾಯಿ ದಾಖಲೆ ಆದಾಯ ಬರುತ್ತದೆ ಎಂದು ಬೊಗಳೆ ಬಿಟ್ಟು ತನ್ನ ಬೆನ್ನು ತಾನೇ ತಟ್ಟಿಕೊಂಡಿದ್ದ ಕಾಂಗ್ರೆಸ್ ಸರ್ಕಾರ ಈಗ ಕಳೆದ ತ್ರೈಮಾಸಿಕದಲ್ಲಿ ₹295 ಕೋಟಿ ನಷ್ಟವಾಗಿದೆ ಎಂಬ ನೆಪವೊಡ್ಡಿ ಟಿಕೆಟ್ ದರವನ್ನ ಶೇ.25%ರಷ್ಟು ಹೆಚ್ಚಿಸಲು ಮುಂದಾಗಿದೆ’ ಎಂಬ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರ ಟೀಕೆಗೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ, ಅಂಕಿಅಂಶಗಳೇ ನಮ್ಮ‌ ಅಭಿವೃದ್ಧಿಗೆ ಹಾಗೂ ಸಾಧನೆಗೆ ಮಾನದಂಡ ಎಂಬುದನ್ನು ಹತ್ತು ಹಲವು…

ದೊಡ್ಡಬಳ್ಳಾಪುರ ಬಳಿ ಅಪಘಾತ; ಸಿಮೆಂಟ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸಾವು

ದೊಡ್ಡಬಳ್ಳಾಪುರ: ಗೊಲ್ಲಹಳ್ಳಿ ಬಳಿ ಬೈಕ್ ಹಾಗೂ ಸಿಮೆಂಟ್ ಬಲ್ಕರ್ ಲಾರಿ ನಡುವೆ ಅಪಘಾತ ಸಂಭವಿಸಿ ಓರ್ವ ಸಾವನ್ನಪ್ಪಿದ್ದಾನೆ. ಮಂಗಳವಾರ ಬೆಳಿಗ್ಗೆ ಈ ಅಪಘಾತ ಸಂಭವಿಸಿದ್ದು. ಇಬ್ಬರು ಗಾಯಗೊಂಡಿದ್ದಾರೆ. ಮೃತ ವ್ಯಕ್ತಿಯನ್ನು ಪೆರೆಸಂದ್ರದ ಬಾಬು (35) ಎಂದು ಗುರುತಿಸಲಾಗಿದೆ. ಮುಂಜಾನೆ 5 ಗಂಟೆ ಸುಮಾರಿಗೆ ಗೊಲ್ಲಹಳ್ಳಿ ಬಳಿ ಟೀ ಅಂಗಡಿ ಬಳಿ ನಿಂತಿದ್ದಾಗ ಗೌರಿಬಿದನೂರು ಕಡೆಯಿಂದ ಬಂದ ಸಿಮೆಂಟ್ ಬಲ್ಕರ್ ಲಾರಿ ಬೈಕ್ ಮೇಲೆ ಹರಿದಿದೆ‌. ಈ ವೇಳೆ ಬಾಬು ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ಕ್ಷೇತ್ರಗಳಲ್ಲಿ ಬುಧವಾರ ಮತದಾನ; ಆಯೋಗ ಸನ್ನದ್ಧ

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ಸೋಮವಾರ ತೆರೆಬಿದ್ದಿದೆ. ಬುಧವಾರ ಮೂರು ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ ಮತ್ತು ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ. ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ಉಪ ಚುನಾವಣೆ ಬಹಿರಂಗ ಪ್ರಚಾರ ಸೋಮವಾರ ಸಂಜೆ ಅಂತ್ಯಗೊಂಡಿದ್ದು, ಬುಧವಾರ ಮತದಾನ ನಡೆದಿದ್ದು ಚುನಾವಣಾ ಆಯೋಗ ಸಕಲ ತಯಾರಿ ಮಾಡಿಕೊಂಡಿದೆ. ಶಿಗ್ಗಾವಿಯಲ್ಲಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣಾ ಏರ್ಪಟ್ಟಿದೆ. ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ರಾಜೀನಾಮೆ ನಂತರ ಇದೀಗ ಉಪಚುನಾವಣೆ ಘೋಷಣೆಯಾಗಿದೆ. ಸಂಡೂರಿನಲ್ಲಿ ತುಕಾರಾಮ್ ಸಂಸದರಾಗಿ ಆಯ್ಕೆಯಾದ ಹಿನ್ನೆಲೆ ಅವರು ಪ್ರತಿನಿಧಿಸುತ್ತಿರುವ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿದೆ. ಚನ್ನಪಟ್ಟಣದಲ್ಲಿ ಎನ್‌ಡಿಎ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ, ಕಾಂಗ್ರೆಸ್‌ ಪಕ್ಷದಿಂದ ಸಿ.ಪಿ.ಯೋಗೇಶ್ವರ್ ಸೇರಿದಂತೆ 31 ಮಂದಿ ಕಣದಲ್ಲಿದ್ದಾರೆ. ಶಿಗ್ಗಾಂವಿ ಕ್ಷೇತ್ರದಲ್ಲಿ ಬಿಜೆಪಿ ಹುರಿಯಲಾಗಿ…

