“ಕಲಾವಿದರು ಯಾರ ಸ್ವತ್ತೂ ಅಲ್ಲ, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೂ ಅಲ್ಲ”: ಡಿಕೆಶಿಗೆ ಅಶೋಕ್ ಟಾಂಗ್

ಬೆಂಗಳೂರು: ಕಲಾವಿದರ ನೆಟ್ ಬೋಲ್ಟ್ ಟೈಟ್ ಮಾಡುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್, “ಕಲಾವಿದರು ಯಾರ ಸ್ವತ್ತೂ ಅಲ್ಲ, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೂ ಅಲ್ಲ” ಎಂದಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ‘X’ನಲ್ಲಿ ಬರೆದುಕೊಂಡಿರುವ ಅಶೋಕ್, ಅನುದಾನ ಬೇಕಾದರೆ ಶಾಸಕರು ತಮ್ಮ ಬಳಿ ತಗ್ಗಿ-ಬಗ್ಗಿ ನಡೆಯಬೇಕು ಎಂದು ದರ್ಪ ಮೆರೆದಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಸಾಹೇಬರು ಈಗ ಕನ್ನಡ ಸಿನಿಮಾ ಕಲಾವಿದರಿಗೆ ಬಹಿರಂಗ ವೇದಿಕೆಯಲ್ಲಿ ಧಮ್ಕಿ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ಪಕ್ಷದ ರಾಜಕೀಯ ಪಾದಯಾತ್ರೆಗೆ ಸಿನಿಮಾ ಕಲಾವಿದರು ಬರುವುದು ಬಿಡುವುದು ಅವರವರ ವಿವೇಚನೆಗೆ ಬಿಟ್ಟಿದ್ದು. ಕಾಂಗ್ರೆಸ್ ಪಕ್ಷಕ್ಕೆ ನಡೆದುಕೊಳ್ಳುವ ಕಲಾವಿದರಿಗೆ ಮನ್ನಣೆ ಸಿಗುತ್ತದೆ, ಇಲ್ಲವಾದರೆ ಸಿಗುವುದಿಲ್ಲ ಎನ್ನುವ ನಿಮ್ಮ ಮಾತು ನಿಮ್ಮ ಸ್ಥಾನಕ್ಕೆ ಶೋಭೆ ತರುವುದಿಲ್ಲ ಎಂದು ಅವರು ಡಿಕೆಶಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.…

ಮೈಸೂರಿನ 150 ಎಕರೆ ಜಾಗದಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿ: ಚಿಗುರಿದ ಕನಸು

ಬೆಂಗಳೂರು: ವಿಶ್ವದರ್ಜೆಯ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ 150 ಎಕರೆ ಜಾಗವನ್ನು ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್‌ಗಳ‌ ಮೇಲೆ ಆಯೋಜಿಸಿದ್ದ ವರ್ಣರಂಜಿತ ಕಾರ್ಯಕ್ರಮದಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಉದ್ಘಾಟಿಸಿ, ಮಾತನಾಡಿದ ಅವರು, ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲ ಅವಕಾಶಗಳನ್ನು ಸೃಷ್ಟಿಸಬಹುದು. ಇದಕ್ಕಾಗಿ ವಿಶ್ವ ದರ್ಜೆಯ ಅತ್ಯುನ್ನತ ಗುಣಮಟ್ಟದ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತಿದ್ದೇವೆ. ತಂತ್ರಜ್ಞಾನದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಸೆಯುವ ಸಿನಿಮಾಗಳನ್ನು ವಿಶ್ವದರ್ಜೆಯ ಗುಣಮಟ್ಟದಲ್ಲಿ ಇಲ್ಲಿ ನಿರ್ಮಾಣ ಆಗಬೇಕು ಎಂದರು. ಅಂತಾರಾಷ್ಟ್ರೀಯ ಚಿತ್ರೋತ್ಸವ ವಿಶ್ವ ಸಮುದಾಯದ ಸಂಸ್ಕೃತಿಯ ಪ್ರತಿಬಿಂಬ. ಇದನ್ನು ನೋಡುಗರು ಸದುಪಯೋಗಪಡಿಸಿಕೊಳ್ಳಬೇಕು. ನಮ್ಮಲ್ಲಿ ಅಸಹನೆ ಹೆಚ್ಚುತ್ತಿರುವುದರಿಂದ ಸಮಾಜದಲ್ಲಿ ಅಸಂತೋಷ ಹೆಚ್ಚುತ್ತಿದೆ. ಸಂಪತ್ತಿನ ಅಸಮಾನ ಹಂಚಿಕೆ ಈ ಅಸಂತೋಷಕ್ಕೆ ಕಾರಣ. ದೇಶದ 1% ಜನರ ಕೈಯಲ್ಲಿ ದೇಶದ 50% ಸಂಪತ್ತು ಸೇರಿಕೊಂಡಿದೆ. ಇದಕ್ಕೆ ಕಲಾ ಮಾಧ್ಯಮ…

