ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಫೀಡಂಪಾರ್ಕ್ ನಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಪೆಟ್ರೋಲ್, ಡಿಸೇಲ್, ಎಲ್.ಪಿ.ಜಿ.ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಹೆಚ್.ಎಸ್.ಮಂಜುನಾಥ್ ಗೌಡರವರ ನೇತೃತ್ವದಲ್ಲಿ ವಿನೂತನವಾಗಿ ಎತ್ತಿನಗಾಡಿ ಮೂಲಕ ಬೃಹತ್ ಪ್ರತಿಭಟನೆ ನಡೆಯಿತು. ಯುವ ಕಾಂಗ್ರೆಸ್ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು. ಹೆಚ್.ಎಸ್.ಮಂಜುನಾಥ್ ಗೌಡ ಮಾತನಾಡಿ , ಕೇಂದ್ರ ಬಿಜೆಪಿ ಸರ್ಕಾರ ದೇಶದ 140ಜನರ ಹೊಟ್ಟೆಯ ಮೇಲೆ ಬರೆ ಏಳೆದಿದ್ದಾರೆ, ಪೆಟ್ರೋಲ್, ಡಿಸೇಲ್ ಮತ್ತು ಎಲ್.ಪಿಜಿ.ಗ್ಯಾಸ್ ಬೆಲೆ ಏರಿಕೆಯಿಂದ ಬಡ ಮತ್ತು ಮಧ್ಯಮ ವರ್ಗದವರು ಜೀವನ ಸಂಕಷ್ಟಕ್ಕೆ ತಳ್ಳಿದ್ದಾರೆ ಎಂದು ಆಕ್ರೋಶ ಹೊರಹಾಕಿದರು. ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷೆ ದಿವ್ಯಾ, ಬೆಂಗಳೂರು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗೌಡ, ಕೇಂದ್ರ ಜಿಲ್ಲಾ ಯುವ ಕಾಂಗ್ರೆಸ್ ರಂಜೀತ್, ದಕ್ಷ್ಮಿಣ ಜಿಲ್ಲಾ ಮೌನೀಶ್ ರೆಡ್ಡಿ, ರಾಜ್ಯ ಪ್ರದಾನ ಕಾರ್ಯದರ್ಶಿಗಳಾದ ಚೇತನ್ ಕುಮಾರ್, ಶಂಶಾಕ್ ಗೌಡ ರವರು ವಿಧಾನಸಭಾ ಕ್ಷೇತ್ರ ಮತ್ತು…

‘ನಿರಾಶೆ, ಆತಂಕಕ್ಕೆ ಒಳಗಾಗಿ ದುಡುಕಿನ ನಿರ್ಧಾರ ಬೇಡ’: ಸಿಎಂ ಕಿವಿಮಾತು

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸಿಎಂ ಅಭಿನಂದನೆ ಸಲ್ಲಿಸಿದ್ದಾರೆ. ಪರಿಶ್ರಮ ಮತ್ತು ನಿರಂತರ ಅಭ್ಯಾಸ ನಿಮ್ಮನ್ನು ಯಶಸ್ಸನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿ‌ ಎಂದು ಸಿಎಂ ಸಿದ್ದರಾಮಯ್ಯ ಅಭಿನಂಧಿಸಿದ್ದಾರೆ. ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಮಕ್ಕಳು ನಿರಾಶೆ, ಆತಂಕಕ್ಕೆ ಒಳಗಾಗಿ ದುಡುಕಿನ ನಿರ್ಧಾರ ತೆಗೆದುಕೊಳ್ಳುವುದು ಬೇಡ. ಬದುಕು ದೊಡ್ಡದು, ಮತ್ತೆ ಪರೀಕ್ಷೆ ಎದುರಿಸಿ ಹೆಚ್ಚಿನ ಅಂಕದ ಜೊತೆಗೆ ಪಾಸಾಗುವ ಅವಕಾಶ ಖಂಡಿತಾ ಸಿಗಲಿದೆ ಎಂದೂ ಕಿವಿಮಾತು ಹೇಳಿದ್ದಾರೆ. ಹತಾಶೆಯ ಕೈಗೆ ಬುದ್ದಿ ಕೊಡದೆ ಸಂಯಮದಿಂದ ವರ್ತಿಸಿ ಎಂದವರು ಸಲಹೆ ಮಾಡಿದ್ದಾರೆ. ವಿವಿಧ ವಿಭಾಗಗಳಲ್ಲಿ Rank ಪಡೆದಿರುವ ಎಲ್.ಆರ್.ಸಂಜನಾ ಬಾಯಿ, ಅಮೂಲ್ಯ ಕಾಮತ್, ದೀಕ್ಷಾ.ಆರ್ ಹಾಗೂ ದೀಪಶ್ರೀ ಈ ನಾಲ್ವರು ಹೆಣ್ಣುಮಕ್ಕಳಿಗೆ ಹೃದಯಪೂರ್ವಕ ಅಭಿನಂದನೆಗಳು. ನಿಮ್ಮ ಸಾಧನೆ ಇತರರಿಗೆ ಸ್ಪೂರ್ತಿಯಾಗಲಿ ಎಂದು ಸಿಎಂ ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆಗಳು. ಪರಿಶ್ರಮ ಮತ್ತು…