ಹೆಚ್ಡಿಕೆ ಬಗ್ಗೆ ಜನಾಂಗೀಯ ನಿಂದನೆ ಆರೋಪ; ಸಚಿನ ಜಮೀರ್ ತಲೆದಂಡಕ್ಕೆ ಜೆಡಿಎಸ್ ಒತ್ತಾಯ

ಬೆಂಗಳೂರು: ಮಾಜಿ ಸಿಎಂ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಮೈಬಣ್ಣದ ಕಾರಣಕ್ಕಾಗಿ ನಿಂದಿಸಿರುವ ಆರೋಪಕ್ಕೆ ಗುರಿಯಾಗಿರುವ ಸಚಿವ ಜಮೀರ್‌ ಅಹ್ಮದ್‌ ರಾಜೀನಾಮೆ ನೀಡಬೇಕೆಂದು ಜೆಡಿಎಸ್ ಆಗ್ರಹಿಸಿದೆ. ಈ ಕುರಿತಂತೆ ಸಾಮಾಜಿಕ ಜಾಲತಾಣ ‘X’ನಲ್ಲಿ ಪೋಸ್ಟ್ ಹಾಕಿರುವ ಜೆಡಿಎಸ್ ಪಕ್ಷವು ಸಚಿವ ಜಮೀರ್‌ ಅಹ್ಮದ್‌ ಹೇಳಿಕೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದೆ. ಹೆಚ್‌.ಡಿ. ಕುಮಾರಸ್ವಾಮಿ ಅವರು ಜಾತಿ, ಪಂಥ ಮತ್ತು ಬಣ್ಣದಿಂದ ಜನನಾಯಕರಾಗಿ ಬೆಳೆದಿಲ್ಲ. ಅವರ ನಾಯಕತ್ವ ಗುಣ, ಸಮಾಜಕ್ಕೆ ಮತ್ತು ಸಮುದಾಯಗಳ ಅಭಿವೃದ್ಧಿಗೆ ಕೊಟ್ಟಿರುವ ಕೊಡುಗೆಗಳು, ಜನಪರ ಯೋಜನೆಗಳು ಮತ್ತು ಉತ್ತಮವಾದ ಆಡಳಿತ ಮತ್ತು ಆರ್ಥಿಕ ಅಭಿವೃದ್ಧಿ ದೃಷ್ಟಿಕೋನದಿಂದಲೇ ಉತ್ತಮ ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದಾರೆ ಎಂದು ಜೆಡಿಎಸ್ ಎದಿರೇಟು ನೀಡಿದೆ. ಸರ್ವಜನಾಂಗದ ಶಾಂತಿಯ ತೋಟವಾಗಿರುವ ಕರ್ನಾಟಕದಲ್ಲಿ ಕಾಂಗ್ರೆಸ್‌ ಮತ್ತು ನೀವು ಕ್ಷುಲ್ಲಕ ರಾಜಕೀಯಕ್ಕಾಗಿ ದ್ವೇಷ ಹರಡಲು, ಒಡೆದು ಹಾಳುವ ನೀತಿಯನ್ನು ಅನುಸರಿಸುತ್ತಿದ್ದೀರಿ. ನೆನಪಿರಲಿ ಇಲ್ಲಿ, ನಿಮ್ಮ ಒಡೆದು ಹಾಳುವ ನೀತಿಗೆ…

ಸಿನಿ ಲೋಕದಲ್ಲಿ ‘ಆರಾಮ್ ಅರವಿಂದ ಸ್ವಾಮಿ’ ಇದೀಗ ಕುತೂಹಲದ ಕೇಂದ್ರಬಿಂದು.

