‘BJP ಅವಧಿಯಲ್ಲಿ 17 ಶಾಸಕರು ಸ್ಟೇ ತಂದಿದ್ದರು’: ಹನಿಟ್ರ್ಯಾಪ್ ಬಗ್ಗೆ ಪ್ರಿಯಾಂಕ್ ಖರ್ಗೆ ಕಿಡಿ

ಬೆಂಗಳೂರು: ಹನಿಟ್ರ್ಯಾಪ್ ವಿಚಾರ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿದೆ. ಈ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ವಾಗ್ಯುದ್ಧವೇ ನಡೆದಿದೆ. ಈ ನಡುವೆ ಹನಿಟ್ರ್ಯಾಪ್ ಕುರಿತಂತೆ ಆಡಳಿತಾರೂಢ ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೇಗ್ವೆದುಕೊಂಡಿರುವ ಬಿಜೆಪಿ ನಾಯಕರು ವಿಧಾನ ಸಭೆ ಹಾಗೂ ವಿಧಾನ ಪರಿಷತ್ತುಗಳಲ್ಲಿ ಗದ್ದಲ ಎಬ್ಬಿಸಿವೆ. ಹನಿಟ್ರ್ಯಾಪ್ ಪ್ರಕರಣ ಬಗ್ಗೆ ಸಿಬಿಐ ತನಿಖೆಗೆ ವಹಿಸಬೇಕು ಹಾಗೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ. ಬಿಜೆಪಿ ಆಡಳಿತಾವಧಿಯಲ್ಲಿ 17 ಶಾಸಕರು ನ್ಯಾಯಾಲಯದಿಂದ ಸ್ಟೇ ತಂದಿದ್ದರು. ಇದರ ಬಗ್ಗೆ ಅಂದು ಚರ್ಚೆಗೆ ಅವಕಾಶವನ್ನೇ ನೀಡಲಿಲ್ಲ. ಹಾಗಿದ್ದರೆ ಇಂದು ಈ ವಿಷಯದಲ್ಲಿ ಚರ್ಚೆಯ ಅವಶ್ಯಕತೆ ಇದೆಯೇ? ಬಿಜೆಪಿಯವರಿಗೆ ಅಂದು ಇಲ್ಲದ ನೈತಿಕತೆಯ ಪ್ರಶ್ನೆ ಇಂದು ಹೇಗೆ ಹುಟ್ಟಿಕೊಂಡಿತು? – @PriyankKharge pic.twitter.com/H4QfxdojoM — Karnataka Congress (@INCKarnataka) March 21, 2025 ಬಿಜೆಪಿಯವರ ನಡೆಗೆ…

ಅಂದು ‘200 ಯೂನಿಟ್‌ ವಿದ್ಯುತ್ ಫ್ರೀ ಫ್ರೀ’ ಎಂದಿದ್ದ ಕಾಂಗ್ರೆಸ್, ಇದೀಗ ಜನತೆಗೆ ಶಾಕ್..!

ಬೆಂಗಳೂರು: ಚುನಾವಣೆಗೂ ಮುನ್ನ ಪ್ರತಿ ಮನೆಗೆ 200 ಯೂನಿಟ್‌ ವಿದ್ಯುತ್ ಫ್ರೀ ಫ್ರೀ ಎಂದ ಕಾಂಗ್ರೆಸ್ ಪಕ್ಷ ಇದೀಗ ಮತ್ತೊಮ್ಮೆ ಪ್ರತಿ ಯೂನಿಟ್‌ಗೆ 36 ಪೈಸೆ ವಿದ್ಯುತ್‌ ದರ ಏರಿಕೆ ಮಾಡುತ್ತಿದೆ ಎಂದು ಬಿಜೆಪಿ ಗೇಲಿಮಾಡಿದೆ. ಇತ್ತೀಚೆಗಷ್ಟೇ ನಮ್ಮ ಮೆಟ್ರೋ ದರ ಏರಿಕೆ ಮಾಡಲಾಗಿತ್ತು. ಅದಕ್ಕೂ ಮುನ್ನ ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರವೂ ಹೆಚ್ಚಿಸಲಾಗಿತ್ತು. ಕೆಲವು ದಿನಗಳ ಹಿಂದಷ್ಟೇ ಆಟೋ ದರ ಏರಿಕೆಗೂ ಸರ್ಕಾರ ಸಮ್ಮತಿ ನೀಡಿತ್ತು. ಬಳಿಕ ವಿದ್ಯುತ್ ಮೀಟರ್ ದರವನ್ನೇ 800% ಏರಿಕೆ ಮಾಡಿ ಜನತೆಗೆ ಶಾಕ್ ನೀಡಿತ್ತು. ಇದೀಗ ಮತ್ತೊಮ್ಮೆ ವಿದ್ಯುತ್ ದರ ಹೆಚ್ಚಳ ಆದೇಶ ಹೊರಡಿಸಲಾಗಿದ್ದು, ಜನ ಸಾಮಾನ್ಯರಿಗೆ ಬೆಲೆ ಏರಿಕೆಯ ಬರೆ ಎಳೆದಂತಾಗಿದೆ. ಬೆಲೆ ಏರಿಕೆಯೇ ಕಾಂಗ್ರೆಸ್ಸಿನ 6ನೇ ಗ್ಯಾರಂಟಿ‌ಯಾಗಿದೆ ಎಂದು ಬಿಜೆಪಿ ಟ್ವೀಟ್ ಮಾಡಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಿತ್ಯ ಲೂಟಿಗೆ ನಿಂತು ಜನಸಾಮಾನ್ಯರ ಬದುಕನ್ನು ದುರ್ಬಲಗೊಳಿಸುತ್ತಿದೆ.…

