ಚಮೋಲಿ: ಉತ್ತರಾಖಂಡದ ಚಮೋಲಿಯಲ್ಲಿ ಹಿಮಪಾತ ಆತಂಕದ ಸನ್ನಿವೇಶ ಸೃಷ್ಟಿಸಿದೆ. ಚಮೋಲಿ ಜಿಲ್ಲೆಯ ಮಾನಾ ಬಳಿ ಶುಕ್ರವಾರ ಹಿಮಪಾತ ಸಂಭವಿಸಿದ್ದು, ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ ನಿರತರಾಗಿದ್ದ ಅನೇಕ ಕಾರ್ಮಿಕರು ಹಿಮಪಾತದಲ್ಲಿ ಸಿಲುಕಿದ್ದರು. ಈ ಹಿಮಪಾತದ ಭೀಕರ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. At least 57 BRO workers are missing after the deadly avalanche in Chamoli, Uttarakhand. Prayers for their safety. (Representative Video) pic.twitter.com/LNtbk65UKM — Baba Banaras™ (@RealBababanaras) February 28, 2025
Month: March 2025
ಉತ್ತರಾಖಂಡ: ಹಿಮಪಾತದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣೆಗೆ ಮುಂದುವರಿದ ಪ್ರಯತ್ನ
ಚಮೋಲಿ: ಉತ್ತರಾಖಂಡದ ಚಮೋಲಿಯಲ್ಲಿ ಹಿಮಪಾತ ಆತಂಕದ ಸನ್ನಿವೇಶ ಸೃಷ್ಟಿಸಿದೆ. ಚಮೋಲಿ ಜಿಲ್ಲೆಯ ಮಾನಾ ಬಳಿ ಶುಕ್ರವಾರ ಹಿಮಪಾತದಲ್ಲಿ 55 ಕಾರ್ಮಿಕರು ಸಿಲುಕಿದ್ದು ಹಲವರನ್ನು ರಕ್ಷಿಸಲಾಗಿದೆ. ಇನ್ನೂ 20ಕ್ಕೂ ಹೆಚ್ಚು ಮಂದಿ ಹಿಮದಡಿಯಲ್ಲಿ ಸಿಲುಕಿದ್ದಾರೆನ್ನಲಾಗಿದ್ದು ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಭೀಕರ ಹಿಮಪಾತ ಸಂಭವಿಸಿದೆ ಎನ್ನಲಾಗಿದೆ. ಮಾನಾದ ಗಡಿ ಪ್ರದೇಶದ ಗಡಿ ರಸ್ತೆ ಸಂಸ್ಥೆ ಶಿಬಿರದ ಬಳಿ ಭಾರೀ ಹಿಮಪಾತ ಸಂಭವಿಸಿದೆ. ಆ ಸ್ಥಳದಲ್ಲಿ ಕಾಮಗಾರಿಯಲ್ಲಿ ತೊಡಗಿದ್ದ 55ಕ್ಕೂ ಹೆಚ್ಚು ಕಾರ್ಮಿಕರು ಹಿಮಪಾತದಲ್ಲಿ ಸಿಲುಕಿದ್ದರು. ಕೆಶಿಪ್[ರ ಕಾರ್ಯಾಚರಣೆ ನಡೆಸಿದ ಪೊಲೀಸ್ ಹಾಗೂ ಸೇನಾ ತಂಡಗಳು 32 ಜನರನ್ನು ರಕ್ಷಿಸಿಸಿದ್ದಾರೆ. ಆದರೆ, ಇನ್ನೂ 23 ಕಾರ್ಮಿಕರು ಹಿಮದಡಿ ಸಿಲುಕಿದ್ದು, ಅವರನ್ನು ರಕ್ಷಿಸುವ ಪ್ರಯತ್ನ ಸಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. At least 57 BRO workers are missing after the deadly avalanche…
ಪಾಕಿಸ್ತಾನದ ಪೇಶಾವರದ ಮಸೀದಿ ಬಳಿ ಸ್ಫೋಟ: ಐವರ ಸಾವು
ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಉಗ್ರರ ಅಟ್ಟಹಾಸ ಮುಂದುವರಿದಿದೆ. ಪಾಕಿಸ್ತಾನದ ಪೇಶಾವರ ಸಮೀಪ ಮಸೀದಿ ಬಳಿ ಬಾಂಬ್ ಸ್ಫೋಟ ಸಂಭವಿಸಿ ಐವರು ಸಾವನ್ನಪ್ಪಿದ್ದಾರೆ. ಪೇಶಾವರ ಸಮೀಪದ ಖೈಬರ್ ಪಖ್ತುಂಖ್ವಾದಲ್ಲಿರುವ ಮಸೀದಿ ಬಳಿ ಸಂಭವಿಸಿದ ಈ ಸ್ಫೋಟದಲ್ಲಿ 20 ಮಂದಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಿಂದ ಪಾಕಿಸ್ತಾನ ಕ್ರಿಕೆಟ್ ತಂಡ ಹೊರಬಿದ್ದ ಬೆನ್ನಲ್ಲೇ ಉಗ್ರರು ದಾಳಿನಡೆಸುವ ಎಚ್ಚರಿಕೆ ನೀಡಿದ್ದರು. ಅದರಂತೆಯೇ ಸ್ಫೋಟ ಸಂಭವಿಸಿದ್ದು ಪಾಕಿಸ್ತಾನಕ್ಕೆ ಈ ಘಟನೆ ಸವಾಲಾಗಿ ಪರಿಣಮಿಸಿದೆ.
