ರಾಜ್ಯದಲ್ಲಿ ಕುರಿಗಾರರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ:

ಗದಗ: ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ಉಗಳವಾಟ ಗ್ರಾಮದಲ್ಲಿ ಕುರಿಗಾಹಿಯ ಕತ್ತು ಕತ್ತರಿಸಿ ಹತ್ಯೆ ಮಾಡಿರುವದನ್ನು ಖಂಡಿಸಿ, ಕೊಪ್ಪಳ ಜಿಲ್ಲೆಯ ಯಲಬುರ್ಗ ತಾಲೂಕಿನ ಹಿರೇಮ್ಯಾಗೇರಿ ಗ್ರಾಮದ ಕುರುಬ ಸಮಾಜದ ಮಹಿಳಾ ಪಿ.ಡಿ.ಓ ಮೇಲೆ ಹಲ್ಲೆಮತ್ತು ಕಲಬುರಗಿ ಜಿಲ್ಲೆಯ ಅಳಂದ ತಾಲ್ಲೂಕಿನ ಖಾನಾಪುರ ಗ್ರಾಮದಲ್ಲಿ ಕುರುಬರಿಗೆ ಬಹಿಷ್ಕಾರ ಹಾಕಿರುವದನ್ನು ಖಂಡಿಸಿ ಗದಗ ಜಿಲ್ಲೆಯ ಕುರುಬ ಸಮುದಾಯದ ವಿವಿಧ ಸಂಘಟನೆಗಳು ಹಾಗೂ ಜಿಲ್ಲಾ ಕುರಿಗಾರರ ಸಹಕಾರಿ ಸಂಘಗಳ ಒಕ್ಕೂಟದ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗಿದೆ. ಗದಗ ನಗರದ ಟಿಪ್ಪು ವೃತ್ತದಿಂದ ಕುರುಬ ಸಮಾಜ ಬಾಂಧವರು ನೂರಾರು ಕುರಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿವರೆಗೂ ತೆರಳಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು. ಬಾಗಲಕೋಟೆ ಜಿಲ್ಲೆ, ಬಾದಾಮಿ ತಾಲ್ಲೂಕು, ಉಗಲವಾಟ ಗ್ರಾಮದಲ್ಲಿ ಕುರಿಗಾಹಿ ಯುವಕ ಶರಣಪ್ಪ ಜಮ್ಮನಕಟ್ಟಿಯ ಮೇಲೆ ದುಷ್ಕರ್ಮಿಗಳು ರಾಕ್ಷಸಿಕೃತ್ಯ ಮೆರೆದು ಕತ್ತು ಸೀಳಿ ಕೊಂದು ಹಾಕಿದ್ದಾರೆ.…

