ಯತ್ನಾಳ್ ಉಚ್ಚಾಟನೆ: ‘ವರಿಷ್ಠರ ನಿರ್ಧಾರವನ್ನು ಸಂಭ್ರಮಿಸಬೇಡಿ’

ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಿರುವ ಪಕ್ಷದ ವರಿಷ್ಠರ ನಿರ್ಧಾರವನ್ನು ಸಂಭ್ರಮಿಸಬೇಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿ.ವೈ.ವಿಜಯೇಂದ್ರ ತಮ್ಮ ಬೆಂಬಲಿಗರಿಗೆ ಕರೆ ನೀಡಿದ್ದಾರೆ. ಯಡಿಯೂರಪ್ಪ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ಯತ್ನಾಳ್ ಅವರನ್ನು ಬುಧವಾರ ಬಿಜೆಪಿ ಹೈಕಮಾಂಡ್ ಪಕ್ಷದಿಂದ ಉಚ್ಚಾಟನೆ ಮಾಡಿದೆ. ಆ ಸುದ್ದಿ ಹರಡುತ್ತಿದ್ದಂತೆಯೇ ವಿಜಯೇಂದ್ರ ಬೆಂಬಲಿಗರು ಹಲವೆಡೆ ಸಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದ್ದರು. ಈ ಬೆಳವಣಿಗೆ ಬಗ್ಗೆ ವಿಜಯೇಂದ್ರ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿರುವ ಬಿ.ವೈ.ವಿಜಯೇಂದ್ರ, ‘ಭಾರತೀಯ ಜನತಾ ಪಾರ್ಟಿ ಉದಾತ್ತ ಉದ್ದೇಶ ಹಾಗೂ ಗುರಿಯನ್ನಿಟ್ಟುಕೊಂಡು ಯೋಜಿತವಾಗಿ ಬೆಳೆದು ಕೋಟ್ಯಂತರ ಸಮರ್ಪಣಾ ಕಾರ್ಯಕರ್ತರನ್ನು ದೇಶ ಕಟ್ಟುವ ಬದ್ಧತೆಗಾಗಿ ಸಜ್ಜುಗೊಳಿಸಿದ ಪಕ್ಷ, ಅಶಿಸ್ತಿನ ವಿರುದ್ಧ ಇಂದು ಪಕ್ಷದ ವರಿಷ್ಠರು ಕೈಗೊಂಡಿರುವ ನಿರ್ಧಾರವನ್ನು ಸಂಭ್ರಮಿಸಬಾರದೆಂದು ವಿನಂತಿಸುತ್ತೇನೆ’ ಎಂದಿದ್ದಾರೆ. ‘ಸಂಸ್ಕಾರವಂತ ಹಾಗೂ ಶಿಸ್ತುಬದ್ಧ ಸಂಘಟನೆಯ ವ್ಯವಸ್ಥೆಯಲ್ಲಿರುವ ನಾವು…

ರಾಮ್ ಚರಣ್ ಹೊಸ ಸಿನಿಮಾ ‘ಪೆಡ್ಡಿ’ ಟೈಟಲ್ ರಿವೀಲ್

ನಟ ರಾಮ್ ಚರಣ್ ಅವರ ಹೊಸ ಸಿನಿಮಾದ ಟೈಟಲ್ ರಿವೀಲ್ ಆಗಿದೆ. ಈವರೆಗೂ ‘RC16’ ಎನ್ನುವ ತಾತ್ಕಾಲಿಕ ಹೆಸರನ್ನು ಇಡಲಾಗಿತ್ತು. ಇದೀಗ (ಮಾರ್ಚ್​ 27) ರಾಮ್ ಚರಣ್ ಅವರ ಜನ್ಮದಿನದಂದು ಈ ಸಿನಿಮಾದ ಟೈಟಲ್ ಬಿಡುಗಡೆ ಮಾಡಲಾಗಿದೆ. ಚಿತ್ರಕ್ಕೆ ‘ಪೆಡ್ಡಿ’ ಎನ್ನುವ ಟೈಟಲ್ ಬಿಡುಗಡೆಯಾಗಿದೆ. ಈ ಸಿನಿಮಾವನ್ನು ಬುಚಿ ಬಾಬು ಸನಾ ನಿರ್ದೇಶಿಸಲಿದ್ದಾರೆ.  

