ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಆರೋಪದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ದುಬೈನಿಂದ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ರನ್ಯಾ ರಾವ್ ಅವರನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಕಂದಾಯ ಗುಪ್ತಚಾರ ನಿರ್ದೇಶನಾಲಯ (DRI) ಕಸ್ಟಡಿ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ರನ್ಯಾ ರಾವ್ ಅವರನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ವೇಳೆ ನಟಿಯನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಧೀಶರು ಆದೇಶಿಸಿದರು. ಮತ್ತೊಂದೆಡೆ, ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ರನ್ಯಾ ರಾವ್ ಅವರೊಂದಿಗೆ ಉದ್ಯಮಿ ಪುತ್ರ ತರುಣ್ ಹೆಸರು ಕೇಳಿಬಂದಿತ್ತು. ಹೀಗಾಗಿ ವಿಚಾರಣೆ ಮಾಡಿದ ಅಧಿಕಾರಿಗಳು ನಂತರ ಫೈಸ್ಟಾರ್ ಹೋಟೆಲ್ ಮಾಲೀಕನ ತಮ್ಮನ ಮಗ ತರುಣ್ ರಾಜು ಬಂಧಿಸಿದ್ದಾರೆ. ಇನ್ನು ನಟಿ ರನ್ಯಾ ರಾವ್ ಮತ್ತು ತರುಣ್ ರಾಜು ಇಬ್ಬರು ವರ್ಷಗಳಿಂದ ಸ್ನೇಹಿತರಾಗಿದ್ದರು. ರನ್ಯಾ ರಾವ್ರಿಂದ ತರುಣ್ ರಾಜು…
Day: March 10, 2025
ಸಾರಿಗೆ ಇಲಾಖೆಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರ ಸಹಿಸುವುದಿಲ್ಲ: ರಾಮಲಿಂಗಾ ರೆಡ್ಡಿ
ಬೆಂಗಳೂರು: ಸಾರಿಗೆ ಇಲಾಖೆ ( RTO) ಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರ ಸಹಿಸುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಮೋಟಾರು ವಾಹನ ನಿರೀಕ್ಷಕರೊಬ್ಬರು ಸರ್ಕಾರಿ ವಾಹನದಲ್ಲಿ ಕುಳಿತು ಹಣ ಪಡೆದಿದ್ದಾರೆ ಎಂದು ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾಗಿರುವ ಹಿನ್ನೆಲೆಯಲ್ಲಿ, ಆರೋಪ ಕುರಿತಂತೆ ಸೂಕ್ತ ತನಿಖೆ ನಡೆಸುವಂತೆ ಸಚಿವರು ಆದೇಶಿಸಿದ್ದಾರೆ. ಆ ಸಂಬಂಧ ತನಿಖೆ ಕೈಗೆತ್ತಿಕೊಂಡಿರುವ ಮಂಡ್ಯದ ಪ್ರಾದೇಶಿಕ ಸಾರಿಗೆ ಅಧಿಕಾರಿಯವರು, ಆರೋಪಕ್ಕೆ ಗುರಿಯಾಗಿರುವ ಮೋಟಾರು ವಾಹನ ನಿರೀಕ್ಷಕರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ. ನೌಕರರು ಕರ್ತವ್ಯ ಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡುಬರುವುದರಿಂದ ಸಾರಿಗೆ ಆಯುಕ್ತರು ಮತ್ತು ಸಕ್ಷಮ ಪ್ರಾಧಿಕಾರಿಯು ಮೋಟಾರು ವಾಹನ ನಿರೀಕ್ಷಕರಾದ ವಾಣಿಶ್ರೀ ಎಂ.