ಬೆಂಗಳೂರು: ರನ್ಯಾರಾವ್ ಚಿನ್ನ ಸ್ಮಗ್ಲಿಂಗ್ ಹಿಂದೆ ಕೆಲವು ಸಚಿವರು ಇರುವ ಮಾಹಿತಿ ಇದ್ದು, ಅಂಥ ಸಚಿವರ ಹೆಸರನ್ನು ಬಹಿರಂಗಪಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಚಿನ್ನ ಕಳ್ಳಸಾಗಣೆ ಹಿನ್ನೆಲೆಯಲ್ಲಿ ಬಂಧಿತರಾದ ರನ್ಯಾರಾವ್ ಹಿಂದೆ ಅನೇಕ ಘಟಾನುಘಟಿಗಳಿದ್ದಾರೆ ಎಂಬ ಅಂಶ ಹೊರಕ್ಕೆ ಬರುತ್ತಿದೆ. ಇದೇನೂ ಸಣ್ಣ ಘಟನೆಯಲ್ಲ; ರನ್ಯಾರಾವ್ ಕಳೆದ ಕೆಲವು ತಿಂಗಳುಗಳಲ್ಲಿ 30ಕ್ಕೂ ಹೆಚ್ಚು ಬಾರಿ ವಿದೇಶಕ್ಕೆ- ದುಬೈಗೆ ಬೇರೆ ಬೇರೆ ದೇಶಗಳಿಗೆ ಹೋಗಿ ಬಂದ ಮಾಹಿತಿ ಹೊರಬಿದ್ದಿದೆ. ಪ್ರತಿ ಬಾರಿಯೂ ಬೆಂಗಳೂರಿಗೆ ಮರಳಿ ಬಂದಾಗ ಸಂಪೂರ್ಣವಾದ ಪ್ರೊಟೊಕಾಲ್ ವ್ಯವಸ್ಥೆ ನೀಡುತ್ತಿದ್ದರು ಎಂದು ಆರೋಪಿಸಿದರು. ರನ್ಯಾರಾವ್ ಒಬ್ಬ ಹಿರಿಯ ಐಪಿಎಸ್ ಅಧಿಕಾರಿಯ ಮಗಳು. ಏರ್‍ಪೋರ್ಟಿಗೆ ವಾಪಸ್ ಬಂದಾಗ ವಿಮಾನನಿಲ್ದಾಣದಿಂದ ಪೊಲೀಸರೇ ಎಸ್ಕಾರ್ಟ್ ನೀಡಿ ಕರೆದೊಯ್ಯುತ್ತಿದ್ದರು; ಆಕೆ ಸಾಮಾನ್ಯ ಮಹಿಳೆ ಅಲ್ಲ ಎಂಬುದು…
Month: March 2025
ಬಿಬಿಎಂಪಿ ವಿಭಜನೆ ಬೇಡ, ಆಡಳಿತ ವಿಕೇಂದ್ರೀಕರಣ ಮಾಡಿ: ಬಿಜೆಪಿ ನಾಯಕರ ಆಗ್ರಹ
ಬೆಂಗಳೂರು: ಬೆಂಗಳೂರು ವಿಂಹಜನೆಯ ಸರ್ಕಾರದ ಪ್ರಸ್ತಾಪಕ್ಕೆ ಪ್ರತಿಪಕ್ಷ ಬಿಜೆಪಿ ಶಾಸಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಿಬಿಎಂಪಿ ವಿಭಜನೆ ಬೇಡ, ಆಡಳಿತ ವಿಕೇಂದ್ರೀಕರಣ ಮಾಡಿ ಎಂದು ಬಿಜೆಪಿ ನಾಯಕರು ಸಲಹೆ ಮುಂದಿಟ್ಟಿದ್ದಾರೆ. ಬೆಂಗಳೂರನ್ನು ವಿಭಜನೆ ಮಾಡಲು ಹೊರಟಿರುವುದು ಒಳ್ಳೆಯ ಬೆಳವಣಿಗೆ ಅಲ್ಲ. ರಾಜಕೀಯ ವಿಕೇಂದ್ರೀಕರಣದ ಬದಲು ಆಡಳಿತ ವಿಕೇಂದ್ರೀಕರಣ ಮಾಡಿ ಎಂದು ಶಾಸಕರು ಮನವಿ ಮಾಡಿದ್ದಾರೆ. ಈ ಕುರಿತಂತೆ ವಿಧಾನಸಭೆಯಲ್ಲಿ ಬಿಜೆಪಿ ಶಾಸಕರಾದ ಅಶ್ವಥನಾರಾಯಣ, ಭೈರತಿ ಬಸವರಾಜ್, ಗೋಪಾಲಯ್ಯ, ಎಸ್.