ಯತ್ನಾಳ್‌ ಉಚ್ಛಾಟನೆಯ ಪ್ರತಿಧ್ವನಿ; ಬಿಜೆಪಿ ತೊರೆಯಲು ಪಂಚಮಸಾಲಿ ನಾಯಕರಿಗೆ ಸ್ವಾಮೀಜಿ ಕರೆ

ಧಾರವಾಡ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿರುವ ಹೈಕಮಾಂಡ್ ನಿರ್ಧಾರದ ವಿರುದ್ಧ ಪಂಚಮಸಾಲಿ ಸಮಾಜ ಸಿಡಿದೆದ್ದಿದೆ. ಯತ್ನಾಳ್ ಅವರ ಉಚ್ಚಾಟನೆ ಖಂಡಿಸಿ ಎಲ್ಲಾ ಲಿಂಗಾಯತ ಶಾಸಕರು ಬಿಜೆಪಿ ಬಿಟ್ಟು ಹೊರಬನ್ನಿ ಎಂದು ಕೂಡಲ ಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದ್ದಾರೆ. ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಿರುವ ಬಗ್ಗೆ ಧಾರವಾಡದಲ್ಲಿ ಪ್ರತಿಕ್ರಿಯಿಸಿರುವ ಶ್ರೀಗಳು, ಯತ್ನಾಳ್ ಉಚ್ಛಾಟನೆಗೆ ಬಿ.ಎಸ್‌.ಯಡಿಯೂರಪ್ಪ ಮತ್ತವರ ಕುಟುಂಬವೇ ಕಾರಣ ಎಂದು ದೂರಿದರು. ಯತ್ನಾಳ್‌ ಎಂದಿಗೂ ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ. ಕಾಣದ ಕೈಗಳು ಅವರನ್ನು ಉಚ್ಛಾಟನೆ ಮಾಡುವಂತೆ ಮಾಡಿವೆ. ಕುಟುಂಬ ರಾಜಕಾರಣ ಬೇಡ ಎನ್ನುವುದು ತಪ್ಪೇ? ಯತ್ನಾಳ್‌ ಏನೇ ಮಾತನಾಡಿದರೂ ಅವರು ಉತ್ತರ ಕರ್ನಾಟಕ, ಹಿಂದುತ್ವದ ಬಗ್ಗೆಯೇ ಮಾತನಾಡಿದ್ದಾರೆ ಎಂದು ತಮ್ಮ ಸಮೈದಾಯದ ಶಾಸಕನ ಬೆನ್ನಿಗೆ ನಿಂತಿರುವ ಶ್ರೀಗಳು, ಯತ್ನಾಳ್ ಉಚ್ಛಾಟನೆ ಆದೇಶವನ್ನು ಹೈಕಮಾಂಡ್ ವಾಪಸ್ ಪಡೆಯಬೇಕು.…

“ಸತ್ಯವಂತರಿಗಿದು ಕಾಲವಲ್ಲ, ದುಷ್ಟಜನರಿಗೆ ಸುಭಿಕ್ಷಕಾಲ”: ವರಿಷ್ಠರ ನಿರ್ಧಾರಕ್ಕೆ ಯತ್ನಾಳ್ ಬೇಸರ

