ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ದೂರು ಸಲ್ಲಿಕೆಯಾಗಿದೆ. ಬಿಗ್ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ಜಗದೀಶ್ ಅವರು ಈ ದೂರು ಸಲ್ಲಿಸಿದ್ದಾರೆ. ತಮ್ಮ ಬಗ್ಗೆ ಸಾಮಾಜಿಕ ಜಾನತಾಣಗಳಲ್ಲಿ ಅವಹೇಳನ ಮಾಡಲಾಗುತ್ತಿದೆ ಎಂದು ಆಕ್ಷೇಪಿಸಿರುವ ಜಗದೀಶ್ ಅವರು ನಟ ದರ್ಶನ್ ಹಾಗೂ ಅವರ ಅಭಿಮಾನಿಗಳ ವಿರುದ್ಧ ಬೆಂಗಳೂರಿನ ಕೋಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಬುಧವಾರ ದೂರು ದಾಖಲಿಸಿದ್ದಾರೆ. ಜಗದೀಶ್ ಅವರು ಬಿಗ್ಬಾಸ್ ಸ್ಪರ್ಧಿಯಾಗಿದ್ದಾಗ ವಿವಾದಾತ್ಮಕ ಮಾತುಗಳಿಂದಾಗಿ ಸ್ಪರ್ಧೆಯಿಂದ ಹೊರಬಂದಿದ್ದಾರೆ. ನಟ ದರ್ಶನ್ ಪ್ರಕರಣ ಬಗ್ಗೆಯೂ ಮಾತನಾಡಿರುವ ಜಗದೀಶ್ ಅವರು ನಟನ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ ನಡೆದಿದ್ದು, ಜಗದೀಶ್ ಬಗ್ಗೆ ದರ್ಶನ್ ಅಭಿಮಾನಿಗಳು ಪೋಸ್ಟ್ ಗಳನ್ನು ಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜಗದೀಶ್ ಅವರು ನಟ ದರ್ಶನ್ ಹಾಗೂ ಅವರ…
Year: 2024
ಬೆಂಗಳೂರು: ಹಿಂದೆ ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿದ್ದ ಸಿದ್ದರಾಮಯ್ಯ, ಇದೀಗ ಸರ್ಕಾರಿ ನೌಕರ ರುದ್ರಣ್ಣ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಕ್ರಮ ಕೈಗೊಳ್ಳಬೇಕಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತ ಸರ್ಕಾರಿ ನೌಕರ ರುದ್ರಣ್ಣ ಆತ್ಮಹತ್ಯೆ ಪ್ರಕರಣ ಬಗ್ಗೆ ಪ್ರತಿಕ್ರಿಯಿಸದ್ದಾರೆ. ಬೆಳಗಾವಿಯ ಸರ್ಕಾರಿ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕ ರುದ್ರಣ್ಣ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಮೊಬೈಲ್‌ನಲ್ಲಿ ಸಂದೇಶ ಕಳುಹಿಸಿದ್ದರು. ಆದರೂ ಹಿರಿಯ ಅಧಿಕಾರಿಗಳು ಇದನ್ನು ಕಡೆಗಣಿಸಿದ್ದಾರೆ ಎಂದು ದೂರಿದರು. ಇದು ಕರುಣೆಯೇ ಇಲ್ಲದ ಸರ್ಕಾರ. ಸುಮಾರು 2 ಲಕ್ಷ ರೂ. ಲಂಚವನ್ನು ರುದ್ರಣ್ಣ ಅವರಿಂದ ಪಡೆಯಲಾಗಿದೆ. ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಪತ್ರ ಬರೆದ ಮಾದರಿಯಲ್ಲೇ ರುದ್ರಣ್ಣ ಕೂಡ ಭ್ರಷ್ಟಾಚಾರದ ವಿರುದ್ಧ ಹೋರಾಡಿ ಎಂದು ಸಂದೇಶ ಕಳುಹಿಸಿದ್ದಾರೆ. ಪಿಎಸ್‌ಐ ಪರಶುರಾಮ್ ಸತ್ತ ಬಳಿಕ ಯಾರನ್ನೂ…