ಎನ್ ಅವರ ವಿರುದ್ಧದ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ, ಸೇವೆಯಿಂದ ಅಮಾನತ್ತುಗೊಳಿಸಿದ್ದಾರೆ. ಮಂಡ್ಯ ಪ್ರಾದೇಶಿಕ ಸಾರಿಗೆ ಕಛೇರಿಯಿಂದ ಧಾರವಾಡ (ಪಶ್ಚಿಮ) ಕ್ಕೆ ವರ್ಗಾಯಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿಸಲು ಚಿಂತನೆ: ಸಚಿವ ಬೈರತಿ ಸುರೇಶ್
ಬೆಂಗಳೂರು: ಮೈಸೂರು ಮಹಾನಗರ ಪಾಲಿಕೆಯನ್ನು ಮೇಲ್ದರ್ಜೆಗೇರಿಸಿ ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ಉದ್ದೇಶಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ. ಎಸ್. ಸುರೇಶ (ಬೈರತಿ)ಯವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಸೋಮವಾರ ಸಭೆ ನಡೆಯಿತು. ಮೈಸೂರು ಮಹಾನಗರ ಪಾಲಿಕೆಯನ್ನು ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚನೆ ಮಾಡಿ ಮೇಲ್ದರ್ಜೆಗೇರಿಸುವ ಸಂಬಂಧ ಪ್ರಸ್ತಾಪಿತ ಬೃಹತ್ ಮೈಸೂರು ಮಹಾನಗರ ಪಾಲಿಕೆಯ ಎಲ್ಲೆ(ಗಡಿ) ಯನ್ನು ಗುರುತಿಸಿ 2018 ರ ವಾರ್ಡ್ ಪುನರ್ ವಿಂಗಡನೆ (Delimitation) ಅನ್ನು ಪರಿಗಣನೆಗೆ ತೆಗೆದುಕೊಂಡು ಹಾಲಿ ಮೈಸೂರು ಮಹಾನಗರ ಪಾಲಿಕೆ ಸರಹದ್ದಿಗೆ ಹೊಂದಿಕೊಂಡಂತೆ ಇರುವ ನಗರಸಭೆ, ಪಟ್ಟಣ ಪಂಚಾಯತಿ ಹಾಗೂ ಗ್ರಾಮ ಪಂಚಾಯಿತಿಗಳನ್ನು ವಿಲೀನ ಪಡಿಸಿಕೊಂಡು ಯೋಜನಾ ಬದ್ದ ಬೆಳವಣಿಗೆಗೆ ಉದ್ದೇಶಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಸ್ಥಳೀಯ ಸಂಸ್ಥೆಗಳ ಅನುಮೋದನೆಯನ್ನು ಪಡೆದು ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವ ಬೈರತಿ ಸುರೇಶ್ ಸೂಚಿಸಿದರು. ಮೈಸೂರು…
ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಳಿಗ್ಗೆ 9 ರಿಂದ ಸಂಜೆ 4 ರವರೆಗೆ ವೈದ್ಯರ ಕರ್ತವ್ಯ ನಿರ್ವಹಣೆ ಕಡ್ಡಾಯ
