ಬೆಂಗಳೂರು: ಕ್ಷೇತ್ರದ ಅಭಿವೃದ್ಧಿಯಲ್ಲಿ, ರೈತರಿಗೆ ನೀರು ಕೊಡುವುದರಲ್ಲಿ ನಮ್ಮ ಯೋಗೇಶ್ವರ್ ಆಧುನಿಕ ಭಗೀರಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುಣಗಾನ ಮಾಡಿದ್ದಾರೆ. ಯೋಗೇಶ್ವರ್ ಅವರು ಚನ್ನಪಟ್ಟಣ ಮಣ್ಣಿನ ಮೇಲೆ, ಇಲ್ಲಿನ ರೈತ ಸಮುದಾಯ, ಇಲ್ಲಿನ ಪಶುಪಾಲಕರು, ಗೋ ಸಾಕಾಣಿಕೆದಾರರ ಮೇಲೆ ಅಪಾರ ಪ್ರೀತಿ, ಗೌರವ ಹಾಗೂ ಕಾಳಜಿ ಇಟ್ಟುಕೊಂಡಿದ್ದಾರೆ. ಹೀಗಾಗಿ ರೈತ ಕುಲದ ಉದ್ಧಾರಕ್ಕಾಗಿ ಕೆರೆಗಳನ್ನು ತುಂಬಿಸಿ ಪುಣ್ಯಾತ್ಮ ಎನ್ನಿಸಿಕೊಂಡರು ಎಂದು ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಮಂಡ್ಯ ಲೋಕಸಭೆಯಲ್ಲಿ, ರಾಮನಗರ ವಿಧಾನಸಭೆಯಲ್ಲಿ ನಿಖಿಲ್ ಸೋತಿದ್ದಾರೆ. ಈಗ ಚನ್ನಪಟ್ಟಣಕ್ಕೆ ಕರೆತಂದು ನಿಲ್ಲಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರ ಬಾವ, ದೇವೇಗೌಡರ ಅಳಿಯ ಡಾ.ಮಂಜುನಾಥ್ ಅವರ ಗೆಲುವಿಗೆ ಯೋಗೇಶ್ವರ್ ಅವರು ಬಹಳ ಶ್ರಮಿಸಿದರು. ಆಗಲೇ ವಿಧಾನಸಭಾ ಚುನಾವಣೆಯಲ್ಲಿ ಯೋಗೇಶ್ವರ್ ಅವರಿಗೆ ಬೆಂಬಲಿಸಿ ಗೆಲ್ಲಿಸುವ ಭರವಸೆ ನೀಡಿದ್ದರು. ಆದರೆ…
Year: 2024
ಸಚಿವ ಜಮೀರ್ ಒಕ್ಕಲಿಗರನ್ನು, ಹಿಂದೂಗಳನ್ನು ಖರೀದಿಸುತ್ತೇನೆಂದು ಹೇಳುತ್ತಿದ್ದಾರೆಯೇ?: ಆರ್.ಅಶೋಕ್ ಪ್ರಶ್ನೆ
ರಾಮನಗರ: ಸಚಿವ ಜಮೀರ್ ಅಹ್ಮದ್ ಅವರು ಒಕ್ಕಲಿಗರನ್ನು ಅಥವಾ ಹಿಂದೂಗಳನ್ನು ಖರೀದಿಸುತ್ತೇನೆ ಎಂದು ಹೇಳುತ್ತಿದ್ದಾರೆಯೇ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಪ್ರಶ್ನಿಸಿದ್ದಾರೆ. ಚನ್ನಪಟ್ಟಣ ಉಪಚುನಾವಣೆಯ ಪ್ರಚಾರದಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಚಾಮರಾಜಪೇಟೆಗೆ ಹೋಗಿ ರ‍್ಯಾಲಿ ಮಾಡಿ ಜಮೀರ್ ಅಹ್ಮದ್‌ರನ್ನು ಗೆಲ್ಲಿಸಿ ಅವರಿಗೆ ಜೀವನ ನೀಡಿದ್ದರು. ಅದೇ ಜಮೀರ್ ಅಹ್ಮದ್ ಈಗ ದೇವೇಗೌಡರ ಕುಟುಂಬವನ್ನು ಖರೀದಿಸುತ್ತೇವೆ ಎಂದು ಹೇಳಿದ್ದಾರೆ. ದೇಶದ ಮಾಜಿ ಪ್ರಧಾನಿ ದೇವೇಗೌಡರು ಕಾವೇರಿ ನೀರು ಹಂಚಿಕೆಗಾಗಿ ಶ್ರಮಿಸಿದರು. ಕುಮಾರಸ್ವಾಮಿಯವರು ರೈತರ ಸಾಲ ಮನ್ನಾ ಮಾಡಿದ್ದರು. ಅಂತಹವರನ್ನು ಖರೀದಿಸುತ್ತೇನೆ ಎಂದು ಜಮೀರ್ ಹೇಳುತ್ತಾರೆ. ಇದು ಒಕ್ಕಲಿಗರನ್ನು ಖರೀದಿಸುತ್ತೇವೆಂದು ಅರ್ಥವೇ ಅಥವಾ ಹಿಂದೂಗಳನ್ನು ಖರೀದಿಸುತ್ತೇವೆಂದು ಅರ್ಥವೇ ಎಂದು ಪ್ರಶ್ನೆ ಮಾಡಿದರು. ಈಗಾಗಲೇ ಸಚಿವ ಜಮೀರ್ ಅಹ್ಮದ್ ರೈತರ ಜಮೀನು ಕಬಳಿಸುತ್ತಿದ್ದಾರೆ. ಈಗ ದೇವೇಗೌಡರ ಕುಟುಂಬ ಖರೀದಿಸಲು ಇರಾಕ್, ಇರಾನ್‌ನಿಂದ ಹಣ ಬಂದಿದೆಯೇ? ನಾವು ಮಣ್ಣಿನ ಮಕ್ಕಳಾಗಿದ್ದು,…
ರಾಷ್ಟ್ರೀಯ ಹೆದ್ದಾರಿಯ ಮುಧೋಳ-ಯಲಗೇರಾ ರಸ್ತೆ ಅಭಿವೃದ್ಧಿಗೆ ಚಾಲನೆ
ಕಲಬುರಗಿ: 2023-24 ನೇ ಸಾಲಿನ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಸೇಡಂ ತಾಲೂಕಿನ ರಾಜ್ಯ ಹೆದ್ದಾರಿ-10 ರಿಂದ ಮುಧೋಳ-ಯಲಗೇರಾ (ರಾಷ್ಟ್ರೀಯ ಹೆದ್ದಾರಿ-127) ಕಿ.ಮಿ.9 ರಿಂದ 24.53 ರವರೆಗೆ ಹಾಗೂ ಮದನಾ ಗ್ರಾಮದ ಆಯ್ದ ಭಾಗಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ಸಿಕ್ಕಿದೆ. ಅಂದಾಜು 25 ಕೋಟಿ ರೂಪಾಯಿ ವೆಚ್ಚದ ಈ ಕಾಮಗಾರಿಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಜೀವನೋಪಾಯ, ಉದ್ಯಮಶೀಲತೆ ಸಚಿವ ಡಾ.ಶರಣಪ್ರಕಾಶ ಪಾಟೀಲರು ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಡಾ.ಶರಣಪ್ರಕಾಶ ಪಾಟೀಲ್, ಸೇಡಂ ತಾಲೂಕಿನ ಗ್ರಾಮೀಣ ಭಾಗದ ರಸ್ತೆ ಸುಧಾರಣೆ ಹಾಗೂ ರಾಜ್ಯ-ರಾಷ್ಟ್ರೀಯ ಹೆದ್ದಾರಿ ಕಲ್ಪಿಸುವ ಸೇಡಂ ತಾಲೂಕಿನ ವಿವಿಧ ಗ್ರಾಮಗಳ ರಸ್ತೆ ಬಗ್ಗೆ ಹೆಚ್ಚಿನ ಒತ್ತು ನೀಡಿ ವಿಶೇಷ ಅನುದಾನ ಮುಖಾಂತರ ಸುಧಾರಣೆಗೊಳಿಸಲಾಗುತ್ತಿದೆ ಎಂದರು. ಕಲಬುರಗಿ ಸಂಸದರಾದ ಶ್ರೀ ರಾಧಾಕೃಷ್ಣ ದೊಡ್ಡಮನಿ ಅವರು ಹಾಗೂ ಸೇಡಂ-ಮುಧೋಳ ಬ್ಲಾಕ್ ಕಾಂಗ್ರೆಸ್ ಮುಖಂಡರು,…