ಆರ್.ವಿಶ್ವನಾಥ್ ಅವರ ಹೇಳಿಕೆ ಗಮನಸೆಳೆಯಿತು. ಬೆಂಗಳೂರನ್ನು ವಿಭಜನೆ ಮಾಡಲು ಹೊರಟಿರುವುದು ಒಳ್ಳೆಯ ಬೆಳವಣಿಗೆ ಅಲ್ಲ. ರಾಜಕೀಯ ವಿಕೇಂದ್ರೀಕರಣದ ಬದಲು ಆಡಳಿತ ವಿಕೇಂದ್ರೀಕರಣ ಮಾಡಿ. ಕೆಂಪೇಗೌಡರು ಕಟ್ಟಿದ ನಗರವನ್ನು ವಿಭಜಿಸುವುದು ಸರಿಯಲ್ಲ. ಅಧಿಕಾರದ ವಿಕೇಂದ್ರೀಕರಣಕ್ಕೆ ಸರ್ಕಾರ ಆದ್ಯತೆ ನೀಡಲಿ. ಈಗಾಗಲೇ ನೂರಾರು ಪ್ರದೇಶದಲ್ಲಿ ನೀರಿನ ಅಭಾವ ಕಾಡುತ್ತಿದೆ. ಬೆಂಗಳೂರನ್ನು ವಿಭಜಿಸಿ… pic.twitter.com/yD45LeCDvn — BJP Karnataka (@BJP4Karnataka) March 10,…
ಪುಣ್ಯಕ್ಷೇತ್ರಗಳ ನದಿಗಳಲ್ಲಿ ಸೋಪ್- ಶಾಂಪೂ ಬಳಕೆಗೆ ಸರ್ಕಾರ ಕಡಿವಾಣ
ಬೆಂಗಳೂರು: ಪುಣ್ಯಕ್ಷೇತ್ರಗಳ ನದಿಗಳಲ್ಲಿ ಸೋಪ್- ಶಾಂಪೂ ಬಳಕೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ಪರಿಸರ ಸ್ನೇಹಿ ಕ್ರಮವಾಗಿ, ಪುಣ್ಯಕ್ಷೇತ್ರಗಳ ನದಿಗಳು ಮತ್ತು ಕಲ್ಯಾಣಿ ಸುತ್ತಮುತ್ತ 500 ಮೀಟರ್ ವ್ಯಾಪ್ತಿಯಲ್ಲಿ ಸೋಪ್ ಮತ್ತು ಶಾಂಪೂ ಮಾರಾಟವನ್ನು ನಿಷೇಧಿಸಲು ಅರಣ್ಯ ಹಾಗೂ ಪರಿಸರ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದೇನೆ. ನದಿಯಲ್ಲಿ ಸ್ನಾನ ಮಾಡುವ ಭಕ್ತರು ತ್ಯಜಿಸುವ ಶಾಂಪೂ ಪ್ಯಾಕೆಟ್‌ಗಳು ಮತ್ತು ಸಣ್ಣ ಸೋಪ್‌ಗಳು ನೀರನ್ನು ಮಾಲಿನ್ಯಗೊಳಿಸುತ್ತಿದ್ದು, ಇದು ಜನರ ಮತ್ತು ಜಲಚರ ಪ್ರಾಣಿಗಳ ಆರೋಗ್ಯಕ್ಕೆ ತೀವ್ರ ಹಾನಿಯನ್ನು ಉಂಟುಮಾಡುತ್ತಿದೆ ಎಂದವರು ಪ್ರತಿಪಾದಿಸಿದ್ದಾರೆ. ಅಲ್ಲದೆ, ಯಾತ್ರಾಸ್ಥಳಗಳಲ್ಲಿ ಬಟ್ಟೆ ತ್ಯಜಿಸುವ ಪ್ರವೃತ್ತಿ ಗಮನಕ್ಕೆ ಬಂದಿರುವುದರಿಂದ, ಇದನ್ನು ತಡೆಗಟ್ಟಲು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗುತ್ತದೆ ಎಂದವರು ತಿಳಿಸಿದ್ದಾರೆ.
ನ್ಯೂಜಿಲೆಂಡ್ ವಿರುದ್ಧ ಜಯಭೇರಿ: ಚಾಂಪಿಯನ್ ಶಿಪ್ ಗೆದ್ದ ಟೀಮ್ ಇಂಡಿಯಾ
ದುಬೈ: ಭಾರತ ಕ್ರಿಕೆಟ್ ತಂಡ ಕೊನೆಗೂ ಚಾಂಪಿಯನ್ ಆಗುವಲ್ಲಿ ಯಶಸ್ವಿಯಾಗಿದೆ. ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವು ಕಳೆದ 9 ತಿಂಗಳೊಳಗೆ ಎರಡನೇ ಟ್ರೋಫಿಯನ್ನು ಗೆದ್ದು ಬೀಗಿದೆ. ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮಾರ್ಚ್ 9 ರ ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ, ಟೀಂ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ಜಯಭೇರಿ ಭಾರಿಸಿ ಚಾಂಪಿಯನ್ ಶಿಪನ್ನು ತನ್ನದಾಗಿಸಿಕೊಂಡಿದೆ. ಈ ಮೂಲಕ 25 ವರ್ಷಗಳ ಹಿಂದೆ ಇದೇ ಟೂರ್ನಿಯ ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧದ ಸೋಲಿಗೆ ಟೀಂ ಇಂಡಿಯಾ ಸೇಡು ತೀರಿಸಿಕೊಂಡಿದೆ. ನ್ಯೂಜಿಲೆಂಡ್ ತಂಡವನ್ನು 4 ವಿಕೆಟ್‌ಗಳಿಂದ ರೋಹಿತ್ ಶರ್ಮಾ ತಂಡ ಸೋಲಿಸಿದೆ. ಇಡೀ ಟೂರ್ನಿಯಲ್ಲಿ ಸಾಂಘಿಕ ಪ್ರದರ್ಶನ ನೀಡಿದ ರೋಹಿತ್ ಪಡೆ ಎಲ್ಲಾ ಪಂದ್ಯಗಳಲ್ಲಿ ಗೆದ್ದು ಬೀಗಿದೆ. 🏆 𝗕𝗔𝗖𝗞-𝗧𝗢-𝗕𝗔𝗖𝗞 𝗚𝗟𝗢𝗥𝗬! 🇮🇳🔥 The man who ended the ICC trophy drought—𝗥𝗼𝗵𝗶𝘁 𝗚𝘂𝗿𝘂𝗻𝗮𝘁𝗵 𝗦𝗵𝗮𝗿𝗺𝗮💙 #RohitSharma Led from…
ಚಿತ್ರದುರ್ಗದ ಸಿಬಾರ ಬಳಿ ಲಾರಿ-ಕಾರು ಡಿಕ್ಕಿ; ಐವರು ದುರ್ಮರಣ
ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಸಿಬಾರ ಗ್ರಾಮದ ಬಳಿ ಲಾರಿ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಐವರು ಸಾವನ್ನಪ್ಪಿದ್ದಾರೆ. ಭಾನುವಾರ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ರೇಣುಕಾ ಯಲ್ಲಮ್ಮ ದೇವಸ್ಥಾನದ ಪ್ರಸಾದ ಪತ್ತೆಯಾಗಿದೆ. ಮೃತರನ್ನು ಬಿಎಂಟಿಸಿ ನಿವೃತ್ತ ನೌಕರ ಶಾಂತಮೂರ್ತಿ, ವಿದ್ಯಾರಣ್ಯಪುರದ ರುದ್ರಸ್ವಾಮಿ, ಮಲ್ಲಿಕಾರ್ಜುನ, ನಿರ್ದೇಚಿದಂಬರಾಚಾರ್ ಎಂದು ಗುರುತಿಸಲಾಗಿದೆ. ಇವರು ಬೆಂಗಳೂರು ಮೂಲದವರೆನ್ನಲಾಗಿದೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಡಿಗೆ ಮತ್ತೆ 3 ರಾಷ್ಟ ಮಟ್ಟದ ಪ್ರಶಸ್ತಿಗಳು.