ಬೆಂಗಳೂರು: ಇನ್ನು ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಕಡ್ಡಾಯವಾಗಿ ಕಾರ್ಯ ನಿರ್ವಹಿಸಲಿದ್ದು, ಯಾವುದೇ ಕಾರಣಕ್ಕೂ ಬೇರೆ ಸ್ಥಳಗಳಲ್ಲಿ ಪ್ರಾಕ್ಟೀಸ್ ಮಾಡುವಂತಿಲ್ಲ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ವಿಧಾನಪರಿಷತ್‍ನಲ್ಲಿ ಸೋಮವಾರ ಕಾಂಗ್ರೆಸ್ ಸದಸ್ಯೆ ಬಲ್ಕಿಶ್ ಬಾನು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುವ ವೈದ್ಯರು ತಮ್ಮ ಕರ್ತವ್ಯದ ಸಂದರ್ಭದಲ್ಲೇ ಬೇರೆ ಕಡೆ ಕರ್ತವ್ಯ ನಿರ್ವಹಿಸುತ್ತಾರೆ ಎಂಬ ಆರೋಪ ಕೇಳಿಬಂದಿತ್ತು. ಇದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಬೆಳಿಗ್ಗೆ 9 ಗಂಟೆಗೆ ಕರ್ತವ್ಯಕ್ಕೆ ಹಾಜರಾದರೆ ಸಂಜೆ 4 ಗಂಟೆವರೆಗೂ ಸರ್ಕಾರಿ ಆಸ್ಪತ್ರೆಗಳಲ್ಲೇ ಕರ್ತವ್ಯ ನಿರ್ವಹಿಸಬೇಕೆಂದು ಸೂಚಿಸಲಾಗಿದೆ ಎಂದರು. ಈ ಮೊದಲು 2 ಗಂಟೆಗಳ ನಂತರ…
ಮಕ್ಕಳಲ್ಲಿ ಕ್ಯಾನ್ಸರ್ ಆತಂಕಕಾರಿ: ಮೈಸೂರು ಮತ್ತು ಹುಬ್ಬಳ್ಳಿಯಲ್ಲಿ ಬಿಎಂಎಟಿ ಘಟಕ ಸ್ಥಾಪನೆ
ಬೆಂಗಳೂರು: ಮಕ್ಕಳಲ್ಲಿ ವರ್ಷದಿಂದ ವರ್ಷಕ್ಕೆ ವ್ಯಾಪಕವಾಗಿ ಹೆಚ್ಚಾಗುತ್ತಿರುವ ಬೋನ್ ಮ್ಯಾರೊ ಆಸ್ಪಿರೇಟ್ ಅಂಡ್ ಟ್ರಿಪೈನ್ ಬಯಾಪ್ಸಿ (ಬಿಎಂಎಟಿ) ಸಂಸ್ಥೆಗಳನ್ನು ಮೈಸೂರು ಮತ್ತು ಹುಬ್ಬಳ್ಳಿಯಲ್ಲಿ ಪ್ರಾರಂಭಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಸೋಮವಾರ ಸದಸ್ಯೆ ಉಮಾಶ್ರೀ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ರಾಜ್ಯದ ಎಲ್ಲಾ ಹೋಬಳಿಗಳಲ್ಲೂ ಈ ಕೇಂದ್ರಗಳನ್ನು ಸ್ಥಾಪಿಸಬೇಕೆಂಬ ಉದ್ದೇಶವಿದೆ. ಪ್ರಾರಂಭಿಕ ಹಂತದಲ್ಲಿ ಹುಬ್ಬಳ್ಳಿ ಮತ್ತು ಮೈಸೂರಿನಲ್ಲಿ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು ಎಂದರು. ಈಗಾಗಲೇ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಕ್ಯಾನ್ಸರ್ ತಪಾಸಣಾ ಘಟಕ ಕಾರ್ಯ ನಿರ್ವಹಿಸುತ್ತಿದೆ. ಇದೇ ರೀತಿ ಕಲಬುರಗಿಯಲ್ಲೂ ಕೇಂದ್ರವನ್ನು ಪ್ರಾರಂಭ ಮಾಡಿದ್ದೇವೆ. ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯಲ್ಲೂ ಇದನ್ನು ತೆರೆಯಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು. ಮಕ್ಕಳಲ್ಲಿ ಇತ್ತೀಚೆಗೆ ಕ್ಯಾನ್ಸರ್ ಕಂಡುಬರುತ್ತಿರುವುದು ಅತ್ಯಂತ…
ನಟಿ ರನ್ಯಾ ಚಿನ್ನ ಸ್ಮಗ್ಲಿಂಗ್ ಹಿಂದಿರುವ ಸಚಿವರು ಯಾರು? ಮಾಹಿತಿ ಬಹಿರಂಗಪಡಿಸಲು ಬಿಜೆಪಿ ಪಟ್ಟು
