ಬಹುಭಾಷಾ ನಟಿ ಶಬಾನಾ ಆಜ್ಮಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ

ಬೆಂಗಳೂರು: ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ನೀಡುವ ಜೀವಮಾನ ಸಾಧನೆ ಪ್ರಶಸ್ತಿಗೆ ಬಹುಭಾಷಾ ನಟಿ ಶಬಾನಾ ಆಜ್ಮಿ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನಲ್ಲಿ‌ ಆಯೋಜಿಸಿರುವ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಂದರ್ಭದಲ್ಲಿ ಈ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಜೀವಮಾನ ಸಾಧನೆ ಪ್ರಶಸ್ತಿಗೆ ಭಾಜನರಾಗುತ್ತಿರುವ ಶಬಾನಾ ಆಜ್ಮಿ ಅವರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ‌ ಆಯೋಜಿಸಿರುವ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆಯಾದ ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶಬಾನಾ ಆಜ್ಮಿ ಅವರಿಗೆ ಅಭಿನಂದನೆಗಳು ಎಂದು ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿಸ್ದದಾರೇ. 70ರ ದಶಕದಲ್ಲಿ ಕನ್ನೇಶ್ವರ ರಾಮ ಚಿತ್ರದ ಮೂಲಕ‌ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿ ಕನ್ನಡ ಸಿನಿರಸಿಕರ ಹೃದಯಗೆದ್ದ ಶಬಾನಾ ಅವರು ದಕ್ಷಿಣ ಭಾರತದ ಚಿತ್ರಗಳು ಹಾಗೂ ಹಿಂದಿ ಭಾಷೆಯ ಚಲನಚಿತ್ರಗಳಲ್ಲಿ ನಟಿಸಿ, ಸೈ ಎನಿಸಿಕೊಂಡವರು. ಸುಮಾರು 50 ವರ್ಷಗಳ…

ಮುಸ್ಲಿಂ ವಿದ್ಯಾರ್ಥಿಗಳ ವಿದೇಶಿ ಕಲಿಕೆಗಾಗಿ ಪ್ರೋತ್ಸಾಹಧನ..! ಹಿಂದೂ ವಿದ್ಯಾರ್ಥಿಗಳಿಗೆ ಯಾಕಿಲ್ಲ? ವಿಜಯೇಂದ್ರ ಪ್ರಶ್ನೆ

ಬೆಂಗಳೂರು: ಮುಖ್ಯಮಂತ್ರಿಗಳು ಮಂಡಿಸಿದ ಬಜೆಟ್ ನಿರಾಸಾದಾಯಕವಾಗಿದೆ ಎಂದಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯದ ಅಭಿವೃದ್ಧಿಗೆ ಪೂರಕವಾಗಿಲ್ಲ. ಅಲ್ಪಸಂಖ್ಯಾತರನ್ನು ತೃಪ್ತಿ‌ ಪಡಿಸಲು ಧರ್ಮ-ಧರ್ಮಗಳ ನಡುವೆ ವಿಭಜಿಸುವ ದುಸ್ಸಾಹಸಕ್ಕೆ ಸಿದ್ದರಾಮಯ್ಯರವರು ಕೈ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಸ್ಲಿಮ್ ಮಹಿಳೆಯರಿಗೆ ಸ್ವಯಂರಕ್ಷಣೆಗಾಗಿ ತರಬೇತಿ ಯೋಜನೆ ಘೋಷಿಸಿದ್ದಾರೆ. ಈ ಯೋಜನೆ ಹಿಂದೂ ಮಹಿಳೆಯರಿಗೆ ಯಾಕಿಲ್ಲ? ಮುಸ್ಲಿಂ ಬಡ ಮಹಿಳೆಯರ ಸರಳ ವಿವಾಹಕ್ಕೆ ರೂ. 50,000 ಪ್ರೋತ್ಸಾಹ ಧನ ಘೋಷಣೆ ಮಾಡಿದ್ದಾರೆ. ಹಿಂದೂಗಳಲ್ಲಿ ಬಡ ಮಹಿಳೆಯರು ಇಲ್ಲವೇ? ಮುಸ್ಲಿಂ ವಿದ್ಯಾರ್ಥಿಗಳ ವಿದೇಶಿ ಕಲಿಕೆಗಾಗಿ ಪ್ರೋತ್ಸಾಹಧನ ರೂ. 20 ಲಕ್ಷ ಇದ್ದದ್ದನ್ನು ರೂ. 30 ಲಕ್ಷಕ್ಕೆ ಏರಿಸಲಾಗಿದೆ. ಯಾಕೆ ಈ ರೀತಿಯ ಯೋಜನೆಗಳು ಹಿಂದೂ ವಿದ್ಯಾರ್ಥಿಗಳಿಗಿಲ್ಲ? ಎಂದು ವಿಜಯೇಂದ್ರ ಪ್ರಶ್ನಿಸಿದ್ದಾರೆ. <blockquote class=”twitter-tweet” data-media-max-width=”560″><p lang=”kn” dir=”ltr”>ಮುಖ್ಯಮಂತ್ರಿಗಳು ಮಂಡಿಸಿದ ಬಜೆಟ್ ನಿರಾಸಾದಾಯಕವಾಗಿದೆ. ರಾಜ್ಯದ ಅಭಿವೃದ್ಧಿಗೆ ಪೂರಕವಾಗಿಲ್ಲ. ಅಲ್ಪಸಂಖ್ಯಾತರನ್ನು ತೃಪ್ತಿ‌ ಪಡಿಸಲು ಧರ್ಮ-ಧರ್ಮಗಳ ನಡುವೆ ವಿಭಜಿಸುವ…

