ಬಿಜೆಪಿ ಸರ್ಕಾರದ ಅವಧಿಯಲ್ಲೆ ನೋಟೀಸ್ ನೀಡಲಾಗಿತ್ತು; ‘ಲ್ಯಾಂಡ್ ಜಿಹಾದ್’ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಎದಿರೇಟು

ಬೆಂಗಳೂರು: ಹಾವೇರಿ ರೈತನ ಹೆಸರಲ್ಲೂ ಬಿಜೆಪಿಯವರು ಈಗ ರಾಜಕೀಯ ಮಾಡುತ್ತಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ. ವಕ್ಫ್ ವಿವಾದ ಕುರಿತಂತೆ ಬಿಜೆಪಿ ನಾಯಕರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಡುತ್ತಿರುವ ಆರೋಪಗಳ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಆಕ್ಷೇಪ ವ್ಯಕ್ತಪಡಿಸಿದರು. ಕೆಪಿಸಿಸಿ ಮಾಧ್ಯಮ ಹಾಗೂ ಸಂವಹನ ವಿಭಾಗದ ಮುಖ್ಯಸ್ಥರಾದ ರಮೇಶ್ ಬಾಬು ಉಪಸ್ಥಿತಿಯಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ಲ್ಯಾಂಡ್ ಜಿಹಾದ್ ಎಂದು ಹೇಳುತ್ತಿದ್ದಾರಲ್ಲ. ಅವರು ಈಗಲೇ ಯಾಕೆ ಮಾತನಾಡುತ್ತಿದ್ದಾರೆ? ನಿಮ್ಮ ಸರ್ಕಾರದ ಅವಧಿಯಲ್ಲಿ ನೋಟೀಸ್ ಕೊಟ್ಟಾಗ ಇವರೆಲ್ಲಾ ಬೆಟ್ಟು ಚೀಪುತ್ತಿದ್ದರಾ? ಶಶಿಕಲಾ ಜೊಲ್ಲೆ ಅವರ 2021ರಲ್ಲಿ ನೀಡಿರುವ ಹೇಳಿಕೆಯಲ್ಲಿ, ‘ಅನ್ವರ್ ಮಾನ್ಪಡಿ ವರದಿ ನೀಡಿದ್ದು, ವರದಿ ನೀಡಿ 9 ವರ್ಷವಾಗಿದ್ದರೂ ಯಾವುದೇ ಕ್ರಮವಾಗಿಲ್ಲ. ಅದಕ್ಕೆ ಅಂದಿನ ಸಿಎಂ ಯಡಿಯೂರಪ್ಪ ಅವರು ಹಾಗೂ ಅವರ ಕುಟುಂಬದವರು ಕಾಂಗ್ರೆಸ್ ನಾಯಕರೊಂದಿಗೆ ಶಾಮೀಲಾಗಿರುವುದೇ ಕಾರಣ ಎಂದು ಅನ್ವರ್ ಮಾನ್ಪಡೆ ಅವರು…

‘ವಕ್ಫ್‌ಗೆ ಸಂಬಂಧಿಸಿದ ಜಮೀನು ವಿವಾದ ಬಂದರೆ ಅದನ್ನು ವಕ್ಫ್‌ನಲ್ಲೇ ಬಗೆಹರಿಸಬೇಕು’

