ಟಿ.ನರಸೀಪುರದ ಕುಂಭಮೇಳಕ್ಕೆ ರೂ‌. 6 ಕೋಟಿ‌ ಅನುದಾನ‌ ಬಿಡುಗಡೆ: ರಾಮಲಿಂಗಾ ರೆಡ್ಡಿ

ಬೆಂಗಳೂರು: ಕರುನಾಡಿನ ಐತಿಹಾಸಿಕ ಕುಂಭಮೇಳವನ್ನು ಈ ಬಾರಿ ಅದ್ಧೂರಿಯಾಗಿ ಆಚರಿಸಲು ಮುಜರಾಯಿ ಮಂತ್ರಿ ರಾಮಲಿಂಗಾ ರೆಡ್ಡಿ ಪಣತೊಟ್ಟಿದ್ದಾರೆ. ಮಹತ್ವದ ನಿರ್ಧಾರವೊಂದರಲ್ಲಿ ರಾಜ್ಯ ಸರ್ಕಾರವು ಟಿ.ನರಸೀಪುರದ ಕುಂಭಮೇಳಕ್ಕೆ ರೂ‌. 6 ಕೋಟಿ‌ ಅನುದಾನ‌ ಬಿಡುಗಡೆ ಮಾಡಿದೆ. ಈ ಬಗ್ಗೆ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿಅವರು ಮಾಹಿತಿ ಹಂಚಿಕೊಂಡಿದ್ದಾರೆ. ಸುಮಾರು ಮೂರೂವರೆ ದಶಕದಿಂದಲೂ ಮೂರು ವರ್ಷಗಳಿಗೊಮ್ಮೆ ಕುಂಭಮೇಳವನ್ನು ತಿನರಸೀಪುರದಲ್ಲಿ ಆಯೋಜಿಸಿಕೊಂಡು ಬರಲಾಗುತ್ತಿದೆ. ಟಿ.ನರಸೀಪುರದ ತ್ರಿವೇಣಿ ಸಂಗಮ ದಕ್ಷಿಣಕಾಶಿಯಲ್ಲಿ ನಡೆಯುವ ಕುಂಭಮೇಳ ಭಾರತೀಯರಿಗೆ ಸನಾತನ ಸಂಸ್ಕೃತಿ ಮತ್ತು ದಿವ್ಯ ಜೀವನ ಧರ್ಮವನ್ನು ಸಾರುವ ಧಾರ್ಮಿಕ ಕಾರ್ಯಕ್ರಮವಾಗಿದೆ. ದಕ್ಷಿಣ ಭಾರತದಲ್ಲಿ ಈ‌ ಪುಣ್ಯಸ್ನಾನವನ್ನು ಪ್ರಾರಂಭಿಸಲು ಪ್ರಮುಖರಾದವರು ಆದಿಚುಂಚನಗಿರಿಯ ಪೀಠಾಧ್ಯಕ್ಷರಾಗಿದ್ದ ಜಗದ್ಗುರು ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಶ್ರೀಕ್ಷೇತ್ರದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ, ಕೈಲಾಸಾಶ್ರಮ ತಿರುಚ್ಚಿ ಮಹಾಸಂಸ್ಥಾನ ಮಠದ ಶ್ರೀ ಜಯೇಂದ್ರಪುರಿ ಮಹಾ ಸ್ವಾಮಿ. ದಕ್ಷಿಣ ಭಾರತದಲ್ಲಿ ಪ್ರತಿ ಮೂರು…

