ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣಕ್ಕೆ ಕೇಂದ್ರ ನಕಾರ

ನವದೆಹಲಿ: ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಡಿ.ಕೆ.ಶಿವಕುಮಾರ್ ಕನಸು ನುಚ್ಚು ನೂರಾಗಿದೆ. ಈ ಸಂಬಂಧದ ಕರ್ನಾಟಕ ಸರ್ಕಾರದ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಚನ್ನಪಟ್ಟಣ ಉಪ ಚುನಾವಣೆ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರು ರಾಮನಗರ ಜಿಲ್ಲೆಗೆ ಮರುನಾಮಕರಣ ಕುರಿತು ಪ್ರಸ್ತಾಪ ಮುಂದಿಟ್ಟಿದ್ದರು. ಡಿ.ಕೆ.ಶಿವಕುಮಾರ್ ಅವರ ಆಗ್ರಹ ಹಿನ್ನೆಲೆಯಲ್ಲಿ ಮರುನಾಮಕರಣ ಮಾಡಲು ಕರ್ನಾಟಕ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವವನ್ನೂ ಸಲ್ಲಿಸಿತ್ತು. ಆದರೆ, ಕೇಂದ್ರ ಸರ್ಕಾರ ಈ ಪ್ರಸ್ತಾಪವನ್ನು ತಿರಸ್ಕರಿಸಿದೆ ಎಂದು ಮೂಲಗಳು ತಿಳಿಸಿವೆ.

ಭೂಮಿಗೆ ಭೂಮಿಗೆ ಯಶಸ್ವಿಯಾಗಿ ಸುನೀತಾ ವಿಲಿಯಮ್ಸ್..

ಕೇಪ್ ಕೆನವೆರಲ್: ಬಾಹ್ಯಾಕಾಶದಲ್ಲಿ ಸಿಲುಕಿದ್ದ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಮಂಗಳವಾರ ಭೂಮಿಗೆ ಯಶಸ್ವಿಯಾಗಿ ತಲುಪಿದ್ದಾರೆ. ಬಾಹ್ಯಾಕಾಶದಿಂದ ಸುಮಾರು 9 ತಿಂಗಳ ನಂತರ ಭಾರತೀಯ ಕಾಲಮಾನ ಬುಧವಾರ ಸುರಕ್ಷಿತವಾಗಿ ವಾಪಸ್ಸಾಗಿದ್ದು ಕೋಟ್ಯಂತರ ಭಾರತೀಯರು ಸೇರಿದಂತೆ ಜಗತ್ತಿನಾದ್ಯಂತ ಜನರಿ ನಿಟ್ಟುಸಿರು ಬಿಟ್ಟಿದ್ದಾರೆ. ಕಳೆದ ವರ್ಷ ಜೂನ್‌ನಲ್ಲಿ ನಾಸಾ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಬಾಹ್ಯಾಕಾಶಕ್ಕೆ ಪಯಣಿಸಿದ್ದರು. ಅವರಿದ್ದ ಬೋಯಿಂಗ್ ಸ್ಟಾರ್‌ಲೈನರ್ ನೌಕೆಯಲ್ಲಿ ದೋಷ ಕಂಡುಬಂದಿತ್ತು. ಇದರಿಂದಾಗಿ ಸುನೀತಾ ಮತ್ತವರ ಸಹ ಗಗನಯಾತ್ರಿಗಳು ನೌಕೆಯ ಮೂಲಕ ಹಿಂತಿರುಗುವುದು ಅಪಾಯ ಎಂದು ನಾಸಾ ತಿಳಿಸಿತ್ತು. ತಾಂತ್ರಿಕ ತೊಂದರೆಗಳಿಂದಾಗಿ ಅವರ ಮರಳುವಿಕೆ ವಿಳಂಬವಾಗಿತ್ತು. ಹಾಗಾಗಿ ಸುಮಾರು 9 ತಿಂಗಳ ಕಾಲ ಈ ಸಾಹಸಿಗಳು ಬಾಹ್ಯಾಕಾಶದಲ್ಲಿ ಉಳಿದುಕೊಂಡಿದ್ದರು. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಸಿಲುಕಿದ್ದ ನಿಕ್ ಹೇಗ್ ಮತ್ತು ಅಲೆಕ್ಸಾಂಡರ್ ಗೋರ್ಬುನೋವ್ ಕೂಡಾ ಸುನೀತಾ ವಿಲಿಯಮ್ಸ್, ಬುಚ್…

