ಬೆಂಗಳೂರು: ಬಾಬಾಸಾಹೇಬ್ ಡಾ.ಅಂಬೇಡ್ಕರ್ ಮತ್ತು ದೇಶದ ಸಂವಿಧಾನವನ್ನು ವಿರೋಧಿಸುವುದು ಕಾಂಗ್ರೆಸ್ಸಿನ ಡಿ.ಎನ್.ಎ ಎಂದು ಮಾಜಿ ಸಚಿವ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಟೀಕಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿ.ಟಿ.ರವಿ, ಕಾಂಗ್ರೆಸ್ಸಿನ ಡಿ.ಎನ್.ಎಯು ಸಂವಿಧಾನ ವಿರೋಧಿ ಮಾನಸಿಕತೆ ಹೊಂದಿದೆ. 370ನೇ ವಿಧಿಯನ್ನು ಡಾ. ಅಂಬೇಡ್ಕರರು ವಿರೋಧಿಸಿದ್ದರು. ನೆಹರೂ ಇದೇ ವಿಧಿಯನ್ನು ಜಾರಿಗೊಳಿಸಿದರು. ಸಂವಿಧಾನದಲ್ಲಿ ಡಾ. ಅಂಬೇಡ್ಕರರು ಸೇರಿಸಿದ್ದ ಸಮಾನ ನಾಗರಿಕ ಸಂಹಿತೆಯನ್ನು ಇವತ್ತಿನವರೆಗೂ ಅವರು ಅದನ್ನು ಅನುಷ್ಠಾನಕ್ಕೆ ತಂದಿಲ್ಲ; ಬಿಜೆಪಿ ಅದನ್ನು ಅನುಷ್ಠಾನಕ್ಕೆ ತರುವುದಾಗಿ ಮುಂದಾದರೆ ವಿರೋಧಿಸುತ್ತಾರೆ ಎಂದು ಆಕ್ಷೇಪಿಸಿದರು. ಕಾಂಗ್ರೆಸ್ಸಿನ ಡಿಎನ್‍ಎ ಮುಂದುವರೆದ ಭಾಗವಾಗಿ ಡಿ.ಕೆ.ಶಿವಕುಮಾರರು ಟಿ.ವಿ. ಸಂದರ್ಶನದಲ್ಲಿ ಸಂವಿಧಾನ ಬದಲಿಸುವ ಮಾತನಾಡಿದ್ದಾರೆ ಎಂದು ತಿಳಿಸಿದರು. ಕಾಂಗ್ರೆಸ್ಸನ್ನು ಕಿತ್ತೊಗೆದು ನಾವು ಸಂವಿಧಾನ ಉಳಿಸಿಕೊಳ್ಳುತ್ತೇವೆ ಎಂದು ಅವರು ಸವಾಲು ಹಾಕಿದರು. ಮತೀಯ ಆಧಾರಿತ ಶೇ 4 ಮೀಸಲಾತಿಯೇ ಸಂವಿಧಾನಕ್ಕೆ…
Day: March 25, 2025
ರಾಜೀನಾಮೆ ನಿರ್ಧಾರದಿಂದ ಹಿಂದಕ್ಕೆ ಸರಿದ ಸಭಾಪತಿ ಹೊರಟ್ಟಿ
ಹುಬ್ಬಳ್ಳಿ: ರಾಜೀನಾಮೆ ನಿರ್ಧಾರದಿಂದ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹಿಂದಕ್ಕೆ ಸರಿದಿದ್ದಾರೆ. ಪ್ರಸ್ತುತ ದಿನಗಳಲ್ಲಿ ಸದನದಲ್ಲಿ ಸಂಭಾಳಿಸಲು ಸಾಧ್ಯವಿಲ್ಲ ಎಂದು ಕೆಲವು ದಿನಗಳ ಹಿಂದೆ ಅಸಮಾಧಾನ ಹೊರಹಾಕಿದ್ದ ಮೇಲ್ಮನೆ ಸಭಾಪತಿ ಬಸವರಾಜ ಹೊರಟ್ಟಿ ರಾಜೀನಾಮೆಯ ಇಂಗಿತ ವ್ಯಕ್ತಪಡಿಸಿದ್ದರು. ಇದೀಗ ಆ ನಿರ್ಧಾರದಿಂದ ಹಿಂದೆ ಸರಿದಿರುವುದಾಗಿ ಹೊರಟ್ಟಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿರುವುದಾಗಿ ತಿಳಿಸಿದರು. ತಮ್ಮ ರಾಜೀನಾಮೆ ಸುದ್ದಿ ಹರಿದಾಡಿದ ಬಳಿಕ ರಾಜ್ಯಪಾಲರು, ಸಚಿವರು ಹಾಗೂ ಸಾಹಿತಿಗಳು ಮಾತನಾಡಿದ್ದಾರೆ. ಮಾರ್ಚ್ 27ರಂದು ಕುಳಿತು ಮಾತನಾಡೋಣ ಎಂದಿದ್ದರು ಹಾಗಾಗಿ ರಾಜೀನಾಮೆ ನಿರ್ಧಾರವನ್ನು ಕೈ ಬಿಟ್ಟಿದ್ದೇನೆ ಎಂದು ಹೊರಟ್ಟಿ ತಿಳಿಸಿದರು.
990 ಕ್ಲಸ್ಟರ್ ಗಳಲ್ಲಿ ಪ್ರಾಯೋಗಿಕ ನೈಸರ್ಗಿಕ ಕೃಷಿ: ಸಚಿವ ಎನ್.ಚಲುವರಾಯಸ್ವಾಮಿ.
ಬೆಂಗಳೂರು: ರಾಷ್ಟ್ರೀಯ ನೈಸರ್ಗಿಕ ಕೃಷಿ ಯೋಜನೆಯಡಿ ಈ ವರ್ಷ ರಾಜ್ಯದ ಎಲ್ಲಾ ಜಿಲ್ಲೆಗಳ ಒಟ್ಟಾರೆ 990 ಕ್ಲಸ್ಟರ್ ಗಳಲ್ಲಿ ಪ್ರಾಯೋಗಿಕ ನೈಸರ್ಗಿಕ ಕೃಷಿ ಪ್ರಾತ್ಯಕ್ಷಿಕೆ ನಡೆಸಲಾಗುವುದು ಎಂದು ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಡಾ. ಸುಭಾಷ್ ಪಾಲ್ಕರ್ ನೈಸರ್ಗಿಕ ಕೃಷಿ ಮಾದರಿಯ ಸಾಧಕ ಬಾಧಕಗಳ ಕುರಿತು ಸಹಜ ಕೃಷಿ ಜಾಗೃತಿ, ಸಂಘಟನೆಯಲ್ಲಿ ತೊಡಗಿರುವ ರೈತ ಪ್ರಮುಖರು ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಅವರು ಮಾತನಾಡಿದರು. ನೈಸರ್ಗಿಕ ಕೃಷಿ ದೃಡೀಕರಣದ ವ್ಯವಸ್ಥೆ ಕೂಡ ಜಾರಿ ಮಾಡಲಾಗುವುದು ರೈತರ ಉತ್ಪನ್ನಗಳ ಮೌಲ್ಯವರ್ಧನೆಗೆ ಅಗತ್ಯವಿರುವ ಎಲ್ಲಾ ಪೂರಕ ನೆರವುಗಳನ್ನು ಒದಗಿಸಲು ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ ಎಂದು ಚಲುವರಾಯಸ್ವಾಮಿ ಹೇಳಿದರು. ರೈತರ ಅಭ್ಯುದಯ ಹಾಗೂ ಪ್ರಕೃತಿಗೆ ವರವಾಗುವ ನೈಸರ್ಗಿಕ ಕೃಷಿಯನ್ನು ಪ್ರೇರೇಪಿಸಲು ಕೃಷಿ ಇಲಾಖೆಯಿಂದ ಪೂರಕ ಯೋಜನೆಗಳನ್ನು ಅನುಷ್ಠಾನ ಮಾಡಲಾಗುವುದು ಎಂದು ಕೃಷಿ ಸಚಿವರಾದ…
6 ವರ್ಷಗಳ ಸತತ ಪರಿಶ್ರಮಕ್ಕೆ ಸಿಕ್ಕ ಪ್ರತಿಫಲ : ಈ ನಟಿ ಇನ್ನು “ಡಾ.ಮೇಘನಾ ಗಾಂವ್ಕರ್’
ಬೆಂಗಳೂರು: ಕನ್ನಡ ಚಿತ್ರ ನಟಿ ಮೇಘನಾ ಗಾಂವ್ಕರ್ ಅವರು PhD ಪದವಿ ಪಡೆದಿದ್ದು ಈ ಬಗ್ಗೆ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ತಮ್ಮ 6 ವರ್ಷಗಳ ಸತತ ಪರಿಶ್ರಮ ಫಲ ನೀಡಿದೆ ಎಂದು ಅವರು ಹೇಳಿಕೊಂಡಿದ್ದಾರೆ. So proud & happy to be sharing this news with you all. 🙏🏻🩷✨ pic.twitter.com/t2deEDXWid — Meghana Gaonkar (@MeghanaGaonkar) March 24, 2025 ಸಿನಿಮಾ ಮತ್ತು ಸಾಹಿತ್ಯ ವಿಚಾರದಲ್ಲಿ ಮೇಘನಾ ಗಾಂವ್ಕರ್ ಡಾಕ್ಟರೇಟ್ ಪದವಿ ಪಡೆಡಿದ್ದು, 2024ರ ಅಕ್ಟೋಬರ್‌ನಲ್ಲಿ ನಾನು ನನ್ನ ಪಿಎಚ್‌ಡಿ ವರದಿಯನ್ನು ಯಶಸ್ವಿಯಾಗಿ ಸಲ್ಲಿಸಿದ್ದೆ. ಕಳೆದ ವಾರ ನನ್ನ ವೈವಾ ಕೂಡ ಆಯ್ತು. ಇವತ್ತು ನಾನು ನನ್ನ ಡಾಕ್ಟರೇಟ್ ಪದವಿಯನ್ನು ಹೆಮ್ಮೆಯಿಂದ ಸ್ವೀಕರಿಸಿರುವುದಾಗಿ ತಿಳಿಸಿದ್ದಾರೆ. ಇದು ತನ್ನ ಶೈಕ್ಷಣಿಕ ಸಾಧನೆ ಎಂದು ಹೇಳಿಕೊಂಡಿದ್ದಾರೆ. ಪಿಎಚ್‌ಡಿ ಪ್ರಮಾಣ ಪತ್ರದೊಂದಿಗಿನ ತಮ್ಮ ಫೋಟೋವನ್ನು ಮೇಘನಾ…
ಡಿಜಿಟಲ್ ಸಾಧನಗಳ ಅತಿಯಾದ ಬಳಕೆಯಿಂದ ದೃಷ್ಟಿ ದೋಷ..! ಇದಕ್ಕೆ ಪರಿಹಾರವೂ ಇದೆ..
