ಚುನಾವಣೆ ನಂತರ ‘ಗೃಹಲಕ್ಷ್ಮಿ’ ಸೇರಿ ಗ್ಯಾರಂಟಿಗಳು ಬಂದ್ ಆಗಲ್ಲ; ಸಿಎಂ ಸ್ಪಷ್ಟನೆ

ಹಾವೇರಿ: ಚುನಾವಣೆ ನಂತರ ‘ಗೃಹಲಕ್ಷ್ಮಿ’ ಸೇರಿ ಗ್ಯಾರಂಟಿಗಳು ಬಂದ್ ಆಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಹಾವೇರಿಯಲ್ಲಿ ಹೇಳಿಕೆ ನೀಡಿರುವ ಸಿದ್ದರಾಮಯ್ಯ, ಚುನಾವಣೆ ಮುಗಿದ ಮೇಲೆ ‘ಗೃಹಲಕ್ಷ್ಮಿ’ ಸೇರಿ ಗ್ಯಾರಂಟಿಗಳನ್ನು ಸರ್ಕಾರ ಬಂದ್ ಮಾಡುತ್ತದೆ ಎಂದು ದೇವೇಗೌಡರು ಪರಮ ಸುಳ್ಳು ಹೇಳುತ್ತಿದ್ದಾರೆ ಎಂದರು. ಸಿದ್ದರಾಮಯ್ಯ ಒಮ್ಮೆ ಮಾತು ಕೊಟ್ಟರೆ ಯಾವುದೇ ಕಾರಣಕ್ಕೂ ಮಾತು ತಪ್ಪಲ್ಲ. ನಮ್ಮ ಸರ್ಕಾರ ಯಾವ ಗ್ಯಾರಂಟಿಗಳನ್ನೂ ನಿಲ್ಲಿಸಲ್ಲ ಎಂದ ಸಿಎಂ, ವಕ್ಫ್ ವಿಚಾರದಲ್ಲೂ ಬಿಜೆಪಿ ಜೊತೆ ಸೇರಿ ಸುಳ್ಳು ಹೇಳುತ್ತಿದ್ದಾರೆ. ಯಾವುದೇ ಕಾರಣಕ್ಕೂ ಒಬ್ಬೇ ಒಬ್ಬ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ ಎಂದೂ ಘೋಷಿಸಿದರು. ಚುನಾವಣೆ ಮುಗಿದ ಮೇಲೆ ‘ಗೃಹಲಕ್ಷ್ಮಿ’ ಸೇರಿ ಗ್ಯಾರಂಟಿಗಳನ್ನು ಸರ್ಕಾರ ಬಂದ್ ಮಾಡುತ್ತದೆ ಎಂದು ದೇವೇಗೌಡರು ಪರಮ ಸುಳ್ಳು ಹೇಳುತ್ತಿದ್ದಾರೆ. ದೇವೇಗೌಡರೇ ಒಂದು ಮಾತು ಹೇಳ್ತೀನಿ, ಸಿದ್ದರಾಮಯ್ಯ ಒಮ್ಮೆ ಮಾತು ಕೊಟ್ಟರೆ ಯಾವುದೇ ಕಾರಣಕ್ಕೂ ಮಾತು ತಪ್ಪಲ್ಲ. ನಮ್ಮ ಸರ್ಕಾರ…

ಶಿಗ್ಗಾವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರೌಡಿ ಶೀಟರ್? ಆಯೋಗಕ್ಕೆ ಮಾಹಿತಿ ನೀಡಲು ಬೊಮ್ಮಾಯಿ ತಯಾರಿ.