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ನೀಡುವ ನೋಟಿಸ್‌ಗೆ ಯಾವುದೇ ಬೆಲೆ ನೀಡುವುದಿಲ್ಲ. ವಕ್ಫ್‌ ಮಂಡಳಿ ಮಾಡುತ್ತಿರುವ ಭೂ ಕಬಳಿಕೆಯ ವಿರುದ್ಧ ನಿರಂತರ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ಮಂಡ್ಯ ಜಿಲ್ಲೆಯ, ಚಂದ್ಗಾಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಅವರು ಮಾತನಾಡಿದರು. ವಿರೋಧ ಪಕ್ಷದ ನಾಯಕನಾಗಿ ನಾನು ಎಲ್ಲಿ ಬೇಕಾದರೂ ಓಡಾಡಬಹುದು. ಆ ಅಧಿಕಾರ, ಸ್ವಾತಂತ್ರ್ಯ ನನಗಿದೆ. ಅದಕ್ಕಾಗಿ ವಕ್ಫ್‌ ಭೂಮಿ ಕಬಳಿಸಿದ ಸ್ಥಳಗಳಿಗೆ ಭೇಟಿ ನೀಡುತ್ತಿದ್ದೇನೆ. ಚಂದ್ಗಾಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಜಾಗವನ್ನು ಒತ್ತುವರಿ ಮಾಡಲಾಗಿದೆ. ಕಣ್ಣ ಮುಂದೆ ಇರುವ ಶಾಲೆ ಪಹಣಿಯಲ್ಲಿ ಖಬರಸ್ಥಾನ ಆಗಿದೆ. ಇದು ಹೆಣ ಹೂಳುವ ಜಾಗವೇ ಎಂದು ಗ್ರಾಮಸ್ಥರೇ ಹೇಳಬೇಕು. ನಮ್ಮ ಶಾಲೆ ನಮ್ಮ ಹಕ್ಕು ಎಂಬ ಘೋಷಣೆಯಡಿ ಹೋರಾಟ ಮಾಡಬೇಕು ಎಂದರು. ಯಾವುದೇ ಜಮೀನು ತಕಾರರು ಬಂದರೆ ಜಿಲ್ಲಾಧಿಕಾರಿಗೆ…

ಕರ್ನಾಟಕ ಮಾದರಿಯಲ್ಲಿ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ‘ಗ್ಯಾರೆಂಟಿ’ ಮೇನಿಯಾ

ಮುಂಬಯಿ: ತೀವ್ರ ಕುತೂಹಲ ಕೆರಳಿಸಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಅಖಾಡದಲ್ಲಿ ಭರವಸೆಗಳ ಮಹಾಪೂರವೇ ಹರಿದಿದೆ. ಮಹಿಳೆಯರಿಗೆ ಪ್ರತೀ ತಿಂಗಳು 3,000 ರೂಪಾಯಿ. ಸಹಾಯ ಧನ, ರಾಜ್ಯ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣದ ಗ್ಯಾರೆಂಟಿ ಭರವಸೆಯನ್ನು ಮಹಾ ವಿಕಾಸ ಅಘಾಡಿ (ಎಂವಿಎ) ನೀಡಿದೆ. 3 ಲಕ್ಷ ರೂಪಾಯಿ ವರೆಗಿನ ರೈತರ ಸಾಲ ಮನ್ನಾ ಮಾಡಲಾಗುತ್ತದೆ ಜೊತೆಗೆ, ನಿರುದ್ಯೋಗಿ ಯುವಜನರಿಗೆ ಪ್ರತೀ ತಿಂಗಳು 4,000 ರೂಪಾಯಿ ನೆರವು ನೀಡಲಾಗುತ್ತದೆ ಎಂದು ಎಂವಿಎ ತನ್ನ ಪ್ರಣಾಳಿಕೆಯಲ್ಲಿ ಆಶ್ವಾಸನೆಗಳ ಪಟ್ಟಿಯನ್ನು ನೀಡಿದೆ. ತಮ್ಮ ಒಕ್ಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂದರೆ ‘ಲಡ್ಕಿ ಬಹೀನ್‌’ ಯೋಜನೆಯ ಮೊತ್ತವನ್ನು 2,100 ರೂಪಾಯಿಗೆ ಹೆಚ್ಚಿಸಲಾಗುವುದು ಎಂದು ಎಂವಿಎ ನಾಯಕರು ಘೋಷಿಸಿದ್ದಾರೆ.