ಪ್ರಯಾಗ್ ರಾಜ್ ಮಹಾಕುಂಭ ಮೇಳ: ಈ ವರೆಗೂ 35 ಕೋಟಿ ಆಸ್ತಿಕರಿಂದ ಪುಣ್ಯ ಸ್ನಾನ

ಪ್ರಯಾಗ್ ರಾಜ್: ಜಗತ್ತಿನ ಅತಿದೊಡ್ಡ ಧಾರ್ಮಿಕ ಕಾರ್ಯಕ್ರಮ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಈ ವರೆಗೂ ಸುಮಾರು 35 ಕೋಟಿ ಆಸ್ತಿಕರು ಸ್ನಾನ ಮಾಡಿದ್ದಾರೆ. ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಸಂಗಮ ಸ್ಥಳದಲ್ಲಿ ಕೋಟ್ಯಂತರ ಜನರು ಸಮಾಗಮವಾಗಿದ್ದು, ವಸಂತ ಪಂಚಮಿಯ ಅಮೃತ ಸ್ನಾನದ ಶುಭ ಸಂದರ್ಭದಲ್ಲಿ ಉತ್ತರ ಪ್ರದೇಶ ಸರ್ಕಾರವು ಅಂಕಿ ಅಂಶ ಬಿಡುಗಡೆ ಮಾಡಿದೆ. ಮಹಾಕುಂಭ ಪ್ರಾರಂಭವಾದಾಗಿನಿಂದ ಈವರೆಗೂ 35 ಕೋಟಿಗೂ ಅಧಿಕ ಜನರು ಸ್ನಾನ ಮಾಡಿದ್ದಾರೆ ಎಂದು ಸರ್ಕಾರ ತಿಳಿಸಿದೆ. ಇನ್ನೂ 23 ದಿನ ಮಹಾಕುಂಭ ಮೇಳ ನಡೆಯಲಿದ್ದು, 50 ಕೋಟಿ ಅಧಿಕ ಜನರು ಸ್ನಾನ ಮಾಡುವ ನಿರೀಕ್ಷೆಯಿದೆ ಎಂದು ಅಂದಾಜಿಸಲಾಗಿದೆ.

ಮಂಡ್ಯದಲ್ಲಿ ಶಾಲಾ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಬಿಜೆಪಿ ಖಂಡನೆ

ಬೆಂಗಳೂರು: ಮಂಡ್ಯದಲ್ಲಿ 8 ವರ್ಷದ ಬಾಲಕಿಯನ್ನು ಬೆದರಿಸಿ ಸರ್ಕಾರಿ ಶಾಲಾ ಅವರಣದಲ್ಲೇ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಮಾಡಿರುವ ಕೃತ್ಯವನ್ನು ಪ್ರತಿಪಕ್ಷ ಬಿಜೆಪಿ ಖಂಡಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ದಿನದಿಂದಲೂ ಮಹಿಳೆಯರಿಗೆ ರಕ್ಷಣೆಯೇ ಇಲ್ಲದಂತಾಗಿದ್ದು ದಿನಕ್ಕೊಂದು ಮಾನಭಂಗ, ಅತ್ಯಾಚಾರ ಪ್ರಕರಣಗಳು ರಾಜ್ಯದ ಜನತೆಯನ್ನು ಬೆಚ್ಚಿ ಬೀಳಿಸುತ್ತಲೇ ಇದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಮಂಡ್ಯದಲ್ಲಿ 8 ವರ್ಷದ ಬಾಲಕಿಯನ್ನು ಬೆದರಿಸಿ ಸರ್ಕಾರಿ ಶಾಲಾ ಅವರಣದಲ್ಲೇ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಮಾಡಿರುವ ಹೃದಯವಿದ್ರಾವಕ ಘಟನೆ ರಾಜ್ಯದಲ್ಲಿ ತಾಂಡವವಾಡುತ್ತಿರುವ ಅರಾಜಕತೆಗೆ ಮತ್ತೊಮ್ಮೆ ಕನ್ನಡಿ ಹಿಡಿದಿದೆ ಎಂಡಿದ್ದಾರೆ. ಮಹಿಳೆಯರ ಮೇಲೆ ಅತ್ಯಾಚಾರವಾದರೆ ಬಿಜೆಪಿ ಕಾಲದಲ್ಲಿ ರೇಪ್ ಆಗಿಲ್ಲವಾ ಎಂದು ಸಿಎಂ ಸಿದ್ದರಾಮಯ್ಯ ಅವರು ಉಡಾಫೆ ಕೊಡುಕೊಡುತ್ತಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡಿರುವ ಅಶೋಕ್, ಈ ಸರ್ಕಾರದ ಈ ಸಂವೇದನಾರಹಿತ…

