ಕೋಲ್ಕತ್ತಾ: ಕೇವಲ ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS ಸಂಘಟನಾ ಕೆಲಸ ಮಾಡುತ್ತಿದೆ ಎಂದು ಸರಸಂಘಚಾಲಕ್ ಮೋಹನ್ ಭಾಗವತ್ ಹೇಳಿದ್ದಾರೆ. ಒಗ್ಗಟ್ಟಿನ ಹಿಂದೂ ಸಮಾಜಕ್ಕಾಗಿ ಸಂಘಟನೆಯನ್ನು ರಚಿಸುವುದು ಸಂಘದ ಮುಖ್ಯ ಉದ್ದೇಶವಾಗಿದೆ ಎಂದವರು ತಿಳಿಸಿದ್ದಾರೆ. ಪಶ್ಚಿಮ ಬಂಗಾಳದ ಪಶ್ಚಿಮ ಬುರ್ದ್ವಾನ್ ಜಿಲ್ಲೆಯ ಬುರ್ದ್ವಾನ್‌ನಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ಹಿಂದೂ ಸಮಾಜದ ಏಕತೆಗೆ ಏಕೆ ಒತ್ತು ನೀಡಲಾಗುತ್ತದೆ ಎಂದರು. ಭಾರತವು ಕೇವಲ ಭೌಗೋಳಿಕವಲ್ಲ, ಅದರ ಗಾತ್ರವು ಕಾಲಾನಂತರದಲ್ಲಿ ಬದಲಾಗುತ್ತದೆ. ಭಾರತವು ತನ್ನದೇ ಆದ ಸ್ವಭಾವವನ್ನು ಹೊಂದಿದೆ. ಆ ಸ್ವಭಾವದೊಂದಿಗೆ ಬದುಕಲು ಸಾಧ್ಯವಿಲ್ಲ ಎಂದು ಭಾವಿಸಿದವರು ತಮ್ಮದೇ ಆದ ದೇಶವನ್ನು ಮಾಡಿಕೊಂಡರು. ದೇಶದಿಂದ ಬೇರ್ಪಡದವರು ಭಾರತದ ಸ್ವಭಾವವನ್ನು ಬಯಸಿದ್ದರು ಎಂದು ಭಾಗವತ್ ಹೇಳಿದರು. ಹಿಂದೂಗಳು ಪ್ರಪಂಚದ ವೈವಿಧ್ಯತೆಯನ್ನು ಸ್ವೀಕರಿಸುವ ಮೂಲಕ ವರ್ಷಗಳಿಂದ ಮುಂದುವರೆದಿದ್ದಾರೆ ಎಂದ ಅವರು, ಈ ಮೂಲಕ ಒಗ್ಗಟ್ಟು ಪ್ರದರ್ಶಿಸುತ್ತಿದ್ದಾರೆ…
Day: February 16, 2025
ರೈಲು ನಿಲ್ದಾಣದಲ್ಲಿನ ಕಾಲ್ತುಳಿತ: ರೈಲ್ವೆ ಸಚಿವರ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ
ನವದೆಹಲಿ: ರಾಷ್ಟ್ರ ರಾಜಧಾನಿಯ ರೈಲು ನಿಲ್ದಾಣದಲ್ಲಿನ ಕಾಲ್ತುಳಿತ ಘಟನೆಯ ನೈತಿಕ ಹೊಣೆ ಹೊತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ. ಶನಿವಾರ ರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ 18 ಮಂದಿ ಸಾವನ್ನಪ್ಪಿದ್ದಾರೆ. ಈ ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಅವರು ಶ್ರಿನಾಟೆ, ವೈಷ್ಣವ್ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಿಯಾದ ವ್ಯವಸ್ಥೆ ಇಲ್ಲದಿರುವುದರಿಂದಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ಆರೋಪಿಸಿದರು. ಈ ಘಟನೆಯ ನೈತಿಕ ಹೊಣೆ ಹೊತ್ತು ವೈಷ್ಣವ್ ರಾಜೀನಾಮೆ ನೀಡದಿದ್ದರೆ, ರೈಲು ನಿಲ್ದಾಣದಲ್ಲಿ ದುರಾವಸ್ಥೆಯಿಂದಾಗಿ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.
