ಬಿಜೆಪಿಯಲ್ಲಿನ ಬಣಬಡಿದಾಟದ ರೋಚಕತೆ: ಲಿಂಗಾಯತ ಶಕ್ತಿ ಯಾರ ಕಡೆ? ಬಿಎಸ್ವೈ ಗೆ ಅಗ್ನಿ ಪರೀಕ್ಷೆ

ಬೆಂಗಳೂರು: ರಾಜ್ಯ ಕಮಲ ಪಾಳಯದಲ್ಲಿ ಬಂಡಾಯದ ಬಿರುಗಾಳಿ ಎದ್ದಿದೆ. ಈ ವರೆಗೂ ಆಡಳಿತ ಪಕ್ಷದ ವಿರುದ್ಧ ರಣಕಹಳೆ ಮೊಳಗಿಸುತ್ತಿದ್ದ ಬಿಜೆಪಿಗರು ಇದೀಗ ತಮ್ಮ ಪಕ್ಷದೊಳಗೆ ಬಣ ಬಡಿದಾಟದಲ್ಲಿ ತೊಡಗಿದ್ದಾರೆ. ಸರ್ಕಾರದ ವೈಫಲ್ಯಗಳನ್ನು ಜನರೆದುರು ಕೊಂಡೊಯ್ದು ಜಿಲ್ಲಾ-ತಾಲೂಕು ಪಂಚಾಯ್ತಿ ಚುನಾವಣೆಗೆ ರಣತಂತ್ರ ರೂಪಿಸಬೇಕಿದ್ದ ನಾಯಕರು ತಮ್ಮ ಬಣದ ಬಲಪ್ರದರ್ಶನಕ್ಕೆ ಮುಂದಾಗುವ ಅನಿವಾರ್ಯತೆ ಸೃಷ್ಟಿಯಾಗಿರುವುದು ರಾಜ್ಯ ರಾಜಕಾರಣದ ಅಚ್ಚರಿ. ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಗೆ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಅವರ ಬಣ ಪ್ರಯತ್ನ ನಡೆಸುತ್ತಿದೆ. ಬಿಜೆಪಿಯೊಳಗಿನ ಕುಟುಂಬ ರಾಜಕಾರಣದ ವಿರುದ್ಧ ಸಮರ ಸಾರಿರುವ ಯತ್ನಾಳ್ ಬಣ ನಿರಂತರ ಚಟುವಟಿಕೆಗಳಲ್ಲಿ ತೊಡಗಿದೆ. ಇದೇ ವೇಳೆ ಯತ್ನಾಳ್ ಬಣಕ್ಕೆ ಸೆಡ್ಡು ಹೊಡೆಯಲು ವಿಜಯೇಂದ್ರ ಬೆಂಬಲಿಗರು ನಡೆಸುತ್ತಿರುವ ಕಾರ್ಯತಂತ್ರವು ಪಕ್ಷವನ್ನೇ ಇಬ್ಬಾಗಕ್ಕೆ ಕಾರಣವಾಗುತ್ತಾ ಎಂಬ ಆತಂಕವನ್ನು ಹುಟ್ಟುಹಾಕಿದೆ. ಯತ್ನಾಳ್ ಬಣಕ್ಕೆ ಸೆಡ್ಡುಹೊಡೆಯಲು ಮುಂದಾಗಿರುವ ವಿಜಯೇಂದ್ರ, ತಾನು ಲಿಂಗಾಯತ ನಾಯಕ, ‘ನಾನೇ ಪ್ರಬಲ ನಾಯಕ’ ಎಂದು…

ಕರ್ನಾಟಕದಲ್ಲಿ ತಯಾರಾಗುವ ಎಲ್ಲಾ ಉತ್ಪನ್ನಗಳು ಇನ್ನು ‘ಕನ್ನಡಮಯ’