ಬೆಂಗಳೂರು: ದೇಶದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟದ ( ASRTU) 2023-24ನೇ ಸಾಲಿನ 3 ರಾಷ್ಟ್ರೀಯ ಸಾರ್ವಜನಿಕ ಬಸ್ ಸಾರಿಗೆ ಪ್ರಶಸ್ತಿಗಳು (National Transport Excellence Award) ಲಭಿಸಿವೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟ ( ASRTU)ದ ವ್ಯಾಪ್ತಿಯಲ್ಲಿ ದೇಶದ 62 ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳು ಸದಸ್ಯತ್ವವನ್ನು ಹೊಂದಿವೆ. ಈ ಒಕ್ಕೂಟವು 1965 ರ ಆಗಸ್ಟ್ 13ರಂದು ಅಸ್ತಿತ್ವಕ್ಕೆ ಬಂದಿದ್ದು, ಭಾರತ ಸರ್ಕಾರದ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯದ ನಿರ್ದೇಶನದ ಅನುಸಾರ ಕಾರ್ಯನಿರ್ವಹಿಸುತ್ತದೆ. ಈ ಸಂಸ್ಥೆಯು 59 ವರ್ಷಗಳ ಅನುಭವವನ್ನು ಹೊಂದಿದ್ದು, ದೇಶದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ. KSRTCಗೆ ಅಶ್ವಮೇಧ ಬ್ರ್ಯಾಂಡಿಂಗ್ ಹಾಗೂ ವರ್ಚಸ್ಸು ಅಭಿವೃದ್ಧಿ, ಕಾರ್ಮಿಕರ ಕಲ್ಯಾಣಕ್ಕಾಗಿ ಕೈಗೊಂಡಿರುವ ವಿನೂತನ ಯೋಜನೆಗಳು ಹಾಗೂ ಗಣಕೀಕರಣ ಉಪಕ್ರಮಗಳಿಗಾಗಿ ಮೂರು ಪ್ರಶಸ್ತಿಗಳು ಲಭಿಸಿವೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟ…
‘ನಮ್ಮತನ ಮಾರ್ಚ್ 8ಕ್ಕೆ ಮಾತ್ರ ಸೀಮಿತವಾಗಿರಬಾರದು’: ಭಾರತಿ ವಿಷ್ಣು ವರ್ಧನ್
ಆನೇಕಲ್: ಮಹಿಳೆಯರು ವಿಶ್ವದಾದ್ಯಂತ ಅನೇಕ ರಂಗಗಳಲ್ಲಿ ಯಶಸ್ವಿಯಾಗಿ ತಮ್ಮ ಛಾಪು ಮೂಡಿಸಿದ್ದು ನಮ್ಮತನವನ್ನು ಮಾರ್ಚ್ 8ಕ್ಕೆ ಮಾತ್ರ ಸೀಮಿತಗೊಳಿಸ ಬಾರದು. ಸಾಗರ ತಳ, ವಿಶಾಲ ಭೂಮಿ, ಆಗಸ ದಾಟಿ ಮುನ್ನಡೆಯಬೇಕೆಂದು