ಕಾಂಗ್ರೆಸ್‌ ಹೈಕಮಾಂಡ್‌ಗೆ ಧಮ್‌ ಇದ್ದರೆ ಡಿ.ಕೆ.ಶಿವಕುಮಾರ್‌ ಅವರನ್ನು ಅಮಾನತು ಮಾಡಲಿ: ಅಶೋಕ್

ಬೆಂಗಳೂರು: ಈಶ ಫೌಂಡೇಶನ್‌ ಕಾರ್ಯಕ್ರಮದಲ್ಲಿ ಡಿ.ಕೆ.ಶಿವಕುಮಾರ್‌ ಭಾಗವಹಿಸಿರುವ ಬಗ್ಗೆ ಕಾಂಗ್ರೆಸ್ ನಾಯಕರಲ್ಲೇ ಅಸಮಾಧಾನ ಕಂಡುಬಂದಿದೆ. ಡಿಕೆಶಿ ನಡೆಯನ್ನು ಬಿಜೆಪಿ ನಾಯಕರು ಸ್ವಾಗತಿಸಿದರೆ, ಕಾಂಗ್ರೆಸ್ ಮುಖಂಡರು ಆಕ್ರೋಶ ಹೊರಹಾಕುತ್ತಿದ್ದಾರೆ. ಕಾಂಗ್ರೆಸ್ ನಾಯಕರ ನಿಲುವಿನ ಬಗ್ಗೆ ಟೀಕಿಸಿರುವ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್, ಕಾಂಗ್ರೆಸ್‌ ಹೈಕಮಾಂಡ್‌ಗೆ ಧಮ್‌ ಇದ್ದರೆ ಡಿ.ಕೆ.ಶಿವಕುಮಾರ್‌ ಅವರನ್ನು ಅಮಾನತು ಮಾಡಲಿ ಎಂದು ಸವಾಲು ಹಾಕಿದ್ದಾರೆ. ಮಂಡ್ಯದಲ್ಲಿ ಪ್ರತಿಕ್ರಿಯಿಸಿರುವ ಅವರು, ಡಿ.ಕೆ.ಶಿವಕುಮಾರ್‌ ಕುಂಭಮೇಳಕ್ಕೆ ಹೋದಾಗ ಕಾಂಗ್ರೆಸ್‌ ಹೈಕಮಾಂಡ್‌ ಏನೂ ಮಾಡಲಿಲ್ಲ. ಪ್ರಧಾನಿಯನ್ನು ಭೇಟಿ ಮಾಡಿದಾಗಲೂ ಏನೂ ಮಾಡಲಿಲ್ಲ. ಉತ್ತರಪ್ರದೇಶದ ಮುಖ್ಯಮಂತ್ರಿಯನ್ನು ಹಾಡಿ ಹೊಗಳಿದರೂ ಸುಮ್ಮನಿದ್ದರು. ಇತ್ತೀಚೆಗೆ ಈಶ ಫೌಂಡೇಶನ್‌ಗೆ ಹೋಗಿದ್ದಾರೆ. ಕಾಂಗ್ರೆಸ್‌ ಹೈಕಮಾಂಡ್‌ಗೆ ಧಮ್‌ ಇದ್ದರೆ ಡಿ.ಕೆ.ಶಿವಕುಮಾರ್‌ ಅವರನ್ನು ಅಮಾನತು ಮಾಡಲಿ ಎಂದರು. ನಾವ್ಯಾರೂ ಡಿ.ಕೆ.ಶಿವಕುಮಾರ್‌ ಅವರನ್ನು ಪಕ್ಷಕ್ಕೆ ಆಹ್ವಾನಿಸಿಲ್ಲ ಎಂದು ಅಶೋಕ್ ಹೇಳಿದರು.  