ದ್ವಿತೀಯ ಪಿಯುಸಿ: ಮರು ಪರೀಕ್ಷೆಗೆ (ಪೂರಕ ಪರೀಕ್ಷೆ) ಅವಕಾಶ

ಬೆಂಗಳೂರು: ರಾಜ್ಯದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಯ ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ಏಪ್ರಿಲ್ 17 ರ ವರೆಗೆ ತಮ್ಮ ಕಾಲೇಜುಗಳಲ್ಲಿ ನೋಂದಾಯಿಸಿಕೊಳ್ಳಬಹುದು. 2023 ರ ಅಥವಾ ನಂತರದ ಪರೀಕ್ಷೆಗಳಲ್ಲಿ ಅನುತ್ತೀರ್ಣರಾದವರು ತಮ್ಮ ಫಲಿತಾಂಶ ಆಧಾರದ ಮೇಲೆ ನೋಂದಾಯಿಸಿಕೊಳ್ಳಲು ಅವಕಾಶ ಇದೆ. ಕಾಲೇಜುಗಳು ಏಪ್ರಿಲ್ 8 ರಿಂದ ಏಪ್ರಿಲ್ 15, 2025 ರವರೆಗೆ ಪರೀಕ್ಷೆ-2 ರ ಪುನರಾವರ್ತಕ ಮತ್ತು ಮರು ಮೌಲ್ಯಮಾಪನ ಬಯಸುವ ವಿದ್ಯಾರ್ಥಿಗಳ ವಿವರಗಳನ್ನು ದಂಡವಿಲ್ಲದೆ ಅಪ್‌ಲೋಡ್ ಮಾಡಲು ಪ್ರಾರಂಭಿಸಬಹುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಶುಲ್ಕ ಪಾವತಿ ಮತ್ತು ಅರ್ಜಿ ನಮೂನೆಗಳನ್ನು ದಂಡವಿಲ್ಲದೆ DDPU ಕಚೇರಿಗೆ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 16 ಆಗಿದೆ. ತಡವಾದ ಶುಲ್ಕದೊಂದಿಗೆ, ನೋಂದಣಿ ವಿಂಡೋ ಏಪ್ರಿಲ್ 16 ಮತ್ತು ಏಪ್ರಿಲ್ 17 ರವರೆಗೆ ತೆರೆದಿರುತ್ತದೆ. ಅರ್ಜಿ ಸಲ್ಲಿಸಲು ಏಪ್ರಿಲ್ 19 ಅಂತಿಮ…

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ; ಶೇ.73.45ರಷ್ಟು ವಿದ್ಯಾರ್ಥಿಗಳು ತೇರ್ಗಡೆ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಮಂಗಳವಾರ ದ್ವಿತೀಯ ಪಿಯುಸಿ ಪರೀಕ್ಷೆ -1 ರ ಫಲಿತಾಂಶ ಪ್ರಕಟಿಸಿದೆ. ರಾಜ್ಯದಲ್ಲಿ ಪರೀಕ್ಷೆಗೆ ಹಾಜರಾದ 6,37,805 ವಿದ್ಯಾರ್ಥಿಗಳಲ್ಲಿ 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಮೂಲಕ ಶೇ.73.45 ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಳೆದ ವರ್ಷ ಶೇ.81.15 ಫಲಿತಾಂಶ ಬಂದಿದ್ದು ಈ ಬಾರಿ ಕುಸಿತ ಕಂಡಿದೆ. ಈ ಕುರಿತಂತೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತ್ಯುತ್ತಮ ಸ್ಥಾನ ಗಳಿಸಿದ್ದಾರೆ. ಮೂರು ವಿಭಾಗಗಳಲ್ಲಿಯೂ ಹುಡುಗಿಯರೇ ಹೆಚ್ಚಿನ ಸಾಧನೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಕನ್ನಡ ಮಾಧ್ಯಮದಲ್ಲಿ 2,08,794 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1,17,703 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇಂಗ್ಲಿಷ್ ಮಾಧ್ಯಮದಲ್ಲಿ 4,29,011 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 3,50,736 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ದ್ವಿತೀಯ ಪಿಯುಸಿ…

