ಭಾರತದಲ್ಲಿ ಮತದಾನ ಪ್ರಮಾಣವ ಹೆಚ್ಚಿಸಲು USAID: ಶ್ವೇತಪತ್ರಕ್ಕೆ ಕಾಂಗ್ರೆಸ್ ಆಗ್ರಹ

ನವದೆಹಲಿ: ಭಾರತದಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು USAID ಹಣಕಾಸು ನೆರವು ನೀಡಿರವ ಬಗ್ಗೆ ಶ್ವೇತಪತ್ರ ಪ್ರಕಟಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. ದಶಕಗಳಲ್ಲಿ ಭಾರತದಲ್ಲಿ ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳಿಗೆ US ಏಜೆನ್ಸಿಯ ಬೆಂಬಲದ ಕುರಿತ ಮಾಹಿತಿ ಬಹಿರಂಗಪಡಿಸುವಂತೆ ಕಾಂಗ್ರೆಸ್ ಪಕ್ಷವು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಈ ಕುರಿತಂತೆ ಸಾಮಾಜಿಕ ಜಾಲತಾಣ ‘X’ನಲ್ಲಿ ಪೋಸ್ಟ್‌ನಲ್ಲಿ ಹಾಕಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, “USAID ಇತ್ತೀಚಿನ ದಿನಗಳಲ್ಲಿ ಬಹಳ ಸುದ್ದಿಯಲ್ಲಿದೆ. ಈ ಕುರಿತ ಅಮೆರಿಕ ಅಧ್ಯಕ್ಷರ ಹೇಳಿಕೆಗಳು ಅಸಂಬದ್ಧವಾಗಿವೆ’ ಎನ್ನಲಾಗುತ್ತಿದೆ. ಆದರೂ ದಶಕಗಳಲ್ಲಿ ಭಾರತದ ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳಿಗೆ USAID ನೀಡಿರುವ ಬಗ್ಗೆ ಶ್ವೇತಪತ್ರವನ್ನು ಹೊರಡಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈಗ ದಾಖಲೆಯ ತಾಪಮಾನ; ಮಾರ್ಚ್ ಅಂತ್ಯದಲ್ಲಿ ಭಾರೀ ಮಳೆ ನಿರೀಕ್ಷೆ

ಬೆಂಗಳೂರು: ಈ ಬಾರಿ ರಾಜ್ಯದಲ್ಲಿ ಮುಂಗಾರು ಹಂಗಾಮಕ್ಕೂ ಮುನ್ನವೇ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಮುಂಗಾರು ಪೂರ್ವದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಅಧಿಕಾರಿಗಳು, ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಸರ್ಕಾರದ ಗಮನಸೆಳೆದಿದ್ದಾರೆ. 2025ನೇ ಸಾಲಿನ ಹಿಂಗಾರು -ಮುಂಗಾರು ಮಳೆ ಸ್ಥಿತಿ, ಕೃಷಿ, ಕುಡಿಯುವ ನೀರು, ಹವಾಮಾನ ಹಾಗೂ ಅಣೆಕಟ್ಟೆಗಳಲ್ಲಿನ ನೀರಿನ ಮಟ್ಟದ ಕುರಿತು ಗುರುವಾರ ಕಂದಾಯ ಸಚಿವ ಕೃಷ್ಣ ಬೈರೇಗೌಡ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳು ಈ ಕುರಿತು ಮಾಹಿತಿ ನೀಡಿದರು. ಈ ಫೆಬ್ರವರಿಯಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 2.5 ಡಿಗ್ರಿ ಸೆಲ್ಸಿಯಸ್ ಹೆಚ್ಚಿದೆ ಎಂಬ ಬಗ್ಗೆಯೂ ಚರ್ಚೆ ನಡೆದಿದೆ.