ಉಡುಪಿಯಲ್ಲೊಂದು ಅನನ್ಯ ‘ನನ್ನ ನಾಡು ನನ್ನ ಹಾಡು’; ನಾಡಿನ ಗಮನಸೆಳೆದ ‘ಮಣಿಪಾಲ ಶ್ರೀ ದುರ್ಗಾ ಮ್ಯೂಸಿಕ್ ಮೀಟ್’
ಉಡುಪಿ: ಕಡಲತಡಿಯ ನಗರಿ, ದೇವರ ನಾಡು ಉಡುಪಿಯಲ್ಲಿ ‘ಸಂಗೀತ ಸುಗ್ಗಿ’ಯೊಂದು ನಾಡಿನ ಗಮನಸೆಳೆಯಿತು. ಗಾನ ಸರಸ್ವತಿಯರನ್ನು ಉತ್ತೇಜಿಸುವ, ಸಂಗೀತ ಸಾಮ್ರಾಟರನ್ನು ಗುರುತಿಸಿ ಸನ್ಮಾನಿಸುವ ಅನನ್ಯ ಸಂಗೀತ ವೈಭವ ಕಲಾಜಗತ್ತಿನ ಕುತೂಹಲದ ಕೇಂದ್ರಬಿಂದುವಾಯಿತು. ‘ನನ್ನ ನಾಡು ನನ್ನ ಹಾಡು’ ಎಂಬ ಹೆಸರಿನಲ್ಲಿ ಈ ಕಾರ್ಯಕ್ರಮ ನೆರವೇರಿತು. ಗಾನ ಕೋಗಿಲೆಗಳಿಗಾಗಿಯೇ ಸಂಗೀತ ಸ್ಪರ್ಧೆ ಆಯೋಜಿಸುವ ಮೂಲಕ ಸಂಗೀತಾಸಕ್ತರ ಮೆಚ್ಚುಗೆಗೂ ಈ ಕಾರ್ಯಕ್ರಮ ಪಾತ್ರವಾಯಿತು. . ಉಡುಪಿ ಜಿಲ್ಲೆಯ ಲಯನ್ಸ್ (317 ಸಿ) ಹಾಗೂ ರೋಟರಿ ಕ್ಲಬ್ (ಜಿಲ್ಲೆ 3182) ಒಳಗೊಂಡ ಲಯನ್ಸ್ ಕ್ಲಬ್ ಅಂಬಲಪಾಡಿ, ಕಲ್ಯಾಣಪುರ, ಸಂತೆಕಟ್ಟೆ, ಉಡುಪಿ ಚೇತನ ಹಾಗೂ ರೋಟರಿ ಸಂಸ್ಥೆ ಅಂಬಲಪಾಡಿ, ಕಲ್ಯಾಣಪುರ, ಉಡುಪಿ ಮಿಡ್ ಟೌನ್ ಹಾಗೂ ಬ್ರಹ್ಮಾವರ ಇವರ ಸಹಭಾಗಿತ್ವದಲ್ಲಿ ಮಣಿಪಾಲ ‘ಶ್ರೀ ದುರ್ಗಾ ಮ್ಯೂಸಿಕ್ ಮೀಟ್’ ಸಹಯೋಗದೊಂದಿಗೆ ಆಯೋಜಿತವಾದ ‘ನನ್ನ ನಾಡು ನನ್ನ ಹಾಡು’ ಜಿಲ್ಲಾಮಟ್ಟದ ಕನ್ನಡ ಹಾಡುಗಳ ಸ್ಪರ್ಧೆಯಯಲ್ಲೂ ಅನೇಕ…
ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಅಧಿಕಾರ ಸ್ವೀಕಾರ
ನವದೆಹಲಿ: ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರವಹಿಸಿಕೊಂಡಿದ್ದಾರೆ. ಸೋಮವಾರ ಅವರು ಪ್ರಮಾಣವಚನ ಸ್ವೀಕರಿಸಿದರು. ಈವರೆಗೂ ಸಿಜೆಐ ಡಿ.ವೈ ಚಂದ್ರಚೂಡ್ ಅವರಿಂದ ತೆರವಾದ ಸ್ಥಾನವನ್ನು ನ್ಯಾಯಮೂರ್ತಿ ಸಂಜೀವ್ ಖನ್ನಾ ಅಲಂಕರಿಸಿದ್ದಾರೆ. 