ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಸಿಬಾರ ಗ್ರಾಮದ ಬಳಿ ಲಾರಿ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಐವರು ಸಾವನ್ನಪ್ಪಿದ್ದಾರೆ. ಭಾನುವಾರ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ರೇಣುಕಾ ಯಲ್ಲಮ್ಮ ದೇವಸ್ಥಾನದ ಪ್ರಸಾದ ಪತ್ತೆಯಾಗಿದೆ. ಮೃತರನ್ನು ಬಿಎಂಟಿಸಿ ನಿವೃತ್ತ ನೌಕರ ಶಾಂತಮೂರ್ತಿ, ವಿದ್ಯಾರಣ್ಯಪುರದ ರುದ್ರಸ್ವಾಮಿ, ಮಲ್ಲಿಕಾರ್ಜುನ, ನಿರ್ದೇಚಿದಂಬರಾಚಾರ್ ಎಂದು ಗುರುತಿಸಲಾಗಿದೆ. ಇವರು ಬೆಂಗಳೂರು ಮೂಲದವರೆನ್ನಲಾಗಿದೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Day: March 9, 2025
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಡಿಗೆ ಮತ್ತೆ 3 ರಾಷ್ಟ ಮಟ್ಟದ ಪ್ರಶಸ್ತಿಗಳು.
ಬೆಂಗಳೂರು: ದೇಶದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟದ ( ASRTU) 2023-24ನೇ ಸಾಲಿನ 3 ರಾಷ್ಟ್ರೀಯ ಸಾರ್ವಜನಿಕ ಬಸ್ ಸಾರಿಗೆ ಪ್ರಶಸ್ತಿಗಳು (National Transport Excellence Award) ಲಭಿಸಿವೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟ ( ASRTU)ದ ವ್ಯಾಪ್ತಿಯಲ್ಲಿ ದೇಶದ 62 ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳು ಸದಸ್ಯತ್ವವನ್ನು ಹೊಂದಿವೆ. ಈ ಒಕ್ಕೂಟವು 1965 ರ ಆಗಸ್ಟ್ 13ರಂದು ಅಸ್ತಿತ್ವಕ್ಕೆ ಬಂದಿದ್ದು, ಭಾರತ ಸರ್ಕಾರದ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯದ ನಿರ್ದೇಶನದ ಅನುಸಾರ ಕಾರ್ಯನಿರ್ವಹಿಸುತ್ತದೆ. ಈ ಸಂಸ್ಥೆಯು 59 ವರ್ಷಗಳ ಅನುಭವವನ್ನು ಹೊಂದಿದ್ದು, ದೇಶದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ. KSRTCಗೆ ಅಶ್ವಮೇಧ ಬ್ರ್ಯಾಂಡಿಂಗ್ ಹಾಗೂ ವರ್ಚಸ್ಸು ಅಭಿವೃದ್ಧಿ, ಕಾರ್ಮಿಕರ ಕಲ್ಯಾಣಕ್ಕಾಗಿ ಕೈಗೊಂಡಿರುವ ವಿನೂತನ ಯೋಜನೆಗಳು ಹಾಗೂ ಗಣಕೀಕರಣ ಉಪಕ್ರಮಗಳಿಗಾಗಿ ಮೂರು ಪ್ರಶಸ್ತಿಗಳು ಲಭಿಸಿವೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟ…
