ಮುಡಾ ಪ್ರಕರಣ: ಇಡೀ ವರದಿ ರಾಜಕೀಯ ಪ್ರೇರಿತ ಎಂದ ಸಿಎಂ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವರದಿ ರಾಜಕೀಯ ಪ್ರೇರಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಣದ ಅಕ್ರಮ ವರ್ಗಾವಣೆ ಆಗಿರುವ ಬಗ್ಗೆ ಯಾವುದೇ ಸಾಕ್ಷಿಯಿಲ್ಲ. ಮುಡಾದ ಮಾಜಿ ಆಯುಕ್ತ ನಟೇಶ್ ಅವರ ಮೇಲೆ ಇಡಿ ಯವರ ಕ್ರಮ ಕಾನೂನು ಬಾಹಿರ ಮತ್ತು ಮನಿಲ್ಯಾಂಡ್ರಿಂಗ್ ಅಗಿಲ್ಲ ಎಂದು ಹೈಕೋರ್ಟ್ ಹೇಳಿದೆ. ಇಡಿ ಯ ಸಂಪೂರ್ಣ ವರದಿಯನ್ನು ಮಾಧ್ಯಮದಲ್ಲಿ ಬಿಡುಗಡೆ ಮಾಡುವ ಮೂಲಕ ಸಂಪೂರ್ಣ ಪ್ರಕರಣವನ್ನು ಉದ್ದೇಶಪೂರ್ವಕವಾಗಿ ರಾಜಕೀಯಗೊಳಿಸಿದ್ದಾರೆ. ಸರ್ಕಾರ ಹಾಗೂ ಮುಖ್ಯಮಂತ್ರಿ ಹುದ್ದೆಯ ವರ್ಚಸ್ಸಿಗೆ ಕುಂದು ತರುವಂತಹ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು. ಕರ್ನಾಟಕದ ಮುಖ್ಯಮಂತ್ರಿಯಾಗಿರುವ ಕಾರಣದಿಂದ ನನ್ನ ತೇಜೋವಧೆ ಮಾಡಲಾಗುತ್ತಿದೆ. ನನ್ನ ಶ್ರೀಮತಿಯವರಿಗೆ ಇಡಿ ಯವರ ನೋಟೀಸ್ ಬಂದ ಹಿನ್ನೆಲೆಯಲ್ಲಿ ನ್ಯಾಯಾಲಯದಿಂದ ತಡೆಯಾಜ್ಞೆಯನ್ನು ತರಲಾಗಿದೆ. ನನ್ನ ವರ್ಚಸ್ಸಿಗೆ ಭಂಗ ತರಬೇಕೇಂಬ ದುರುದ್ದೇಶದಿಂದ, ಇಂತಹ ಕುಕೃತ್ಯಗಳನ್ನು ಮಾಡಲಾಗುತ್ತಿದೆ. ಆದರೆ ಅವರ…

ಫೈನಾನ್ಸ್ ಸಂಸ್ಥೆಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಮಾಡಬೇಡಿ, ದೂರು ನೀಡಿ: ಸಿಎಂ ಕರೆ