ಚಿನ್ನದ ದರ ದಾಖಲೆ ಪ್ರಮಾಣದಲ್ಲಿ ಇಳಿಕೆ

ನವದೆಹಲಿ: ಚಿನ್ನದ ದರ ಮತ್ತೆ ಇಳಿಕೆಯಾಗಿದೆ. ದೀಪಾವಳಿ ಹೊತ್ತಲ್ಲಿ ಗಗನಮುಖಿಯಾಗಿದ್ದ ಆಭರಣ ಲೋಹದ ಧಾರಣೆ ಗುರುವಾರ ಚಿನಿವಾರ ಪೇಟೆಯಲ್ಲಿ ಬಹಳಷ್ಟು ಇಳಿಕೆಉಅಗಿತ್ತು. ಬೆಂಗಳೂರಿನಲ್ಲಿ ಸುಮಾರು 20 ದಿನಗಳ ಬಳಿಕ 10 ಗ್ರಾಂ ಚಿನ್ನದ ಬೆಲೆ 80 ಸಾವಿರದ ಗಡಿಯಿಂದ ಕೆಳಗಿಳಿದಿದೆ. 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 1790 ರೂ. ಇಳಿಕೆಯಾಗಿ 78560 ರೂಪಾಯಿಗೆ ತಲುಪಿದೆ.

‘ಬಿಗ್‌ಬಾಸ್’ ಸ್ಪರ್ಧಿ ಧರ್ಮ, ಮಂಜ ಅಭಿನಯದ ‘ಟೆನೆಂಟ್’ ಬಿಡುಗಡೆಗೆ ಸಜ್ಜು

ರಿಯಾಲಿಟಿ ಶೋ ‘ಬಿಗ್‌ಬಾಸ್’ ಸ್ಪರ್ಧಿಗಳಾಗಿರುವ ಧರ್ಮಕೀರ್ತಿರಾಜ್‌, ಉಗ್ರಂ ಮಂಜು ಅಭಿನಯದ ‘ಟೆನಂಟ್’ ಚಿತ್ರ ತೆರೆಗೆ ಬರಲು ಸಜ್ಜಾಗಿದೆ. ಈ ತಿಂಗಳ 22ರಂದು ಈ ಸಿನಿಮಾ ಪ್ರದರ್ಶನ ಆರಂಭವಾಗಲಿದೆ. ಬಿಗ್‌ಬಾಸ್’ ಸ್ಪರ್ಧಿಗಳಾಗಿರುವ ಧರ್ಮಕೀರ್ತಿರಾಜ್‌, ಉಗ್ರಂ ಮಂಜು ಅವರು ಇದೀಗ ರಿಯಾಲಿಟಿ ಶೋ ಮನೆಯೊಳಗಿದ್ದಾರೆ. ಅವರಷ್ಟೇ ಅಲ್ಲ, ತಿಲಕ್, ರಾಕೇಶ್ ಮಯ್ಯ, ಸೋನು ಗೌಡ ಸಹಿತ ದೊಡ್ಡ ತಾರಾಬಳಗವೇ ಈ ಸಿನಿಮಾದಲ್ಲಿ ಪಾತ್ರಗಳನ್ನು ಹಂಚಿಕೊಂಡಿವೆ. ಮಾಸ್ಟರ್ ಚಾಯ್ಸ್ ಕ್ರಿಯೇಶನ್‌ನಡಿ ನಾಗರಾಜ್ ಟಿ. ನಿರ್ಮಾಣ ಮಾಡಿರಿವ ಈ ಸಿನಿಮಾಕ್ಕೆ ಶ್ರೀಧರ್ ಅವರು ಆ್ಯಕ್ಷನ್ ಕಟ್ ಹೇಳಿದ್ದಾರೆ.