ಮುಸ್ಲಿಮರಿಗೆ ಶೇ.4 ಟೆಂಡರ್ ಮೀಸಲಾತಿಗೆ ಬಿಜೆಪಿ ವಿರೋಧ: ರಾಜ್ಯಪಾಲರಿಗೆ ಯತ್ನಾಳ್ ಪತ್ರ

ಬೆಂಗಳೂರು: ಸರ್ಕಾರಿ ಗುತ್ತಿಗೆ ಕಾಮಗಾರಿ ಟೆಂಡರಿನಲ್ಲಿ ಮುಸ್ಲಿಮರಿಗೆ ಶೇ.4 ಮೀಸಲಾತಿ ನೀಡುವ ಮಸೂದೆಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಂಬಂಧದ ಕಾನೂನು ಜಾರಿಗೆ ಅವಕಾಶ ನೀಡದಂತೆ ಅವರು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಮನವಿ ಮಾಡಿದ್ದಾರೆ. ಪ್ರತಿಪಕ್ಷಗಳ ವಿರೋಧದ ನಡುವೆಯೂ ಕಾನೂನು ಸಚಿವ ಎಚ್.ಕೆ.ಪಾಟೀಲ್ ಅವರು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ(ತಿದ್ದುಪಡಿ) ವಿಧೇಯಕವನ್ನು ಮಂಗಳವಾರ ವಿಧಾನಸಭೆಯಲ್ಲಿ ಮಂಡಿಸಿದ್ದರು. ಈ ವಿಧೇಯಕ ಮಂಡನೆಯಾದ ಬೆನ್ನಲ್ಲೇ ಬಸನಗೌಡ ಪಾಟೀಲ್ ಯತ್ನಾಳ್ ಅವರು ರಾಜ್ಯಪಾಲರಿಗೆ ಪತ್ರ ಬರೆದಿದ್ದು, ವಿವಾದಾದ್ಮಕ ಮಸೂದೆಗೆ ಒಪ್ಪಿಗೆ ನೀಡದಂತೆ ಒತ್ತಾಯಿಸಿದ್ದಾರೆ. ಈ ಪಾತ್ರವನ್ನು ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. I have written to the Hon'ble Governor Shri @TCGEHLOT Ji requesting him not to provide consent to the contentious amendments to…

ಅಮೆರಿಕದ ಗುಪ್ತಚರ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್’ಗೆ ಗಂಗಾ ಜಲ ನೀಡಿ ಗೌರವ

ನವದೆಹಲಿ: ಅಮೆರಿಕದ ಗುಪ್ತಚರ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್ ಅವರು ಸೋಮವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮೋದಿಯವರು ತುಳಸಿ ಗಬ್ಬಾರ್ಡ್ ಅವರಿಗೆ ಗಂಗಾ ಜಲ ಮತ್ತು ಉಡುಗೊರೆಗಳನ್ನು ನೀಡಿ ಗೌರವಿಸಿದರು. Hon. PM Shri @narendramodi Ji gifting the holy water from the sacred Mahakumbh to USA’s Director of National Intelligence, @TulsiGabbard, is a symbol of India’s civilizational strength and spiritual diplomacy. It embodies Bharat’s growing global stature and showcases the… pic.twitter.com/McHgquba47 — Yogi Adityanath (@myogiadityanath) March 17, 2025 ಪ್ರಧಾನಿ ಮೋದಿ ಅವರು ಮಹಾ ಕುಂಭದಿಂದ ತಂಡ ಗಂಗಾ ಜಲವನ್ನು ನೀಡಿ, ವಿಶ್ವದ ಅತಿದೊಡ್ಡ ಧಾರ್ಮಿಕ ಕೈಂಕರ್ಯದ ಮಹತ್ವದ ಬಗ್ಗೆ…

