ಬೆಂಗಳೂರು: ನಟಿ ರನ್ಯಾ ರಾವ್ ತಮ್ಮ ವಿರುದ್ದದ ಗೋಲ್ಡ್ ಸ್ಮಗ್ಲಿಂಗ್ ಕೇಸಿಗೆ ಹಠಾತ್ ತಿರುವು ನೀಡಿದ್ದಾರೆ. ನ್ಯಾಯಾಂಗ ಬಂಧನದಲ್ಲಿರುವ ರಾಣ್ಯಾರಾವ್ ಜೈಲಿನಿಂದಲೇ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್‌ಐ) ಹೆಚ್ಚುವರಿ ಮಹಾನಿರ್ದೇಶಕರಿಗೆ ಪತ್ರ ಬರೆದಿದಿದ್ದು ತಮ್ಮ ವಿರುದ್ದದ ಆರೋಪಗಳನ್ನು ಅಲ್ಲಗಳೆದಿದ್ದಾರೆ. ಬೆಂಗಳೂರು ಸೆಂಟ್ರಲ್ ಜೈಲಿನಿಂದ ಮಾರ್ಚ್ 6 ರಂದು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಹೆಚ್ಚುವರಿ ಮಹಾನಿರ್ದೇಶಕರಿಗೆ ಪತ್ರ ಬರೆದಿರುವ ರನ್ಯಾರಾವ್, ಇತರ ಕೆಲ ಪ್ರಯಾಣಿಕರನ್ನು ರಕ್ಷಿಸಲು ನನ್ನನ್ನು ಸುಳ್ಳು ಕೇಸ್ ನಲ್ಲಿ ಸಿಲುಕಿಸಲಾಗಿದೆ ಎಂದು ಆರೋಪಿಸಿದ್ದಾರೆ. ‘ಈ ಪ್ರಕರಣದಲ್ಲಿ ನಾನು ಮುಗ್ಧೆ, ನನ್ನಿಂದ ಏನನ್ನೂ ವಶಕ್ಕೆ ಪಡೆಯದಿದ್ದರೂ ತಪ್ಪಾಗಿ ಬಿಂಬಿಸಲಾಗುತ್ತಿದೆ ಎಂದು ರನ್ಯಾ ರಾವ್ ತಮ್ಮ ಪತ್ರದಲ್ಲಿ ಬರೆದಿದ್ದಾರೆ. ಹೇಳಿದ್ದಾರೆ. ಅಧಿಕಾರಿಗಳು ಹೇಳಿದಂತೆ ಯಾವುದೇ ಮಹಜರ್ ಮಾಡಿಲ್ಲ ಅಥವಾ ಯಾವುದೇ ಶೋಧ ಕಾರ್ಯ ನಡೆದಿಲ್ಲ. ನನ್ನಿಂದ ಏನನ್ನೂ ವಶಕ್ಕೆ ಪಡೆದಿಲ್ಲ ಎಂದು ಅವರು ನಾಲ್ಕು ಪುಟಗಳ ಪತ್ರದಲ್ಲಿ ಬರೆದುಕೊಂಡಿದ್ದಾರೆ.…
Month: March 2025
ಚೆಂಡಿನ ನಾಡಿನ ಹಿರಿಮೆಯನ್ನು ಸಾರಿದ ‘ಪುರಲ್ದ ಸಿರಿಯೇ..’ ನಾಡಿನ ಅಧಿದೇವತೆ ಬಗ್ಗೆ ಗುಣಗಾನ
ಕರ್ನಾಟಕದ ಪುರಾಣ ಪ್ರಸಿದ್ಧ ಶ್ರೀ ಪೊಳಲಿ ಕ್ಷೇತ್ರ ಒಂದಿಲ್ಲೊಂದು ಮಹಿಮೆಯಿಂದ ಗಮನಸೆಳೆಯುತ್ತಿರುತ್ತದೆ. ಶತಮಾನಗಳಷ್ಟು ಹಳೆಯ ಈ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ 105 ವರ್ಷಗಳ ಬಳಿಕ ನಡೆದ ‘ಶತ ಚಂಡಿಕಾಯಾಗ’ ಆಸ್ತಿಕ ವಲಯದ ಕುತೂಹಲದ ಕೇಂದ್ರಬಿಂದುವಾಗಿತ್ತು. ಇದೀಗ ಪುರಾಣ ಪ್ರಸಿದ್ಧ ‘ಚೆಂಡಿನ ಉತ್ಸವ’ಕ್ಕೆ ಪೊಳಲಿ ಕ್ಷೇತ್ರ ಸಜ್ಜಾಗಿರುವಂತೆಯೇ ಶ್ರೀ ಕ್ಷೇತ್ರದ ಗುಣಗಾನ ಮಾಡಿರುವ ಹಾಡೊಂದು ಬಿಡುಗಡೆಯಾಗಿದೆ. ಪೊಳಲಿ ಸನ್ನಿಧಾನದಲ್ಲಿ ಮಾರ್ಚ್ 12ರಂದು ಬಿಡುಗಡೆಯಾಗಿರುವ ‘ಪುರಲ್ದ ಸಿರಿಯೇ..’ ಹೆಸರಿನ ಭಕ್ತಿ ಗಾಯನದ ವೀಡಿಯೊ ನಾಡಿನ ಆಸ್ತಿಕ ಸಮೂಹದ ಚಿತ್ತವನ್ನು ಸೂಜಿಗಲ್ಲಿನಂತೆ ಸೆಳೆದಿಟ್ಟುಕೊಳ್ಳುವಂತಿದೆ. ದೇವೀ ನೆಲೆಯಾಗಿರುವ ಪೊಳಲಿಯನ್ನು ತುಳು ಭಾಷೆಯಲ್ಲಿ ‘ಪುರಾಲ್’ ಎಂದು ಕರೆಯಲಾಗುತ್ತದೆ. ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಭಕ್ತ ಸೀಮೆಗೆ ಪೊಳಲಿ ರಾಜರಾಜೇಶ್ವರಿಯೇ ನಾಡಿನ ಅಧಿದೇವತೆ. ಈ ಸೀಮೆಯುದ್ದಕ್ಕೂ ಪೊಳಲಿ ದೇವಿಯನ್ನು ‘ಪುರಲ್ದ ಉಳ್ಳಾಲ್ತಿ’ ಎಂದೇ ಆಸ್ತಿಕರು ಕರೆಯುತ್ತಾರೆ. ದುಃಖ ದುಮ್ಮಾನಗಳಿಗೆ ಸಾಂತ್ವಾನ…
ಭಾರತೀಯನಿಂದ ಗಿನ್ನೆಸ್ ದಾಖಲೆ: ಅತೀ ಹೆಚ್ಚು ಹೊತ್ತು ‘ಹರ್ಕ್ಯುಲಸ್ ಪಿಲ್ಲರ್’ ಹಿಡಿದುಟ್ಟುಕೊಂಡ ಖರಡಿ
ಭಾರತೀಯ ಅಥ್ಲೀಟ್ ವಿಸ್ಪಿ ಖರಡಿ ಅವರು ವಿಶ್ವದ ಅತೀ ದೊಡ್ಡ ‘ಹರ್ಕ್ಯುಲಸ್ ಪಿಲ್ಲರ್ ಹೋಲ್ಡ್’ ಅನ್ನು ಅತೀ ಹೆಚ್ಚು ಹೊತ್ತು ಹಿಡಿದಿಟ್ಟುಕೊಳ್ಳುವ ಮೂಲಕ ಗಿನ್ನೆಸ್ ವಿಶ್ವ ದಾಖಲೆಯಲ್ಲಿ ತಮ್ಮ ಹೆಸರನ್ನು ಬರೆದಿದ್ದಾರೆ. Longest duration holding Hercules pillars (male) 💪⏱️ 2 mins 10.75 seconds by @VispyKharadi 🇮🇳 pic.twitter.com/JxFFSU4xGv — Guinness World Records (@GWR) March 13, 2025 ಗುಜರಾತ್‌ನ ಸೂರತ್‌ನಲ್ಲಿ ಹೊಸ ದಾಖಲೆಯ ಸನ್ನಿವೇಶ ನಡೆದಿದೆ. ಖರಡಿ ಅವರು 2 ನಿಮಿಷ 10.75 ಸೆಕೆಂಡುಗಳ ಕಾಲ ಬೃಹತ್ ಕಂಬಗಳನ್ನು ಹಿಡಿದಿಟ್ಟುಕೊಳ್ಳುವ ಮೂಲಕ ತಮ್ಮ ಅಸಾಧಾರಣ ಶಕ್ತಿಯನ್ನು ಪ್ರದರ್ಶಿಸಿದ್ದಾರೆ. ಗ್ರೀಕ್ ವಾಸ್ತುಶಿಲ್ಪದಿಂದ ಪ್ರೇರಿತವಾದ ಈ ಕಂಬಗಳು 123 ಇಂಚು ಎತ್ತರ ಮತ್ತು 20.5 ಇಂಚು ವ್ಯಾಸವನ್ನು ಹೊಂದಿವೆ. ಇದು ಸುಮಾರು166.7 – 168.9 ಕೆಜಿ ತೂಕವಿದ್ದು, ಅವು ಮಾನವ ಸಹಿಷ್ಣುತೆ…
‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು
ಮಂಗಳೂರು: ಪುರಾಣ ಪ್ರಸಿದ್ದ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ಗತ ವೈಭವ ಮರುಕಳಿಸಿದೆ. ಐತಿಹಾಸಿಕ ವಾರ್ಷಿಕ ಜಾತ್ರಾ ಮಹೋತ್ಸವ ಆರಂಭವಾಗಿದೆ. ಸುಮಾರು ಒಂದು ತಿಂಗಳ ಕಾಲದ ಸುದೀರ್ಘ ಜಾತ್ರೆ ಇದಾಗಿದ್ದು ದೇಶ-ವಿದೇಶಗಳಲ್ಲಿ ‘ಪೊಳಲಿ ಚೆಂಡು’ ಎಂದೇ ಇದು ಪ್ರತೀತಿ. ಈ ವರ್ಷ 28 ದಿನಗಳ ಜಾತ್ರೆ ನಡೆಯಲಿದ್ದು ಎಪಿಲ್ 9 ರಂದು ‘ಕಡೆ ಚೆಂಡು’ ನಿಗದಿಯಾಗಿದೆ. ಪೊಳಲಿ ಚೆಂಡು ಉತ್ಸವದ ಸಂಕ್ಷಿಪ್ತ ಕ್ಯಾಲೆಂಡರ್ ಹೀಗಿದೆ: ಈ ಬಾರಿ ಏಪ್ರಿಲ್ 4ರಂದು 20ನೇ ದಂಡಮಾಲೋತ್ಸವ, ಏಪ್ರಿಲ್ 5ರಂದು ಮೊದಲ ಚೆಂಡು, ಏಪ್ರಿಲ್ 9ರಂದು ಕಡೇ ಚೆಂಡು, ಏಪ್ರಿಲ್ 10ರಂದು ಬ್ರಹ್ಮ ರಥೋತ್ಸವ, ಏಪ್ರಿಲ್ 11ರಂದು ಆರಾಟ ಮಹೋತ್ಸವ ಜರುಗಲಿದೆ. ದಕ್ಷಿಣಕನ್ನಡದ ಪೊಳಲಿಯಲ್ಲಿರುವ ನಾಡಿನ ಅಧಿ ದೇವತೆ ಶ್ರೀ ರಾಜರಾಜೇಶ್ವರಿ ದೇಗುಲದಲ್ಲಿ ಪ್ರತೀ ವರ್ಷ ಮಾರ್ಚ್ 14ರ ತಡರಾತ್ರಿ ಧ್ವಜಾರೋಹಣ ಮೂಲಕ ಜಾತ್ರಾ ಮಹೋತ್ಸವಕ್ಕೆ ಮುನ್ನುಡಿ ಬರೆಯಲಾಗುತ್ತದೆ. ಧ್ವಜಾರೋಹಣ ನಂತರವಷ್ಟೇ …
ಬಿಜೆಪಿ ಅಧ್ಯಕ್ಷರಿಂದ PSI ಮೇಲೆ ಹಲ್ಲೆ ಆರೋಪ
ಚಿತ್ರದುರ್ಗ: ಚಿತ್ರದುರ್ಗ ನಗರ ಠಾಣೆ ಪಿಎಸ್ಐ ಗಾದಿಲಿಂಗಪ್ಪ ಮೇಲೆ ಮಧುಗಿರಿ ಬಿಜೆಪಿ ಜಿಲ್ಲಾಧ್ಯಕ್ಷ ಹನುಮಂತೇಗೌಡ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ತುರುವನೂರು ರಸ್ತೆಯ ಖಾಸಗಿ ಹೋಟೆಲ್ ಬಳಿ ತಡರಾತ್ರಿ ರಸ್ತೆ ಮೇಲೆ ತುಮಕೂರು ಜಿಲ್ಲೆ ಮಧುಗಿರಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತೇಗೌಡ ಗುಂಪಾಗಿ ನಿಂತಿದ್ದನ್ನು ಪಿಎಸ್ಐ ಗಾದಿಲಿಂಗಪ್ಪ ಪ್ರಶ್ನಿಸಿದ್ದಾರೆ. ಆ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಪಿಎಸ್ಐ ಗಾದಿಲಿಂಗಪ್ಪ ಅವರ ಕೈ ಬೆರಳಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ನಡುವೆ, ಹಲ್ಲೆ ಆರೋಪದಲ್ಲಿ ಹನುಮಂತೇಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ ಪೊಲೀಸರೇ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹನುಮಂತೇಗೌಡ ಆರೋಪಿಸಿದ್ದಾರೆ. ಇದೆಲ್ಲದರ ನಡುವೆ, ಬಿಜೆಪಿ ನಾಯಕ ಹನುಮಂತೇಗೌಡ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಜಲಜೀವನ್ ಯೋಜನೆ ಜಾರಿಗೆ ಇಚ್ಛಾಶಕ್ತಿ ತೋರದ ಸರ್ಕಾರ: ಸಿ.ಟಿ.ರವಿ ಆಕ್ರೋಶ
ಬೆಂಗಳೂರು: ಜಲಜೀವನ್ ಯೋಜನೆ ಜಾರಿಗೆ ಕಾಂಗ್ರೆಸ್ ಸರ್ಕಾರ ಇಚ್ಛಾಶಕ್ತಿ ತೋರಿಸುತ್ತಿಲ್ಲ ಎಂದು ಬಿಜೆಪಿ ಶಾಸಕ ಸಿ.ಟಿ.ರವಿ ಆರೋಪಿಸಿದ್ದಾರೆ. ವಿಧಾನಪರಿಷತ್ತಿನಲ್ಲಿ ಈ ವಿಷಯ ಪ್ರಸ್ತಾಪಿಸಿದ ಸಿ.ಟಿ.ರವಿ ಅವರು ರಾಜ್ಯ ಸರ್ಕಾರದ ಕಾರ್ಯವೈಖರಿ ಬಗ್ಗೆ ಕಿಡಿಕಾರಿದರು. ಜಲಜೀವನ್ ಯೋಜನೆ ಜಾರಿಗೆ ಕಾಂಗ್ರೆಸ್ ಸರ್ಕಾರ ಇಚ್ಛಾಶಕ್ತಿ ತೋರಿಸುತ್ತಿಲ್ಲ. 26,592 ಗ್ರಾಮಗಳು ರಾಜ್ಯದಲ್ಲಿದ್ದು, ಕಾಮಗಾರಿ ಪೂರ್ಣಗೊಳಿಸಿ, ನೀರು ಸರಬರಾಜು ಆಗುತ್ತಿರುವ ಗ್ರಾಮಗಳ ಸಂಖ್ಯೆ 4,675. ಇನ್ನೂ 21,000 ಕ್ಕೂ ಅಧಿಕ ಗ್ರಾಮಗಳಲ್ಲಿ ಕಾಮಗಾರಿ ಪೂರ್ಣಗೊಂಡಿಲ್ಲ. ಆಗಿರುವ ಕಾಮಗಾರಿಯೂ ಸಮರ್ಪಕವಾಗಿ ನಡೆದಿಲ್ಲ.