ಸಿಂಗಾಪುರದ ಶಾಲೆಯಲ್ಲಿ ಅಗ್ನಿ ಅವಘಡ; ನಟ ಪವನ್ ಕಲ್ಯಾಣ್ ಪುತ್ರ ಅಸ್ವಸ್ಥ

ಸಿಂಗಾಪುರ: ಸಿಂಗಾಪುರ ಶಾಲೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಆ ಶಾಲೆಯಲ್ಲಿ ಕಲಿಯುತ್ತಿದ್ದ ಅನೇಕ ವಿದ್ಯಾರ್ತಿಗಳು ಗಾಯಗೊಂಡಿದ್ದಾರೆ. ಇವರಲ್ಲಿ ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಹಾಗೂ ನಟ ಪವನ್ ಕಲ್ಯಾಣ್ ಅವರ ಪುತ್ರ ಕೂಡಾ ಗಂಭೀರವಾಗಿ ಗಾಯಗೊಂಡಿರುವುದಾಗಿ ಮಾಧ್ಯಮಗಳು ವರದಿಮಾಡಿವೆ. ಪವನ್ ಕಲ್ಯಾಣ ಅವರ ಪುತ್ರ ಮಾರ್ಕ್ ಶಂಕರ್ ಅವರ ಕೈ ಮತ್ತು ಕಾಲುಗಳಿಗೆ ಗಾಯಗಳಾಗಿದ್ದು,ಉಸಿರಾಟದ ತೊಂದರೆ ಅನುಭವಿಸುತ್ತಿದ್ದಾರೆ ಎನ್ನಲಾಗಿದೆ. ಸಿಂಗಾಪುರದಲ್ಲಿನ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. Shocking visuals from Mark’s School 🥲 Our prayers are with you, get well soon Mark @PawanKalyan pic.twitter.com/Ev61Ntonu6 — ArunKumar (@arunganta) April 8, 2025

ಬೆಲೆ ಏರಿಕೆ ವಿರುದ್ಧ ಜನಾಕ್ರೋಶದ ಭುಗಿಲು; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹೋರಾಟ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಮಾಡುತ್ತಿರುವ ಅನ್ಯಾಯ, ಹದಗೆಟ್ಟ ಕಾನೂನು ಸುವ್ಯವಸ್ಥೆ, ಸ್ವಜನಪಕ್ಷಪಾತ, ತುಷ್ಟೀಕರಣ ಮೊದಲಾದವುಗಳನ್ನು ವಿರೋಧಿಸಿ ಜನಾಕ್ರೋಶ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಜನಾಕ್ರೋಶ ಪ್ರವಾಸ ಮಾಡಲಾಗುತ್ತಿದೆ. ಕರ್ನಾಟಕದ ಇತಿಹಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಈ ಮಟ್ಟಕ್ಕೆ ಬೆಲೆ ಏರಿಕೆ ಮಾಡಿದ್ದಾರೆ. ಮದ್ಯದ ದರ, ಮೆಟ್ರೋ ದರ, ಕಾಲೇಜು ಪ್ರವೇಶ ಶುಲ್ಕ, ಬಿತ್ತನೆ ಬೀಜ ದರ, ಪೆಟ್ರೋಲ್‌-ಡೀಸೆಲ್‌ ದರ ಏರಿಕೆಯಾಗಿದೆ. ಈಗ ಕಸದಿಂದಲೂ ದುಡ್ಡು ಹೊಡೆಯಲಾಗುತ್ತಿದೆ. ಬೆಂಗಳೂರಿನ ಜನರು ಕಸಕ್ಕೂ ಶುಲ್ಕ ನೀಡಬೇಕಾಗಿದೆ. ಇದರಿಂದಲೇ ಒಂದೂವರೆ ಕೋಟಿ ರೂ. ಲೂಟಿ ಮಾಡಲಾಗುತ್ತಿದೆ ಎಂದು ದೂರಿದರು. ಕಾಂಗ್ರೆಸ್‌ ಜಾತ್ಯತೀತವಾದಿ ಎಂದು ಹೇಳಿಕೊಂಡು ಮುಸ್ಲಿಮರ ತುಷ್ಟೀಕರಣ ಮಾಡುತ್ತಿದೆ. ಸರ್ಕಾರಿ ಗುತ್ತಿಗೆಯಲ್ಲಿ ಧರ್ಮಾಧಾರಿತವಾದ ಮೀಸಲು ಕೊಡುವ ಅಗತ್ಯವಿರಲಿಲ್ಲ. ಈಗಾಗಲೇ ಮಂಗಳೂರಿನಲ್ಲಿ ಹೆಚ್ಚಿನ ಗುತ್ತಿಗೆಯನ್ನು ಮುಸ್ಲಿಮರೇ ಮಾಡುತ್ತಿದ್ದಾರೆ.…