ಬೆಂಗಳೂರು: ತಮ್ಮನ್ನು ಬಿಜೆಪಿಯಿಂದ ಉಚ್ಚಾಟಿಸಿರುವ ಹೈಕಮಾಂಡ್ ನಿರ್ಧಾರದ ಬಗ್ಗೆ ಶಾಸಕ ಯತ್ನಾಳ್ ತಮ್ಮದೇ ದಾಟಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ‘ಸತ್ಯವಂತರಿಗಿದು ಕಾಲವಲ್ಲ, ದುಷ್ಟಜನರಿಗೆ ಸುಭಿಕ್ಷಕಾಲ’ ಎಂದವರು ಹೇಳಿದ್ದಾರೆ. ‘ವಂಶಪಾರಂಪರ್ಯ ರಾಜಕೀಯ, ಭ್ರಷ್ಟಾಚಾರ, ಪಕ್ಷದೊಳಗಿನ ಸುಧಾರಣೆಗಳ ವಿರುದ್ಧ ಮಾತನಾಡಿದ್ದಕ್ಕಾಗಿ, ಏಕವ್ಯಕ್ತಿ ದಬ್ಬಾಳಿಕೆಯನ್ನು ತೆಗೆದುಹಾಕಿ ಮತ್ತು ಉತ್ತರ ಕರ್ನಾಟಕವನ್ನು ಅಭಿವೃದ್ಧಿಪಡಿಸಲು ವಿನಂತಿಸಿದ್ದಕ್ಕಾಗಿ ಪಕ್ಷವು ನನ್ನನ್ನು 6 ವರ್ಷಗಳ ಕಾಲ ಪಕ್ಷದಿಂದ ಹೊರಹಾಕಿದೆ’ ಎಂದವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‘Calling a Spade, a Spade’ ಎಂಬುದಕ್ಕೆ ಪಕ್ಷವು ನನಗೆ ಬಹುಮಾನ ನೀಡಿದೆ ಎಂದವರು ಮಾರ್ಮಿಕವಾಗಿ ಪ್ರತಿಕ್ರಿಯಿಸಿದ್ದಾರೆ. ‘ಕೆಲವು ಸ್ಥಾಪಿತ ಹಿತಾಸಕ್ತಿಗಳು ತಮ್ಮ ಕಾರ್ಯಸೂಚಿಯನ್ನು ಯಶಸ್ವಿಯಾಗಿ ಮುಂದುವರಿಸುವಲ್ಲಿ ತಮ್ಮ ಪಾತ್ರವನ್ನು ವಹಿಸಿವೆ ಎಂದಿರುವ ಯತ್ನಾಳ್, ಭ್ರಷ್ಟಾಚಾರ, ಕುಟುಂಬ ರಾಜಕೀಯ, ಉತ್ತರ ಕರ್ನಾಟಕದ ಅಭಿವೃದ್ಧಿ ಮತ್ತು ಹಿಂದುತ್ವದ ವಿರುದ್ಧದ ನನ್ನ ಹೋರಾಟವನ್ನು ನನ್ನನ್ನು ಅಮಾನತುಗೊಳಿಸುವ ನಿರ್ಧಾರವು ತಡೆಯುವುದಿಲ್ಲ. ನಾನು ಅದೇ ಹುರುಪು ಮತ್ತು ದೃಢತೆಯಿಂದ ನನ್ನ ಜನರಿಗೆ…

ಯತ್ನಾಳ್ ಉಚ್ಚಾಟನೆ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರಿಗೆ ವಿಜಯೇಂದ್ರ ರವಾನಿಸಿದ ಸಂದೇಶ

ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಿದ ಬೆನ್ನಲ್ಲೇ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೀಡಿರುವ ಪ್ರತಿಕ್ರಿಯೆ ಗಮನಸೆಳೆದಿದೆ. ಪಕ್ಷದ ಕಾರ್ಯಕರ್ತರಿಗೆ ಅವರು ರವಾನಿಸಿರುವ ಸಂದೇಶ ಕೂಡಾ ಕುತೂಹಲದ ಕೇಂದ್ರಬಿಂದುವಾಗಿದೆ. ಭಾರತೀಯ ಜನತಾ ಪಾರ್ಟಿ, ಲಕ್ಷಾಂತರ ಕಾರ್ಯಕರ್ತರನ್ನು ಹೊಂದುವ ಮೂಲಕ ವಿಶ್ವದಲ್ಲಿ ಅಗ್ರಮಾನ್ಯತೆ ಪಡೆದಿರುವ ರಾಜಕೀಯ ಪಕ್ಷ, ಸಂಘ ಸಂಸ್ಕಾರ ಪಡೆದಿರುವ ಸಮರ್ಪಣಾ ಮನೋಭಾವದ ಕಾರ್ಯಕರ್ತರ ಬೆವರ ಪರಿಶ್ರಮದಿಂದ ಸಮೃದ್ಧ ವೃಕ್ಷದಂತೆ ಬೆಳೆದಿರುವ ಪಕ್ಷದಲ್ಲಿ ಶಿಸ್ತು-ತ್ಯಾಗಕ್ಕೆ ಮೊದಲ ಆದ್ಯತೆ ಎಂದು ವಿಜಯೇಂದ್ರ ಪ್ರತಿಪಾದಿಸಿದ್ದಾರೆ. ಪಕ್ಷದ ಹಿರಿಯರು ಹಾಗೂ ವರಿಷ್ಠರು ಈ ವಿಷಯದಲ್ಲಿ ಎಂದಿಗೂ ರಾಜಿ ಮಾಡಿಕೊಂಡಿರುವ ಉದಾಹರಣೆ ನಮ್ಮ ಮುಂದಿಲ್ಲ, ಸದ್ಯ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧದ ಶಿಸ್ತುಕ್ರಮವು ವರಿಷ್ಠರು ಸುದೀರ್ಘ ಅವಧಿಯಿಂದ ಸ್ಥಿತಿ-ಗತಿಗಳನ್ನು ಅವಲೋಕಿಸಿ ಅನಿವಾರ್ಯವಾಗಿ ತೆಗೆದುಕೊಂಡಿರುವ ಕ್ರಮವಾಗಿದೆ. ಪಕ್ಷದ ಬೆಳವಣಿಗೆಯಲ್ಲಿನ ಕಹಿ ಘಟನೆಗಳನ್ನು ಉಲ್ಲೇಖಿಸಿ ಪಕ್ಷದ ವರಿಷ್ಠರಿಗೆ ನಾನು ಎಂದೂ ದೂರುಗಳನ್ನು…

₹900ರ ಸ್ಮಾರ್ಟ್ ಮೀಟರ್‌ಗಳಿಗೆ ₹8510 ಫಿಕ್ಸ್; ಮತ್ತೊಂದು ಭಾರೀ ಭ್ರಷ್ಟಾಚಾರ ಬಯಲು

ಬೆಂಗಳೂರು: ಸ್ಮಾರ್ಟ್ ಮೀಟರ್‌ ಹೆಸರಲ್ಲಿ ರಾಜ್ಯದ ಜನರನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಲೂಟಿ ಹೊಡೆಯುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಬೇರೆ ರಾಜ್ಯಗಳಲ್ಲಿ ಕೇವಲ ₹900ಕ್ಕೆ ಸಿಗುವ ಸ್ಮಾರ್ಟ್ ಮೀಟರ್‌ಗಳಿಗೆ ರಾಜ್ಯದಲ್ಲಿ ₹8510 ಫಿಕ್ಸ್ ಮಾಡಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಬೆಸ್ಕಾಂ ಮತ್ತು ಇತರ ಎಸ್ಕಾಂಗಳ ಸ್ಮಾರ್ಟ್ ಮೀಟರ್‌ ಟೆಂಡರ್‌ನಲ್ಲಿ ಸುಮಾರು ರೂ. 15,568 ಕೋಟಿ ಬೃಹತ್ ಮೊತ್ತದ ಅವ್ಯವಹಾರ ನಡೆದಿದೆ. ಸೆಂಟ್ರಲ್ ಎಲೆಕ್ಟ್ರಿಸಿಟಿ ಅಥಾರಿಟಿ ನಿಯಮಾವಳಿ ಪ್ರಕಾರವೂ ಸ್ಮಾರ್ಟ್ ಮೀಟರ್ ಕಡ್ಡಾಯವಲ್ಲ. ಕೆಇಆರ್‌ಸಿ ನಿಯಮಾವಳಿಗಳಲ್ಲಿ ಸ್ಮಾರ್ಟ್ ಮೀಟರ್ ಕಡ್ಡಾಯ ಎಂದು ಎಲ್ಲೂ ಹೇಳಿಲ್ಲ. ಆದರೂ ಭ್ರಷ್ಟ ಸಿದ್ದರಾಮಯ್ಯ ಸರ್ಕಾರ ರಾಜ್ಯದ ಜನತೆಯ ಮೇಲೆ ಸ್ಮಾರ್ಟ್ ಮೀಟರ್ ಹೊರೆ ಏರಿಸಿದೆ ಎಂದು ಪ್ರತಿಪಕ್ಷ ಬಿಜೆಪಿ ದೂರಿದೆ. ಕೆಟಿಪಿಪಿ ಕಾಯ್ದೆ ಪ್ರಕಾರ ಬಿಡ್ ಪಡೆಯುವ ಕಂಪನಿ ವ್ಯವಹಾರ ರೂ.1,920 ಕೋಟಿ ಇರಬೇಕು. ಆದರೆ, ಟೆಂಡರ್‌ನಲ್ಲಿ ಕೇವಲ ರೂ.107 ಕೋಟಿ ನಮೂದಿಸಲಾಗಿದೆ.…

