ಮುಡಾ ಹಗರಣ: ED ತನಿಖೆಗೆ ಹೈಕೋರ್ಟ್ ಅನುಮತಿ

ಬೆಂಗಳೂರು: ಮುಡಾ ಹಗರಣ ಆರೋಪ ಪ್ರಕರಣದ ತನಿಖೆಗೆ ಹಠಾತ್ ತಿರುವು ಸಿಕ್ಕಿದೆ. ಜಾರಿ ನಿರ್ದೇಶನಾಲಯ (ED) ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಮುಡಾ ಹಗರಣ ಪ್ರಕರಣದಲ್ಲಿ ಮುಡಾದ ಮಾಜಿ ಆಯುಕ್ತ ಡಿ.ಬಿ. ನಟೇಶ್‌ ಅವರ ಹೇಳಿಕೆ ಆಧರಿಸಿ ಇತರೆ ಆರೋಪಿಗಳ ವಿರುದ್ಧದ ತನಿಖೆ ನಡೆಸಲು ಇಡಿಗೆ ಹೈಕೋರ್ಟ್ ವಿಭಾಗೀಯ ಪೀಠ ಬುಧವಾರ ಅವಕಾಶ ನೀಡಿ ಆದೇಶಿಸಿದೆ. ಹೈಕೋರ್ಟ್‌ನ ಈ ಆದೇಶದ ನಂತರ ಸಿಎಂ ಸಿದ್ದರಾಮಯ್ಯ ಅವರಿಗೂ ವಿಚಾರಣೆಗೆ ಅವಕಾಶ ಸಿಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ

ಶಾಸಕರ ಅಮಾನತು ಆದೇಶದ ಪ್ರತಿಧ್ವನಿ: ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಖಾದರ್ ಗಿಮ್ಮಿಕ್? ಏನಿದು ಬಿಜೆಪಿ ಆಕ್ರೋಶ

ಬೆಂಗಳೂರು: 18 ಶಾಸಕರ ಅಮಾನತು ಆದೇಶ ವಾಪಸ್ ಪಡೆಯದೇ ಹೋದಲ್ಲಿ ತೀವ್ರ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸ್ಲಿಮರಿಗೆ ನೀಡಿದ ಮೀಸಲಾತಿಯನ್ನು ವಿರೋಧಿಸಿ ಹಾಗೂ ಹನಿಟ್ರ್ಯಾಪ್ ಪ್ರಕರಣ ಖಂಡಿಸಿ 18 ಶಾಸಕರು ಪ್ರತಿಭಟನೆ ಮಾಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕುರಿತು ಸಿಬಿಐ, ಎಸ್ಐಟಿ ಅಥವಾ ಯಾವುದೇ ತನಿಖೆ ಮಾಡುವುದಾಗಿ ಹೇಳಿದ್ದರೆ ಅಥವಾ ಸ್ಪಷ್ಟತೆ ನೀಡಿದ್ದರೆ ಪ್ರತಿಭಟನೆ ಕೈ ಬಿಡಬಹುದಿತ್ತು. ಅಮಾನತು ಸಮಯದಲ್ಲಿ ಸ್ಪೀಕರ್ ಯು.ಟಿ.ಖಾದರ್ ಸೌಜನ್ಯಕ್ಕೂ ಶಾಸಕರನ್ನು ಕರೆದು ಮಾತಾಡಿಲ್ಲ ಎಂದು ದೂರಿದರು. ಸ್ಪೀಕರ್ ಕಾಂಗ್ರೆಸ್ ಸರ್ಕಾರದ ಪರವಾಗಿ ನಿಂತಿದ್ದಾರೆ. ಈಗ ಸಚಿವ ಸಂಪುಟ ಪುನರ್ ರಚನೆಯಾಗಲು ಸಿದ್ಧತೆ ನಡೆದಿದೆ. ಇಂತಹ ಸಮಯದಲ್ಲಿ ವಿರೋಧ ಪಕ್ಷದ ಸದಸ್ಯರ ವಿರುದ್ಧ ಕ್ರಮ ಕೈಗೊಂಡರೆ ಸಚಿವ ಸ್ಥಾನ ಸಿಗಬಹುದು ಎಂಬ ನಿರೀಕ್ಷೆ ಸ್ಪೀಕರ್ ಯು.ಟಿ.ಖಾದರ್ ಅವರಿಗಿದೆ. ಸಭಾಧ್ಯಕ್ಷರ ಪೀಠ…