ಹಾವೇರಿ: ಶಿಗ್ಗಾವಿ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಯಾಸೀರ್‌ ಅಹ್ಮದ್‌ಖಾನ್‌ ಪಠಾಣ್‌ ವಿರುದ್ಧ ದೂರು ನೀಡಲು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮುಂದಾಗಿದ್ದಾರೆ. ಯಾಸೀರ್‌ ಅಹ್ಮದ್‌ಖಾನ್‌ ಪಠಾಣ್‌ ವಿರುದ್ಧ ರೌಡಿಶೀಟರ್‌ ಓಪನ್‌ ಇದೆ ಎಂದು ಹಾವೇರಿ ಪೊಲೀಸ್‌ ವರಿಷ್ಠಾಧಿಕಾರಿ ಹೇಳಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ವಿರುದ್ಧ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗುವುದು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸುದ್ದಿಗಾರರಿಗೆ ಮಾಹಿತಿ ನೀಡಿರುವ ಬಸವರಾಜ್ ಬೊಮ್ಮಾಯಿ, ಪಠಾಣ್ ತನ್ನ ವಿರುದ್ಧ 17-18 ಪ್ರಕರಣಗಳಿವೆ ಎಂದು ಕಳೆದ ವರ್ಷ ಅಫಿಡವಿಟ್‌ನಲ್ಲಿ ಘೋಷಿಸಿರುವುದನ್ನು ನೆನಪಿಸಿದರು. ಇದೀಗ ಈ ಪ್ರಕರಣಗಳಲ್ಲಿ ಯಾವುದೇ ಸಂಬಂಧವಿಲ್ಲ ಎಂದುಯಾಸೀರ್‌ ಅಹ್ಮದ್‌ಖಾನ್‌ ಪಠಾಣ್‌ ಹೇಳಿದ್ದಾರೆ. ಆದರೆ, ಅವರ ವಿರುದ್ಧ ಇನ್ನೂ ಪ್ರಕರಣಗಳು ಇದೆ ಎಂದು ಪೊಲೀಸ್ ವರಿಷ್ಠಾಧಿಕಾರಿಗಳು ಹೇಳಿದ್ದಾರೆ. ಹಾಗಾಗಿ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ಅವರು ತಿಳಿಸಿದರು.

ಡೆಹ್ರಾಡೂನ್​ನಲ್ಲಿ ಭೀಕರ ಕಾರು ಅಪಘಾತ; ಆರು ಮಂದಿ ಸಾವು

ಡೆಹ್ರಾಡೂನ್: ಉತ್ತರಾಖಂಡದ ಡೆಹ್ರಾಡೂನ್​ನಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ. ಮಂಗಳವಾರ ಬೆಳಗಿನ ಜಾವ ಎರಡು ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಸರಕು ಸಾಗಣೆ ಲಾರಿಯೊಂದು ಒಎನ್​ಜಿಸಿ ಕ್ರಾಸಿಂಗ್​ನಲ್ಲಿ ಡಿಕ್ಕಿ ಹೊಡೆಡಿದ್ದು, ಡಿಕ್ಕಿಯಾದ ರಭಸಕ್ಕೆ ಕಾರು ಮರಕ್ಕೆ ಅಪ್ಪಳಿಸಿ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಹಲವಾರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಅಬಕಾರಿ ಅಕ್ರಮ ಆರೋಪ; ಸಚಿವ ತಿಮ್ಮಾಪುರ ವಜಾಕ್ಕೆ ಪ್ರಲ್ಹಾದ್ ಜೋಶಿ ಆಗ್ರಹ

ಹುಬ್ಬಳ್ಳಿ: ಅಬಕಾರಿ ಅಕ್ರಮದ ಕುರಿತು ಮದ್ಯ ಪೂರೈಕೆದಾರರು, ಸನ್ನದುದಾರರೇ ಸಚಿವ ತಿಮ್ಮಾಪುರ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದಾರೆ. ಅಬಕಾರಿ ಹಗರಣ ಕುರಿತಂತೆ ಪ್ರತಿಕ್ರಿಯಿಸಿರುವ ಅವರು, ಪೂರೈಕೆದಾರರ ಸಮಸ್ಯೆಗಳನ್ನು ಬಗೆಹರಿಸುವುದು ಬಿಟ್ಟು ಮೋದಿ ಅವರ ಬಗ್ಗೆ ಮಾತನಾಡಿದರೆ ಸಿದ್ದರಾಮಯ್ಯ ಅವರು ದೊಡ್ಡವರಾಗುವುದಿಲ್ಲ ಎಂದಿದ್ದಾರೆ. ಅಬಕಾರಿ ಅಕ್ರಮದ ಕುರಿತು ಮದ್ಯ ಪೂರೈಕೆದಾರರು, ಸನ್ನದುದಾರರೇ ಸಚಿವ ತಿಮ್ಮಾಪುರ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಆಗ್ರಹಿಸಿದ್ದರು. ಪೂರೈಕೆದಾರರ ಸಮಸ್ಯೆಗಳನ್ನು ಬಗೆಹರಿಸುವುದು ಬಿಟ್ಟು ಮೋದಿ ಅವರ ಬಗ್ಗೆ ಮಾತನಾಡಿದರೆ ಸಿದ್ದರಾಮಯ್ಯ ಅವರು ದೊಡ್ಡವರಾಗುವುದಿಲ್ಲ. – ಶ್ರೀ @JoshiPralhad , ಕೇಂದ್ರ ಸಚಿವರು pic.twitter.com/uXh6vjrE5N — BJP Karnataka (@BJP4Karnataka) November 11, 2024

