ಅಂದು ‘ಬ್ರ್ಯಾಂಡ್ ಬೆಂಗಳೂರು’, ಇದೀಗ ‘ಗ್ರೇಟರ್ ಬೆಂಗಳೂರು’?; ಬೆಂಗಳೂರು ವಿಭಜನೆಗೆ ಬಿಜೆಪಿ ವಿರೋಧ

ಬೆಂಗಳೂರು: ಗ್ರೇಟರ್ ಬೆಂಗಳೂರು ನೆಪದಲ್ಲಿ ಕೆಂಪೇಗೌಡರು ಕಟ್ಟಿದ ನಾಡನ್ನು ವಿಭಜಿಸುವುದಕ್ಕೆ ನಮ್ಮ ಆಕ್ಷೇಪ ಇದೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಯಯನ ಸ್ವಾಮಿ, ಅಂದು ‘ಬ್ರ್ಯಾಂಡ್ ಬೆಂಗಳೂರು’ ಹೇಳುತ್ತಿದ್ದವರು ಇದೀಗ ‘ಗ್ರೇಟರ್ ಬೆಂಗಳೂರು’ ಎನ್ನುತ್ತಾ ಕೆಂಪೇಗೌಡರು ನಿರ್ಮಿಸಿದ ಬೆಂಗಳೂರನ್ನು ಕೆಡವಲು ಹೊರಟಿದ್ದಾರೆ ಎಂದು ಕಾಂಗ್ರೆಸ್ ನಾಯಕರನ್ನು ತರಾಟೆಗೆ ತೆಗೆದುಕೊಂಡರು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಚುನಾವಣೆಯನ್ನು ನಿರಂತರವಾಗಿ ಮುಂದೂಡುವುದನ್ನು ಆಕ್ಷೇಪಿಸಿದ ನಾರಾಯಣಸ್ವಾಮಿ, ಇದು ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ದುರ್ಬಲಗೊಳಿಸುತ್ತದೆ ಎಂದರು. “ಅವರು ಒಮ್ಮೆ ‘ಬ್ರ್ಯಾಂಡ್ ಬೆಂಗಳೂರು’ ಬಗ್ಗೆ ಮಾತನಾಡಿದ್ದರು. ಈಗ ಅವರು ‘ಗ್ರೇಟರ್ ಬೆಂಗಳೂರು’ ಬಗ್ಗೆ ಮಾತನಾಡುತ್ತಿದ್ದಾರೆ. ಅವರು ‘ಬ್ರ್ಯಾಂಡ್ ಬೆಂಗಳೂರು’ ಅನ್ನು ಅಭಿವೃದ್ಧಿಪಡಿಸಲು ಸಾಧ್ಯವಾಗದಿದ್ದರೆ, ಅವರು ‘ಗ್ರೇಟರ್ ಬೆಂಗಳೂರು’ ಅನ್ನು ಹೇಗೆ ರಚಿಸುತ್ತಾರೆ?” ಎಂದು ಪ್ರಶ್ನಿಸಿದರು. ಬೆಂಗಳೂರನ್ನು ಏಳು ಭಾಗಗಳಾಗಿ ವಿಭಜಿಸುವ ನಿರ್ಧಾರವನ್ನು ಅವರು…