ಅಕ್ರಮ ನಿರ್ಮಾಣಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶ ಪಾಲಿಕೆಗೆ

ಬೆಂಗಳೂರು: ರಾಜಧಾನಿ ಬೆಂಗಳೂರು ನಗರದ ಸುಮಾರು 7 ಲಕ್ಷ ಮನೆಗಳು ತೆರಿಗೆ ಕಟ್ಟಿರಲಿಲ್ಲ, ಇವುಗಳಲ್ಲಿ 1 ಲಕ್ಷ ಮನೆಗಳು ತೆರಿಗೆ ವ್ಯಾಪ್ತಿಗೆ ಬಂದಿದ್ದು, ಇನ್ನೂ 6 ಲಕ್ಷ ಮನೆಗಳನ್ನು ತೆರಿಗೆ ವ್ಯಾಪ್ತಿಗೆ ತರಬೇಕಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಆದ ಕಾರಣ ಒಂದು ಬಾರಿ ಪಾವತಿಗೆ ಅವಕಾಶ (ಓಟಿಎಸ್) ಮಾಡಿಕೊಡಲಾಯಿತು ಎಂದವರು ತಿಳಿಸಿದ್ದಾರೆ. ಬೆಂಗಳೂರು ನಗರದ ಸುಮಾರು 7 ಲಕ್ಷ ಮನೆಗಳು ತೆರಿಗೆ ಕಟ್ಟಿರಲಿಲ್ಲ, ಇವುಗಳಲ್ಲಿ 1 ಲಕ್ಷ ಮನೆಗಳು ತೆರಿಗೆ ವ್ಯಾಪ್ತಿಗೆ ಬಂದಿದ್ದು, ಇನ್ನೂ 6 ಲಕ್ಷ ಮನೆಗಳನ್ನು ತೆರಿಗೆ ವ್ಯಾಪ್ತಿಗೆ ತರಬೇಕಿದೆ. ಆದ ಕಾರಣ ಒಂದು ಬಾರಿ ಪಾವತಿಗೆ ಅವಕಾಶ (ಓಟಿಎಸ್) ಮಾಡಿಕೊಡಲಾಯಿತು. ಅಕ್ರಮ ನಿರ್ಮಾಣಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶ ಪಾಲಿಕೆಗೆ… pic.twitter.com/EMoxcPj2se — Karnataka Congress (@INCKarnataka) March 26, 2025 ಅಕ್ರಮ ನಿರ್ಮಾಣಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶ ಪಾಲಿಕೆಗೆ ಇರಲಿಲ್ಲ. ಕಳೆದ…