ಅಬಕಾರಿ ಲಂಚಾವತಾರ; ಸಚಿವ ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ ಆಗ್ರಹ
ಬೆಂಗಳೂರು; ಅಬಕಾರಿ ಇಲಾಖೆಯಲ್ಲಿ 900 ಕೋಟಿ ರೂ. ಭ್ರಷ್ಟಾಚಾರ ನಡೆದಿದ್ದು, ಇದನ್ನು ಕೂಡಲೇ ಸಿಬಿಐ ತನಿಖೆಗೆ ವಹಿಸಬೇಕು. ಸಚಿವ ಆರ್.ಬಿ.ತಿಮ್ಮಾಪುರ ರಾಜೀನಾಮೆ ನೀಡಬೇಕು. ಇದು ಹಣದ ಅವ್ಯವಹಾರವಾಗಿರುವುದರಿಂದ ಜಾರಿ ನಿರ್ದೇಶನಾಲಯ ಕೂಡ ಕ್ರಮ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೆ ಬೆಂಗಳೂರಿನಲ್ಲಿ ರೌಡಿಗಳು ಹಫ್ತಾ ವಸೂಲಿ ಮಾಡುತ್ತಿದ್ದರು. ಈಗ ರೌಡಿಗಳೇ ನಾಚುವಂತೆ ಅಬಕಾರಿ ಸಚಿವ ತಿಮ್ಮಾಪುರ ಅವರು ವಾರಕ್ಕೆ 18 ಕೋಟಿ ರೂ. ವಸೂಲಿ ಮಾಡುತ್ತಿದ್ದಾರೆ. ಅಂದರೆ ವರ್ಷಕ್ಕೆ ಸುಮಾರು 900 ಕೋಟಿ ರೂ. ಲಂಚ ಪಡೆಯಲಾಗುತ್ತಿದೆ. ಪ್ರತಿ ಹುದ್ದೆಯ ಅಧಿಕಾರಿಗಳಿಗೆ ಎಷ್ಟು ಲಂಚ ನೀಡಲಾಗುತ್ತಿದೆ ಎಂದು ಮದ್ಯ ಮಾರಾಟಗಾರರ ಸಂಘ ಪತ್ರದಲ್ಲಿ ವಿವರಿಸಿದೆ. ಮುಖ್ಯಮಂತ್ರಿ ಕಚೇರಿಯ ಅಧಿಕಾರಿ, ಪಿಎ, ಪಿಎಸ್ ಪಡೆಯುತ್ತಿರುವ ಲಂಚದ ಬಗ್ಗೆಯೂ ವಿವರವಿದೆ. ಸಮಬಾಳು ಸಮಪಾಲು ಎಂಬಂತೆ ಸಚಿವ ತಿಮ್ಮಾಪುರ ಎಲ್ಲರಿಗೂ ಲಂಚ ಹಂಚಿದ್ದಾರೆ. ಬಿಜೆಪಿ…
ಅರ್ಜುನ್ ಜನ್ಯ ಅವರ ‘45’ ಸಿನಿಮಾದಲ್ಲಿ ಶಿವಣ್ಣ-ಉಪ್ಪಿ
ಅರ್ಜುನ್ ಜನ್ಯ ಚೊಚ್ಚಲ ಬಾರಿಗೆ ನಿರ್ದೇಶಿಸಿರುವ ‘45’ ಸಿನಿಮಾದ ಚಿತ್ರೀಕರಣ ಬಹುತೇಕ ಅಂತ್ಯವಾಗಿದ್ದು ಬಿಡುಗಡೆಗೆ ತಯಾರಿ ನಡೆದಿದೆ. ದೀಪಾವಳಿ ಹಬ್ಬದ ನಡುವೆಯೇ ಟೀಸರ್ ಬಿಡುಗಡೆಯಾಗಿದ್ದು ‘45’ ಸಿನಿಮಾ ಬಗ್ಗೆ ಕುತೂಹಲ ಹೆಚ್ಚಾಗಿದೆ. ಕೆಲವೇ ತಿಂಗಳಲ್ಲಿ ಬಿಡುಗಡೆ ಆಗಲಿದ್ದು, ಈ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಮತ್ತು ಉಪೇಂದ್ರ ಒಟ್ಟಿಗೆ ನಟಿಸಿದ್ದಾರೆ. ರಾಜ್ ಬಿ ಶೆಟ್ಟಿ ಅವರೂ ಕಾಣಿಸಿಕೊಂಡಿದ್ದಾರೆ. ಶಿವರಾಜ್‌ಕುಮಾರ್ ಮತ್ತು ಉಪೇಂದ್ರ ಅವರ ಫರ್ಸ್ಟ್ ಲುಕ್ ಅನಾವರಣಗೊಳಿಸುವ ‘45’ ಸಿನಿಮಾ ಬಗ್ಗೆ ಕುತೂಹಲವನ್ನು ಚಿತ್ರ ತಂಡ ಹೆಚ್ಚಿಸಿದೆ.