ಬೆಲೆ ಏರಿಕೆ ಮೂಲಕ ಲೂಟಿ? ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಕಾಂಗ್ರೆಸ್ ಚುನಾವಣೆಗೆ ಮುನ್ನ ಬೆಲೆ ಏರಿಕೆ ಮಾಡಲ್ಲ, ಐದು ಗ್ಯಾರಂಟಿ ಕೊಡುತ್ತೇವೆ ಎಂದಿತ್ತು. ಆದರೆ ಎರಡು ವರ್ಷಗಳಲ್ಲಿ ಹಾಲಿನ ದರ ಮೂರು ಬಾರಿ ಏರಿಕೆ ಮಾಡಲಾಗಿದೆ. ಸರ್ಕಾರದಲ್ಲಿ 136 ಜನ ಕಳ್ಳರು ಇದ್ದಾರೆ. ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ. ಅದಕ್ಕಾಗಿ ಬೆಲೆ ಏರಿಕೆ ಮೂಲಕ ಲೂಟಿ ಮಾಡಲಾಗುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಆಹೋರಾತ್ರಿ ಧರಣಿಯಲ್ಲಿ ಭಾಗಿಯಾಗಿ ಮಾತನಾಡಿದ ಪ್ರತಿಪಕ್ಷ ನಾಯಕ ಆರ್.ಅಶೋಕ್, ಬಜೆಟ್ ನಲ್ಲಿ ಯಾವುದೇ ತೆರಿಗೆ ತೋರಿಸದೆ ಇದೀಗ ಬೆಲೆ ಏರಿಕೆ ಮಾಡಲಾಗ್ತಿದೆ. ಐದು ಗ್ಯಾರಂಟಿಗಾಗಿ ಕರ್ನಾಟಕದ ಮನೆ ಮನೆ ಲೂಟಿ ಆಗ್ತಿದೆ ಎಂದು ಆರೋಪಿಸಿದರು. ಸಚಿವರು ಅಂಗಡಿ ತೆರೆದಿದ್ದಾರೆ. 40% ಆರೋಪಕ್ಕೆ ಸಾಕ್ಷಿ ಇಲ್ಲ. ಆದರೆ ಕಾಂಗ್ರೆಸ್ ಸರ್ಕಾರ 60% ಕಮಿಷನ್ ಪಡೆದುಕೊಳ್ಳುತ್ತಿದೆ. ಸ್ಮಾರ್ಟ್ ಮೀಟರ್ ನಲ್ಲಿ 15,000 ಹಗರಣ ನಡೆದಿದೆ. ಸಿದ್ದರಾಮಯ್ಯ ಹೆಸರಿಗಷ್ಟೇ…

ಮತ್ತೊಮ್ಮೆ ಬಸ್ ಟಿಕೆಟ್ ದರ ಏರಿಕೆ ಮಾಡುವುದರಲ್ಲಿ ಅನುಮಾನವೇ ಇಲ್ಲ; ಅಶೋಕ್

ಬೆಂಗಳೂರು: ಕನ್ನಡಿಗರಿಗೆ ಈ ವರ್ಷ ಮಾರಿಹಬ್ಬ ಕಾದಿದೆ ಎಂದು ಬಜೆಟ್ ಅಧಿವೇಶನದಲ್ಲಿ ನೀಡಿದ್ದ ಎಚ್ಚರಿಕೆ ಈಗ ಅಕ್ಷರಶಃ ನಿಜವಾಗುತ್ತಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ವಿಶ್ಲೇಷಿಸಿದ್ದಾರೆ. ಕನ್ನಡಿಗರಿಗೆ ಈ ವರ್ಷ ಮಾರಿಹಬ್ಬ ಕಾದಿದೆ ಎಂದು ಬಜೆಟ್ ಅಧಿವೇಶನದಲ್ಲಿ ನಾನು ನೀಡಿದ್ದ ಎಚ್ಚರಿಕೆ ಈಗ ಅಕ್ಷರಶಃ ನಿಜವಾಗುತ್ತಿದೆ. ಬಜೆಟ್ ನಲ್ಲಿ ಯಾವುದೇ ತೆರಿಗೆ ಹೆಚ್ಚಳವನ್ನ, ಬೆಲೆ ಏರಿಕೆಯನ್ನ ಘೋಷಣೆ ಮಾಡದೆ ಕನ್ನಡಿಗರ ಕಿವಿಗೆ ಹೂವಿಟ್ಟ ಸಿಎಂ @siddaramaiah ಅವರು ಈಗ ದಿನಕ್ಕೊಂದು ವಸ್ತುಗಳ ಮೇಲೆ ತೆರಿಗೆ ಹಾಕಿ, ಬೆಲೆ ಹೆಚ್ಚಿಸಿ,… pic.twitter.com/1h1zFHr8HL — R. Ashoka (@RAshokaBJP) April 1, 2025 ಬಜೆಟ್ ನಲ್ಲಿ ಯಾವುದೇ ತೆರಿಗೆ ಹೆಚ್ಚಳವನ್ನ, ಬೆಲೆ ಏರಿಕೆಯನ್ನ ಘೋಷಣೆ ಮಾಡದೆ ಕನ್ನಡಿಗರ ಕಿವಿಗೆ ಹೂವಿಟ್ಟ ಸಿಎಂ ಸಿದ್ದರಾಮಯ್ಯ ಅವರು ಈಗ ದಿನಕ್ಕೊಂದು ವಸ್ತುಗಳ ಮೇಲೆ ತೆರಿಗೆ ಹಾಕಿ, ಬೆಲೆ ಹೆಚ್ಚಿಸಿ, ಬಡವರು, ಮಾಧ್ಯಮ…

ಕಾಂಗ್ರೆಸ್ ಸರ್ಕಾರದಿಂದ ‘ಹೊಸ ತಡಕುವಿನ’ ಉಡುಗೊರೆ: ಸಿ.ಟಿ.ರವಿ ಲೇವಡಿ

ಬೆಂಗಳೂರು: ವಿದ್ಯುತ್, ಹಾಲು ಬೆಲೆ ಹೆಚ್ಚಳ, ವಿವಿಧ ತೆರಿಗೆ ಹೊರೆಯ ಬೆನ್ನಲ್ಲೇ ಕರ್ನಾಟಕ ರಾಜ್ಯ ಸರ್ಕಾರಇದೀಗ ಡೀಸೆಲ್​ ದರ ಹೆಚ್ಚಳ ಮಾಡಿದೆ. ಡೀಸೆಲ್ ಮೇಲಿನ ತೆರಿಗೆಯನ್ನು ಶೇ 2.73 ರಷ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಈ ಕ್ರಮಕ್ಕೆ ಪ್ರತಿಪಕ್ಷ ಬಿಜೆಪಿ ಶಾಸಕ ಸಿ.ಟಿ.ರವಿ ಲೇವಡಿ ಮಾಡಿದ್ದಾರೆ. ಇದು ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಜನತೆಗೆ “ಹೊಸ ತಡಕುವಿನ” ಉಡುಗೊರೆ ಎಂದು ರವಿ ಟೀಕಿಸಿದ್ದಾರೆ. ಬೆಲೆ ಏರಿಕೆಯ ಶೂಲಕ್ಕೆ ಜನರನ್ನು ಕರ್ನಾಟಕ ಕಾಂಗ್ರೆಸ್ ಸರ್ಕಾರ ಸಿಲುಕಿಸಿದೆ ಎಂದವರು ಆಕ್ರೋಶವನ್ನೂ ಹೊರಹಾಕಿದ್ದಾರೆ. ಕಾಂಗ್ರೆಸ್ ಸರ್ಕಾರದಿಂದ "ಹೊಸ ತಡಕುವಿನ" ಉಡುಗೊರೆ. ಪ್ರತಿ ಲೀಟರ್ ಡೀಸಿಲ್ ಬೆಲೆ ಎರಡು ರೂಪಾಯಿ ಏರಿಕೆ. ಬೆಲೆ ಏರಿಕೆಯ ಶೂಲಕ್ಕೆ ಜನರನ್ನು ಸಿಲುಕಿಸಿದ ಕರ್ನಾಟಕ ಕಾಂಗ್ರೆಸ್ ಸರ್ಕಾರ. pic.twitter.com/HIogQiPNfA — C T Ravi 🇮🇳 ಸಿ ಟಿ ರವಿ (@CTRavi_BJP) April…

ಬೆಲೆ ಏರಿಕೆಯ ಪರ್ವ? ಇದೀಗ ಡೀಸೆಲ್​ ದರ ಹೆಚ್ಚಳ..!

ಬೆಂಗಳೂರು: ವಿದ್ಯುತ್, ಹಾಲು ಬೆಲೆ ಹೆಚ್ಚಳ, ವಿವಿಧ ತೆರಿಗೆ ಹೊರೆಯ ಬೆನ್ನಲ್ಲೇ ಕರ್ನಾಟಕ ರಾಜ್ಯ ಸರ್ಕಾರ ಇದೀಗ ಡೀಸೆಲ್​ ದರ ಹೆಚ್ಚಳ ಮಾಡಿದೆ. ಡೀಸೆಲ್ ಮೇಲಿನ ತೆರಿಗೆಯನ್ನು ಶೇ 2.73 ರಷ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ತಕ್ಷಣದಿಂದಲೇ ತೆರಿಗೆ ಜಾರಿಗೆ ಬರಲಿದ್ದು ಈ ಹಿಂದೆ ಶೇ 18.44 ರಷ್ಟು ಇದ್ದ ತೆರಿಗೆ, ಇದೀಗ ಶೇ 21.17ಕ್ಕೆ ಏರಿಕೆಯಾಗಿದೆ. ಡೀಸೆಲ್ ಬೆಲೆ ಲೀಟರ್‌ಗೆ 2 ರೂ.ಗಳಷ್ಟು ಹೆಚ್ಚಾಗಲಿದ್ದು, ಬೆಲೆ ಏರಿಕೆಯಿಂದ ಡೀಸೆಲ್ ಬೆಲೆ ಸುಮೇರು 90 ರೂಪಾಯಿ ತಲುಪಲಿದೆ ಎನ್ನಲಾಗುತ್ತಿದೆ.

ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆ ಸಾಧ್ಯತೆ

ಬೆಂಗಳೂರು: ಬಿರು ಬಿಸಿಲ ಬೇಗೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಹೀಗೊಂದು ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಸೇರಿದಂತೆ ಕರಾವಳಿ ಮಲೆನಾಡು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗುರುವಾರದಿಂದ ಮಳೆಯಾಗುವ ಸಾಧ್ಯತೆ ಇದೆ. ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲೂ ಮಳೆ ಸಾಧ್ಯತೆ ಇದ್ದು, 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇದೇ ವೇಳೆ, ಏಪ್ರಿಲ್ 3 ರಿಂದ ಏಪ್ರಿಲ್ 5ರವರೆಗೆ ಉಷ್ಣಾಂಶ ಇಳಿಮುಖವಾಗುವ ಸಾಧ್ಯತೆ ಎಂದು ವಿಶ್ಲೇಷಿಸಲಾಗಿದೆ. ಆಂಧ್ರ ಪ್ರದೇಶ, ತಮಿಳುನಾಡು ರಾಜ್ಯಗಳಲ್ಲೂ ಮಳೆಯಾಗುವ ಸಾಧ್ಯತೆಗಳಿವೆ ಎಂದು ತಜ್ಞರು ತಿಳಿಸಿದ್ದಾರೆ.

ಬೆಲೆ ಏರಿಕೆಯನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು: ಯಡಿಯೂರಪ್ಪ

ಬೆಂಗಳೂರು: ರಾಜ್ಯ ಸರ್ಕಾರ ಮುಸ್ಲಿಮರಿಗೆ 4% ಮೀಸಲಾತಿ ನೀಡುವ ಮೂಲಕ ತುಷ್ಟೀಕರಣ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿರುವ ಮಾಜಿ ಸಿಎಂ ಯಡಿಯೂರಪ್ಪ, ಜನಸಾಮಾನ್ಯರು ದಿನನಿತ್ಯ ಬಳಸುವ ಹಾಲಿನ ಬೆಲೆ ಒಂದು ವರ್ಷದ ಅವಧಿಯಲ್ಲಿ 9 ರೂಪಾಯಿ ಹೆಚ್ಚಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಿರಂತರ ಬೆಲೆ ಏರಿಕೆಯ ನೀತಿಯಿಂದ ಜನರನ್ನು ನೆಮ್ಮದಿಯಿಂದ ಬದುಕಲು ರಾಜ್ಯ ಕಾಂಗ್ರೆಸ್ ಸರ್ಕಾರ ಬಿಡುತ್ತಿಲ್ಲ. ಈ ಎಲ್ಲಾ ಬೆಲೆ ಏರಿಕೆಯನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ. ರಾಜ್ಯ ಸರ್ಕಾರ ಮುಸ್ಲಿಮರಿಗೆ 4% ಮೀಸಲಾತಿ ನೀಡುವ ಮೂಲಕ ತುಷ್ಟೀಕರಣ ನೀತಿ ಅನುಸರಿಸುತ್ತಿದೆ. ಜನಸಾಮಾನ್ಯರು ದಿನನಿತ್ಯ ಬಳಸುವ ಹಾಲಿನ ಬೆಲೆ ಒಂದು ವರ್ಷದ ಅವಧಿಯಲ್ಲಿ 9 ರೂಪಾಯಿ ಹೆಚ್ಚಾಗಿದೆ. ನಿರಂತರ ಬೆಲೆ ಏರಿಕೆಯ ನೀತಿಯಿಂದ ಜನರನ್ನು ನೆಮ್ಮದಿಯಿಂದ ಬದುಕಲು ರಾಜ್ಯ ಕಾಂಗ್ರೆಸ್ ಸರ್ಕಾರ ಬಿಡುತ್ತಿಲ್ಲ. ಈ ಎಲ್ಲಾ ಬೆಲೆ ಏರಿಕೆಯನ್ನು ರಾಜ್ಯ… pic.twitter.com/2oHzWHliEp —…