ಚಿಕ್ಕಮಗಳೂರು ವೈದ್ಯಕೀಯ ಕಾಲೇಜಿನಲ್ಲಿ ನೀರಿನ ಸಮಸ್ಯೆ ನೀಗಿಸಲು ಪರ್ಯಾಯ ಕ್ರಮ: ಶರಣ್ ಪ್ರಕಾಶ್ ಪಾಟೀಲ್

ಬೆಂಗಳೂರು: ಚಿಕ್ಕಮಗಳೂರು ವೈದ್ಯಕೀಯ ಕಾಲೇಜಿನಲ್ಲಿನ ನೀರಿನ ಸಮಸ್ಯೆ ನೀಗಿಸಲು ಪರ್ಯಾಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಅತಿ ಶೀಘ್ರವಾಗಿ ಸಮಸ್ಯೆ ಬಗೆಹರಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಗುರುವಾರ ನಡೆದ ವಿಧಾನ ಸಭೆ ಕಲಾಪದಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಚಿಕ್ಕಮಗಳೂರು ಕ್ಷೇತ್ರದ ಶಾಸಕ ಎಚ್.ಡಿ.ತಮಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಶರಣ್ ಪ್ರಕಾಶ್ ಪಾಟೀಲ್ ಅವರು, ಮಲೆನಾಡು ಭಾಗದ ಚಿಕ್ಕಮಗಳೂರು ವೈದ್ಯಕೀಯ ಕಾಲೇಜಿನಲ್ಲಿ ನೀರಿನ ಸಮಸ್ಯೆ ನೀಗಿಸಲು ತೆರೆದ ಬಾವಿ ನಿರ್ಮಿಸಲು ಚಿಂತನೆ ನಡೆದಿದೆ ಎಂದು ತಿಳಿಸಿದರು. ಕಳೆದ ಬಿಜೆಪಿ ಸರ್ಕಾರ ಚಿಕ್ಕಮಗಳೂರಿಗೆ ಮೆಡಿಕಲ್ ಕಾಲೇಜು ಮಂಜೂರು ಮಾಡಿ, ಶಂಕುಸ್ಥಾಪನೆ ನೇರವೇರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಮ್ಮ ಸರ್ಕಾರ 100 ಕೋಟಿ ರೂ. ಹಣ ನೀಡಿದೆ. ಆಸ್ಪತ್ರೆ ಮತ್ತು ಕಾಲೇಜಿನಲ್ಲಿ ನೀರಿನ…

ಯಾವುದೇ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಪ್ರಸ್ತಾಪವಿಲ್ಲ: ಸರ್ಕಾರದ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಯಾವುದೇ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಪ್ರಸ್ತಾಪವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ಆಡಳಿತಾವಧಿಯಲ್ಲಿ ಆರಂಭಿಸಲಾಗಿರುವ 9 ವಿಶ್ವವಿದ್ಯಾಲಯಗಳನ್ನು ಮುಚ್ಚವ ಬಗ್ಗೆ ಕೆಲ ಸಮಯದ ಹಿಂದೆ ಡಿಕೆಶಿ ನೀಡಿದ್ದ ಹೇಳಿಕೆಗೆ ಪ್ರತಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ. ಈ ವಿಚಾರ ವಿಧಾನಸಭೆಯಲ್ಲೂ ಪ್ರತಿಧ್ವನಿಸಿದೆ. ವಿಪಕ್ಷ ನಾಯಕ ಆರ್ ಅಶೋಕ್ ಅವರು ವಿಧಾನಸಭೆಯಲ್ಲಿ ಗುರುವಾರ ಈ ವಿಷಯವನ್ನು ಪ್ರಸ್ತಾಪಿಸಿದರು. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ವೇಳೆ ಈ ವಿಷಯ ಪ್ರಸ್ತಾಪಿಸಿದ ಅಶೋಕ್, ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಈ ಕುರಿತಂತೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ವಿಶ್ವವಿದ್ಯಾಲಯಗಳನ್ನು ಬೇರೆ ವಿವಿಗಳ ಜತೆ ವಿಲೀನ ಮಾಡುತ್ತಿದ್ದೇವೆ ಯೇ ಹೊರತು, ಮುಚ್ಚುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಮೈಸೂರು ವಿಶ್ವವಿದ್ಯಾಲಯದಲ್ಲಿ ಸರ್ಟಿಫಿಕೇಟ್ ತೆಗೆದುಕೊಳ್ಳುವುದಕ್ಕೂ ಚಾಮರಾಜನಗರ ಅಥವಾ ಮಂಡ್ಯ ವಿವಿಯಲ್ಲಿ ತೆಗೆದುಕೊಳ್ಳುವುದಕ್ಕೂ ವ್ಯತ್ಯಾಸ ಇದೆ ಎಂದ ಅವರು, ಈ ವಿಶ್ವವಿದ್ಯಾಲಯಗಳನ್ನು ಬೇರೆ ವಿವಿಗಳ ಜತೆ ವಿಲೀನ ಮಾಡುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಕಾರವಾರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಇನ್ನರೆಡು ತಿಂಗಳಲ್ಲಿ ಲೋಕಾರ್ಪಣೆ