ಸಂಘ ಕಾರ್ಯ ಮಹಾಕಾರ್ಯ; ಪ್ರಯಾಗರಾಜ್’ನಲ್ಲಿ ಭಕ್ತರಿಗೆ ದೃಷ್ಟಿ ನೀಡುತ್ತಿರುವ ‘ನೇತ್ರ ಮಹಾಕುಂಭ’

ಪ್ರಯಾಗರಾಜ್‌: ಜಗದ್ವಿಖ್ಯಾತ ಕುಂಭಮೇಳ ನಡೆಯುತ್ತಿರುವ ಪ್ರಯಾಗರಾಜ್‌ ಹಲವು ವಿಶೇಷತೆಗಳಿಂದ ಗಮನಸೆಳೆಯುತ್ತಿದೆ. ಮಹಾ ಕುಂಭಕ್ಕೆ ಆಗಮಿಸುವ ಭಕ್ತರಿಗಾಗಿ ‘ನೇತ್ರ ಮಹಾಕುಂಭ’ ಹೆಸರಿನ ವಿಶೇಷ ಶಿಬಿರವನ್ನು ಸ್ಥಾಪಿಸಲಾಗಿದೆ. ಈ ಶಿಬಿರದಲ್ಲಿ ಉಚಿತ ಕಣ್ಣಿನ ಪರೀಕ್ಷೆ, ಚಶ್ಮೆ ಹಾಗೂ ಔಷಧಿಗಳನ್ನು ವಿತರಿಸಲಾಗುತ್ತಿದೆ. ಜನವರಿ 13 ರಿಂದ ಕಾರ್ಯನಿರ್ವಹಿಸುತ್ತಿರುವ ಈ ಶಿಬಿರವು ಅಗತ್ಯವಿರುವವರಿಗೆ ಉಚಿತ ಕಣ್ಣು ಶಸ್ತ್ರಚಿಕಿತ್ಸೆಯನ್ನೂ ಒದಗಿಸುತ್ತಿದ್ದು, ಕಣ್ಣು ದಾನ ಕುರಿತು ಜನಜಾಗೃತಿ ಮೂಡಿಸುತ್ತಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘ (RSS), ಸಕ್ಷಮ್ ಫೌಂಡೇಶನ್ ಹಾಗೂ ಇತರ ಸಾಮಾಜಿಕ ಸಂಘಟನೆಯ ಸಹಯೋಗದಲ್ಲಿ ಈ ಶಿಬಿರವನ್ನು ಆಯೋಜಿಸಲಾಗಿದ್ದು, ದಿನನಿತ್ಯ ಸಾವಿರಾರು ಯಾತ್ರಿಕರಿಗೆ ಆರೋಗ್ಯ ಸೇವೆಯನ್ನು ನೀಡುತ್ತಿದೆ. ಈ ಬಾರಿ ‘ನೇತ್ರ ಮಹಾಕುಂಭ’ದ ಉದ್ದೇಶ ಐದು ಲಕ್ಷ ಜನರಿಗೆ ಉಚಿತ ಕಣ್ಣಿನ ಆರೈಕೆ ನೀಡುವ ಪ್ರಯತ್ನ ಸಾಗಿದೆ. ಇದರಲ್ಲಿ ಮೂರು ಲಕ್ಷ ಜನರಿಗೆ ಉಚಿತ ಕಣ್ಣು ಪರೀಕ್ಷೆ, ಚಶ್ಮೆ ಹಾಗೂ ಔಷಧಿ ವಿತರಣೆ ಸೇರಿದಂತೆ ಉಚಿತ…

MSME ಗಳಿಗೆ ವರ್ಗೀಕರಣ ಮಾನದಂಡಗಳಲ್ಲಿ ಪರಿಷ್ಕರಣೆ; ಹೂಡಿಕೆ ಮತ್ತು ವಹಿವಾಟು ಮಿತಿ 2 ಪಟ್ಟು ಹೆಚ್ಚಳ

ಕೇಂದ್ರ ಬಜೆಟ್: ಅತಿಸಣ್ಣ (ಮೈಕ್ರೋ) ಮತ್ತು ಸಣ್ಣ ಉದ್ಯಮಗಳಿಗೆ ಕನಿಷ್ಠ ಸಾಲದ ಮೊತ್ತ 5 ಕೋಟಿ ರೂ.ಗಳಿಂದ 10 ಕೋಟಿ ರೂ.ಗಳಿಗೆ ಹೆಚ್ಚಳ.. ಮುಂದಿನ 5 ವರ್ಷಗಳಲ್ಲಿ 1.5 ಲಕ್ಷ ಕೋಟಿ ರೂ.ಗಳ ಹೆಚ್ಚುವರಿ ಸಾಲ..