ಕೆ.ಎ.ಎಸ್. ಪರೀಕ್ಷೆ: ಭಾಷಾಂತರ ಅವಾಂತರ ಕೊನೆಗೊಳಿಸಲು KPSCಗೆ ಸಿಎಂ ತಾಕೀತು

ಬೆಂಗಳೂರು: ಕೆ.ಎ.ಎಸ್. ಪೂರ್ವಭಾವಿ ಪರೀಕ್ಷೆ ಹಾಗೂ ಮರು ಪರೀಕ್ಷೆಯ ಪ್ರಶ್ನೆಪತ್ರಿಕೆಯಲ್ಲಿನ ಪ್ರಶ್ನೆಗಳಲ್ಲಿನ ಕನ್ನಡ ಭಾಷಾಂತರದಲ್ಲಿ ಉಂಟಾಗಿರುವ ಲೋಪದೋಷಗಳನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಆಯೋಗಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಕೆ.ಎ.ಎಸ್. ಪೂರ್ವಭಾವಿ ಪರೀಕ್ಷೆ ಹಾಗೂ ಮರು ಪರೀಕ್ಷೆಯ ಪ್ರಶ್ನೆಪತ್ರಿಕೆಯಲ್ಲಿನ ಪ್ರಶ್ನೆಗಳಲ್ಲಿನ ಕನ್ನಡ ಭಾಷಾಂತರದಲ್ಲಿ ಲೋಪದೋಷಗಳಿಗೆ ಕಾರಣರಾದ ವಿಷಯ ತಜ್ಞರನ್ನು ಕಪ್ಪುಪಟ್ಟಿಗೆ ಸೇರಿಸಬೇಕು. ಅವರ ಮೇಲೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದವರು ಸೂಚಿಸಿದ್ದಾರೆ. ಭಾಷಾಂತರಕಾರರ ಲೋಪವಿದ್ದರೆ ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕು. ಆಯೋಗವು ನಡೆಸುವ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳನ್ನು ಮೊದಲು ಕನ್ನಡದಲ್ಲಿ ತಯಾರಿಸಿ, ನಂತರ ಇಂಗ್ಲೀಷ್ ಬಗ್ಗೆ ಭಾಷಾಂತರ ಮಾಡಲು ಆಯೋಗಕ್ಕೆ ಸೂಚನೆಯನ್ನು ನೀಡಲಾಗುವುದು ಎಂದವರು ತಿಳಿಸಿದ್ದಾರೆ. ಏನೇ ಆದರೂ ಈಗ ಪ್ರಕರಣವು ಉಚ್ಛ ನ್ಯಾಯಾಲಯ ಹಾಗೂ ಕೆಎಟಿಗಳು ನೀಡುವ ಆದೇಶಗಳನ್ನು ಆಧರಿಸಿ ತೀರ್ಮಾನಗಳನ್ನು ತೆಗೆದುಕೊಳ್ಳಲಾಗುವುದು. ಈ ವಿಚಾರದಲ್ಲಿ ಯಾವುದೇ ಮುಲಾಜುಗಳು…

‘ಉತ್ತರ ಪ್ರದೇಶದ ಬಹುತೇಕ ಮಸೀದಿಗಳನ್ನು ಟಾರ್ಪಲಿನ್ ನಿಂದ ಮುಚ್ಚಲಾಗಿದೆ’ ಯಾಕೆ ಗೊತ್ತಾ?

ಲಖನೌ: ಉತ್ತರ ಪ್ರದೇಶದ ಬಹುತೇಕ ಮಸೀದಿಗಳನ್ನು ಟಾರ್ಪಲಿನ್ ನಿಂದ ಮುಚ್ಚಲಾಗಿದೆ. ಐತಿಹಾಸಿಕ ‘ಲಾಟ್‌ ಸಾಹೇಬ್‌’ ಮೆರವಣಿಗೆ ಸಾಗುವ ಮಾರ್ಗದಲ್ಲಿನ ಮಸೀದಿಗಳನ್ನು ಟಾರ್ಪಾಲಿನ್‌ನಿಂದ ಮುಚ್ಚಲು ನಗರ ಪಾಲಿಕೆ ಕ್ರಮ ಕೈಗೊಂಡಿದ್ದು, ಈ ಹಿನ್ನೆಲೆಯಲ್ಲಿ ಬಹುತೇಕ ಮಸೀದಿಗಳನ್ನು ಟಾರ್ಪಲಿನ್ ನಿಂದ ಮುಚ್ಚಲಾಗಿದೆ. This was never happening before 2014 that mosques in India were being covered before Holi. BJP has destroyed this country 👇 pic.twitter.com/ezd1n7tR3w — Dhruv Rathee (Parody) (@dhruvrahtee) March 12, 2025 ಹೋಳಿ ಹಬ್ಬದ ಆಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕ ಘಟನೆಗಳು ನಡೆಯದಂತೆ ವ್ಯಾಪಕ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಹಾಗಾಗಿ ಶಹಜಹಾನ್‌ಪುರದಲ್ಲಿ ಹೋಳಿ ಹಬ್ಬದ ಅಂಗವಾಗಿ ಹಮ್ಮಿಕೊಳ್ಳಲಾಗುವ ‘ಲಾಟ್‌ ಸಾಹೇಬ್‌’ ಮೆರವಣಿಗೆ ಸಾಗುವ ಮಾರ್ಗದಲ್ಲಿನ ಮಸೀದಿಗಳನ್ನು ಟಾರ್ಪಾಲಿನ್‌ನಿಂದ ಮುಚ್ಚಲು ನಗರ ಪಾಲಿಕೆ ಕರಮ್ ಕೈಗೊಂಡಿದೆ. 20…