ಮೈಸೂರು: ಫೈನಾನ್ಸ್ ಸಂಸ್ಥೆಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಯಂತಹ ತಪ್ಪು ನಿರ್ಧಾರಗಳನ್ನು ಕೈಗೊಳ್ಳಬಾರದು, ಬದಲಾಗಿ ದೂರು ನೀಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‌ಬಿಐ ನಿಯಮಾವಳಿ ಉಲ್ಲಂಘಿಸುವ, ಹೆಚ್ಚಿನ ಬಡ್ಡಿದರ ವಸೂಲು ಮಾಡುವ ಹಾಗೂ ಕಾನೂನು ಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿದೆ ಎಂದರು. ಜನರು ಆತಂಕಕ್ಕೊಳಗಾಗಿ ಆತ್ಮಹತ್ಯೆಯಂತಹ ತಪ್ಪು ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದು ರಾಜ್ಯದ ಜನರಲ್ಲಿ ವಿನಂತಿಸುತ್ತೇನೆ ಎಂದರು. ಮೈಕ್ರೋ ಫೈನಾನ್ಸ್ ನಿಂದ ಜನರಿಗಾಗುತ್ತಿರುವ ತೊಂದರೆ ನಮ್ಮ ಗಮನದಲ್ಲಿದೆ. ಜನರು ಸಾಲ ಲಭ್ಯವಾಗುವ ಕಡೆ ಸಾಲ ಪಡೆಯುತ್ತಿದ್ದಾರೆ. ಖಾಸಗಿ ಹಣಕಾಸು ಸಂಸ್ಥೆ, ಲೇವಾದೇವಿಗಾರರು ನೀಡುವ ಸಾಲದ ಮೇಲೆ ಹೆಚ್ಚಿನ ಬಡ್ಡಿ ದರವನ್ನು ಹಾಕುವುದಲ್ಲದೇ, ಗೂಂಡಾಗಳ ಮೂಲಕ ಜನರನ್ನು ಹೆದರಿಸಿ, ಅಮಾನವೀಯ ರೀತಿಯಲ್ಲಿ ಸಾಲ ವಸೂಲಾತಿಯಲ್ಲಿ ತೊಡಗಿದ್ದಾರೆ. ಮೈಕ್ರೋ ಫೈನಾನ್ಸ್ ಸಂಸ್ಥೆಗಳು…

ಆಮ್ ಆದ್ಮಿಗೆ ಆಘಾತ; 8 ಶಾಸಕರು ಎಎಪಿ ಪಕ್ಷಕ್ಕೆ ರಾಜೀನಾಮೆ

ನವದೆಹಲಿ: ದೆಹಲಿ ಚುನಾವಣೆಗೆ ಕೇವಲ ಐದು ದಿನ ಇರುವಾಗಲೇ, ಆಮ್ ಆದ್ಮಿ ಪಕ್ಷಕ್ಕೆ ಸ್ವಪಕ್ಷೀಯರೇ ಆಘಾತ ನೀಡಿದ್ದಾರೆ. ಟಿಕೆಟ್ ಸಿಗದೇ ಪಕ್ಷದ ವಿರುದ್ದ ಮುನಿಸಿಕೊಂಡಿದ್ದ 8 ಶಾಸಕರು ಎಎಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ನರೇಶ್ ಯಾದವ್, ರೋಹಿತ್ ಕುಮಾರ್, ರಾಜೇಶ್ ರಿಷಿ, ಮದನ್ ಲಾಲ್, ಪವನ್ ಶರ್ಮಾ, ಮತ್ತು ಭಾವನಾ ಗೌಡ್, ಬಿಎಸ್ ಜೂನ್, ಮತ್ತು ಗಿರೀಶ್ ಸೋನಿ ಅವರು ಆಮ್ ಆದ್ಮಿ ಪಕ್ಷ ತ್ಯಜಿಸಿದ್ದಾರೆ. ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ನಡೆ ಬಗ್ಗೆ ಈ ನಾಯಕರು ನಿರಾಶೆ ವ್ಯಕ್ತಪಡಿಸಿದ್ದಾರೆ. ಈ ಬೆಳವಣಿಗೆಯು ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿಯನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಗುಂಡಿನ ಚಕಮಕಿ; ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಅಕ್ರಮ ನುಸುಳುವಿಕೆಗೆ ಸೇನೆ ಬ್ರೇಕ್ ಹಾಕಿದೆ. ಪೂಂಚ್ ಜಿಲ್ಲೆಯ ಖಾರಿ ಕರ್ಮರಾ ಪ್ರದೇಶದಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿಶಸ್ತ್ರಸಜ್ಜಿತ ಉಗ್ರರ ಗುಂಪು ಒಳನುಸುಳಲು ಯತ್ನಿಸಿದ್ದು ಅದನ್ನು ಯೋಧರು ವಿಫಲಗೊಳಿಸಿದ್ದಾರೆ. ಉಗ್ರರು ಒಳನುಸುಳಲು ಯತ್ನಿಸುತ್ತಿದ್ದಂತೆ ಯೋಧರು ಗುಂಡಿನ ದಾಳಿ ನಡೆಸಿದ್ದಾರೆ. ರಾತ್ರಿ ಹಲವು ಬಾರಿ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಉಗ್ರರನ್ನು ಯೋಧರು ಹೊಡೆದುರುಳಿಸಿದ್ಸ್ದಾರೆ. ಕಾರ್ಯಾಚರಣೆ ಸಂದರ್ಭದಲ್ಲಿ ಭಾರಿ ಪ್ರಮಾಣದ ಶಸ್ತ್ರಾಸ್ತ್ರ, ಮದ್ದು ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂದಿನ 25 ವರ್ಷಗಳಲ್ಲಿ ಭಾರತ ಸಮೃದ್ಧ, ಅಭಿವೃದ್ಧಿ ಹೊಂದಿದ ದೇಶವಾಗಲಿದೆ: ಮೋದಿ ವಿಶ್ವಾಸ