ಸರ್ವರ ಹಿತ ಕಾಂಗ್ರೆಸ್‌ ಸರ್ಕಾರದ ಪಥ: ರಣದೀಪ್‌ ಸುರ್ಜೇವಾಲ

ಬೆಂಗಳೂರು: ʻʻನನ್ನ ದೃಷ್ಟಿಯಲ್ಲಿ ಹೆಣ್ಣು ಕೇವಲ ಮಾನುಷಿಯಲ್ಲ, ಅಬಲೆಯೂ ಅಲ್ಲ. ಅವಳೊಂದು ಮಹಾಶಕ್ತಿʼʼ ಎಂಬುದಾಗಿ ನಮ್ಮ ರಾಷ್ಟ್ರಕವಿ ಕುವೆಂಪು ಅವರು ಹೇಳಿದ್ದು ಅಕ್ಷರಶಃ ಸತ್ಯ. ಈ ವಾಕ್ಯದಂತೆ ಕರ್ನಾಟಕದ ನಮ್ಮ ಕಾಂಗ್ರೆಸ್‌ ಸರ್ಕಾರ ನಡೆಯುತ್ತಿದೆ. ಕರ್ನಾಟಕ ರಾಜ್ಯದ ಸಮಗ್ರ ಅಭಿವೃದ್ಧಿಯೇ ನಮ್ಮ ಕಾಂಗ್ರೆಸ್‌ ಸರ್ಕಾರದ ಸಂಕಲ್ಪವಾಗಿದೆ. ಅಲ್ಲದೆ, ʻಸರ್ವರ ಹಿತ – ಕಾಂಗ್ರೆಸ್ ಸರ್ಕಾರದ ಫಥʼ ಎಂಬುದು ನಮ್ಮ ಧ್ಯೇಯವಾಕ್ಯವಾಗಿದೆ ಎಂದು ಕರ್ನಾಟಕ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಹೇಳಿದ್ದಾರೆ. ರಾಜ್ಯ ಬಜೆಟ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಅವರು, ಬಜೆಟ್ 4.09 ಲಕ್ಷ ಕೋಟಿ ರೂ.ಗಳನ್ನು ಒಳಗೊಂಡಿದೆ. ಕಳೆದ ವರ್ಷದ ಬಜೆಟ್ ಅಂದಾಜುಗಳಿಗಿಂತ ಶೇ. 10.3ರಷ್ಟು ಬೆಳವಣಿಗೆ ಕಂಡುಬಂದಿದೆ. ಕರ್ನಾಟಕ ರಾಜ್ಯದ ಜಿಡಿಪಿ 7.4% ರಷ್ಟು ಬೆಳೆದಿದೆ ಅದರೊಂದಿಗೆ ಕೃಷಿ ಕ್ಷೇತ್ರದಲ್ಲಿ ಕೂಡ ಶೇ. 4ರಷ್ಟು ಬೆಳವಣಿಗೆಯನ್ನು ಕಂಡಿದೆ. ಕರ್ನಾಟಕ ರಾಜ್ಯದ ಜಿಡಿಪಿ ರಾಷ್ಟ್ರೀಯ ಬೆಳವಣಿಗೆಯನ್ನು…

KSRTC ಬಳಗದಲ್ಲಿ ‘ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ’: ಸ್ತ್ರೀ ಸಾಧನೆಗೆ ಸಚಿವರೂ ಸಲಾಂ.. ಅರ್ಥಪೂರ್ಣ

ಬೆಂಗಳೂರು: ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ KSRTC ಕೇಂದ್ರ ಕಚೇರಿಯಲ್ಲಿ ವಿಶಿಷ್ಟವಾಗಿ ಆಚರಿಸಲಾಯಿತು. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಈ ಸಮಾರಂಭದಲ್ಲಿ ಸ್ಫೂರ್ತಿಯಾದರು. ಪದ್ಮಶ್ರೀ ಪುರಸ್ಕೃತ ಕೊಪ್ಪಳದ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತರ ರವರು ಈ ಸಮಾರಂಭದಲ್ಲಿ ಕುತೂಹಲದ ಕೇಂದ್ರಬಿಂದುವಾದರೂ. ತಮ್ಮ ಗಾನಸುಧೆ ಹಾಡುವ ಮೂಲಕ ಕಾರ್ಯಕ್ರಮಕ್ಕೆ ಮೆರುಗು ತುಂಬಿದ ಅವರಿಗೆ ಗೌರವ ಧನ ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ, ಎಲ್ಲಾ ರಂಗಗಳಲ್ಲಿಯೂ ಮಹಿಳೆಯರು ಈಗ ಪುರುಷರಿಗೆ ಸಮಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಮ್ಮ ನಿಗಮದ ತಾಂತ್ರಿಕ ಸಿಬ್ಬಂದಿ ಪುರುಷ ಸಿಬ್ಬಂದಿಯಷ್ಟೇ ಕಾರ್ಯಕ್ಷಮತೆಯಿಂದ ಕಾರ್ಯನಿರ್ವಹಿಸಿ, ವಾಹನಗಳ ಪುನಃಶ್ಚೇತನ ಕಾರ್ಯದಲ್ಲಿ ಮುಂಚೂಣಿಯಲ್ಲಿರುವುದು ಅಭಿನಂದನೀಯ ಎಂದರು. ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಎಲ್ಲಾ ರೀತಿಯಿಂದಲೂ ಅನುಕೂಲ ಕಲ್ಪಿಸಲಾಗುತ್ತಿದೆ, ಮಾರ್ಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನಿರ್ವಾಹಕಿಯರಿಗೂ ಕೂಡ ಮಾರ್ಗ ನಿಯೋಜನೆಯಲ್ಲಿ…

ನಟಿ ರನ್ಯಾ ಚಿನ್ನ ಕಳ್ಳಸಾಗಣೆ ಪ್ರಕರಣ: ತನಿಖೆಯ ಅಖಾಡಕ್ಕೆ ಧುಮುಕಿದ ಸಿಬಿಐ

ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಬಂಧನಕ್ಕೊಳಗಾಗಿದ್ದು, ಇದೀಗ ಸಿಬಿಸಿ ಕೂಡಾ ಪ್ರತನಿಖೆಯ ಅಖಾಡಕ್ಕೆ ಧುಮುಕಿದೆ. ನಟಿ ರನ್ಯಾ ರಾವ್ ವಿರುದ್ಧ ಡಿಆರ್​ಐ ಅಧಿಕಾರಿಗಳು ನೀಡಿದ ಮಾಹಿತಿ ಆಧರಿಸಿ ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ ಎನ್ನಲಾಗಿದೆ. ಸಿಬಿಐ ಮುಂಬೈ ಹಾಗೂ ಬೆಂಗಳೂರಿನಲ್ಲಿ ಪರಿಶೀಲನೆಯಲ್ಲಿ ತೊಡಗಿರುವ ಸಿಬಿಐ ಇದೀಗ ತಾನು ಕೂಡಾ ತನಿಖೆಗೆ ಮುಂದಾಗಿದೆ. ವಿದೇಶದಿಂದ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಸಂದರ್ಭದಲ್ಲಿ ನಟಿಯನ್ನು ಬಂಧಿಸಲಾಗಿತ್ತು. ಆಕೆಯಿಂದ ಸುಮಾರು 14.20 ಕೆಜಿ ಚಿನ್ನ ನಗದು ಸೇರಿ 17.29 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ಡಿಆರ್​ಐ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಗಂಭೀರ ಆರೋಪದಲ್ಲಿ ಬಂಧಿತರಾಗಿರುವ ನಟಿ ರನ್ಯಾ ಅವರನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಇಸ್ರೇಲ್ ಮೂಲದ ಪ್ರವಾಸಿ ಮಹಿಳೆ ಮೇಲೆ ಗ್ಯಾಂಗ್ ರೇಪ್, ಆರೋಪಿಗಳ ಪತ್ತೆಗಾಗಿ 6 ತಂಡಗಳ ರಚನೆ

