ಸರ್ಕಾರದ ಆಶಯ ಅರಿತು ಕೆಲಸ ಮಾಡಿ: ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಸೂಚನೆ.

ಬೆಂಗಳೂರು: ಸರ್ಕಾರದ ಆಶಯವನ್ನು ಅರಿತು ರೈತಾಪಿ ವರ್ಗದ ಶ್ರೇಯೋಭಿವೃದ್ಧಿಗೆ ಅಧಿಕಾರಿ ಸಿಬ್ಬಂದಿಗಳು ಶ್ರಮಿಸಬೇಕು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಕರೆ ನೀಡಿದ್ದಾರೆ. ಕೃಷಿ ಇಲಾಖೆ ವತಿಯಿಂದ ಬೆಂಗಳೂರು ಮಹಾತ್ಮ ಗಾಂಧಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಸಭಾಂಗಣದಲ್ಲಿ ಏರ್ಪಡಿಸಿದ್ದ 2025-26ನೇ ಸಾಲಿನ ಮುಂಗಾರು ಹಂಗಾಮು ಕಾರ್ಯಾಗಾರ ಉದ್ಘಾಟಿಸಿದ ಅವರು, ಕರ್ನಾಟಕದಲ್ಲಿ ಕೃಷಿ ಬಹುಜನರ ಪ್ರಧಾನ ಕಾಯಕ, ಈ ಕ್ಷೇತ್ರದಲ್ಲಿ ತೊಡಗಿದ ರೈತರು ಹಾಗೂ ಕೃಷಿ ಕಾರ್ಮಿಕರ ಹಿತ ಕಾಯುವುದು ಸರ್ಕಾರ ಹಾಗೂ ಇಲಾಖೆಯ ಜವಾಬ್ದಾರಿ ಅವರನ್ನು ಅಲೆದಾಡಿಸದೆ ಮನೆ ಬಾಗಿಲಿಗೆ ಯೋಜನೆಗಳ ಫಲ ತಲುಪಿಸಿ ಎಂದು ನಿರ್ದೇಶನ ನೀಡಿದರು. ರಾಜ್ಯದಲ್ಲಿ ಕೃಷಿ ಬಹುತೇಕ ಮಳೆಯಾಶ್ರಿತವಾಗಿದೆ. ಹಾಗಾಗಿ ಬೆಳೆ ವಿಮೆ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ ಎಲ್ಲಾ ರೈತರು ಈ ಯೋಜನೆ ವ್ಯಾಪ್ತಿಗೆ ಒಳಪಡುವಂತೆ ನೋಡಿಕೊಳ್ಳಿ ಎಂದರು. ಇಲಾಖೆಯಲ್ಲಿ ಕಳೆದ 2 ವರ್ಷಗಳಲ್ಲಿ ತೋರಿದ ಸಾಧನೆ ಜನಪರ ಕಾಳಜಿಯ ಸೇವೆಯನ್ನು…

ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ED ದೋಷಾರೋಪ ಪಟ್ಟಿ: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿರುವ ಜಾರಿ ನಿರ್ದೇಶನಾಲಯದ (ಇಡಿ) ಕ್ರಮವು ಬಿಜೆಪಿ ಸರ್ಕಾರದ ಸೇಡಿನ ರಾಜಕಾರಣದ ಮುಂದುವರಿದ ಭಾಗವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಲ್ಯಾಣ ಕರ್ನಾಟಕದಲ್ಲಿಬುಧವಾರ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ದ್ವೇಷದ ರಾಜಕಾರಣವನ್ನು ಎದುರಿಸುತ್ತಲೇ ಬಂದಿರುವ ಕಾಂಗ್ರೆಸ್ ಪಕ್ಷ ಇದನ್ನು ಕೂಡಾ ಸತ್ಯ ಮತ್ತು ನ್ಯಾಯದ ಬಲದಿಂದ ಎದುರಿಸಲಿದೆ ಎಂದು ಹೇಳಿದ್ದಾರೆ. ನ್ಯಾಷನಲ್ ಹೆರಾಲ್ಡ್ ವಿಚಾರದಲ್ಲಿ ಇ.ಡಿ ಯನ್ನು ಮುಂದಿಟ್ಟುಕೊಂಡು ಬಿಜೆಪಿ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಇದಕ್ಕೆ ನಾವು ಹೆದರಲ್ಲ.#NationalHerald pic.twitter.com/kZ5bzaYK5w — Siddaramaiah (@siddaramaiah) April 16, 2025