ಬೆಂಗಳೂರು: ಕಾರವಾರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು ಇನ್ನೆರಡು ತಿಂಗಳಲ್ಲಿ ಉದ್ಘಾಟಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ವಿಧಾನಸಭೆಗೆ ತಿಳಿಸಿದ್ದಾರೆ. ಗುರುವಾರ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಶಾಸಕ ದಿನಕರ್ ಕೇಶವಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಸೌಲಭ್ಯ ಕಲ್ಪಿಸಲಾಗುತ್ತದೆ. ಕ್ಯಾನ್ಸರ್‌ ಚಿಕಿತ್ಸೆಗೆ ಅವಕಾಶ ಕಲ್ಪಿಸಲಾಗಿದೆ. ಖಾಲಿ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಾಗಿತ್ತು. ಆದರೆ ಇಬ್ಬರು ವೈದ್ಯರು ಮಾತ್ರ ಅರ್ಜಿ ಹಾಕಿದ್ದರು ಎಂದರು. ತಾಲೂಕು ಕೇಂದ್ರಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡುವುದಿಲ್ಲ. ಹಾಗೆಯೇ ಕುಮಟಾ ತಾಲೂಕಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. ಉತ್ತರ ಕನ್ನಡ ಜಿಲ್ಲೆಯ ರೋಗಿಗಳು ಸೂಪರ್ ಸ್ಪೆಷಾಲಿಟಿ ಸೌಲಭ್ಯಕ್ಕಾಗಿ ಮಂಗಳೂರು ಅಥವಾ ಗೋವಾಕ್ಕೆ ಹೋಗಬೇಕಾದ…

ಬೆಂಗಳೂರು ಅಭಿವೃದ್ಧಿ ಇಲ್ಲ, ಕನ್ನಡಕ್ಕೂ ಬೆಂಬಲವಿಲ್ಲ.. ದರ ಏರಿಕೆಯೇ ಎಲ್ಲಾ.

ಬೆಂಗಳೂರು: ಬೆಂಗಳೂರಿನಲ್ಲಿ ಎಲ್ಲೆಡೆ ಕಸದ ರಾಶಿ ಕಂಡುಬರುತ್ತಿದೆ. ರಾಜಧಾನಿಯ ಪ್ರಗತಿಗೆ ಅನುದಾನವೇ ಇಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ಹೊರಹಾಕಿದ್ದಾರೆ. ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅಶೋಕ್, ಬೆಂಗಳೂರು ಅಭಿವೃದ್ಧಿ ಇಲ್ಲ, ಕನ್ನಡಕ್ಕೂ ಬೆಂಬಲವಿಲ್ಲ, ದರ ಏರಿಕೆಯೇ ಎಲ್ಲಾ ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಎರಡು ವರ್ಷದಿಂದ ಅಭಿವೃದ್ಧಿ ನಡೆದಿಲ್ಲ. ನನ್ನ ಕ್ಷೇತ್ರಕ್ಕೆ ಕೇವಲ 10 ಕೋಟಿ ರೂ. ನೀಡಲಾಗಿದೆ. ಬಿಜೆಪಿ ಸರ್ಕಾರವಿದ್ದಾಗ ಭೈರತಿ ಸುರೇಶ್‌ ಕ್ಷೇತ್ರಕ್ಕೆ ಒಂದು ವರ್ಷಕ್ಕೆ 100 ಕೋಟಿ ರೂ. ನೀಡಲಾಗಿತ್ತು. ಆದರೆ ಈಗಿನ ಸರ್ಕಾರದಿಂದ ಹಣ ಬರುತ್ತಿಲ್ಲ. ಮಳೆಗಾಲ ಬರುವ ಮುನ್ನ ಡಾಂಬರೀಕರಣ ಮಾಡಬೇಕಿತ್ತು. ಈಗ ಬ್ರ್ಯಾಂಡ್‌ ಬೆಂಗಳೂರು ಹೋಗಿ ಬ್ಯಾಡ್‌ ಬೆಂಗಳೂರು ಆಗಿದೆ ಎಂದು ಅಶೋಕ್ ದೂರಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಬಿಜೆಪಿ 431 ಕೋಟಿ ರೂ. ನೀಡಿದರೆ, ಈಗ 265 ಕೋಟಿ…

