ಕೇರಳಕ್ಕೂ KSRTC ಮಾದರಿ..! ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕಚೇರಿಗೆ ನೆರೆ ರಾಜ್ಯದ ನಿಯೋಗ ಭೇಟಿ

ಬೆಂಗಳೂರು: ದೇಶದಲ್ಲಿ ಜನಪ್ರಿಯ ಸಾರಿಗೆಗೆ ಹೆಸರಾಗಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಇದೀಗ ಕೇರಳಕ್ಕೂ ಮಾದರಿಯಾಗಿದೆ. ಹಲವಾರು ವಿಶೇಷತೆಗಳಿಂದ ಗಮನಸೆಳೆದಿರುವ KSRTC ಬಗ್ಗೆ ಅಧ್ಯಯನಕ್ಕಾಗಿ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಅಧಿಕಾರಿಗಳ ತಂಡ ಬೆಂಗಳೂರಿನಲ್ಲಿರುವ KSRTC ನಿಗಮದ ಕಚೇರಿ ಹಾಗೂ ಕಾರ್ಯಾಗಾರಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದೆ. ಈ ಸಂದರ್ಭದಲ್ಲಿ ನಿಗಮದಲ್ಲಿನ ಕಾರ್ಮಿಕ ಸ್ನೇಹಿ ಹಾಗೂ ಪ್ರಯಾಣಿಕ ಸ್ನೇಹಿ ಉಪಕ್ರಮಗಳು ಹಾಗೂ ಸಾರಿಗೆಯೇತರ ಆದಾಯದ ವಿಷಯಗಳ ಬಗ್ಗೆ KSRTC ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಅವರು ಶ್ರೀ.ಪಿ.ಎಸ್.ಪ್ರಮೋಜ್‌ ಸಂಕರ್, ಐ.ಒ.ಎಫ್.ಎಸ್. ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರು ಮಾಹಿತಿ ನೀಡಿದರು. ಬೆಂಗಳೂರು ಕೇಂದ್ರೀಯ ವಿಭಾಗದ ಘಟಕ-2ಕ್ಕೆ ಭೇಟಿ ನೀಡಿದ ಕೇರಳ ತಂಡವು ವಿವಿಧ ಮಾದರಿಯ ಬಸ್ ಬ್ರಾಂಡಿಂಗ್ ಮತ್ತು ನಿರ್ವಹಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿತು. ಬಸ್ಸುಗಳ ಕಾರ್ಯ ನಿರ್ವಹಣೆ, ಪುನಶ್ಚೇತನ ಕಾರ್ಯ, ರೂ.1 ಕೋಟಿ On…

ಕೃಷ್ಣಾ ನದಿಗೆ ಹಾರಿ ತಾಯಿ, ಮೂವರು ಮಕ್ಕಳು ಆತ್ಮಹತ್ಯೆ

ಬೆಳಗಾವಿ: ಮಹಿಳೆಯೊಬ್ಬಳು ಮೂವರು ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಬಾಗ ಸಮೀಪದ ಚಿಂಚಲಿ ಬಳಿ ನಡೆದಿದೆ. 32 ವರ್ಷದ ಶಾರದಾ ಎಂಬವರು ತನ್ನ ಮಕ್ಕಳ ಜೊತೆ ನದಿಗೆ ಹಾರಿದ್ದಾರೆ. ಈ ಘಟನೆಯನ್ನು ಕಂಡ ಸ್ಥಳೀಯರು ಹೆಣ್ಣುಮಗುವನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಚಿಕಿತ್ಸಗೆ ಸ್ಪಂದಿಸದೆ ಆಕೆ ಸಾವಿಗೀಡಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಕುಡಚಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ವಿರುದ್ಧ FIR: ವಿಜಯೇಂದ್ರ ಆಕ್ರೋಶ

