ಅಹಮದಾಬಾದ್: ಗುಜರಾತ್ ಪ್ರವಾಸದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಜಾಮ್‌ನಗರದಲ್ಲಿರುವ ವಂತಾರದಲ್ಲಿ ವನ್ಯಜೀವಿ ಕೇಂದ್ರವನ್ನು ಲೋಕಾರ್ಪಣೆ ಮಾಡಿದರು. Inaugurated Vantara, a unique wildlife conservation, rescue and rehabilitation initiative, which provides a safe haven for animals while promoting ecological sustainability and wildlife welfare. I commend Anant Ambani and his entire team for this very compassionate effort. pic.twitter.com/NeNjy5LnkO — Narendra Modi (@narendramodi) March 4, 2025 ಜಗತ್ತಿನ ವಿವಿಧೆಡೆ ಅಳಿವಿನಂಚಿನಲ್ಲಿರುವ ವನ್ಯಜೀವಿಗಳನ್ನು ರಕ್ಷಿಸಿ ಸಲಹುವ ಪ್ರಾಣಿ ಸಂಗ್ರಹಾಲಯ ಇದಾಗಿದೆ. 2,000ಕ್ಕೂ ಹೆಚ್ಚು ಜಾತಿಯ ಪ್ರಾಣಿಗಳು ವಂತಾರದ ವನ್ಯಜೀವಿ ಕೇಂದ್ರದಲ್ಲಿವೆ. ಈ ಪೈಕಿ 1.5 ಲಕ್ಷಕ್ಕೂ ಹೆಚ್ಚು ಪ್ರಾಣಿಗಳು ರಕ್ಷಿಸಲ್ಪಟ್ಟವುಗಳಾಗಿವೆ. ಈ ವನ್ಯಜೀವಿ ಕೇಂದ್ರವನ್ನು ಉದ್ಘಾಟಿಸಿದ ನರೇಂದ್ರ ಮೋದಿ, ಪ್ರಾಣಿಗಳೊಂದಿಗೆ…
Day: March 4, 2025
ಬೊಜ್ಜಿನ ಬೆಳವಣಿಗೆಯಲ್ಲಿ ಮೆದುಳು ಹೀಗೆ ಪಾತ್ರ ವಹಿಸುತ್ತದೆ..!
ನವದೆಹಲಿ: ಟೈಪ್ 2 ಮಧುಮೇಹ ಮತ್ತು ಬೊಜ್ಜಿನ ಮೂಲದ ಬಗ್ಗೆ ಹಾಗೂ ನಿರ್ಣಾಯಕ ನಿಯಂತ್ರಣ ಕೇಂದ್ರವಾಗಿ ಮೆದುಳಿನ ಕಾರ್ಯದ ಬಗ್ಗೆ ಹೊಸ ಅಧ್ಯಯನವು ಕುತೂಹಲಕಾರಿ ಹೊಸ ಒಳನೋಟಗಳನ್ನು ನೀಡಿದೆ. ಬೊಜ್ಜಿನ ಬೆಳವಣಿಗೆಯಲ್ಲಿ ಇನ್ಸುಲಿನ್ ಎಂಬ ಹಾರ್ಮೋನ್ ಪ್ರಮುಖ ಪಾತ್ರ ವಹಿಸುತ್ತದೆ. ಇತ್ತೀಚಿನವರೆಗೂ, ಇನ್ಸುಲಿನ್ ನರಶೂಲೆ ಮತ್ತು ಚಯಾಪಚಯ ಅಸ್ವಸ್ಥತೆಗಳಿಗೆ ಕಾರಣವಾಗುತ್ತದೆ ಎಂದು ಸೂಚಿಸುವ ಹಲವಾರು ಚಿಹ್ನೆಗಳು ವಿಶೇಷವಾಗಿ ಮೆದುಳಿನಲ್ಲಿ ಕಂಡುಬಂದಿವೆ, ಯೂನಿವರ್ಸಿಟಿ ಹಾಸ್ಪಿಟಲ್ ಆಫ್ ಟ್ಯೂಬಿಂಗೆನ್, ಜರ್ಮನ್ ಸೆಂಟರ್ ಫಾರ್ ಡಯಾಬಿಟಿಸ್ ರಿಸರ್ಚ್ (DZD) ಮತ್ತು ಹೆಲ್ಮ್‌ಹೋಲ್ಟ್ಜ್ ಮ್ಯೂನಿಚ್‌ನ ಇತ್ತೀಚಿನ ಅಧ್ಯಯನವು ಈ ಹೊಸ ಒಳನೋಟಗಳನ್ನು ನೀಡಿದೆ. ಅನಾರೋಗ್ಯಕರ ದೇಹದ ಕೊಬ್ಬಿನ ವಿತರಣೆ ಮತ್ತು ದೀರ್ಘಕಾಲದ ತೂಕ ಹೆಚ್ಚಳವು ಇನ್ಸುಲಿನ್‌ಗೆ ಮೆದುಳಿನ ಸೂಕ್ಷ್ಮತೆಗೆ ಸಂಬಂಧಿಸಿದೆ. ಮೆದುಳಿನಲ್ಲಿ ಇನ್ಸುಲಿನ್ ಯಾವ ನಿರ್ದಿಷ್ಟ ಕಾರ್ಯಗಳನ್ನು ನಿರ್ವಹಿಸುತ್ತದೆ ಮತ್ತು ಅದು ಸಾಮಾನ್ಯ ತೂಕದ ವ್ಯಕ್ತಿಗಳ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬ…
“ರಾಜ್ಯದಲ್ಲಿ ಅಭಿವೃದ್ಧಿಯ ಪರ್ಸೆಂಟೇಜ್ ತಳಕಚ್ಚಿದೆ, ಕಾಮಗಾರಿಯ ಕಮಿಷನ್ ಪರ್ಸೆಂಟೇಜ್ ಮುಗಿಲುಮುಟ್ಟಿದೆ”
ಬೆಂಗಳೂರು: ರಾಜ್ಯದಲ್ಲಿ ಅಭಿವೃದ್ಧಿಯ ಪರ್ಸೆಂಟೇಜ್ ತಳಕಚ್ಚಿದೆ, ಕಾಮಗಾರಿಯ ಕಮಿಷನ್ ಪರ್ಸೆಂಟೇಜ್ ಮುಗಿಲುಮುಟ್ಟಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ನಮ್ಮ ಬಿಜೆಪಿ ಸರ್ಕಾರದ ಅವಧಿಯಲ್ಲಿ 40% ಕಮಿಷನ್ ಸರ್ಕಾರ ಎಂದು ಅಪಪ್ರಚಾರದ ಜಾಲ ವಿಸ್ತರಿಸಿ ಅಧಿಕಾರಕ್ಕೆ ಬಂದವರು ನೀವು. ನಿಮ್ಮ ಅವಧಿಯಲ್ಲಿ 80 % ಕಮಿಷನ್ ದಂಧೆ ನಡೆಯುತ್ತಿದೆ ಎಂದು ಸ್ವತಃ ಗುತ್ತಿಗೆದಾರರೇ ನಿಮ್ಮ ಮುಂದೆ ದೂರಿಕೊಂಡರೂ ಅದನ್ನು ಲಘುವಾಗಿ ಪರಿಗಣಿಸಿರುವ ನೀವು ಕಮಿಷನ್ ನೀವೇಕೆ ನೀಡುತ್ತೀರಿ? ಎಂದು ಗುತ್ತಿಗೆದಾರರನ್ನೇ ಬೆದರಿಸಿದ್ದೀರಿ. – ಬಿ.ವೈ.ವಿಜಯೇಂದ್ರ. ಖಾಲಿಯಾಗಿರುವ ಸರ್ಕಾರದ ಖಜಾನೆಯಲ್ಲಿ ಅಭಿವೃದ್ಧಿಗಾಗಿ ಬಳಸಲು ಬಿಡಿಗಾಸೂ ಇಲ್ಲ, ಇನ್ನು ಗುತ್ತಿಗೆದಾರರಿಗೆ ಬಾಕಿ ಬಿಲ್ ಪಾವತಿಸಲು ಹಣವಿಲ್ಲದ ಪರಿಸ್ಥಿತಿ ಇರುವುದು ಅಸಲಿ ಸತ್ಯ,ಆದಾಗ್ಯೂ ಕಮಿಷನ್ ಪಾವತಿಸಿದರೆ ಮಾತ್ರ ಹೇಗಾದರೂ ಮಾಡಿ ಬಿಲ್ ಕೊಡಿಸುವುದಾಗಿ ಅಧಿಕಾರಿಗಳ ಮೂಲಕ ಸಂಕಷ್ಟಿತ ಗೊತ್ತಿಗೆದಾರರ ಬೆನ್ನು ಹತ್ತಲಾಗಿದೆ, ಇದನ್ನು ನೇರಾ ನೇರ ನಿಮ್ಮ ಮುಂದೆಯೇ ಗುತ್ತಿಗೆದಾರರು…
ಸಿಸಿಬಿ ಭರ್ಜರಿ ಬೇಟೆ: ಇಬ್ಬರು ಡ್ರಗ್ ಪೆಡ್ಲರ್’ಗಳ ಸೆರೆ
