ಪ್ರಯಾಗ್ರಾಜ್: ಮಹಾ ಕುಂಭಮೇಳ ನಡೆಯುತ್ತಿರುವ ಪ್ರಯಾಗ್ರಾಜ್ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಕುಂಭಮೇಳ ಪ್ರದೇಶದ ಸೆಕ್ಟರ್ 19ರಲ್ಲಿ ಸಿಲಿಂಡರ್ಗಳು ಸ್ಫೋಟಗೊಂಡು ಭಾರೀ ಅನಾಹುತ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಟೆಂಟ್ಗಳು ಹೊತ್ತಿ ಉರಿದಿವೆ. ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ. ವಿವೇಕಾನಂದ ಸೇವಾ ಸಮಿತಿಗೆ ಸೇರಿದ 25ಕ್ಕೂ ಹೆಚ್ಚು ಟೆಂಟ್ಗಳು ಬೆಂಕಿಯಾ ಕೆನ್ನಾಲಿಗೆಗೆ ಭಸ್ಮವಾಗಿವೆ. ಟೆಂಟ್ಗಳಲ್ಲಿ ಇಡಲಾಗಿದ್ದ ಸಿಲಿಂಡರ್ಗಳು ಒಂದೊಂದಾಗಿ ಸ್ಫೋಟಗೊಂಡಿದ್ದರಿಂದಾಗಿ ಬೆಂಕಿ ತೀವ್ರತೆ ಹೆಚ್ಚಾಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ರಕ್ಷಣಾ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
Day: January 19, 2025
ಮಂಗಳೂರು ಶ್ರೀ ವೆಂಕಟ್ರಮಣ ದೇವಸ್ಥಾನ: ‘ಚಂದ್ರ ಮಂಡಲ’ ಆಕರ್ಷಣೆ
ಮಂಗಳೂರು : ನಗರದ ರಥ ಬೀದಿಯಲ್ಲಿರುವ ಶ್ರೀ ವೆಂಕಟ್ರಮಣ ದೇವಸ್ಥಾನದ ಶ್ರೀ ದೇವರ ಉತ್ಸವವಾದಿ ಕಾರ್ಯಕ್ರಮಗಳಿಗಾಗಿ ನೂತನವಾಗಿ ನಿರ್ಮಿಸಲಾದ ಚಂದ್ರ ಮಂಡಲ ವಾಹನದ ಹಸ್ತಾಂತರ ಕಾರ್ಯಕ್ರಮ ಗಮನಸೆಳೆಯಿತು. ಭಾನುವಾರ ಕುಂಭಾಶಿಯಲ್ಲಿರುವ ವಿಶ್ವಕರ್ಮ ಕರಕುಶಲ ಕೇಂದ್ರದಲ್ಲಿ ವಿಶೇಷ ಕೈಂಕರ್ಯ ನೆರವೇರಿತು. ಶ್ರೀ ದೇವಳದ ಮೊಕ್ತೇಸರರಾದ ಸಾಹುಕಾರ್ ಕಿರಣ್ ಪೈ , ಸತೀಶ್ ಪ್ರಭು, ಗಣೇಶ್ ಕಾಮತ್, ಜಗನ್ನಾಥ್ ಕಾಮತ್ ಹಾಗೂ ನೂರಾರು ಸ್ವಯಂಸೇವಕರು ಉಪಸ್ಥಿತಿಯಲ್ಲಿ ಈ ಸೇವೆ ನೆರವೇರಿತು. 