1980ರಲ್ಲಿ ದೆಹಲಿ ವಿವಿಯಿಂದ ಕಾನೂನು ಪದವಿಪಡೆದಿರುವ ಇವರು, ಈವರೆಗೂ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಿಟ್ಟಿದ್ದರು. ಚುನಾವಣಾ ಬಾಂಡ್ ರದ್ದತಿ, ಕಣಿವೆ ರಾಜ್ಯ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370 ವಿಧಿ ರದ್ದತಿ ಸಹಿತ ಹಲವು ಪ್ರಕರಣಗಲ್ಲಿ ನ್ಯಾಯಮುರ್ತಿ ಸಂಜೀವ್ ಖನ್ನಾ ಅವರು ನೀಡಿರುವ ತೀರ್ಪು ಗಮನಾರ್ಹ. ಸುಪ್ರೀಂಕೋರ್ಟ್‌ನ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿರುವ ಇವರು ಮೇ. 13, 2025 ರವರೆಗೆ ಅಧಿಕಾರದಲ್ಲಿ ಇರಲಿದ್ದಾರೆ.
ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ಸುಪ್ರೀಂಕೋರ್ಟ್’ನಲ್ಲೂ ವಜಾ
ನವದೆಹಲಿ: ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲುಪಾಲಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಹೈಕೋರ್ಟ್’ನಲ್ಲಿ ಜಾಮೀನು ಸಿಗದ ಹಿನ್ನಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿ ಸೋಮವಾರ ವಿಚಾರಣೆಗೆ ಬಂದಿದ್ದು ನ್ಯಾಯಪೀಠವು ಜಾಮೀನು ಮಂಜೂರು ಮಾಡಲು ನಿರಾಕರಿಸಿದೆ. ಪ್ರಜ್ವಲ್ ರೇವಣ್ಣ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹ್ಟಗಿ, ತಮ್ಮ ಕಕ್ಷಿದಾರರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಸಂದರ್ಭದಲ್ಲಿ ವರ್ಚಸ್ಸಿಗೆ ಧಕ್ಕೆ ತರಲು ಅತ್ಯಾಚಾರ ಆರೋಪ ಮಾಡಲಾಗಿದೆ ಎಂದು ವಾದಿಸಿದರು. ಪ್ರಜ್ವಲ್ ರೇವಣ್ಣ ಅವರಿಗೆ ಜಾಮೀನು ನೀಡುವಂತೆ ಮನವಿ ಮಾಡಿದರಾದರೂ ನ್ಯಾಯಪೀಠವು ಅರ್ಜಿಯನ್ನು ವಜಾಗೊಳಿಸಿತು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠ, ಕರ್ನಾಟಕ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದೆ.