ನವದೆಹಲಿ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶುಕ್ರವಾರ ಸಂಸತ್ತಿನ ಆವರಣದಲ್ಲಿ ಬಜೆಟ್ ಅಧಿವೇಶನ 2025 ಆರಂಭಕ್ಕೂ ಮುನ್ನ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಸಮೃದ್ಧಿಯ ದೇವತೆ ಲಕ್ಷ್ಮಿ ದೇವಿಗೆ ನಮಿಸಿದ ಪ್ರಧಾನಿ, ಬಜೆಟ್ ಅಧಿವೇಶನ ಆರಂಭದ ಈ ಸಂದರ್ಭದಲ್ಲಿ ಇಂದು, ವಿವೇಕ, ಸಮೃದ್ಧಿ ಮತ್ತು ಕಲ್ಯಾಣವನ್ನು ನೀಡುವ ಲಕ್ಷ್ಮಿ ದೇವಿಯನ್ನು ಸ್ಮರಿಸುವುದು ವಾಡಿಕೆಯಾಗಿದೆ ಎಂದು ಹೇಳಿದರು. ದೇಶದ ಪ್ರತಿಯೊಬ್ಬ ಬಡ ಮತ್ತು ಮಧ್ಯಮ ವರ್ಗದ ಸಮುದಾಯದ ಮೇಲೆ ಲಕ್ಷ್ಮಿದೇವಿಯ ವಿಶೇಷ ಕೃಪೆ ಇರಲಿ ಅವರು ಪ್ರಾರ್ಥಿಸಿದರು. ಭಾರತವು ತನ್ನ 75ನೇ ಗಣರಾಜ್ಯೋತ್ಸವ ಪೂರ್ಣಗೊಳಿಸಿದೆ, ಇದು ಪ್ರತಿಯೊಬ್ಬ ಪ್ರಜೆಗೂ ಹೆಮ್ಮೆಯ ವಿಷಯ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. ಅಲ್ಲದೆ, ಪ್ರಜಾಪ್ರಭುತ್ವ ಜಗತ್ತಿನಲ್ಲಿ ಈ ಸಾಧನೆಯು ವಿಶೇಷ ಸ್ಥಾನವನ್ನು ಹೊಂದಿದ್ದು, ಭಾರತದ ಶಕ್ತಿ ಮತ್ತು ಮಹತ್ವವನ್ನು ಪ್ರದರ್ಶಿಸುತ್ತದೆ ಎಂದರು. ಮೂರನೇ ಬಾರಿಗೆ ಸರ್ಕಾರವನ್ನು ರಚಿಸುವ ಜವಾಬ್ದಾರಿಯನ್ನು ತನಗೆ ವಹಿಸಿರುವುದಕ್ಕೆ ದೇಶದ…