ನವದೆಹಲಿ: ಡಿಜಿಟಲ್ ಸಾಧನಗಳ ಅತಿಯಾದ ಬಳಕೆ ಮತ್ತು ಅದರ ಪರಿಣಾಮವಾಗಿ ಹೆಚ್ಚಿದ ಸ್ಕ್ರೀನ್ ಸಮಯವು ಗಮನಾರ್ಹ ಸಂಖ್ಯೆಯ ಜನರನ್ನು, ವಿಶೇಷವಾಗಿ ಯುವಕರನ್ನು ಸಮೀಪದೃಷ್ಟಿ ದೋಷ ಅಥವಾ ಸಮೀಪದೃಷ್ಟಿಯತ್ತ ಕೊಂಡೊಯ್ಯುತ್ತಿದೆ. ಈ ಕುರಿತಂತೆ ಸಂಶೋಧಕರು ತಮ್ಮ ಅಧ್ಯಯನ ವರದಿಯನ್ನು ಅನಾವರಣ ಮಾಡಿದ್ದಾರೆ. ಕೋವಿಡ್ -19 ಸಾಂಕ್ರಾಮಿಕ ರೋಗದ ನಂತರ, ಸಾಂಪ್ರದಾಯಿಕ ಶಾಲೆಗಳು ಟ್ಯಾಬ್ಲೆಟ್‌ಗಳು ಮತ್ತು ಲ್ಯಾಪ್‌ಟಾಪ್‌ಗಳ ಮೂಲಕ ಆನ್‌ಲೈನ್ ಕಲಿಕೆಗೆ ಬದಲಾದಾಗ, ಮತ್ತು ಹೊರಾಂಗಣ ಚಟುವಟಿಕೆಗಳನ್ನು ಬಹುತೇಕ ತೆಗೆದುಹಾಕಿದಾಗ, ಪ್ರಪಂಚದಾದ್ಯಂತ ಸ್ಫೋಟಕ ಸಮೀಪದೃಷ್ಟಿ ಬಿಕ್ಕಟ್ಟಿನತ್ತ ಸಾಗುತ್ತಿರುವ ಬಗ್ಗೆ ಆರೋಗ್ಯ ತಜ್ಞರು ಬಹಳ ಹಿಂದಿನಿಂದಲೂ ಕಳವಳ ವ್ಯಕ್ತಪಡಿಸಿದ್ದಾರೆ. ಇದೀಗ ಅಧ್ಯನಗಳು ಅಂತಹಾ ಆತಂಕವನ್ನು ದೃಢಪಡಿಸಿವೆ. ‘ಡಿಜಿಟಲ್ ಕಣ್ಣಿನ ಒತ್ತಡವು ವಿಶೇಷವಾಗಿ ಕೋವಿಡ್ ನಂತರದ ಮಕ್ಕಳಲ್ಲಿ ಗಮನಾರ್ಹ ಕಾಳಜಿಯಾಗುತ್ತಿದೆ. ಮಕ್ಕಳು ದೀರ್ಘಕಾಲದವರೆಗೆ ಪರದೆಗಳ ಮೇಲೆ ಕೇಂದ್ರೀಕರಿಸಿದಾಗ, ಕಣ್ಣಿನ ಸ್ನಾಯುಗಳು ಸಂಕುಚಿತಗೊಳ್ಳುತ್ತವೆ. ಕಾಲಾನಂತರದಲ್ಲಿ, ಈ ದೀರ್ಘಕಾಲದ ಒತ್ತಡವು ಸಮೀಪದೃಷ್ಟಿ (ಸಮೀಪದೃಷ್ಟಿ) ಬೆಳವಣಿಗೆಗೆ ಕೊಡುಗೆ…
ಜಮೀನು ಒತ್ತುವರಿ ವಿವಾದ; ಹೈಕೋರ್ಟ್ ಮೆಟ್ಟಿಲೇರಿದ ಹೆಚ್ಡಿಕೆ, ಬಲವಂತದ ಕ್ರಮಕ್ಕೆ ತಡೆ
ಬೆಂಗಳೂರು: ರಾಜಧಾನಿ ಹೊರವಲಯದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕುಟುಂಬ ಒತ್ತುವರಿ ಮಾಡಿದೆ ಎನ್ನಲಾದ ಜಮೀನು ವಿಚಾರದಲ್ಲಿ ಕಾನೂನು ಕ್ರಮಕ್ಕೆ ಹೈಕೋರ್ಟ್ ತಡೆ ನೀಡಿದೆ. ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ಕೇತಗಾನಹಳ್ಳಿ ಸರ್ಕಾರಿ ಜಮೀನು ಒತ್ತುವರಿ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ರಾಮನಗರ ತಹಶೀಲ್ದಾರ್ ಅವರು, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ನೋಟೀಸ್ ನೀಡಿದ್ದಾರೆ ಎನ್ನಲಾಗಿದ್ದು, ಇದನ್ನು ಪ್ರಶ್ನಿಸಿ ಕುಮಾರಸ್ವಾಮಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡಿರುವ ಹೈಕೋರ್ಟ್, ಈ ವಿಚಾರದಲ್ಲಿ ಯಾವುದೇ ಬಲವಂತದ ಕ್ರಮಕ್ಕೆ ಮುಂದಾಗಬಾರದು ಎಂದು ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ಮುಂದಿನ ಆದೇಶದವರೆಗೆ ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು’ ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ರಾಮನಗರ ತಾಲ್ಲೂಕು ತಹಶೀಲ್ದಾರ್ ಅವರಿಗೆ ನ್ಯಾಯಪೀಠ ಆದೇಶಿಸಿದ್ದು, ಇದರಿಂದಾಗಿ ಕುಮಾರಸ್ವಾಮಿ ಸ್ವಲ್ಪ ನಿರಾಳರಾಗಿದ್ದಾರೆ.