ಅನಾಚಾರದ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ಬಿಜೆಪಿ ಶಾಸಕರ ಅಮಾನತು: ಬಿಜೆಪಿ ಆಕ್ರೋಶ

ಬೆಂಗಳೂರು: ಅನಾಚಾರದ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ಬಿಜೆಪಿಯ 18 ಮಂದಿ ಶಾಸಕರನ್ನು ವಿಧಾನಸಭೆಯಿಂದ ಅಮಾನತು ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಅನಾಚಾರದ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ಬಿಜೆಪಿಯ 18 ಮಂದಿ ಶಾಸಕರನ್ನು ವಿಧಾನಸಭೆಯಿಂದ ಅಮಾನತು ಮಾಡಲಾಗಿದ್ದು, ರಾಜ್ಯ ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ಆರ್.ಅಶೋಕ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪರಿಶಿಷ್ಟ ಸಮುದಾಯದ ಹಿರಿಯ ಸಚಿವರೊಬ್ಬರು ನನಗೆ ರಕ್ಷಣೆ ಕೊಡಿ ಎಂದು ಸದನದಲ್ಲಿ ಮನವಿ ಮಾಡಿದರೂ ನಿರ್ಲಕ್ಷ್ಯ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ ಸರ್ಕಾರ, ಯಾರ ಒತ್ತಡದಲ್ಲಿದೆ? ಯಾರ ಒತ್ತಡಕ್ಕೆ ಮಣಿದು ತನಿಖೆಗೆ ಆದೇಶ ಮಾಡಲು ಮೀನಾಮೇಷ ಎಣಿಸುತ್ತಿದೆ? ಎಂದು ಅಶೋಕ್ ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಪೋಸ್ಟ್’ನಲ್ಲಿ ಪ್ರಶ್ನೆ ಮಾಡಿದ್ದಾರೆ. ರಾಜ್ಯದ ಒಬ್ಬ ಹಿರಿಯ ಶಾಸಕರು, ಹಾಲಿ ಸಚಿವರಿಗೇ ರಕ್ಷಣೆ ಇಲ್ಲದಮೇಲೆ, ಇನ್ನು ನಾಡಿನ ಜನಸಾಮಾನ್ಯರ ಕಥೆ ಏನು? ಇದನ್ನು ಪ್ರಶ್ನೆ ಮಾಡುವುದು…

