ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಟಿಟಿ ವಾಹನ ಪಲ್ಟಿಯಾಗಿ ಈ ಅಪಘಾತ ಸಂಭವಿಸಿದೆ. 65 ವರ್ಷದ ಶಂಕರಿಬಾಯಿ, 46 ವರ್ಷ ವಯಸ್ಸಿನ ಕುಮಾರ ನಾಯ್ಕ್ ಮತ್ತು 38ರ ಹರೆಯದ ಶ್ವೇತಾ ಎಂಬವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಐವರು ಗಾಯಗೊಂಡಿದ್ದು ಅವರು ಚಳ್ಳಕೆರೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Month: March 2025
ಒಳಮೀಸಲಾತಿ: ನಾಗಮೋಹನ್ ದಾಸ್ ಆಯೋಗದಿಂದ 4 ಪ್ರಮುಖ ಶಿಫಾರಸ್ಸು
ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ಏಕಸದಸ್ಯ ಆಯೋಗ ನೀಡಿದ ಮಧ್ಯಂತರ ವರದಿಯನ್ನುಗುರುವಾರ ನಡೆದ ಸಚಿವ ಸಂಪುಟ ಸಭೆಯು ಅಂಗೀಕರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಆಯೋಗವು ನಾಲ್ಕು ಪ್ರಮುಖ ಶಿಫಾರಸ್ಸುಗಳನ್ನು ಮಾಡಿದೆ. ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ಹೊಸದಾದ ಸಮೀಕ್ಷೆ ನಡೆಸಿ ದತ್ತಾಂಶವನ್ನು ಸಂಗ್ರಹಿಸಬೇಕು. ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನದ ಸಾಧನಗಳನ್ನು ಬಳಸಿ 30 ರಿಂದ 40 ದಿವಸಗಳೊಳಗೆ ಹೊಸ ಸಮೀಕ್ಷೆಯನ್ನು ನಡೆಸಬಹುದೆಂದು ತಜ್ಞರು ಅಭಿಪ್ರಾಯ ಪಡುತ್ತಾರೆ. ಹೊಸದಾದ ಸಮೀಕ್ಷೆ ನಡೆಸಲು ಅಗತ್ಯವಿರುವ ಪ್ರಶ್ನಾವಳಿಯನ್ನು ಸಿದ್ಧಪಡಿಸಬೇಕು. ಯಾವ ಸಂಸ್ಥೆಯಿಂದ ಸಮೀಕ್ಷೆ ನಡೆಸಬೇಕು, ಸಮೀಕ್ಷೆಗೆ ಅಗತ್ಯವಿರುವ ತರಬೇತಿ, ಸಂಪನ್ಮೂಲ ಕ್ರೋಢೀಕರಣಗಳ ಉಸ್ತುವಾರಿಗಾಗಿ ಉನ್ನತ ಮಟ್ಟದ ಸಮಿತಿಯನ್ನು ರಚಿಸುವುದು ಸೂಕ್ತವೆಂದು ಆಯೋಗವು ಅಭಿಪ್ರಾಯಪಟ್ಟಿದೆ. ಹೊಸ ಸಮೀಕ್ಷೆಯಿಂದ ಸಂಗ್ರಹಿಸಿದ ದತ್ತಾಂಶದ…
ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಹಾಲಿನ ದರ ಕಡಿಮೆ
ಬೆಂಗಳೂರು: ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಹಾಲಿನ ದರ ತೀರಾ ಕಡಿಮೆ. ಈ ಕುರಿತಂತೆ ಸಿಎಂ ಸಿದ್ದರಾಮಯ್ಯ ಅವರು ಹಂಚಿಕೊಂಡಿರುವ ಮಾಹಿತಿ ಗಮನಸೆಳೆದಿದೆ. ಪ್ರಸ್ತುತ ಎಲ್ಲ ವಸ್ತುಗಳ ಬೆಲೆ ಏರಿಕೆಯಾಗಿರುವ ಕಾರಣದಿಂದ ಸಂಕಷ್ಟಕ್ಕೆ ಒಳಗಾಗಿರುವ ರಾಜ್ಯದ ಹೈನುಗಾರರ ನೆರವಿಗೆ ನಮ್ಮ ಸರ್ಕಾರ ಧಾವಿಸಿದ್ದು, ಗ್ರಾಹಕರಿಗೆ ಹೊರೆಯಾಗದಂತೆ ಹಾಲಿನ ಬೆಲೆ ಏರಿಕೆ ಮಾಡಿದ್ದೇವೆ. ಕೆಎಂಎಫ್’ನ ನಂದಿನಿ ಹಾಲಿನ ಬೆಲೆಗೆ ಹೋಲಿಸಿದರೆ ಹೊರರಾಜ್ಯಗಳ ಹಾಲು ಒಕ್ಕೂಟಗಳು ಮಾರಾಟ ಮಾಡುವ ದರ ಹೆಚ್ಚಿನದ್ದಾಗಿದೆ ಎಂದವರು ತಿಳಿಸಿದ್ದಾರೆ. ಶುದ್ಧ ಹಾಗೂ ಗುಣಮಟ್ಟದ ದೃಷ್ಟಿಯಲ್ಲಿ ನಂದಿನಿ ಹಾಲು ಹಾಗೂ ಉತ್ಪನ್ನಗಳು ದೇಶದಲ್ಲೇ ಅತಿಹೆಚ್ಚು ಶ್ಲಾಘನೆಗೆ ಒಳಪಟ್ಟಿವೆ. ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ದೇಶದ ನಾನಾ ಭಾಗಗಳಿಂದ ನಂದಿನಿ ಹಾಲು ಹಾಗೂ ಇತರೆ ಉತ್ಪನ್ನಗಳಿಗೆ ಬೇಡಿಕೆ ವ್ಯಕ್ತವಾಗುತ್ತಿದೆ. ಇದರಿಂದ ರಾಜ್ಯದ ಹೈನುಗಾರರಿಗೆ ಉತ್ತೇಜನ ಸಿಗುತ್ತಿದ್ದು, ಇದೀಗ ಸಣ್ಣ ಪ್ರಮಾಣದಲ್ಲಿ ಏರಿಕೆಯಾದ ಹಾಲಿನ ದರವು ನೇರವಾಗಿ ಹೈನುಗಾರರ…
ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬಲು ಎಐಸಿಸಿಯಿಂದ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್
ನವದೆಹಲಿ, “ಎಐಸಿಸಿಯು ಪಕ್ಷದ ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬಿ ಸಂಘಟನೆಗೆ ಹೊಸ ಸ್ವರೂಪ ನೀಡಲು ಮುಂದಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ಜಿಲ್ಲಾ ಅಧ್ಯಕ್ಷರುಗಳ ಸಭೆ ವೇಳೆ ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಸೇರಿ ಎಲ್ಲಾ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಸಭೆ ನಡೆಸಿದ್ದಾರೆ. ಪಕ್ಷವು ಸರ್ಕಾರಕ್ಕಿಂತ ದೊಡ್ಡದು, ಹೀಗಾಗಿ ಹೈಕಮಾಂಡ್ ನಾಯಕರು ಜಿಲ್ಲಾ ಅಧ್ಯಕ್ಷರಿಗೆ ವಿಶೇಷ ಕಾರ್ಯಕ್ರಮ ನೀಡಿದ್ದಾರೆ ಎಂದರು. “ಈ ಸಭೆ ವೇಳೆ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಮಾಡುವ ಸಂದರ್ಭದಲ್ಲಿ ನಿಮ್ಮ ಅಭಿಪ್ರಾಯ ಪಡೆಯಲಾಯಿತೇ?, ನಿಮ್ಮನ್ನು ವಿಶ್ವಾಸಕ್ಕೆ ಪಡೆದರೆ ಎಂದು ಕೇಳಿದ್ದಾರೆ. ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬುವ ಕೆಲಸ ಮಾಡಿದ್ದಾರೆ” ಎಂದು ಹೇಳಿದರು. “ಸದಸ್ಯತ್ವ ಅಭಿಯಾನ…