‘ನಮ್ಮತನ ಮಾರ್ಚ್ 8ಕ್ಕೆ ಮಾತ್ರ ಸೀಮಿತವಾಗಿರಬಾರದು’: ಭಾರತಿ ವಿಷ್ಣು ವರ್ಧನ್
ಆನೇಕಲ್: ಮಹಿಳೆಯರು ವಿಶ್ವದಾದ್ಯಂತ ಅನೇಕ ರಂಗಗಳಲ್ಲಿ ಯಶಸ್ವಿಯಾಗಿ ತಮ್ಮ ಛಾಪು ಮೂಡಿಸಿದ್ದು ನಮ್ಮತನವನ್ನು ಮಾರ್ಚ್ 8ಕ್ಕೆ ಮಾತ್ರ ಸೀಮಿತಗೊಳಿಸ ಬಾರದು. ಸಾಗರ ತಳ, ವಿಶಾಲ ಭೂಮಿ, ಆಗಸ ದಾಟಿ ಮುನ್ನಡೆಯಬೇಕೆಂದು ಪಂಚಭಾಷಾ ತಾರೆ ಪದ್ಮಶ್ರೀ ಡಾ. ಭಾರತಿ ವಿಷ್ಣು ವರ್ಧನ್ ಕರೆ ನೀಡಿದರು. ಆನೇಕಲ್ ಸಮೀಪ ಅಲಯಂನ್ಸ್ ವಿಶ್ವವಿದ್ಯಾಲಯ ಏರ್ಪಡಿಸಿದ್ದ, ವಿಶ್ವ ಮಹಿಳಾ ಮಹಿಳಾ ದಿನಾಚರಣೆಯ ಅಂಗವಾಗಿ ಸಮಾಜದ ವಿವಿಧ ಸ್ಥರಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಸಾಧಕಿ ಮಹಿಳೆಯರಿಗೆ ಮಹಿಳಾ ಸ್ಪಂದನ ಅವಾರ್ಡ್ ವಿತರಿಸಿ ಮಾತನಾಡಿದ ಅವರು, ತಾಯಿಯಾಗಿ, ಸಹೋದರಿಯಾಗಿ, ಮಗಳಾಗಿ ವಿವಿಧ ಹಂತಗಳಲ್ಲಿ ಹೆಣ್ಣು ಪರಿಪೂರ್ಣತೆಯಿಂದ ತನ್ನ ಪಾತ್ರವನ್ನು ಯಶಸ್ವಿಯಾಗಿ ನಿರ್ವಹಿಸುತ್ತಾಳೆ. ತ್ಯಾಗಮಯಿಯಾದ ಆಕೆ ತನ್ನ ಕುಟುಂಬ ದೇಶ ಕ್ಕಾಗಿ ಕೊಡುಗೆಯನ್ನೂ ನೀಡಿ ಇತರರ ಗೆಲುವನ್ನು ತನ್ನದೆಂದು ಪರಿಭಾವಿಸಿ ತೃಪ್ತಿ ಪಡುತ್ತಾಳೆ. ಮಹಿಳೆಯರು ಇದ್ದೆಡೆ ಗೌರವ ಶಕ್ತಿ ಇದ್ದು ಪ್ರಭಾವಿತಳಾಗಿ ಕಾಣುತ್ತಾಳೆ ಎಂದರು. ಶಿಕ್ಷಣ, ಅರೋಗ್ಯ,…
ಭೀಕರ ಅಪಘಾತ; ಬಸ್ ಪಲ್ಟಿ, ಧಗಧಗಿಸಿದ ಕಾರು; ಇಬ್ಬರು ಸಜೀವ ದಹನ
ಚಿಕ್ಕಬಳ್ಳಾಪುರ: ಚಿಂತಾಮಣಿ ಬಳಿ ಖಾಸಗಿ ಬಸ್ ಮತ್ತು ಕಾರು ಅಪಘಾತಕ್ಕೀಡಾಗಿ ಪ್ರಯಾಣಿಕರಿಬ್ಬರು ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೋಪಲ್ಲಿ ಗೇಟ್ ಬಳಿ ಈ ಅಪಘಾತ ನಡೆದಿದೆ. ಬಸ್ಸು ಡಿಕ್ಕಿಯಾದ ಸಂದರ್ಭದಲ್ಲಿ ಕಾರು ಧಗಧಗಿಸಿ ಹೊತ್ತಿ ಉರಿದಿದ್ದು ಇಬ್ಬರು ಸಜೀವ ದಹನವಾಗಿದ್ದಾರೆ. ಮೃತರನ್ನು ಆಂಧ್ರ ಮೂಲದ ಧನಂಜಯ ರೆಡ್ಡಿ, ಮತ್ತು ಕಲಾವತಿ ಮೃತರು ಎಂದು ಗುರುತಿಸಲಾಗಿದೆ. ಅಪಘಾತಕ್ಕೀಡಾದ ಬಸ್ಸು ಕೂಡಾ ಉರುಳಿ ಬಿದ್ದಿದ್ದು ಅದರಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ.