ಬೆಂಗಳೂರು: ರನ್ಯಾರಾವ್ ಚಿನ್ನ ಸ್ಮಗ್ಲಿಂಗ್ ಹಿಂದೆ ಕೆಲವು ಸಚಿವರು ಇರುವ ಮಾಹಿತಿ ಇದ್ದು, ಅಂಥ ಸಚಿವರ ಹೆಸರನ್ನು ಬಹಿರಂಗಪಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಚಿನ್ನ ಕಳ್ಳಸಾಗಣೆ ಹಿನ್ನೆಲೆಯಲ್ಲಿ ಬಂಧಿತರಾದ ರನ್ಯಾರಾವ್ ಹಿಂದೆ ಅನೇಕ ಘಟಾನುಘಟಿಗಳಿದ್ದಾರೆ ಎಂಬ ಅಂಶ ಹೊರಕ್ಕೆ ಬರುತ್ತಿದೆ. ಇದೇನೂ ಸಣ್ಣ ಘಟನೆಯಲ್ಲ; ರನ್ಯಾರಾವ್ ಕಳೆದ ಕೆಲವು ತಿಂಗಳುಗಳಲ್ಲಿ 30ಕ್ಕೂ ಹೆಚ್ಚು ಬಾರಿ ವಿದೇಶಕ್ಕೆ- ದುಬೈಗೆ ಬೇರೆ ಬೇರೆ ದೇಶಗಳಿಗೆ ಹೋಗಿ ಬಂದ ಮಾಹಿತಿ ಹೊರಬಿದ್ದಿದೆ. ಪ್ರತಿ ಬಾರಿಯೂ ಬೆಂಗಳೂರಿಗೆ ಮರಳಿ ಬಂದಾಗ ಸಂಪೂರ್ಣವಾದ ಪ್ರೊಟೊಕಾಲ್ ವ್ಯವಸ್ಥೆ ನೀಡುತ್ತಿದ್ದರು ಎಂದು ಆರೋಪಿಸಿದರು. ರನ್ಯಾರಾವ್ ಒಬ್ಬ ಹಿರಿಯ ಐಪಿಎಸ್ ಅಧಿಕಾರಿಯ ಮಗಳು. ಏರ್‍ಪೋರ್ಟಿಗೆ ವಾಪಸ್ ಬಂದಾಗ ವಿಮಾನನಿಲ್ದಾಣದಿಂದ ಪೊಲೀಸರೇ ಎಸ್ಕಾರ್ಟ್ ನೀಡಿ ಕರೆದೊಯ್ಯುತ್ತಿದ್ದರು; ಆಕೆ ಸಾಮಾನ್ಯ ಮಹಿಳೆ ಅಲ್ಲ ಎಂಬುದು…
ಬಿಬಿಎಂಪಿ ವಿಭಜನೆ ಬೇಡ, ಆಡಳಿತ ವಿಕೇಂದ್ರೀಕರಣ ಮಾಡಿ: ಬಿಜೆಪಿ ನಾಯಕರ ಆಗ್ರಹ
ಬೆಂಗಳೂರು: ಬೆಂಗಳೂರು ವಿಂಹಜನೆಯ ಸರ್ಕಾರದ ಪ್ರಸ್ತಾಪಕ್ಕೆ ಪ್ರತಿಪಕ್ಷ ಬಿಜೆಪಿ ಶಾಸಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಿಬಿಎಂಪಿ ವಿಭಜನೆ ಬೇಡ, ಆಡಳಿತ ವಿಕೇಂದ್ರೀಕರಣ ಮಾಡಿ ಎಂದು ಬಿಜೆಪಿ ನಾಯಕರು ಸಲಹೆ ಮುಂದಿಟ್ಟಿದ್ದಾರೆ. ಬೆಂಗಳೂರನ್ನು ವಿಭಜನೆ ಮಾಡಲು ಹೊರಟಿರುವುದು ಒಳ್ಳೆಯ ಬೆಳವಣಿಗೆ ಅಲ್ಲ. ರಾಜಕೀಯ ವಿಕೇಂದ್ರೀಕರಣದ ಬದಲು ಆಡಳಿತ ವಿಕೇಂದ್ರೀಕರಣ ಮಾಡಿ ಎಂದು ಶಾಸಕರು ಮನವಿ ಮಾಡಿದ್ದಾರೆ. ಈ ಕುರಿತಂತೆ ವಿಧಾನಸಭೆಯಲ್ಲಿ ಬಿಜೆಪಿ ಶಾಸಕರಾದ ಅಶ್ವಥನಾರಾಯಣ, ಭೈರತಿ ಬಸವರಾಜ್, ಗೋಪಾಲಯ್ಯ, ಎಸ್.ಆರ್.ವಿಶ್ವನಾಥ್ ಅವರ ಹೇಳಿಕೆ ಗಮನಸೆಳೆಯಿತು. ಬೆಂಗಳೂರನ್ನು ವಿಭಜನೆ ಮಾಡಲು ಹೊರಟಿರುವುದು ಒಳ್ಳೆಯ ಬೆಳವಣಿಗೆ ಅಲ್ಲ. ರಾಜಕೀಯ ವಿಕೇಂದ್ರೀಕರಣದ ಬದಲು ಆಡಳಿತ ವಿಕೇಂದ್ರೀಕರಣ ಮಾಡಿ. ಕೆಂಪೇಗೌಡರು ಕಟ್ಟಿದ ನಗರವನ್ನು ವಿಭಜಿಸುವುದು ಸರಿಯಲ್ಲ. ಅಧಿಕಾರದ ವಿಕೇಂದ್ರೀಕರಣಕ್ಕೆ ಸರ್ಕಾರ ಆದ್ಯತೆ ನೀಡಲಿ. ಈಗಾಗಲೇ ನೂರಾರು ಪ್ರದೇಶದಲ್ಲಿ ನೀರಿನ ಅಭಾವ ಕಾಡುತ್ತಿದೆ. ಬೆಂಗಳೂರನ್ನು ವಿಭಜಿಸಿ… pic.twitter.com/yD45LeCDvn — BJP Karnataka (@BJP4Karnataka) March 10,…
ಪುಣ್ಯಕ್ಷೇತ್ರಗಳ ನದಿಗಳಲ್ಲಿ ಸೋಪ್- ಶಾಂಪೂ ಬಳಕೆಗೆ ಸರ್ಕಾರ ಕಡಿವಾಣ
