ಬೆಂಗಳೂರು: ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ನೀಡುವ ಜೀವಮಾನ ಸಾಧನೆ ಪ್ರಶಸ್ತಿಗೆ ಬಹುಭಾಷಾ ನಟಿ ಶಬಾನಾ ಆಜ್ಮಿ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಆಯೋಜಿಸಿರುವ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಂದರ್ಭದಲ್ಲಿ ಈ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಜೀವಮಾನ ಸಾಧನೆ ಪ್ರಶಸ್ತಿಗೆ ಭಾಜನರಾಗುತ್ತಿರುವ ಶಬಾನಾ ಆಜ್ಮಿ ಅವರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಆಯೋಜಿಸಿರುವ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆಯಾದ ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶಬಾನಾ ಆಜ್ಮಿ ಅವರಿಗೆ ಅಭಿನಂದನೆಗಳು ಎಂದು ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿಸ್ದದಾರೇ. 70ರ ದಶಕದಲ್ಲಿ ಕನ್ನೇಶ್ವರ ರಾಮ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿ ಕನ್ನಡ ಸಿನಿರಸಿಕರ ಹೃದಯಗೆದ್ದ ಶಬಾನಾ ಅವರು ದಕ್ಷಿಣ ಭಾರತದ ಚಿತ್ರಗಳು ಹಾಗೂ ಹಿಂದಿ ಭಾಷೆಯ ಚಲನಚಿತ್ರಗಳಲ್ಲಿ ನಟಿಸಿ, ಸೈ ಎನಿಸಿಕೊಂಡವರು. ಸುಮಾರು 50 ವರ್ಷಗಳ…
Month: March 2025
ಮುಸ್ಲಿಂ ವಿದ್ಯಾರ್ಥಿಗಳ ವಿದೇಶಿ ಕಲಿಕೆಗಾಗಿ ಪ್ರೋತ್ಸಾಹಧನ..! ಹಿಂದೂ ವಿದ್ಯಾರ್ಥಿಗಳಿಗೆ ಯಾಕಿಲ್ಲ? ವಿಜಯೇಂದ್ರ ಪ್ರಶ್ನೆ
ಬೆಂಗಳೂರು: ಮುಖ್ಯಮಂತ್ರಿಗಳು ಮಂಡಿಸಿದ ಬಜೆಟ್ ನಿರಾಸಾದಾಯಕವಾಗಿದೆ ಎಂದಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯದ ಅಭಿವೃದ್ಧಿಗೆ ಪೂರಕವಾಗಿಲ್ಲ. ಅಲ್ಪಸಂಖ್ಯಾತರನ್ನು ತೃಪ್ತಿ ಪಡಿಸಲು ಧರ್ಮ-ಧರ್ಮಗಳ ನಡುವೆ ವಿಭಜಿಸುವ ದುಸ್ಸಾಹಸಕ್ಕೆ ಸಿದ್ದರಾಮಯ್ಯರವರು ಕೈ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಸ್ಲಿಮ್ ಮಹಿಳೆಯರಿಗೆ ಸ್ವಯಂರಕ್ಷಣೆಗಾಗಿ ತರಬೇತಿ ಯೋಜನೆ ಘೋಷಿಸಿದ್ದಾರೆ. ಈ ಯೋಜನೆ ಹಿಂದೂ ಮಹಿಳೆಯರಿಗೆ ಯಾಕಿಲ್ಲ? ಮುಸ್ಲಿಂ ಬಡ ಮಹಿಳೆಯರ ಸರಳ ವಿವಾಹಕ್ಕೆ ರೂ. 