ರಾಜ್ಯಕ್ಕೆ ಬರುವ ಪ್ರವಾಸಿಗರ ರಕ್ಷಣೆಗೆ ಸರ್ಕಾರ ಬದ್ಧ: ಸಿಎಂ ಭರವಸೆ
ಬೆಂಗಳೂರು: ಕೊಪ್ಪಳ ಜಿಲ್ಲೆ ಗಂಗಾವತಿ ಬಳಿ ಇಸ್ರೇಲಿ ಮಹಿಳೆ ಮೇಲೆ ನಡೆದಿರುವ ಅತ್ಯಾಚಾರ ಘಟನೆಯನ್ನು ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ. ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇಸ್ರೇಲಿ ಪ್ರಜೆ ಹಾಗೂ ಹೋಮ್ ಸ್ಟೇ ಮಾಲಕಿ ಮೇಲೆ ನಡೆದ ಹಲ್ಲೆ ಹಾಗೂ ಅತ್ಯಾಚಾರ ಅತ್ಯಂತ ಹೇಯ ಕೃತ್ಯ ಎಂದವರು ಹೇಳಿದ್ದಾರೆ. ಘಟನೆ ವರದಿಯಾದ ಕೂಡಲೇ ಸಂಬಂಧಪಟ್ಟ ಪೊಲೀಸರಿಂದ ಮಾಹಿತಿ ಪಡೆದು, ಕಟ್ಟುನಿಟ್ಟಿನ ತನಿಖೆ ಕೈಗೊಂಡು, ಅಪರಾಧಿಗಳನ್ನು ಶೀಘ್ರ ಪತ್ತೆಹಚ್ಚುವಂತೆ ಸೂಚಿಸಿದ್ದೆ ಎಂದಿರುವ ಸಿಎಂ, ಪ್ರಕರಣದ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ತನಿಖೆ ಮುಂದುವರೆಸಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ರಾಜ್ಯಕ್ಕೆ ಬರುವ ಪ್ರವಾಸಿಗರು ಸೇರಿದಂತೆ ಪ್ರತಿಯೊಬ್ಬರಿಗೂ ರಕ್ಷಣೆ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಎಲ್ಲಾ ಅಗತ್ಯ ಕ್ರಮ ವಹಿಸಲಾಗುವುದು ಎಂದವರು ಭರವಸೆ ನೀಡಿದ್ದಾರೆ. ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇಸ್ರೇಲಿ ಪ್ರಜೆ ಹಾಗೂ…
ಸಿರಿಯಾದಲ್ಲಿ ಹಿಂಸಾಚಾರ ಭುಗಿಲು: ಸಂಘರ್ಷದಲ್ಲಿ ಸಾವಿರಕ್ಕೂ ಹೆಚ್ಚು ಮಂದಿ ಬಲಿ
ಬೈರುತ್: ಸಿರಿಯಾದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು ಭದ್ರತಾ ಪಡೆಗಳು ಮತ್ತು ಪದಚ್ಯುತ ಅಧ್ಯಕ್ಷ ಬಷರ್ ಅಸ್ಸಾದ್ ಬೆಂಬಲಿಗರ ನಡುವಿನ ಕಾಳಗದಲ್ಲಿ ಸಾವಿರಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಎರಡು ದಿನಗಳ ಸಂಘರ್ಷಗಳು ಪರಸ್ಪರ ಸೇಡಿನ ಹತ್ಯೆಗಳಿಗೆ ಸಾಕ್ಷಿಯಾಗುತ್ತಿವೆ. ಈ ಸಂಘರ್ಷದಲ್ಲಿ ಸಂಖ್ಯೆ ಸಾವಿರಕ್ಕೂ ಹೆಚ್ಚು ನಾಗರಿಕರ ಮಾರಣಹೋಮವಾಗಿದೆ ಎನ್ನಲಾಗುತ್ತಿದೆ. ಸುಮಾರು 745 ನಾಗರಿಕರು ಸಾವನ್ನಪ್ಪಿದರೆ, 125 ಮಂದಿ ಭದ್ರತಾ ಪಡೆ ಯೋಧರು ಹಾಗೂ ಸುಮಾರು 148 ಮಂದಿ ದಂಗೆಕೋರರು ಬಲಿಯಾಗಿದ್ದಾರೆ ಎಂದು ಸಿರಿಯನ್ ಮಾನವ ಹಕ್ಕುಗಳ ವೀಕ್ಷಣಾಲಯ ಹೇಳಿದೆ. ಅಸ್ಸಾದ್ ಅವರ ಪದಚ್ಯುತಿ ನಂತರ ಬೇಬಲಿಗರು ದಂಗೆ ಎದ್ದಿದ್ದು, ಪರಿಸ್ಥಿತಿ ನಿಯಂತ್ರಿಸಲು ಸೇನಾಪಡೆಗಳು ಹರಸಾಹಸ ನಡೆಸುತ್ತಿವೆ.