ಬಲೂಚಿಸ್ತಾನ ರೈಲು ಅಪಹರಣ: ಯಶಸ್ವೀ ಕಾರ್ಯಾಚರಣೆಯಲ್ಲಿ ಎಲ್ಲಾ ಪ್ರಯಾಣಿಕರ ರಕ್ಷಣೆ

ಇಸ್ಲಾಮಾಬಾದ್: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ರೈಲು ಅಪಹರಣ ಮಾಡಿರುವ ಉಗ್ರರ ವಿರುದ್ದ ಸೆಣಸಾಡಿರುವ ಸೇನಾ ಪಡೆಗಳು ಎಲ್ಲಾ ಪ್ರಯಾಣಿಕರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕ್ವೆಟ್ಟಾದಿಂದ ಪೆಶಾವರಕ್ಕೆ ತೆರಳುತ್ತಿದ್ದ ಜಾಫರ್ ಎಕ್ಸ್‌ಪ್ರೆಸ್ ರೈಲಿನ್ನು ವಶಕ್ಕೆ ಪಡೆದು ಅಪಹರಿಸಿದ್ದ ಉಗ್ರರು, 400 ಕ್ಕೂ ಹೆಚ್ಚು ಪ್ರಯಾಣಿಕರನ್ನು ಒತ್ತೆಯಾಳಾಗಿರಿಸಿದ್ದರು. ಗಡಾಲರ್ ಮತ್ತು ಪೆಹ್ರೊ ಕುನ್ರಿ ಕಣಿವೆ ಪ್ರದೇಶದ ಸಮೀಪದ ಸುರಂಗದಲ್ಲಿ ಬಂದೂಕುಧಾರಿಗಳು ಮಂಗಳವಾರ ಈ ರೈಲನ್ನು ಹಿಡಿತಕ್ಕೆ ತೆಗೆದುಕೊಂಡಿದ್ದರು. ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (ಬಿಎಲ್‌ಎ) ಈ ದಾಳಿಯ ಹೊಣೆ ಹೊತ್ತುಕೊಂಡಿದೆ. ಈ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ನಡೆಸಿರುವ ಪಾಕಿಸ್ತಾನದ ಭದ್ರತಾ ಪಡೆ ರೈಲನ್ನು ಹೈಜಾಕ್ ಮಾಡಿದ್ದ ಬಲೂಚಿಸ್ತಾನ ಬಂಡುಕೋರರ ಪೈಕಿ ಸುಮಾರು 30 ಉಗ್ರರನ್ನು ಹತ್ಯೆ ಮಾಡಿದೆ. 30 ಗಂಟೆಗಳ ಸತತ ರಕ್ಷಣಾ ಕಾರ್ಯಾಚರಣೆಯಲ್ಲಿ, 340 ಕ್ಕೂ ಹೆಚ್ಚು ರೈಲು ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ನಡುವೆ, ಈ…

‘ಗ್ರೇಟರ್ ಬೆಂಗಳೂರು’: ರಾಜಧಾನಿ ನಗರ ವಿಭಜನೆ ಮೂಲಕ ಲೂಟಿಗೆ ಹುನ್ನಾರ?