ಕನ್ನಡಿಗರ ಸಮಸ್ಯೆಗಳಿಗೆ ಪರಿಹಾರ ಹುಡುಕುವ ಉದ್ದೇಶದಿಂದ ಜೆಡಿಎಸ್ ಪಕ್ಷವು ಬಿಜೆಪಿ ಜೊತೆ ಹೊಂದಾಣಿಕೆ; ಹೆಚ್ಡಿಕೆ

ಬೆಂಗಳೂರು: ಕನ್ನಡಿಗರ ಸಮಸ್ಯೆಗಳಿಗೆ ಪರಿಹಾರ ಹುಡುಕುವ ಉದ್ದೇಶದಿಂದ ಜೆಡಿಎಸ್ ಪಕ್ಷವು ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಉಪಚುನಾವಣಾ ಅಖಾಡದಲ್ಲಿ NDA ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಕುಮಾರಸ್ವಾಮಿ, ರಾಜ್ಯದಲ್ಲಿ ಎರಡನೇ ಬಾರಿಗೆ ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿವೆ. ವೈಯಕ್ತಿಕ ಸಂಬಂಧ ಬೆಳೆಸುವುದಕ್ಕೆ ಮೈತ್ರಿ ಮಾಡಿಕೊಂಡಿಲ್ಲ. ಬದಲಿಗೆ ಕನ್ನಡಿಗರ ಸಮಸ್ಯೆಗಳಿಗೆ ಪರಿಹಾರ ಹುಡುಕುವ ನಿಟ್ಟಿನಲ್ಲಿ ನಾವು ಒಂದಾಗಿದ್ದು, ಭವಿಷ್ಯದಲ್ಲೂ ಉಭಯ ಪಕ್ಷಗಳ ಮೈತ್ರಿ ಮುಂದುವರಿಯಲಿದೆ ಎಂದರು. ರಾಜ್ಯದಲ್ಲಿ ಎರಡನೇ ಬಾರಿಗೆ ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿವೆ. ವೈಯಕ್ತಿಕ ಸಂಬಂಧ ಬೆಳೆಸುವುದಕ್ಕೆ ಮೈತ್ರಿ ಮಾಡಿಕೊಂಡಿಲ್ಲ. ಬದಲಿಗೆ ಕನ್ನಡಿಗರ ಸಮಸ್ಯೆಗಳಿಗೆ ಪರಿಹಾರ ಹುಡುಕುವ ನಿಟ್ಟಿನಲ್ಲಿ ನಾವು ಒಂದಾಗಿದ್ದು, ಭವಿಷ್ಯದಲ್ಲೂ ಉಭಯ ಪಕ್ಷಗಳ ಮೈತ್ರಿ ಮುಂದುವರಿಯಲಿದೆ. – ಶ್ರೀ @hd_kumaraswamy , ಕೇಂದ್ರ ಸಚಿವರು pic.twitter.com/RX5vgVC08l — BJP Karnataka (@BJP4Karnataka)…

ಯೋಗೇಶ್ವರ್’ಗೆ ಕುಮಾರಸ್ವಾಮಿ ಕೈಕೊಟ್ಟರು, ನೀವು ಕೈಹಿಡಿಯಿರಿ; ಚನ್ನಪಟ್ಟಣ ಜನರಿಗೆ ಸಿದ್ದರಾಮಯ್ಯ ಮನವಿ