ನಟ ಶಾರುಖ್ ಖಾನ್’ಗೂ ಕೊಲೆ ಬೆದರಿಕೆ; ಆರೋಪಿಗಾಗಿ ಪೊಲೀಸ್ ಬಲೆ

ಮುಂಬೈ: ಬಾಲಿವುಡ್ ತಾರೆಯರಿಗೆ ಜೀವ ಬೆದರಿಕೆಯ ಪ್ರಕರಣ ಮರುಕಳಿಸುತ್ತಲಿದ್ದು, ನಟ ಸಲ್ಮಾನ್ ಖಾನ್ ಬಳಿಕ ಶಾರುಖ್​ ಖಾನ್​ಗೆ ಕೊಲೆ ಬೆದರಿಕೆಯೊಡ್ಡಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿರುವ ಮುಂಬೈ ಪೊಲೀಸರು ಆರೋಪಿಗಾಗಿ ಬಲೇ ಬೀಸಿದ್ದಾರೆ. ನಟ ಶಾರುಖ್ ಖಾನ್ ಅವರಿಗೆ ಕರೆ ಮಾಡಿದ ವ್ಯಕ್ತಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾನೆ ಎನ್ನಲಾಗಿದೆ. 50 ಲಕ್ಷ ರೂ. ಕೊಡದಿದ್ದರೆ ಕೊಲ್ಲುವುದಾಗಿ ಬೆದರಿಕೆ ಹಾಕಲಾಗಿದೆ. ಈ ಬಗ್ಗೆ ನವೆಂಬರ್ 5 ರಂದು ಪ್ರಕರಣ ದಾಖಲಿಸಿಕೊಂಡ ಬಾಂದ್ರಾ ಠಾಣೆಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಆರೋಪಿಯು ಛತ್ತೀಸ್ ಘಡದ ರಾಯ್‌ಪುರದಲ್ಲಿ ಇರಬಹುದೆಂಬ ಸುಳಿವು ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

PRCI: ಮಂಗಳೂರಿನಲ್ಲಿ ಜಾಗತಿಕ ಸಂವಹನ ಸಮಾವೇಶ

ಬೆಂಗಳೂರು: ಪ್ರತಿಷ್ಠಿತ ಪಬ್ಲಿಕ್ ರಿಲೇಶನ್ಸ್ ಕೌನ್ಸಿಲ್ ಆಫ್ ಇಂಡಿಯಾ (PRCI) 18ನೇ ಜಾಗತಿಕ ಸಂವಹನ ಸಮಾವೇಶ 2024ರ ನವೆಂಬರ್ 8 ಮತ್ತು 9ರಂದು ಮಂಗಳೂರಿನಲ್ಲಿ ನಡೆಯಲಿದೆ. PRCI ಸಂಸ್ಥೆಯು ಸಾರ್ವಜನಿಕ ಸಂಪರ್ಕ ಮತ್ತು ಸಂವಹನ ವೃತ್ತಿಪರತೆಯ ಪ್ರಮಾಣಿತ ಮಾನದಂಡಗಳನ್ನು ಉತ್ತೇಜಿಸುವ ಪ್ರಮುಖ ಸಂಸ್ಥೆಯಾಗಿದ್ದು ಈ ಬಾರಿ ಕಡಲತಡಿಯ ನಗರಿಯಲ್ಲಿ ಆಯೋಜಿಸಲಾಗಿದ್ದು ದೇಶ ವಿದೇಶಗಳ ಪ್ರತಿನಿಧಿಗಳ ಸಮಾಗಮಕ್ಕೆ ಈ ಸಮಾವೇಶ ಸಾಕ್ಷಿಯಾಗಲಿದೆ. . 2004ರ ಮಾರ್ಚ್ 3 ರಂದು PRCIಯು ಸ್ಥಾಪನೆಯಾಗಿದ್ದು, ಅದಕ್ಕೂ ಮೊದಲು 17 ಜಾಗತಿಕ ಸಂವಹನ ಸಮಾವೇಶಗಳನ್ನು ಜಯಪುರ, ಪುಣೆ, ಕೊಲ್ಕತ್ತಾ, ನವದೆಹಲಿ, ಮುಂಬೈ, ಹೈದರಾಬಾದ್, ಚಂಡೀಗಢ್, ಬೆಂಗಳೂರು ಮತ್ತು ಗೋವಾ ನಗರಗಳಲ್ಲಿ ಯಶಸ್ವಿಯಾಗಿ ಆಯೋಜಿಸಿತ್ತು. ದೇಶದಾದ್ಯಂತ ಮತ್ತು ವಿಶ್ವದ ಪ್ರಮುಖ ಉದ್ಯಮಗಳಿಂದ 500ಕ್ಕೂ ಹೆಚ್ಚು ಸಂವಹನ ವೃತ್ತಿಪರರು ಮತ್ತು ನಿರ್ಧಾರಮೇಕರ್‌ಗಳು ಪಬ್ಲಿಕ್ ರಿಲೇಶನ್ಸ್ ಮತ್ತು ಸಂವಹನ ಕ್ಷೇತ್ರದ ಇತ್ತೀಚಿನ ಬೆಳವಣಿಗೆಗಳು, ಹೊಸ ವಿಚಾರಗಳು, ಮತ್ತು…