ಬೆಂಗಳೂರು: ರಾಜಧಾನಿಯನ್ನು ಗ್ರೇಟರ್ ಬೆಂಗಳೂರು ಹೆಸರಲ್ಲಿ ವಿಭಜಿಸುವ ಸರ್ಕಾರದ ನಿರ್ಧಾರಕ್ಕೆ ಪ್ರತಿಪಕ್ಷ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. https://publish.twitter.com/?query=https%3A%2F%2Ftwitter.com%2FBJP4Karnataka%2Fstatus%2F1899852358441665000&widget=Video ಬೆಂಗಳೂರನ್ನು ಕೆಂಪೇಗೌಡರು ಯೋಜನಾ ಬದ್ಧವಾಗಿ ರೂಪಿಸಿದ್ದರು. ಮೈಸೂರು ಮಹಾರಾಜರ ಕಾಲದಲ್ಲೂ ಬೆಂಗಳೂರು ಯೋಜನಾಬದ್ಧವಾಗಿತ್ತು. ಆದರೆ ನಮ್ಮ ಕಾಲದಲ್ಲಿ ಯೋಜನಾ ಬದ್ಧವಾಗಿದ್ದ ನಗರವನ್ನು ಯಾವ ಸ್ಥಿತಿಗೆ ತಲುಪಿಸಿದ್ದೇವೆ ಎಂಬುದರ ಬಗ್ಗೆ ನಾವು ಅವಲೋಕಿಸಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮಾರ್ಮಿಕವಾಗಿ ಹೇಳಿದ್ದಾರೆ. ಗ್ರೇಟರ್ ಬೆಂಗಳೂರು ಎಂದು ವಿಭಾಗಿಸುವ ಮೂಲಕ ಲೂಟಿ ಹೊಡೆಯುವವರಿಗೆ ಅವಕಾಶ ಮಾಡಿಕೋಸಲಾಗುತ್ತಿದೆ ಎಂದು ಸಿ.ಟಿ.ರವಿ ಆರೋಪಿಸಿದ್ದಾರೆ.

ರನ್ಯಾ ಚಿನ್ನದ ಕಳ್ಳಸಾಗಣೆ ಸಿಎಂ ಸಿದ್ದರಾಮಯ್ಯ ಮನೆ ಬಾಗಿಲಿಗೆ ತಲುಪಿತೇ? ಅಮಿತ್ ಮಾಳವೀಯ ಪೋಸ್ಟ್

ಬೆಂಗಳೂರು: ನಟಿ ರನ್ಯಾ ರಾವ್ ಅಕ್ರಮ ಚಿನ್ನ ಕಳ್ಳಸಾಗಾಣಿಕೆ ಆರೋಪ ಪ್ರಕರಣ ರಾಜ್ಯ ರಾಜಕಾರಣದಲ್ಲೂ ತಲ್ಲಣ ಸೃಷ್ಟಿಸಿದೆ. ದುಬೈನಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ ಹೊತ್ತು ತಂದ ಆರೋಪದಲ್ಲಿ ನಟಿ ರನ್ಯಾ ರಾವ್ ಬಂಧನವಾಗಿದೆ. ಈ ಸ್ಮಗ್ಲಿಂಗ್ ಕೇಸ್ ಕುರಿತಂತೆ DRI, CBI ತನಿಖೆ ನಡೆಸುತ್ತಿದ್ದು, ಪೊಲೀಸ್ ಅಧಿಕಾರಿಗಳ ಶಾಮೀಲು ಬಗ್ಗೆಯೂ ಮಹತ್ವದ ಸಂಗತಿಗಳು ಬೆಳಕಿಗೆ ಬಂದಿವೆ. ಇನ್ನೊಂದೆಡೆ ರಮ್ಯಾ ಗೋಲ್ಡ್ ಸ್ಮಗ್ಲಿಂಗ್ ಕೇಸ್’ನಲ್ಲಿ ರಾಜ್ಯದ ಸಚಿವರಿಬ್ಬರ ಕೈವಾಡ ಇರುವ ಬಗ್ಗೆ ಬಿಜೆಪಿ ನಾಯಕರು ಗಂಭೀರ ಆರೋಪ ಮಾಡುತ್ತಿದ್ದು ಈ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ನಾಯಕರ ನಡುವೆ ವಾಕ್ಸಮರ ನಡೆದಿದೆ. ಕೆಜಿಎಫ್..? ಈ ಮಧ್ಯೆ, ಕರ್ನಾಟಕದಲ್ಲಿ ರನ್ಯಾ ರಾವ್ ಚಿನ್ನದ ಕಳ್ಳಸಾಗಣೆ ಪ್ರಕರಣ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆ ಬಾಗಿಲಿಗೆ ತಲುಪಿದೆ ಎಂದು ಬಿಜೆಪಿ ಬಿಜೆಪಿ ನಾಯಕ ಬೆಂಗಳೂರು: ನಟಿ ರನ್ಯಾ ರಾವ್…