ಭ್ರಷ್ಟರ ಬೆನ್ನತ್ತಿದ ಲೋಕಾಯುಕ್ತ; ರಾಜ್ಯದ ಹಲವೆಡೆ ದಾಳಿ

ಬೆಂಗಳೂರು: ಭ್ರಷ್ಟರ ಬೆನ್ನಾತ್ತಿರುವ ಲೋಕಾಯುಕ್ತ ಪೊಲೀಸರು ಶುಕ್ರವಾರ ಬೆಳ್ಳಂಬೆಳಿಗ್ಗೆ ಮತ್ತೆ ಕಾರ್ಯಾಚರಣೆಯ ಅಖಾಡಕ್ಕೆ ಧುಮುಕಿದ್ದಾರೆ. ಬೆಂಗಳೂರು, ಬೆಳಗಾವಿ, ರಾಯಚೂರು, ಬಾಗಲಕೋಟೆ, ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ಕೈಗೊಂಡಿದ್ದಾರೆ. ರಾಯಚೂರಿನಲ್ಲಿ ಜವಾರ್ ಕಾಲೋನಿಯಲ್ಲಿರುವ ಜಿಲ್ಲಾ ಪಂಚಾಯತಿ ಲೆಕ್ಕಪತ್ರ ಸಹಾಯಕ ಅಧಿಕಾರಿ ನರಸಿಂಗರಾವ್ ಅವರ ಮನೆಯ ಮೇಲೆ ದಾಳಿ ನಡೆಸಲಾಗಿದೆ. ಬಾಗಲಕೋಟೆಯ ವಿದ್ಯಾಗಿರಿಯಲ್ಲಿ ಹೊಲಗೇರಿ ಗ್ರಾಮ ಪಂಚಾಯಿತಿ ಪಿಡಿಒ ಹಿರೇಮಠ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಬೆಳಗಾವಿಯ ಪ್ರಭಾರಿ ಸಬ್ ರಿಜಿಸ್ಟ್ರಾರ್ ಸಚಿನ್ ಮಂಡೇದ್ ಅವರ ಬೆಳಗಾವಿ ನಗರದ ಆನಗೋಳದಲ್ಲಿರುವ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ರಾಯಬಾಗ ತಾಲೂಕಿನ ಹಾರೂಗೇರಿ ವೆಟರ್ನರಿ ಇನ್ಸ್ ಪೆಕ್ಟರ್ ಸಂಜಯ್ ಮನೆ ಮೇಲೆ ಮೇಲೂ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

‘ಗ್ರೇಟರ್ ಬೆಂಗಳೂರು’: ಉದ್ಯಾನಗರಿ ಜನದಟ್ಟಣೆ ನಿಯಂತ್ರಣಕ್ಕೆ ಕ್ರಮ

ಬೆಂಗಳೂರು: ರಾಜಧಾನಿ ಬೆಂಗಳೂರು ನಗರದ ಜನದಟ್ಟಣೆಯನ್ನು ಕಡಿಮೆ ಮಾಡಲು ಗ್ರೇಟರ್ ಬೆಂಗಳೂರು ಸೂತ್ರಕ್ಕೆ ಸರ್ಕಾರ ಮನ್ನಣೆ ನೀಡಿದೆ. ಬೆಂಗಳೂರು ಸುತ್ತಮುತ್ತಲ ಮಾಗಡಿ, ಬಿಡದಿ, ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ ಪ್ರದೇಶಗಳನ್ನು ರಸ್ತೆ ಮತ್ತು ರೈಲು ಸಂಪರ್ಕದೊಂದಿಗೆ ಸ್ಯಾಟಲೈಟ್ ಟೌನ್‌ಶಿಪ್‌ಗಳನ್ನಾಗಿ ಅಭಿವೃದ್ಧಿಪಡಿಸುವ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಉಪನಗರ ಯೋಜನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಅವರು ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ. ಬೆಂಗಳೂರು ನಗರದ ಜನದಟ್ಟಣೆಯನ್ನು ಕಡಿಮೆ ಮಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. ಬೈರಮಂಗಲ, ಬಿಡದಿ ಹೋಬಳಿಯ ಬನ್ನಿಗೆರೆ, ಹೊಸೂರು, ಕೆಜಿ ಗೊಲ್ಲರಪಾಳ್ಯ, ಕಂಚುಗಾರನಹಳ್ಳಿ, ಅರಳಲುಸಂದ್ರ, ಕೆಂಪಯ್ಯನಪಾಳ್ಯ, ಕಂಚುಗಾರನಹಳ್ಳಿ ಕವಲು, ಮಂಡಲಹಳ್ಳಿ ಮತ್ತು ಹಾರೋಹಳ್ಳಿ ಹೋಬಳಿಯ ವಡೇರಹಳ್ಳಿ ಈ ಗ್ರೇಟರ್ ಬೆಂಗಳೂರು…