ಕೆಐಎಡಿಬಿ ಅವ್ಯವಹಾರ: ಸಿದ್ದರಾಮಯ್ಯ, ಎಂ.ಬಿ.ಪಾಟೀಲ್ ವಿರುದ್ಧ ಮೋದಿ, ಷಾಗೆ CRF ದೂರು

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿರುವ ಮುಡಾ ನಿವೇಶನ ಅಕ್ರಮ, ವಾಲ್ಮೀಕಿ ನಿಗಮದ ಕರ್ಮಕಾಂಡದ ಬೆನ್ನಲ್ಲೇ ಸಿದ್ದರಾಮಯ್ಯ ಸರ್ಕಾರಕ್ಕೆ KIADB ಬಹುಕೋಟಿ ಹಗರಣವೂ ಸಂಕಷ್ಟ ತಂದೊಡ್ಡಿದೆ. ಕುತೂಹಲಕಾರಿ ಬೆಳವಣಿಗೆಯಲ್ಲಿ ‘ದೇವನಹಳ್ಳಿ KIADB ಭೂಸ್ವಾಧೀನ ಅವ್ಯವಹಾರ’ ಆರೋಪ ಕುರಿತಂತೆ ಸಿಎಂ ಸಿದ್ದರಾಮಯ್ಯ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹಾಗೂ ಕೆ.ಎ.ಎಸ್ ಅಧಿಕಾರಿ ಬಾಳಪ್ಪ ಹಂದಿಗುಂದ ವಿರುದ್ಧ ಜಾರಿ ನಿರ್ದೇಶನಾಲಯ (ED)ದ ನಿರ್ದೇಶಕರಿಗೆ ದೂರು ಸಲ್ಲಿಕೆಯಾಗಿದೆ. ‘ಸಿಟಿಜನ್ ರೈಟ್ಸ್ ಫೌಂಡೇಶನ್’ ಈ ದೂರನ್ನು ಸಲ್ಲಿಸಿದ್ದು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ನಿರ್ದೇಶನ ಕೋರಿ ಕೇಂದ್ರ ಸರ್ಕಾರಕ್ಕೂ ದೂರು ಸಲ್ಲಿಕೆಯಾಗಿದೆ. ಕೈಗಾರಿಕೋದ್ಯಮಗಳನ್ನು ಉತ್ತೇಜಿಸಲು, ಉದ್ಯಮ ಸಂಸ್ಥೆಗಳಿಗೆ ಮೂಲಸೌಕರ್ಯ ಕಲ್ಪಿಸುವ ಸಂಬಂಧ ಸ್ಥಾಪಿಸಲಾಗಿರುವ ರಾಜ್ಯ ಸರ್ಕಾರದ ಅಧೀನದ ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ (KIADB) ಇದೀಗ ಹಗರಣಗಳ ಕೂಪವಾಗಿದ್ದು, ಒಂದೊಂದೇ ಕರ್ಮಕಾಂಡಗಳು…