… pic.twitter.com/6wBsR7EhgW — BJP Karnataka (@BJP4Karnataka) March 14, 2025 ಜಲಜೀವನ್ ಯೋಜನೆ ಜಾರಿಗೆ ಕಾಂಗ್ರೆಸ್ ಸರ್ಕಾರ ಇಚ್ಛಾಶಕ್ತಿ ತೋರಿಸುತ್ತಿಲ್ಲಎಂದು ವಾಗ್ದಾಳಿ ನಡೆಸಿದ ಅವರು, 26,592 ಗ್ರಾಮಗಳು ರಾಜ್ಯದಲ್ಲಿದ್ದು, ಕಾಮಗಾರಿ ಪೂರ್ಣಗೊಳಿಸಿ, ನೀರು ಸರಬರಾಜು ಆಗುತ್ತಿರುವ ಗ್ರಾಮಗಳ ಸಂಖ್ಯೆ 4,675. ಇನ್ನೂ 21,000 ಕ್ಕೂ ಅಧಿಕ ಗ್ರಾಮಗಳಲ್ಲಿ ಕಾಮಗಾರಿ ಪೂರ್ಣಗೊಂಡಿಲ್ಲ ಎಂದು…
ಕಾರು ಡಿಕ್ಕಿಹೊಡಿಸಿ ವ್ಯಕ್ತಿಯ ಕೊಲೆಗೆ ಯತ್ನ: ಮಹಿಳೆಗೆ ಗಾಯ.. ಮಂಗಳೂರಿನಲ್ಲೊಂದು ಭಯಾನಕ ಕೃತ್ಯ
ಮಂಗಳೂರು: ಬಂದರು ನಗರಿ ಮಂಗಳೂರು ಆಘಾತಕಾರಿ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ಜಗಳವಾಡುತ್ತಿದ್ದ ನೆರಮನೆಯವನನ್ನು ಕೊಳ್ಳಲು ಹೋಗಿ ಮಹಿಳೆಯ ಪ್ರಾಣಕ್ಕೆ ಸಂಚಕಾರ ತಂದ ವ್ಯಕ್ತಿ ಇದೀಗ ಜೈಲು ಸೇರಿದ್ದಾನೆ. A retired #BSNL employee in #Karnataka’s #Mangaluru has been arrested for allegedly attempting to murder his neighbour by intentionally ramming his car into the latter’s motorcycle amid a longstanding dispute. The accused, 69-year-old #SatishKumarKM, a resident of #Bejai, was… pic.twitter.com/ssdpJxwEvF — Hate Detector 🔍 (@HateDetectors) March 14, 2025 ಮಂಗಳೂರಿನ ಬಿಜೈ ಸಮೀಪದ ಕಾಪಿಕಾಡ್ ಬಳಿ ನಿವೃತ್ತ BSNL ಅಧಿಕಾರಿ ಎನ್ನಲಾದ ಸತೀಶ್ ಕುಮಾರ್ ಎಂಬವರು ತಮ್ಮ ನೆರೆಮನೆಯ ವ್ಯಕ್ತಿಯ ಕೊಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ತನ್ನ ಎದುರಾಳಿ ವ್ಯಕ್ತಿ ಬೈಕ್ ನಲ್ಲಿ…
ಉಪಸಭಾಪತಿ ರುದ್ರಪ್ಪ ಲಮಾಣಿ ಅವರಿಗೆ ಬೈಕ್ ಡಿಕ್ಕಿ: ಗಂಭೀರ ಗಾಯ