ಪಂಚಭಾಷಾ ತಾರೆ ಪದ್ಮಶ್ರೀ ಡಾ. ಭಾರತಿ ವಿಷ್ಣು ವರ್ಧನ್ ಕರೆ ನೀಡಿದರು. ಆನೇಕಲ್ ಸಮೀಪ ಅಲಯಂನ್ಸ್ ವಿಶ್ವವಿದ್ಯಾಲಯ ಏರ್ಪಡಿಸಿದ್ದ, ವಿಶ್ವ ಮಹಿಳಾ ಮಹಿಳಾ ದಿನಾಚರಣೆಯ ಅಂಗವಾಗಿ ಸಮಾಜದ ವಿವಿಧ ಸ್ಥರಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಸಾಧಕಿ ಮಹಿಳೆಯರಿಗೆ ಮಹಿಳಾ ಸ್ಪಂದನ ಅವಾರ್ಡ್ ವಿತರಿಸಿ ಮಾತನಾಡಿದ ಅವರು, ತಾಯಿಯಾಗಿ, ಸಹೋದರಿಯಾಗಿ, ಮಗಳಾಗಿ ವಿವಿಧ ಹಂತಗಳಲ್ಲಿ ಹೆಣ್ಣು ಪರಿಪೂರ್ಣತೆಯಿಂದ ತನ್ನ ಪಾತ್ರವನ್ನು ಯಶಸ್ವಿಯಾಗಿ ನಿರ್ವಹಿಸುತ್ತಾಳೆ. ತ್ಯಾಗಮಯಿಯಾದ ಆಕೆ ತನ್ನ ಕುಟುಂಬ ದೇಶ ಕ್ಕಾಗಿ ಕೊಡುಗೆಯನ್ನೂ ನೀಡಿ ಇತರರ ಗೆಲುವನ್ನು ತನ್ನದೆಂದು ಪರಿಭಾವಿಸಿ ತೃಪ್ತಿ ಪಡುತ್ತಾಳೆ. ಮಹಿಳೆಯರು ಇದ್ದೆಡೆ ಗೌರವ ಶಕ್ತಿ ಇದ್ದು ಪ್ರಭಾವಿತಳಾಗಿ ಕಾಣುತ್ತಾಳೆ ಎಂದರು. ಶಿಕ್ಷಣ, ಅರೋಗ್ಯ,…
ಭೀಕರ ಅಪಘಾತ; ಬಸ್ ಪಲ್ಟಿ, ಧಗಧಗಿಸಿದ ಕಾರು; ಇಬ್ಬರು ಸಜೀವ ದಹನ
ಚಿಕ್ಕಬಳ್ಳಾಪುರ: ಚಿಂತಾಮಣಿ ಬಳಿ ಖಾಸಗಿ ಬಸ್ ಮತ್ತು ಕಾರು ಅಪಘಾತಕ್ಕೀಡಾಗಿ ಪ್ರಯಾಣಿಕರಿಬ್ಬರು ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೋಪಲ್ಲಿ ಗೇಟ್ ಬಳಿ ಈ ಅಪಘಾತ ನಡೆದಿದೆ. ಬಸ್ಸು ಡಿಕ್ಕಿಯಾದ ಸಂದರ್ಭದಲ್ಲಿ ಕಾರು ಧಗಧಗಿಸಿ ಹೊತ್ತಿ ಉರಿದಿದ್ದು ಇಬ್ಬರು ಸಜೀವ ದಹನವಾಗಿದ್ದಾರೆ. ಮೃತರನ್ನು ಆಂಧ್ರ ಮೂಲದ ಧನಂಜಯ ರೆಡ್ಡಿ, ಮತ್ತು ಕಲಾವತಿ ಮೃತರು ಎಂದು ಗುರುತಿಸಲಾಗಿದೆ. ಅಪಘಾತಕ್ಕೀಡಾದ ಬಸ್ಸು ಕೂಡಾ ಉರುಳಿ ಬಿದ್ದಿದ್ದು ಅದರಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ.