‘ದಲಿತರ ಕಣ್ಣೀರ ಶಾಪ ಕಾಂಗ್ರೆಸ್ ಸರಕಾರಕ್ಕೆ ತಟ್ಟದೆ ಬಿಡುವುದಿಲ್ಲ’: ವಿಜಯೇಂದ್ರ

ಬೆಂಗಳೂರು: ಬಡವರ ಶೋಷಣೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ‘ದಲಿತರ ಕಣ್ಣೀರ ಶಾಪ ತಟ್ಟದೆ ಬಿಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ಲೇಷಿಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪರಿಶಿಷ್ಟರ ಹಣ ದುರ್ಬಳಕೆ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿದ ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಅಹಿಂದ ಹೆಸರಿನಲ್ಲಿ ಪರಿಶಿಷ್ಟ ಜಾತಿ, ಪಂಗಡಗಳ ಕಣ್ಣೀರು ಒರೆಸುವುದಾಗಿ ಹೇಳಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಇಂದು ಪರಿಶಿಷ್ಟರ ಕರಾಳ ದಿನಕ್ಕೆ ಕಾರಣರಾಗಿದ್ದಾರೆ ಎಂದು ಆಕ್ರೋಶ ಹೊರಹಾಕಿದರು. ಎಸ್‍ಇಪಿ, ಟಿಎಸ್‍ಪಿ ಹಣವನ್ನು ದುರ್ಬಳಕೆ ಮಾಡುವ ದುಸ್ಸಾಹಸಕ್ಕೆ ಕೈ ಹಾಕಿರುವ ಈ ಸರ್ಕಾರ ಶೋಷಿತರ ಕಣ್ಣಲ್ಲಿ ನೀರು ಹರಿಸಿದರೆ ಆ ಶಾಪ ನಿಮ್ಮ ಸರಕಾರಕ್ಕೆ ತಟ್ಟದೆ ಬಿಡುವುದಿಲ್ಲ ಎಂದು ಅವರು ಎಚ್ಚರಿಸಿದರು. ವಿಧಾನ ಪರಿಷತ್ ವಿರೋಧ ಪಕ್ಷ…

ವಿಶ್ವವಿದ್ಯಾಲಯಗಳನ್ನು ಮುಚ್ಚಿ ಬಾರ್‌ಗಳನ್ನು ತೆರೆಯುತ್ತಿದ್ದಾರೆ: ಸರ್ಕಾರಕ್ಕೆ ಮೊದಲು ನೆಟ್‌ ಬೋಲ್ಟ್‌ ಟೈಟ್‌ ಮಾಡಬೇಕಿದೆ ಎಂದ ಅಶೋಕ್