ಕಿರಣ್ ರಾಜ್ -ಕಾಜಲ್ ಕುಂದರ್ ನಟಿಸಿರುವ ‘ಮೇಘ’ ನವೆಂಬರ್ ಅಂತ್ಯಕ್ಕೆ ಬಿಡುಗಡೆ
ಕಿರಣ್ ರಾಜ್ -ಕಾಜಲ್ ಕುಂದರ್ ನಟಿಸಿರುವ ‘ಮೇಘ’ ಚಿತ್ರ ನವೆಂಬರ್ ಅಂತ್ಯಕ್ಕೆ ಬಿಡುಗಡೆಯಾಗಲು ಸಜ್ಜಾಗಿದೆ. ಈ ಚಿತ್ರವನ್ನು ಚರಣ್ ನಿರ್ದೇಶಿಸಿದ್ದಾರೆ. ಶೋಭರಾಜ್, ಸುಂದರ್ ವೀಣಾ, ಸಂಗೀತಾ ಮುಂತಾದ ಕಲಾವಿದರು ‘ಮೇಘ’ ಚಿತ್ರದಲ್ಲಿ ನಟಿಸಿದ್ದಾರೆ. ಹನುಮಂತೇಗೌಡ, ಗಿರೀಶ್ ಶಿವಣ್ಣ, ತರಂಗ ವಿಶ್ವ ಅವರ ನಟನೆಯೂ ಗಮನಸೆಳೆಯಲಿದೆ. ಡಾ. ವಿ. ನಾಗೇಂದ್ರ ಪ್ರಸಾದ್ ಅವರ ಸಾಹಿತ್ಯ, ಫ್ರಾಂಕ್ಲಿನ್ ರಾಕಿ ಅವರ ಹಿನ್ನೆಲೆ ಸಂಗೀತ ಹಾಗೂ ಜೋಯಲ್ ಸಕ್ಕರಿ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ.