ಬೆಂಗಳೂರು: ಕ್ಷೇತ್ರದ ಅಭಿವೃದ್ಧಿಯಲ್ಲಿ, ರೈತರಿಗೆ ನೀರು ಕೊಡುವುದರಲ್ಲಿ ನಮ್ಮ ಯೋಗೇಶ್ವರ್ ಆಧುನಿಕ ಭಗೀರಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುಣಗಾನ ಮಾಡಿದ್ದಾರೆ. ಯೋಗೇಶ್ವರ್ ಅವರು ಚನ್ನಪಟ್ಟಣ ಮಣ್ಣಿನ ಮೇಲೆ, ಇಲ್ಲಿನ ರೈತ ಸಮುದಾಯ, ಇಲ್ಲಿನ ಪಶುಪಾಲಕರು, ಗೋ ಸಾಕಾಣಿಕೆದಾರರ ಮೇಲೆ ಅಪಾರ ಪ್ರೀತಿ, ಗೌರವ ಹಾಗೂ ಕಾಳಜಿ ಇಟ್ಟುಕೊಂಡಿದ್ದಾರೆ. ಹೀಗಾಗಿ ರೈತ ಕುಲದ ಉದ್ಧಾರಕ್ಕಾಗಿ ಕೆರೆಗಳನ್ನು ತುಂಬಿಸಿ ಪುಣ್ಯಾತ್ಮ‌ ಎನ್ನಿಸಿಕೊಂಡರು ಎಂದು ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಮಂಡ್ಯ ಲೋಕಸಭೆಯಲ್ಲಿ, ರಾಮನಗರ ವಿಧಾನಸಭೆಯಲ್ಲಿ ನಿಖಿಲ್ ಸೋತಿದ್ದಾರೆ. ಈಗ ಚನ್ನಪಟ್ಟಣಕ್ಕೆ ಕರೆತಂದು ನಿಲ್ಲಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರ ಬಾವ, ದೇವೇಗೌಡರ ಅಳಿಯ ಡಾ.ಮಂಜುನಾಥ್ ಅವರ ಗೆಲುವಿಗೆ ಯೋಗೇಶ್ವರ್ ಅವರು ಬಹಳ ಶ್ರಮಿಸಿದರು. ಆಗಲೇ ವಿಧಾನಸಭಾ ಚುನಾವಣೆಯಲ್ಲಿ ಯೋಗೇಶ್ವರ್ ಅವರಿಗೆ ಬೆಂಬಲಿಸಿ ಗೆಲ್ಲಿಸುವ ಭರವಸೆ ನೀಡಿದ್ದರು. ಆದರೆ…

ಸಚಿವ ಜಮೀರ್‌ ಒಕ್ಕಲಿಗರನ್ನು, ಹಿಂದೂಗಳನ್ನು ಖರೀದಿಸುತ್ತೇನೆಂದು ಹೇಳುತ್ತಿದ್ದಾರೆಯೇ?: ಆರ್‌.ಅಶೋಕ್ ಪ್ರಶ್ನೆ

ರಾಮನಗರ: ಸಚಿವ ಜಮೀರ್‌ ಅಹ್ಮದ್‌ ಅವರು ಒಕ್ಕಲಿಗರನ್ನು ಅಥವಾ ಹಿಂದೂಗಳನ್ನು ಖರೀದಿಸುತ್ತೇನೆ ಎಂದು ಹೇಳುತ್ತಿದ್ದಾರೆಯೇ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಪ್ರಶ್ನಿಸಿದ್ದಾರೆ. ಚನ್ನಪಟ್ಟಣ ಉಪಚುನಾವಣೆಯ ಪ್ರಚಾರದಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಚಾಮರಾಜಪೇಟೆಗೆ ಹೋಗಿ ರ‍್ಯಾಲಿ ಮಾಡಿ ಜಮೀರ್‌ ಅಹ್ಮದ್‌ರನ್ನು ಗೆಲ್ಲಿಸಿ ಅವರಿಗೆ ಜೀವನ ನೀಡಿದ್ದರು. ಅದೇ ಜಮೀರ್‌ ಅಹ್ಮದ್‌ ಈಗ ದೇವೇಗೌಡರ ಕುಟುಂಬವನ್ನು ಖರೀದಿಸುತ್ತೇವೆ ಎಂದು ಹೇಳಿದ್ದಾರೆ. ದೇಶದ ಮಾಜಿ ಪ್ರಧಾನಿ ದೇವೇಗೌಡರು ಕಾವೇರಿ ನೀರು ಹಂಚಿಕೆಗಾಗಿ ಶ್ರಮಿಸಿದರು. ಕುಮಾರಸ್ವಾಮಿಯವರು ರೈತರ ಸಾಲ ಮನ್ನಾ ಮಾಡಿದ್ದರು. ಅಂತಹವರನ್ನು ಖರೀದಿಸುತ್ತೇನೆ ಎಂದು ಜಮೀರ್‌ ಹೇಳುತ್ತಾರೆ. ಇದು ಒಕ್ಕಲಿಗರನ್ನು ಖರೀದಿಸುತ್ತೇವೆಂದು ಅರ್ಥವೇ ಅಥವಾ ಹಿಂದೂಗಳನ್ನು ಖರೀದಿಸುತ್ತೇವೆಂದು ಅರ್ಥವೇ ಎಂದು ಪ್ರಶ್ನೆ ಮಾಡಿದರು. ಈಗಾಗಲೇ ಸಚಿವ ಜಮೀರ್‌ ಅಹ್ಮದ್‌ ರೈತರ ಜಮೀನು ಕಬಳಿಸುತ್ತಿದ್ದಾರೆ. ಈಗ ದೇವೇಗೌಡರ ಕುಟುಂಬ ಖರೀದಿಸಲು ಇರಾಕ್‌, ಇರಾನ್‌ನಿಂದ ಹಣ ಬಂದಿದೆಯೇ? ನಾವು ಮಣ್ಣಿನ ಮಕ್ಕಳಾಗಿದ್ದು,…