‘ಜಾಗತಿಕ ಮಟ್ಟದಲ್ಲಿ ಉದ್ಯೋಗಾವಕಾಶ ಹೆಚ್ಚಿಸಲು ನರ್ಸಿಂಗ್ ಕಾಲೇಜುಗಳಲ್ಲಿ ವಿದೇಶಿ ಭಾಷಾ ತರಬೇತಿ’
ಬೆಂಗಳೂರು: ಕರ್ನಾಟಕದ ನರ್ಸಿಂಗ್ ವಿದ್ಯಾರ್ಥಿಗಳಿಗೆ ಜಾಗತಿಕ ಉದ್ಯೋಗಾವಕಾಶವನ್ನು ಹೆಚ್ಚಿಸಲು, ಎಲ್ಲಾ ನರ್ಸಿಂಗ್ ಕಾಲೇಜುಗಳಲ್ಲಿ ವಿದೇಶಿ ಭಾಷಾ ಪ್ರಯೋಗಾಲಯಗಳ ಮೂಲಕ ವಿದೇಶಿ ಭಾಷಾ ತರಬೇತಿಯನ್ನು ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಘೋಷಿಸಿದ್ದಾರೆ. ಡಾ. ಬಿ.ಆರ್. ಅಂಬೇಡ್ಕರ್ ಫಿಸಿಯೋಥೆರಪಿ ಕಾಲೇಜಿನಲ್ಲಿ ಶುಕ್ರವಾರ ಹೊಸ ಫಿಸಿಯೋಥೆರಪಿ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಚಿವ, ಡಾ. ಪಾಟೀಲ್, ಕೌಶಲ್ಯಪೂರ್ಣ ದಾದಿಯರು ಮತ್ತು ಸಂಬಂಧಿತ ಆರೋಗ್ಯ ವೃತ್ತಿಪರರಿಗೆ ಅಂತಾರಾಷ್ಟ್ರೀಯ ಬೇಡಿಕೆ ಹೆಚ್ಚಾಗಿದೆ. ಹೀಗಾಗಿ ವಿದೇಶಿ ಭಾಷಾ ಒತ್ತಿ ಹೇಳಿದರು. “ತರಬೇತಿ ಪಡೆದ ದಾದಿಯರು ಮತ್ತು ಸಂಬಂಧಿತ ಆರೋಗ್ಯ ವಿಜ್ಞಾನ ವಿದ್ಯಾರ್ಥಿಗಳಿಗೆ ಜರ್ಮನಿ, ಇಟಲಿ, ಜಪಾನ್ ಮತ್ತು ಯುಎಇ ಆಸ್ಪತ್ರೆಗಳಲ್ಲಿ ಅವಕಾಶ ಸಿಗುವ ಸಾಧ್ಯತೆಗಳಿವೆ. ಈಗಾಗಲೇ ಈ ದೇಶದವರು ನಮ್ಮನ್ನು ಸಂಪರ್ಕಿಸಿದ್ದಾರೆ. ಈ ಆಸ್ಪತ್ರೆಗಳಿಗೆ ಅವರ ಸ್ಥಳೀಯ ಭಾಷೆ…
ಬೆಲೆ ಏರಿಕೆ ಸಮರ; ಸರ್ಕಾರದ ವಿರುದ್ದ ಬಿಜೆಪಿಯಿಂದ ಹೋರಾಟ
ಬೆಂಗಳೂರು: ಹಾಲು ಸೇರಿದಂತೆ ಅಗತ್ಯ ವಸ್ತುಗಳ ದರ ಏರಿಕೆ ವಿರುದ್ಧ ಬಿಜೆಪಿ ರಾಜ್ಯದಾದ್ಯಂತ ಹೋರಾಟ ಮಾಡಲಿದೆ. ಈ ಕುರಿತು ಮಾಹಿತಿ ಒದಗಿಸಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್, ಯುಗಾದಿ ಹಬ್ಬದ ಕಳೆದ ನಂತರ ಇದರ ದಿನಾಂಕ ನಿಗದಿ ಮಾಡಲಾಗುವುದು ಎಂದು ತಿಳಿಸಿದರು. ಈವರೆಗೆ ಹೆಚ್ಚು ಮಾಡಿದ 9 ರೂ. ನಲ್ಲಿ ಲಾಭವನ್ನು ರೈತರಿಗೆ ನೀಡಿಲ್ಲ. ಪ್ರೋತ್ಸಾಹಧನವನ್ನು ಇನ್ನೂ ಬಾಕಿ ಉಳಿಸಿಕೊಳ್ಳಲಾಗಿದೆ. ಈಗ ಹೆಚ್ಚು ಮಾಡಿದ ದರದಲ್ಲಿ ಎಷ್ಟು ಸರ್ಕಾರಕ್ಕೆ ಹೋಗಲಿದೆ ಎಂಬುದು ಗೊತ್ತಿಲ್ಲ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲೇ ಪ್ರೋತ್ಸಾಹಧನ ಹೆಚ್ಚಳ ಕುರಿತು ಘೋಷಣೆ ಮಾಡಿತ್ತು. ಅದನ್ನು ಇನ್ನೂ ಜಾರಿ ಮಾಡಿಲ್ಲ ಎಂದರು. ಬಿಜೆಪಿ ಅವಧಿಯಲ್ಲಿ ಮಾರ್ಗಸೂಚಿ ದರ ಇಳಿಸಲಾಗಿತ್ತು. ಬಸ್ ಟಿಕೆಟ್ ದರ, ನೀರಿನ ದರ ಏರಿಸಿರಲಿಲ್ಲ. ಹಿಂದಿನ ಯಾವುದೇ ಮುಖ್ಯಮಂತ್ರಿ ಮಾಡದಷ್ಟು ಸಾಲವನ್ನು ಸಿಎಂ ಸಿದ್ದರಾಮಯ್ಯ ಒಬ್ಬರೇ ಮಾಡಿದ್ದಾರೆ. ಅಂದರೆ 65% ನಷ್ಟು ಸಾಲವನ್ನು ಇವರೊಬ್ಬರೇ…