ಬೆಂಗಳೂರು: ಪುಣ್ಯಕ್ಷೇತ್ರಗಳ ನದಿಗಳಲ್ಲಿ ಸೋಪ್- ಶಾಂಪೂ ಬಳಕೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ಪರಿಸರ ಸ್ನೇಹಿ ಕ್ರಮವಾಗಿ, ಪುಣ್ಯಕ್ಷೇತ್ರಗಳ ನದಿಗಳು ಮತ್ತು ಕಲ್ಯಾಣಿ ಸುತ್ತಮುತ್ತ 500 ಮೀಟರ್ ವ್ಯಾಪ್ತಿಯಲ್ಲಿ ಸೋಪ್ ಮತ್ತು ಶಾಂಪೂ ಮಾರಾಟವನ್ನು ನಿಷೇಧಿಸಲು ಅರಣ್ಯ ಹಾಗೂ ಪರಿಸರ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದೇನೆ. ನದಿಯಲ್ಲಿ ಸ್ನಾನ ಮಾಡುವ ಭಕ್ತರು ತ್ಯಜಿಸುವ ಶಾಂಪೂ ಪ್ಯಾಕೆಟ್‌ಗಳು ಮತ್ತು ಸಣ್ಣ ಸೋಪ್‌ಗಳು ನೀರನ್ನು ಮಾಲಿನ್ಯಗೊಳಿಸುತ್ತಿದ್ದು, ಇದು ಜನರ ಮತ್ತು ಜಲಚರ ಪ್ರಾಣಿಗಳ ಆರೋಗ್ಯಕ್ಕೆ ತೀವ್ರ ಹಾನಿಯನ್ನು ಉಂಟುಮಾಡುತ್ತಿದೆ ಎಂದವರು ಪ್ರತಿಪಾದಿಸಿದ್ದಾರೆ. ಅಲ್ಲದೆ, ಯಾತ್ರಾಸ್ಥಳಗಳಲ್ಲಿ ಬಟ್ಟೆ ತ್ಯಜಿಸುವ ಪ್ರವೃತ್ತಿ ಗಮನಕ್ಕೆ ಬಂದಿರುವುದರಿಂದ, ಇದನ್ನು ತಡೆಗಟ್ಟಲು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗುತ್ತದೆ ಎಂದವರು ತಿಳಿಸಿದ್ದಾರೆ.
ನ್ಯೂಜಿಲೆಂಡ್ ವಿರುದ್ಧ ಜಯಭೇರಿ: ಚಾಂಪಿಯನ್ ಶಿಪ್ ಗೆದ್ದ ಟೀಮ್ ಇಂಡಿಯಾ
ದುಬೈ: ಭಾರತ ಕ್ರಿಕೆಟ್ ತಂಡ ಕೊನೆಗೂ ಚಾಂಪಿಯನ್ ಆಗುವಲ್ಲಿ ಯಶಸ್ವಿಯಾಗಿದೆ. ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವು ಕಳೆದ 9 ತಿಂಗಳೊಳಗೆ ಎರಡನೇ ಟ್ರೋಫಿಯನ್ನು ಗೆದ್ದು ಬೀಗಿದೆ. ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮಾರ್ಚ್ 9 ರ ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ, ಟೀಂ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ಜಯಭೇರಿ ಭಾರಿಸಿ ಚಾಂಪಿಯನ್ ಶಿಪನ್ನು ತನ್ನದಾಗಿಸಿಕೊಂಡಿದೆ. ಈ ಮೂಲಕ 25 ವರ್ಷಗಳ ಹಿಂದೆ ಇದೇ ಟೂರ್ನಿಯ ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧದ ಸೋಲಿಗೆ ಟೀಂ ಇಂಡಿಯಾ ಸೇಡು ತೀರಿಸಿಕೊಂಡಿದೆ. ನ್ಯೂಜಿಲೆಂಡ್ ತಂಡವನ್ನು 4 ವಿಕೆಟ್‌ಗಳಿಂದ ರೋಹಿತ್ ಶರ್ಮಾ ತಂಡ ಸೋಲಿಸಿದೆ. ಇಡೀ ಟೂರ್ನಿಯಲ್ಲಿ ಸಾಂಘಿಕ ಪ್ರದರ್ಶನ ನೀಡಿದ ರೋಹಿತ್ ಪಡೆ ಎಲ್ಲಾ ಪಂದ್ಯಗಳಲ್ಲಿ ಗೆದ್ದು ಬೀಗಿದೆ. 🏆 𝗕𝗔𝗖𝗞-𝗧𝗢-𝗕𝗔𝗖𝗞 𝗚𝗟𝗢𝗥𝗬! 🇮🇳🔥 The man who ended the ICC trophy drought—𝗥𝗼𝗵𝗶𝘁 𝗚𝘂𝗿𝘂𝗻𝗮𝘁𝗵 𝗦𝗵𝗮𝗿𝗺𝗮💙 #RohitSharma Led from…