ಬೆಂಗಳೂರು: ಕರ್ನಾಟಕದಲ್ಲಿ ಖಾಸಗಿ ಮತ್ತು ಸಾರ್ವಜನಿಕ ವಲಯದ ಕೈಗಾರಿಕೆಗಳು ತಮ್ಮ ಕಂಪನಿಯ ಹೆಸರು ಮತ್ತು ಬಳಕೆಯ ಸೂಚನೆಗಳನ್ನು ಕನ್ನಡ ಭಾಷೆಯಲ್ಲಿ ಮುದ್ರಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಸಿಎಂ ಆದೇಶದ ಹಿನ್ನೆಲೆಯಲ್ಲಿ ಫೆಬ್ರವರಿ 15 ರಂದು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ (ಸೇವೆಗಳು ಮತ್ತು ಸಮನ್ವಯ) ಅಧೀನ ಕಾರ್ಯದರ್ಶಿ ಕೆ. ಉಮಾದೇವಿ ಅವರು ಸುತ್ತೋಲೆಯನ್ನು ಹೊರಡಿಸಿದ್ದಾರೆ. ಸುತ್ತೋಲೆಯಲ್ಲಿ, ಕರ್ನಾಟಕ ಸರ್ಕಾರವು ಮಾರ್ಚ್ 12, 2024 ರಂದು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯ್ದೆ, 2022 ನ್ನು ಅನಿಷ್ಠಾನಕ್ಕೆ ತಂದಿದೆ. ಅದರಂತೆ ಭಾಷೆಯ ಬೆಳವಣಿಗೆಗೆ ಉತ್ಪಾದನೆ, ಮಾರುಕಟ್ಟೆ ಮತ್ತು ವಹಿವಾಟುಗಳನ್ನು ಸ್ಥಳೀಯ ಭಾಷೆಯಲ್ಲಿ ನಡೆಸುವುದು ಅತ್ಯಗತ್ಯ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ. ಕಾಯ್ದೆಯ ಸೆಕ್ಷನ್ 17 (7) ರ ಅಡಿಯಲ್ಲಿ ರಾಜ್ಯದೊಳಗೆ ಉತ್ಪಾದಿಸುವ ಮತ್ತು ಮಾರಾಟ ಮಾಡುವ ಎಲ್ಲಾ ಕೈಗಾರಿಕಾ ಮತ್ತು ಇತರ ಗ್ರಾಹಕ ಉತ್ಪನ್ನಗಳು ಇತರ ಭಾಷೆಗಳೊಂದಿಗೆ ತಮ್ಮ ಹೆಸರು…

ಉತ್ತರಾಖಂಡದ ಚಮೋಲಿಯಲ್ಲಿ ಹಿಮಪಾತ: ಭಯಾನಕ ದೃಶ್ಯ

ಚಮೋಲಿ: ಉತ್ತರಾಖಂಡದ ಚಮೋಲಿಯಲ್ಲಿ ಹಿಮಪಾತ ಆತಂಕದ ಸನ್ನಿವೇಶ ಸೃಷ್ಟಿಸಿದೆ. ಚಮೋಲಿ ಜಿಲ್ಲೆಯ ಮಾನಾ ಬಳಿ ಶುಕ್ರವಾರ ಹಿಮಪಾತ ಸಂಭವಿಸಿದ್ದು, ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ ನಿರತರಾಗಿದ್ದ ಅನೇಕ ಕಾರ್ಮಿಕರು ಹಿಮಪಾತದಲ್ಲಿ ಸಿಲುಕಿದ್ದರು. ಈ ಹಿಮಪಾತದ ಭೀಕರ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. At least 57 BRO workers are missing after the deadly avalanche in Chamoli, Uttarakhand. Prayers for their safety. (Representative Video) pic.twitter.com/LNtbk65UKM — Baba Banaras™ (@RealBababanaras) February 28, 2025

ಉತ್ತರಾಖಂಡ: ಹಿಮಪಾತದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣೆಗೆ ಮುಂದುವರಿದ ಪ್ರಯತ್ನ