ಬೆಂಗಳೂರು: ರಾಜ್ಯ ಸರ್ಕಾರ ರಾಜ್ಯಪಾಲರ ಬಾಯಿಂದ ಸಾಕಷ್ಟು ಸುಳ್ಳುಗಳನ್ನು ಹೇಳಿಸಿದೆ. ರಾಜ್ಯಪಾಲರ ಎಲ್ಲ ಅಧಿಕಾರಗಳನ್ನು ಕಿತ್ತುಕೊಂಡು ಅವರನ್ನೇ ಬಳಸಿಕೊಂಡು ಸರ್ಕಾರವನ್ನು ಶ್ಲಾಘಿಸಿಕೊಳ್ಳಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ಬಾಯಿಂದ ಸುಳ್ಳಿನ ಸರಮಾಲೆಯನ್ನೇ ಹೇಳಿಸಲಾಗಿದೆ. ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಸಂಘರ್ಷವನ್ನು ತರಲಾಗಿದೆ. ರಾಜ್ಯಪಾಲರ ಅಧಿಕಾರಗಳನ್ನು ಕಿತ್ತುಕೊಂಡಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿರುವ ಅವಮಾನ. ಮುಖ್ಯಮಂತ್ರಿ ಸಿದ್ದರಾಮಯ್ಯನವರು, ʼಇವ ನಮ್ಮವʼ ಎಂಬ ಬಸವಣ್ಣನವರ ವಚನ ಹೇಳುತ್ತಾರೆ. ಆದರೆ ರಾಜ್ಯಪಾಲರ ವಿಚಾರ ಬಂದಾಗ ಮಾತ್ರ ಇವರು ನಮ್ಮವರಲ್ಲ ಎಂದು ಭೇದ ತೋರುತ್ತಾರೆ. ರಾಜ್ಯಪಾಲರು ಇತ್ತೀಚೆಗೆ ಮೈಕ್ರೋ ಫೈನಾನ್ಸ್‌ ಕಾನೂನು ತಿದ್ದುಪಡಿಯನ್ನು ವಾಪಸ್‌ ಕಳುಹಿಸಿದ್ದರು. ಅದನ್ನು ವಿವೇಚನೆ ಮಾಡದೆ ಸರ್ಕಾರದಿಂದ ದ್ವೇಷ ಸಾಧಿಸಲಾಗುತ್ತಿದೆ. ವಿಧಾನಪರಿಷತ್‌ ಸದಸ್ಯ ಐವನ್‌ ಡಿಸೋಜ ಅವರು ಬಾಂಗ್ಲಾ ಪ್ರಧಾನಿಯೇ…

ಉದ್ದೇಶಿತ ಕ್ಷೇತ್ರ ಮರು ವಿಂಗಡಣೆ ಮೂಲಕ ದಕ್ಷಿಣ ಭಾರತದ ಮೇಲೆ ಹಿಡಿತ ಸಾಧಿಸಲು ಬಿಜೆಪಿ ಸಂಚು: ಡಾ. ಶರಣ್‌ ಪ್ರಕಾಶ್‌ ಪಾಟೀಲ್‌ ಆಕ್ರೋಶ

ಬೆಂಗಳೂರು, ಮಾರ್ಚ್‌ 6: ದಕ್ಷಿಣ ಭಾರತದ ಯಶಸ್ಸು ಕಂಡು ಸೊರಗಿರುವ ಕೇಂದ್ರ ಬಿಜೆಪಿ ಈಗ “ಕ್ಷೇತ್ರ ಮರು ವಿಂಗಡಣೆ” ಎಂಬ ಅಸ್ತ್ರದ ಮೂಲಕ ಸಮರ ಸಾರಲು ಹೊರಟಿದೆ. ಆದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಕಿಂಚಿತ್ತೂ ಅನ್ಯಾಯವಾಗಲು ನಮ್ಮ ಕಾಂಗ್ರೆಸ್‌ ಸರ್ಕಾರ ಬಿಡಲ್ಲ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಿಧಾನಸೌಧ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ. ಶರಣ್‌ ಪ್ರಕಾಶ್‌ ಪಾಟೀಲ್‌, ಕೇಂದ್ರ ಸರ್ಕಾರ ಉದ್ದೇಶಿತ ಯೋಜನೆಯು ದಕ್ಷಿಣ ಭಾರತದ ರಾಜ್ಯಗಳನ್ನು ಹಿಡಿತದಲ್ಲಿಟ್ಟುಕೊಳ್ಳುವುದು ಇಲ್ಲವೇ ಅನ್ಯಾಯ ಮಾಡುವುದು ಆಗಿದೆ ಎಂದು ಕಿಡಿಕಾರಿದರು. ಜನಸಂಖ್ಯೆ ಆಧಾರದ ಮೇಲೆ ಕ್ಷೇತ್ರ ಮರು ವಿಂಗಡಣೆ ಮಾಡಲಾಗುತ್ತದೆ ಎಂಬ ವರದಿಗಳು ಬಂದಿವೆ. ಇದರಿಂದ ಅನ್ಯಾಯವಾಗುವುದು ನಮ್ಮ ದಕ್ಷಿಣ ಭಾರತದ ರಾಜ್ಯಗಳಿಗೆ. ಏಕೆಂದರೆ ಹಲವಾರು ದಶಕಗಳಿಂದಲೂ ನಮ್ಮ…