50,000 ಪ್ರೋತ್ಸಾಹ ಧನ ಘೋಷಣೆ ಮಾಡಿದ್ದಾರೆ. ಹಿಂದೂಗಳಲ್ಲಿ ಬಡ ಮಹಿಳೆಯರು ಇಲ್ಲವೇ? ಮುಸ್ಲಿಂ ವಿದ್ಯಾರ್ಥಿಗಳ ವಿದೇಶಿ ಕಲಿಕೆಗಾಗಿ ಪ್ರೋತ್ಸಾಹಧನ ರೂ. 20 ಲಕ್ಷ ಇದ್ದದ್ದನ್ನು ರೂ. 30 ಲಕ್ಷಕ್ಕೆ ಏರಿಸಲಾಗಿದೆ. ಯಾಕೆ ಈ ರೀತಿಯ ಯೋಜನೆಗಳು ಹಿಂದೂ ವಿದ್ಯಾರ್ಥಿಗಳಿಗಿಲ್ಲ? ಎಂದು ವಿಜಯೇಂದ್ರ ಪ್ರಶ್ನಿಸಿದ್ದಾರೆ. <blockquote class=”twitter-tweet” data-media-max-width=”560″><p lang=”kn” dir=”ltr”>ಮುಖ್ಯಮಂತ್ರಿಗಳು ಮಂಡಿಸಿದ ಬಜೆಟ್ ನಿರಾಸಾದಾಯಕವಾಗಿದೆ. ರಾಜ್ಯದ ಅಭಿವೃದ್ಧಿಗೆ ಪೂರಕವಾಗಿಲ್ಲ. ಅಲ್ಪಸಂಖ್ಯಾತರನ್ನು ತೃಪ್ತಿ ಪಡಿಸಲು ಧರ್ಮ-ಧರ್ಮಗಳ ನಡುವೆ ವಿಭಜಿಸುವ…
ಸರ್ವರ ಹಿತ ಕಾಂಗ್ರೆಸ್ ಸರ್ಕಾರದ ಪಥ: ರಣದೀಪ್ ಸುರ್ಜೇವಾಲ
ಬೆಂಗಳೂರು: ʻʻನನ್ನ ದೃಷ್ಟಿಯಲ್ಲಿ ಹೆಣ್ಣು ಕೇವಲ ಮಾನುಷಿಯಲ್ಲ, ಅಬಲೆಯೂ ಅಲ್ಲ. ಅವಳೊಂದು ಮಹಾಶಕ್ತಿʼʼ ಎಂಬುದಾಗಿ ನಮ್ಮ ರಾಷ್ಟ್ರಕವಿ ಕುವೆಂಪು ಅವರು ಹೇಳಿದ್ದು ಅಕ್ಷರಶಃ ಸತ್ಯ. ಈ ವಾಕ್ಯದಂತೆ ಕರ್ನಾಟಕದ ನಮ್ಮ ಕಾಂಗ್ರೆಸ್ ಸರ್ಕಾರ ನಡೆಯುತ್ತಿದೆ. ಕರ್ನಾಟಕ ರಾಜ್ಯದ ಸಮಗ್ರ ಅಭಿವೃದ್ಧಿಯೇ ನಮ್ಮ ಕಾಂಗ್ರೆಸ್ ಸರ್ಕಾರದ ಸಂಕಲ್ಪವಾಗಿದೆ. ಅಲ್ಲದೆ, ʻಸರ್ವರ ಹಿತ – ಕಾಂಗ್ರೆಸ್ ಸರ್ಕಾರದ ಫಥʼ ಎಂಬುದು ನಮ್ಮ ಧ್ಯೇಯವಾಕ್ಯವಾಗಿದೆ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ. ರಾಜ್ಯ ಬಜೆಟ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಅವರು, ಬಜೆಟ್ 4.09 ಲಕ್ಷ ಕೋಟಿ ರೂ.ಗಳನ್ನು ಒಳಗೊಂಡಿದೆ. ಕಳೆದ ವರ್ಷದ ಬಜೆಟ್ ಅಂದಾಜುಗಳಿಗಿಂತ ಶೇ. 10.3ರಷ್ಟು ಬೆಳವಣಿಗೆ ಕಂಡುಬಂದಿದೆ. ಕರ್ನಾಟಕ ರಾಜ್ಯದ ಜಿಡಿಪಿ 7.4% ರಷ್ಟು ಬೆಳೆದಿದೆ ಅದರೊಂದಿಗೆ ಕೃಷಿ ಕ್ಷೇತ್ರದಲ್ಲಿ ಕೂಡ ಶೇ. 4ರಷ್ಟು ಬೆಳವಣಿಗೆಯನ್ನು ಕಂಡಿದೆ. ಕರ್ನಾಟಕ ರಾಜ್ಯದ ಜಿಡಿಪಿ ರಾಷ್ಟ್ರೀಯ ಬೆಳವಣಿಗೆಯನ್ನು…
ನಟಿ ರನ್ಯಾ ಚಿನ್ನ ಕಳ್ಳಸಾಗಣೆ ಪ್ರಕರಣ: ತನಿಖೆಯ ಅಖಾಡಕ್ಕೆ ಧುಮುಕಿದ ಸಿಬಿಐ
ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಬಂಧನಕ್ಕೊಳಗಾಗಿದ್ದು, ಇದೀಗ ಸಿಬಿಸಿ ಕೂಡಾ ಪ್ರತನಿಖೆಯ ಅಖಾಡಕ್ಕೆ ಧುಮುಕಿದೆ. ನಟಿ ರನ್ಯಾ ರಾವ್ ವಿರುದ್ಧ ಡಿಆರ್ಐ ಅಧಿಕಾರಿಗಳು ನೀಡಿದ ಮಾಹಿತಿ ಆಧರಿಸಿ ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ ಎನ್ನಲಾಗಿದೆ. ಸಿಬಿಐ ಮುಂಬೈ ಹಾಗೂ ಬೆಂಗಳೂರಿನಲ್ಲಿ ಪರಿಶೀಲನೆಯಲ್ಲಿ ತೊಡಗಿರುವ ಸಿಬಿಐ ಇದೀಗ ತಾನು ಕೂಡಾ ತನಿಖೆಗೆ ಮುಂದಾಗಿದೆ. ವಿದೇಶದಿಂದ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಸಂದರ್ಭದಲ್ಲಿ ನಟಿಯನ್ನು ಬಂಧಿಸಲಾಗಿತ್ತು. ಆಕೆಯಿಂದ ಸುಮಾರು 14.20 ಕೆಜಿ ಚಿನ್ನ ನಗದು ಸೇರಿ 17.29 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ಡಿಆರ್ಐ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಗಂಭೀರ ಆರೋಪದಲ್ಲಿ ಬಂಧಿತರಾಗಿರುವ ನಟಿ ರನ್ಯಾ ಅವರನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಇಸ್ರೇಲ್ ಮೂಲದ ಪ್ರವಾಸಿ ಮಹಿಳೆ ಮೇಲೆ ಗ್ಯಾಂಗ್ ರೇಪ್, ಆರೋಪಿಗಳ ಪತ್ತೆಗಾಗಿ 6 ತಂಡಗಳ ರಚನೆ
ಕೊಪ್ಪಳ: ಗಂಗಾವತಿ ಸಮೀಪ ತುಂಗಭದ್ರ ಎಡದಂಡೆ ಕಾಲುವೆ ಬಳಿ ಇಬ್ಬರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಗುರುವಾರ ತಡರಾತ್ರಿ ಸಂಗೀತ ಕೇಳುತ್ತಾ ಕುಳಿತುಕೊಂಡಿದ್ದ ಮಹಿಳೆಯರ ಮೇಲೆ ಮೂವರು ಹಲ್ಲೆ ನಡೆಸಿ ಇಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ ಎಂದು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿದೂರು ದಾಖಲಾಗಿದೆ. ಇಸ್ರೇಲಿ ಪ್ರವಾಸಿ ಮತ್ತು ಇತರ ಮೂವರು ಪುರುಷ ಪ್ರವಾಸಿಗರು ತಂಗಿದ್ದ ಹೋಂಸ್ಟೇಯ 29 ವರ್ಷದ ಮಹಿಳಾ ನಿರ್ವಾಹಕಿ ಪ್ರವಾಸಿಗರೊಂದಿಗೆ ತುಂಗಭದ್ರಾ ಎಡಗಂಡೆ ಕಾಲುವೆಯ ಪಕ್ಕದಲ್ಲಿ ಕುಳಿತು ಸಂಗೀತ ಆಲಿಸುತ್ತಿದ್ದರು. ಆ ವೇಳೆ ಆಗಮಿಸಿದ್ದ ಕಾಮುಕರು ಇಸ್ರೇಲಿ ಪ್ರವಾಸಿ ಮಹಿಳೆ ಹಾಗೂ ಆಕೆಯ ಜೊತೆಗಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಮೂವರು ಪುರುಷ ಪ್ರವಾಸಿಗರನ್ನು ಕಾಲುವೆಗೆ ತಳ್ಳಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಆರು ತಂಡಗಳನ್ನು ರಚಿಸಲಾಗಿದೆ ಎಂದು ಅಧಿಕಾರಿಗಳು…