ಬೆಂಗಳೂರು: ರಾಜಧಾನಿ ಬೆಂಗಳೂರಿನ ಸಿಸಿಬಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಡ್ರ್ಯಾಗ್ ಮಾಫಿಯಾವನ್ನು ಬೇಧಿಸಿದ್ದಾರೆ. ಮಾದಕದ್ರವ್ಯ ನಿಗ್ರಹದಳ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ಗಳನ್ನು ಸೆರೆಹಿಡಿದಿದ್ದಾರೆ. ಬಂಧಿತರನ್ನು ನೈಜೀರಿಯಾ ಮೂಲದ ಎಸ್ಸೋ ಜರ್ಮನ್, ಜಾನ್ ಚುಕುವಾ ಎಂದು ಗುರುತಿಸಲಾಗಿದೆ. ಈ ಹಿಂದೆಯೂ ಕೂಡ ಡ್ರಗ್ ಮಾರಾಟ ಆರೋಪದಲ್ಲಿ ಈ ಆರೋಪಿಗಳು ಜೈಲು ಸೇರಿದ್ದರು. ಬಿಡುಗಡೆಯಾದ ನಂತರವೂ ದಂಧೆಯನ್ನು ಮುಂದುವರಿಸಿರುವ ಬಗ್ಗೆ ಮಾಹಿತಿ ಕಲೆಹಾಕಿದ ಸಿಸಿಬಿ ಪೊಲೀಸರು ಈ ಆರೋಪಿಗಳ ಬಗ್ಗೆ ನಿಗಾ ವಹಿಸಿದ್ದರು. ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಸಂದರ್ಭದಲ್ಲೇ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ಆರೋಪಿಗಳನ್ನುಸೆರೆಹಿಡಿದಿದ್ದಾರೆ. ಆರೋಪಿಗಳಿಂದ ಸುಮಾರು 17 ಲಕ್ಷ ರೂಪಾಯಿ ಮೌಲ್ಯದ 108 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕೊಲೆ ಪ್ರಕರಣದಲ್ಲಿ ಆಪ್ತನ ಪಾತ್ರ: ಮಹಾ ಸಚಿವರ ತಲೆದಂಡ
ಮುಂಬೈ: ಮಹಾರಾಷ್ಟ್ರ ರಾಜಕಾರಣದಲ್ಲಿ ಕೋಲಾಹಲ ಸೃಷ್ಟಿಸಿರುವ ಹತ್ಯೆ ಪ್ರಕರಣಕ್ಕೆ ಸಚಿವರ ತಲೆದಂಡವಾಗಿದೆ. ಸರಪಂಚ್ ಸಂತೋಷ್ ದೇಶಮುಖ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಪ್ತ ಸಹಾಯಕನ ಬಂಧನ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ಧನಂಜಯ ಮುಂಡೆ ರಾಜಿನಾಮೆ ನೀಡಿದ್ದಾರೆ. ಮಹಾರಾಷ್ಟ್ರದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಧನಂಜಯ ಅವರ ಆಪ್ತ ವಾಲ್ಮಿಕ್ ಕರಾಡ್ ಸರಪಂಚ್ ಸಂತೋಷ್ ದೇಶಮುಖ್ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಗಿ ಎಂಬುದು ತನಿಖೆಯಲ್ಲಿ ಬಯಲಾಗಿದೆ. ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಸಿಎಂ ದೇವೇಂದ್ರ ಫಡ್ನವೀಸ್ ಅವರು ಧನಂಜಯ ಮುಂಡೆ ರಾಜಿನಾಮೆಗೆ ಸೂಚಿಸಿದ್ದರು ಎನ್ನಲಾಗಿದೆ. ಎನ್‌ಸಿಪಿಯ ಅಜಿತ್ ಪವಾರ್ ಬಣದ ನಾಯಕರಾಗಿರುವ ಧನಂಜಯ ಅವರು ಸಿಎಂ ಸೂಚನೆ ಹಿನ್ನೆಲೆಯಲ್ಲಿ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಸಿಂಧನೂರು ಬಳಿ ಬೈಕ್ಗಳ ಮುಖಾಮುಖಿ ಡಿಕ್ಕಿ; ಮೂವರು ದುರ್ಮರಣ