ರಾಜ್ಯಕ್ಕೆ ಬರುವ ಪ್ರವಾಸಿಗರ ರಕ್ಷಣೆಗೆ ಸರ್ಕಾರ ಬದ್ಧ: ಸಿಎಂ ಭರವಸೆ
ಬೆಂಗಳೂರು: ಕೊಪ್ಪಳ ಜಿಲ್ಲೆ ಗಂಗಾವತಿ ಬಳಿ ಇಸ್ರೇಲಿ ಮಹಿಳೆ ಮೇಲೆ ನಡೆದಿರುವ ಅತ್ಯಾಚಾರ ಘಟನೆಯನ್ನು ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ. ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇಸ್ರೇಲಿ ಪ್ರಜೆ ಹಾಗೂ ಹೋಮ್ ಸ್ಟೇ ಮಾಲಕಿ ಮೇಲೆ ನಡೆದ ಹಲ್ಲೆ ಹಾಗೂ ಅತ್ಯಾಚಾರ ಅತ್ಯಂತ ಹೇಯ ಕೃತ್ಯ ಎಂದವರು ಹೇಳಿದ್ದಾರೆ. ಘಟನೆ ವರದಿಯಾದ ಕೂಡಲೇ ಸಂಬಂಧಪಟ್ಟ ಪೊಲೀಸರಿಂದ ಮಾಹಿತಿ ಪಡೆದು, ಕಟ್ಟುನಿಟ್ಟಿನ ತನಿಖೆ ಕೈಗೊಂಡು, ಅಪರಾಧಿಗಳನ್ನು ಶೀಘ್ರ ಪತ್ತೆಹಚ್ಚುವಂತೆ ಸೂಚಿಸಿದ್ದೆ ಎಂದಿರುವ ಸಿಎಂ, ಪ್ರಕರಣದ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ತನಿಖೆ ಮುಂದುವರೆಸಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ರಾಜ್ಯಕ್ಕೆ ಬರುವ ಪ್ರವಾಸಿಗರು ಸೇರಿದಂತೆ ಪ್ರತಿಯೊಬ್ಬರಿಗೂ ರಕ್ಷಣೆ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಎಲ್ಲಾ ಅಗತ್ಯ ಕ್ರಮ ವಹಿಸಲಾಗುವುದು ಎಂದವರು ಭರವಸೆ ನೀಡಿದ್ದಾರೆ. ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇಸ್ರೇಲಿ ಪ್ರಜೆ ಹಾಗೂ…
ಸಿರಿಯಾದಲ್ಲಿ ಹಿಂಸಾಚಾರ ಭುಗಿಲು: ಸಂಘರ್ಷದಲ್ಲಿ ಸಾವಿರಕ್ಕೂ ಹೆಚ್ಚು ಮಂದಿ ಬಲಿ
ಬೈರುತ್: ಸಿರಿಯಾದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು ಭದ್ರತಾ ಪಡೆಗಳು ಮತ್ತು ಪದಚ್ಯುತ ಅಧ್ಯಕ್ಷ ಬಷರ್ ಅಸ್ಸಾದ್ ಬೆಂಬಲಿಗರ ನಡುವಿನ ಕಾಳಗದಲ್ಲಿ ಸಾವಿರಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಎರಡು ದಿನಗಳ ಸಂಘರ್ಷಗಳು ಪರಸ್ಪರ ಸೇಡಿನ ಹತ್ಯೆಗಳಿಗೆ ಸಾಕ್ಷಿಯಾಗುತ್ತಿವೆ. ಈ ಸಂಘರ್ಷದಲ್ಲಿ ಸಂಖ್ಯೆ ಸಾವಿರಕ್ಕೂ ಹೆಚ್ಚು ನಾಗರಿಕರ ಮಾರಣಹೋಮವಾಗಿದೆ ಎನ್ನಲಾಗುತ್ತಿದೆ. ಸುಮಾರು 745 ನಾಗರಿಕರು ಸಾವನ್ನಪ್ಪಿದರೆ, 125 ಮಂದಿ ಭದ್ರತಾ ಪಡೆ ಯೋಧರು ಹಾಗೂ ಸುಮಾರು 148 ಮಂದಿ ದಂಗೆಕೋರರು ಬಲಿಯಾಗಿದ್ದಾರೆ ಎಂದು ಸಿರಿಯನ್ ಮಾನವ ಹಕ್ಕುಗಳ ವೀಕ್ಷಣಾಲಯ ಹೇಳಿದೆ. ಅಸ್ಸಾದ್ ಅವರ ಪದಚ್ಯುತಿ ನಂತರ ಬೇಬಲಿಗರು ದಂಗೆ ಎದ್ದಿದ್ದು, ಪರಿಸ್ಥಿತಿ ನಿಯಂತ್ರಿಸಲು ಸೇನಾಪಡೆಗಳು ಹರಸಾಹಸ ನಡೆಸುತ್ತಿವೆ.