ಮೈಸೂರಿನಲ್ಲಿ ಸುಸಜ್ಜಿತ KSRTC ಬಸ್ ನಿಲ್ದಾಣ; ನಿರ್ಮಾಣ ಕಾರ್ಯ ಶೀಘ್ರದಲ್ಲೇ ಪ್ರಾರಂಭ
ಮೈಸೂರು: ಸಾಂಸ್ಕ್ರತಿಕ ನಗರಿ ಮೈಸೂರಿನಲ್ಲಿ ಸುಸಜ್ಜಿತ KSRTC ಬಸ್ ನಿಲ್ದಾಣ ನಿರ್ಮಾಣವಾಗಲಿದೆ. ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ನಿರ್ಮಿಸಲುದ್ದೇಶಿಸಿರುವ ಸುಸಜ್ಜಿತ ಬಸ್ ನಿಲ್ದಾಣ ಕಾಮಗಾರಿಯು ಕಾರ್ಯ ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಮೈಸೂರು ನಗರದಲ್ಲಿ ಸುಮಾರು 14 ಎಕರೆ ಜಾಗದಲ್ಲಿ ಅಂದಾಜು 120 ಕೋಟಿ ರೂಪಾಯಿ ವೆಚ್ಚದಲ್ಲಿ ಸಮಗ್ರ ಸಾರಿಗೆ ಸೌಲಭ್ಯ ಕಲ್ಪಿಸಲು ಪಾರಂಪರಿಕ ಹಾಗೂ ಆಧುನಿಕ ವಿನ್ಯಾಸ ಒಳಗೊಂಡಂತೆ ಬಸ್ ನಿಲ್ದಾಣ ನಿರ್ಮಾಣವಾಗಲಿದೆ ಎಂದು ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ. ಮೈಸೂರು ನಗರದ ಹೃದಯ ಭಾಗದ ಇಕ್ಕಟ್ಟಾದ ಜಾಗದಲ್ಲಿರುವ ಕೇಂದ್ರೀಯ ಬಸ್ ನಿಲ್ದಾಣ (ಸಬ್ ಅರ್ಬನ್)ದ ಮೇಲಿನ ಒತ್ತಡ ತಗ್ಗಿಸಿ, ಪ್ರಯಾಣಿಕರಿಗೆ ಸುಗಮ ಸಾರಿಗೆ ವ್ಯವಸ್ಥೆ ಕಲ್ಪಿಸಲು ಬನ್ನಿಮಂಟಪದಲ್ಲಿರುವ ಡಿಪೋ ಪಕ್ಕದ ಜಾಗದಲ್ಲಿ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣ ಹೊರತುಪಡಿಸಿದರೆ ಅತೀ…
ಅಬಕಾರಿ ಇಲಾಖೆ ಹಗರಣ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ
ಬೆಂಗಳೂರು; ಅಬಕಾರಿ ಇಲಾಖೆಯಲ್ಲಿ 900 ಕೋಟಿ ರೂ. ಭ್ರಷ್ಟಾಚಾರ ನಡೆದಿದ್ದು, ಇದನ್ನು ಕೂಡಲೇ ಸಿಬಿಐ ತನಿಖೆಗೆ ವಹಿಸಬೇಕು. ಸಚಿವ ಆರ್.ಬಿ.ತಿಮ್ಮಾಪುರ ರಾಜೀನಾಮೆ ನೀಡಬೇಕು. ಇದು ಹಣದ ಅವ್ಯವಹಾರವಾಗಿರುವುದರಿಂದ ಜಾರಿ ನಿರ್ದೇಶನಾಲಯ ಕೂಡ ಕ್ರಮ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೆ ಬೆಂಗಳೂರಿನಲ್ಲಿ ರೌಡಿಗಳು ಹಫ್ತಾ ವಸೂಲಿ ಮಾಡುತ್ತಿದ್ದರು. ಈಗ ರೌಡಿಗಳೇ ನಾಚುವಂತೆ ಅಬಕಾರಿ ಸಚಿವ ತಿಮ್ಮಾಪುರ ಅವರು ವಾರಕ್ಕೆ 18 ಕೋಟಿ ರೂ. ವಸೂಲಿ ಮಾಡುತ್ತಿದ್ದಾರೆ. ಅಂದರೆ ವರ್ಷಕ್ಕೆ ಸುಮಾರು 900 ಕೋಟಿ ರೂ. ಲಂಚ ಪಡೆಯಲಾಗುತ್ತಿದೆ. ಪ್ರತಿ ಹುದ್ದೆಯ ಅಧಿಕಾರಿಗಳಿಗೆ ಎಷ್ಟು ಲಂಚ ನೀಡಲಾಗುತ್ತಿದೆ ಎಂದು ಮದ್ಯ ಮಾರಾಟಗಾರರ ಸಂಘ ಪತ್ರದಲ್ಲಿ ವಿವರಿಸಿದೆ. ಮುಖ್ಯಮಂತ್ರಿ ಕಚೇರಿಯ ಅಧಿಕಾರಿ, ಪಿಎ, ಪಿಎಸ್ ಪಡೆಯುತ್ತಿರುವ ಲಂಚದ ಬಗ್ಗೆಯೂ ವಿವರವಿದೆ. ಸಮಬಾಳು ಸಮಪಾಲು ಎಂಬಂತೆ ಸಚಿವ ತಿಮ್ಮಾಪುರ ಎಲ್ಲರಿಗೂ ಲಂಚ ಹಂಚಿದ್ದಾರೆ. ಬಿಜೆಪಿ…
ಈ ತಿಂಗಳ 25 ರಿಂದ ಸಂಸತ್ತಿನ ಅಧಿವೇಶನ; ನವೆಂಬರ್ 26 ಸಂವಿಧಾನ ದಿನ
ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ಈ ತಿಂಗಳ 25 ರಿಂದ ನಡೆಯಲಿದೆ. ಈ ಕುರಿತಂತೆ ಮಂಗಳವಾರ ಮಾಹಿತಿ ನೀಡಿರುವ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಈ ತಿಂಗಳ 25 ರಿಂದ ಡಿಸೆಂಬರ್ 20 ರವರೆಗೆ ನಡೆಯಲಿದೆ ಎಂದು ತಿಳಿಸಿದ್ದಾರೆ. ನವೆಂಬರ್ 26 ಸಂವಿಧಾನ ದಿನ ಆಚರಿಸಲಾಗುತ್ತದೆ. ಭಾರತ ಸಂವಿಧಾನ ಅಳವಡಿಸಿಕೊಂಡು 75 ವರ್ಷಗಳು ಪೂರ್ಣಗೊಂಡ ಹಿನ್ನೆಯಲ್ಲಿ ಈ ತಿಂಗಳ 26 ರಂದು ಸಂಸತ್ ಭವನದ ಸೆಂಟ್ರಲ್ ಹಾಲ್‌ನಲ್ಲಿ ವಿಶೇಷ ಕಾರ್ಯಕ್ರಮ ನಡೆಸಲಾಗುತ್ತದೆ ಎಂದು ಕಿರಣ್ ರಿಜಿಜು ತಿಳಿಸಿದ್ದಾರೆ.
ಸಚಿವೆ ಹೆಬ್ಬಾಳ್ಕರ್ ಪಿಎ ಕಿರುಕುಳಕ್ಕೆ ಅಧಿಕಾರಿ ಸಾವು ಪ್ರಕರಣ; ಅಧಿಕಾರಿಗಳು ನೆಮ್ಮದಿಯಿಂದ ಕೆಲಸ ಮಾಡುವ ವಾತಾವರಣ ಇಲ್ಲ ಎಂದು ಪ್ರತಿಪಕ್ಷ ಆಕ್ರೋಶ
ರಾಮನನಗರ: ಸಚಿವೆ ಹೆಬ್ಬಾಳ್ಕರ್ ಪಿಎ ಕಿರುಕುಳಕ್ಕೆ ಬೇಸತ್ತು ಅಧಿಕಾರಿ ಸಾವಿಗೆ ಶರಣಾಗಿದ್ದಾರೆ ಎಂಬ ಪ್ರಕರಣ ಬಗ್ಗೆ ಪ್ರತಿಪಕ್ಷ ಬಿಜೆಪಿ ಕಳವಳ ವ್ಯಕ್ತಪಡಿಸಿದೆ. ರಾಜ್ಯದಲ್ಲಿ ಅಧಿಕಾರಿಗಳು ನೆಮ್ಮದಿಯಿಂದ ಕೆಲಸ ಮಾಡುವ ವಾತಾವರಣ ಇಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ರಾಮನಗರ ಜಿಲ್ಲೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಖಾಡದಲ್ಲಿ ಎನ್‌ಡಿಎ ಅಭ್ಯರ್ಥಿ ಪರ ಪ್ರಚಾರ ಕೈಗೊಂಡ ಆರ್.