ಶಿವರಾಜ್‌ಕುಮಾರ್ ಪುತ್ರಿ ನಿವೇದಿತಾರ ಚೊಚ್ಚಲ ಸಿನಿಮಾ ‘ಫೈರ್ ಫ್ಲೈ’ ಹಾಡಿಗೆ ಸಿನಿರಸಿಕರು ಫಿದಾ
ಶಿವರಾಜ್‌ಕುಮಾರ್ ಪುತ್ರಿ ನಿವೇದಿತಾ ಅವರ ಚೊಚ್ಚಲ ನಿರ್ಮಾಣದ ‘ಫೈರ್ ಫ್ಲೈ’ ಸಿನಿಲೋಕದಲ್ಲಿ ಕುತೂಹಲದ ಕೇಂದ್ರಬಿಂದುವಾಗಿದೆ. ಶ್ರೀ ಮುತ್ತು ಸಿನಿ ಸರ್ವೀಸಸ್ ಬ್ಯಾನರ್ ಅಡಿಯಲ್ಲಿ ನಿವೇದಿತಾ ಶಿವರಾಜ್‌ಕುಮಾರ್ ಅವರು ‘ಫೈರ್ ಫ್ಲೈ’ ಚಿತ್ರವನ್ನು ನಿರ್ಮಿಸಿದ್ದಾರೆ. ಏಪ್ರಿಲ್ 24 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಈ ಸಿನಿಮಾ ತೆರೆ ಕಾಣಲಿದೆ. ಈ ಚಿತ್ರದ ಮೊದಲ ಹಾಡನ್ನು ಆನಂದ್ ಆಡಿಯೋ ಮ್ಯೂಸಿಕ್ ಲೇಬಲ್ ಮೂಲಕ ಬಿಡುಗಡೆ ಮಾಡಲಾಗಿದೆ. ‘ಇನ್ ದಿ ನೈಟ್’ ಎಂಬ ಶೀರ್ಷಿಕೆಯಲ್ಲಿ ಈ ಹಾಡು ಸಿನಿರಸಿಕರ ಮೆಚ್ಚುಗೆ ಗಳಿಸಿದೆ. ಪಿಲ್ ಕಪಿಲನ್ ಹಾಡಿರುವ ಈ ಹಾಡಿಗೆ ಧನಂಜಯ್ ರಂಜನ್ ಸಾಹಿತ್ಯ ಬರೆದಿದ್ದು, ಚರಣ್ ರಾಜ್ ಸಂಗೀತ ಸಂಯೋಜಿಸಿದ್ದಾರೆ. ವಂಶಿ ನಿರ್ದೇಶನದ ‘ಫೈರ್‌ಫ್ಲೈ’ ಚಿತ್ರದಲ್ಲಿ ನಾಯಕರಾಗಿ ವಂಶಿ ಅವರೇ ನಟಿಸಿದ್ದು, ಸುಧಾರಾಣಿ, ಶೀತಲ್ ಶೆಟ್ಟಿ, ಆನಂದ್ ನೀನಾಸಂ, ಅಚ್ಯುತ್ ಕುಮಾರ್ ಮೊದಾಲದವರು ಪತ್ರಗಳನ್ನು ಹಂಚಿಕೊಂಡಿದ್ದಾರೆ.