DL, RCಗೂ ಶೀಘ್ರದಲ್ಲೇ ಕ್ಯೂಆರ್ ಕೋಡ್; ಜನವರಿಯಿಂದ ಹೊಸ ಸ್ಮಾರ್ಟ್‌ಕಾರ್ಡ್ ಎಲ್ಲ RTOಗಳಲ್ಲೂ ಇ ಆಡಳಿತಕ್ಕೆ ಕ್ರಮ; ರಾಮಲಿಂಗಾ ರೆಡ್ಡಿ
ಬೆಂಗಳೂರು: ರಾಜ್ಯದ ಸಾರಿಗೆ ಇಲಾಖೆಯಲ್ಲಿ ಅಮೂಲಾಗ್ರ ಪರಿವರ್ತನೆ ಮಾಡಲಾಗುತ್ತಿದ್ದು, ವ್ಯವಸ್ಥೆ, ಸೌಲಭ್ಯಗಳಲ್ಲೂ ಸುಧಾರಣೆ ತರಲಾಗಿದೆ. ಅದರಂತೆ ಡ್ರೈವಿಂಗ್ ಲೈಸೆನ್ಸ್ (ಡಿಎಲ್) ಹಾಗೂ ವಾಹನ ನೋಂದಣಿ (ಆರ್‌ಸಿ) ಕಾರ್ಡ್‌ಗಳಿಗೆ ಹೈಟೆಕ್ ಸ್ಪರ್ಶ ಸಿಗಲಿದೆ. ಕ್ಯೂಆರ್ ಕೋಡ್ ಮತ್ತು ಚಿಪ್ ಆಧಾರಿತ DL, RC ಕಾರ್ಡ್‌ಗಳು ವಿತರಣೆಯಾಗಲಿದ್ದು, 2025ರ ಜನವರಿ ಅಥವಾ ಫೆಬ್ರವರಿಯಿಂದ ಹೊಸ ಸ್ಮಾರ್ಟ್ ಕಾರ್ಡ್ ಯೋಜನೆ ಅನುಷ್ಠಾನಗೊಳ್ಳಲಿದೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ. ಪ್ರಸ್ತುತ ಕೊಡುತ್ತಿರುವ ಆರ್‌ಸಿ ಹಾಗೂ ಡಿಎಲ್‌ಗಳು ಪಾಲಿ ವಿನೈಲ್ ಕ್ಲೋರೈಡ್ (ಪಿವಿಸಿ) ಕಾರ್ಡ್‌ಗಳಾಗಿವೆ. ಹೊಸ ಯೋಜನೆಯಲ್ಲಿ ಪಾಲಿ ಕಾರ್ಬನೇಟ್ ಕಾರ್ಡ್ (ಪಿಸಿಸಿ)ಗಳನ್ನು ವಿತರಣೆ ಮಾಡಲಾಗುತ್ತದೆ. ಇವು ಬ್ಯಾಂಕ್‌ಗಳು ವಿತರಿಸುವ ಕಾರ್ಡ್‌ಗಳ ಮಾದರಿಯಲ್ಲಿ ಅತ್ಯಂತ ಉತ್ತಮ ಗುಣಮಟ್ಟದ ಕಾರ್ಡ್‌ಗಳಾಗಿರುತ್ತವೆ ಎಂದವರು ಮಾಹಿತಿ ಒದಗಿಸಿದ್ದಾರೆ. ಈವರೆಗಿನ ಕಾರ್ಡ್‌ಗಳಲ್ಲಿ ಹಳೆಯದಾಗುತ್ತಿದ್ದಂತೆ ಕಾರ್ಡ್ ಮೇಲಿರುವ ಅಕ್ಷರಗಳು ಅಳಿಸಿ ಹೋಗುತ್ತಿತ್ತು. ಆದರೆ, ಪಿಸಿಸಿ ಕಾರ್ಡ್‌ಗಳಲ್ಲಿ ಲೇಸರ್ ಇನ್‌ಗ್ರೀಡಿಂಗ್…
ಕೋವಿಡ್ ಹಗರಣ ಆರೋಪ; ಆಯೋಗದ ವರದಿಯಿಂದ ಏನೂ ಆಗಲ್ಲ ಎಂದ ಮಾಜಿ ಸಿಎಂ
ಬಳ್ಳಾರಿ: ಕಾನೂನು ಚೌಕಟ್ಟಿನಲ್ಲೇ ಕೋವಿಡ್ ಸೋಂಕು ನಿರ್ವಹಣಾ ಕೆಲಸ ನಡೆದಿದ್ದು, ಯಾವುದೇ ಹಗರಣ ನಡೆದಿಲ್ಲ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಕೋವಿಡ್ ಅಕ್ರಮ ಕುರಿತ ಆಯೋಗದ ವರದಿ ಬಗ್ಗೆ ಕಾಂಗ್ರೆಸ್ ನಾಯಕರು ನೀಡಿರುವ ಹೇಳಿಕೆ ಕುರಿತಂತೆ ಪ್ರತಿಕ್ರಿಯಿಸಿರುವ ಯಡಿಯೂರಪ್ಪ, ವರದಿಯಿಂದ ಏನೂ ಆಗುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಉಪಚುನಾವಣೆ ಹಿನ್ನೆಲೆಯಲ್ಲಿ ಕೋವಿಡ್ ಅಕ್ರಮ ಕುರಿತು ಕಾಂಗ್ರೆಸ್ ನಾಯಕರು ಆರೋಪ ಮೈನಾಡುತ್ತಿದ್ದಾರೆ. ದುರುದ್ದೇಶದಿಂದ ನನ್ನ ಮತ್ತು ಮಾಜಿ ಸಚಿವ ಬಿ. ಶ್ರೀರಾಮುಲು ವಿರುದ್ಧ ಅಭಿಯೋಜನೆಗೆ ಅನುಮತಿ ನೀಡುವಂತೆ ಶಿಫಾರಸು ಮಾಡಿದ್ದಾರೆ ಎಂದ ಬಿ.ಎಸ್.ವೈ, ಇದರಿಂದ ಯಾವುದೇ ಪ್ರಯೋಜನವಾಗದು ಎಂದರು.
ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ಉಪ ಚುನಾವಣೆ ಬಹಿರಂಗ ಪ್ರಚಾರ ಸೋಮವಾರ ಅಂತ್ಯ
ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ಸೋಮವಾರ ತೆರೆಬೀಳಲಿದೆ. ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ಉಪ ಚುನಾವಣೆ ಬಹಿರಂಗ ಪ್ರಚಾರ ಸೋಮವಾರ ಅಂತ್ಯವಾಗಲಿದೆ. ಶಿಗ್ಗಾವಿಯಲ್ಲಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣಾ ಏರ್ಪಟ್ಟಿದೆ. ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ರಾಜೀನಾಮೆ ನಂತರ ಇದೀಗ ಉಪಚುನಾವಣೆ ಘೋಷಣೆಯಾಗಿದೆ. ಸಂಡೂರಿನಲ್ಲಿ ತುಕಾರಾಮ್ ಸಂಸದರಾಗಿ ಆಯ್ಕೆಯಾದ ಹಿನ್ನೆಲೆ ಅವರು ಪ್ರತಿನಿಧಿಸುತ್ತಿರುವ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿದೆ. ಈ ಮೂರೂ ಕ್ಷೇತ್ರಗಳ ಚುನಾವಣಾ ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯ ಅಖಾಡವಾಗಿದ್ದು, ನಾಯಕರು ಅಂತಿಮ ಕ್ಷಣದ ಪ್ರಚಾರದಲ್ಲಿ ತೊಡಗಿದ್ದಾರೆ.
ವಕ್ಫ್ ಆಸ್ತಿ ವಿವಾದ; ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್
ಬೆಂಗಳೂರು: ವಕ್ಫ್ ಆಸ್ತಿ ವಿವಾದ ಹಿನ್ನೆಲೆಯಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್ ಪಡೆಯುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ಕೂಡಾ ಆದೇಶಿಸಿದೆ. ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟಿಸ್‌ಗಳನ್ನು ತಕ್ಷಣ ವಾಪಸ್ ಪಡೆಯಬೇಕು, ರೈತರ ಸ್ವಾಧೀನದಲ್ಲಿರುವ ಜಮೀನುಗಳಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು ಎಂದು ಸಿಎಂ ಸೂಚಿಸಿದ್ದರು. ಕಾನೂನು ಬಾಹಿರವಾಗಿ ಹಾಗೂ ನೋಟಿಸ್ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು ಎಂದು ಸಿಎಂ ಸೂಚಿಸಿದ್ದಾರೆ. ಇದೀಗ ಈ ಸಂಬಂಧ ಅಧಿಕೃವಾಗಿ ಆದೇಶ ಹೊರಬಿದ್ದಿರುವುದರಿಂದ ನಾವು ನಿರಾಳರಾಗಿದ್ದೇವೆ ಎಂದು ರೈತರು ಹೇಳಿದ್ದಾರೆ.