ವಿಜಯ್ ದೇವರಕೊಂಡ ಅವರ 12ನೇ ಸಿನಿಮಾ ‘ಕಿಂಗ್​ಡಮ್’; ಟೀಸರ್ ಅನಾವರಣ

ವಿಜಯ್ ದೇವರಕೊಂಡ ನಟನೆಯ 12ನೇ ಸಿನಿಮಾ ಬಗ್ಗೆ ಇದ್ದ ಕುತೂಹಲ ತಣ್ಣಗಾಗಿದೆ. ಈ ವರೆಗೂ ವಿಜಯ್ ದೇವರಕೊಂಡ ಅವರ ಮುಂಬರುವ ಸಿನಿಮಾವನ್ನು ‘VD12’ ಎಂದು ಕರೆಯಲಾಗುತ್ತಿತ್ತು. ಇದೀಗ ಚಿತ್ರದ ಟೈಟಲ್ ಅನಾವರಣ ಆಗಿದೆ. ಟೀಸರ್​ ಕೂಡ ಬಿಡುಗಡೆ ಆಗಿದ್ದು, ನೂತನ ಸಿನಿಮಾಗೆ ‘ಕಿಂಗ್​ಡಮ್’ ಎಂದು ಹೆಸರಿಡಲಾಗಿದೆ. ತೆಲುಗು, ತಮಿಳು ಮತ್ತು ಹಿಂದಿ ಭಾಸೆಗಳಲ್ಲಿ ‘ಕಿಂಗ್​ಡಮ್​’ ಸಿನಿಮಾದ ಟೀಸರ್ ಬಿಡುಗಡೆಯಾಗಿವೆ. ತೆಲುಗಿನಲ್ಲಿ ಜೂನಿಯರ್​ ಎನ್​ಟಿಆರ್​, ಹಿಂದಿಯಲ್ಲಿ ರಣಬೀರ್​ ಕಪೂರ್​ ಹಾಗೂ ತಮಿಳಿನಲ್ಲಿ ಸೂರ್ಯ ಅವರು ‘ಕಿಂಡ್​ಕಮ್’ ಟೀಸರ್​ಗೆ ಧ್ವನಿ ನೀಡಿರುವುದು ವಿಶೇಷ..

ಕ್ವಿನ್ ಸಿಟಿ ಆಗಲಿದೆ ಹೆಲ್ತ್ ಸಿಟಿ: ಶರಣ್ ಪ್ರಕಾಶ್ ಪಾಟೀಲ್

ಬೆಂಗಳೂರು, ಫೆಬ್ರವರಿ 12: ನಮ್ಮ ರಾಜಧಾನಿ ಬೆಂಗಳೂರು ಈಗ ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿದೆ. ಈಗ ಇಲ್ಲಿ ತಲೆ ಎತ್ತುತ್ತಿರುವ ಕ್ವಿನ್ ಸಿಟಿ ವಿಶ್ವದರ್ಜೆಯ ಮಟ್ಟದ್ದಾಗಿದ್ದು, ಇಲ್ಲಿ ವೈದ್ಯಕೀಯ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ನೀಡುವ ಯೋಜನೆಗಳು ಅನುಷ್ಠಾನಕ್ಕೆ ಬರಲಿದೆ. ಇದರಿಂದ ಜನರಿಗೆ ಉತ್ತಮ ಸೇವೆ ಸಿಗುವುದಲ್ಲದೇ, ರಾಜ್ಯದಲ್ಲಿ ಆರ್ಥಿಕ ಚಟುವಟಿಕೆಗಳು ಮತ್ತಷ್ಟು ಗರಿಗೆದರಲಿವೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಅವರು ತಿಳಿಸಿದ್ದಾರೆ. ಬೆಂಗಳೂರು ಅರಮನೆಯಲ್ಲಿ ನಡೆಯುತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ (ಇನ್ವೆಸ್ಟ್ ಕರ್ನಾಟಕ) ಎರಡನೇ ದಿನದಲ್ಲಿ “ಕ್ವಿನ್ ಸಿಟಿ ಹಾಗೂ ಆರೋಗ್ಯ ರಕ್ಷಣೆ ಕ್ಷೇತ್ರದ” ಚರ್ಚಾಗೋಷ್ಠಿಯಲ್ಲಿ ಬುಧವಾರ ಭಾಗವಹಿಸಿ ಮಾತನಾಡಿದರು. ಬೆಂಗಳೂರಿನ ಸಮೀಪದಲ್ಲಿ 5,800 ಎಕರೆಗಳಲ್ಲಿ ಮೈದಳೆಯುತ್ತಿರುವ ಕ್ವಿನ್ ಸಿಟಿ, ವೈದ್ಯಕೀಯ ಕ್ಷೇತ್ರದ ನಾವೀನ್ಯತೆಯ ಕೇಂದ್ರವಾಗಿ ಹೊರಹೊಮ್ಮಲಿದೆ. ಔಷಧಗಳು, ರೋಗನಿರ್ಣಯಗಳು ಮತ್ತು ವೈದ್ಯಕೀಯ ತಂತ್ರಜ್ಞಾನಗಳಲ್ಲಿ…