ರಾಯಚೂರು : ಸಿಂಧನೂರು ತಾಲೂಕಿನ ಮುಳ್ಳೂರು ಕ್ಯಾಂಪ್ ಬಳಿ ಎರಡು ಬೈಕ್ ಮಧ್ಯೆ ಡಿಕ್ಕಿ ಹೊಡೆದ ಪರಿಣಾಮ ಮೂವರು ದುರ್ಮರಣಕ್ಕೀಡಾಗಿದ್ದಾರೆ. ಸಿಂಧನೂರು ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಮೃತರನ್ನು ಶಿವಪ್ಪ ಹುಸೇನಪ್ಪ(37), ಮೌನೇಶ್ ಮಹಾದೇವ(20) ಮತ್ತು ಹನುಮೇಶ(24) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಸಿಂಧನೂರು ಗ್ರಾಮೀಣ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಪೊಳಲಿಯಲ್ಲಿ ಮರುಕಳಿಸಿದ ಮಹಾವೈಭವ; ಶತಚಂಡಿಕಾ ಯಾಗಕ್ಕೆ ಭಕ್ತರ ಮಹಾಪೂರ
ಮಂಗಳೂರು: ದಕ್ಷಿಣ ಭಾರತದ ಪುರಾಣ ಪ್ರಸಿದ್ಧ ಶ್ರೀ ಕ್ಷೇತ್ರ ಪೊಳಲಿ ಇದೀಗ ಮತ್ತೊಂದು ಕೈಂಕರ್ಯದಿಂದ ಆಸ್ತಿಕರ ಗಮನಸೆಳೆದಿದೆ. ‘ಚೆಂಡು ಉತ್ಸವದ ನಾಡು’ ಎಂದೇ ಗುರುತಾಗಿರುವ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ಶತಮಾನದ ನಂತರ ಶತಚಂಡಿಕಾಯಾಗ ನಡೆಯುತ್ತಿದೆ. ಇದು ನಿಜಕ್ಕೂ ಅಪೂರ್ವ ಹಾಗೂ ಅನನ್ಯ ಕೈಂಕರ್ಯ. ಸುಮಾರು 105 ವರ್ಷಗಳ ಹಿಂದೆ ಈ ಕ್ಷೇತ್ರದಲ್ಲಿ ಇಂತಹಾ ಚಂಡಿಕಾ ಯಾಗ ನಡೆದಿತ್ತು. ಲೋಕ ಕಲ್ಯಾಣಾರ್ಥವಾಗಿ ನೆರವೇರುತ್ತಿರುವ ಈ ಶತಚಂಡಿಕಾ ಯಾಗದಲ್ಲಿ ದೇಶದ ವಿವಿಧೆಡೆಯ ಯತಿಗಳು ಭಾಗಿಯಾಗುತ್ತಿದ್ದಾರೆ. ಚೆಂಡು ಉತ್ಸವ ಸಂದರ್ಭದ ಜನೋತ್ಸವಕ್ಕೆ ಈ ಶತಚಂಡಿಕಾ ಯಾಗದ ಸಡಗರ ಸಾಕ್ಷಿಯಾಗುತ್ತಿರುವುದು ವಿಶೇಷ. ಮಾರ್ಚ್ 1 ರಿಂದ ಶ್ರೀ ಕ್ಷೇತ್ರ ಪೊಳಲಿಯಲ್ಲಿ ವೈಧಿಕ ,ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡಿದ್ದು ವಿವಿಧ ಕೈಂಕರ್ಯಗಳು ನೆರವೇರುತ್ತಿದ್ದು, ಮಾರ್ಚ್ 5 ರಂದು ಬುಧವಾರ ಶತಚಂಡಿಕಾಯಾಗ ಪರಿಪೂರ್ಣವಾಗಿ ನೆರವೇರಲಿದೆ. ಲೋಕಕಲ್ಯಾಣಾರ್ಥದ ಜೊತೆಯಲ್ಲೇ ಸಾನಿಧ್ಯ ಅಭಿವೃದ್ದಿಗಾಗಿ ಸುಮಾರು 105 ವರ್ಷಗಳ ಬಳಿಕ…
ಹಕ್ಕಿ ಜ್ವರ ಪಕ್ಷಿಗಳಿಗೆ ಹರಡುವ ಖಾಯಿಲೆಯಾಗಿದ್ದು, ಮನುಷ್ಯರಿಂದ ಮನುಷ್ಯರಿಗೆ ಹರಡುವುದಿಲ್ಲ; ಜನರಿಗೆ ಧೈರ್ಯ ತುಂಬಿದ ಡಿಸಿ, ಸಿಇಒ