‘ಅಕ್ಕನ ಮಗನ ಕಾಲಿಗೆ ಬಿದ್ದ ಅಭಿಮಾನಿ’: ದರ್ಶನ್ ಬೇಸರ

ಬೆಂಗಳೂರು: ತನ್ನ ಅಕ್ಕನ ಮಗನಾದ ಚಂದುಗೆ ಅಭಿಮಾನಿಯೊಬ್ಬರು ಕಾಲಿಗೆ ಬೀಳುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದನ್ನು ಕಂಡು ನಟ ಸರ್ಶನ್ ಬೇಸರ ವ್ಯಕ್ತಪಡಿಸಿದ್ಫ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಇನ್ಸಾಟಾಗ್ರಾಮ್ ನಲ್ಲಿ ವಿಡಿಯೋ ಹಂಚಿಕೊಂಡಿರುವ ದರ್ಶನ್, ಇನ್ನೂ ಸಾಧನೆ ಮಾಡದ ನನ್ನ ಅಕ್ಕನ ಮಗನಾದ ಚಂದುಗೆ ಅಭಿಮಾನಿಯೊಬ್ಬರು ಕಾಲಿಗೆ ಬೀಳುವುದನ್ನು ನೋಡಿ ನನ್ನ ಮನಸಿಗೆ ತುಂಬಾ ನೋವಾಗಿದೆ ಎಂದಿದ್ದಾರೆ.   View this post on Instagram   A post shared by Darshan Thoogudeepa Shrinivas (@darshanthoogudeepashrinivas) ‘ಎಲ್ಲಾ ನನ್ನ ಸೆಲೆಬ್ರಿಟಿಸ್ ಗಳಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ನನ್ನ ಮತ್ತು ನಮ್ಮ ಕುಟುಂಬದ ಮೇಲಿಟ್ಟಿರುವ ಪ್ರೀತಿ ಅಭಿಮಾನಕ್ಕೆ ನಾವು ಸದಾ ಚಿರಋಣಿ. ಆದರೆ, ಈ ವೀಡಿಯೊದಲ್ಲಿ ನಮ್ಮ ಮೇಲಿರುವ ಅಭಿಮಾನದಿಂದ ಇನ್ನೂ ಏನು ಸಾಧನೆ ಮಾಡದಿರುವ ನನ್ನ ಅಕ್ಕನ ಮಗನಾದ ಚಂದುಗೆ ಅಭಿಮಾನಿಯೊಬ್ಬರು…