ಔರಂಗಜೇಬ್ ಸಮಾಧಿ ವಿವಾದ: ನಾಗಪುರದಲ್ಲಿ ಹಿಂಸಾಚಾರ ಭುಗಿಲು

ನಾಗ್ಪುರ: ಮೊಘಲ್‌ ದೊರೆ ಔರಂಗಜೇಬ್ ಸಮಾಧಿ ವಿಚಾರ ಇದೀಗ ಮಹಾರಾಷ್ಟ್ರದ ನಾಗಪುರವನ್ನು ಪ್ರಕ್ಷುಬ್ಧಗೊಳಿಸಿದೆ. ಎರಡು ಗುಂಪುಗಳ ನಡುವೆ ಸಂಘರ್ಷ ಭುಗಿಲೆದ್ದಿದ್ದು ಘಪೊಲೀಸರ ಮೇಲೂ ಕಲ್ಲು ತೂರಾಟ ನಡೆದಿದೆ. ಹಿಂಸಾಚಾರದಲ್ಲಿ ಮೂವರು ಪೊಲೀಸರು ಸೇರಿ 9 ಮಂದಿ ಗಾಯಗೊಂಡಿದ್ದಾರೆ. #WATCH | Maharashtra: Efforts underway to douse fire in vehicles that have been torched in Mahal area of ​​Nagpur. Tensions have broken out here following a dispute between two groups. pic.twitter.com/rRheKdpGh4 — ANI (@ANI) March 17, 2025 ಸಂಭಾಜಿನಗರ ಜಿಲ್ಲೆಯಲ್ಲಿರುವ ಔರಂಗಜೇಬ್‌ ಸಮಾಧಿ ತೆರವುಗೊಳಿಸಬೇಕು ಎಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಸೋಮವಾರ ಮಹಾರಾಷ್ಟ್ರದಲ್ಲಿ ಪ್ರತಿಭಟನೆ ನಡೆಸಿತ್ತು. ಅದರ ಬೆನ್ನಲ್ಲೆ ಕುರಾನ್‌ ಪ್ರತಿಯನ್ನು ಸುಡಲಾಗಿದೆ ಎಂಬ ವದಂತಿ ಹಬ್ಬಿದೆ. ಈ ವದಂತಿ ನಂತರ ಹಿಂಸಾಚಾರ…

ಮಂಜೇಶ್ವರ ಅನಂತೇಶ್ವರ ದೇವಸ್ಥಾನ 221 ನೇ ವರ್ಷದ ಪುನರ್ ಪ್ರತಿಷ್ಠಾ ವರ್ದ೦ತಿ

ಚಿತ್ರ : ಮಂಜು ನೀರೇಶ್ವಾಲ್ಯ ಮಂಜೇಶ್ವರ: ಕರಾವಳಿಯ ಪುರಾಣ ಪ್ರಸಿದ್ಧ ದೇವಾಲಯಗಳಲ್ಲೊಂದಾಗಿರುವ ಮಂಜೇಶ್ವರದ ಶ್ರೀಮದ್ ಅನಂತೇಶ್ವರ ದೇವಸ್ಥಾನ ವಿಶೇಷ ಮಹೋತ್ಸವಕ್ಕೆ ಸಾಕ್ಷಿಯಾಗಿದೆ. ಈ ದೇವಾಲಯದ 221 ನೇ ವರ್ಷದ ಪುನರ್ ಪ್ರತಿಷ್ಠಾ ವರ್ದ೦ ತಿ ಹಾಗೂ ಬೆಳ್ಳಿ ಲಾಲ್ಕಿ ಯ 150 ನೇ ವರ್ಷದ ಸಂಭ್ರಮೋತ್ಸವ ಐತಿಹಾಸಿಕವಾಗಿ ಅಪೂರ್ವ ವಿಜೃಂಭಣೆಯಿಂದ ನೆರವೇರಿದೆ. ಸೋಮವಾರ ಬೆಳಿಗ್ಗೆ ಬೆಳ್ಳಿ ಪಲ್ಲಕಿ ಹಗಲೋತ್ಸವ , ಮಧ್ಯಾಹ್ನ ಸಮಾಜ ಭಾಂದವರಿಂದ ಶ್ರೀ ನರಸಿಂಹ ಸ್ತುತಿ ಪಠಣ ದೊಂದಿಗೆ ಪ್ರದಕ್ಷಿಣಾ ಸೇವೆ ನಡೆಯಿತು. ಸಮೃದ್ಧವಾದ ನಿರೀಕ್ಷಣಾ ವಸ್ತುಗಳು ಶ್ರೀ ದೇವರಿಗೆ ವಾದ್ಯ ಘೋಷ್ಠಿಯೊಂದಿಗೆ ಸಮರ್ಪಣೆ ಮಡಿದ ಸನ್ನಿವೇಶವೂ ಭಕ್ತ ಸಮೂಹದ ಗಮನಕೇಂದ್ರೀಕರಿಸಿತು. ರಾತ್ರಿ 150 ನೇ ವರ್ಷದ ಬೆಳ್ಳಿ ಲಾಲಕಿಗೆ ಅಪೂರ್ವ ಅಲಂಕಾರದೊಂದಿಗೆ ಉತ್ಸವ ಹಾಗೂ ಪೂಜಾ ಸೇವೆ, ಉತ್ಸವದಲ್ಲಿ ಅದ್ಧುರಿ ವಾದ್ಯಘೋಷ್ಠಿ, ಕಣ್ಮನ ಸಂತೈಸುವ ವಿಶೇಷ ದೀಪಾರಾಧನೆ ನೆರವೇರಿತು.