ಬಳ್ಳಾರಿ: ಕೋಳಿ ಶೀತ ಜ್ವರ (ಹಕ್ಕಿ ಜ್ವರ)ವು ಹೆಚ್5ಎನ್1 ವೈರಸ್ ನಿಂದ ಪಕ್ಷಿಗಳಿಗೆ ಹರಡುವ ಖಾಯಿಲೆಯಾಗಿದ್ದು, ಮನುಷ್ಯರಿಂದ ಮನುಷ್ಯರಿಗೆ ಸಾಂಕ್ರಮಿಕವಾಗಿ ಹರಡುವುದಿಲ್ಲ. ಹಾಗಾಗಿ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಸ್ಪಷ್ಟನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಸಾಮಾನ್ಯವಾಗಿ ಶೀಥಲ ಪ್ರದೇಶದ ವಲಸೆ ಹಕ್ಕಿಗಳು ವಂಶಾಭಿವೃದ್ಧಿಗಾಗಿ ಬಂದಾಗ ಹಿಕ್ಕೆ, ಪುಕ್ಕ ಹಾಗೂ ಬಾಯಿ ಮತ್ತು ಕಣ್ಣಿನಿಂದ ಹೊರ ಬರುವ ಸ್ರವಿಕೆಯಿಂದ ಕಾಯಿಲೆ ಹರಡು ಸಂಭವವಿದ್ದು, ಪಕ್ಷಿಗಳಿಗೆ ರೋಗವು ಹರಡುತ್ತದೆ ಎಂದು ತಿಳಿಸಿದರು. ಸಾರ್ವಜನಿಕರು ಮಾಂಸ ಮತ್ತು ಮೊಟ್ಟೆಗಳನ್ನು 70 ಡಿಗ್ರಿ ಅಧಿಕ ಉಷ್ಣಾಂಶದಲ್ಲಿ ಕನಿಷ್ಠ 30 ನಿಮಿಷ ಬೇಯಿಸಿದಾಗ ವೈರಾಣು ನಾಶಗೊಳ್ಳುತ್ತದೆ. ಹಾಗಾಗಿ ಸಾರ್ವಜನಿಕರು ಮಾಂಸ ಮತ್ತು ಮೊಟ್ಟೆಗಳನ್ನು ಚೆನ್ನಾಗಿ ಬೇಯಿಸಿದ ನಂತರ ಸೇವನೆ ಮಾಡಬೇಕು ಎಂದು ಹೇಳಿದರು. ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಫೆ.23 ರಂದು ಕುರೇಕುಪ್ಪ…
ಗಡಿ ವಿವಾದ ವಿಚಾರದಲ್ಲಿ ಮಹಾರಾಷ್ಟ್ರದ ಅಚ್ಚರಿಯ ಂದೆ; ಇಬ್ಬರು ಉಸ್ತುವಾರಿ ಸಚಿವರ ನೇಮಕ
ಮುಂಬೈ: ಕೆಎಸ್ಸಾರ್ಟಿಸಿ ಬಸ್ ನಿರ್ವಾಹಕರ ಮೇಲಿನ ದಾಳಿಯ ನಂತರ ಮಹಾರಾಷ್ಟ್ರ-ಕರ್ನಾಟಕ ನಡುವೆ ಗಡಿ ವಿವಾದ ಉಲ್ಬಣಗೊಂಡಿದೆ. ಮಹಾರಾಷ್ಟ್ರ ಸರ್ಕಾರವು ಅಚ್ಚರಿಯ ನಿರ್ಧಾರವೊಂದರಲ್ಲಿ ಗಡಿ ವಿವಾದದ ಉಸ್ತುವಾರಿಗಾಗಿ ಇಬ್ಬರು ಸಚಿವರನ್ನು ನೇಮಕ ಮಾಡಿದೆ. ಈ ಕುರಿತ ಸುದ್ದಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಸಚಿವರಾದ ಚಂದ್ರಕಾಂತ್ ಪಾಟೀಲ್ ಮತ್ತು ಶಂಭುರಾಜ್ ದೇಸಾಯಿ ಅವರನ್ನು ಗಡಿ ವಿವಾದ ಪ್ರಕರಣದಲ್ಲಿ ಮಹಾರಾಷ್ಟ್ರದ ಕಾನೂನು ತಂಡದೊಂದಿಗೆ ಸಮನ್ವಯ ಸಾಧಿಸಲು ಉಸ್ತುವಾರಿ ವಹಿಸಲಾಗಿದೆ ಎನ್ನಲಾಗಿದೆ. ಮಹಾರಾಷ್ಟ್ರ ಸರ್ಕಾರದ ಈ ನಡೆ ಅಚ್ಚರಿಗೆ ಕಾರಣವಾಗಿದೆ.