ಜಿಲ್ಲಾಧ್ಯಕ್ಷರ ಆಯ್ಕೆಯಲ್ಲಿ ತನ್ನ ಪಾತ್ರವಿಲ್ಲ; ವಿಜಯೇಂದ್ರ ಸ್ಪಷ್ಟನೆ

ಬೆಂಗಳೂರು: ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಸಂಸದ ಡಾ.ಸುಧಾಕರ್ ಮಾಡಿರುವ ಆರೋಪಗಳನ್ನು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಲ್ಲಗಳೆದಿದ್ದಾರೆ. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರ ಆಯ್ಕೆಯಲ್ಲಿ ತನ್ನ ಪಾತ್ರವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಸುಧಾಕರ್ ಆರೋಪ ಕುರಿತಂತೆ ಪ್ರತಿಕ್ರಿಯಿಸಿರುವ ವಿಜಯೇಂದ್ರ, 23 ಜಿಲ್ಲೆಗಳ ಜಿಲ್ಲಾಧ್ಯಕ್ಷರ ಆಯ್ಕೆ ವಿರೋಧ ವಿಚಾರವಾಗಿ ಕೆಲವರ ಅಸಮಾಧಾನ ಬಗ್ಗೆ ಪ್ರತಿಕ್ರಿಯಿಸಲ್ಲ. ಆದರೆ ಪಕ್ಷದ ರಾಜ್ಯಾಧ್ಯಕ್ಷನಾಗಿ ಯಾವುದೇ ಜಿಲ್ಲೆಯ ಜಿಲ್ಲಾಧ್ಯಕ್ಷರ ಚುನಾವಣೆ ಪ್ರಕ್ರಿಯೆಯಲ್ಲಿ ನನ್ನ ಯಾವುದೇ ಪಾತ್ರ ಇಲ್ಲ ಎಂದು ಸ್ಪಷ್ಟನೆ ನೀಡಿದರು. ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರಿಗೆ ಹೈಕಮಾಂಡ್ ಚುನಾವಣೆಯ ಜವಾಬ್ದಾರಿ ಕೊಟ್ಟಿದ್ದು, 13 ವೀಕ್ಷಕರ ಉಪಸ್ಥಿತಿಯಲ್ಲಿ ಆಯ್ಕೆ ಪ್ರಕ್ರಿಯೆ ನಡೆದಿದೆ. ರಾಜ್ಯದ ಅಧ್ಯಕ್ಷನಾಗಿ ಯಾವುದೇ ಜಿಲ್ಲೆಯ ಚುನಾವಣೆ ಸಂಬಂಧ ಅಭಿಪ್ರಾಯ ಕೊಟ್ಟಿಲ್ಲ, ಕೊಡುವುದಕ್ಕೆ ಅವಕಾಶವೂ ಇಲ್ಲ ಎಂದು ವಿಜಯೇಂದ್ರ ವಿವರಿಸಿದರು.