ಕೇಂದ್ರ ಬಜೆಟ್: ವಿಮಾ ವಲಯದಲ್ಲಿ FDI ಮಿತಿ ಶೇ 74 ರಿಂದ ಶೇ 100ಕ್ಕೆ ಹೆಚ್ಚಳ

ನವದೆಹಲಿ: ಮುಂದಿನ ಐದು ವರ್ಷಗಳಲ್ಲಿ ನಮ್ಮ ಬೆಳವಣಿಗೆಯ ಸಾಮರ್ಥ್ಯ ಮತ್ತು ಜಾಗತಿಕ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುವ ಆರು ಕ್ಷೇತ್ರಗಳಲ್ಲಿ ಪರಿವರ್ತನಾತ್ಮಕ ಸುಧಾರಣೆಗಳನ್ನು ಪ್ರಾರಂಭಿಸುವ ಗುರಿಯನ್ನು 2025-26ನೇ ಸಾಲಿನ ಬಜೆಟ್ ಹೊಂದಿದೆ ಎಂದು ಕೇಂದ್ರ ಹಣಕಾಸು ಮತ್ತು ಸಾಂಸ್ಥಿಕ ವ್ಯವಹಾರಗಳ ಸಚಿವರಾದ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ 2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿ ಮಾಹಿತಿ ನೀಡಿದ್ದಾರೆ. ಈ ಕ್ಷೇತ್ರಗಳಲ್ಲಿ ಹಣಕಾಸು ವಲಯವೂ ಒಂದಾಗಿದ್ದು, ಇದು ವಿಮೆ, ಪಿಂಚಣಿಗಳು, ದ್ವಿಪಕ್ಷೀಯ ಹೂಡಿಕೆ ಒಪ್ಪಂದಗಳು (ಬಿಐಟಿಎಸ್) ಮತ್ತು ಮುಂತಾದ ಕ್ಷೇತ್ರಗಳನ್ನು ಒಳಗೊಂಡಿದೆ. ವಿಮಾ ಕ್ಷೇತ್ರದಲ್ಲಿ ಎಫ್.ಡಿ.ಐ ವಿಮಾ ವಲಯದಲ್ಲಿ ವಿದೇಶಿ ನೇರ ಹೂಡಿಕೆ – ಎಫ್.ಡಿ.ಐ ಮಿತಿ ಶೇ 74 ರಿಂದ ಶೇ 100ಕ್ಕೆ ಹೆಚ್ಚಳ ಮಾಡಲಾಗುತ್ತಿದೆ ಎಂದು ಶ್ರೀಮತಿ ನಿರ್ಮಲಾ ಸೀತಾರಾಮನ್ ಹೇಳಿದರು. ಈ ಹೆಚ್ಚಳದ ಮಿತಿಯು ಸಂಪೂರ್ಣ ಪ್ರೀಮಿಯಂ ಭಾರತದಲ್ಲಿ ಹೂಡಿಕೆ ಮಾಡುವ ಕಂಪನಿಗಳಿಗೆ ಲಭ್ಯವಿರುತ್ತದೆ. ವಿದೇಶಿ ಹೂಡಿಕೆಗೆ ಸಂಬಂಧಿಸಿದ…

ಪ್ರಣಾಳಿಕೆಯಲ್ಲಿ ಹೇಳಿದಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಿ: ಅಶೋಕ ಆಗ್ರಹ

