ಸೂಪರ್ ಸ್ಪೆಷಾಲಿಟಿ ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಸರ್ಕಾರದ ಚಿಂತನೆ

ಕಲಬುರಗಿ: ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ನಿವೃತ್ತಿ ವಯಸ್ಸನ್ನು ಪ್ರಸ್ತುತ 60 ವರ್ಷದಿಂದ 65 ವರ್ಷಕ್ಕೆ ಹೆಚ್ಚಿಸುವ ಬಗ್ಗೆ ಚಿಂತನೆ ನಡೆದಿದೆ. ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಪತ್ರಿಕಾ ಪ್ರಕಟಣೆಯಲ್ಲಿ ಈ ಮಾಹಿತಿ ನೀಡಿದ್ದಾರೆ. ಜಯದೇವ ಹೃದಯ ರಕ್ತನಾಳ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ವೈದ್ಯರೊಂದಿಗೆ ಗುರುವಾರ ನಡೆದ ಸಂವಾದದ ವೇಳೆ ಸಚಿವರು ಈ ವಿಷಯ ತಿಳಿಸಿದ್ದಾರೆ. ಸಂವಾದದ ವೇಳೆ ಜಯದೇವದ ಹಿರಿಯ ವೈದ್ಯರು ಕೆಲವು ವಿಷಯ ಪ್ರಸ್ತಾಪಿಸಿದರು. ವೈದ್ಯಕೀಯ ಶಿಕ್ಷಣ ಮತ್ತು ತರಬೇತಿ ಪಡೆದ ನಂತರ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ವೈದ್ಯರಾಗಿ ಕಾರ್ಯ ನಿರ್ವಹಿಸಲು ಅತಿ ಹೆಚ್ಚು ವರ್ಷಗಳನ್ನು ವ್ಯಯಿಸಿರಲಾಗಿರುತ್ತದೆ. 60 ನೇ ವಯಸ್ಸಿನಲ್ಲಿ ನಿವೃತ್ತರಾಗುವ ಮೊದಲು ನಮಗೆ 20-25 ವರ್ಷಗಳ ಕಾಲ ಮಾತ್ರ…

ಆಪ್ ನಾಯಕರಿಗೆ ಸಂಕಷ್ಟ: ಸಿಸೋಡಿಯಾ, ಸತ್ಯೇಂದ್ರ ಜೈನ್ ವಿರುದ್ಧ FIRಗೆ ರಾಷ್ಟ್ರಪತಿ ಗ್ರೀನ್ ಸಿಗ್ನಲ್

ನವದೆಹಲಿ: ಆಮ್ ಆದ್ಮಿ ಪಕ್ಷದ ನಾಯಕರಾದ ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ಅವರಿಗೆ ಮತ್ತೊಮ್ಮೆ ಸಂಕಷ್ಟ ಎದುರಾಗಿದೆ. ದೆಹಲಿ ಸರ್ಕಾರಿ ಶಾಲೆಗಳ ತರಗತಿ ಕೊಠಡಿಗಳ ನಿರ್ಮಾಣದಲ್ಲಿನ ಭ್ರಷ್ಟಾಚಾರ ಆರೋಪದಲ್ಲಿ ಪ್ರಕರಣ ದಾಖಲಿಸಲು ಸಿದ್ಧತೆ ನಡೆದಿದೆ. ಸುಮಾರು 1,300 ಕೋಟಿ ರೂಪಾಯಿ ಹಗರಣ ಆರೋಪ ಸಂಬಂಧ ಆಮ್ ಆದ್ಮಿ ಪಕ್ಷದ ನಾಯಕರಾದ ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ವಿರುದ್ಧ ಎಫ್‌ಐಆರ್ ದಾಖಲಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅನುಮೋದನೆ ನೀಡಿದ್ದಾರೆ ಎನ್ನಲಾಗಿದೆ. ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರದಲ್ಲಿ ಸಿಸೋಡಿಯಾ ಮತ್ತು ಜೈನ್ ಸಚಿವರಾಗಿದ್ದ ಅವಧಿಯಲ್ಲಿ ಈ ಹಗರಣ ನಡೆದಿದ್ದು, 2022 ರಲ್ಲಿ ದೆಹಲಿ ಸರ್ಕಾರದ ಜಾಗೃತ ನಿರ್ದೇಶನಾಲಯ, ಹಗರಣದ ತನಿಖೆಗೆ ಶಿಫಾರಸು ಮಾಡಿ ಮತ್ತು ಮುಖ್ಯ ಕಾರ್ಯದರ್ಶಿಗೆ ವರದಿಯನ್ನು ಸಲ್ಲಿಸಿತ್ತು. ಇದೀಗ ಎಫ್‌ಐಆರ್ ದಾಖಲಿಸಲು ರಾಷ್ಟ್ರಪತಿಗಳು ಅನುಮೋದನೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಕೇಸ್ ದಾಖಲಿಸಲು…

ರಾಜ್ಯದಲ್ಲಿ ಕುರಿಗಾರರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ:

ಗದಗ: ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ಉಗಳವಾಟ ಗ್ರಾಮದಲ್ಲಿ ಕುರಿಗಾಹಿಯ ಕತ್ತು ಕತ್ತರಿಸಿ ಹತ್ಯೆ ಮಾಡಿರುವದನ್ನು ಖಂಡಿಸಿ, ಕೊಪ್ಪಳ ಜಿಲ್ಲೆಯ ಯಲಬುರ್ಗ ತಾಲೂಕಿನ ಹಿರೇಮ್ಯಾಗೇರಿ ಗ್ರಾಮದ ಕುರುಬ ಸಮಾಜದ ಮಹಿಳಾ ಪಿ.ಡಿ.ಓ ಮೇಲೆ ಹಲ್ಲೆಮತ್ತು ಕಲಬುರಗಿ ಜಿಲ್ಲೆಯ ಅಳಂದ ತಾಲ್ಲೂಕಿನ ಖಾನಾಪುರ ಗ್ರಾಮದಲ್ಲಿ ಕುರುಬರಿಗೆ ಬಹಿಷ್ಕಾರ ಹಾಕಿರುವದನ್ನು ಖಂಡಿಸಿ ಗದಗ ಜಿಲ್ಲೆಯ ಕುರುಬ ಸಮುದಾಯದ ವಿವಿಧ ಸಂಘಟನೆಗಳು ಹಾಗೂ ಜಿಲ್ಲಾ ಕುರಿಗಾರರ ಸಹಕಾರಿ ಸಂಘಗಳ ಒಕ್ಕೂಟದ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗಿದೆ. ಗದಗ ನಗರದ ಟಿಪ್ಪು ವೃತ್ತದಿಂದ ಕುರುಬ ಸಮಾಜ ಬಾಂಧವರು ನೂರಾರು ಕುರಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿವರೆಗೂ ತೆರಳಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು. ಬಾಗಲಕೋಟೆ ಜಿಲ್ಲೆ, ಬಾದಾಮಿ ತಾಲ್ಲೂಕು, ಉಗಲವಾಟ ಗ್ರಾಮದಲ್ಲಿ ಕುರಿಗಾಹಿ ಯುವಕ ಶರಣಪ್ಪ ಜಮ್ಮನಕಟ್ಟಿಯ ಮೇಲೆ ದುಷ್ಕರ್ಮಿಗಳು ರಾಕ್ಷಸಿಕೃತ್ಯ ಮೆರೆದು ಕತ್ತು ಸೀಳಿ ಕೊಂದು ಹಾಕಿದ್ದಾರೆ.…