ಸಿನಿ ಲೋಕದಲ್ಲಿ ‘ಆರಾಮ್ ಅರವಿಂದ ಸ್ವಾಮಿ’ ಇದೀಗ ಕುತೂಹಲದ ಕೇಂದ್ರಬಿಂದು. ನಟ ಅನೀಶ್ ಮತ್ತು ಮಿಲನ ಅಭಿನಯದ ‘ಆರಾಮ್ ಅರವಿಂದ ಸ್ವಾಮಿ’ ಚಿತ್ರದ ಟ್ರೈಲರ್ ಸಾಮಾಜಿಕ ಜಾಲತಾಣಗಳಲ್ಲಿ ಸಡ್ಡು ಮಾಡತೊಡಗಿದೆ. ಸಿನಿಮಾದ ಟ್ರೈಲರ್’ಗೆ ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಬಿಡುಗಡೆಯಾಗಿದೆ. ‘ಆರಾಮ್ ಅರವಿಂದ ಸ್ವಾಮಿ’ ಚಿತ್ರವನ್ನು ಅಭಿಶೇಕ್ ಶೆಟ್ಟಿ ನಿರ್ಮಿಸಿದ್ದಾರೆ.

ಚುನಾವಣೆ ನಂತರ ‘ಗೃಹಲಕ್ಷ್ಮಿ’ ಸೇರಿ ಗ್ಯಾರಂಟಿಗಳು ಬಂದ್ ಆಗಲ್ಲ; ಸಿಎಂ ಸ್ಪಷ್ಟನೆ

ಹಾವೇರಿ: ಚುನಾವಣೆ ನಂತರ ‘ಗೃಹಲಕ್ಷ್ಮಿ’ ಸೇರಿ ಗ್ಯಾರಂಟಿಗಳು ಬಂದ್ ಆಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಹಾವೇರಿಯಲ್ಲಿ ಹೇಳಿಕೆ ನೀಡಿರುವ ಸಿದ್ದರಾಮಯ್ಯ, ಚುನಾವಣೆ ಮುಗಿದ ಮೇಲೆ ‘ಗೃಹಲಕ್ಷ್ಮಿ’ ಸೇರಿ ಗ್ಯಾರಂಟಿಗಳನ್ನು ಸರ್ಕಾರ ಬಂದ್ ಮಾಡುತ್ತದೆ ಎಂದು ದೇವೇಗೌಡರು ಪರಮ ಸುಳ್ಳು ಹೇಳುತ್ತಿದ್ದಾರೆ ಎಂದರು. ಸಿದ್ದರಾಮಯ್ಯ ಒಮ್ಮೆ ಮಾತು ಕೊಟ್ಟರೆ ಯಾವುದೇ ಕಾರಣಕ್ಕೂ ಮಾತು ತಪ್ಪಲ್ಲ. ನಮ್ಮ ಸರ್ಕಾರ ಯಾವ ಗ್ಯಾರಂಟಿಗಳನ್ನೂ ನಿಲ್ಲಿಸಲ್ಲ ಎಂದ ಸಿಎಂ, ವಕ್ಫ್ ವಿಚಾರದಲ್ಲೂ ಬಿಜೆಪಿ ಜೊತೆ ಸೇರಿ ಸುಳ್ಳು ಹೇಳುತ್ತಿದ್ದಾರೆ. ಯಾವುದೇ ಕಾರಣಕ್ಕೂ ಒಬ್ಬೇ ಒಬ್ಬ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ ಎಂದೂ ಘೋಷಿಸಿದರು. ಚುನಾವಣೆ ಮುಗಿದ ಮೇಲೆ ‘ಗೃಹಲಕ್ಷ್ಮಿ’ ಸೇರಿ ಗ್ಯಾರಂಟಿಗಳನ್ನು ಸರ್ಕಾರ ಬಂದ್ ಮಾಡುತ್ತದೆ ಎಂದು ದೇವೇಗೌಡರು ಪರಮ ಸುಳ್ಳು ಹೇಳುತ್ತಿದ್ದಾರೆ. ದೇವೇಗೌಡರೇ ಒಂದು ಮಾತು ಹೇಳ್ತೀನಿ, ಸಿದ್ದರಾಮಯ್ಯ ಒಮ್ಮೆ ಮಾತು ಕೊಟ್ಟರೆ ಯಾವುದೇ ಕಾರಣಕ್ಕೂ ಮಾತು ತಪ್ಪಲ್ಲ. ನಮ್ಮ ಸರ್ಕಾರ…

ಶಿಗ್ಗಾವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರೌಡಿ ಶೀಟರ್? ಆಯೋಗಕ್ಕೆ ಮಾಹಿತಿ ನೀಡಲು ಬೊಮ್ಮಾಯಿ ತಯಾರಿ.

