ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಮಳೆ ಸಾಧ್ಯತೆ: 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು: ಬಿರು ಬಿಸಿಲ ಬೇಗೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಹೀಗೊಂದು ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಸೇರಿದಂತೆ ಕರಾವಳಿ ಮಲೆನಾಡು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗುರುವಾರದಿಂದ ಮಳೆಯಾಗುವ ಸಾಧ್ಯತೆ ಇದೆ. ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲೂ ಮಳೆ ಸಾಧ್ಯತೆ ಇದ್ದು, 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇದೇ ವೇಳೆ, ಏಪ್ರಿಲ್ 3 ರಿಂದ ಏಪ್ರಿಲ್ 5ರವರೆಗೆ ಉಷ್ಣಾಂಶ ಇಳಿಮುಖವಾಗುವ ಸಾಧ್ಯತೆ ಎಂದು ವಿಶ್ಲೇಷಿಸಲಾಗಿದೆ. ಆಂಧ್ರ ಪ್ರದೇಶ, ತಮಿಳುನಾಡು ರಾಜ್ಯಗಳಲ್ಲೂ ಮಳೆಯಾಗುವ ಸಾಧ್ಯತೆಗಳಿವೆ ಎಂದು ತಜ್ಞರು ತಿಳಿಸಿದ್ದಾರೆ.

ಲೋಕಸಭೆಯಲ್ಲಿ ವಕ್ಫ್ ಜಟಾಪಟಿ: ಬೆಳಗಿನ ಜಾವ 1.15 ಕ್ಕೆ ಮತದಾನ, ಕೊನೆಗೂ ಮಸೂದೆ ಅಂಗೀಕಾರ

ನವದೆಹಲಿ: ವಕ್ಫ್ ಜಟಾಪಟಿಯಿಂದಾಗಿ ಲೋಕಸಭೆ ಕಲಾಪ ಮುಂಜಾನೆವರೆಗೂ ನಡೆಯಿತು. ಆಡಳಿತ ಪ್ರತಿಪಕ್ಷಗಳ ನಡುವಿನ ಜಟಾಪಟಿಗೆ ಕಾರಣವಾದ ವಕ್ಫ್​ ತಿದ್ದುಪಡಿ ಮಸೂದೆಯು ಲೋಕಸಭೆಯಲ್ಲಿ ಕೊನೆಗೂ ಅಂಗೀಕಾರ ಪಡೆಯಿತು. #BudgetSession2025 #Budget2025 #Parliament #LokSabha #18thloksabhasession pic.twitter.com/LlHy1a7JcK — LOK SABHA (@LokSabhaSectt) April 2, 2025 ಲೋಕಸಭೆಯಲ್ಲಿ ಬುಧವಾರ ಸತತ 12 ಗಂಟೆಗಳ ಕಾಲ ವಕ್ಫ್​ ತಿದ್ದುಪಡಿ ಮಸೂದೆ ಮೇಲೆ ಚರ್ಚೆ ನಡೆಯಿತು. ವಿರೋಧ ಪಕ್ಷದ ಸಂಸದ ಎನ್.ಕೆ. ಪ್ರೇಮಚಂದ್ರನ್ ಅವರ ತಿದ್ದುಪಡಿ ಪ್ರಸ್ತಾವನೆಯ ಮೇಲೆ ಬೆಳಗಿನ ಜಾವ 1.15 ಕ್ಕೆ ಮತದಾನ ನಡೆಯಿತು. ಮಸೂದೆಯ ಪರವಾಗಿ 288 ಮತಗಳು ಹಾಗೂ ವಿರುದ್ಧವಾಗಿ 232 ಮತಗಳು ಚಲಾವಣೆಯಾದವು. ವಿರೋಧ ಪಕ್ಷದ ಎಲ್ಲಾ ತಿದ್ದುಪಡಿಗಳನ್ನು ಧ್ವನಿ ಮತದ ಮೂಲಕ ತಿರಸ್ಕೃತಗೊಂಡವು. ಈ ಮೂಲಕ ಲೋಕಸಭೆಯಲ್ಲಿ ವಕ್ಫ್​ ತಿದ್ದುಪಡಿ ಮಸೂದೆ ವಿಚಾರದಲ್ಲಿ ಸರ್ಕಾರ ಮೇಲುಗೈ ಸಾಧಿಸಿದೆ. ರಾಜ್ಯಸಭೆಯಲ್ಲೂ ಅಂಗೀಕಾರವಾಗಬೇಕಿದ್ದು, ಈ ವಿದೇಯಕ…

ರಾಜೇಂದ್ರ ಹತ್ಯೆ ಸಂಚು: ಇಬ್ಬರು ಆರೋಪಿಗಳು ಶರಣು

ಬೆಂಗಳೂರು: ಸಚಿವ ಕೆ.ಎನ್.ರಾಜಣ್ಣ ಪುತ್ರ ವಿಧಾನ ಪರಿಷತ್​ ಸದಸ್ಯ ರಾಜೇಂದ್ರ ಹತ್ಯೆಗೆ ಸಂಚು ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಇಬ್ಬರು ಆರೋಪಿಗಳು ಬುಧವಾರ ಪೊಲೀಸರ ಮುಂದೆ ಶರಣಾಗಿದ್ದಾರೆ. ತುಮಕೂರು ಜಿಲ್ಲೆ ಕ್ಯಾತ್ಸಂದ್ರ ಠಾಣೆ ಪೊಲೀಸರ ಮುಂದೆ ಆರೋಪಿಗಳಾದ ಸೋಮ ಮತ್ತು ಅಮಿತ್ ಶರಣಾಗಿದ್ದಾರೆ.  ಶಾಸಕ ರಾಜೇಂದ್ರ ಹತ್ಯೆಗೆ 70 ಲಕ್ಷ ರೂಪಾಯಿ ಸುಪಾರಿ ನೀಡಲಾಗಿತ್ತು ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧದ ಆಡಿಯೋ ವೈರಲ್ ಆಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸುಪಾರಿ ಕೊಟ್ಟವರು ಯಾರು ಎಂಬ ಬಗ್ಗೆ ತನಿಖೆ ಕೈಗೊಂಡಿದ್ದಾರೆ.