ರೈಲು ಅಪಹರಣ ಬೇಧಿಸಿದ ಸೇನೆ; 16 ಉಗ್ರರ ಹತ್ಯೆ, ನೂರಕ್ಕೂ ಹೆಚ್ಚು ಪ್ರಯಾಣಿಕರ ರಕ್ಷಣೆ

ಇಸ್ಲಾಮಾಬಾದ್: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ರೈಲು ಅಪಹರಣ ಮಾಡಿರುವ ಉಗ್ರರ ಧಮನ ಕಾರ್ಯಾಚರಣೆ ಮುಂದುವರಿಸಿರುವ ಸೇನೆ ನೂರಕ್ಕೂ ಹೆಚ್ಚು ಪ್ರಯಾಣಿಕರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕ್ವೆಟ್ಟಾದಿಂದ ಪೆಶಾವರಕ್ಕೆ ತೆರಳುತ್ತಿದ್ದ ಜಾಫರ್ ಎಕ್ಸ್‌ಪ್ರೆಸ್ ರೈಲಿನ್ನು ವಶಕ್ಕೆ ಪಡೆದು ಅಪಹರಿಸಿದ್ದ ಉಗ್ರರು, ಸುಮಾರು 400 ಪ್ರಯಾಣಿಕರನ್ನು ಒತ್ತೆಯಾಳಾಗಿರಿಸಿದ್ದರು. ಗಡಾಲರ್ ಮತ್ತು ಪೆಹ್ರೊ ಕುನ್ರಿ ಕಣಿವೆ ಪ್ರದೇಶದ ಸಮೀಪದ ಸುರಂಗದಲ್ಲಿ ಬಂದೂಕುಧಾರಿಗಳು ಮಂಗಳವಾರ ಈ ರೈಲನ್ನು ಹಿಡಿತಕ್ಕೆ ತೆಗೆದುಕೊಂಡಿದ್ದರು. ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (ಬಿಎಲ್‌ಎ) ಈ ದಾಳಿಯ ಹೊಣೆ ಹೊತ್ತುಕೊಂಡಿದೆ. ಈ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ನಡೆಸಿರುವ ಪಾಕಿಸ್ತಾನದ ಭದ್ರತಾ ಪಡೆ 104 ಪ್ರಯಾಣಿಕರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದೆ. ಸುದೀರ್ಘ ಕಾರ್ಯಚನೆಯಲ್ಲಿ ಸುಮಾರು 16 ಉಗ್ರರನ್ನು ಹತ್ಯೆ ಮಾಡಿದೆ ಎಂದು ವರದಿಯಾಗಿದೆ. ರಕ್ಷಿಸಲ್ಪಟ್ಟ ಪ್ರಯಾಣಿಕರನ್ನು ಮತ್ತೊಂದು ರೈಲಿನ ಮೂಲಕ ಸುರಕ್ಷಿತ ಸ್ಥಳಕ್ಕೆ ಕಳುಹಿಸಲಾಗಿದೆ. ಈ ನಡುವೆ, ಸುರಂಗವನ್ನು ಸುತ್ತುವರಿದಿರುವ ಸೇನಾಪಡೆ ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರಿಸಿದೆ.

2020ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ: ಪ್ರಜ್ವಲ್ ದೇವರಾಜ್, ಅಕ್ಷತಾಗೆ ಅತ್ಯುತ್ತಮ ನಟ, ನಟಿ ಪುರಸ್ಕಾರ

ಬೆಂಗಳೂರು: 2020ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದೆ. ಪ್ರಜ್ವಲ್ ದೇವರಾಜ್ ಅವರು ಅತ್ಯುತ್ತಮ ನಟ ಪ್ರಶಸ್ತಿಗೆ ಪಾತ್ರರಾದರೆ, ಅಕ್ಷತಾ ಪಾಂಡವಪುರ ಅವರು ಅತ್ಯುತ್ತಮ ನಟಿಯಾಗಿ ಗುರುತಾಗಿದ್ದಾರೆ. ಪಿಂಕಿ ಎಲ್ಲಿ ಸಿನಿಮಾಕ್ಕೆ ಅತ್ಯುತ್ತಮ ಚಿತ್ರ ಪ್ರಶಸ್ತಿ ಸಿಕ್ಕಿದೆ. ಪ್ರಶಸ್ತಿ ಪಟ್ಟಿ ಹೀಗಿದೆ. ಅತ್ಯುತ್ತಮ ನಟ: ಪ್ರಜ್ವಲ್‍ ದೇವರಾಜ್‍ (ಚಿತ್ರ: ಜಂಟಲ್‌ಮನ್) ಅತ್ಯುತ್ತಮ ನಟಿ: ಅಕ್ಷತಾ ಪಾಂಡವಪುರ (ಚಿತ್ರ: ಪಿಂಕಿ ಎಲ್ಲಿ) ಅತ್ಯುತ್ತಮ ಪೋಷಕ ನಟ: ರಮೇಶ್‍ ಪಂಡಿತ್‍, ಅತ್ಯುತ್ತಮ ಪೋಷಕ ನಟಿ: ಮಂಜುಳಮ್ಮ, ಅತ್ಯುತ್ತಮ ಚಿತ್ರ: ಪಿಂಕಿ ಎಲ್ಲಿ 2ನೇ ಅತ್ಯುತ್ತಮ ಚಿತ್ರ: ವರ್ಣಪಟಲ 3ನೇ ಅತ್ಯುತ್ತಮ ಚಿತ್ರ: ಹರಿವ ನದಿಗೆ ಮೈಯೆಲ್ಲಾ ಕಾಲು ವಿಶೇಷ ಸಾಮಾಜಿಕ ಕಾಳಜಿ ಚಿತ್ರ: ಗಿಳಿಯು ಪಂಜರದೊಳಿಲ್ಲ ಮತ್ತು ಈ ಮಣ್ಣು ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರ: ಫೋರ್ ವಾಲ್ಸ್ ಅತ್ಯುತ್ತಮ ಮಕ್ಕಳ ಚಿತ್ರ: ಪದಕ ನಿರ್ದೇಶಕರ ಪ್ರಥಮ ನಿರ್ದೇಶನದ ಅತ್ಯುತ್ತಮ…

