ಬೆಂಗಳೂರು: ನಟಿ ರನ್ಯಾ ರಾವ್ ಅಕ್ರಮ ಚಿನ್ನ ಕಳ್ಳಸಾಗಾಣಿಕೆ ಆರೋಪ ಪ್ರಕರಣ ರಾಜ್ಯ ರಾಜಕಾರಣದಲ್ಲೂ ತಲ್ಲಣ ಸೃಷ್ಟಿಸಿದೆ. ದುಬೈನಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ ಹೊತ್ತು ತಂದ ಆರೋಪದಲ್ಲಿ ನಟಿ ರನ್ಯಾ ರಾವ್ ಬಂಧನವಾಗಿದೆ. ಈ ಸ್ಮಗ್ಲಿಂಗ್ ಕೇಸ್ ಕುರಿತಂತೆ DRI, CBI ತನಿಖೆ ನಡೆಸುತ್ತಿದ್ದು, ಪೊಲೀಸ್ ಅಧಿಕಾರಿಗಳ ಶಾಮೀಲು ಬಗ್ಗೆಯೂ ಮಹತ್ವದ ಸಂಗತಿಗಳು ಬೆಳಕಿಗೆ ಬಂದಿವೆ. ಇನ್ನೊಂದೆಡೆ ರಮ್ಯಾ ಗೋಲ್ಡ್ ಸ್ಮಗ್ಲಿಂಗ್ ಕೇಸ್’ನಲ್ಲಿ ರಾಜ್ಯದ ಸಚಿವರಿಬ್ಬರ ಕೈವಾಡ ಇರುವ ಬಗ್ಗೆ ಬಿಜೆಪಿ ನಾಯಕರು ಗಂಭೀರ ಆರೋಪ ಮಾಡುತ್ತಿದ್ದು ಈ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ನಾಯಕರ ನಡುವೆ ವಾಕ್ಸಮರ ನಡೆದಿದೆ. ಕೆಜಿಎಫ್..? ಈ ಮಧ್ಯೆ, ಕರ್ನಾಟಕದಲ್ಲಿ ರನ್ಯಾ ರಾವ್ ಚಿನ್ನದ ಕಳ್ಳಸಾಗಣೆ ಪ್ರಕರಣ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆ ಬಾಗಿಲಿಗೆ ತಲುಪಿದೆ ಎಂದು ಬಿಜೆಪಿ ಬಿಜೆಪಿ ನಾಯಕ ಬೆಂಗಳೂರು: ನಟಿ ರನ್ಯಾ ರಾವ್…
Day: March 12, 2025
‘ಅಕ್ಕನ ಮಗನ ಕಾಲಿಗೆ ಬಿದ್ದ ಅಭಿಮಾನಿ’: ದರ್ಶನ್ ಬೇಸರ
ಬೆಂಗಳೂರು: ತನ್ನ ಅಕ್ಕನ ಮಗನಾದ ಚಂದುಗೆ ಅಭಿಮಾನಿಯೊಬ್ಬರು ಕಾಲಿಗೆ ಬೀಳುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದನ್ನು ಕಂಡು ನಟ ಸರ್ಶನ್ ಬೇಸರ ವ್ಯಕ್ತಪಡಿಸಿದ್ಫ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಇನ್ಸಾಟಾಗ್ರಾಮ್ ನಲ್ಲಿ ವಿಡಿಯೋ ಹಂಚಿಕೊಂಡಿರುವ ದರ್ಶನ್, ಇನ್ನೂ ಸಾಧನೆ ಮಾಡದ ನನ್ನ ಅಕ್ಕನ ಮಗನಾದ ಚಂದುಗೆ ಅಭಿಮಾನಿಯೊಬ್ಬರು ಕಾಲಿಗೆ ಬೀಳುವುದನ್ನು ನೋಡಿ ನನ್ನ ಮನಸಿಗೆ ತುಂಬಾ ನೋವಾಗಿದೆ ಎಂದಿದ್ದಾರೆ. View this post on Instagram A post shared by Darshan Thoogudeepa Shrinivas (@darshanthoogudeepashrinivas) ‘ಎಲ್ಲಾ ನನ್ನ ಸೆಲೆಬ್ರಿಟಿಸ್ ಗಳಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ನನ್ನ ಮತ್ತು ನಮ್ಮ ಕುಟುಂಬದ ಮೇಲಿಟ್ಟಿರುವ ಪ್ರೀತಿ ಅಭಿಮಾನಕ್ಕೆ ನಾವು ಸದಾ ಚಿರಋಣಿ. ಆದರೆ, ಈ ವೀಡಿಯೊದಲ್ಲಿ ನಮ್ಮ ಮೇಲಿರುವ ಅಭಿಮಾನದಿಂದ ಇನ್ನೂ ಏನು ಸಾಧನೆ ಮಾಡದಿರುವ ನನ್ನ ಅಕ್ಕನ ಮಗನಾದ ಚಂದುಗೆ ಅಭಿಮಾನಿಯೊಬ್ಬರು…
ರೈಲು ಅಪಹರಣ ಬೇಧಿಸಿದ ಸೇನೆ; 16 ಉಗ್ರರ ಹತ್ಯೆ, ನೂರಕ್ಕೂ ಹೆಚ್ಚು ಪ್ರಯಾಣಿಕರ ರಕ್ಷಣೆ
ಇಸ್ಲಾಮಾಬಾದ್: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ರೈಲು ಅಪಹರಣ ಮಾಡಿರುವ ಉಗ್ರರ ಧಮನ ಕಾರ್ಯಾಚರಣೆ ಮುಂದುವರಿಸಿರುವ ಸೇನೆ ನೂರಕ್ಕೂ ಹೆಚ್ಚು ಪ್ರಯಾಣಿಕರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕ್ವೆಟ್ಟಾದಿಂದ ಪೆಶಾವರಕ್ಕೆ ತೆರಳುತ್ತಿದ್ದ ಜಾಫರ್ ಎಕ್ಸ್‌ಪ್ರೆಸ್ ರೈಲಿನ್ನು ವಶಕ್ಕೆ ಪಡೆದು ಅಪಹರಿಸಿದ್ದ ಉಗ್ರರು, ಸುಮಾರು 400 ಪ್ರಯಾಣಿಕರನ್ನು ಒತ್ತೆಯಾಳಾಗಿರಿಸಿದ್ದರು. ಗಡಾಲರ್ ಮತ್ತು ಪೆಹ್ರೊ ಕುನ್ರಿ ಕಣಿವೆ ಪ್ರದೇಶದ ಸಮೀಪದ ಸುರಂಗದಲ್ಲಿ ಬಂದೂಕುಧಾರಿಗಳು ಮಂಗಳವಾರ ಈ ರೈಲನ್ನು ಹಿಡಿತಕ್ಕೆ ತೆಗೆದುಕೊಂಡಿದ್ದರು. ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (ಬಿಎಲ್‌ಎ) ಈ ದಾಳಿಯ ಹೊಣೆ ಹೊತ್ತುಕೊಂಡಿದೆ. ಈ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ನಡೆಸಿರುವ ಪಾಕಿಸ್ತಾನದ ಭದ್ರತಾ ಪಡೆ 104 ಪ್ರಯಾಣಿಕರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದೆ. ಸುದೀರ್ಘ ಕಾರ್ಯಚನೆಯಲ್ಲಿ ಸುಮಾರು 16 ಉಗ್ರರನ್ನು ಹತ್ಯೆ ಮಾಡಿದೆ ಎಂದು ವರದಿಯಾಗಿದೆ. ರಕ್ಷಿಸಲ್ಪಟ್ಟ ಪ್ರಯಾಣಿಕರನ್ನು ಮತ್ತೊಂದು ರೈಲಿನ ಮೂಲಕ ಸುರಕ್ಷಿತ ಸ್ಥಳಕ್ಕೆ ಕಳುಹಿಸಲಾಗಿದೆ. ಈ ನಡುವೆ, ಸುರಂಗವನ್ನು ಸುತ್ತುವರಿದಿರುವ ಸೇನಾಪಡೆ ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರಿಸಿದೆ.