ಸ್ಥಗಿತಗೊಂಡಿದ್ದ ಬೀದರ್-ಬೆಂಗಳೂರು ವಿಮಾನಯಾನಕ್ಕೆ ಸಿಎಂ ಮರು ಚಾಲನೆ

ಬೀದರ್‌: ಬೀದರ್ – ಬೆಂಗಳೂರು ವಿಮಾನ ಸೇವೆ ಪುನರಾರಂಭವಾಗಿದೆ. ಸುಮಾರು ಒಂದೂವರೆ ವರ್ಷದ ಹಿಂದೆ ಸ್ಥಗಿತಗೊಂಡಿದ್ದ ಬೀದರ್ – ಬೆಂಗಳೂರು ವಿಮಾನ ಸೇವೆಗೆ ಸಿಎಂ ಸಿದ್ದರಾಮಯ್ಯ ಬುಧವಾರ ಮರು ಚಾಲನೆ ನೀಡಿದರು. ಗುರುವಾರದಿಂದ ಬೀದರ್ – ಬೆಂಗಳೂರು ನಡುವೆ ಸ್ಟಾರ್‌ ಏರ್‌ಲೈನ್ಸ್‌ ವಿಮಾನ ಸೇವೆ ಆರಂಭಿಸಲಿದೆ. ಪ್ರತಿ ದಿನ ಬೆಳಗ್ಗೆ 7.30ಕ್ಕೆ ಬೆಂಗಳೂರಿನಿಂದ ಬೀದರ್‌ ಹಾಗೂ ಬೆಳಗ್ಗೆ 9.10ಕ್ಕೆ ಬೀದರ್‌ನಿಂದ ಬೆಂಗಳೂರಿಗೆ ವಿಮಾನ ಸೌಲಭ್ಯ ಸಿಗಲಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್​ ಬಿ. ಖಂಡ್ರೆ, ಸ್ಥಗಿತಗೊಂಡಿದ್ದ ಬೀದರ್- ಬೆಂಗಳೂರು ನಾಗರಿಕ ವಿಮಾನಯಾನ ಸೇವೆಯನ್ನು ರಾಜ್ಯ ಸರ್ಕಾರ ಪುನಾರಂಭಿಸಿದೆ. ಇದಕ್ಕಾಗಿ ಕೆಕೆಆರ್​ಡಿಬಿಯಿಂದ ಈ ವರ್ಷ 14 ಕೋಟಿ ರೊಪಾಯಿ ಮೀಸಲಿಡಲಾಗಿದೆ ಎಂದು ತಿಳಿಸಿದರು.

ನ್ಯಾಷನಲ್ ಹೆರಾಲ್ಡ್ ಸಂಸ್ಥೆಯ ಆಸ್ತಿಗಳನ್ನು ED ಮುಟ್ಟುಗೋಲು ವಿಚಾರ; ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಸಂಸ್ಥೆಯ ಆಸ್ತಿಗಳನ್ನು ಮುಟ್ಟುಗೋಲು ಕ್ರಮದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಕೆಂದ್ರದ ಬಿಜೆಪಿ ಸರ್ಕಾರವು ಜಾರಿ ನಿರ್ದೇಶನಾಲಯದ ಮೂಲಕ ನ್ಯಾಷನಲ್ ಹೆರಾಲ್ಡ್ ಸಂಸ್ಥೆಯ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಪ್ರಯತ್ನಿಸುತ್ತಿದ್ದು, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಮೇಲೆ ಆರೋಪ ಪಟ್ಟಿ ಸಲ್ಲಿಕೆಗೆ ಮುಂದಾಗಿದೆ. ಈ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ಇಂದು ಬೆಂಗಳೂರಿನ ಶಾಂತಿನಗರದ ವಿಲ್ಸನ್ ಗಾರ್ಡನ್ ನಲ್ಲಿರುವ ಇಡಿ ಕಚೇರಿ ಎದುರು ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಮಾಜಿ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್, ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಸಲೀಂ ಅಹ್ಮದ್, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಮಂಜುನಾಥ್ ಸೇರಿದಂತೆ ಅನೇಕ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದರು. ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕರಾದ…

