ಪ್ರಯಾಗ್‌ರಾಜ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಮತ್ತು ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾನುವಾರ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು. ಜನವರಿ 13 ರಂದು ಪ್ರಾರಂಭವಾಗಿ ಫೆಬ್ರವರಿ 26 ರವರೆಗೆ ನಡೆಯಲಿರುವ ಈ ಧಾರ್ಮಿಕ ಕಾರ್ಯಕ್ರಮವು ಈಗಾಗಲೇ ದೇಶಾದ್ಯಂತ ಮತ್ತು ಅದರಾಚೆಗಿನ ಲಕ್ಷಾಂತರ ಭಕ್ತರನ್ನು ಆಕರ್ಷಿಸಿದೆ.ಈ ಇಬ್ಬರೂ ನಾಯಕರು ತಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಉತ್ತರ ಪ್ರದೇಶ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದರು ಮತ್ತು ಭವ್ಯವಾದ ಆಧ್ಯಾತ್ಮಿಕ ಸಭೆಗಾಗಿ ಮಾಡಿದ ವ್ಯವಸ್ಥೆಗಳನ್ನು ಶ್ಲಾಘಿಸಿದರು. ತಮ್ಮ ಈ ಅಪೂರ್ವ ಕ್ಷಣ ಬಗ್ಗೆ ಅನುಭವ ಹಂಚಿಕೊಂಡ ಡಿ.ಕೆ.ಶಿವಕುಮಾರ್, ‘ಇದು ಒಬ್ಬರ ಜೀವನದಲ್ಲಿ ಒಂದು ಐತಿಹಾಸಿಕ ಕ್ಷಣ. ಇಲ್ಲಿ ನೆರೆದಿರುವ ಕೋಟ್ಯಂತರ ಭಕ್ತರಿಗೆ ವ್ಯವಸ್ಥೆಗಳನ್ನು ನಿರ್ವಹಿಸುವಲ್ಲಿ ಸಂಘಟಕರು ಅದ್ಭುತ ಕೆಲಸ ಮಾಡಿದ್ದಾರೆ. ನನ್ನ ಕುಟುಂಬ ಮತ್ತು ನಾನು ಪವಿತ್ರ ಸ್ನಾನ ಮಾಡಿದ್ದಕ್ಕೆ ತುಂಬಾ ಸಂತೋಷವಾಗಿದೆ’…
Day: February 9, 2025
ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅತಿಶಿ ಅವರು ರಾಜೀನಾಮೆ
ವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಸೋಲನುಭವಿಸಿದ ಹಿನ್ನೆಲೆಯಲ್ಲಿ ಹೊಸ ಸರ್ಕಾರ ರಚಿಸಲು ಅನುಕೂಲವಾಗುವಂತೆ ಮುಖ್ಯಮಂತ್ರಿ ಅತಿಶಿ ಅವರು ರಾಜೀನಾಮೆ ನೀಡಿದ್ದಾರೆ. ಭಾನುವಾರ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರಿಗೆ ಅತಿಶಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಕಲ್ಕಾಜಿ ಕ್ಷೇತ್ರದಲ್ಲಿ ಅತಿಶಿ ಅವರು ಗೆಲುವು ಸಾಧಿಸಿದ್ದಾರೆ. ಆದರೆ ಅವರ ಪಕ್ಷ ಬಹುಮತ ಗಳಿಸುವಲ್ಲಿ ವಿಫಲವಾಗಿದೆ. ಫೆಬ್ರುವರಿ 5 ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ 48 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಎಎಪಿ 22 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ ಶೂನ್ಯಕ್ಕೆ ಸಾಧನೆ ಮಾಡಿದೆ.
ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್: ಭದ್ರತಾಪಡೆ ಗುಂಡಿಗೆ 31 ನಕ್ಸಲರು ಬಲಿ
ಬಿಜಾಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ 31 ನಕ್ಸಲರ ಹತ್ಯೆಯಾಗಿದೆ. ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ಭಾನುವಾರ ಬೆಳಗ್ಗೆ ಭದ್ರತಾ ಪಡೆಗಳು ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸಿವೆ. ಆ ವೇಳೆ ಎನ್‌ಕೌಂಟರ್‌ನಲ್ಲಿ 31 ನಕ್ಸಲರನ್ನು ಭದ್ರತಾ ಸಿಬ್ಬಂದಿ ಹೊಡೆದುರುಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡಿನ ಚಕಮಕಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಯೂ ನಕ್ಸಲರ ಗುಂಡಿಗೆ ಬಲಿಯಾಗಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಡಾಲಿ -ಧನ್ಯತಾ ಜೋಡಿ ಬಗ್ಗೆ ಸುಂದರ ವೀಡಿಯೋ; ಮದುವೆಗೆ ಆಹ್ವಾನ..
ಡಾಲಿ ಧನಂಜಯ್ ಅವರು ಫೆಬ್ರವರಿ 16 ರಂದು ಮೈಸೂರಿನಲ್ಲಿ ವೈದ್ಯೆ ಧನ್ಯತಾ ಅವರನ್ನು ಮದುವೆಯಾಗುತ್ತಿದ್ದಾರೆ. ಮದುವೆಗೆ ಅಭಿಮಾನಿ ಬಳಗವನ್ನು ಆಹ್ವಾನಿಸಿರುವ ಅವರು ಸುಂದರ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಧನಂಜಯ್-ಧನ್ಯತಾ ಜೋಡಿ ನಿಶ್ಚಿತಾರ್ಥ ಮಾಡಿಕೊಂಡಿದ್ದು ಆ ಸನ್ನಿವೇಶದ ವಿಡಿಯೋವನ್ನು ದಾಳಿ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಸಕತ್ತಾಗಿ ವೈರಲ್ ಆಗುತ್ತಿದೆ.