20.01.2025 ಸೋಮವಾರ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿ ಪಾದುಕಾ ಪುರಪ್ರವೇಶ, ನೂತನ ಚಂದ್ರ ಮಂಡಲ ವಾಹನ ಪುರಪ್ರವೇಶ, ಕಾಶಿ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಪುರಪ್ರವೇಶ ನಡೆಯಲಿದೆ. ಶ್ರೀ ವೀರ ವೆಂಕಟೇಶ ದೇವರ ಉತ್ಸವ ಕಾರ್ಯಕ್ರಮ ಉದ್ಧಿಶ್ಯ ನೂತನವಾಗಿ ನಿರ್ಮಿಸಲಾದ ಚಂದ್ರಮಂಡಲ ವಾಹನದ ಪುರಪ್ರವೇಶ ಕಾರ್ಯಕ್ರಮ ಜೊತೆಗೆ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮ ಶತಾಬ್ದಿ ಕಾರ್ಯಕ್ರಮ…
VIDEO : ಧರ್ಮಶಾಲಾದಲ್ಲಿ ಪ್ಯಾರಾಗ್ಲೈಡಿಂಗ್ ವೇಳೆ ಅವಘಡ
Tragedy in Dharamshala: 19-year-old Mahima from Gujarat loses life in paragliding mishap #DNAUpdates | #Dharmshala | #paraglidinginhimachal | #himachalpradesh | #Dharmshala | #latestvideo | #viral | #viralvideo pic.twitter.com/UIzY5Mjq4P — DNA (@dna) January 19, 2025
‘ಕೇಂದ್ರದ ಅನುದಾನ ಸಧ್ಭಳಕೆ ಮಾಡದ ಸರ್ಕಾರ ಯಾವ ಪುರುಷಾರ್ಥಕ್ಕೆ ಅಧಿಕಾರದಲ್ಲಿರಬೇಕು?’; ಬಿಜೆಪಿ ಪ್ರಶ್ನೆ
ಬೆಂಗಳೂರು: ಕೇಂದ್ರದಿಂದ ಅನುದಾನ ಬಂದಿಲ್ಲ ಎಂದು ರಾಜ್ಯ ಸರ್ಕಾರ ಸುಳ್ಳು ಹೇಳುತ್ತಿದೆ ಎಂದು ಪ್ರತಿಪಕ್ಷ ಬಿಜೆಪಿ ಆಕ್ರೋಶ ಹೊರಹಾಕಿದೆ. ಕೇಂದ್ರದಿಂದ ಅನುದಾನ ಬಂದಿಲ್ಲ ಎಂದು ಸುಳ್ಳಾಡುವ ಸಿಎಂ ಸಿ ಎಂ ಸಿದ್ದರಾಮಯ್ಯ ಅವರು, ಕೇಂದ್ರದಿಂದ ಬಂದ ಅನುದಾನವನ್ನು ಸರಿಯಾಗಿ ಉಪಯೋಗಿಸಿಕೊಳ್ಳುವ ಯೋಗ್ಯತೆ ಸರ್ಕಾರಕ್ಕಿಲ್ಲ ಎಂಬುದು ಸಾಬೀತುಪಡಿಸಿದ್ದಾರೆ ಎಂದು ಬಿಜೆಪಿ ಹೇಳಿದೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಬಿಜೆಪಿ, ಕೊಟ್ಟ ಅನುದಾನವನ್ನು ಖರ್ಚು ಮಾಡಿ ಸಧ್ಭಳಕೆ ಮಾಡದ ನಿಮ್ಮ ಸರ್ಕಾರ ಯಾವ ಪುರುಷಾರ್ಥಕ್ಕೆ ಅಧಿಕಾರದಲ್ಲಿರಬೇಕು ಎಂದು ಎದಿರೇಟು ನೀಡಿದೆ. ಕೇಂದ್ರ ಸರ್ಕಾರದ ಮೇಲೆ ಸುಳ್ಳು ಆಪಾದನೆ ಮಾಡುವ ನಿಮ್ಮ ಟೂಲ್ ಕಿಟ್ ಅನ್ನು ಬದಿಗಿಟ್ಟು, ಮೊದಲು ಅನುದಾನವನ್ನು ಸದ್ಭಳಕೆ ಮಾಡುವತ್ತ ಗಮನಹರಿಸಿ ಎಂದು ಬಿಜೆಪಿ ಹೇಳಿದೆ.