‘ಸಿದ್ದರಾಮಯ್ಯ ನಮ್ಮ ನಾಯಕರು, ಅವರ ಹೆಸರು ದುರ್ಬಳಕೆ ಬೇಡಿ’ ಎಂದ ಶಿವಕುಮಾರ್
ಬೆಂಗಳೂರು: ‘ಸಿದ್ದರಾಮಯ್ಯ ನಮ್ಮ ಪಕ್ಷದ ನಾಯಕರು. ಅದರಲ್ಲಿ ಯಾವುದೇ ಪ್ರಶ್ನೆ ಇಲ್ಲ. ದಿನಬೆಳಗಾದರೆ ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವುದು ಬೇಡ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಪಕ್ಷಕ್ಕೆ ಅನಿವಾರ್ಯ ಎಂಬ ಹೇಳಿಕೆ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಸಿದ್ದರಾಮಯ್ಯ ಅವರು ನಮ್ಮ ನಾಯಕರು. ಅವರು ಎಲ್ಲಾ ಚುನಾವಣೆಗೂ ಬೇಕು. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯ್ತಿ, ವಿಧಾನ ಸಭೆ, ಸಂಸತ್ ಚುನಾವಣೆ ಎಲ್ಲದಕ್ಕೂ ಬೇಕು. ಅವರನ್ನು ಪಕ್ಷ ಎರಡು ಬಾರಿ ಸಿಎಂ ಮಾಡಿದೆ. ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಸಿಎಂ ಆಗಿ ಉತ್ತಮ ಕೆಲಸ ಮಾಡುತ್ತಿದ್ದು, ಅವರ ಹೆಸರು ಮಾಧ್ಯಮಗಳಿಗೆ ಆಹಾರವಾಗುವಂತೆ ಗೊಂದಲದ ಹೇಳಿಕೆ ಬೇಡ ಎಂದು ಡಿಕೆಶಿ ಹೇಳಿದರು. ಪಕ್ಷದಲ್ಲಿ ಗೊಂದಲದ ಹೇಳಿಕೆ ಯಾಕೆ ಎಂದು ಕೇಳಿದಾಗ, “ಯಾವುದೇ ಗೊಂದಲ ಇಲ್ಲ. ಕಾಂಗ್ರೆಸ್ ಪಕ್ಷ…
ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧರಾಗಿ: ಕಾಂಗ್ರೆಸ್ ಕಾರ್ಯಕರ್ತರಿಗೆ ಡಿಕೆಶಿ ಕರೆ
ಬೆಂಗಳೂರು: ಯಾವುದೇ ಕ್ಷಣದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಬಹುದು. ಹೀಗಾಗಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಸಜ್ಜಾಗಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಹಿರಿಯ ನಾಯಕರು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಶಿವಕುಮಾರ್, ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ವಿಚಾರವಾಗಿ ನ್ಯಾಯಾಲಯದಿಂದ ಸಧ್ಯದಲ್ಲೇ ಸೂಚನೆ ಬರುವ ಸಾಧ್ಯತೆ ಇದೆ. ಇನ್ನು ಬೆಂಗಳೂರು ನಗರ ಪಾಲಿಕೆ ಚುನಾವಣೆಯನ್ನು ನಡೆಸಬೇಕಾಗಿದ್ದು