ತವರಿನಲ್ಲಿ RCB ಕಳಪೆ ಪ್ರದರ್ಶನ; ಬೆಂಗಳೂರು ಅಭಿಮಾನಿಗಳಿಗೆ ನಿರಾಸೆ

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ಐಪಿಎಲ್ 2025ರ ಬೆಂಗಳೂರು ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಹೀನಾಯ ಸೋಲಿನ ರುಚಿ ಅನುಭವಿಸುವಂತಾಯ್ತು. ಬುಧವಾರ ತವರಿನಲ್ಲಿ ಮೊದಲ ಪಂದ್ಯವನ್ನಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತನ್ನ ಎದುರಾಳಿ ಗುಜರಾತ್ ಟೈಟನ್ಸ್ ವಿರುದ್ಧ ಸೋಲು ಕಂಡಿದೆ. ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಗುಜರಾತ್ ಟೈಟಾನ್ಸ್ ಅದ್ಭುರ್ತ ಆಟ ಪ್ರದರ್ಶಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ RCB ತಂಡ 20 ಓವರ್‌ಗಳಲ್ಲಿ ಎಂಟು ವಿಕೆಟ್‌ಗಳ ನಷ್ಟಕ್ಕೆ 169 ರನ್ ಗಳಿಸಿ 169 ರನ್‌ ಪೇರಿಸಿತ್ತು. ಲಿಯಾಮ್ ಲಿವಿಂಗ್‌ಸ್ಟೋನ್ ಅವರ ಅರ್ಧಶತಕದ ನೆರವಿನಿಂದ ಈ ಮೊತ್ತ ಸಂಪಾದಿಸುವಲ್ಲಿ RCB ಯಶಸ್ಸಾಗಿತ್ತು. ಆದರೆ, ಗುಜರಾತ್ ಟೈಟಾನ್ಸ್ ಅಬ್ಬರದ ಆಟದ ನಡುವೆ RCB ಮಂಕಾಯಿತು. 170 ರನ್ ಗಳ ಗುರಿ ಬೆನ್ನಟ್ಟಿದ ಗುಜರಾತ್ ಟೈಟಾನ್ಸ್ 2…

‘ವೇವ್ಸ್ 2025’: ಚಲನಚಿತ್ರ ಸಂಘಗಳೊಂದಿಗೆ ಮುರುಗನ್ ವರ್ಚುವಲ್‌ ಸಭೆ

ನವದೆಹಲಿ: ಕೇಂದ್ರದ ರಾಜ್ಯ ಸಚಿವ ಡಾ. ಎಲ್. ಮುರುಗನ್ ಅವರು ದಕ್ಷಿಣ ಭಾರತದ ಚಲನಚಿತ್ರ ಸಂಘಗಳೊಂದಿಗೆ ವರ್ಚುವಲ್‌ ಸಭೆ ನಡೆಸಿದರು. ತಂತ್ರಜ್ಞರು, ನಿರ್ಮಾಪಕರು ಮತ್ತು ನಿರ್ದೇಶಕರು ವೇವ್ಸ್ 2025 ಕ್ಕೆ ಜೊತೆಯಾಗುವಂತೆ ಮನವಿ ಮಾಡಿದರು. ಸಚಿವರಾದ ಡಾ. ಎಲ್. ಮುರುಗನ್ ಅವರು ತಮಿಳುನಾಡು, ಕೇರಳ, ಕರ್ನಾಟಕ, ತೆಲಂಗಾಣ ಮತ್ತು ಆಂಧ್ರಪ್ರದೇಶವನ್ನು ಪ್ರತಿನಿಧಿಸುವ ಚಲನಚಿತ್ರ ಸಂಘಗಳ ಪದಾಧಿಕಾರಿಗಳೊಂದಿಗೆ ವರ್ಚುವಲ್ ಸಭೆ ನಡೆಸಿದರು. ಸಭೆಯಲ್ಲಿ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕಾರ್ಯದರ್ಶಿ ಸಂಜಯ್ ಜಾಜು, ಜಂಟಿ ಕಾರ್ಯದರ್ಶಿ (ಐಪಿ) ಸಿ. ಸೆಂಥಿಲ್ ರಾಜನ್ ಮತ್ತು ಜಂಟಿ ಕಾರ್ಯದರ್ಶಿ (ಚಲನಚಿತ್ರಗಳು) ಡಾ. ಅಜಯ್ ನಾಗಭೂಷಣ್ ಎಂ.ಎನ್ ಭಾಗವಹಿಸಿದ್ದರು. ಮೇ 1 ರಿಂದ 5, 2025 ರವರೆಗೆ ನಡೆಯಲಿರುವ ವಿಶ್ವ ಧ್ವನಿ-ದೃಶ್ಯ ಮತ್ತು ಮನರಂಜನಾ ಶೃಂಗಸಭೆಯ (ವೇವ್ಸ್) ಪ್ರಗತಿಯ ಕುರಿತು ಪ್ರಮುಖ ಚರ್ಚೆಗಳು ನಡೆದವು. ತಂತ್ರಜ್ಞರು, ನಿರ್ಮಾಪಕರು, ನಿರ್ದೇಶಕರು ಮತ್ತು ನಟರು ಸೇರಿದಂತೆ…