ಅಯೋಧ್ಯೆ ಶ್ರೀ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ವಿಧಿವಶ

ಅಯೋಧ್ಯೆ: ಅಯೋಧ್ಯೆಯಲ್ಲಿರುವ ಶ್ರೀ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ವಿಧಿವಶರಾಗಿದ್ದಾರೆ. ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಫೆಬ್ರವರಿ 3 ರಂದು ಅವರು ಪಾರ್ಶ್ವವಾಯುವಿಗೆ ಒಳಗಾಗಿದ್ದು ಅನಂತರ ಅವರ ಆರೋಗ್ಯ ಕ್ಷೀಣಿಸಿತ್ತೆನ್ನಲಾಗಿದೆ. 85 ವರ್ಷ ವಯಸ್ಸಿನ ಆಚಾರ್ಯ ಸತ್ಯೇಂದ್ರ ದಾಸ್ ಅವರು, 1992ರ ಡಿಸೆಂಬರ್ 6ರಂದು ಬಾಬರಿ ಮಸೀದಿಯನ್ನು ಕೆಡವಿದಾಗ ತಾತ್ಕಾಲಿಕ ರಾಮ ಮಂದಿರದ ಅರ್ಚಕರಾಗಿದ್ದರು. ಭವ್ಯ ರಾಮ ಮಂದಿರ ನಿರ್ಮಾಣ ನಂತರವೂ ಶ್ರೀರಾಮನ ಕೈಂಕರ್ಯದಲ್ಲಿ ಮುಂಚೂಣಿಯಲ್ಲಿದ್ದರು.‌

ಅಧಿಕಾರಿಗೆ ಧಮ್ಕಿ ಪ್ರಕರಣ; ಭದ್ರಾವತಿ ಪೊಲೀಸರಿಂದ ಮೂವರ ಬಂಧನ

ಶಿವಮೊಗ್ಗ: ಭದ್ರಾವತಿ ಬಳಿ ಅಕ್ರಮ ಮರಳು ಗಣಿಗಾರಿಕೆ ತಡೆಯಲು ಹೋದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮಹಿಳಾ ಅಧಿಕಾರಿ ಮೇಲೆ ದೌರ್ಜನ್ಯಕ್ಕೆ ಮುಂದಾದ ಘಟನೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಇದೇ ವೇಳೆ, ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ರವಿ, ವರುಣ್ ಮತ್ತು ಅಜಯ್ ಎಂದು ಗುರುತಿಸಲಾಗಿದೆ. ಈ ನಡುವೆ, ಪ್ರಕರಣದಲ್ಲಿ ಶಾಸಕನ ಪುತ್ರನ ಹೆಸರು ನಮೂದಿಸದ ಪೊಲೀಸರ ನಡೆ ಬಗ್ಗೆ ವ್ಯಾಪಕ ಚರ್ಚೆ ಸಾಗಿದೆ. ಇನ್ನೊಂದೆಡೆ ಶಾಸಕರ ಪುತ್ರನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಭದ್ರಾವತಿಯಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು

ಸಿಎಂ ತವರಲ್ಲೇ ಖಾಕಿ ಮೇಲೆ ದಾಳಿ; ಸಂಸದ ಯಧುವೀರ್ ಖಂಡನೆ

ಮೈಸೂರು: ಉದಯಗಿರಿ ಪೋಲಿಸ್ ಸ್ಟೇಷನ್ ಮೇಲೆ ಮತ್ತು ಪೊಲೀಸರ ಮೇಲೆ ನಡೆದ ಹಲ್ಲೆ,ಡಿ.ಸಿ.ಪಿ ಯವರ ವಾಹನದ ಮೇಲೆ ಕಲ್ಲು ತೂರಾಟ ನಡೆದಿರುವ ಘಟನೆಯನ್ನು ಸಂಸದ ಯಧುವೀರ್ ಖಂಡಿಸಿದ್ದಾರೆ. ರಾಜ್ಯದಲ್ಲಿ ಪ್ರತಿನಿತ್ಯ ಹಿಂಸಾಚಾರˌ ಕೊಲೆˌ ಕಲ್ಲು ತೂರಾಟಗಳಂತಹ ಕೃತ್ಯಗಳು ಸಾಲುಸಾಲಾಗಿ ನಡೆಯುತ್ತಿವೆ. ಶಾಂತಿˌ ಸಮೃದ್ದಿˌ ಸಂಸ್ಕೃತಿಗೆ ಇಡಿ ವಿಶ್ವಕ್ಕೆ ಮಾದರಿಯಾಗಿರುವ ಮೈಸೂರಿನಲ್ಲಿ ಈ ರೀತಿಯ ಗಲಾಟೆಗಳು ನಡೆಯುವುದು ಮತ್ತು ಅದನ್ನು ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗುವುದು ಈ ನಾಡಿಗೆ ಶೋಭೆ ತರುವುದಿಲ್ಲ ಎಂದವರು ಪ್ರತಿಪಾದಿಸಿದ್ದಾರೆ. ನಿನ್ನೆ ನಮ್ಮ ಮೈಸೂರಿನ ಉದಯಗಿರಿ ಪೋಲಿಸ್ ಸ್ಟೇಷನ್ ಮೇಲೆ ಮತ್ತು ಪೊಲೀಸರ ಮೇಲೆ ನಡೆದ ಹಲ್ಲೆ,ಡಿ.ಸಿ.ಪಿ ಯವರ ವಾಹನದ ಮೇಲೆ ಕಲ್ಲು ತೂರಾಟ ನಡೆಸಿರುವುದು ಖಂಡನೀಯ. ರಾಜ್ಯದಲ್ಲಿ ಪ್ರತಿನಿತ್ಯ ಹಿಂಸಾಚಾರˌ ಕೊಲೆˌ ಕಲ್ಲು ತೂರಾಟಗಳಂತಹ ಕೃತ್ಯಗಳು ಸಾಲುಸಾಲಾಗಿ ನಡೆಯುತ್ತಿವೆ. ಶಾಂತಿˌ ಸಮೃದ್ದಿˌ ಸಂಸ್ಕೃತಿಗೆ ಇಡಿ ವಿಶ್ವಕ್ಕೆ ಮಾದರಿಯಾಗಿರುವ… pic.twitter.com/F43lrc4Rpf — Yaduveer Wadiyar (@yaduveerwadiyar)…

ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 16 ದೇಶಗಳ ರಾಯಭಾರಿಗಳು ಭಾಗಿ

ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 5,000ಕ್ಕೂ ಹೆಚ್ಚು ಉದ್ಯಮ ಪ್ರತಿನಿಧಿಗಳಲ್ಲದೆ, ಹಲವು ದೇಶಗಳ ರಾಯಭಾರಿಗಳು ಕೂಡ ಭಾಗವಹಿಸಿದ್ದಾರೆ. ಇವರಲ್ಲಿ ಬಹ್ರೇನ್ ರಾಯಭಾರಿ ಮಹಮದ್ ಅಲ್ ಗಾವ್ಡ್, ಕ್ಯೂಬಾದ ಅಬೆಲ್ ಅಬಾಲ್ ಡೆಸ್ಪೇನ್, ಇಟಲಿಯ ಆಂಟೋನಿಯೊ ಬಾರ್ತೋಲಿ, ನೇಪಾಳದ ಡಾ.ಶಂಕರ್ ಪ್ರಸಾದ್ ಶರ್ಮ, ಪೋಲೆಂಡಿನ ಸೆಬಾಸ್ಟಿಯನ್ ಡಾಮ್ಜಾಲ್ಸ್ಕಿ, ಮಲೇಷ್ಯಾದ ದಾತೊ ಮಜಾಫರ್ ಷಾ ಮುಸ್ತಫ, ಜಪಾನಿನ ಓನೋ ಕೀಚಿ, ಕಾಂಗೋದ ರೇಮಂಡ್ ಸರ್ಜ್ ಬೇಲ್, ಜಮೈಕಾದ ಜೇಸನ್ ಹಾಲ್ ಫಿಜಿಯ ಜಗನ್ನಾಥ ಸ್ವಾಮಿ, ಜಮೈಕಾದ ಜೇಸನ್ ಹಾಲ್, ಕಝಕಸ್ತಾನದ ನೂರುಲಾನ್ ಝಲ್ಗಸ್ಬಯೇವ್, ಮೊರಾಕ್ಕೋದ ಮಹಮದ್ ಮಾಲೀಕಿ, ಸೀಷೆಲ್ಸ್ ನ ಲಲಟಿಯಾನಾ ಅಕೌಷೆ, ತಝಕಿಸ್ತಾನದ ಲೂಕ್ಮನ್ ಬೊಬಕಾಲೊಜೋಡ, ಟೋಗೋದ ಯಾವೋ ಇಡೆಂ ಮತ್ತು ಜಿಂಬಾಬ್ವೆಯ ಸ್ಟೆಲ್ಲಾ ನೋಮೋ ಸೇರಿದ್ದಾರೆ.

ಏಕಗವಾಕ್ಷಿ ಪೋರ್ಟಲ್: ಬೆರಳತುದಿಯಲ್ಲಿ 30 ಇಲಾಖೆಗಳ 150 ಸೇವೆ ಲಭ್ಯ

ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕಾ ಯೋಜನೆಗಳಿಗೆ ತ್ವರಿತ ಗತಿಯಲ್ಲಿ ಅನುಮೋದನೆ ನೀಡಬಲ್ಲ ಮತ್ತು ಉದ್ಯಮಗಳಿಗೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಇಲಾಖೆಗಳ 150 ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸುವಂತಹ ಉದ್ಯಮಸ್ನೇಹಿ ಪರಿಷ್ಕೃತ ಏಕಗವಾಕ್ಷಿ ಪೋರ್ಟಲ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾಗತಿಕ ಹೂಡಿಕೆದಾರರ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಲೋಕಾರ್ಪಣೆ ಮಾಡಿದ್ದಾರೆ. ಮೈಕ್ರೋಸಾಫ್ಟ್ ಕಂಪನಿಯ ನೆರವಿನೊಂದಿಗೆ ಅತ್ಯಾಧುನಿಕ ತಂತ್ರಜ್ಞಾನದ ಬಲದಿಂದ ರೂಪಿಸಿರುವ ಈ ವ್ಯವಸ್ಥೆಯು ಕೈಗಾರಿಕಾ ಯೋಜನೆಗಳಿಗೆ ಸಂಬಂಧಿಸಿದ ಅನುಮೋದನೆ, ನವೀಕರಣ, ತಿದ್ದುಪಡಿ, ಕುಂದುಕೊರತೆಗಳಿಗೆ ಪರಿಹಾರಗಳನ್ನು ಸರಳಗೊಳಿಸಲಿದ್ದು, ಕ್ಷಿಪ್ರಗತಿಯಲ್ಲಿ ಹೂಡಿಕೆ ನನಸಾಗುವಂತೆ ಮಾಡಲಿದೆ. ಜತೆಗೆ ಹೂಡಿಕೆದಾರರಿಗೆ ಕೇಂದ್ರ ಸರಕಾರದ ಮಟ್ಟದಲ್ಲಿ ಸಿಗಬೇಕಾದ ಸೇವೆಗಳನ್ನು ಕೂಡ ಇದರ ಮೂಲಕ, ಅಧಿಕಾರಿಶಾಹಿಯ ಅಡೆತಡೆಯಿಲ್ಲದೆ ಪಡೆದುಕೊಳ್ಳಬಹುದು. ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ, ಇದುವರೆಗೂ ಕೈಗಾರಿಕಾ ಯೋಜನೆಗಳಿಗೆ ಸಂಬಂಧಿಸಿದ ಸೇವೆಗಳು ಬೇರೆಬೇರೆ ಇಲಾಖೆಗಳಲ್ಲಿ ಚದುರಿ…