ಮುಸ್ಲಿಮರ ಬಗ್ಗೆ ‘ಲೆಹರ್ ಸಿಂಗ್’ ಅನುಕಂಪದ ಲಹರಿ? ಕೆಪಿಸಿಸಿ ರಮೇಶ್ ಬಾಬು ವ್ಯಂಗ್ಯ
ಬೆಂಗಳೂರು: ಅಲ್ಪಸಂಖ್ಯಾತ ಮಾರ್ವಾಡಿ ಸಮುದಾಯದವರೆಂದು ಹೇಳಿಕೊಂಡಿರುವ ಲೆಹರ್ ಸಿಂಗ್ ಅವರು ಮುಸಲ್ಮಾನ್ ಸಮುದಾಯದ ಬಗ್ಗೆ ವಿಶೇಷ ಕಾಳಜಿಯನ್ನು ವ್ಯಕ್ತಪಡಿಸುತ್ತಿರುವುದು ಅಚ್ಚರಿಯ ಸಂಗತಿ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಹೇಳಿದ್ದಾರೆ. ಜಸ್ಟಿಸ್ ಆನಂದ್ ಅವರ ವರದಿಯನ್ನು ಇಟ್ಟುಕೊಂಡು ಲೆಹರ್ ಸಿಂಗ್ ದೊಡ್ಡಮಟ್ಟದ ನಾಟಕ ಆಡಲು ಪ್ರಯತ್ನ ಪಡುತ್ತಿದ್ದಾರೆ ಎಂದೂ ರಮೇಶ್ ಬಾಬು ವ್ಯಂಗ್ಯವಾಡಿದ್ದಾರೆ. ಲೆಹರ್ ಸಿಂಗ್ ಅವರು ರಾಜ್ಯ ಬಜೆಟ್ ಬಗ್ಗೆ ಟೀಕಿರುವ ವೈಖರಿ ಬಗ್ಗೆ ಪ್ರತಿಕ್ರಿಯಿಸಿರುವ ರಮೇಶ್ ಬಾಬು, ರಾಜ್ಯಸಭಾ ಸದಸ್ಯರಾದ ರಾಜಸ್ಥಾನಿ ಲೆಹರ್ ಸಿಂಗ್ ರವರು ಕಾಂಗ್ರೆಸ್ ಸರ್ಕಾರದ ಮೇಲೆ ಅನೇಕ ಆರೋಪಗಳನ್ನು ಮಾಡಿರುತ್ತಾರೆ . ತಾವೇ ಸ್ವತಃ ಅಲ್ಪಸಂಖ್ಯಾತ ಮಾರ್ವಾಡಿ ಸಮುದಾಯದವರೆಂದು ಹೇಳಿಕೊಂಡಿರುವ ಲೆಹರ್ ರವರು ಮುಸಲ್ಮಾನ್ ಸಮುದಾಯದ ಬಗ್ಗೆ ವಿಶೇಷವಾದ ಕಾಳಜಿಯನ್ನು ವ್ಯಕ್ತಪಡಿಸಿದ್ದಾರೆ ಎಂದು ವಿಶ್ಲೇಷಿಸಿದ್ದಾರೆ. ಕರ್ನಾಟಕದ ಕಾಂಗ್ರೆಸ್ ಸರ್ಕಾರ ಜಸ್ಟಿಸ್ ಆನಂದ್ ಆಯೋಗದ ವಖ್ಫ್…