ಶ್ರೀಶೈಲಂ ಸುರಂಗ ಕಾಮಗಾರಿ ವೇಳೆ ಸಿಲುಕಿರುವ ಕಾರ್ಮಿಕರ ರಕ್ಷಣೆಗೆ ಹರಸಾಹಸ

ಹೈದರಾಬಾದ್: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯಲ್ಲಿ ಶ್ರೀಶೈಲಂ ಎಡದಂಡೆ ಕಾಲುವೆ (SLBC) ಸುರಂಗ ಕಾಮಗಾರಿ ವೇಳೆ ಅಪಾಯದಲ್ಲಿ ಸಿಲುಕಿರುವ ಎಂಟು ಜನರ ರಕ್ಷಣಾ ಕಾರ್ಯಾಚರಣೆ ಆರನೇ ದಿನವೂ ಮುಂದುವರಿದಿದೆ. ಗುರುವಾರ ಬೆಳಿಗ್ಗೆ ಸೇನೆ, ನೌಕಾಪಡೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಮತ್ತು ಇಲಿ ರಂಧ್ರದ ಗಣಿಗಾರರು ಸುರಂಗದಿಂದ ಹೂಳು ಮತ್ತು ಅವಶೇಷಗಳನ್ನು ತೆರವು ಮಾಡುವ ಕಾರ್ಯಾಚರಣೆ ಕೈಗೊಂಡಿದ್ದಾರೆ. ಸುರಂಗ ಕೊರೆಯುವ ಯಂತ್ರದ (TBM) ಹಾನಿಗೊಳಗಾದ ಭಾಗಗಳನ್ನು ಬೇರ್ಪಡಿಸಲು ರಕ್ಷಣಾ ಕಾರ್ಯಕರ್ತರು ಗ್ಯಾಸ್ ಕಟ್ಟರ್‌ಗಳನ್ನು ಬಳಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ತೆಲಂಗಾಣದ ನೀರಾವರಿ ಸಚಿವ N. ಉತ್ತಮ್ ಕುಮಾರ್ ರೆಡ್ಡಿ, ಸುರಂಗದೊಳಗೆ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸುವ ಕೆಲಸ ‘ಬಹಳ ಬೇಗ’ ಸಫಲವಾಗಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತದಲ್ಲಿದೆ. ತೀವ್ರಗೊಂಡ ರಕ್ಷಣಾ ಪ್ರಯತ್ನಗಳು, ಗಣ್ಯ ಪಡೆಗಳ ನಿಯೋಜನೆ ಮತ್ತು ಹೈಟೆಕ್…

‘ವಸುಧೈವ ಕುಟುಂಬಕಂ’ ಘೋಷಣೆಗೆ ಸಾಕ್ಷಿಯಾದ ಮಹಾಕುಂಭಮೇಳ : 66 ಕೋಟಿಗೂ ಹೆಚ್ಚು ಆಸ್ತಿಕರಿಂದ ಪುಣ್ಯಸ್ನಾನ

ಲಕ್ನೋ: ಇಡೀ ಜಗತ್ತಿನ ಗಮನಸೆಳೆದಿದ್ದ ಪ್ರಯಾಗರಾಜ್ ಮಹಾ ಕುಂಭ 2025 ಪರಿಪೂರ್ಣವಾಗಿದೆ. ಈ ಕೈಂಕರ್ಯದ ಯಶಸ್ವಿಗೆ ಕಾರಣರಾದವರನ್ನು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸ್ಮರಿಸಿದ್ದಾರೆ. ಮಹಾಕುಂಭ ಯಶಸ್ವಿ ಪೂರ್ಣಗೊಳಿಸುವಿಕೆಗೆ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವೇ ಕಾರಣ ಎಂದಿರುವ ಅವರು ಈ ಭವ್ಯ ಧಾರ್ಮಿಕ ಸಭೆಯನ್ನು “ಏಕತೆ, ಸಮಾನತೆ ಮತ್ತು ಸಾಮರಸ್ಯದ ಮಹಾಯಜ್ಞ” ಎಂದು ಕರೆದಿದ್ದಾರೆ. ಪ್ರಧಾನಿ ಮೋದಿಯವರ ಮಾರ್ಗದರ್ಶನಕ್ಕೆ ಕೃತಜ್ಞತೆ ಸಲ್ಲಿಸಿರುವ ಸಿಎಂ ಯೋಗಿ, ಗೌರವಾನ್ವಿತ ಪ್ರಧಾನ ಮಂತ್ರಿಗಳೇ, ನಿಮ್ಮ ಯಶಸ್ವಿ ಮಾರ್ಗದರ್ಶನದ ಪರಿಣಾಮವಾಗಿ ‘ಏಕತೆ, ಸಮಾನತೆ, ಸಾಮರಸ್ಯದ ಮಹಾಯಜ್ಞ’ – ಮಹಾ ಕುಂಭ 2025, ಪ್ರಯಾಗರಾಜ್ ಮುಕ್ತಾಯಗೊಂಡಿದೆ, ಭವ್ಯತೆ ಮತ್ತು ದೈವತ್ವದ ಜೊತೆಗೆ ಭದ್ರತೆ, ಸ್ವಚ್ಛತೆ ಮತ್ತು ನಿರ್ವಹಣೆಯಲ್ಲಿ ಹೊಸ ಮಾನದಂಡಗಳನ್ನು ಸ್ಥಾಪಿಸಿದೆ” ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. ಕಳೆದ 45 ಪವಿತ್ರ ದಿನಗಳಲ್ಲಿ, ಪೂಜ್ಯ ಸಂತರು ಮತ್ತು ಋಷಿಗಳು ಸೇರಿದಂತೆ 66 ಕೋಟಿಗೂ…