ಮತ್ತೆ ಎತ್ತಿನಹೊಳೆ ಸದ್ದು; ಮಾ.18 ರಂದು ರಾಜ್ಯದ ನಿಯೋಗ ದೆಹಲಿಗೆ
ಬೆಂಗಳೂರು: ಎತ್ತಿನ ಹೊಳೆ ಇದೀಗ ಮತ್ತೆ ಸುದ್ದಿಯ ಮುನ್ನೆಲೆಗೆ ಬಂದಿದೆ ಎತ್ತಿನಹೊಳೆ ಕಾಮಗಾರಿ ಸಲುವಾಗಿ ಅರಣ್ಯ ಭೂಮಿ ಬಳಕೆಗೆ ಅನುಮತಿ ಕೇಳಲು ಮಾ.18 ರಂದು ರಾಜ್ಯದ ನಿಯೋಗ ದೆಹಲಿಗೆ ತೆರಳಲಿದೆ. ಈ ಸಂಬಂಧ ಮಾಹಿತಿ ಹಂಚಿಕೊಂಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಮಾ.18 ರಂದು ತಾವು ದೆಹಲಿಗೆ ತೆರಳಿ ಕೇಂದ್ರದ ನಾಯಕರ ಜೊತೆ ಮಾತುಕತೆ ನಡೆಸುವುದಾಗಿ ತಿಳಿಸಿದ್ದಾರೆ. ಕೇಂದ್ರ ಪರಿಸರ ಇಲಾಖೆಯಿಂದ ಅನುಮತಿ ದೊರೆಯದ ತನಕ ಎತ್ತಿನಹೊಳೆ ಕಾಮಗಾರಿ ಮುಂದುವರೆಸಲು ಕಷ್ಟ. 508 ಎಕರೆ 1 ಗುಂಟೆ ವಿಸ್ತೀರ್ಣದ ಅರಣ್ಯ ಭೂಮಿ ಬಳಕೆಗೆ ದೆಹಲಿಗೆ ತೆರಳಿ ಕೇಂದ್ರ ಪರಿಸರ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು. ಎಲ್ಲಾ ಅಡೆತಡೆಗಳನ್ನು ನಿವಾರಿಸಿ ತುಮಕೂರಿಗೆ ನೀರು ತಂದು, ಚಿಕ್ಕಬಳ್ಳಾಪುರಕ್ಕೆ ನೀರು ತರಲಾಗುವುದು ಎಂದು ಡಿಕೆಶಿ ಭರವಸೆ ನೀಡಿದರು.
ಜನವಿರೋಧಿ ಹಾಗೂ ಮುಸ್ಲಿಮರ ಬಜೆಟ್, ಅಭಿವೃದ್ಧಿಯ ಯೋಜನೆಗಳೇ ಇಲ್ಲ: ಆರ್.ಅಶೋಕ ಖಾರ ಪ್ರತಿಕ್ರಿಯೆ
ಬೆಂಗಳೂರು, ಮಾರ್ಚ್: ಕಾಂಗ್ರೆಸ್ ಸರ್ಕಾರ ಜನ ವಿರೋಧಿ ಹಾಗೂ ಮುಸ್ಲಿಮರ ಬಜೆಟ್ ಮಂಡಿಸಿದೆ. ಜೊತೆಗೆ ಕರ್ನಾಟಕದ ಇತಿಹಾಸದಲ್ಲೇ ಮೊದಲ ಬಾರಿಗೆ ದಾಖಲೆಯಂತೆ 1.16 ಲಕ್ಷ ಕೋಟಿ ರೂ. ಸಾಲ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಜೆಟ್ ಮಂಡನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೊನೆಯ ಬಜೆಟ್ ಮಂಡಿಸಿದ್ದಾರೆ. ಈ ಬಜೆಟ್‌ನಲ್ಲಿ ಯಾವುದೇ ಹೊಸ ಘೋಷಣೆ ಇಲ್ಲ. ಆದರೆ ತಿಪ್ಪೆ ಸಾರಿಸುವಂತೆ ಹಿಂದಿನ ಕಾರ್ಯಕ್ರಮಗಳನ್ನು ಮುಂದುವರಿಸಲಾಗಿದೆ. ಹಳೆ ಮೈಸೂರು ಅಥವಾ ಉತ್ತರ ಕರ್ನಾಟಕಕ್ಕೆ ನೀರಾವರಿ ಯೋಜನೆಗಳನ್ನು ಕೇಂದ್ರ ಸರ್ಕಾರದ ಅನುಮತಿ ಬಳಿಕ ಮುಂದುವರಿಸುತ್ತೇವೆ ಎಂದು ತಿಳಿಸಲಾಗಿದೆ. ಇದನ್ನು ಓದಿ ಪುಟಗಳನ್ನು ವ್ಯರ್ಥ ಮಾಡಲಾಗಿದೆ ಎಂದರು. ಕರ್ನಾಟಕದ ಇತಿಹಾಸದಲ್ಲಿ ಒಂದೇ ವರ್ಷದಲ್ಲಿ ಅತ್ಯಧಿಕ ಅಂದರೆ 1,16,170 ಕೋಟಿ ರೂ. ಸಾಲ ಮಾಡಲಾಗಿದೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ದಾಖಲೆಯಾಗಿದೆ. ಒಟ್ಟು ಸಾಲದ ಪ್ರಮಾಣ 7,81,095…
ರಾಜ್ಯ ಬಜೆಟ್: ಕೌಶಲ್ಯ ಕ್ಷೇತ್ರಕ್ಕೆ ಮುಖ್ಯಮಂತ್ರಿ ನೀಡಿರುವ ಕೊಡುಗೆಗಳು ಅಮೂಲ್ಯ ಎಂದ ಶರಣ್ ಪ್ರಕಾಶ್ ಪಾಟೀಲ್
ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಸವಾಲು ಒಡ್ಡುವ ರೀತಿಯಲ್ಲಿ ನಮ್ಮ ಕರುನಾಡಿನ ಯುವ ಸಮೂಹವನ್ನು ತಯಾರು ಮಾಡುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೌಶಲ್ಯಾಭಿವೃದ್ಧಿ ಕ್ಷೇತ್ರಕ್ಕೆ ಅಮೂಲ್ಯ ಕೊಡುಗೆಗಳನ್ನು ನೀಡಿದ್ದಾರೆ ಎಂದು *ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್* ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆಯ ಹದಿನಾರನೇ ಬಜೆಟ್ ಮಂಡಿಸಿದ ನಂತರ ಸಚಿವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಿರುದ್ಯೋಗಿಗಳಾಗಿರುವ ಪದವೀಧರರಿಗೆ ಹಾಗೂ ಡಿಪ್ಲೋಮ ಪಡೆದವರಿಗೆ ನಿರುದ್ಯೋಗ ಭತ್ಯೆಯನ್ನು ನೀಡಲು ನಮ್ಮ ಸರ್ಕಾರವು ʻಯುವನಿಧಿʼ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಈಗಾಗಲೇ ಸುಮಾರು 2.58 ಲಕ್ಷ ಯುವಕರು ಈ ಯೋಜನೆಯಡಿ ನೋಂದಾಯಿಸಿಕೊಂಡಿದ್ದು, 286 ಕೋಟಿ ರೂ. ನೇರ ನಗದು ವರ್ಗಾವಣೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ನಿರುದ್ಯೋಗ ಭತ್ಯೆ…
ಚಿಕ್ಕಮಗಳೂರು ವೈದ್ಯಕೀಯ ಕಾಲೇಜಿನಲ್ಲಿ ನೀರಿನ ಸಮಸ್ಯೆ ನೀಗಿಸಲು ಪರ್ಯಾಯ ಕ್ರಮ: ಶರಣ್ ಪ್ರಕಾಶ್ ಪಾಟೀಲ್
ಬೆಂಗಳೂರು: ಚಿಕ್ಕಮಗಳೂರು ವೈದ್ಯಕೀಯ ಕಾಲೇಜಿನಲ್ಲಿನ ನೀರಿನ ಸಮಸ್ಯೆ ನೀಗಿಸಲು ಪರ್ಯಾಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಅತಿ ಶೀಘ್ರವಾಗಿ ಸಮಸ್ಯೆ ಬಗೆಹರಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಗುರುವಾರ ನಡೆದ ವಿಧಾನ ಸಭೆ ಕಲಾಪದಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಚಿಕ್ಕಮಗಳೂರು ಕ್ಷೇತ್ರದ ಶಾಸಕ ಎಚ್.ಡಿ.ತಮಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಶರಣ್ ಪ್ರಕಾಶ್ ಪಾಟೀಲ್ ಅವರು, ಮಲೆನಾಡು ಭಾಗದ ಚಿಕ್ಕಮಗಳೂರು ವೈದ್ಯಕೀಯ ಕಾಲೇಜಿನಲ್ಲಿ ನೀರಿನ ಸಮಸ್ಯೆ ನೀಗಿಸಲು ತೆರೆದ ಬಾವಿ ನಿರ್ಮಿಸಲು ಚಿಂತನೆ ನಡೆದಿದೆ ಎಂದು ತಿಳಿಸಿದರು. ಕಳೆದ ಬಿಜೆಪಿ ಸರ್ಕಾರ ಚಿಕ್ಕಮಗಳೂರಿಗೆ ಮೆಡಿಕಲ್ ಕಾಲೇಜು ಮಂಜೂರು ಮಾಡಿ, ಶಂಕುಸ್ಥಾಪನೆ ನೇರವೇರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಮ್ಮ ಸರ್ಕಾರ 100 ಕೋಟಿ ರೂ. ಹಣ ನೀಡಿದೆ. ಆಸ್ಪತ್ರೆ ಮತ್ತು ಕಾಲೇಜಿನಲ್ಲಿ ನೀರಿನ…
ಯಾವುದೇ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಪ್ರಸ್ತಾಪವಿಲ್ಲ: ಸರ್ಕಾರದ ಸ್ಪಷ್ಟನೆ
ಬೆಂಗಳೂರು: ರಾಜ್ಯದಲ್ಲಿ ಯಾವುದೇ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಪ್ರಸ್ತಾಪವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ಆಡಳಿತಾವಧಿಯಲ್ಲಿ ಆರಂಭಿಸಲಾಗಿರುವ 9 ವಿಶ್ವವಿದ್ಯಾಲಯಗಳನ್ನು ಮುಚ್ಚವ ಬಗ್ಗೆ ಕೆಲ ಸಮಯದ ಹಿಂದೆ ಡಿಕೆಶಿ ನೀಡಿದ್ದ ಹೇಳಿಕೆಗೆ ಪ್ರತಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ. ಈ ವಿಚಾರ ವಿಧಾನಸಭೆಯಲ್ಲೂ ಪ್ರತಿಧ್ವನಿಸಿದೆ. ವಿಪಕ್ಷ ನಾಯಕ ಆರ್ ಅಶೋಕ್ ಅವರು ವಿಧಾನಸಭೆಯಲ್ಲಿ ಗುರುವಾರ ಈ ವಿಷಯವನ್ನು ಪ್ರಸ್ತಾಪಿಸಿದರು. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ವೇಳೆ ಈ ವಿಷಯ ಪ್ರಸ್ತಾಪಿಸಿದ ಅಶೋಕ್, ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಈ ಕುರಿತಂತೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ವಿಶ್ವವಿದ್ಯಾಲಯಗಳನ್ನು ಬೇರೆ ವಿವಿಗಳ ಜತೆ ವಿಲೀನ ಮಾಡುತ್ತಿದ್ದೇವೆ ಯೇ ಹೊರತು, ಮುಚ್ಚುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಮೈಸೂರು ವಿಶ್ವವಿದ್ಯಾಲಯದಲ್ಲಿ ಸರ್ಟಿಫಿಕೇಟ್ ತೆಗೆದುಕೊಳ್ಳುವುದಕ್ಕೂ ಚಾಮರಾಜನಗರ ಅಥವಾ ಮಂಡ್ಯ ವಿವಿಯಲ್ಲಿ ತೆಗೆದುಕೊಳ್ಳುವುದಕ್ಕೂ ವ್ಯತ್ಯಾಸ ಇದೆ ಎಂದ ಅವರು, ಈ ವಿಶ್ವವಿದ್ಯಾಲಯಗಳನ್ನು ಬೇರೆ ವಿವಿಗಳ ಜತೆ ವಿಲೀನ ಮಾಡುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.