ಬಡವರ ಅನ್ನಕ್ಕೆ ಕನ್ನ: ಅನ್ನಭಾಗ್ಯ ಅಕ್ಕಿ ಅಕ್ರಮ ಮಾರಾಟ ಜಾಲ ಪತ್ತೆ

ಹುಬ್ಬಳ್ಳಿ: ಬಡವರ ಅನ್ನಕ್ಕೆ ಕನ್ನ ಹಾಕುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇವೆ. ಹುಬ್ಬಳ್ಳಿಯಯಲ್ಲಿ ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದಅಡ್ಡೆಗೆ ಆಹಾರ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ಮಾಡಿ ಭಾರೀ ಅಕ್ರಮವನ್ನು ಪತ್ತೆ ಮಾಡಿದ್ದಾರೆ. ಹಳೇ ಹುಬ್ಬಳ್ಳಿ ಮಾರುಕಟ್ಟೆಯಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಅಧಿಕಾರಿಗಳು ಸುಮಾರು 500 ಕ್ವಿಂಟಾಲ್​ ಅಕ್ಕಿ ಜಪ್ತಿ ಮಾಡಿದ್ದಾರೆ. ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಖರೀದಿಸಿ, ಟಾಟಾ ಏಸ್ ವಾಹನದಲ್ಲಿ ಲೋಡ್​ ಮಾಡುತ್ತಿದ್ದ ವೇಳೆ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ. ಅದಾಗಲೇ ಆರೋಪಿಗಳು ವಾಹನ ಬಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಫ್ರಾನ್ಸ್ ನಲ್ಲಿ ಏರ್ ಶೋ ವೇಳೆ ಭೀಕರ ದುರಂತ: ಬಾನಂಗಳದಲ್ಲಿ ವಿಮಾನಗಳ ಡಿಕ್ಕಿ

ಪ್ಯಾರಿಸ್: ಫ್ರಾನ್ಸ್ ನಲ್ಲಿ ಏರ್ ಶೋ ವೇಳೆ ಭೀಕರ ವಿಮಾನ ದುರಂತ ಸಂಭವಿಸಿದೆ. ಏರ್ ಶೋ ವೇಳೆ ಮಂಗಳವಾರ ಎರಡು ವಿಮಾನಗಳು ಢಿಕ್ಕಿಯಾಗಿ ಮೂವರು ಗಾಯಗೊಂಡಿದ್ದಾರೆ. 🇫🇷 Two Jets collided at an airshow in France today. Another plane crashed this week at an Air Show in South Africa. Too many coincidences involving planes now. pic.twitter.com/xlJgtadlCj — Concerned Citizen (@BGatesIsaPyscho) March 25, 2025 ಫ್ರಾನ್ಸ್‌ನ ಈಶಾನ್ಯ ವಾಯುನೆಲೆಯಲ್ಲಿ ಫ್ರೆಂಚ್ ವಾಯುಪಡೆಯ ಎರಡು ವಿಮಾನಗಳು ಬಾನಂಗಳದಲ್ಲಿ ಢಿಕ್ಕಿ ಹೊಡೆದಿವೆ. ಆಲ್ಫಾ ಜೆಟ್ ವಿಮಾನಗಳು ಡಿಕ್ಕಿ ಹೊಡೆಡಿದ್ದು, ಬೆಂಕಿ ಕಾಣಿಸಿಕೊಂಡಿತು. ಈ ದುರ್ಘಟನೆಯಲ್ಲಿ ಗಾಯಗೊಂಡಿರುವ ಮೂವರು ಪೈಲೆಟ್’ಗಳು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಯುಗಾದಿ ಹಬ್ಬದ ಪ್ರಯುಕ್ತ KSRTCಯಿಂದ 2000 ಹೆಚ್ಚುವರಿ ಬಸ್ಸುಗಳು..

ಬೆಂಗಳೂರು: ಯುಗಾದಿ, ರಂಜಾನ್ ಸಹಿತ ಸಾಲು ಸಾಲು ರಜೆಗಳ ಹಿನ್ನೆಲೆಯಲ್ಲಿ ಊರಿಗೆ ತೆರಳಲು ಬಸ್ಸುಗಳಲ್ಲಿ ಸೀಟು ಸಿಗದೇ ಜನ ಪರದಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) 2000 ಹೆಚ್ಚುವರಿ ಬಸ್ಸುಗಳನ್ನು ರಸ್ತೆಗಿಸಿದೆ. 31.03.2025ರಂದು ರಂಜಾನ್ ಹಬ್ಬವಿರುವುದರಿಂದ KSRTC ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ 28.03.2025 to 30.03.2025ವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧೆಡೆಗೆ 2000 ಹೆಚ್ಚುವರಿ ವಾಹನಗಳ ವಿಶೇಷ ವ್ಯವಸ್ಥೆ ಮಾಡಿದೆ. ಈ ಬಗ್ಗೆ ನಿಗಮದ ಪ್ರಕಟಣೆ ತಿಳಿಸಿದೆ. ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ 31.03.2025ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು. ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ,…