ಬೆಂಗಳೂರು: ಮಂಗಳೂರಿನ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ವಿರುದ್ಧ ಪೊಲೀಸರು ಎಫ್.ಐ.ಆರ್. ದಾಖಲಿಸಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ಹೊರಹಾಕಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಜನಪ್ರತಿನಿಧಿಗಳನ್ನು ಬೆದರಿಸಲು ಕಾಂಗ್ರೆಸ್ ಸರ್ಕಾರ ಪೊಲೀಸರನ್ನು ಬಳಸಿಕೊಳ್ಳುತ್ತಿದೆ. ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ವಿರುದ್ಧ ದುರುದ್ದೇಶಪೂರಿತ ಎಫ್ಐಆರ್ ದಾಖಲಿಸಿರುವ ಕ್ರಮ ಅತ್ಯಂತ ಖಂಡನೀಯ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಪ್ರತಿನಿಧಿಗಳು ನಿರ್ಭಯವಾಗಿ ತಮ್ಮ ಕರ್ತವ್ಯ ನಿರ್ವಹಿಸದಂತೆ ಬೆದರಿಸುವ ಮಾರ್ಗವನ್ನು ಕಾಂಗ್ರೆಸ್ ಅನುಸರಿಸುತ್ತಿದೆ ಎಂದು ವಿಜಯೇಂದ್ರ ದೂರಿದ್ದಾರೆ. ಈ ಹಿಂದೆಯೂ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ಮೇಲೂ ಪೊಲೀಸರು ದೂರು ದಾಖಲಿಸಿಕೊಂಡು ದೌರ್ಜನ್ಯ ಮೆರೆಯಲು ಹೊರಟಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತನ್ನ ಅಸ್ತಿತ್ವಕ್ಕಾಗಿ ತಿಣುಕಾಡುತ್ತಿರುವ ಕಾಂಗ್ರೆಸ್ ಹತಾಶೆಯಿಂದ ಬಿಜೆಪಿ ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರನ್ನು ಕಾನೂನು ಸುವ್ಯವಸ್ಥೆಯ ಹೆಸರಿನಲ್ಲಿ ಹತ್ತಿಕ್ಕಲು ಪೊಲೀಸ್ ಠಾಣೆಗಳನ್ನು ಬಳಸಿಕೊಳ್ಳುತ್ತಿರುವುದು ಸಾಂವಿಧಾನಿಕ ವ್ಯವಸ್ಥೆಯನ್ನು ಅಪಮಾನಿಸಿದಂತಿದೆ ಎಂದು…

ಮಂಗಳೂರು ರಥಬೀದಿ ಶ್ರೀ ಕುಡ್ತೆರಿ ಮಹಾಮಾಯ ದೇವಸ್ಥಾನದ ‘ಬ್ರಹ್ಮರಥೋತ್ಸವ’ ವೈಭವ

ಮಂಗಳೂರು: ಆಸ್ತಿಕರ ನಾಡು, ರಾಜ್ಯ ಕರಾವಳಿ ಇದೀಗ ಸಾಲು ಸಾಲು ವೈದ್ಧಿಕ ಕೈಂಕರ್ಯಗಳಿಗೆ ಸಾಕ್ಷಿಯಾಗುತ್ತಿವೆ. ಅದರ ನಡುವೆಯೇ ಮಂಗಳೂರಿನಲ್ಲಿ ನೆರವೇರಿದ ‘ಮಹಾಮಾಯ ರಥೋತ್ಸವ’ವು ಮಹಾ ವೈಭವವಾಗಿ ಗಮನಸೆಳೆಯಿತು. ಮಂಗಳೂರು ನಗರದ ರಥಬೀದಿಯಲ್ಲಿರುವ ಶ್ರೀ ಕುಡ್ತೆರಿ ಮಹಾಮಾಯ ದೇವಸ್ಥಾನದ ಬ್ರಹ್ಮರಥೋತ್ಸವ ಮಂಗಳವಾರ ಭಕ್ತಸಾಗರದ ನಡುವೆ ವಿಜೃಂಭಣೆಯಿಂದ ಜರಗಿತು. ಬೆಳಿಗ್ಗೆ ಮಹಾಪ್ರಾರ್ಥನೆ ಬಳಿಕ ಶ್ರೀ ದೇವರಿಗೆ ಶತ ಕಲಶಾಭಿಷೇಕ , ಗಂಗಾಭಿಷೇಕ , ಪುಳಕಾಭಿಷೇಕ , ಕನಕಾಭಿಷೇಕ ಗಳು ನಡೆದವು. ಯಜ್ಞ ಮಂಟಪದಲ್ಲಿ ನಡೆದ ಮಹಾ ಪೂರ್ಣಾಹುತಿ ಸಂದರ್ಭದಲ್ಲಿ ಧರ್ಮಿಕ ಪ್ರಮುಖರು ಯತಿಗಳು ಭಾಗಿಯಾದರು. ಸಂಜೆ ಬೆಳ್ಳಿ ಪಲ್ಲಕಿಯಲ್ಲಿ ಶ್ರೀ ದೇವರು ವಿರಾಜಮಾನರಾಗಿ ರಥಾರೋಹಣವು ಅನನ್ಯ ಮಹೋತ್ಸವವಾಗಿ ಆಸ್ತಿಕರ ಗಮನಕೇಂದ್ರೀಕರಿಸಿತು. ಭಕ್ತರು ರಥ ಎಳೆದು ಪುನೀತರಾದರು. ಶ್ರೀ ದೇವಳದ ಆಡಳಿತ ಮೊಕ್ತೇಸರರಾದ ಸಿ.ಎ.ಶ್ರೀನಿವಾಸ್ ಕಾಮತ್, ಮಾರೂರ್ ಸುಧೀರ್ ಪೈ, ಪ್ರಕಾಶ್ ಕಾಮತ್, ಅನಂತ್ ಭಟ್, ಗಣೇಶ್ ಭಟ್, ದಕ್ಷಿಣ ಕನ್ನಡ…