‘ಹನಿಟ್ರ್ಯಾಪ್ ಸರ್ಕಾರ’ ಎಂದ ಪ್ರತಿಪಕ್ಷ: 18 ಶಾಸಕರ ಅಮಾನತು

ಬೆಂಗಳೂರು: ವಿಧಾಸಭೆಯ ಕಲಾಪಗಳಲ್ಲಿ ಹನಿಟ್ರ್ಯಾಪ್ ಸಡ್ಡು ಪ್ರತಿಧ್ವನಿಸಿದ್ದು, ಗದ್ದಲ ಕೋಲಾಹಲ ಎಬ್ಬಿಸಿದ ಆರೋಪದಲ್ಲಿ ಬಿಜೆಪಿಯ 18 ಶಾಸಕರನ್ನು ವಿಧಾನಸಭಾಧ್ಯಕ್ಷರು ಅಮಾನತು ಮಾಡಿದ್ದಾರೆ. ವಿಧಾನಸಭೆಯಲ್ಲಿ ಸ್ಪೀಕರ್ ಹುದ್ದೆಗೆ ಅಗೌರವ ತೋರಿದ ಆರೋಪ ಅಸಂಬಂಧ ಈ ಬಿಜೆಪಿ ಶಾಸಕರನ್ನು 6 ತಿಂಗಳವರೆಗೂ ಕಲಾಪದಿಂದ ಸ್ಪೀಕರ್ ಯುಟಿ ಖಾದರ್ ಅಮಾನತು ಮಾಡಿದ್ದಾರೆ. ಶುಕ್ರವಾರದ ವಿಧಾನಸಭಾ ಕಲಾಪದಲ್ಲಿ ತೀವ್ರ ಕೋಲಾಹಲ ಉಂಟಾಯಿತು. ಮಸೂದೆಗಳನ್ನು ಮತಕ್ಕೆ ಹಾಕುವ ಸಂದರ್ಭದಲ್ಲಿ ಪ್ರತಿಪಕ್ಷಗಳು ‘ಹನಿಟ್ರ್ಯಾಪ್ ಸರ್ಕಾರ’ ಎಂದು ಘೋಷಣೆ ಕೂಗಿ ಪ್ರತಿಭಟಿಸಿದವು. ಈ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರಾದ ಡಾ. ಅಶ್ವತ್ಥ್ ನಾರಾಯಣ, ಎಸ್ಆರ್ ವಿಶ್ವನಾಥ್, ಮುನಿರತ್ನ, ಧೀರಜ್ ಮುನಿರತ್ನ, ಭೈರತಿ ಬಸವರಾಜ, ಡಾ. ಶೈಲೇಂದ್ರ ಬೆಲ್ದಾಳೆ, ಬಿಪಿ ಹರೀಶ್, ಡಾ. ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ಯಶಪಾಲ್ ಸುವರ್ಣ, ಚಂದ್ರು ಲಮಾಣಿ, ರಾಮಮೂರ್ತಿ, ದೊಡ್ಡನಗೌಡ ಪಾಟೀಲ್, ಬಿ. ಸುರೇಶ್ ಗೌಡ, ಶರಣು ಸಲಗರ, ಚನ್ನಬಸಪ್ಪ, ಬಸವರಾಜ ಮತ್ತಿಮೂಡ…

ದೇಶದ ಎಲ್ಲಾ ರಾಜ್ಯ ರಾಧಾನಿಗಳಲ್ಲೂ ತಿರುಮಲದ ವೆಂಕಟೇಶ್ವರ ದೇಗುಲ: ಆಂಧ್ರ ಸರ್ಕಾರ ನಿರ್ಧಾರ

ತಿರುಮಲ: ದಕ್ಷಿಣ ಭಾರತದ ಪುಣ್ಯಕ್ಷೇತ್ರ ತಿರುಪತಿ ದೇವಾಲಯದಲ್ಲಿ ಹಿಂದೂಗಳನ್ನು ಮಾತ್ರ ಕೆಲಸಕ್ಕೆ ನೇಮಿಸಿಕೊಳ್ಳುವ ಸಂಬಂಧ ಆಂಧ್ರಪ್ರದೇಶ ಸರ್ಕಾರ ತೀರ್ಮಾನ ಕೈಗೊಂಡಿದೆ. ಈ ಕುರಿತಂತೆ ಶುಕ್ರವಾರ ಮಾಹಿತಿ ಹಂಚಿಕೊಂಡಿರುವ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ತಿರುಮಲದ ವೆಂಕಟೇಶ್ವರ ದೇವಾಲಯದಲ್ಲಿ ಹಿಂದೂಗಳನ್ನು ಮಾತ್ರ ಕೆಲಸಕ್ಕೆ ನೇಮಿಸಿಕೊಳ್ಳಲಾಗುತ್ತದೆ ಎಂದು ತಿಳಿಸಿದರು. ಪ್ರಸಕ್ತ ಇತರ ಸಮುದಾಯದ ವ್ಯಕ್ತಿಗಳೂ ಸೇವೆ ಸಲ್ಲಿಸುತ್ತಿದ್ದು ಅವರನ್ನು ಬೇರೆಡೆಗೆ ಸ್ಥಳಾಂತರಿಸಲಾಗುವುದು ಎಂದು ತಿಳಿಸಿದರು. ಇದೇ ವೇಳೆ. ದೇಶಾದ್ಯಂತ ಎಲ್ಲಾ ರಾಜ್ಯಗಳ ರಾಜಧಾನಿಗಳಲ್ಲೂ ವೆಂಕಟೇಶ್ವರ ಸ್ವಾಮಿ ದೇವಾಲಯ ನಿರ್ಮಿಸಲಾಗುವುದು ಎಂದವರು ತಿಳಿಸಿದರು.

