ಬೆಂಗಳೂರು: ಕರುನಾಡಿನ ಐತಿಹಾಸಿಕ ಕುಂಭಮೇಳವನ್ನು ಈ ಬಾರಿ ಅದ್ಧೂರಿಯಾಗಿ ಆಚರಿಸಲು ಮುಜರಾಯಿ ಮಂತ್ರಿ ರಾಮಲಿಂಗಾ ರೆಡ್ಡಿ ಪಣತೊಟ್ಟಿದ್ದಾರೆ. ಮಹತ್ವದ ನಿರ್ಧಾರವೊಂದರಲ್ಲಿ ರಾಜ್ಯ ಸರ್ಕಾರವು ಟಿ.ನರಸೀಪುರದ ಕುಂಭಮೇಳಕ್ಕೆ ರೂ. 6 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಈ ಬಗ್ಗೆ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿಅವರು ಮಾಹಿತಿ ಹಂಚಿಕೊಂಡಿದ್ದಾರೆ. ಸುಮಾರು ಮೂರೂವರೆ ದಶಕದಿಂದಲೂ ಮೂರು ವರ್ಷಗಳಿಗೊಮ್ಮೆ ಕುಂಭಮೇಳವನ್ನು ತಿನರಸೀಪುರದಲ್ಲಿ ಆಯೋಜಿಸಿಕೊಂಡು ಬರಲಾಗುತ್ತಿದೆ. ಟಿ.ನರಸೀಪುರದ ತ್ರಿವೇಣಿ ಸಂಗಮ ದಕ್ಷಿಣಕಾಶಿಯಲ್ಲಿ ನಡೆಯುವ ಕುಂಭಮೇಳ ಭಾರತೀಯರಿಗೆ ಸನಾತನ ಸಂಸ್ಕೃತಿ ಮತ್ತು ದಿವ್ಯ ಜೀವನ ಧರ್ಮವನ್ನು ಸಾರುವ ಧಾರ್ಮಿಕ ಕಾರ್ಯಕ್ರಮವಾಗಿದೆ. ದಕ್ಷಿಣ ಭಾರತದಲ್ಲಿ ಈ ಪುಣ್ಯಸ್ನಾನವನ್ನು ಪ್ರಾರಂಭಿಸಲು ಪ್ರಮುಖರಾದವರು ಆದಿಚುಂಚನಗಿರಿಯ ಪೀಠಾಧ್ಯಕ್ಷರಾಗಿದ್ದ ಜಗದ್ಗುರು ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಶ್ರೀಕ್ಷೇತ್ರದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ, ಕೈಲಾಸಾಶ್ರಮ ತಿರುಚ್ಚಿ ಮಹಾಸಂಸ್ಥಾನ ಮಠದ ಶ್ರೀ ಜಯೇಂದ್ರಪುರಿ ಮಹಾ ಸ್ವಾಮಿ. ದಕ್ಷಿಣ ಭಾರತದಲ್ಲಿ ಪ್ರತಿ ಮೂರು…