ಬೆಂಗಳೂರು: ಕಾಂಗ್ರೆಸ್‌ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದಂತೆಯೇ, ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಳ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ. ಸ್ವಾತಂತ್ರ್ಯ ಉದ್ಯಾನದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಆರ್‌.ಅಶೋಕ ಭೇಟಿ ನೀಡಿದರು. ನಂತರ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಮಾಡುತ್ತಿದ್ದು, ಅವರ ಮೇಲೆ ಪೊಲೀಸರು ದೌರ್ಜನ್ಯ ಮಾಡಿದ್ದಾರೆ. ಗಂಟು ಮೂಟೆ ಕಟ್ಟಿಕೊಂಡು ಮನೆಗೆ ಹೋಗಿ ಎಂದು ಬೆದರಿಸಿದ್ದಾರೆ. ಅವರಿಗೆ ಪ್ರತಿಭಟನೆಗೆ ಅವಕಾಶ ನೀಡುತ್ತಿಲ್ಲ. ಅವರಿಗೆ ಕುಡಿಯುವ ನೀರು, ಶೌಚಾಲಯ, ಟೆಂಟ್‌ ಮೊದಲಾದ ಸೌಲಭ್ಯ ನೀಡುತ್ತಿಲ್ಲ. ಕಾಂಗ್ರೆಸ್‌ ಪಕ್ಷದ ಪ್ರಣಾಳಿಕೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ 15,000 ರೂ. ಹಾಗೂ ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ 7,000 ರೂ. ನೀಡಲಾಗುವುದು ಎಂದು ಘೋಷಿಸಲಾಗಿದೆ. ಇದರಂತೆಯೇ ಈಗಲೇ ಸರ್ಕಾರ ಗೌರವಧನ ನೀಡಲಿ ಎಂದು ಆಗ್ರಹಿಸಿದರು. ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆಗೆ ಬಿಜೆಪಿ ಬೆಂಬಲ ನೀಡುತ್ತಿದೆ. ಅವರನ್ನು ಕರೆದು ಮಾತಾಡಿ…

ಕೇಂದ್ರ ಬಜೆಟ್: 25,000 ಕೋಟಿ ರೂ.ಗಳ ಸಾಗರ ಅಭಿವೃದ್ಧಿ ನಿಧಿ ಪ್ರಸ್ತಾವನೆ

ನವದೆಹಲಿ: ಕಡಲ ಉದ್ಯಮಕ್ಕೆ ದೀರ್ಘಾವಧಿಯ ಹಣಕಾಸಿಗಾಗಿ, ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು 25,000 ಕೋಟಿ ರೂಪಾಯಿಗಳ ಕಾರ್ಪಸ್‌ನೊಂದಿಗೆ ಸಮುದ್ರ ಅಭಿವೃದ್ಧಿ ನಿಧಿಯನ್ನು ಸ್ಥಾಪಿಸಲು ಪ್ರಸ್ತಾಪಿಸಿದ್ದಾರೆ. ಸಂಸತ್ತಿನಲ್ಲಿ ತಮ್ಮ ಬಜೆಟ್ ಭಾಷಣದಲ್ಲಿ ಇದನ್ನು ಪ್ರಕಟಿಸಿದ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರು, ಈ ಕಾರ್ಪಸ್ ಅನ್ನು ಕಡಲ ಉದ್ಯಮಕ್ಕೆ ಬೆಂಬಲ ಮತ್ತು ಸ್ಪರ್ಧೆಯನ್ನು ಉತ್ತೇಜಿಸಲು ವಿತರಿಸಲಾಗಿದೆ ಎಂದು ಹೇಳಿದರು. ನಿಧಿಯು ಸರ್ಕಾರದಿಂದ ಶೇಕಡಾ 49 ರಷ್ಟು ಕೊಡುಗೆಯನ್ನು ಹೊಂದಿರುತ್ತದೆ ಮತ್ತು ಬಾಕಿಯನ್ನು ಬಂದರುಗಳು ಮತ್ತು ಖಾಸಗಿ ವಲಯದಿಂದ ಕ್ರೋಢೀಕರಿಸಲಾಗುತ್ತದೆ ಎಂದರು. ವೆಚ್ಚದ ಅನಾನುಕೂಲಗಳನ್ನು ಪರಿಹರಿಸಲು ಹಡಗು ನಿರ್ಮಾಣ ಹಣಕಾಸು ನೆರವು ನೀತಿಯನ್ನು ಪರಿಷ್ಕರಿಸಲಾಗುವುದು. ಇದು ವೃತ್ತಾಕಾರದ ಆರ್ಥಿಕತೆಯನ್ನು ಉತ್ತೇಜಿಸಲು ಭಾರತೀಯ ಯಾರ್ಡ್‌ಗಳಲ್ಲಿ ಹಡಗು ವಿಲೇವಾರಿಗೆ ಕ್ರೆಡಿಟ್ ಟಿಪ್ಪಣಿಗಳನ್ನು ಒಳಗೊಂಡಿರುತ್ತದೆ. ಇದಲ್ಲದೆ, ನಿಗದಿತ ಗಾತ್ರಕ್ಕಿಂತ ಹೆಚ್ಚಿನ ದೊಡ್ಡ ಹಡಗುಗಳನ್ನು ಮೂಲಸೌಕರ್ಯ ಸಾಮರಸ್ಯದ ಮಾಸ್ಟರ್ ಪಟ್ಟಿ…