ಹನಿಟ್ರ್ಯಾಪ್‌ ಪ್ರಕರಣ ಬಗ್ಗೆ ಗೃಹ ಸಚಿವರಿಂದ ಸದನದ ಒಳಗೊಂದು ಹೊರಗೊಂದು ಹೇಳಿಕೆ?

ಬೆಂಗಳೂರು: ಹನಿಟ್ರ್ಯಾಪ್‌ ಪ್ರಕರಣದ ಕುರಿತಾಗಿ ಗೃಹ ಸಚಿವರು ಸದನದ ಒಳಗೊಂದು ಮತ್ತು ಸದನದ ಹೊರಗೊಂದು ಹೇಳಿಕೆ ನೀಡುತ್ತಿದ್ದಾರೆ. ಪ್ರಕರಣವನ್ನು ಹಾಲಿ ಹೈಕೋರ್ಟ್‌ ನ್ಯಾಯಾಧೀಶರು ಅಥವಾ ಸಿಬಿಐ ಮೂಲಕ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹನಿಟ್ರ್ಯಾಪ್ ಆರೋಪ ಕುರಿತಂತೆ ಪ್ರತಿಕ್ರಿಯಿಸಿದರು. ಹನಿಟ್ರ್ಯಾಪ್‌ ಗೊಂದಲದ ನಡುವೆಯೂ ಸರ್ಕಾರ ಮುಸಲ್ಮಾನರಿಗೆ ಮೀಸಲಾತಿ ಒದಗಿಸುವ ಮಸೂದೆಗೆ ಅನುಮೋದನೆ ಪಡೆದುಕೊಂಡಿದೆ, ಇದರ ವಿರುದ್ಧ ಬಿಜೆಪಿ ರಾಜ್ಯದಾದ್ಯಂತ ಪ್ರತಿಭಟಿಸಲಿದೆ ಎಂದು ತಿಳಿಸಿದರು. ಹನಿಟ್ರ್ಯಾಪ್‌ ಪ್ರಕರಣದ ಕುರಿತಾಗಿ ಗೃಹ ಸಚಿವರು ಸದನದ ಒಳಗೊಂದು ಮತ್ತು ಸದನದ ಹೊರಗೊಂದು ಹೇಳಿಕೆ ನೀಡುತ್ತಿದ್ದಾರೆ. ಪ್ರಕರಣವನ್ನು ಹಾಲಿ ಹೈಕೋರ್ಟ್‌ ನ್ಯಾಯಾಧೀಶರು ಅಥವಾ ಸಿಬಿಐ ಮೂಲಕ ತನಿಖೆ ನಡೆಸಬೇಕು. ಹನಿಟ್ರ್ಯಾಪ್‌ ಗೊಂದಲದ ನಡುವೆಯೂ ಸರ್ಕಾರ ಮುಸಲ್ಮಾನರಿಗೆ ಮೀಸಲಾತಿ ಒದಗಿಸುವ ಮಸೂದೆಗೆ ಅನುಮೋದನೆ ಪಡೆದುಕೊಂಡಿದೆ, ಇದರ ವಿರುದ್ಧ… pic.twitter.com/AIeVECRVjV — BJP Karnataka (@BJP4Karnataka) March…