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಆಗ್ರಹ; ವಿಧಾನಸಭೆಯಲ್ಲಿ ಕೋಲಾಹಲ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ಮುಂದುವರಿಸಬೇಕು ಹಾಗೂ ಆರ್ಟಿಕಲ್ 370 ಮತ್ತು 35 ಎ ನ್ನು ಮರುಸ್ಥಾಪಿಸುವಂತೆ ಒತ್ತಾಯಿಸಿ ರಾಜಕೀಯ ಪಕ್ಷಗಳು ಆಗ್ರಹಿಸಿವೆ. ಈ ಆಗ್ರಹದಿಂದಾಗಿ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಯಲ್ಲಿ ಗುರುವಾರ ಕೋಲಾಹಲದ ಪರಿಸ್ಥಿತಿ ನಿರ್ಮಾಣವಾಯಿತು. ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನಕ್ಕೆ ಕೆಲವು ಶಾಸಕರು ಒತ್ತಾಯಿಸಿದರೆ ಕೆಲವರು ವಿರೋಧಿಸಿದ್ದಾರೆ. ವಿಶೇಷ ಸ್ಥಾನಮಾನ ಕುರಿತು ಬುಧವಾರ ಕೈಗೊಂಡ ನಿರ್ಣಯವನ್ನು ಬಿಜೆಪಿ ಶಾಸಕರು ಗುರುವಾರ ವಿರೋಧಿಸಿದರು. ಈ ಸಂದರ್ಭದಲ್ಲಿ ಅವಾಮಿ ಇತ್ತೆಹಾದ್ ಪಕ್ಷದ ನಾಯಕ ಮತ್ತು ಶಾಸಕ ಲಂಗೇಟ್ ಶೇಖ್ ಖುರ್ಷೀದ್ ಅವರು ಆರ್ಟಿಕಲ್ 370 ಮತ್ತು 35 ಎ ಯನ್ನು ಮರುಸ್ಥಾಪಿಸುವಂತೆ ಬ್ಯಾನರ್ ಪ್ರದರ್ಶಿಸಿ ಸದನದ ಬಾವಿಗಿಳಿದರು. ಇದರಿಂದ ಕೆರಳಿದ ಬಿಜೆಪಿ ಸದಸ್ಯರು ಬ್ಯಾನರ್ ಕಿತ್ತು ಹಾಕಿದರು. ಈ ವೇಳೆ ಕೈ ಕೈ ಮಿಲಾಯಿಸುವ ಹಂತ ತಲುಪಿತು. ಈ ಗದ್ದಲ ಹಿನ್ನೆಲೆ ಕಲಾಪವನ್ನು ಕೆಲಕಾಲ…

ನಟ ದರ್ಶನ್ ವಿರುದ್ಧ ಬಿಗ್ ಬಾಸ್ ಸ್ಪರ್ಧಿಯಿಂದ ದೂರು

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ದೂರು ಸಲ್ಲಿಕೆಯಾಗಿದೆ. ಬಿಗ್ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ಜಗದೀಶ್ ಅವರು ಈ ದೂರು ಸಲ್ಲಿಸಿದ್ದಾರೆ. ತಮ್ಮ ಬಗ್ಗೆ ಸಾಮಾಜಿಕ ಜಾನತಾಣಗಳಲ್ಲಿ ಅವಹೇಳನ ಮಾಡಲಾಗುತ್ತಿದೆ ಎಂದು ಆಕ್ಷೇಪಿಸಿರುವ ಜಗದೀಶ್ ಅವರು ನಟ ದರ್ಶನ್ ಹಾಗೂ ಅವರ ಅಭಿಮಾನಿಗಳ ವಿರುದ್ಧ ಬೆಂಗಳೂರಿನ ಕೋಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಬುಧವಾರ ದೂರು ದಾಖಲಿಸಿದ್ದಾರೆ. ಜಗದೀಶ್ ಅವರು ಬಿಗ್​ಬಾಸ್​ ಸ್ಪರ್ಧಿಯಾಗಿದ್ದಾಗ ವಿವಾದಾತ್ಮಕ ಮಾತುಗಳಿಂದಾಗಿ ಸ್ಪರ್ಧೆಯಿಂದ ಹೊರಬಂದಿದ್ದಾರೆ. ನಟ ದರ್ಶನ್ ಪ್ರಕರಣ ಬಗ್ಗೆಯೂ ಮಾತನಾಡಿರುವ ಜಗದೀಶ್ ಅವರು ನಟನ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ ನಡೆದಿದ್ದು, ಜಗದೀಶ್ ಬಗ್ಗೆ ದರ್ಶನ್ ಅಭಿಮಾನಿಗಳು ಪೋಸ್ಟ್ ಗಳನ್ನು ಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜಗದೀಶ್ ಅವರು ನಟ ದರ್ಶನ್ ಹಾಗೂ ಅವರ…