ಹಾವೇರಿ: ಶಿಗ್ಗಾವಿ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಯಾಸೀರ್‌ ಅಹ್ಮದ್‌ಖಾನ್‌ ಪಠಾಣ್‌ ವಿರುದ್ಧ ದೂರು ನೀಡಲು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮುಂದಾಗಿದ್ದಾರೆ. ಯಾಸೀರ್‌ ಅಹ್ಮದ್‌ಖಾನ್‌ ಪಠಾಣ್‌ ವಿರುದ್ಧ ರೌಡಿಶೀಟರ್‌ ಓಪನ್‌ ಇದೆ ಎಂದು ಹಾವೇರಿ ಪೊಲೀಸ್‌ ವರಿಷ್ಠಾಧಿಕಾರಿ ಹೇಳಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ವಿರುದ್ಧ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗುವುದು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸುದ್ದಿಗಾರರಿಗೆ ಮಾಹಿತಿ ನೀಡಿರುವ ಬಸವರಾಜ್ ಬೊಮ್ಮಾಯಿ, ಪಠಾಣ್ ತನ್ನ ವಿರುದ್ಧ 17-18 ಪ್ರಕರಣಗಳಿವೆ ಎಂದು ಕಳೆದ ವರ್ಷ ಅಫಿಡವಿಟ್‌ನಲ್ಲಿ ಘೋಷಿಸಿರುವುದನ್ನು ನೆನಪಿಸಿದರು. ಇದೀಗ ಈ ಪ್ರಕರಣಗಳಲ್ಲಿ ಯಾವುದೇ ಸಂಬಂಧವಿಲ್ಲ ಎಂದುಯಾಸೀರ್‌ ಅಹ್ಮದ್‌ಖಾನ್‌ ಪಠಾಣ್‌ ಹೇಳಿದ್ದಾರೆ. ಆದರೆ, ಅವರ ವಿರುದ್ಧ ಇನ್ನೂ ಪ್ರಕರಣಗಳು ಇದೆ ಎಂದು ಪೊಲೀಸ್ ವರಿಷ್ಠಾಧಿಕಾರಿಗಳು ಹೇಳಿದ್ದಾರೆ. ಹಾಗಾಗಿ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ಅವರು ತಿಳಿಸಿದರು.

ಡೆಹ್ರಾಡೂನ್​ನಲ್ಲಿ ಭೀಕರ ಕಾರು ಅಪಘಾತ; ಆರು ಮಂದಿ ಸಾವು

ಡೆಹ್ರಾಡೂನ್: ಉತ್ತರಾಖಂಡದ ಡೆಹ್ರಾಡೂನ್​ನಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ. ಮಂಗಳವಾರ ಬೆಳಗಿನ ಜಾವ ಎರಡು ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಸರಕು ಸಾಗಣೆ ಲಾರಿಯೊಂದು ಒಎನ್​ಜಿಸಿ ಕ್ರಾಸಿಂಗ್​ನಲ್ಲಿ ಡಿಕ್ಕಿ ಹೊಡೆಡಿದ್ದು, ಡಿಕ್ಕಿಯಾದ ರಭಸಕ್ಕೆ ಕಾರು ಮರಕ್ಕೆ ಅಪ್ಪಳಿಸಿ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಹಲವಾರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಅಬಕಾರಿ ಅಕ್ರಮ ಆರೋಪ; ಸಚಿವ ತಿಮ್ಮಾಪುರ ವಜಾಕ್ಕೆ ಪ್ರಲ್ಹಾದ್ ಜೋಶಿ ಆಗ್ರಹ

