ಬೆಂಗಳೂರು: ಕೇಂದ್ರ ಬಿಜೆಪಿ ಸರ್ಕಾರಾದ ಬೃಹತ್ ಕೈಗಾರಿಕಾ ಸಚಿವರಾಗಿರುವ ಹೆಚ್.ಡಿ.ಕುಮಾರಸ್ವಾಮಿರವರು ಕರ್ನಾಟಕ ರಾಜ್ಯ ಸರ್ಕಾರ ತಮಗೆ ಶಿಷ್ಟಾಚಾರಕ್ಕೆ ಅನುಗುಣವಾಗಿ ನಿಗದಿತ ಸಮಯದಲ್ಲಿ ಹೊಸ ಕಾರನ್ನು ನೀಡಲಿಲ್ಲ ಎಂದು ಆರೋಪಿಸಿರುತ್ತಾರೆ. ಕೇಂದ್ರದಲ್ಲಿ ಸಂಪುಟ ದರ್ಜೆಯ ಸಚಿವ ಸ್ಥಾನ ಪಡೆದು ಆರು ತಿಂಗಳು ಕಳೆದರೂ ಇಲ್ಲಿಯವರೆಗೆ ರಾಜ್ಯದ ಅಭಿವೃದ್ಧಿಗೆ ಇವರು ನೀಡಿರುವ ಕೊಡುಗೆ ಶೂನ್ಯ. ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳಲು ಸಣ್ಣ ಸಣ್ಣ ವಿಷಯಗಳನ್ನು ಸಾರ್ವಜನಿಕವಾಗಿ ಪ್ರಸ್ತಾಪಿಸಿ ಪ್ರಚಾರ ಪಡೆಯಲು ಮುಂದಾಗಿದ್ದಾರೆ ಎಂದು ಕೆಪಿಸಿಸಿ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಟೀಕಿಸಿದ್ದಾರೆ. ರಾಜ್ಯ ಸರ್ಕಾರದ ವತಿಯಿಂದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಅಪೇಕ್ಷೆಯಂತೆ ಹೊಸ ಟೊಯೋಟಾ ಇನ್ನೋವಾ ಹೈಕ್ರಾಸ್ ವಾಹನ ಹಂಚಿಕೆ ಆಗಿದೆ. ಮಂಡ್ಯ ಜಿಲ್ಲಾಧಿಕಾರಿಗಳು ಹೊಸ ಕಾರನ್ನು ಪಡೆಯಲು ಕೇಂದ್ರ ಸಚಿವರನ್ನು ಕೋರಿದ್ದು, ಧನುರ್ಮಾಸದ ಕಾರಣ ನೀಡಿ ಸಂಕ್ರಾಂತಿ ನಂತರ ಹೊಸ ಕಾರು ಪಡೆಯುವುದಾಗಿ ತಿಳಿಸಿರುತ್ತಾರೆ. ರಾಜ್ಯ ಸರ್ಕಾರದ…
Day: January 11, 2025
ಆಶಾ ಕಾರ್ಯಕರ್ತೆಯರಿಗೆ ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ ಮಾಸಿಕ 10 ಸಾವಿರ ರೂ.ಗೌರವಧನ: ಸಿಎಂ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಶಾ ಕಾರ್ಯಕರ್ತೆಯರ ಸೇವೆಯನ್ನು ಪ್ರಶಂಸಿಸಿದ್ದಾರೆ. ಆಶಾ ಕಾರ್ಯಕರ್ತೆಯರಿಗೆ ಮಾಹೆಯಾನ 10 ಸಾವಿರ ರೂ.ಗಳ ಗೌರವಧನವನ್ನು ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ ನೀಡಲು ಸರ್ಕಾರ ಒಪ್ಪಿದೆ ಎಂದವರು ತಿಳಿಸಿದ್ದಾರೆ. ರಾಜ್ಯ ಸರ್ಕಾರದಿಂದ ಪ್ರತಿ ತಿಂಗಳು 5000 ರೂ ಹಾಗೂ ಕೇಂದ್ರ ಸರ್ಕಾರದ 34 ಸೇವೆಗಳಿಗೆ ನೀಡುವ ಗೌರವಧನ ಸೇರಿ ಒಟ್ಟು 10 ಸಾವಿರ ರೂ.ಗಳನ್ನು ತಿಂಗಳಿಗೆ ನೀಡಲಾಗುವುದು ಎಂದು ಪ್ರಕಟಿಸಿದ್ದಾರೆ. <h4><strong>ಪೋರ್ಟಲ್ ಸುಧಾರಣೆಗೆ ಸೂಚನೆ:</strong></h4> ಮಾಹಿತಿಯನ್ನು ಪೋರ್ಟಲ್ ನಲ್ಲಿ ನಮೂದು ಮಾಡುವುದು ಕಷ್ಟ ಸಾಧ್ಯವಾಗಿರುವ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದಾಗ ಪೋರ್ಟಲ್ ಸುಧಾರಣೆ ಮಾಡಿ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ. <h4><strong>ಗೌರವಧನ ನಿಲ್ಲಿಸದೆ ರಜೆ:</strong></h4> ಆಶಾ ಕಾರ್ಯಕರ್ತೆಯರ ಆರೋಗ್ಯ ಕೆಟ್ಟರೆ ಪ್ರತಿ ತಿಂಗಳು ಸಿಗುವ ರಜೆ ಕ್ರೋಡೀಕರಿಸಿ, ಗರಿಷ್ಠ ಮೂರು ತಿಂಗಳವರೆಗೆ ಗೌರವ ಧನ ನಿಲ್ಲಿಸದೆ ರಜೆ ಮಂಜೂರು ಮಾಡಲು ಸಿಎಂ ಸಿದ್ದರಾಮಯ್ಯ…