‘ಯಾವ ಗ್ಯಾರಂಟಿ ಕೊಡದಿದ್ದರೂ ಶಿಕ್ಷಣದ ಗ್ಯಾರಂಟಿ ಕಸಿದುಕೊಳ್ಳದಿರಲಿ’: ವಿಜಯೇಂದ್ರ

ಬೆಂಗಳೂರು: ‘ಯಾವ ಗ್ಯಾರಂಟಿ ಕೊಡದಿದ್ದರೂ ಸರ್ಕಾರ ರಾಜ್ಯದ ಜನರ ಶಿಕ್ಷಣದ ಗ್ಯಾರಂಟಿ ಕಸಿದುಕೊಳ್ಳದಿರಲಿ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ರಾಜ್ಯ ಸರ್ಕಾರವು ಗ್ಯಾರೆಂಟಿ ಯೋಜನೆಗೆ ಆದ್ಯತೆ ನೀಡಿ ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರ ಕೈಗೊಳ್ಳುತ್ತಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ವಿಜಯೇಂದ್ರ, ಸರ್ಕಾರದ ತೀರ್ಮಾನಗಳ ಬಗ್ಗೆ ತಮ್ಮದೇ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲಾ ಶೈಕ್ಷಣಿಕ ಕ್ಷೇತ್ರಕ್ಕೆ ಪೆಟ್ಟು ಬೀಳಲಿದೆ ಎಂಬ ಮಾತು ಅಕ್ಷರಶಃ ಸತ್ಯ. 9 ವಿಶ್ವವಿದ್ಯಾನಿಲಯಗಳಿಗೆ ಬೀಗ ಜಡಿಯಲು ಹೊರಟು ಬಡ ಹಾಗೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಪಾಲಿನ ಶಿಕ್ಷಣ ಭಾಗ್ಯ ಕಸಿಯಲು ಹೊರಟಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರ ಒಂದೆಡೆಯಾದರೆ ಮತ್ತೊಂದೆಡೆ ಇರುವ ವಿಶ್ವವಿದ್ಯಾಲಯಗಳ ಪರಿಸ್ಥಿತಿ ಶೋಚನೀಯ ಹಂತ ತಲುಪಿರುವುದು ಆರ್ಥಿಕ ದಿವಾಳಿ ಅಂಚಿಗೆ ತಲುಪಿರುವ ಸರ್ಕಾರದ ದುಸ್ಥಿತಿಯನ್ನು ಸಾಕ್ಷೀಕರಿಸುತ್ತಿದೆ ಎಂದು ವಿಷಮೇಶಿಸಿದ್ದಾರೆ. ಶಿಕ್ಷಣದ ದೂರದೃಷ್ಟಿ ಹಾಗೂ ಉನ್ನತ ಶಿಕ್ಷಣದ ಹಕ್ಕು ಪ್ರತಿಯೊಬ್ಬ ವಿದ್ಯಾರ್ಥಿಗೆ…