“ವಾಯು ಮಾಲಿನ್ಯವು ಆಲ್ಝೈಮರ್‌ನಲ್ಲಿ ಸ್ಮರಣಶಕ್ತಿ ನಷ್ಟಕ್ಕೆ ಕಾರಣವಾಗಬಹುದು”

ನವದೆಹಲಿ: ವಾಯು ಮಾಲಿನ್ಯದಲ್ಲಿ ಕಂಡುಬರುವ ವಿಷಕಾರಿ ವಸ್ತುಗಳು ಮತ್ತು ಕಾಡ್ಗಿಚ್ಚಿನ ಹೊಗೆಯು ಮೆದುಳಿನಲ್ಲಿ ರಾಸಾಯನಿಕ ಬದಲಾವಣೆಯನ್ನು ಉಂಟುಮಾಡಬಹುದು. ಇದು ಆಲ್ಝೈಮರ್ ಕಾಯಿಲೆಯಲ್ಲಿ ಕಂಡುಬರುವಂತೆ ಸ್ಮರಣಶಕ್ತಿ ನಷ್ಟಕ್ಕೆ ಕಾರಣವಾಗಬಹುದು ಎಂದು ಅಧ್ಯಯನವೊಂದು ಬಹಿರಂಗಪಡಿಸಿದೆ. ಯುಎಸ್‌ನ ಸ್ಕ್ರಿಪ್ಸ್ ರಿಸರ್ಚ್‌ನ ವಿಜ್ಞಾನಿಗಳು ಎಸ್-ನೈಟ್ರೋಸೈಲೇಷನ್ ಎಂದು ಕರೆಯಲ್ಪಡುವ ರಾಸಾಯನಿಕ ಬದಲಾವಣೆಯನ್ನು ಕಂಡುಹಿಡಿದರು. ಇದು ಮೆದುಳಿನ ಕೋಶಗಳು ಹೊಸ ಸಂಪರ್ಕಗಳನ್ನು ಮಾಡುವುದನ್ನು ತಡೆಯುತ್ತದೆ ಮತ್ತು ಅಂತಿಮವಾಗಿ ಜೀವಕೋಶದ ಸಾವಿಗೆ ಕಾರಣವಾಗುತ್ತದೆ. ಎಸ್-ನೈಟ್ರೋಸೈಲೇಷನ್ ಅನ್ನು ನಿರ್ಬಂಧಿಸುವುದರಿಂದ ಆಲ್ಝೈಮರ್‌ನ ಮೌಸ್ ಮಾದರಿಗಳು ಮತ್ತು ಮಾನವ ಕಾಂಡಕೋಶಗಳಿಂದ ಉತ್ಪತ್ತಿಯಾಗುವ ನರ ಕೋಶಗಳಲ್ಲಿ ಸ್ಮರಣಶಕ್ತಿ ನಷ್ಟದ ಚಿಹ್ನೆಗಳು ಭಾಗಶಃ ಹಿಮ್ಮೆಟ್ಟುತ್ತವೆ ಎಂಬುದು ಅಧ್ಯಯನದಿಂದ ತಿಳಿದುಬಂದಿದೆ. “ಮಾಲಿನ್ಯಕಾರಕಗಳು ಸ್ಮರಣಶಕ್ತಿ ನಷ್ಟ ಮತ್ತು ನರಕ್ಷೀಣ ಕಾಯಿಲೆಗೆ ಹೇಗೆ ಕೊಡುಗೆ ನೀಡಬಹುದು ಎಂಬುದರ ಆಣ್ವಿಕ ವಿವರಗಳನ್ನು ನಾವು ಬಹಿರಂಗಪಡಿಸಿದ್ದೇವೆ” ಎಂದು ಸ್ಕ್ರಿಪ್ಸ್ ರಿಸರ್ಚ್‌ನ ಪ್ರಾಧ್ಯಾಪಕ ಸ್ಟುವರ್ಟ್ ಲಿಪ್ಟನ್ ವಿವರಿಸಿದ್ದಾರೆ. “ಇದು ಅಂತಿಮವಾಗಿ ಆಲ್ಝೈಮರ್ ಕಾಯಿಲೆಗೆ…

