ಬೆಂಗಳೂರಿನ ಅಭಿವೃದ್ಧಿ ಶೂನ್ಯ; ಕೂಡಲೇ ಬಿಬಿಎಂಪಿ ಚುನಾವಣೆ ನಡೆಸಿ

ಬೆಂಗಳೂರು: ಬೆಂಗಳೂರಿನ ಅಭಿವೃದ್ಧಿಗಾಗಿ ಆದಷ್ಟು ಬೇಗ ಬಿಬಿಎಂಪಿ ಚುನಾವಣೆ ನಡೆಸಬೇಕು. ಇದಕ್ಕಾಗಿ ನ್ಯಾಯಾಲಯದಲ್ಲಿ ವಾದ ಮಾಡಲು ತಜ್ಞರ ತಂಡ ರಚಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ತಿಳಿಸಿದ್ದಾರೆ. ಬಿಬಿಎಂಪಿ ಚುನಾವಣೆ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ನಡೆದ, ಬಿಜೆಪಿ ಶಾಸಕರು, ಮುಖಂಡರ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆದಷ್ಟು ಬೇಗ ಚುನಾವಣೆ ನಡೆಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸುತ್ತೇವೆ. ಈ ಸಂಬಂಧ ನ್ಯಾಯಾಲಯದಲ್ಲಿ ವಾದ ಮಾಡಲು 15 ತಜ್ಞರ ತಂಡವನ್ನು ರಚಿಸಲಾಗಿದೆ ಎಂದು ತಿಳಿಸಿದರು. ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಬೆಂಗಳೂರಿನ ಅಭಿವೃದ್ಧಿ ಸೊನ್ನೆಯಾಗಿದೆ. ರಸ್ತೆಗುಂಡಿಗಳ ಆಕಾರ ಸೊನ್ನೆಯಾಗಿರುವಂತೆಯೇ ಅಭಿವೃದ್ಧಿಯೂ ಸೊನ್ನೆಯೇ ಆಗಿದೆ. ರಸ್ತೆಗುಂಡಿಗಳಿಂದ ಬಿದ್ದು ಗಾಯಕ್ಕೊಳಗಾಗಿ ಜನರು ಆಸ್ಪತ್ರೆ ಸೇರುತ್ತಿದ್ದಾರೆ. ಎಲ್ಲ ಕಡೆ ಕಸದ ರಾಶಿ ಕಂಡುಬರುತ್ತಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗ ಹಿಮಾಲಯದ ಶಿಖರದಂತೆ ನಗರದ ಅಭಿವೃದ್ಧಿಯನ್ನು ಬ್ರ್ಯಾಂಡ್‌ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌…

ದೇವಾಲಯಗಳ ಅರ್ಚಕರು, ಸಿಬ್ಬಂದಿ ನಿರಾಳ.. ಇನ್ನು ಮುಂದೆ ಸರ್ಕಾರದಿಂದಲೇ ವೇತನ

ಬೆಂಗಳೂರು: ಭಕ್ತಿಯ ಆಸರೆಯಾಗಿರುವ ದೇವಾಲಯಗಳಲ್ಲಿ ಇದೀಗ ಎಂದಿಲ್ಲದ ಸಡಗರ. ದೇಗುಲಗಳಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಗಳಿಗೆ ರಾಜ್ಯ ಸರ್ಕಾರ ನೀಡಿರುವ ಕೊಡುಗೆಯಿಂದಾಗಿ ಮುಜರಾಯಿ ಕ್ಷೇತ್ರದಲ್ಲಿ ದುಡಿಯುವ ಮಂದಿಯಲ್ಲಿ ಸಂತಸ ಆವರಿಸಿದೆ. ಮುಜರಾಯಿ ಇಲಾಖೆಯಿಂದ ಮತ್ತೊಂದು ಐತಿಹಾಸಿಕ ಆದೇಶ ವಾಗಿದ್ದು, ಎ ಮತ್ತು ಬಿ ವರ್ಗಗಳ ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುವ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸರ್ಕಾರಿ ನೌಕರರಿಗೆ ಸರ್ಕಾರದಿಂದಲೇ ವೇತನ‌ ಪಾವತಿಗೆ ಕರಮವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಜರಾಯಿ ಇಲಾಖೆ ಇತಿಹಾಸದಲ್ಲೇ ಎ ಮತ್ತು ಬಿ ವರ್ಗಗಳ ದೇವಾಲಯಗಳಲ್ಲಿ ಪ್ರತಿ ತಿಂಗಳು ರೂ 2 ಕೋಟಿಯಿಂದ 3 ಕೋಟಿಯವರಿಗೂ ಉಳಿತಾಯವಾಗಲಿದೆ. ಅರ್ಚಕರ ಸಂಘವು 2020 ರಲ್ಲಿ ರಾಜ್ಯದ ಎ ಮತ್ತು ಬಿ ವರ್ಗಗಳ ದೇವಾಲಯಗಳ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸರ್ಕಾರಿ ನೌಕರರಿಗೆ ದೇವಾಲಯಗಳ ಹಣದಿಂದ ಕಾಯ್ದೆ ನಿಯಮಗಳ ಪ್ರಕಾರ ವೇತನ ಇತರೆ ಸೌಲಭ್ಯಗಳನ್ನು ಕೊಡುವಂತಿಲ್ಲ. ಸರ್ಕಾರದ ಸಂಚಿತ ನಿಧಿಯಿಂದ ನೀಡಬೇಕೆಂದು…

ಶೀಘ್ರ ಬಿಬಿಎಂಪಿ ಚುನಾವಣೆಗೆ ಕಸರತ್ತು: ನ್ಯಾಯಾಲಯದಲ್ಲಿ ವಾದ ಮಾಡಲು ಬಿಜೆಪಿಯಿಂದ ತಜ್ಞರ ತಂಡ