2020ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ: ಪ್ರಜ್ವಲ್ ದೇವರಾಜ್, ಅಕ್ಷತಾಗೆ ಅತ್ಯುತ್ತಮ ನಟ, ನಟಿ ಪುರಸ್ಕಾರ
ಬೆಂಗಳೂರು: 2020ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದೆ. ಪ್ರಜ್ವಲ್ ದೇವರಾಜ್ ಅವರು ಅತ್ಯುತ್ತಮ ನಟ ಪ್ರಶಸ್ತಿಗೆ ಪಾತ್ರರಾದರೆ, ಅಕ್ಷತಾ ಪಾಂಡವಪುರ ಅವರು ಅತ್ಯುತ್ತಮ ನಟಿಯಾಗಿ ಗುರುತಾಗಿದ್ದಾರೆ. ಪಿಂಕಿ ಎಲ್ಲಿ ಸಿನಿಮಾಕ್ಕೆ ಅತ್ಯುತ್ತಮ ಚಿತ್ರ ಪ್ರಶಸ್ತಿ ಸಿಕ್ಕಿದೆ. ಪ್ರಶಸ್ತಿ ಪಟ್ಟಿ ಹೀಗಿದೆ. ಅತ್ಯುತ್ತಮ ನಟ: ಪ್ರಜ್ವಲ್ ದೇವರಾಜ್ (ಚಿತ್ರ: ಜಂಟಲ್‌ಮನ್) ಅತ್ಯುತ್ತಮ ನಟಿ: ಅಕ್ಷತಾ ಪಾಂಡವಪುರ (ಚಿತ್ರ: ಪಿಂಕಿ ಎಲ್ಲಿ) ಅತ್ಯುತ್ತಮ ಪೋಷಕ ನಟ: ರಮೇಶ್ ಪಂಡಿತ್, ಅತ್ಯುತ್ತಮ ಪೋಷಕ ನಟಿ: ಮಂಜುಳಮ್ಮ, ಅತ್ಯುತ್ತಮ ಚಿತ್ರ: ಪಿಂಕಿ ಎಲ್ಲಿ 2ನೇ ಅತ್ಯುತ್ತಮ ಚಿತ್ರ: ವರ್ಣಪಟಲ 3ನೇ ಅತ್ಯುತ್ತಮ ಚಿತ್ರ: ಹರಿವ ನದಿಗೆ ಮೈಯೆಲ್ಲಾ ಕಾಲು ವಿಶೇಷ ಸಾಮಾಜಿಕ ಕಾಳಜಿ ಚಿತ್ರ: ಗಿಳಿಯು ಪಂಜರದೊಳಿಲ್ಲ ಮತ್ತು ಈ ಮಣ್ಣು ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರ: ಫೋರ್ ವಾಲ್ಸ್ ಅತ್ಯುತ್ತಮ ಮಕ್ಕಳ ಚಿತ್ರ: ಪದಕ ನಿರ್ದೇಶಕರ ಪ್ರಥಮ ನಿರ್ದೇಶನದ ಅತ್ಯುತ್ತಮ…
‘ಯಾವ ಗ್ಯಾರಂಟಿ ಕೊಡದಿದ್ದರೂ ಶಿಕ್ಷಣದ ಗ್ಯಾರಂಟಿ ಕಸಿದುಕೊಳ್ಳದಿರಲಿ’: ವಿಜಯೇಂದ್ರ
ಬೆಂಗಳೂರು: ‘ಯಾವ ಗ್ಯಾರಂಟಿ ಕೊಡದಿದ್ದರೂ ಸರ್ಕಾರ ರಾಜ್ಯದ ಜನರ ಶಿಕ್ಷಣದ ಗ್ಯಾರಂಟಿ ಕಸಿದುಕೊಳ್ಳದಿರಲಿ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ರಾಜ್ಯ ಸರ್ಕಾರವು ಗ್ಯಾರೆಂಟಿ ಯೋಜನೆಗೆ ಆದ್ಯತೆ ನೀಡಿ ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರ ಕೈಗೊಳ್ಳುತ್ತಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ವಿಜಯೇಂದ್ರ, ಸರ್ಕಾರದ ತೀರ್ಮಾನಗಳ ಬಗ್ಗೆ ತಮ್ಮದೇ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲಾ ಶೈಕ್ಷಣಿಕ ಕ್ಷೇತ್ರಕ್ಕೆ ಪೆಟ್ಟು ಬೀಳಲಿದೆ ಎಂಬ ಮಾತು ಅಕ್ಷರಶಃ ಸತ್ಯ. 9 ವಿಶ್ವವಿದ್ಯಾನಿಲಯಗಳಿಗೆ ಬೀಗ ಜಡಿಯಲು ಹೊರಟು ಬಡ ಹಾಗೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಪಾಲಿನ ಶಿಕ್ಷಣ ಭಾಗ್ಯ ಕಸಿಯಲು ಹೊರಟಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರ ಒಂದೆಡೆಯಾದರೆ ಮತ್ತೊಂದೆಡೆ ಇರುವ ವಿಶ್ವವಿದ್ಯಾಲಯಗಳ ಪರಿಸ್ಥಿತಿ ಶೋಚನೀಯ ಹಂತ ತಲುಪಿರುವುದು ಆರ್ಥಿಕ ದಿವಾಳಿ ಅಂಚಿಗೆ ತಲುಪಿರುವ ಸರ್ಕಾರದ ದುಸ್ಥಿತಿಯನ್ನು ಸಾಕ್ಷೀಕರಿಸುತ್ತಿದೆ ಎಂದು ವಿಷಮೇಶಿಸಿದ್ದಾರೆ. ಶಿಕ್ಷಣದ ದೂರದೃಷ್ಟಿ ಹಾಗೂ ಉನ್ನತ ಶಿಕ್ಷಣದ ಹಕ್ಕು ಪ್ರತಿಯೊಬ್ಬ ವಿದ್ಯಾರ್ಥಿಗೆ…
ಗ್ಯಾರಂಟಿ ಅನುಷ್ಠಾನ ಸಮಿತಿ ವಿವಾದ: ಜನರ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರ ಜೇಬಿಗೆ?
ಬೆಂಗಳೂರು: ರಾಜ್ಯದ ಜನರ ತೆರಿಗೆ ಹಣವನ್ನು ಗ್ಯಾರಂಟಿ ಅನುಷ್ಠಾನ ಸಮಿತಿಯ ಮೂಲಕ ಕಾಂಗ್ರೆಸ್ ಕಾರ್ಯಕರ್ತರ ಜೇಬಿಗೆ ಹಾಕಲಾಗುತ್ತಿದೆ. ಪ್ರತಿ ವರ್ಷ 15 ರಿಂದ 20 ಕೋಟಿ ರೂ. ಲೂಟಿ ಮಾಡಿ ಕಾಂಗ್ರೆಸ್ ಕಾರ್ಯಕರ್ತರಿಗೆ ನೀಡಲಾಗುತ್ತಿದೆ. ಇದನ್ನು ಖಂಡಿಸಿ ಅಧಿವೇಶನದಲ್ಲಿ ಹಾಗೂ ಹೊರಗೆ ಪ್ರತಿಭಟನೆ ಮುಂದುವರಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತೆರಿಗೆದಾರರ ಹಣವನ್ನು ಪೋಲು ಮಾಡುತ್ತಿದೆ. ಆ ಹಣವನ್ನು ಕಾಂಗ್ರೆಸ್ ಕಾರ್ಯಕರ್ತರ ಜೇಬಿಗೆ ಹಾಕಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮುಖಂಡರನ್ನು ನೇಮಿಸಿ, 25,000 ರೂ. ಸಂಬಳ ನೀಡಿ, ಅವರಿಗೆ ಆಪ್ತ ಸಹಾಯಕರನ್ನು ನೇಮಿಸಲಾಗುತ್ತಿದೆ. 1,100 ರೂ. ಸಿಟ್ಟಿಂಗ್ ಫೀಸ್ ನಿಗದಿಪಡಿಸಲಾಗಿದೆ. ರಾಜ್ಯದ ಅಧ್ಯಕ್ಷನಿಗೆ 40,000 ರೂ. ಸಂಬಳ, ಉಪಾಧ್ಯಕ್ಷನಿಗೆ 25,000 ರೂ. ಸಂಬಳ ನೀಡಲಾಗುತ್ತಿದೆ. ಪ್ರತಿ ವರ್ಷ 15-20 ಕೋಟಿ ರೂ.…