‘ಮನಿಟ್ರ್ಯಾಪ್’ನಲ್ಲಿ ಸಿದ್ದು ಸರ್ಕಾರ.. ‘ಹನಿಟ್ರ್ಯಾಪ್’ನಲ್ಲೂ ಸಿದ್ದು ಟೀಮ್..!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಇದೀಗ ಹನಿಟ್ರ್ಯಾಪ್ ವಿಚಾರ ಭಾರೀ ಸದ್ದುಮಾಡುತ್ತಿದೆ. ಈ ಬಗ್ಗೆ ತ್ಪ್ರತಿಪಕ್ಷಗಳು ತನಿಖೆಗೆ ಪಟ್ಟುಹಿಡಿದಿವೆ. ಇದೇ ವೇಳೆ, ಆಡಳಿತಾರೂಢ ಕಾಂಗ್ರೆಸ್ ನಾಯಕರ ನಡುವಿನ ಹನಿಟ್ರ್ಯಾಪ್ ಗುದ್ದಾಟ ಬಗ್ಗೆ ಪ್ರತಿಪಕ್ಷ ಬಿಜೆಪಿ ವ್ಯಂಗ್ಯವಾಡಿದೆ. ಅಭಿವೃದ್ಧಿಗೆ ದುಡ್ಡಿಲ್ಲದೆ ಈಗಾಗಲೇ ಮನಿಟ್ರ್ಯಾಪ್ ನಲ್ಲಿ ಸಿಲುಕಿರುವ ಕಾಂಗ್ರೆಸ್ ಸರ್ಕಾರದಲ್ಲಿ ಈಗ ಹನಿ ಟ್ರ್ಯಾಪ್ ಸದ್ದು ಜೋರಾಗಿದೆ. ತಮ್ಮ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿದೆ ಸದನದಲ್ಲಿ ಆರೋಪಿಸಿರುವ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ತನಿಖೆಗೆ ಆಗ್ರಹಿಸಿದ್ದಾರೆ. ರಾಜಣ್ಣರ ಆರೋಪಕ್ಕೆ ದನಿಗೂಡಿಸಿರುವ ಮತ್ತಿಬ್ಬರು ಹಿರಿಯ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಹೆಚ್.ಸಿ.ಮಹದೇವಪ್ಪ ಅವರು ಸಹ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ. ಇದಕ್ಕೆ ಸ್ಪಂದಿಸಿರುವ ಗೃಹ ಸಚಿವ ಡಾ.ಪರಮೇಶ್ವರ್ ಅವರು ಉನ್ನತ ಮಟ್ಟದ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಆದರೆ ಕನ್ನಡಿಗರಿಗೆ ಕಾಡುತ್ತಿರುವ ಯಕ್ಷ ಪ್ರಶ್ನೆ…

ಬಿಡದಿ ಬಳಿ ಪಾಕ್ ಪರ ಗೋಡೆಬರಹ; ಇಬ್ಬರ ಬಂಧನ

ರಾಮನಗರ : ರಾಮನಗರ ಜಿಲ್ಲೆಯ ಬಿಡದಿ ಪಟ್ಟಣದ ಬಳಿಯ ಟೊಯೋಟಾ ಕಾರ್ಖಾನೆಯ ಸ್ನಾನಗೃಹದ ಗೋಡೆಗಳ ಮೇಲಿನಪಾಕಿಸ್ತಾನ ಪರವಾದ ಬರಹಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು 24 ವರ್ಷದ ಹೈಮದ್ ಹುಸೇನ್ ಮತ್ತು 20 ವರ್ಷದ ಸಾದಿಕ್ ಎಂದು ಗುರುತಿಸಲಾಗಿದೆ, ಇಬ್ಬರೂ ಟೊಯೋಟಾ ಬೊಶೋಕು ಆಟೋಮೋಟಿವ್ ಇಂಡಿಯಾ ಕಂಪನಿ ಕಾರ್ಖಾನೆಯ ಗುತ್ತಿಗೆ ಕಾರ್ಮಿಕರಾಗಿದ್ದು ಅವರು ಉತ್ತರ ಕರ್ನಾಟಕ ಮೂಲದವರೆನ್ನಲಾಗಿದೆ. ಹಸಿರು ಬಣ್ಣವನ್ನು ಬಳಸಿ ಕನ್ನಡದಲ್ಲಿ ಬರೆಯಲಾದ ಈ ಬರಹದಲ್ಲಿ ‘ಪಾಕಿಸ್ತಾನಕ್ಕೆ ವಿಜಯ’ ಮುಂತಾದ ಪಾಕಿಸ್ತಾನ ಪರ ಘೋಷಣೆಗಳು ಮತ್ತು ಕರ್ನಾಟಕದ ಜನರ ವಿರುದ್ಧ ಅವಹೇಳನಕಾರಿ ಹೇಳಿಕೆಗಳಿವೆ. ಕಾರ್ಖಾನೆಯು ಮೂರು ಪಾಳಿಗಳಲ್ಲಿ ಕೆಲಸ ಮಾಡುವ 2,000 ಕ್ಕೂ ಹೆಚ್ಚು ಸಿಬ್ಬಂದಿಯನ್ನು ನೇಮಿಸಿಕೊಂಡಿದ್ದು, ಪ್ರತಿ ಪಾಳಿಯಲ್ಲಿ 600 ಕ್ಕೂ ಹೆಚ್ಚು ಉದ್ಯೋಗಿಗಳು ಇದ್ದಾರೆ. ಮಾರ್ಚ್ 16 ರಂದು ಮೊದಲ ಪಾಳಿಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ ಎನ್ನಲಾಗಿದೆ.…