ರಾಜ್ಯದಲ್ಲಿ ಲಂಚ ನೀಡದೇ ರಿಯಲ್ ಎಸ್ಟೇಟ್ ಉದ್ಯಮ ನಿರ್ವಹಿಸಲು ಸಾಧ್ಯವೇ ಇಲ್ಲ?

ಬೆಂಗಳೂರು: ರಾಜ್ಯದಲ್ಲಿ ‘ಲಂಚ ನೀಡದೇ ರಿಯಲ್ ಎಸ್ಟೇಟ್ ಉದ್ಯಮ ನಿರ್ವಹಿಸಲು ಸಾಧ್ಯವೇ ಇಲ್ಲ’ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಇದೀಗ ಖಾಸಗಿ ಬಡಾವಣೆಗಳು ಸರ್ಕಾರದ ಅನುಮತಿ ಪಡೆಯಬೇಕು ಎಂಬ ರಾಜ್ಯ ಸರ್ಕಾರದ ನಿರ್ಧಾರವು ಭ್ರಷ್ಟಾಚಾರವನ್ನು ವಿಧಾನ ಸೌಧದ ವರೆಗೂ ವಿಸ್ತರಿಸಿಕೊಳ್ಳುವ ಹುನ್ನಾರವೇ ಹೊರತು ಇದರ ಹಿಂದೆ ಯಾವ ಸದುದ್ದೇಶವೂ ಅಡಗಿಲ್ಲ ಎನ್ನುವುದು ಬಹಿರಂಗ ಸತ್ಯ ಎಂದಿದ್ದಾರೆ. ನಗರಾಭಿವೃದ್ಧಿ ಪ್ರಾಧಿಕಾರಗಳು ಬಹುತೇಕ ನಿಷ್ಕ್ರೀಯಗೊಂಡು ‘ನಿಂತ ನೀರಾಗಿವೆ’ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಒಂದೇ ಒಂದು ಬಡಾವಣೆ ನಿರ್ಮಿಸಲು ಸಾಧ್ಯವಾಗಿಲ್ಲ. ಸರ್ಕಾರ ಈ ನಿಟ್ಟಿನಲ್ಲಿ ಅಭಿವೃದ್ಧಿ ಪ್ರಾಧಿಕಾರಗಳಿಗೆ ಚುರುಕು ಮುಟ್ಟಿಸುವ ಗೋಜಿಗೇ ಹೋಗಿಲ್ಲ,ಇದರ ಪರಿಣಾಮವೇ ಮೈಸೂರು ಮುಡಾ ಹಗರಣದ ಕುಖ್ಯಾತಿ ಸಾಗರದಾಚೆಗೂ ಸದ್ದುಮಾಡಿದೆ ಎಂದವರು ವಿಶ್ಲೇಷಿಸಿದ್ದಾರೆ. ಸೂರಿಲ್ಲದ ಜನರು ಗೃಹ ನಿರ್ಮಾಣ ಸಹಕಾರ ಸಂಘಗಳ ಮೂಲಕ ಹಾಗೂ ಖಾಸಗಿ ನಿರ್ಮಾಣಕಾರರ ಮೂಲಕ…