ಹುಬ್ಬಳ್ಳಿ: ಅಬಕಾರಿ ಅಕ್ರಮದ ಕುರಿತು ಮದ್ಯ ಪೂರೈಕೆದಾರರು, ಸನ್ನದುದಾರರೇ ಸಚಿವ ತಿಮ್ಮಾಪುರ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದಾರೆ. ಅಬಕಾರಿ ಹಗರಣ ಕುರಿತಂತೆ ಪ್ರತಿಕ್ರಿಯಿಸಿರುವ ಅವರು, ಪೂರೈಕೆದಾರರ ಸಮಸ್ಯೆಗಳನ್ನು ಬಗೆಹರಿಸುವುದು ಬಿಟ್ಟು ಮೋದಿ ಅವರ ಬಗ್ಗೆ ಮಾತನಾಡಿದರೆ ಸಿದ್ದರಾಮಯ್ಯ ಅವರು ದೊಡ್ಡವರಾಗುವುದಿಲ್ಲ ಎಂದಿದ್ದಾರೆ. ಅಬಕಾರಿ ಅಕ್ರಮದ ಕುರಿತು ಮದ್ಯ ಪೂರೈಕೆದಾರರು, ಸನ್ನದುದಾರರೇ ಸಚಿವ ತಿಮ್ಮಾಪುರ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಆಗ್ರಹಿಸಿದ್ದರು. ಪೂರೈಕೆದಾರರ ಸಮಸ್ಯೆಗಳನ್ನು ಬಗೆಹರಿಸುವುದು ಬಿಟ್ಟು ಮೋದಿ ಅವರ ಬಗ್ಗೆ ಮಾತನಾಡಿದರೆ ಸಿದ್ದರಾಮಯ್ಯ ಅವರು ದೊಡ್ಡವರಾಗುವುದಿಲ್ಲ. – ಶ್ರೀ @JoshiPralhad , ಕೇಂದ್ರ ಸಚಿವರು pic.twitter.com/uXh6vjrE5N — BJP Karnataka (@BJP4Karnataka) November 11, 2024

ಕನ್ನಡಿಗರ ಸಮಸ್ಯೆಗಳಿಗೆ ಪರಿಹಾರ ಹುಡುಕುವ ಉದ್ದೇಶದಿಂದ ಜೆಡಿಎಸ್ ಪಕ್ಷವು ಬಿಜೆಪಿ ಜೊತೆ ಹೊಂದಾಣಿಕೆ; ಹೆಚ್ಡಿಕೆ

ಬೆಂಗಳೂರು: ಕನ್ನಡಿಗರ ಸಮಸ್ಯೆಗಳಿಗೆ ಪರಿಹಾರ ಹುಡುಕುವ ಉದ್ದೇಶದಿಂದ ಜೆಡಿಎಸ್ ಪಕ್ಷವು ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಉಪಚುನಾವಣಾ ಅಖಾಡದಲ್ಲಿ NDA ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಕುಮಾರಸ್ವಾಮಿ, ರಾಜ್ಯದಲ್ಲಿ ಎರಡನೇ ಬಾರಿಗೆ ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿವೆ. ವೈಯಕ್ತಿಕ ಸಂಬಂಧ ಬೆಳೆಸುವುದಕ್ಕೆ ಮೈತ್ರಿ ಮಾಡಿಕೊಂಡಿಲ್ಲ. ಬದಲಿಗೆ ಕನ್ನಡಿಗರ ಸಮಸ್ಯೆಗಳಿಗೆ ಪರಿಹಾರ ಹುಡುಕುವ ನಿಟ್ಟಿನಲ್ಲಿ ನಾವು ಒಂದಾಗಿದ್ದು, ಭವಿಷ್ಯದಲ್ಲೂ ಉಭಯ ಪಕ್ಷಗಳ ಮೈತ್ರಿ ಮುಂದುವರಿಯಲಿದೆ ಎಂದರು. ರಾಜ್ಯದಲ್ಲಿ ಎರಡನೇ ಬಾರಿಗೆ ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿವೆ. ವೈಯಕ್ತಿಕ ಸಂಬಂಧ ಬೆಳೆಸುವುದಕ್ಕೆ ಮೈತ್ರಿ ಮಾಡಿಕೊಂಡಿಲ್ಲ. ಬದಲಿಗೆ ಕನ್ನಡಿಗರ ಸಮಸ್ಯೆಗಳಿಗೆ ಪರಿಹಾರ ಹುಡುಕುವ ನಿಟ್ಟಿನಲ್ಲಿ ನಾವು ಒಂದಾಗಿದ್ದು, ಭವಿಷ್ಯದಲ್ಲೂ ಉಭಯ ಪಕ್ಷಗಳ ಮೈತ್ರಿ ಮುಂದುವರಿಯಲಿದೆ. – ಶ್ರೀ @hd_kumaraswamy , ಕೇಂದ್ರ ಸಚಿವರು pic.twitter.com/RX5vgVC08l — BJP Karnataka (@BJP4Karnataka)…