ವಿದ್ಯುತ್ ಇಲಾಖೆಯ ನಿರ್ಲಕ್ಷ್ಯಕ್ಕೆ ಬೆಂಗಳೂರಿನಲ್ಲಿ ಮತ್ತಿಬ್ಬರು ಬಲಿ

ಬೆಂಗಳೂರು: ವಿದ್ಯುತ್ ಇಲಾಖೆಯ ನಿರ್ಲಕ್ಷ್ಯಕ್ಕೆ ಬೆಂಗಳೂರಿನಲ್ಲಿ ಮತ್ತಿಬ್ಬರು ಬಲಿಯಾಗಿದ್ದಾರೆ. ವಿದ್ಯುತ್ ಕಂಬ ತಲೆ ಮೇಲೆ ಬಿದ್ದು 4 ತಿಂಗಳ ಗರ್ಭಿಣಿ ಸೇರಿ ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಸದ್ದುಗುಂಟೆ ಪಾಳ್ಯದಲ್ಲಿ ಸೋಮವಾರ ನಡೆದಿದೆ. ರಸ್ತೆ ಕಾಮಗಾರಿ ನಡೆಯುವ ವೇಳೆ ವಿದ್ಯುತ್ ಕಂಬಕ್ಕೆ ಜೆಸಿಬಿ ಡಿಕ್ಕಿ ಹೊಡೆದಿತ್ತು. ಆ ಕಂಬ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸುಮತಿ (35) ಮತ್ತು ಸೋನಿ ( 36) ಎಂಬ ಮಹಿಳೆಯರ ಮೇಲೆ ಬಿದ್ದಿದೆ ಎನ್ನಲಾಗಿದೆ. ಈ ಇಬ್ಬರೂ ಮೃತಪಟ್ಟಿದ್ದು, ಬೈಯಪ್ಪನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಮತೀಯವಾಗಿ ಮೀಸಲಾತಿಯನ್ನು ಅಂಬೇಡ್ಕರ್ ಅವರೇ ವಿರೋಧಿಸಿದ್ದರು, ಸುಪ್ರೀಂ ಕೋರ್ಟ್ ಕೂಡಾ ಆಕ್ಷೇಪಿಸಿತ್ತು’