ರಾಜ್ಯದ ವಿದ್ಯಾರ್ಥಿಗಳಿಗೆ AI ತರಬೇತಿ; NIELIT ಜೊತೆ GTTC ಒಪ್ಪಂದ

ಬೆಂಗಳೂರು: ಸರ್ಕಾರಿ ಉಪಕರಣ ಮತ್ತು ತರಬೇತಿ ಕೇಂದ್ರ (GTTC) ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಸುಧಾರಿತ ತರಬೇತಿ ಕಾರ್ಯಕ್ರಮಗಳನ್ನು ಪರಿಚಯಿಸುವ ಮೂಲಕ ಕೌಶಲ್ಯ ಅಭಿವೃದ್ಧಿಯಲ್ಲಿ ಪ್ರಮುಖ ಹೆಜ್ಜೆ ಇಡುತ್ತಿದೆ. GTTC ಕ್ಯಾಂಪಸ್‌ನಲ್ಲಿ NIELIT ವಿಸ್ತರಣಾ ಕೇಂದ್ರವನ್ನು ಸ್ಥಾಪಿಸಲು ರಾಷ್ಟ್ರೀಯ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಂಸ್ಥೆ (NIELIT) ನೊಂದಿಗೆ ತಿಳಿವಳಿಕಾ ಒಪ್ಪಂದಕ್ಕೆ (MoU) ಬುಧವಾರ ಸಹಿ ಹಾಕಲಾಯಿತು. ಈ ಸಹಯೋಗವು ವಿದ್ಯಾರ್ಥಿಗಳಿಗೆ – ವಿಶೇಷವಾಗಿ ನಗರ ಮತ್ತು ಗ್ರಾಮೀಣ ಪ್ರದೇಶದ ಅಂಚಿನಲ್ಲಿರುವ ಸಮುದಾಯಗಳವರಿಗೆ – ಕೃತಕ ಬುದ್ಧಿಮತ್ತೆ (AI), ಇಂಟರ್ನೆಟ್ ಆಫ್ ಥಿಂಗ್ಸ್ (IoT), ಡೇಟಾ ವಿಶ್ಲೇಷಣೆ ಮತ್ತು ಎಲೆಕ್ಟ್ರಾನಿಕ್ಸ್‌ನಲ್ಲಿ ಅತ್ಯಾಧುನಿಕ ತರಬೇತಿ ಒದಗಿಸಲು ನೆರವಾಗಲಿದೆ. ವಿಕಾಸ ಸೌಧದಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಸಮ್ಮುಖದಲ್ಲಿ GTTC ವ್ಯವಸ್ಥಾಪಕ ನಿರ್ದೇಶಕ ವೈ.ಕೆ. ದಿನೇಶ್ ಕುಮಾರ್ ಮತ್ತು NIELIT…

ಮಲ್ಪೆಯಲ್ಲಿ‌ ಮರಕ್ಕೆ ಕಟ್ಟಿಹಾಕಿ ಮಹಿಳೆಗೆ ಥಳಿತ; ನಾಲ್ವರ ಬಂಧನ

ಉಡುಪಿ: ಮೀನು ಅಳ್ಳತನ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಆರೋಪದಲ್ಲಿ ಉಡುಪಿ ಜಿಲ್ಲಾ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ‌ ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ಹಲ್ಲೆ ಮಾಡಲಾಗಿತ್ತು. ಮಾರ್ಚ್ 18 ರಂದು ಈ ಘಟನೆ ನಡೆದಿದೆ ಎನ್ನಲಾಗಿದ್ದು, ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಪೊಲೀಸರು ಕಾರ್ಯಾಚರಣೆ ನಡೆಸಿ ಕೃತ್ಯ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ. ಇನ್ನೊಂದೆಡೆ, ಹಲ್ಲೆ ಘಟನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ. ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ‌ ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ ವೀಡಿಯೋ ಕಂಡು ದಿಗ್ಭ್ರಮೆಯಾಯಿತು ಎಂದಿರುವ ಸಿಎಂ, ಕಾರಣವೇನೇ ಇರಲಿ ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಮಾತ್ರವಲ್ಲ, ಗಂಭೀರ ಅಪರಾಧ ಎಂದಿದ್ದಾರೆ. ಇಂತಹ…