ರಾಷ್ಟ್ರೀಯ ಹೆದ್ದಾರಿಯ ಮುಧೋಳ-ಯಲಗೇರಾ ರಸ್ತೆ ಅಭಿವೃದ್ಧಿಗೆ ಚಾಲನೆ

ಕಲಬುರಗಿ: 2023-24 ನೇ ಸಾಲಿನ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಸೇಡಂ ತಾಲೂಕಿನ ರಾಜ್ಯ ಹೆದ್ದಾರಿ-10 ರಿಂದ ಮುಧೋಳ-ಯಲಗೇರಾ (ರಾಷ್ಟ್ರೀಯ ಹೆದ್ದಾರಿ-127) ಕಿ.ಮಿ.9 ರಿಂದ 24.53 ರವರೆಗೆ ಹಾಗೂ ಮದನಾ ಗ್ರಾಮದ ಆಯ್ದ ಭಾಗಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ಸಿಕ್ಕಿದೆ. ಅಂದಾಜು 25 ಕೋಟಿ ರೂಪಾಯಿ ವೆಚ್ಚದ ಈ ಕಾಮಗಾರಿಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಜೀವನೋಪಾಯ, ಉದ್ಯಮಶೀಲತೆ ಸಚಿವ ಡಾ.ಶರಣಪ್ರಕಾಶ ಪಾಟೀಲರು ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಡಾ.ಶರಣಪ್ರಕಾಶ ಪಾಟೀಲ್, ಸೇಡಂ ತಾಲೂಕಿನ ಗ್ರಾಮೀಣ ಭಾಗದ ರಸ್ತೆ ಸುಧಾರಣೆ ಹಾಗೂ ರಾಜ್ಯ-ರಾಷ್ಟ್ರೀಯ ಹೆದ್ದಾರಿ ಕಲ್ಪಿಸುವ ಸೇಡಂ ತಾಲೂಕಿನ‌ ವಿವಿಧ ಗ್ರಾಮಗಳ ರಸ್ತೆ ಬಗ್ಗೆ ಹೆಚ್ಚಿನ ಒತ್ತು ನೀಡಿ ವಿಶೇಷ ಅನುದಾನ‌ ಮುಖಾಂತರ ಸುಧಾರಣೆಗೊಳಿಸಲಾಗುತ್ತಿದೆ ಎಂದರು. ಕಲಬುರಗಿ ಸಂಸದರಾದ ಶ್ರೀ ರಾಧಾಕೃಷ್ಣ ದೊಡ್ಡಮನಿ ಅವರು ಹಾಗೂ ಸೇಡಂ-ಮುಧೋಳ ಬ್ಲಾಕ್ ಕಾಂಗ್ರೆಸ್ ಮುಖಂಡರು,…

ಉಡುಪಿಯಲ್ಲೊಂದು ಅನನ್ಯ ‘ನನ್ನ ನಾಡು ನನ್ನ ಹಾಡು’; ನಾಡಿನ ಗಮನಸೆಳೆದ ‘ಮಣಿಪಾಲ ಶ್ರೀ ದುರ್ಗಾ ಮ್ಯೂಸಿಕ್ ಮೀಟ್’