ಬೆಂಗಳೂರು: ಧರ್ಮದ ಆಧಾರದಲ್ಲಿ ಮೀಸಲಾತಿ ನೀಡುವುದಕ್ಕೆ ಬಿಜೆಪಿಯ ವಿರೋಧವಿದೆ ಎಂದು ವಿಧಾನಪರಿಷತ್ತಿನಲ್ಲಿ ಶಾಸಕ ಸಿ.ಟಿ.ರವಿ ಸ್ಪಷ್ಟಪಡಿಸಿದ್ದಾರೆ. ಧರ್ಮದ ಆಧಾರದಲ್ಲಿ‌ ಮೀಸಲಾತಿ ನೀಡುವುದನ್ನು ಸಾಂವಿಧಾನಿಕವಾಗಿ ತಿರಸ್ಕರಿಸಲಾಗಿದೆ, ದೇಶದ ಸರ್ವೋಚ್ಛ ನ್ಯಾಯಾಲಯ ಕೂಡಾ ಮೀಸಲಾತಿ ನೀಡುವುದನ್ನು ವಿರೋಧಿಸಿದೆ. ಮತೀಯವಾಗಿ ಮೀಸಲಾತಿ ನೀಡುವುದಕ್ಕೆ ನನ್ನ ಸ್ಪಷ್ಟ ವಿರೋಧವಿದೆ ಎಂದು ಸ್ವತಃ ಅಂಬೇಡ್ಕರ್ ಅವರೇ ಪ್ರತಿಪಾದಿಸಿದ್ದರು.‌ ಆದರೆ ಕಾಂಗ್ರೆಸ್ ಸರ್ಕಾರ ಇಂದು ಮುಸ್ಲಿಮರಿಗೆ ಮೀಸಲಾತಿ ನೀಡುವ… pic.twitter.com/kbIxdbPS3C — BJP Karnataka (@BJP4Karnataka) March 17, 2025 ಧರ್ಮದ ಆಧಾರದಲ್ಲಿ‌ ಮೀಸಲಾತಿ ನೀಡುವುದನ್ನು ಸಾಂವಿಧಾನಿಕವಾಗಿ ತಿರಸ್ಕರಿಸಲಾಗಿದೆ, ದೇಶದ ಸರ್ವೋಚ್ಛ ನ್ಯಾಯಾಲಯ ಕೂಡಾ ಮೀಸಲಾತಿ ನೀಡುವುದನ್ನು ವಿರೋಧಿಸಿದೆ ಎಂದು ಅವರು ರಾಜ್ಯ ಸರ್ಕಾರದ ಗಮನಸೆಳೆದಿದ್ದಾರೆ. ಮತೀಯವಾಗಿ ಮೀಸಲಾತಿ ನೀಡುವುದಕ್ಕೆ ನನ್ನ ಸ್ಪಷ್ಟ ವಿರೋಧವಿದೆ ಎಂದು ಸ್ವತಃ ಅಂಬೇಡ್ಕರ್ ಅವರೇ ಪ್ರತಿಪಾದಿಸಿದ್ದರು.‌ ಆದರೆ ಕಾಂಗ್ರೆಸ್ ಸರ್ಕಾರ ಇಂದು ಮುಸ್ಲಿಮರಿಗೆ ಮೀಸಲಾತಿ ನೀಡುವ ಮೂಲಕ ಸಂವಿಧಾನ, ಅಂಬೇಡ್ಕರ್…

ವೈಯಕ್ತಿಕ ಭಿನ್ನಾಭಿಪ್ರಾಯ ಬದಿಗಿಟ್ಟು, ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗಿ ಪಕ್ಷ ಸಂಘಟಿಸಿ

ಬೆಂಗಳೂರು: ಯುವ ಕಾಂಗ್ರೆಸ್ ಚುನಾವಣೆ ಮುಗಿದಿದೆ. ಚುನಾವಣೆಯಲ್ಲಿ ಗೆದ್ದವರು, ಸೋತವರು ಎಲ್ಲರೂ ಒಗ್ಗಟ್ಟಾಗಿ ಸೈದ್ಧಾಂತಿಕವಾಗಿ ರಾಜಕೀಯ ಎದುರಾಳಿಗಳಾಗಿರುವ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ವಿರುದ್ಧ ಎಲ್ಲಾ ಬೂತ್ ಮಟ್ಟದಲ್ಲಿ ಹೋರಾಟ ಮಾಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದ್ದಾರೆ. ಅರಮನೆ ಮೈದಾನದಲ್ಲಿ ಸೋಮವಾರ ನಡೆದ ‘ಯುವ ಸಂಕಲ್ಪ’ ಪದಗ್ರಹಣ ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳಿಗೆ ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ. ಶಿವಕುಮಾರ್ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ವೇಳೆ ಮಾತನಾಡಿದ ಶಿವಕುಮಾರ್, ಮಹಾತ್ಮಾ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಶತಮಾನೋತ್ಸವ ಆಚರಿಸಿದೆವು. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗದ ಜನನ ಅದಿಕಾರಕ್ಕೆ ಬಂದಂತೆ ಎಂದರು. ರಾಜಕೀಯದಲ್ಲಿ ಚುನಾವಣೆ ಗೆಲುವು ಸೋಲು ಸಹಜ. ಚುನಾವಣೆಯಲ್ಲಿ ಸ್ಪರ್ಧಿಸಿದವರೆಲ್ಲಾ ಗೆಲ್ಲಲು ಆಗುವುದಿಲ್ಲ. ಚುನಾವಣೆಯಲ್ಲಿ ಗೆದ್ದವರೆಲ್ಲಾ ನಾಯಕರಲ್ಲ.…