ಚಿತ್ರದುರ್ಗ: ವಿಧಾನ ಸಭೆಯ ಉಪಸಭಾಪತಿ ಹಾಗೂ ಹಾವೇರಿ ಕಾಂಗ್ರೆಸ್ ಶಾಸಕ ರುದ್ರಪ್ಪ ಲಮಾಣಿ ಅವರು ಅಪಘಾತದಲ್ಲಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ವಿಧಾನಸಭಾ ಅಧಿವೇಶನದಲ್ಲಿ ಪಾಲ್ಗೊಂಡು ತಮ್ಮ ಕ್ಷೇತ್ರಕ್ಕೆ ಕಾರಿನಲ್ಲಿ ತೆರಳಿದ್ದ ಅವರು ಮಾರ್ಗಮಧ್ಯೆ ಅಪಘಾತಕ್ಕೀಡಾಗಿದ್ದಾರೆ. ಶುಕ್ರವಾರ ಬೆಂಗಳೂರಿಂದ ಹಾವೇರಿಗೆ ತೆರಳುತ್ತಿದ್ದ ವೇಳೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಮೂತ್ರ ವಿಸರ್ಜನೆಗಾಗಿ ಕಾರಿನಿಂದ ಅವರು ಇಳಿದಿದ್ದರು. ಆ ವೇಳೆ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರುದ್ರಪ್ಪ ಲಮಾಣಿ ಅವರು ನೆಲಕ್ಕೆ ಬಿದ್ದಿದ್ದು, ಅವರ ಹಣೆ, ಹಲ್ಲು ಮತ್ತು ಮೊಣಕಾಲಿಗೆ ಬಲವಾದ ಏಟು ತಗುಲಿದೆ. ತಕ್ಷಣಕ್ಕೆ ಹಿರಿಯೂರಿನಲ್ಲಿ ಚಿಕಿತ್ಸೆ ನೀಡಿ ಅವರನ್ನು ದಾವಣಗೆರೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಆಪ್ತ ಮೂಲಗಳು ತಿಳಿಸಿವೆ. Deputy speaker of state legislative assembly #Rudrappa #Lamani suffered injuries when he was…
ಸೂಪರ್ ಸ್ಪೆಷಾಲಿಟಿ ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಸರ್ಕಾರದ ಚಿಂತನೆ
ಕಲಬುರಗಿ: ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ನಿವೃತ್ತಿ ವಯಸ್ಸನ್ನು ಪ್ರಸ್ತುತ 60 ವರ್ಷದಿಂದ 65 ವರ್ಷಕ್ಕೆ ಹೆಚ್ಚಿಸುವ ಬಗ್ಗೆ ಚಿಂತನೆ ನಡೆದಿದೆ. ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಪತ್ರಿಕಾ ಪ್ರಕಟಣೆಯಲ್ಲಿ ಈ ಮಾಹಿತಿ ನೀಡಿದ್ದಾರೆ. ಜಯದೇವ ಹೃದಯ ರಕ್ತನಾಳ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ವೈದ್ಯರೊಂದಿಗೆ ಗುರುವಾರ ನಡೆದ ಸಂವಾದದ ವೇಳೆ ಸಚಿವರು ಈ ವಿಷಯ ತಿಳಿಸಿದ್ದಾರೆ. ಸಂವಾದದ ವೇಳೆ ಜಯದೇವದ ಹಿರಿಯ ವೈದ್ಯರು ಕೆಲವು ವಿಷಯ ಪ್ರಸ್ತಾಪಿಸಿದರು. ವೈದ್ಯಕೀಯ ಶಿಕ್ಷಣ ಮತ್ತು ತರಬೇತಿ ಪಡೆದ ನಂತರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ವೈದ್ಯರಾಗಿ ಕಾರ್ಯ ನಿರ್ವಹಿಸಲು ಅತಿ ಹೆಚ್ಚು ವರ್ಷಗಳನ್ನು ವ್ಯಯಿಸಿರಲಾಗಿರುತ್ತದೆ. 60 ನೇ ವಯಸ್ಸಿನಲ್ಲಿ ನಿವೃತ್ತರಾಗುವ ಮೊದಲು ನಮಗೆ 20-25 ವರ್ಷಗಳ ಕಾಲ ಮಾತ್ರ…
ಆಪ್ ನಾಯಕರಿಗೆ ಸಂಕಷ್ಟ: ಸಿಸೋಡಿಯಾ, ಸತ್ಯೇಂದ್ರ ಜೈನ್ ವಿರುದ್ಧ FIRಗೆ ರಾಷ್ಟ್ರಪತಿ ಗ್ರೀನ್ ಸಿಗ್ನಲ್
ನವದೆಹಲಿ: ಆಮ್ ಆದ್ಮಿ ಪಕ್ಷದ ನಾಯಕರಾದ ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ಅವರಿಗೆ ಮತ್ತೊಮ್ಮೆ ಸಂಕಷ್ಟ ಎದುರಾಗಿದೆ. ದೆಹಲಿ ಸರ್ಕಾರಿ ಶಾಲೆಗಳ ತರಗತಿ ಕೊಠಡಿಗಳ ನಿರ್ಮಾಣದಲ್ಲಿನ ಭ್ರಷ್ಟಾಚಾರ ಆರೋಪದಲ್ಲಿ ಪ್ರಕರಣ ದಾಖಲಿಸಲು ಸಿದ್ಧತೆ ನಡೆದಿದೆ. ಸುಮಾರು 1,300 ಕೋಟಿ ರೂಪಾಯಿ ಹಗರಣ ಆರೋಪ ಸಂಬಂಧ ಆಮ್ ಆದ್ಮಿ ಪಕ್ಷದ ನಾಯಕರಾದ ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ವಿರುದ್ಧ ಎಫ್‌ಐಆರ್ ದಾಖಲಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅನುಮೋದನೆ ನೀಡಿದ್ದಾರೆ ಎನ್ನಲಾಗಿದೆ. ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರದಲ್ಲಿ ಸಿಸೋಡಿಯಾ ಮತ್ತು ಜೈನ್ ಸಚಿವರಾಗಿದ್ದ ಅವಧಿಯಲ್ಲಿ ಈ ಹಗರಣ ನಡೆದಿದ್ದು, 2022 ರಲ್ಲಿ ದೆಹಲಿ ಸರ್ಕಾರದ ಜಾಗೃತ ನಿರ್ದೇಶನಾಲಯ, ಹಗರಣದ ತನಿಖೆಗೆ ಶಿಫಾರಸು ಮಾಡಿ ಮತ್ತು ಮುಖ್ಯ ಕಾರ್ಯದರ್ಶಿಗೆ ವರದಿಯನ್ನು ಸಲ್ಲಿಸಿತ್ತು. ಇದೀಗ ಎಫ್‌ಐಆರ್ ದಾಖಲಿಸಲು ರಾಷ್ಟ್ರಪತಿಗಳು ಅನುಮೋದನೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಕೇಸ್ ದಾಖಲಿಸಲು…