ಹಲವಾರು ಎಡವಟ್ಟುಗಳು, ಹಲವಾರು ಅಕ್ರಮಗಳು; ಜಾತಿ ಗಣತಿಯ ಲೋಪಗಳತ್ತ ಬೆಳಕು ಚೆಲ್ಲಿದ ಅಶೋಕ್

ಬೆಂಗಳೂರು: ಜಾತಿ ಜನಗಣತಿ ವಿವಾದ ರಾಜ್ಯ ರಾಜಕಾರಣದಲ್ಲಿ ವಿವಾದದ ಬಿರುಗಾಳಿ ಎಬ್ಬಿಸಿದೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಸಮುದಾಯಗಳು ತಿರುಗಿ ಬಿದ್ದಿವೆ. ಈ ವಿವಾದಕ್ಕೆ ಸಿಎಂ ಸಿದ್ದರಾಮಯ್ಯ ಸರ್ಕಾರವೇ ಹೊಣೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ಜನಗಣತಿ ಸಂದರ್ಭದಲ್ಲಿ ಸರಿಯಾದ ಸಿದ್ಧತೆಯಿಲ್ಲದೆ ಕ್ರಮವಹಿಸಲಾಗಿದೆ ಎಂಬ ಕಹಿ ಸತ್ಯವನ್ನು ಆರ್.ಅಶೋಕ್ ನೆನಪಿಸಿದ್ದಾರೆ. ಈ ಸಂಬಂಧ ಅವರು ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಪೋಸ್ಟ್ ಗಮನಸೆಳೆದಿದೆ. ಸಿಎಂ ಸಿದ್ದರಾಮಯ್ಯ ಅವರ ಮೊದಲ ಅವಧಿಯಲ್ಲಿ ಕಾಟಾಚಾರಕ್ಕೆ ನಡೆಸಿದ ಜಾತಿ ಜನಗಣತಿ ಸಮೀಕ್ಷೆ ಸಾಲು ಸಾಲು ಎಡವಟ್ಟುಗಳಿಂದ ಕೂಡಿತ್ತು, ಅವ್ಯವಸ್ಥೆಯ ಗೂಡಾಗಿತ್ತು ಎನ್ನುವುದಕ್ಕೆ ಅಂದಿನ ಪತ್ರಿಕಾ ವರದಿಗಳೇ ಸಾಕ್ಷಿ ಎಂದು ಬೊಟ್ಟು ಮಾಡಿರುವ ಅಶೋಕ್, ಜಾತಿ ಜನಗಣತಿಗಾಗಿ ನಿಯೋಜನೆ ಮಾಡಲಾಗಿದ್ದ ಸಿಬ್ಬಂದಿಗಳಿಗೆ ಗಣತಿ ಅರ್ಜಿ ತುಂಬುವ ಬಗ್ಗೆ ತರಬೇತಿಯನ್ನೇ ನೀಡಿರಲಿಲ್ಲ. ಗಣತಿ ಅರ್ಜಿಯಲ್ಲಿದ್ದ 56 ಕಾಲಂಗಳಲ್ಲಿ ಸಮೀಕ್ಷೆದಾರರು ಪ್ರಾಮಾಣಿಕವಾಗಿ ತುಂಬುತಿದ್ದುದು ಕೇವಲ…

‘ದಿ ಭೂತ್ನಿ’ ಚಿತ್ರದಲ್ಲಿ ಶಿವಭಕ್ತನಾಗಿ ಕಾಣಿಸಿಕೊಂಡ ಸಂಜಯ್ ದತ್

ಮುಂಬೈ: ‘ದಿ ಭೂತ್ನಿ’ ಚಿತ್ರದಲ್ಲಿ ನಟ ಸಂಜಯ್ ದತ್ ಅವರು ಶಿವನ ಭಕ್ತ ಅನುಯಾಯಿಯಾಗಿ ಕಮಾಂಡಿಂಗ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ‘ದಿ ಭೂತ್ನಿ’ ನಿರ್ಮಾಪಕರು ಮೊದಲ ಹಾಡು ‘ಮಹಾಕಾಲ್-ಮಹಾಕಾಲಿ’ ಯನ್ನು ಬಿಡುಗಡೆ ಮಾಡಿದ್ದಾರೆ. ಈ ಹಾಡು ದೈವಿಕ ಶಕ್ತಿಗೆ ಪ್ರಬಲವಾದ ಒಲವಾಗಿದ್ದು, ಶಕ್ತಿಯುತ ಲಯಗಳನ್ನು ಆಧ್ಯಾತ್ಮಿಕ ಉತ್ಸಾಹದೊಂದಿಗೆ ಬೆಸೆಯುತ್ತದೆ. ದತ್ ಅವರನ್ನು ಪ್ರಬಲ ಶಿವಭಕ್ತ ಅವತಾರದಲ್ಲಿ ತೋರಿಸುತ್ತಾ, ಈ ಹಾಡು ದೈವಿಕ ಶಕ್ತಿಗೆ ಗುಡುಗಿನ ಗೌರವವನ್ನು ನೀಡುತ್ತದೆ. ಟ್ರ್ಯಾಕ್ ಬಗ್ಗೆ ವಿಶೇಷ ಉಪಾಖ್ಯಾನವನ್ನು ನಟ ಹಂಚಿಕೊಂಡಿದ್ದಾರೆ. ನಾನು ಯಾವಾಗಲೂ ಶಿವಭಕ್ತನಾಗಿರುವುದರಿಂದ ಇದು ಚಿತ್ರದ ನನ್ನ ನೆಚ್ಚಿನ ಹಾಡು – ಇದು ಸರ್ವಶಕ್ತನಿಗೆ ನನ್ನ ಗೌರವ” ಎಂದವರು ಹೇಳಿಕೊಂಡಿದ್ದಾರೆ. ಭಕ್ತಿಗೀತೆ “ಮಹಾಕಾಲ್-ಮಹಾಕಾಲಿ” ಅನ್ನು ಹಂಸರಾಜ್ ರಘುವಂಶಿ ಹಾಡಿದ್ದಾರೆ. ಶಬ್ಬೀರ್ ಅಹ್ಮದ್ ಅವರ ಸಂಗೀತ ಮತ್ತು ಸಾಹಿತ್ಯವಿದೆ. ಡುಗಡೆಯಾಗಲಿದೆ.