ನಂಜನಗೂಡು: ಗೋದಾಮಿನಲ್ಲಿ ಅಗ್ನಿ ಅವಘಡ

ಮೈಸೂರು: ನಂಜನಗೂಡು ತಾಲೂಕಿನ ಕತ್ವಾಡಿಪುರ ಗ್ರಾಮದಲ್ಲಿ ಗೋದಾಮೊಂದರಲ್ಲಿ ಅಗ್ನಿ ಅನಾಹುತ ಸಂಭವಿಸಿದೆ. ಬುಧವಾರ ಕೆಮಿಕಲ್ ಪದಾರ್ಥಗಳ ಗೋದಾಮಿನಲ್ಲಿ ಈ ಅವಘಡ ಸಂಭವಿಸಿದೆ. ಕೈಗಾರಿಕಾ ಪ್ರದೇಶದಲ್ಲಿರುವ ಕತ್ವಾಡಿಪುರದಲ್ಲಿ ಅನಿಲ ಸಂಗ್ರಹಣಾ ಘಟಕದ ಸಮೀಪ ಗೋದಾಮು ಬಳಿ ಮೈಸೂರು ಮೂಲದ ವ್ಯಕ್ತಿ ಕೆಮಿಕಲ್ ಮಿಶ್ರಿತ ಹಳೆ ಟ್ಯಾಂಕರ್ ಮತ್ತು ಇತರೆ ಪದಾರ್ಥಗಳನ್ನು ಸಂಗ್ರಹಿಸಿಟ್ಟಿದ್ದರೆನ್ನಲಾಗಿದೆ. ಈ ಗೋದಾಮಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಅನಾಹುತ ಸಂದರ್ಭದಲ್ಲಿ ಸ್ಪೋಟದ ರೀತಿ ಶಬ್ಧ ಕೇಳಿಬಂದಿದೆ ಎಂದು ಸ್ಥಳೀಯರು ಹೇಳಿಕೊಂಡಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಈಶರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಭಕ್ತಿ ವೈಭವ, ಸಾಂಸ್ಕೃತಿಕ ಸಂಭ್ರಮಕ್ಕೂ ಸಾಕ್ಷಿಯಾದ ಇಶಾ ‘ಶಿವರಾತ್ರಿ’

ಕೊಯಮತ್ತೂರು: ಇಶಾ ಫೌಂಡೇಶನ್‌ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್‌ ನೇತೃತ್ವದಲ್ಲಿ ಕೊಯಮತ್ತೂರಿನ ಇಶಾ ಕೇಂದ್ರದಲ್ಲಿ ಬುಧವಾರ ರಾತ್ರಿ ಶಿವರಾತ್ರಿ ಮಹಾ ವೈಭವ ನಾಡಿನ ಗಮನಸೆಳೆಯಿತು. ಶಿವಸ್ಮರಣೆಯ ಮಹಾ ಹಬ್ಬದಲ್ಲಿ ದೇಶದ ವಿವಿಧೆಡೆಯ ಆಸ್ತಿಕರು ಆಗಮಿಸಿದ್ದರು. ಸಾವಿರಾರು ಶಿವಭಕ್ತರ ಸಮ್ಮುಖದಲ್ಲಿ ನಡೆದ ಭಕ್ತಿ ವೈಭವ ಸಾಂಸ್ಕೃತಿಕ ಸಂಭ್ರಮಕ್ಕೂ ಸಾಕ್ಷಿಯಾಯಿತು. ಈ ಮಹಾಶಿವರಾತ್ರಿ ಆಚರಣೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸಹಿತ ಅನೇಕ ಗಣ್ಯರು ಭಾಗವಹಿಸಿದ್ದರು.