ಹಾಲಿನ ದರ ಏರಿಕೆ ಬದಲು ಗ್ಯಾರಂಟಿ ಅನುಷ್ಠಾನ ಸಮಿತಿ ರದ್ದು ಮಾಡಿದ್ದರೆ 150 ಕೋಟಿ ರೂ ಉಳಿಸಬಹುದು
ಬೆಂಗಳೂರು,: ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಹಾಲಿನ ದರವನ್ನು ಮೂರು ಬಾರಿ ಒಟ್ಟು 9 ರೂ. ಏರಿಸಿ ಜನರನ್ನು ಲೂಟಿ ಮಾಡಲಾಗಿದೆ. ಬಜೆಟ್‌ನಲ್ಲಿ ಯಾವುದೇ ತೆರಿಗೆಗಳನ್ನು ಹಾಕದೆ, ಹಿಡನ್ ಅಜೆಂಡಾ ಮಾಡಿ ಬಳಿಕ ತೆರಿಗೆ/ ದರ ಏರಿಕೆ ಮಾಡಲಾಗಿದೆ. ಪಾಪರ್ ಆಗಿಲ್ಲವೆಂದರೆ ಯಾಕಿಷ್ಟು ದರ ಏರಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಪ್ರಶ್ನೆ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಸುಳ್ಳು, ಮುಂದೆ ಮಾರಿಹಬ್ಬ ಇದೆ ಎಂದು ಎಚ್ಚರಿಕೆ ನೀಡಿದ್ದೆ. ಬಜೆಟ್‌ನಲ್ಲೇ ತೆರಿಗೆಗಳನ್ನು ಹಾಕಬೇಕಿತ್ತು. ಆದರೆ ಬಜೆಟ್ ಮುಗಿದ ನಂತರ ತೆರಿಗೆ, ದರ ಏರಿಕೆ ಮಾಡಿದ್ದಾರೆ. ಬಜೆಟ್ ನಂತರ ಎಲ್ಲಾ ಮಾಧ್ಯಮಗಳಲ್ಲಿ ಶಹಭಾಸ್‌ಗಿರಿ ಬರಬೇಕೆಂದು ಈ ರೀತಿ ಮೋಸ ಮಾಡಿದ್ದಾರೆ. ಮೋಸ ಮಾಡುವುದರಲ್ಲಿ ಸಿದ್ದರಾಮಯ್ಯ ನಂ.1 ಆಗಿದ್ದಾರೆ. ಧೈರ್ಯ ಇದ್ದಿದ್ದರೆ ತೆರಿಗೆ ಹೆಚ್ಚಳ ಕುರಿತು ಬಜೆಟ್‌ನಲ್ಲೇ ಘೋಷಿಸಬೇಕಿತ್ತು ಎಂದರು. ಇಡೀ ಆರ್ಥಿಕತೆ ವಿದ್ಯುತ್…
ನಂದಿನಿ ಹಾಲಿನ ಬೆಲೆ ಏರಿಕೆಗೆ ಸಂಪುಟದಿಂದ ಗ್ರೀನ್ ಸಿಗ್ನಲ್
ಬೆಂಗಳೂರು: ನಂದಿನಿ ಹಾಲಿನ ಬೆಲೆ ಏರಿಕೆಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಪ್ರತೀ ಲೀಟರ್ ಹಾಲಿನ ದರ 4 ರೂಪಾಯಿ ಹೆಚ್ಚಳವಾಗುವ ಸಾಧ್ಯತೆಗಳಿವೆ. ನಂದಿನಿ ಹಾಲಿನ ದರ ಪ್ರತಿ ಲೀಟರ್‌ಗೆ 4 ರೂಪಾಯಿ ಏರಿಕೆ ಮಾಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ದರ ಹೆಚ್ಚಿಸಬೇಕೆಂಬ ಹಾಲು ಒಕ್ಕೂಟಗಳ ಮನವಿ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ ನಡೆದಿದ್ದು, ದರ ಏರಿಕೆಗೆ ಸಂಪುಟ ಒಪ್ಪಿಗೆ ಸೂಚಿಸಿದೆ. ಈ ಮೂಲಕ ಒಂದೇ ವರ್ಷದಲ್ಲಿ ಎರಡು ಬಾರಿಗೆ ಹಾಲಿನ ಏರಿಕೆ ಮಾಡಿದಂತಾಗಿದೆ.