ಬೆಂಗಳೂರಿಗೆ ಅಮಿತ್ ಶಾ.. ಬಿಜೆಪಿಯಲ್ಲಿ ಬೆಳವಣಿಗೆಗಳ ಕೌತುಕ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ. ರಾಜಧಾನಿಯ ಮಾರತ್ತ​​ಹಳ್ಳಿ ಬಳಿ ವಿಶ್ವೇಶತೀರ್ಥ ಸ್ಮಾರಕ ಆಸ್ಪತ್ರೆ’ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ನಾಯಕರ ನಡುವೆ ಮುಸುಕಿನ ಗುದ್ದಾಟ ನಡೆದಿರುವಾಗಲೇ ಅಕ್ಷದ ಚಾಣಾಕ್ಯ ಬೆಂಗಳೂರಿಗೆ ಆಗಮಿಸುತ್ತಿದ್ದು, ಬೆಳವಣಿಗೆಗಳು ತೀವ್ರ ಕುತೂಹಲ ಕೆರಳಿಸಿವೆ.

ಭ್ರಷ್ಟರ ಬೆನ್ನತ್ತಿದ ಲೋಕಾಯುಕ್ತ: ರಾಜ್ಯದ 7 ಜಿಲ್ಲೆಗಳಲ್ಲಿ ಕ್ಷಿಪ್ರ ಕಾರ್ಯಾಚರಣೆ

ಬೆಂಗಳೂರು: ಭ್ರಷ್ಟರ ವಿಬೆನ್ನತ್ತಿರುವ ಲೋಕಾಯುಕ್ತ ಪೊಲೀಸರು ಗುರುವಾರ ಬೆಳ್ಳಂಬೆಳಿಗ್ಗೆ ಕಾರ್ಯಾಚರಣೆಯ ಅಖಾಡಕ್ಕೆ ಧುಮುಕಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿ ಲೋಕಾಯುಕ್ತ ಪೊಲೀಸರು ವಿವಿಧ ಇಲಾಖೆಗಳ ಅಧಿಕಾರಿಗಳ ಕಚೇರಿ ಹಾಗೂ ನಿವಾಸಗಳ ಮೇಲೆ ದಾಳಿ ನಡೆಸಿದ್ದಾರೆ. ಬೆಂಗಳೂರು, ತುಮಕೂರು, ಕೋಲಾರ, ದಾವಣಗೆರೆ, ಕಲಬುರಗಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಲೋಕಾಯುಕ್ತ ಪೊಲೀಸರ ವಿವಿಧ ತಂಡಗಳು ಅಧಿಕಾರಿಗಳ ನಿವಾಸ, ಕಚೇರಿಗಳಲ್ಲಿ ಶೋಧ ಕೈಗೊಂಡಿದೆ. ಬೆಂಗಳೂರಿನಲ್ಲಿ ಬಿಬಿಎಂಪಿಯ ಎಕ್ಸಿಕ್ಯೂಟಿವ್​ ಇಂಜಿನಿಯರ್​ ಹೆಚ್​.ಬಿ.ಕಲ್ಲೇಶಪ್ಪ ಡಿಪಿಎಆರ್ ಚೀಫ್ ಇಂಜಿನಿಯರ್ ಟಿ.ಡಿ.ನಂಜುಡಪ್ಪ ನಿವಾಸಗಳ ಮೇಲೆ ಶೋಧ ನಡೆದಿದೆ. ಕೋಲಾರದಲ್ಲಿ ಬೆಸ್ಕಾಂ ಎಇಇ ಜಿ.ನಾಗರಾಜ್​ ನಿವಾಸದ ಮೇಲೆ ಲೋಕಾಯುಕ್ತ ತಂಡ ದಾಳಿ ಕೈಗೊಂಡಿದೆ. ತುಮಕೂರಿನಲ್ಲಿ ಆರೋಗ್ಯ ಇಲಾಖೆಯ ಡಾ. ಜಗದೀಶ್ ನಿವಾಸದ ಮೇಲೆ, ದಾವಣಗೆರೆಯಲ್ಲಿ ಆಹಾರ ಇಲಾಖೆಯ ಅಧಿಕಾರಿ ಜಿ.ಎಸ್. ನಾಗರಾಜು ನಿವಾಸದ ಮೇಲೆ ದಾಳಿ ನಡೆದಿದೆ. ಕಲಬುರಗಿಯಲ್ಲಿ ಲೋಕೋಪಯೋಗಿ ಇಲಾಖೆ ಅಧಿಕಾರಿ ಜಗನ್ನಾಥ್ ನಿವಾಸದಲ್ಲೂ ಶೋಧ…