ಕೊಪ್ಪಳ: ಗಂಗಾವತಿ ಸಮೀಪ ತುಂಗಭದ್ರ ಎಡದಂಡೆ ಕಾಲುವೆ ಬಳಿ ಇಬ್ಬರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಗುರುವಾರ ತಡರಾತ್ರಿ ಸಂಗೀತ ಕೇಳುತ್ತಾ ಕುಳಿತುಕೊಂಡಿದ್ದ ಮಹಿಳೆಯರ ಮೇಲೆ ಮೂವರು ಹಲ್ಲೆ ನಡೆಸಿ ಇಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ ಎಂದು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿದೂರು ದಾಖಲಾಗಿದೆ. ಇಸ್ರೇಲಿ ಪ್ರವಾಸಿ ಮತ್ತು ಇತರ ಮೂವರು ಪುರುಷ ಪ್ರವಾಸಿಗರು ತಂಗಿದ್ದ ಹೋಂಸ್ಟೇಯ 29 ವರ್ಷದ ಮಹಿಳಾ ನಿರ್ವಾಹಕಿ ಪ್ರವಾಸಿಗರೊಂದಿಗೆ ತುಂಗಭದ್ರಾ ಎಡಗಂಡೆ ಕಾಲುವೆಯ ಪಕ್ಕದಲ್ಲಿ ಕುಳಿತು ಸಂಗೀತ ಆಲಿಸುತ್ತಿದ್ದರು. ಆ ವೇಳೆ ಆಗಮಿಸಿದ್ದ ಕಾಮುಕರು ಇಸ್ರೇಲಿ ಪ್ರವಾಸಿ ಮಹಿಳೆ ಹಾಗೂ ಆಕೆಯ ಜೊತೆಗಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಮೂವರು ಪುರುಷ ಪ್ರವಾಸಿಗರನ್ನು ಕಾಲುವೆಗೆ ತಳ್ಳಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಆರು ತಂಡಗಳನ್ನು ರಚಿಸಲಾಗಿದೆ ಎಂದು ಅಧಿಕಾರಿಗಳು…

ಮತ್ತೆ ಎತ್ತಿನಹೊಳೆ ಸದ್ದು; ಮಾ.18 ರಂದು ರಾಜ್ಯದ ನಿಯೋಗ ದೆಹಲಿಗೆ

ಬೆಂಗಳೂರು: ಎತ್ತಿನ ಹೊಳೆ ಇದೀಗ ಮತ್ತೆ ಸುದ್ದಿಯ ಮುನ್ನೆಲೆಗೆ ಬಂದಿದೆ ಎತ್ತಿನಹೊಳೆ ಕಾಮಗಾರಿ ಸಲುವಾಗಿ ಅರಣ್ಯ ಭೂಮಿ ಬಳಕೆಗೆ ಅನುಮತಿ ಕೇಳಲು ಮಾ.18 ರಂದು ರಾಜ್ಯದ ನಿಯೋಗ ದೆಹಲಿಗೆ ತೆರಳಲಿದೆ. ಈ ಸಂಬಂಧ ಮಾಹಿತಿ ಹಂಚಿಕೊಂಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಮಾ.18 ರಂದು ತಾವು ದೆಹಲಿಗೆ ತೆರಳಿ ಕೇಂದ್ರದ ನಾಯಕರ ಜೊತೆ ಮಾತುಕತೆ ನಡೆಸುವುದಾಗಿ ತಿಳಿಸಿದ್ದಾರೆ. ಕೇಂದ್ರ ಪರಿಸರ ಇಲಾಖೆಯಿಂದ ಅನುಮತಿ ದೊರೆಯದ ತನಕ ಎತ್ತಿನಹೊಳೆ ಕಾಮಗಾರಿ ಮುಂದುವರೆಸಲು ಕಷ್ಟ. 508 ಎಕರೆ 1 ಗುಂಟೆ ವಿಸ್ತೀರ್ಣದ ಅರಣ್ಯ ಭೂಮಿ ಬಳಕೆಗೆ ದೆಹಲಿಗೆ ತೆರಳಿ ಕೇಂದ್ರ ಪರಿಸರ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು. ಎಲ್ಲಾ ಅಡೆತಡೆಗಳನ್ನು ನಿವಾರಿಸಿ ತುಮಕೂರಿಗೆ ನೀರು ತಂದು, ಚಿಕ್ಕಬಳ್ಳಾಪುರಕ್ಕೆ ನೀರು ತರಲಾಗುವುದು ಎಂದು ಡಿಕೆಶಿ ಭರವಸೆ ನೀಡಿದರು.