ಸಂವಿಧಾನ ಬದಲಿಸುವ ಮಾತುಗಳನ್ನಾಡುತ್ತಾ ಬಂದವರು ಬಿಜೆಪಿಯವರು: ಹಳೆಯ ಸನ್ನಿವೇಶಗಳನ್ನು ಮುನ್ನೆಲೆಗೆ ತಂದ ರಮೇಶ್ ಬಾಬು..
ಬೆಂಗಳೂರು: ಆಗಾಗ್ಗೆ ಸಂವಿಧಾನ ಬದಲಾವಣೆಯ ಬಗ್ಗೆ ಮಾತನಾಡುತ್ತಿರುವ ಬಿಜೆಪಿ ನಾಯಕರು, ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರತ್ತ ಬೆರಳು ತೋರಿಸುವ ಮುನ್ನ ತಮ್ಮನ್ನು ತಾವೇ ನೋಡಿಕೊಳ್ಳಲಿ ಎಂದು ವಿಧಾನ ಪರಿಷತ್ತಿನ ಮಾಜಿ ಸದಸ್ಯ, ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಧ್ಯಗಳಿಗೆ ಪ್ರತಿಕ್ರಿಯೆ ನೀಡಿರುವ ರಮೇಶ್ ಬಾಬು, ಅನಾದಿ ಕಾಲದಿಂದಲೂ ಬಿಜೆಪಿ-ಆರೆಸ್ಸೆಸ್ ನಾಯಕರು ಸಂವಿಧಾನ ಬದಲಾವಣೆ ಬಾಗೆ ಹೇಳಿಕೊಂಡಿರುವ ಸನ್ನಿವೇಶಗಳ ಬಗ್ಗೆ ಗಮನಸೆಳೆದರು. ಸಂಘ ಪರಿವಾರದ ಮೂಲಭೂತ ಸಿದ್ಧಾಂತಗಳಿಗೆ ಅನುಗುಣವಾಗಿ ನಮ್ಮ ದೇಶದ ಸಂವಿಧಾನವನ್ನು ಬದಲಾಯಿಸುವ ಹಿಡನ್ ಅಜೆಂಡ ಹೊಂದಿರುವ ಬಿಜೆಪಿ, ಸಮಯಕ್ಕೆ ಅನುಗುಣವಾಗಿ ತನ್ನ ಬಣ್ಣ ಬದಲಾಯಿಸಿಕೊಂಡು ರಾಜಕೀಯ ಹೇಳಿಕೆಗಳನ್ನು ನೀಡುತ್ತಿದೆ. ಜನಸಂಘದ ಕಾಲದಿಂದಲೂ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿರುವ ಬಿಜೆಪಿ ಆಯಾ ಸಂದರ್ಭದಲ್ಲಿ ಸಂಘ ಪರಿವಾರದ ವೇದಿಕೆಗಳಲ್ಲಿ, ನಾಯಕರ ಹೇಳಿಕೆಗಳಲ್ಲಿ ನಿರಂತರವಾಗಿ ನಮ್ಮ ದೇಶದ ಸಂವಿಧಾನವನ್ನು ಮನುಸ್ಮೃತಿಗೆ ಅನುಗುಣವಾಗಿ ಮೂಲಭೂತವಾದಕ್ಕೆ ಪೂರಕವಾಗಿ ಬದಲಾವಣೆ…
ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: ಮತ್ತೊಬ್ಬ ಆಭರಣ ಉದ್ಯಮಿ ಬಂಧನ
ಬೆಂಗಳೂರು : ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಳ್ಳಾರಿ ಮೂಲದ ಚಿನ್ನ ವ್ಯಾಪಾರಿಯನ್ನು ಡಿಆರ್‌ಐ ಅಧಿಕಾರಿಗಳು ಬಂಧಿಸಿದ್ದಾರೆ. ಗೋಲ್ಡ್ ಸ್ಮಗ್ಲಿಂಗ್ ದಂಧೆ ಬೇಧಿಸುತ್ತಿರುವ ಡಿಆರ್‌ಐ ಅಧಿಕಾರಿಗಳು ಬಂಧಿತ ಆರೋಪಿ ತರುಣ್ ನೀಡಿದ ಸುಳಿವನ್ನಾಧರಿಸಿ ಬಳ್ಳಾರಿ ಮೂಲದ ಚಿನ್ನದ ವ್ಯಾಪಾರೀ ಸಾಹಿಲ್ ಜೈನ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.