‘ದಿ ಐ’ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಶ್ರುತಿ ಹಾಸನ್

ಮುಂಬೈ: ಶ್ರುತಿ ಹಾಸನ್ ಹಾಲಿವುಡ್‌ನಲ್ಲಿ ತನ್ನ ಛಾಪು ಮೂಡಿಸಲು ಸಜ್ಜಾಗಿದ್ದಾರೆ. ಈ ನಟಿ ಶೀಘ್ರದಲ್ಲೇ ಅಂತರರಾಷ್ಟ್ರೀಯ ಚಿತ್ರ “ದಿ ಐ” ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಜನವರಿ 28, 2025 ಅವರ ಹುಟ್ಟುಹಬ್ಬದಂದು ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಫಸ್ಟ್ ಲುಕ್ ಅನ್ನು ಬಿಡುಗಡೆ ಮಾಡಿರುವ ಚಿತ್ರದ ನಿರ್ದೇಶಕಿ ಡ್ಯಾಫ್ನೆ ಸ್ಕ್ಮನ್ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ “Happy birthday to the stunning, brave and fierce Shruti Haasan, who will always be “our Diana.” The creators of The Eye in London, Greece, America and India love you and celebrate you on this special day and always! @shrutzhaasan.” ಎಂದು ಬರೆದುಕೊಂಡಿದ್ದಾರೆ. ಶ್ರುತಿ ಹಾಸನ್ ಅವರು ಈ ಚಿತ್ರದಲ್ಲಿ ಡಯಾನಾ ಪಾತ್ರವನ್ನು ನಿರ್ವಹಿಸಲಿದ್ದಾರೆ. ಫಸ್ಟ್-ಲುಕ್ ಪೋಸ್ಟರ್‌ನಲ್ಲಿ…

ಪಾಕಿಸ್ತಾನ ಹುಡುಗನ ಹುಡುಗನ ಕೈ ಹಿಡಿಯಲಿದ್ದಾರೆ ನಟಿ ರಾಖೀ ಸಾವಂತ್

ಒಂದಿಲ್ಲೊಂದು ವಿವಾದಗಳ ಸುದ್ದಿಗಳಿಂದ ಗಮನಸೆಳೆಯುತ್ತಿರುವ ನಟಿ ರಾಖಿ ಸಾವಂತ್ ಅವರು ಇಡೀಗ್ಗ ಮತ್ತೊಂದು ಮದುವೆ ಪ್ರಸ್ತಾಪ ವಿಚಾರದಿಂದ ಮತ್ತೆ ಸುದ್ದಿಯಲ್ಲಿದ್ದಾರೆ. ರಾಖಿ ಸಾವಂತ್ ಅವರು ಇದೀಗ ಮೂರನೇ ಬಾರಿಗೆ ಮದುವೆಯಾಯಾಗುವ ತಯಾರಿಯಲ್ಲಿದ್ದಾರೆ. ಈ ಬಾರಿ ಅವರು ಪಾಕಿಸ್ತಾನದ ಹುಡುಗನ ಕೈ ಹಿಡಿಯಲಿದ್ದಾರೆ ಎನ್ನಲಾಗಿದೆ. ಪಾಕಿಸ್ತಾನದಲ್ಲಿ ಪೊಲೀಸ್ ಅಧಿಕಾರಿ ಆಗಿಯೂ ಕೆಲಸ ಮಾಡುತ್ತಿರುವ ನಟ ಡೊಡಿ ಖಾನ್ ಜೊತೆ ಮದುವೆ ಆಗುವುದಾಗಿ ರಾಖಿ ಸಾವಂತ್ ತಿಳಿಸಿದ್ದಾರೆ. ಡೊಡಿ ಖಾನ್ ಅವರು ತಮಗೆ ಮದುವೆಯ ಪ್ರಸ್ತಾಪ ಮಾಡಿದ್ದಾರೆ ಎಂದು ರಾಖಿ ಸಾವಂತ್​ಗೆ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ದಿಬ್ಬಣ ಕರೆದುಕೊಂಡು ಭಾರತಕ್ಕೆ ಬರಲೇ ಅಥವಾ ದುಬೈಗೆ ಬರಲೇ’ ಎಂದು ಡೊಡಿ ಖಾನ್ ಕೇಳಿದ್ದಾರೆ ಎಂದು ರಾಖಿ ಹೇಳಿದ್ದಾರೆ. ಈಗಾಗಲೇ ಅವರಿಗೆ ಎರಡು ಮದುವೆ ಆಗಿ ಮುರಿದು ಬಿದ್ದಿವೆ. 2019ರಲ್ಲಿ ಅವರು ರಿತೇಶ್ ಸಿಂಗ್ ಜೊತೆ ಮದುವೆ ಆಗಿದ್ದರು. 2022ರಲ್ಲಿ ವಿಚ್ಛೇದನ…