ಆಶಾ ಕಾರ್ಯಕರ್ತೆಯರ ಬೇಡಿಕೆ ವಿಚಾರದಲ್ಲಿ ನುಡಿದಂತೆ ನಡೆಯದ ಸಿಎಂ: ಗೌರವ ಧನ ಹೆಚ್ಚಿಸಲು ಆಗ್ರಹ

ಬೆಂಗಳೂರು: ಅರೋಗ್ಯ ಕ್ಷೇತ್ರದಲ್ಲಿ ಅವಿರತ ದುಡಿಯುತ್ತಿರುವ ಆಶಾ ಕಾರ್ಯಕರ್ತೆಯರು ಮತ್ತೆ ಹೋರಾಟಕ್ಕೆ ತಯಾರಿ ನಡೆಸಿದ್ದಾರೆ. ಬೇಡಿಕೆ ಈಡೇರಿಸುವ ಸಂಬಂಧ ಮುಖ್ಯಮಂತ್ರಿಯವರು ನುಡಿದಂತೆ ನಡೆಯಬೇಕೆಂದು ಆಗ್ರಹಿಸಿರುವ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ, ಆಯವ್ಯಯದಲ್ಲಿ ರಾಜ್ಯದ ಸುಮಾರು 2.5 ಲಕ್ಷ ಅಂಗನವಾಡಿ-ಬಿಸಿಯೂಟ ಕಾರ್ಯಕರ್ತೆಯರಿಗೆ 1000 ರೂಪಾಯಿ ಹೆಚ್ಚಿಸಿದಂತೆ 42, ಸಾವಿರ ಆಶಾ ಕಾರ್ಯಕರ್ತೆಯರಿಗೂ 1000 ರೂಪಾಯಿ ಹೆಚ್ಚಿಸಿ, ಇದೇ ಬಜೆಟ್‌ನಲ್ಲಿ ಸೇರಿಸಿ ಆದೇಶಿಸಬೇಕು ಎಂದು ಒತ್ತಾಯಿಸಿದೆ. ಈ ಸಂಬಂಧ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷ ಕೆ.ಸೋಮಶೇಖರ್ ಯಾದಗಿರಿ ಹಾಗೂ ಕಾರ್ಯದರ್ಶಿ ಡಿ.ನಾಗಲಕ್ಷ್ಮೀ ಅವರು ಸರ್ಕಾರದ ಮುಂದಿಟ್ಟಿರುವ ಬೇಡಿಕೆ ಗಮನಸೆಳೆದಿದೆ. ಮುಖ್ಯ ಮಂತ್ರಿ ಘೋಷಿಸಿರುವಂತೆ ಎಪ್ರಿಲ್ 2025ರಿಂದ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಸೇರಿಸಿ ಕನಿಷ್ಟ ಮಾಸಿಕ 10,000 ರೂಪಾಯಿ ಗೌರವಧನ ಮತ್ತು ಈ ರಾಜ್ಯ ಬಜೆಟ್‌ನಲ್ಲಿ ಘೋಷಣೆಯಾದ 1,000 ರೂ.ಪಾಯಿ ಹೆಚ್ಚಳ ಸೇರಿಸಿ ಅಧಿಕೃತ ಆದೇಶ…