“ಡೌನ್ ಸಿಂಡ್ರೋಮ್ ಬುದ್ಧಿಮಾಂದ್ಯತೆಗೆ ಕಾರಣವಾಗುವ ಕಾರಣಗಳನ್ನು ಆನುವಂಶಿಕ, ಜೀವನಶೈಲಿ ಅಂಶಗಳು ವಿವರಿಸಬಹುದು”

ನವದೆಹಲಿ: ಡೌನ್ ಸಿಂಡ್ರೋಮ್ ಹೊಂದಿರುವ ಕೆಲವು ಜನರು ಬುದ್ಧಿಮಾಂದ್ಯತೆಯಿಂದ ಬಳಲುತ್ತಿರುವ ಕಾರಣವನ್ನು ಆನುವಂಶಿಕ ಮತ್ತು ಜೀವನಶೈಲಿ ಅಂಶಗಳು ನಿರ್ಧರಿಸಬಹುದು ಎಂದು ಅಮೆರಿಕದ ಸಂಶೋಧಕರ ತಂಡವು ಡಿಕೋಡ್ ಮಾಡಿದೆ. ಡೌನ್ ಸಿಂಡ್ರೋಮ್ ಹೊಂದಿರುವ ಜನರು ವಯಸ್ಸಾದಂತೆ ಆಲ್ಝೈಮರ್ (Alzheimer’s disease) ಕಾಯಿಲೆಯಿಂದ ಉಂಟಾಗುವ ಬುದ್ಧಿಮಾಂದ್ಯತೆಯನ್ನು ಬೆಳೆಸುವ ಜೀವಿತಾವಧಿಯಲ್ಲಿ ಶೇಕಡಾ 90 ಕ್ಕಿಂತ ಹೆಚ್ಚು ಅಪಾಯವನ್ನು ಹೊಂದಿರುತ್ತಾರೆ ಎಂದು ಅಧ್ಯಯನಗಳು ಬಹಿರಂಗಪಡಿಸುತ್ತವೆ. ಆದಾಗ್ಯೂ, ಈ ಪರಿಸ್ಥಿತಿಗಳ ಹಿಂದಿನ ಲಿಂಕ್ ಇನ್ನೂ ತಿಳಿದುಬಂದಿಲ್ಲ. ಆಲ್ಝೈಮರ್ ಬುದ್ಧಿಮಾಂದ್ಯತೆಗೆ ಸಾಮಾನ್ಯ ಕಾರಣವಾಗಿದೆ. ಡೌನ್ ಸಿಂಡ್ರೋಮ್ ಹೊಂದಿರುವ ಜನರು ಕ್ರೋಮೋಸೋಮ್ 21 ರ ಪ್ರತಿರೂಪದಂತೆ ಜನಿಸುತ್ತಾರೆ, ಇದು ಅವರ ಮೆದುಳು ಮತ್ತು ದೇಹದ ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತದೆ. ಆಲ್ಝೈಮರ್ ಒಂದು ಪ್ರಗತಿಶೀಲ ಮೆದುಳಿನ ಅಸ್ವಸ್ಥತೆಯಾಗಿದ್ದು ಅದು ನಿಧಾನವಾಗಿ ಸ್ಮರಣಶಕ್ತಿ ಮತ್ತು ಆಲೋಚನಾ ಕೌಶಲ್ಯಗಳನ್ನು ನಾಶಪಡಿಸುತ್ತದೆ. ಪಿಟ್ಸ್‌ಬರ್ಗ್ ಮತ್ತು ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯಗಳ ಸಂಶೋಧನೆಯು ಡೌನ್ ಸಿಂಡ್ರೋಮ್…