ಅಶೋಕ್, ಅಧಿಕಾರಿ ಸಾವಿನ ಬಗ್ಗೆ ಪ್ರತಿಕ್ರಿಯೆ ನೀಡಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕಿರುಕುಳ ತಾಳಲಾರದೆ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ ಮಾಡಿಕೊಂಡರು. ಇದೇ ರೀತಿ ಬೆಳಗಾವಿಯ ಸರ್ಕಾರಿ ಕಚೇರಿಯಲ್ಲಿ ಎಸ್‌ಡಿಎ ರುದ್ರಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಧಿಕಾರಿಗಳು ನೆಮ್ಮದಿಯಿಂದ ಕೆಲಸ ಮಾಡುವ ವಾತಾವರಣ ಸರ್ಕಾರಿ ಕಚೇರಿಗಳಲ್ಲಿ ಇಲ್ಲ. ಹಣ ನೀಡಿದರೆ ಮಾತ್ರ ಇಲ್ಲಿ ಬದುಕಲು ಸಾಧ್ಯ ಎಂದು ಟೀಕಿಸಿದರು. ಏನೇ ಕೇಳಿದರೂ ಎಸ್‌ಐಟಿ ರಚನೆ ಎಂದು ಹೇಳುತ್ತಾರೆ. ಯಾರು ಸತ್ತರೂ ಎಸ್‌ಐಟಿ…
ಸಚಿವ ಭೈರತಿ ಹೆಸರಲ್ಲಿ ಯುವಕರ ಪುಂಡಾಟ; ಕೇರಳ ಮೂಲದ ವ್ಯಕ್ತಿಯ ಆಸ್ತಿಗಾಗಿ ಕಿತ್ತಾಟ; ಪೊಲೀಸರ ಮೇಲೂ ಗೃಹ ಇಲಾಖೆಗೆ ದೂರು
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನೆಲೆಸಿದ್ದ ಕೇರಳ ಮೂಲದ ದಂಪತಿಗಳನ್ನು ದೂರಮಾಡಿ ಅಸ್ತಿ ಕಬಳಿಸಲು ಸಚಿವ ಭೈರತಿ ಸುರೇಶ್ ಅಪ್ತರೆಂದು ಹೇಳಿಕೊಂಡು ಯುವಕರ ಗುಂಪು ದಾಂಧಲೆ ನಡೆಸಿರುವ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ. ರೌಡಿಗಳ ಅಟ್ಟಹಾಸಕ್ಕೆ ಪೊಲೀಸರೂ ಸಾಥ್ ನೀಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಈ ಬಗ್ಗೆ ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ. ಡಿಜಿಪಿ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೂ ಸೋಮವಾರ ದೂರು ಸಲ್ಲಿಕೆಯಾಗಿದೆ. ದಂಪತಿಗಳ ನಡುವಿನ ವಿರಸದ ಪ್ರಕರಣದ ಲಾಭ ಪಡೆಯಲು ರೌಡಿ ಗುಂಪು ಹೆಣ್ಣೂರು ಬಳಿ ನಿವೇಶನವೊಂದಕ್ಕೆ ಏಕಾಏಕಿ ನುಗ್ಗಿ ಪುಂಡಾಟ ಪ್ರದರ್ಶಿಸಿದೆ. ಹೆಣ್ಣೂರು ಗೋಪಿ ಮತ್ತು ಇಪ್ಪತ್ತು ಅಪರಿಚಿತ ವ್ಯಕ್ತಿಗಳ ದಾಂಧಲೆಯನ್ನು ಪ್ರತಿಭಟಿಸಿದ ಜಮೀನು ಮಾಲೀಕ ಶಾಜಿ ಜೋಸೆಫ್ ಅವರ ಕೊಲೆಗೆ ಯತ್ನ ನಡೆದಿದೆ. ಅಷ್ಟೇ ಅಲ್ಲ, ಮಾರಣಾಂತಿಕ ದಾಳಿ ನಡೆಸುವ ರಾಟ್‌ವೀಲರ್ ನಾಯಿಯನ್ನೂ ಕರೆತಂದು ದಾಳಿಗೆ ಯತ್ನಿಸಿದ್ದಾರೆಂದೂ ಸಂತ್ರಸ್ತರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.…