ಬೆಂಗಳೂರು: ಕುಮಾರಸ್ವಾಮಿ ಅಣ್ಣ ತಮ್ಮಂದಿರ ಆಸ್ತಿ ಎಲ್ಲಿಂದ ಬಂತು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ. ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಗುರುವಾರ ನಡೆದ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಶಿವಕುಮಾರ್ ಮಾತನಾಡಿದರು.ಕುಮಾರಸ್ವಾಮಿ ಅಣ್ಣ ತಮ್ಮಂದಿರ ಆಸ್ತಿಯನ್ನು ನಾನಿನ್ನು ಬಿಚ್ಚಿಟ್ಟಿಲ್ಲ ಎಂದರು. “ಕುಮಾರಸ್ವಾಮಿ ನನ್ನ ವಿರುದ್ಧ ಟನ್ ಗಟ್ಟಲೆ ಸಾಕ್ಷಾಧಾರಗಳನ್ನು ಇಟ್ಟುಕೊಂಡಿದ್ದಾರೆ. ಇದನ್ನು ಏಕೆ ಇಟ್ಟುಕೊಂಡಿದ್ದಾರೆ, ಲಾರಿಗಳಲ್ಲಿ ರಾಜ್ಯಪಾಲರ ಬಳಿ ಕಳುಹಿಸುತ್ತಿಲ್ಲ ಏಕೆ? ಮಿಸ್ಟರ್ ಕುಮಾರಸ್ವಾಮಿ ಎಂದು ಪ್ರಶ್ನಿಸಿದರು, ಈ ಡಿ.ಕೆ. ಶಿವಕುಮಾರ್ ಬಿಜೆಪಿಯ ಗೊಡ್ಡು ಬೆದರಿಕೆಗೆ ಹೆದರುವ ಮಗ ಅಲ್ಲ. ನಮ್ಮ ಕಷ್ಟ, ನಮ್ಮ ಶ್ರಮ, ನಮ್ಮ ಬದುಕು. ನಾವು ಆಸ್ತಿ ಮಾಡಿಕೊಳ್ಳುತ್ತೇವೆ. ಅದರ ಸತ್ಯಾಸತ್ಯತೆ ಸರ್ಕಾರ ಪರಿಶೀಲನೆ ಮಾಡಲಿ. ನಾನು ನಿನ್ನ ಚರಿತ್ರೆಯನ್ನು ಇನ್ನು ಬಿಚ್ಚಿಲ್ಲ. ನಿಮ್ಮ ಅಣ್ಣ ತಮ್ಮಂದಿರ ಆಸ್ತಿ ಎಲ್ಲಿಂದ ಬಂತು…
Day: April 17, 2025
ಜನಾಕ್ರೋಶ ಏನಿದ್ದರೂ ಬೆಲೆ ಏರಿಕೆಗೆ ಕಾರಣವಾಗಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ: ಡಿಕೆಶಿ
ಬೆಂಗಳೂರು: ದೇಶದಲ್ಲಿ ಇಂಧನ, ಅಗತ್ಯ ವಸ್ತುಗಳು, ರಸಗೊಬ್ಬರ, ಚಿನ್ನ, ಸಿಮೆಂಟ್, ಕಬ್ಬಿಣ ಸೇರಿದಂತೆ ಪ್ರತಿಯೊಂದು ವಸ್ತುಗಳ ಬೆಲೆ ಏರಿಕೆಗೆ ಮೂಲ ಕಾರಣ ಕೇಂದ್ರ ಬಿಜೆಪಿ ಸರ್ಕಾರ. ಜನರ ಮೇಲೆ ಈ ಬೆಲೆ ಏರಿಕೆ ಹೊರೆ ತಗ್ಗಿಸಲು ನಾವು ಗ್ಯಾರಂಟಿ ಯೋಜನೆ ಕೊಟ್ಟಿದ್ದು, ರೈತರ ಬದುಕು ಕಾಪಾಡಲು ಹಾಲಿನ ಬೆಲೆ ಏರಿಸಿದ್ದೇವೆ. ಹೀಗಾಗಿ ಜನಾಕ್ರೋಶ ಏನಿದ್ದರೂ ಬಿಜೆಪಿ ಸರ್ಕಾರದ ವಿರುದ್ಧ ವ್ಯಕ್ತವಾಗಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿಕಾರಿದರು. ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಗುರುವಾರ ನಡೆದ ರಾಜ್ಯಮಟ್ಟದ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಶಿವಕುಮಾರ್ ಅವರು ಮಾತನಾಡಿದರು. ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆ. ಬೆಲೆ ಏರಿಕೆಗೆ ಮೂಲ ಕಾರಣ ಕೇಂದ್ರ ಬಿಜೆಪಿ ಸರ್ಕಾರ. ಹೀಗಾಗಿ ಬಿಜೆಪಿ ನಾಯಕರ ಆಕ್ರೋಶ ಏನಿದ್ದರೂ ಕೇಂದ್ರ ಸರ್ಕಾರದ…
ಬಾಲಕಿ ಮೇಲೆ ಅತ್ಯಾಚಾರ; ಎನ್ಕೌಂಟರ್‌ನಲ್ಲಿ ಆರೋಪಿ ಸೆರೆ
ಲಖ್ನೋ: ಬಾಲಕಿಯ ಮೇಲೆ ಕ್ರೂರವಾಗಿ ಅತ್ಯಾಚಾರ ನಡೆಸಿರುವ ಆರೋಪಿಯನ್ನು ಪೊಲೀಸರು ಗುಂಡಿನ ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿರುವ ಘಟನೆ ಉತ್ತರ ಪ್ರದೇಶದ ರಾಂಪುರ ಬಳಿ ನಡೆದಿದೆ. 11 ವರ್ಷದ ವಾಕ್ ಮತ್ತು ಶ್ರವಣದೋಷವುಳ್ಳ ಬಾಲಕಿ ಏಪ್ರಿಲ್ 15ರ ಸಂಜೆಯಿಂದ ನಾಪತ್ತೆಯಾಗಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿ ಹೊಲವೊಂದರಲ್ಲಿ ಪತ್ತೆಯಾಗಿದ್ದಳು. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದು ಪತ್ತೆಯಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆರೋಪಿ ಬಂಧನಕ್ಕಾಗಿ ಕಾರ್ಯಾಚರಣೆ ನಡೆಸಿದರು. ಪೊಲೀಸರು ಕಾಲಿಗೆ ಗುಂಡೇಟು ಹೊಡೆದು ಆರೋಪಿಯನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.