‘ಶಿಕ್ಷಣ ಎಂದರೆ ವ್ಯಾಪಾರವಲ್ಲ’: ವಿವಿ ಮುಚ್ಚುವ ನಿರ್ಧಾರಕ್ಕೆ ಆಕ್ಷೇಪ

ಮಂಡ್ಯ: ವಿಶ್ವವಿದ್ಯಾಲಯಗಳಿಂದ ಲಾಭ ಬರುತ್ತಿಲ್ಲ ಎಂಬ ಕಾರಣಕ್ಕೆ ಅವುಗಳನ್ನು ಮುಚ್ಚಲಾಗಿದೆ. ಕಾಂಗ್ರೆಸ್‌ ಸರ್ಕಾರ ಭಿಕ್ಷೆ ಬೇಡುವ ಸ್ಥಿತಿಗೆ ಬಂದಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆ ಶಿಕ್ಷಣದಲ್ಲಿ ಹಿಂದುಳಿದಿದೆ. ಇದಕ್ಕಾಗಿ ಬಿಜೆಪಿ ಸರ್ಕಾರ ಹೊಸ 9 ವಿಶ್ವವಿದ್ಯಾಲಯಗಳನ್ನು ನೀಡಿತ್ತು. ಆದರೆ ಕಾಂಗ್ರೆಸ್‌ ಸರ್ಕಾರ ಅದನ್ನು ಕಿತ್ತುಕೊಂಡಿದೆ. ವಿವಿಗಳನ್ನು ಮುಚ್ಚಲು ರೂಪಿಸಿದ ವರದಿಯಲ್ಲಿ ವಿವಿಗಳು ಲಾಭದಾಯಕವಾಗಿಲ್ಲ ಎಂದು ಉಲ್ಲೇಖಿಸಲಾಗಿದೆ. ಶಿಕ್ಷಣ ಸಂಸ್ಥೆಗಳಿಂದಲೂ ಆದಾಯ ಬರಬೇಕು ಎಂಬುದು ಸರ್ಕಾರ ಉದ್ದೇಶ. ಏಕೆಂದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಭಿಕ್ಷೆ ಬೇಡುತ್ತಿದ್ದಾರೆ. ಈ ಬಾರಿ 1 ಲಕ್ಷ ಕೋಟಿ ರೂ. ಸಾಲ ಮಾಡಲಾಗಿದೆ. ಹಿಂದಿನ ಎಲ್ಲ ಮುಖ್ಯಮಂತ್ರಿಗಳಿಗೆ ಹೋಲಿಸಿದರೆ ಸಿದ್ದರಾಮಯ್ಯ ಅವರೇ ಅತ್ಯಧಿಕ ಸಾಲ ಮಾಡಿದ್ದಾರೆ ಎಂದು ದೂರಿದರು. ಒಂದು ಜಿಲ್ಲೆಯಲ್ಲಿ ಒಂದು ವಿಶ್ವವಿದ್ಯಾಲಯವಿದ್ದರೆ ಆ ಜಿಲ್ಲೆ ಶಿಕ್ಷಣದಲ್ಲಿ…

ತೆಲುಗು, ಹಿಂದಿಯಲ್ಲೂ ‘ಕಣ್ಣಪ್ಪ’: ಟೀಸರ್ ಬಗ್ಗೆ ಭಾರೀ ಮೆಚ್ಚುಗೆ

ಕನ್ನಡದ ‘ಬೇಡರ ಕಣ್ಣಪ್ಪ’ ಸಿನಿಮಾ ಒಂದು ಇತಿಹಾಸ. ಇದೀಗ ಅದೇ ಕತೆಯನ್ನು ಹೋಲುವಂತೆ ತೆಲುಗಿನಲ್ಲೂ ಸಿನಿಮಾ ಮಾಡಲಾಗುತ್ತಿದೆ. ‘ಕಣ್ಣಪ್ಪ’ ಹೆಸರಿನ ತೆಲುಗು ಸಿನಿಮಾದ ಎರಡನೇ ಟೀಸರ್ ಬಿಡುಗಡೆ ಶನಿವಾರ ಬಿಡುಗಡೆ ಆಗಿದೆ. ಹಿಂದಿ ಭಾಷೆಯಲ್ಲೂ ಟೀಸರ್ ಅನಾವರಣ ಮಾಡಲಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಸಕತ್ತಾಗಿ ಸದ್ದುಮಾಡುತ್ತಿದೆ.