ಗ್ರೇಟರ್ ಬೆಂಗಳೂರು ವಿಚಾರವಾಗಿ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದೇವೆ. ಯಾವುದೇ ಕ್ಷಣದಲ್ಲಿ ಈ ಚುನಾವಣೆಗಳು ಘೋಷಣೆಯಾಗಬಹುದು. ಇದಕ್ಕೆ ನಾವೆಲ್ಲರೂ ಸಿದ್ಧತೆ ಮಾಡಿಕೊಳ್ಳಬೇಕು ಎಂದರು. “ಈ ಚುನಾವಣೆಗಳ ಸಿದ್ಧತೆಗಾಗಿ ಕಾರ್ಯಾಧ್ಯಕ್ಷರ ನೇತೃತ್ವದಲ್ಲಿ ಉಪಾಧ್ಯಕ್ಷರುಗಳನ್ನು ಸೇರಿಸಿಕೊಂಡು ವಿಭಾಗವಾರು ಸಮಿತಿ ರಚಿಸಲಿದ್ದೇವೆ. ಈ ಸಮಿತಿ ಮಾರ್ಚ್ ಒಳಗಾಗಿ ರಾಜ್ಯ ಪ್ರವಾಸ ಮಾಡಿ ಎಲ್ಲಾ ಕಡೆ ಸಮನ್ವಯತೆ ಸಾಧಿಸಿ ತಯಾರಿ ಮಾಡಿಕೊಳ್ಳಬೇಕು. ಎಲ್ಲೆಲ್ಲಿ ನಾಯಕರ ಮಧ್ಯೆ ಹೊಂದಾಣಿಕೆ…
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿಗೆ ಸಚಿವರ ಮಾಸ್ಟರ್ ಪ್ಲಾನ್; ಆಯುಕ್ತರ ನೇತೃತ್ವದ ಸಮಿತಿ ರಚನೆ
ಬೆಂಗಳೂರು: ದಕ್ಷಿಣ ಭಾರತದ ಪ್ರಸಿದ್ಧ ಪುಣ್ಯ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಮುಜರಾಯಿ ಸಚಿವರು ರಾಮಲಿಂಗಾ ರೆಡ್ಡಿ ಮಹತ್ವದ ಕ್ರಮಕ್ಕೆ ಮುನ್ನುಡಿ ಬರೆದಿದ್ದಾರೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಮಗ್ರ ಅಭಿವೃದ್ಧಿ ಕಾಮಗಾರಿಯನ್ನು ಹಂತಹಂತವಾಗಿ ಅನುಷ್ಠಾನಗೊಳಿಸಿ, ಭಕ್ತಾಧಿಗಳಿಗೆ ಸಮಗ್ರ ಸೌಲಭ್ಯ ಒದಗಿಸುವ ಹಾಗೂ ಶ್ರೀ ಕ್ಷೇತ್ರವನ್ನು ಮತ್ತಷ್ಟು ಸಾರ್ವಜನಿಕ ಸ್ನೇಹಿ ಯಾಗಿಸಲು ಮಾಸ್ಟರ್ ಪ್ಲಾನ್ ರೂಪಿಸಲು ಸಭೆ ನಡೆಸಿದ ಸಚಿವರು, ಹೊಸದಾಗಿ ಸಮಿತಿ ರಚಿಸಿದ್ದಾರೆ. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997 ಕಲಂ 77 ರನ್ವಯ 15 ಜನ ಅಧಿಕಾರಿ/ಅಧಿಕಾರೇತರ ಸದಸ್ಯರನ್ನು ಮತ್ತು ಹೆಚ್ಚುವರಿಯಾಗಿ 3 ಜನ ಸದಸ್ಯರುಗಳನ್ನು ಒಳಗೊಂಡಂತೆ ಮೇಲ್ವಿಚಾರಣಾ ಸಮಿತಿ ರಚಸಿ ಆದೇಶಿಸಲಾಗಿದೆ. 15.02.2025 ರಂದು ನಡೆದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಮಾಸ್ಟರ್ ಪ್ಲಾನ್ ಯೋಜನೆಯ ಮೇಲ್ವಿಚಾರಣೆ ಸಮಿತಿ ಸಭೆಯಲ್ಲಿ ಈ ಕೆಳಕಂಡ…
ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: 18 ಪ್ರಯಾಣಿಕರ ಸಾವು
ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿ ರೈಲು ನಿಲ್ದಾಣದಲ್ಲಿ ಶನಿವಾರ ಸಂಭವಿಸಿದ ಕಾಲ್ತುಳಿತದಲ್ಲಿ 18 ಪ್ರಯಾಣಿಕರು ಮೃತಪಟ್ಟಿದ್ದಾರೆ. ನವದೆಹಲಿ ರೈಲು ನಿಲ್ದಾಣದಿಂದ ಪ್ರಯಾಗ್ರಾಜ್ ಮಹಾ ಕುಂಭಮೇಳಕ್ಕೆ ತೆರಳಲು ವಿವಿಧ ರಾಜ್ಯಗಳಿಂದ ಬಂದಿದ್ದ ನೂರಾರು ಪ್ರಯಾಣಿಕರು ಜಮಾಯಿಸಿದ್ದರು. ವಿಶೇಷ ರೈಲಿನ್ನು ಹತ್ತುವಾಗ ನೂಕುನುಗ್ಗಲು ಸಂಭವಿಸಿ, ಕಾಲ್ತುಳಿತವಾಗಿದೆ ಎನ್ನಲಾಗಿದೆ. ಶನಿವಾರ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ ಎನ್ನಲಾಗಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಮೋದಿ ಸರ್ಕಾರದ ‘PAN 2.0’ ಯಾಕೆ? ನೀವೇನು ಮಾಡಬೇಕು? ಇಲ್ಲಿದೆ ಮಾಹಿತಿ
ಭಾರತ ಸರ್ಕಾರವು ‘PAN 2.0’ ಯೋಜನೆಯನ್ನು ಪ್ರಾರಂಭಿಸುವುದರೊಂದಿಗೆ ಡಿಜಿಟಲ್ ರೂಪಾಂತರದತ್ತ ಮಹತ್ವಪೂರ್ಣ ಹೆಜ್ಜೆ ಇಟ್ಟಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಈ ಉಪಕ್ರಮವನ್ನು ಕೈಗೊಂಡಿಡೇ. ಇದರ ಪ್ರಾಥಮಿಕ ಗುರಿ ತೆರಿಗೆದಾರರ ಗುರುತನ್ನು ಆಧುನೀಕರಿಸಿ ಭದ್ರತೆ ಮತ್ತು ದಕ್ಷತೆಯನ್ನು ಖಚಿತಪಡಿಸುವುದಾಗಿದೆ. ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಘೋಷಿಸಿರುವ ‘PAN 2.0’, ವರ್ಧಿತ ಕಾರ್ಯಕ್ಷಮತೆ ಮತ್ತು ದೃಢೀಕರಣಕ್ಕಾಗಿ QR ಕೋಡ್‌ಗಳನ್ನು ಸಂಯೋಜಿಸುತ್ತದೆ. 1,435 ಕೋಟಿ ರೂ.ಗಳ ಮೀಸಲಾದ ಬಜೆಟ್‌ನೊಂದಿಗೆ, ಈ ಯೋಜನೆಯು ತೆರಿಗೆ ಸಂಬಂಧಿತ ಕಾರ್ಯಗಳನ್ನು ಸುಗಮಗೊಳಿಸಲು ಮತ್ತು ಭಾರತದಲ್ಲಿ ಡಿಜಿಟಲ್ ಆರ್ಥಿಕತೆಯನ್ನು ಪ್ರೋತ್ಸಾಹಿಸಲು ಸಜ್ಜಾಗಿದೆ. ‘PAN 2.0’ ಯೋಜನೆ ಎಂದರೇನು? ‘PAN 2.0’ ಒಂದು ಹೊಸ ಮತ್ತು ಸುಧಾರಿತ ಇ-ಆಡಳಿತ ವ್ಯವಸ್ಥೆಯಾಗಿದೆ, ಇದು ತೆರಿಗೆದಾರರ ನೋಂದಣಿಯನ್ನು ಸರಳಗೊಳಿಸಲು ವಿನ್ಯಾಸಗೊಳಿಸಲಾಗಿದೆ. ಈ ಯೋಜನೆ PAN (ಶಾಶ್ವತ ಖಾತೆ ಸಂಖ್ಯೆ) ಮತ್ತು TAN (ತೆರಿಗೆ ಕಡಿತ ಮತ್ತು…