ಚಮೋಲಿ: ಉತ್ತರಾಖಂಡದ ಚಮೋಲಿಯಲ್ಲಿ ಹಿಮಪಾತ ಆತಂಕದ ಸನ್ನಿವೇಶ ಸೃಷ್ಟಿಸಿದೆ. ಚಮೋಲಿ ಜಿಲ್ಲೆಯ ಮಾನಾ ಬಳಿ ಶುಕ್ರವಾರ ಹಿಮಪಾತದಲ್ಲಿ 55 ಕಾರ್ಮಿಕರು ಸಿಲುಕಿದ್ದು ಹಲವರನ್ನು ರಕ್ಷಿಸಲಾಗಿದೆ. ಇನ್ನೂ 20ಕ್ಕೂ ಹೆಚ್ಚು ಮಂದಿ ಹಿಮದಡಿಯಲ್ಲಿ ಸಿಲುಕಿದ್ದಾರೆನ್ನಲಾಗಿದ್ದು ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಭೀಕರ ಹಿಮಪಾತ ಸಂಭವಿಸಿದೆ ಎನ್ನಲಾಗಿದೆ. ಮಾನಾದ ಗಡಿ ಪ್ರದೇಶದ ಗಡಿ ರಸ್ತೆ ಸಂಸ್ಥೆ ಶಿಬಿರದ ಬಳಿ ಭಾರೀ ಹಿಮಪಾತ ಸಂಭವಿಸಿದೆ. ಆ ಸ್ಥಳದಲ್ಲಿ ಕಾಮಗಾರಿಯಲ್ಲಿ ತೊಡಗಿದ್ದ 55ಕ್ಕೂ ಹೆಚ್ಚು ಕಾರ್ಮಿಕರು ಹಿಮಪಾತದಲ್ಲಿ ಸಿಲುಕಿದ್ದರು. ಕೆಶಿಪ್[ರ ಕಾರ್ಯಾಚರಣೆ ನಡೆಸಿದ ಪೊಲೀಸ್ ಹಾಗೂ ಸೇನಾ ತಂಡಗಳು 32 ಜನರನ್ನು ರಕ್ಷಿಸಿಸಿದ್ದಾರೆ. ಆದರೆ, ಇನ್ನೂ 23 ಕಾರ್ಮಿಕರು ಹಿಮದಡಿ ಸಿಲುಕಿದ್ದು, ಅವರನ್ನು ರಕ್ಷಿಸುವ ಪ್ರಯತ್ನ ಸಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. At least 57 BRO workers are missing after the deadly avalanche…

ಪಾಕಿಸ್ತಾನದ ಪೇಶಾವರದ ಮಸೀದಿ ಬಳಿ ಸ್ಫೋಟ: ಐವರ ಸಾವು

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಉಗ್ರರ ಅಟ್ಟಹಾಸ ಮುಂದುವರಿದಿದೆ. ಪಾಕಿಸ್ತಾನದ ಪೇಶಾವರ ಸಮೀಪ ಮಸೀದಿ ಬಳಿ ಬಾಂಬ್ ಸ್ಫೋಟ ಸಂಭವಿಸಿ ಐವರು ಸಾವನ್ನಪ್ಪಿದ್ದಾರೆ. ಪೇಶಾವರ ಸಮೀಪದ ಖೈಬರ್ ಪಖ್ತುಂಖ್ವಾದಲ್ಲಿರುವ ಮಸೀದಿ ಬಳಿ ಸಂಭವಿಸಿದ ಈ ಸ್ಫೋಟದಲ್ಲಿ 20 ಮಂದಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಿಂದ ಪಾಕಿಸ್ತಾನ ಕ್ರಿಕೆಟ್ ತಂಡ ಹೊರಬಿದ್ದ ಬೆನ್ನಲ್ಲೇ ಉಗ್ರರು ದಾಳಿನಡೆಸುವ ಎಚ್ಚರಿಕೆ ನೀಡಿದ್ದರು. ಅದರಂತೆಯೇ ಸ್ಫೋಟ ಸಂಭವಿಸಿದ್ದು ಪಾಕಿಸ್ತಾನಕ್ಕೆ ಈ ಘಟನೆ ಸವಾಲಾಗಿ ಪರಿಣಮಿಸಿದೆ.