ಕರ್ನಾಟಕಕ್ಕೆ ಅನುದಾನ; ಕೇಂದ್ರದಿಂದ ಹಣ ಬಿಡುಗಡೆಯ ಭರವಸೆ
ಬೆಂಗಳೂರು: ಕರ್ನಾಟಕಕ್ಕೆ ಅನುದಾನ ಹಂಚಿಕೆ ವಿಚಾರದಲ್ಲಿ ಅನ್ಯಾಯವಾಗಿರುವ ಬಗ್ಗೆ ಸರ್ಕಾರ ಕೇಂದ್ರದ ಗಮನಸೆಳೆದಿದೆ. ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಕರ್ನಾಟಕಕ್ಕೆ ಕರ್ನಾಟಕಕ್ಕೆ ಅನುದಾನ ಹಂಚಿಕೆ ವಿಚಾರದಲ್ಲಿ ಅನ್ಯಾಯವಾಗಿರುವ ಬಗ್ಗೆ ಗಮನಸೆಳೆದಿದೆರಲ್ಲದೆ, ತಮ್ಮ ರಾಜ್ಯಕ್ಕೆ ನ್ಯಾಯಯುತವಾದ ಅನುದಾನವನ್ನು ನೀಡಬೇಕೆಂದು ಒತ್ತಾಯಿಸಿದರು. ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದ ಸಚಿವ ಕೃಷ್ಣ ಬೈರೇಗೌಡ, ಕೇಂದ್ರ ಸರ್ಕಾರ ರಾಜ್ಯಗಳಿಗೆ ತೆರಿಗೆ ಪಾಲು ಹಂಚುವುದರಲ್ಲಿ ಕರ್ನಾಟಕಕ್ಕೆ ನ್ಯಾಯವಾದ ಪಾಲು ನೀಡುತ್ತಿಲ್ಲ. ರಾಜಕೀಯ ಕಾರಣಗಳಿಗಾಗಿ ಅನುದಾನವನ್ನು ಕಡಿತಗೊಳಿಸುವುದು ಸರಿಯಲ್ಲ ಎಂದರು. ಅನುದಾನ ಬಿಡುಗಡೆ ವಿಚಾರದಲ್ಲಿ ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ತಾವು ಒತ್ತಾಯಿಸಿರುವುದಾಗಿ ತಿಳಿಸಿದರು. ಇದೇ ವೇಳೆ, ಯಾವುದೇ ವಿಳಂಬವಿಲ್ಲದೆ ಹಣ ನೀಡಲಿದ್ದು, ಹೆಚ್ಚುವರಿ ಸಂಪನ್ಮೂಲಗಳನ್ನು ಒದಗಿಸಲಾಗುವುದು ಎಂದು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಭರವಸೆ ನೀಡಿದರು…
ಸೈಫ್ ಅಲಿ ಖಾನ್ ಮೇಲಿನ ದಾಳಿ ನಡೆಸಿರೋದು ಒಬ್ಬ ಕಳ್ಳ; ತಾನು ನಟನ ಮನೆಗೆ ನುಗ್ಗಿದ್ದು ಎಂದು ತಿಳಿದಿರಲಿಲ್ಲ
ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲಿನ ದಾಳಿ ನಡೆಸಿದ ಘಟನೆಯನ್ನು ಬೇಧಿಸಿರುವ ಮುಂಬೈ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಭಾನುವಾರ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಡಿಸಿಪಿ ದೀಕ್ಷಿತ್‌ಕುಮಾರ್ ಅಶೋಕ್ ಗೆದಮ್ ಆರೋಪಿಯನ್ನು ಥಾಣೆಯ ಘೋಡ್‌ಬಂದರ್ ರಸ್ತೆಯಲ್ಲಿರುವ ಹಿರಾನಂದಾನಿ ಎಸ್ಟೇಟ್‌ನಲ್ಲಿ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಆರೋಪಿ ಮೊಹಮ್ಮದ್ ಶರೀಫುಲ್ ಇಸ್ಲಾಂ ಶೆಹಜಾದ್ ಬಾಂಗ್ಲಾದೇಶದ ಪ್ರಜೆಯಾಗಿದ್ದಾನೆ. ಕಳ್ಳತನ ಸಂಬಂಧ ಆತ ಮನೆಯೊಳಗೆ ನುಗ್ಗಿದ್ದು, ಆತನಿಗೆ ತಾನು ನತಮ ಮನೆಯೊಳಗೆ ಪ್ರವೇಶಿಸಿದ್ದೇನೆ ಎಂಬುದು ಗೊತ್ತಿರಲಿಲ್ಲ ಎಂಬುದು ಪ್ರಾಥಮಿಕ ವಿಚಾರಣೆ ವೇಳೆ ತಿಳಿದುಬಂದಿದೆ ಎಂದು ಡಿಸಿಪಿ ತಿಳಿಸಿದ್ದಾರೆ. ಆರೋಪಿ ಬಾಂಗ್ಲಾದೇಶದವನಾಗಿದ್ದು, ಭಾರತ ಪ್ರವೇಶಿಸಿದ ನಂತರ ತನ್ನ ಹೆಸರನ್ನು ಬಿಜೋಯ್ ದಾಸ್ ಎಂದು ಬದಲಾಯಿಸಿಕೊಂಡಿದ್ದ ಸಂಗತಿ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ ಎಂದವರು ವಿವರಿಸಿದ್ದಾರೆ.