ಉಡುಪಿ: ಕಡಲತಡಿಯ ನಗರಿ, ದೇವರ ನಾಡು ಉಡುಪಿಯಲ್ಲಿ ‘ಸಂಗೀತ ಸುಗ್ಗಿ’ಯೊಂದು ನಾಡಿನ ಗಮನಸೆಳೆಯಿತು. ಗಾನ ಸರಸ್ವತಿಯರನ್ನು ಉತ್ತೇಜಿಸುವ, ಸಂಗೀತ ಸಾಮ್ರಾಟರನ್ನು ಗುರುತಿಸಿ ಸನ್ಮಾನಿಸುವ ಅನನ್ಯ ಸಂಗೀತ ವೈಭವ ಕಲಾಜಗತ್ತಿನ ಕುತೂಹಲದ ಕೇಂದ್ರಬಿಂದುವಾಯಿತು. ‘ನನ್ನ ನಾಡು ನನ್ನ ಹಾಡು’ ಎಂಬ ಹೆಸರಿನಲ್ಲಿ ಈ ಕಾರ್ಯಕ್ರಮ ನೆರವೇರಿತು. ಗಾನ ಕೋಗಿಲೆಗಳಿಗಾಗಿಯೇ ಸಂಗೀತ ಸ್ಪರ್ಧೆ ಆಯೋಜಿಸುವ ಮೂಲಕ ಸಂಗೀತಾಸಕ್ತರ ಮೆಚ್ಚುಗೆಗೂ ಈ ಕಾರ್ಯಕ್ರಮ ಪಾತ್ರವಾಯಿತು. . ಉಡುಪಿ ಜಿಲ್ಲೆಯ ಲಯನ್ಸ್ (317 ಸಿ) ಹಾಗೂ ರೋಟರಿ ಕ್ಲಬ್ (ಜಿಲ್ಲೆ 3182) ಒಳಗೊಂಡ ಲಯನ್ಸ್ ಕ್ಲಬ್ ಅಂಬಲಪಾಡಿ, ಕಲ್ಯಾಣಪುರ, ಸಂತೆಕಟ್ಟೆ, ಉಡುಪಿ ಚೇತನ ಹಾಗೂ ರೋಟರಿ ಸಂಸ್ಥೆ ಅಂಬಲಪಾಡಿ, ಕಲ್ಯಾಣಪುರ, ಉಡುಪಿ ಮಿಡ್ ಟೌನ್ ಹಾಗೂ ಬ್ರಹ್ಮಾವರ ಇವರ ಸಹಭಾಗಿತ್ವದಲ್ಲಿ ಮಣಿಪಾಲ ‘ಶ್ರೀ ದುರ್ಗಾ ಮ್ಯೂಸಿಕ್ ಮೀಟ್’ ಸಹಯೋಗದೊಂದಿಗೆ ಆಯೋಜಿತವಾದ ‘ನನ್ನ ನಾಡು ನನ್ನ ಹಾಡು’ ಜಿಲ್ಲಾಮಟ್ಟದ ಕನ್ನಡ ಹಾಡುಗಳ ಸ್ಪರ್ಧೆಯಯಲ್ಲೂ ಅನೇಕ…

ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್‌ ಖನ್ನಾ ಅಧಿಕಾರ ಸ್ವೀಕಾರ

ನವದೆಹಲಿ: ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಸಂಜೀವ್‌ ಖನ್ನಾ ಅವರು ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರವಹಿಸಿಕೊಂಡಿದ್ದಾರೆ. ಸೋಮವಾರ ಅವರು ಪ್ರಮಾಣವಚನ ಸ್ವೀಕರಿಸಿದರು. ಈವರೆಗೂ ಸಿಜೆಐ ಡಿ.ವೈ ಚಂದ್ರಚೂಡ್ ಅವರಿಂದ ತೆರವಾದ ಸ್ಥಾನವನ್ನು ನ್ಯಾಯಮೂರ್ತಿ ಸಂಜೀವ್ ಖನ್ನಾ ಅಲಂಕರಿಸಿದ್ದಾರೆ. 1980ರಲ್ಲಿ ದೆಹಲಿ ವಿವಿಯಿಂದ ಕಾನೂನು ಪದವಿಪಡೆದಿರುವ ಇವರು, ಈವರೆಗೂ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಿಟ್ಟಿದ್ದರು. ಚುನಾವಣಾ ಬಾಂಡ್ ರದ್ದತಿ, ಕಣಿವೆ ರಾಜ್ಯ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370 ವಿಧಿ ರದ್ದತಿ ಸಹಿತ ಹಲವು ಪ್ರಕರಣಗಲ್ಲಿ ನ್ಯಾಯಮುರ್ತಿ ಸಂಜೀವ್ ಖನ್ನಾ ಅವರು ನೀಡಿರುವ ತೀರ್ಪು ಗಮನಾರ್ಹ. ಸುಪ್ರೀಂಕೋರ್ಟ್‌ನ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿರುವ ಇವರು ಮೇ. 13, 2025 ರವರೆಗೆ ಅಧಿಕಾರದಲ್ಲಿ ಇರಲಿದ್ದಾರೆ.