ಬಿಎಂಟಿಸಿ-ಕೆನರಾ ಬ್ಯಾಂಕ್ ಒಡಂಬಡಿಕೆ; ನೌಕರರಿಗೆ ವಿಮೆ, ಮೃತರ ಅವಲಂಬಿತರಿಗೆ ಪರಿಹಾರ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಕೆನರಾ ಬ್ಯಾಂಕ್ ನೊಂದಿಗೆ ರೂ. 1.5 ಕೋಟಿ ಅಪಘಾತ ಪರಿಹಾರ ವಿಮಾ ಯೋಜನೆಯ ಒಡಂಬಡಿಕೆ ಮಾಡಿಕೊಂಡಿದ್ದು, ಮೃತರ ಅವಲಂಬಿತರಿಗೆ ರೂ. 1 ಕೋಟಿ ವಿಮಾ ಪರಿಹಾರ ಮೊತ್ತದ ಚೆಕ್ ವಿತರಣಾ ಕಾರ್ಯಕ್ರಮ ನಡೆಯಿತು. ಬೆಂ.ಮ.ಸಾ.ಸಂಸ್ಥೆಯು ಒಟ್ಟು 51 ಘಟಕಗಳನ್ನು ಹೊಂದಿದದ್ದು, ಪ್ರತಿದಿನ 5861 ಅನುಸೂಚಿಗಳಿಂದ 61536 ಸುತ್ತುವಳಿಗಳನ್ನು 12.04 ಲಕ್ಷ ಕಿ.ಮೀ.ಗಳಲ್ಲಿ ಆಚರಣೆಗೊಳಿಸಲಾಗುತ್ತಿದೆ. ಪ್ರತಿ ದಿನ ಸರಾಸರಿ 40 ಲಕ್ಷ ಪ್ರಯಾಣಿಕರು ಸಂಸ್ಥೆಯ ಸಾರಿಗೆಗಳ ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದಾರೆ. ನಗರದಲ್ಲಿ ವಾಯುಮಾಲಿನ್ಯ ತಗ್ಗಿಸುವ ನಿಟ್ಟಿನಲ್ಲಿ ಪ್ರಸ್ತುತ 1279 ಎಲೆಕ್ನಿಕ್ ಬಸ್ಸುಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ ಹಾಗೂ ಮುಂದಿನ ದಿನಗಳಲ್ಲಿ 352 ಎಲೆಕ್ನಿಕ್ ಬಸ್ಸುಗಳನ್ನು ಸೇರ್ಪಡೆಗೊಳಿಸಲು ಯೋಜಿಸಲಾಗಿದೆ. ಪ್ರಸ್ತುತ ಒಟ್ಟು 6158 ವಾಹನಗಳನ್ನು ಹೊಂದಿದ್ದು, ಪರಿಸರಸ್ನೇಹಿ ಹಾಗೂ ವಾಯುಮಾಲಿನ್ಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಎಲೆಕ್ನಿಕ್ ಬಸ್ಸುಗಳನ್ನು ಕಾರ್ಯಾಚರಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಇದರ ಜೊತೆಯಲ್ಲೇ, ನಿಗಮದ ನೌಕರರ…